Tag: MLC

  • ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

    ಸೌಲಭ್ಯದ ಕೊರತೆಯಿಂದ ವಿಶ್ವಕರ್ಮರು ಮತಾಂತರವಾಗ್ತಿದ್ದಾರೆ: ಕೆ.ಪಿ ನಂಜುಂಡಿ ವಿಷಾದ

    ಧಾರವಾಡ: ವಿಶ್ವಕರ್ಮ ಸಮಾಜ (Vishwakarma Community) ಸರ್ಕಾರಿ ಸೌಲಭ್ಯಗಳಿಂದ ವಂಚಿತವಾಗಿದ್ದು, ಅನಿವಾರ್ಯವಾಗಿ ಇಸ್ಲಾಂ ಹಾಗೂ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ (KP Nanjundi) ವಿಷಾದ ವ್ಯಕ್ತಪಡಿಸಿದ್ದಾರೆ.

    ಧಾರವಾಡದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಶ್ವಕರ್ಮ ಸಮಾಜದವರು ಮುಸ್ಲಿಂ (Muslims), ಕ್ರೈಸ್ತ ಧರ್ಮಕ್ಕೆ ಹೋಗುತ್ತಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬೇರೆ-ಬೇರೆ ಧರ್ಮಕ್ಕೆ ಸೇರಿಕೊಳ್ಳುತ್ತಿದ್ದಾರೆ. ನಾನು ವಿಧಾನ ಪರಿಷತ್ ಸದಸ್ಯನಾಗಿಯೂ ಅವರನ್ನು ತಡೆಯಲು ಆಗುತ್ತಿಲ್ಲ ಎಂದು ವಿಷಾದಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಸ್ಫೋಟದ ತನಿಖೆ NIA ಹೆಗಲಿಗೆ : ನಳಿನ್ ಕುಮಾರ್ ಕಟೀಲ್

    ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕಾಗಿ ಹೋರಾಟ ಮಾಡಿದ್ದೆವು. 5 ತಿಂಗಳಿನಿಂದ ಈ ನಿಗಮ ಖಾಲಿ ಇದೆ. ನಿಗಮದ ಅಧ್ಯಕ್ಷ ಸ್ಥಾನ ಭರ್ತಿ ಮಾಡಿಲ್ಲ. ಇದರಿಂದ ಮತಾಂತರಗೊಳ್ಳುವ ನಮ್ಮವರನ್ನು ಕೇಳಿದರೆ, ತಿನ್ನೋಕೆ ಗತಿ ಇಲ್ಲ.. ನಿಮ್ಮ ಸರ್ಕಾರ ತಂದು ಕೊಡುತ್ತಾ ಎಂದು ಪ್ರಶ್ನೆ ಮಾಡ್ತಾರೆ? ಬದುಕಿಗೆ, ಊಟಕ್ಕೆ ಜಾತಿ, ಧರ್ಮ ಇಲ್ಲ. ಅದು ಇಲ್ಲದೇ ಇದ್ದಾಗಲೇ ಅಲ್ವೆ ಬೇರೆ ಕಡೆ ಹೋಗೋದು ಎಂದು ಮರುಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಗಾಲ್ಯಾಂಡ್ ಜೈಲಿನಿಂದ 9 ಕೈದಿಗಳು ಎಸ್ಕೇಪ್

    ಜನಿವಾರ ಹಾಕಿದವರೆಲ್ಲಾ ಬ್ರಾಹ್ಮಣರಲ್ಲ (Brahmins):
    ನಮ್ಮ-ನಮ್ಮ ಕಸುಬುಗಳನ್ನು ನಂಬಿ ಶೋಚನೀಯವಾಗಿದ್ದೇವೆ. ಸಾಮಾಜಿಕ ನ್ಯಾಯದಿಂದ ವಂಚಿತವಾದ ಸಮಾಜ ವಿಶ್ವಕರ್ಮರದ್ದು. ನಮ್ಮ ಸಮಾಜದಲ್ಲಿ ಕೂಡ ನಾವು ಜನಿವಾರ ಹಾಕುತ್ತೇವೆ. ಆದರೆ ಜನಿವಾರ ಹಾಕಿದವರೆಲ್ಲಾ ಬ್ರಾಹ್ಮಣರಲ್ಲ. ನಮ್ಮ ಸಮಾಜದವರು ನಾವು ಬ್ರಾಹ್ಮಣರು ಎಂದು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ನಾವು ಬ್ರಾಹ್ಮಣರಲ್ಲ ಎಂದು ಜನಜಾಗೃತಿ ಮೂಡಿಸುವ ಸ್ಥಿತಿ ಬಂದಿದೆ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇನೆ. ಇಂತಹ ಪರಿಸ್ಥಿತಿಯಲ್ಲಿ ಪಕ್ಷ ನನ್ನನ್ನು ಗುರುತಿಸಬೇಕು ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮತದಾನಕ್ಕೆ ಅನುಮತಿ ನೀಡಿ- ಸುಪ್ರೀಂ ಮೊರೆ ಹೋದ ಮಲಿಕ್, ದೇಶಮುಖ್

    ಮತದಾನಕ್ಕೆ ಅನುಮತಿ ನೀಡಿ- ಸುಪ್ರೀಂ ಮೊರೆ ಹೋದ ಮಲಿಕ್, ದೇಶಮುಖ್

    ಮುಂಬೈ: ಮಹಾರಾಷ್ಟ್ರದ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರು ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

    ಪ್ರಸ್ತುತ ಜೈಲಿನಲ್ಲಿರುವ ಇಬ್ಬರೂ ರಾಜಕೀಯ ನಾಯಕರು ಶುಕ್ರವಾರ ನೀಡಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ಹೈಕೋರ್ಟ್ ಈ ಇಬ್ಬರು ನಾಯಕರಿಗೆ ಮತದಾನ ಮಾಡಲು ಜೈಲಿನಿಂದ ಹೊರಗೆ ಹೋಗಲು ಅನುಮತಿಯನ್ನು ನಿರಾಕರಿಸಿತ್ತು.

    SUPREME COURT

    ಇದೀಗ ಈ ಇಬ್ಬರು ನಾಯಕರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದು, ಚುನಾಯಿತ ಪ್ರತಿನಿಧಿಯಾಗಿ ಮತದಾನದ ಶಾಸನಬದ್ಧ ಹಕ್ಕು ಇದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್

    20 ವರ್ಷಗಳ ಹಿಂದೆ ಮುಂಬೈನ ಕುರ್ಲಾದಲ್ಲಿ 2.75 ಎಕರೆ ಜಾಗಕ್ಕಾಗಿ ದಾವೂದ್ ಇಬ್ರಾಹಿಂ ಸಹೋದರಿ ಹಸೀನಾ ಪರ್ಕರ್‌ಗೆ ನವಾಬ್ ಮಲಿಕ್ 55 ಲಕ್ಷ ರೂ. ನಗದು ನೀಡಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ಮಾಹಿತಿ ಕಲೆಹಾಕಿತ್ತು. ಇದು ಅಕ್ರಮ ಹಣ ವರ್ಗಾವಣೆ ಎಂಬ ಆರೋಪದಡಿ ಇಡಿ ಮಲಿಕ್‍ರನ್ನು ಬಂಧಿಸಿತ್ತು.

    ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸಿಬಿಐ ಬಂಧಿಸಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ

    Live Tv

  • ಜೆಡಿಎಸ್‌ ಸೋಲಿನಿಂದ ಸಂತಸವಾಗಿದೆ: ತಮ್ಮ ಪಕ್ಷದ ವಿರುದ್ಧವೇ ಮರಿತಿಬ್ಬೇಗೌಡ ಹೇಳಿಕೆ

    ಜೆಡಿಎಸ್‌ ಸೋಲಿನಿಂದ ಸಂತಸವಾಗಿದೆ: ತಮ್ಮ ಪಕ್ಷದ ವಿರುದ್ಧವೇ ಮರಿತಿಬ್ಬೇಗೌಡ ಹೇಳಿಕೆ

    ಮೈಸೂರು: ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಜೆಡಿಎಸ್‌ಗೆ ಸೋಲಾಗಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.

    ಚುನಾವಣೆ ಫಲಿತಾಂಶ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಧನ್ಯವಾದ ಹೇಳುತ್ತೇನೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ದಾಖಲೆಯ ಗೆಲುವು

    ಮತದಾರರು ಪ್ರಬುದ್ಧತೆ ಪ್ರದರ್ಶಿಸಿದ್ದಾರೆ. ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಬಿಜೆಪಿಗೆ ಸೋಲಾಗಿದೆ. ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಮಹಾತ್ಮರ ಪಠ್ಯ ಕೈ ಬಿಟ್ಟಿದ್ದಕ್ಕೆ ಮತದಾರರು ಆಕ್ರೋಶಗೊಂಡು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಈ ಕ್ಷೇತ್ರಕ್ಕೆ ಸಂಬಂಧವೇ ಇರದ ವ್ಯಕ್ತಿಯನ್ನು ಜೆಡಿಎಸ್ ಅಭ್ಯರ್ಥಿ ಮಾಡಿದ್ದಕ್ಕೆ ಜೆಡಿಎಸ್‌ಗೆ ಸೋಲಾಗಿದೆ. ಜೆಡಿಎಸ್ ಸೋಲು ನನಗೆ ಅತೀವ ಸಂತಸ ತಂದಿದೆ ಎಂದು ಮರಿತಿಬ್ಬೇಗೌಡ ತಮ್ಮ ಪಕ್ಷದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡ್ತಿದ್ದಾರೆ: ಸಿದ್ದರಾಮಯ್ಯ

    Live Tv

  • ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ದಾಖಲೆಯ ಗೆಲುವು

    ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ದಾಖಲೆಯ ಗೆಲುವು

    ಮೈಸೂರು: ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದರು.

    ಜೆಡಿಎಸ್ – ಬಿಜೆಪಿ ಕೋಟೆಯನ್ನು ಕಾಂಗ್ರೆಸ್ ಛಿದ್ರ ಮಾಡಿದ್ದು, ಮೈಸೂರು ಭಾಗದಲ್ಲಿ ಮತ್ತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಡಿತ ಸಾಧಿಸಿದ್ದಾರೆ. ಬಿಜೆಪಿ ಎರಡನೇ ಸ್ಥಾನದಲ್ಲಿದ್ದರೆ ಜೆಡಿಎಸ್ ಮೂರನೇ ಸ್ಥಾನವನ್ನು ಪಡೆದಿದೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿಗೆ ನಿಗದಿಪಡಿಸಿದ್ದ ಕೋಟಾವನ್ನು ಯಾವೊಬ್ಬ ಅಭ್ಯರ್ಥಿಯೂ ಪಡೆದಿರಲಿಲ್ಲ. ಹೀಗಾಗಿ ಎಲಿಮಿನೇಷನ್ ಪ್ರಕ್ರಿಯೆಯನ್ನು ನಡೆಸಲಾಗಿತ್ತು. ಒಟ್ಟಾರೆಯಾಗಿ ಮಧು ಮಾದೇಗೌಡ 12,205 ಮತಗಳ ಭಾರಿ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು.

    Congress

    ಮಧು ಜಿ. ಮಾದೇಗೌಡ ಒಟ್ಟು 45,275 ಮತಗಳನ್ನು ಪಡೆದುಕೊಂಡಿದ್ದರು. ಆದರೆ ಗೆಲುವಿಗೆ ನಿಗದಿಯಾದ 46,083 ಮತಗಳ ಕೋಟಾವನ್ನು ತಲುಪಲು 808 ಮತಗಳ ಕೊರತೆ ಎದುರಾಗಿತ್ತು. ಇದೇ ವೇಳೆ ಚುನಾವಣಾ ಆಯೋಗದ ನಿರ್ದೇಶನದಂತೆ ಮಧು ಜಿ. ಮಾದೇಗೌಡ ಪ್ರತಿಸ್ಪರ್ಧಿ ಬಿಜೆಪಿ ಮೈ. ವಿ. ರವಿಶಂಕರ್ ಎಲಿಮಿನೆಟ್ ಮಾಡಿ ಅಲ್ಲಿಂದ 808 ಪಡೆಯಲಾಯಿತು. ನಿಗದಿತ ಕೋಟಾ ತಲುಪುತ್ತಿದ್ದಂತೆಯೇ ಎಣಿಕೆ ಕಾರ್ಯ ನಿಲ್ಲಿಸಿ, ಮಧು ಅವರನ್ನು ವಿಜೇತ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಿಸಲಾಯಿತು. ಇದನ್ನೂ ಓದಿ: ಕಾವೇರಿ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಲಾರಿಯನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

    ಈ ಬಾರಿ ಜೆಡಿಎಸ್‍ಗೆ ತನ್ನ ಸಾಂಪ್ರದಾಯಿಕ ಬರಲೇ ಇಲ್ಲ. ಜೆಡಿಎಸ್‍ನ ಸಾಂಪ್ರದಾಯಿಕ ಮತ ಬ್ಯಾಂಕ್ ಛಿದ್ರವಾದದ್ದೆ ಕಾಂಗ್ರೆಸ್‍ಗೆ ವರವಾಗಿದೆ. ಮೈಸೂರಿಗೆ ಬರುವ ಪ್ರಧಾನಿ ಮೋದಿಗೆ ವಿಜಯದ ಗಿಫ್ಟ್ ಕೊಡುವ ಬಿಜೆಪಿಗರ ಆಸೆಗೂ ತಣ್ಣೀರು ಬಿದ್ದಿದ್ದು, ಸಿಎಂ, ಸಚಿವರ ಹಾದಿಯಾಗಿ ಎಲ್ಲರೂ ಬಂದು ಪ್ರಚಾರ ಮಾಡಿದರು ಕಮಲಕ್ಕೂ ಗೆಲುವು ಸಿಗಲಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್‌ ಮತ್ತೆ ಏರಿಕೆ; ಸರ್ಕಾರದಿಂದ ಪರಿಷ್ಕೃತ Guidelines ಪ್ರಕಟ – ಮಾರ್ಗಸೂಚಿಯಲ್ಲೇನಿದೆ?

    Live Tv

  • ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    ಕೊಳವೆ ಬಾವಿ ತೋಡಿಸಿಕೊಡಿ ಅಂತಾ ಮತಪೆಟ್ಟಿಗೆಗೆ ಪತ್ರ ಹಾಕಿರುವ ಯುವಕ!

    ಮೈಸೂರು‌: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಮತ ಎಣಿಕೆ ಬುಧವಾರದಿಂದ ನಡೆಯುತ್ತಿದೆ. ಮತ ಪೆಟ್ಟಿಗೆಯಲ್ಲಿ ಬ್ಯಾಲೆಟ್‌ ಪೇಪರ್‌ ಜೊತೆಗೆ ವಿಭಿನ್ನ ಕೋರಿಕೆಯ ಪತ್ರವನ್ನು ಮತದಾರರು ಹಾಕಿರುವ ಘಟನೆ ನಡೆದಿದೆ.

    ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ, ಇಲ್ಲ ಅಂದ್ರೆ ಜಮೀನಿನಲ್ಲಿ‌ ಕೊಳವೆಬಾವಿ ತೋಡಿಸಿಕೊಡಿ ಎಂದು ಯುವಕನೊಬ್ಬ ಪತ್ರ ಬರೆದು ಮತ ಪೆಟ್ಟಿಗೆಯಲ್ಲಿ ಹಾಕಿದ್ದಾನೆ. ಇದನ್ನೂ ಓದಿ: ಗುಂಡು ಹಾರಿಸಿಕೊಂಡು ಕರ್ತವ್ಯ ನಿರತ ಪೊಲೀಸ್ ಪೇದೆ ಆತ್ಮಹತ್ಯೆ

    ರಸಗೊಬ್ಬರ ಬೆಲೆ ಕಡಿಮೆ ಮಾಡಿ ಎಂದು ಪತ್ರ ಬರೆದು ಬ್ಯಾಲೆಟ್ ಪೇಪರ್‌ ಜೊತೆಗೆ ಮತದಾರ ತನ್ನ ಪತ್ರ ಹಾಕಿದ್ದಾನೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಈ ಮನವಿ ಮಾಡಿದ್ದಾನೆ.

    ಬ್ಯಾಲೆಟ್ ಪತ್ರದ ಮೇಲೆಯೇ ಅಭ್ಯರ್ಥಿಗಳ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಯಾವ ಅಭ್ಯರ್ಥಿಗಳು ಹಣ ಕೊಟ್ಟಿಲ್ಲ ಎಂದು ಬ್ಯಾಲೆಟ್ ಪೇಪರ್ ಮೇಲೆ ಮತದಾರ ಬರೆದಿದ್ದಾನೆ. ಇದನ್ನೂ ಓದಿ: ದೇಶದಲ್ಲಿ 2023ರ ಮಾರ್ಚ್ ವೇಳೆಗೆ ಪೂರ್ಣ ಪ್ರಮಾಣದ 5G ಸೇವೆ: ಕೇಂದ್ರ ಸಚಿವ

    Live Tv

  • ಶಿಕ್ಷಕರು, ಪದವೀಧರ ಕ್ಷೇತ್ರಕ್ಕೆ ಯಶಸ್ವಿ ಮತದಾನ – ಜೂನ್ 15ಕ್ಕೆ ಫಲಿತಾಂಶ

    ಶಿಕ್ಷಕರು, ಪದವೀಧರ ಕ್ಷೇತ್ರಕ್ಕೆ ಯಶಸ್ವಿ ಮತದಾನ – ಜೂನ್ 15ಕ್ಕೆ ಫಲಿತಾಂಶ

    ಬೆಂಗಳೂರು: ವಿಧಾನಪರಿಷತ್‍ನ ಶಿಕ್ಷಕರು, ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿದೆ. ವಾಯುವ್ಯ ಪದವೀಧರ, ದಕ್ಷಿಣ ಪದವೀಧರ, ವಾಯುವ್ಯ ಶಿಕ್ಷಕರು, ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದೆ.

    ನಾಲ್ಕು ಸ್ಥಾನಗಳಿಗೂ ಬಿಜೆಪಿ, ಕಾಂಗ್ರೆಸ್ ಸ್ಪರ್ಧೆ ಮಾಡಿದೆ. ವಾಯುವ್ಯ ಪದವೀಧರ ಕ್ಷೇತ್ರ ಬಿಟ್ಟು ಮೂರು ಕಡೆ ಜೆಡಿಎಸ್ ಅದೃಷ್ಟ ಪರೀಕ್ಷೆಗೆ ಸಿದ್ಧವಾಗಿದೆ. ಎಂಟನೇ ಬಾರಿ ಸ್ಪರ್ಧೆ ಮಾಡಿರುವ ಹೊರಟ್ಟಿ ಸೇರಿ 49 ಅಭ್ಯರ್ಥಿಗಳ ಭವಿಷ್ಯ ನಾಡಿದ್ದು ಜೂನ್ 15ರಂದು ಗೊತ್ತಾಗಲಿದೆ. ಇದನ್ನೂ ಓದಿ: ಇಂದು ಶಿಕ್ಷಕ, ಪದವೀಧರ ಕ್ಷೇತ್ರಕ್ಕೆ ಮತದಾನ: 1 ಮತಕ್ಕೆ 10 ಸಾವಿರ ರೂ.?

    ಮತಕೇಂದ್ರದಿಂದ 200 ಮೀಟರ್ ದೂರ ಇರಬೇಕು ಇದು ಡಿಸಿ ಆದೇಶ ಎಂದ ಹುಬ್ಬಳ್ಳಿಯ ಮಹಿಳಾ ಪಿಎಸ್‍ಐಗೆ ಬಸವರಾಜ ಹೊರಟ್ಟಿ, ಯಾರವನು ಡಿಸಿ ಎಂದು ಕೇಳಿದ್ದಾರೆ. ಇನ್ನು, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಒಂದು ವೋಟ್‍ಗೆ 10 ಸಾವಿರ ಹಂಚಿದ್ದಾರೆ. 17 ಲಕ್ಷ ಸೀಜ್ ಆಗಿದೆ. ಕೂಡ್ಲೇ ಅವರ ವಿರುದ್ಧ ಕ್ರಮ ಆಗ್ಬೇಕು ಎಂದು ಬಿಜೆಪಿ ಶಾಸಕ ಅನಿಲ್ ಬೆನಕೆ ಒತ್ತಾಯಿಸಿದ್ರು. ನಾವು ಬೆಳ್ಳಿ ತಟ್ಟೆ, ಸ್ಮಾರ್ಟ್ ವಾಚ್ ನೀಡುತ್ತಿದ್ದೇವೆ ಅನ್ನೋದು ಸುಳ್ಳು ಅಂದ್ರು. ಆದ್ರೆ, ಮತಗಟ್ಟೆಯಲ್ಲಿ ಮೊಬೈಲ್ ಬಳಸಿ ತಾವೇ ನೀತಿ ಸಂಹಿತೆ ಉಲ್ಲಂಘಿಸಿದ್ರು. ಈ ಸಂಬಂಧ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಗೆಲ್ಲೋದು ಪಕ್ಕಾ ಎಂದು ಜೆಡಿಎಸ್ ಎಂಎಲ್‍ಸಿ ಮರಿತಿಬ್ಬೇಗೌಡ ಹೇಳಿದ್ದಾರೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ, ವಿಜಯಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮತದಾನ ಶಾಂತಿಯುತವಾಗಿ ನಡೆಯಿತು.

  • ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ? – ಡಿಕೆಶಿಗೆ ಪತ್ರ ಬರೆದ ಸ್ಥಾನ ವಂಚಿತರು

    ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ? – ಡಿಕೆಶಿಗೆ ಪತ್ರ ಬರೆದ ಸ್ಥಾನ ವಂಚಿತರು

    ಬೆಂಗಳೂರು: ಪರಿಷತ್ ಸ್ಥಾನ ವಂಚಿತ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಚಿಂಥನ-ಮಂಥನದಲ್ಲಿ ಮುಕ್ತ ಚರ್ಚೆಗೆ ಮೊದಲ ಆದ್ಯತೆ ಕೊಡಿ ಎಂದು ಮನವಿ ಮಾಡಿದ್ದಾರೆ.

    ಹೈಕಮಾಂಡ್ ನಾಯಕರಿಗೆ ಪ್ರಶ್ನೆಗಳನ್ನು ಮುಂದಿಟ್ಟಿರುವ ಸ್ಥಾನ ವಂಚಿತರು. ಚಿಂತನ-ಮಂಥನ ಸಭೆಯಲ್ಲಿ 6 ಪ್ರಶ್ನೆಗಳ ಮೇಲೆ ಚರ್ಚೆಗೆ ಅವಕಾಶ ಕೊಡಿ ಎಂದು ಎಂ.ಡಿ.ಲಕ್ಷ್ಮೀನಾರಾಯಣ್ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಪ್ರವೇಶಿಸುವಂತಿಲ್ಲ – ವೈರಲ್ ಆಯ್ತು ಬ್ಯಾನರ್

    ಪ್ರಶ್ನೆಗಳೇನು?
    1. ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಚುನಾವಣೆ ಸಮಿತಿ ಇದೆಯೇ?
    2. ಇದ್ದಲ್ಲಿ ವಿಧಾನ ಪರಿಷತ್ ಚುನಾವಣೆಗೆ ಎಷ್ಟು ಸಭೆಗಳನ್ನು ನಡೆಸಲಾಯಿತು. ಯಾವ ಮಾನದಂಡವನ್ನು ಅನುಸರಿಸಿ ಆಯ್ಕೆ ಮಾಡಲಾಗಿದೆ.
    3.  ಅಪೇಕ್ಷೀತರ ಪಟ್ಟಿಯಲ್ಲಿ ಎಷ್ಟು ಜನರ ಹೆಸರನ್ನು ಎಐಸಿಸಿಗೆ ಶಿಫಾರಸ್ಸು ಮಾಡಲಾಯಿತು.
    4. ಕೆಪಿಸಿಸಿ ಅಧ್ಯಕ್ಷರು, ಸಿದ್ದರಾಮಯ್ಯ ಶಿಫಾರಸ್ಸು ಮಾಡಿ ನೀಡಿದ ಪಟ್ಟಿಯಲ್ಲಿರುವ ಹೆಸರುಗಳನ್ನು ತಿರಸ್ಕಾರ ಮಾಡಲು ಕಾರಣವೇನು? ತೀರ್ಮಾನಿಸಿ ಪಟ್ಟಿಯನ್ನು ತಿರಸ್ಕಾರ ಮಾಡಿದ್ದು ಸರಿಯೇ?
    5. ತಿರಸ್ಕಾರ ಮಾಡಿದ ನಂತರ ಯಾವ ಹೆಸರುಗಳನ್ನು ನೀಡಲಾಯಿತು?
    6. ಕೊನೆಗಳಿಗೆಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ನೀಡಿದ ಹೆಸರುಗಳನ್ನು ಕೈಬಿಟ್ಟು ಬೇರೆಯವರು ಸೂಚಿಸಿದ ಹೆಸರುಗಳನ್ನು ಎಐಸಿಸಿ ಅನುಮೋದನೆ ನೀಡಿರುವುದು ಅನುಮಾನಕ್ಕೆ ಕಾರಣವಾಗಿದೆ.

    Siddaramaiah

    ಕೆಪಿಸಿಸಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರ ಗೌರವಕ್ಕೆ ಚ್ಯುತಿ ಬಂದಂತಾಗಿದೆ. ಈ ಬಗ್ಗೆ ಚರ್ಚೆಯಾಗಲಿ ಎಂದು ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ.

  • ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹೇಮಲತಾಗೆ ಪೊಲೀಸ್ ಎಸ್ಕಾರ್ಟ್

    ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಹೇಮಲತಾಗೆ ಪೊಲೀಸ್ ಎಸ್ಕಾರ್ಟ್

    ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಬಿಜೆಪಿ ಅಭ್ಯರ್ಥಿ ಹೇಮಲತಾಗೆ ವಿಧಾನಸೌಧದವರೆಗೂ ಇನ್ನೋವಾ ಕಾರಿನಲ್ಲಿ ಬರಲು ಎಸ್ಕಾರ್ಟ್ ವಾಹನ ಸವಲತ್ತು ಕಲ್ಪಿಸಿದ್ದು, ಇದೀಗ ಭಾರೀ ಟೀಕೆಗೆ ಕಾರಣವಾಗಿದೆ.

    ಬಿಜೆಪಿ ನಾಯಕರೇ ಜಕ್ಕೂರು ಏರ್‌ಫೋರ್ಸ್‌ನಿಂದ ಎಸ್ಕಾರ್ಟ್ ಕೊಟ್ಟು ಇನ್ನೋವಾ ಕಾರಿನಲ್ಲಿ ವಿಧಾನಸೌಧಕ್ಕೆ ಕರೆಸಿದ್ದಾರೆ. ಸೈರನ್ ಹೊಡೆದುಕೊಂಡು ವೇಗವಾಗಿ ವಿಧಾನಸೌಧಕ್ಕೆ ಬಂದು ಹೇಮಲತಾ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಎಸ್ಕಾರ್ಟ್ ಸೌಲಭ್ಯ ಕಲ್ಪಿಸಿದ ಬಿಜೆಪಿ ನಾಯಕರು ನಾಮಪತ್ರ ಸಲ್ಲಿಕೆಗೆ ವಿಳಂಬವಾಗುತ್ತಿತ್ತು. ಹಾಗಾಗಿ ಎಸ್ಕಾರ್ಟ್ ನೀಡಲಾಯಿತು ಎಂದು ಕಾರಣ ನೀಡಿದ್ದಾರೆ. ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆ- ಕೊಪ್ಪಳದ ಬಿಜೆಪಿ ನಾಯಕಿಗೆ ಬಂಪರ್‌

    ಈ ಹಿಂದೆ ಹಾಲಿ ಸಚಿವೆ ಶಶಿಕಲಾ ಜೊಲ್ಲೆ ಅವರ ಪ್ರಮಾಣ ವಚನಕ್ಕೆ ಸಿಗ್ನಲ್ ಫ್ರೀ ಸೌಕರ್ಯ ಕಲ್ಪಿಸಿಕೊಟ್ಟಿದ್ದ ಬಿಜೆಪಿ, ಇದೀಗ ಎಂಎಲ್‌ಸಿ ಚುನಾವಣೆ ನಾಮಪತ್ರ ಸಲ್ಲಿಸೋದಕ್ಕೇ ಹೇಮಲತಾಗೆ ಎಸ್ಕಾರ್ಟ್ ವ್ಯವಸ್ಥೆ ಮಾಡಿಕೊಟ್ಟಿದೆ ಎಷ್ಟು ಸರಿ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಪರಿಷತ್‌ ಪಟ್ಟಿ ಪ್ರಕಟ – ಲಕ್ಷ್ಮಣ ಸವದಿಗೆ ಟಿಕೆಟ್

    ಎಸ್ಕಾರ್ಟ್ ಒದಗಿಸಲು ಗೃಹ ಸಚಿವರೇ ಪೊಲೀಸರಿಗೆ ಸೂಚಿಸಿದ್ರಾ? ಯಾರ ಆದೇಶ ಪಾಲನೆ ಮಾಡಿದ್ರು ಪೊಲೀಸರು? ಶಿಸ್ತಿನ ಪಕ್ಷ ಬಿಜೆಪಿಯದ್ದು ಅಧಿಕಾರ ದುರ್ಬಳಕೆ ಅಲ್ಲವಾ ಎಂಬ ಪ್ರಶ್ನೆಗಳನ್ನು ಜನರು ಪ್ರಶ್ನಿಸುತ್ತಿದ್ದಾರೆ.

  • ಸಿದ್ದು-ಡಿಕೆಶಿ ಮಧ್ಯೆ ಮೇಲ್ಮನೆ ಟಿಕೆಟ್ ಫೈಟ್ – ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದ ಕೆಪಿಸಿಸಿ ಅಧ್ಯಕ್ಷ

    ಸಿದ್ದು-ಡಿಕೆಶಿ ಮಧ್ಯೆ ಮೇಲ್ಮನೆ ಟಿಕೆಟ್ ಫೈಟ್ – ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದ ಕೆಪಿಸಿಸಿ ಅಧ್ಯಕ್ಷ

    ಬೆಂಗಳೂರು: ಕಾಂಗ್ರೆಸ್‍ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನಡುವೆ ಮೇಲ್ಮನೆ ಟಿಕೆಟ್ ಫೈಟ್ ಆರಂಭವಾಗಿದೆ. ಈ ನಡುವೆ ಅಭ್ಯರ್ಥಿಗಳ ಆಯ್ಕೆಯ ಕುರಿತಾದ ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಟಿಕೇಟ್‍ಗೆ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಇದ್ದರು. ಅವೆಲ್ಲ ಹೆಸರು ನಾವು ಕಳುಹಿಸಿದ್ದೇವೆ. ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ನಾವು ಶಿಫಾರಸ್ಸು ಮಾಡಿದ್ದನ್ನು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಇಬ್ಬರು ಕೂತುಕೊಂಡೇ ಒಮ್ಮತವಾಗಿಯೇ ಶಿಫಾರಸ್ಸು ಮಾಡಿದ್ದೇವೆ. ಇರೋದೇ ಎರಡು ಸ್ಥಾನ, ಅದಕ್ಕೆ ಎಲ್ಲ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಶಿಫಾರಸ್ಸು ಮಾಡಿದ್ದೇವೆ. ರಾಜ್ಯಸಭೆಯದ್ದು ಇನ್ನೂ ಏನೂ ತೀರ್ಮಾನ ಆಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಬಿಪ್ಲಬ್ ದೇಬ್‌ರನ್ನು ಸ್ವಾಮಿ ವಿವೇಕಾನಂದ, ಗಾಂಧೀಜಿಗೆ ಹೋಲಿಸಿದ ಸಚಿವ ರತನ್ ಲಾಲ್ ನಾಥ್

    ಒಮ್ಮತದ ಅಭ್ಯರ್ಥಿಯನ್ನು ಶಿಫಾರಸ್ಸು ಮಾಡಿಲ್ಲ ಎಂಬ ವಿಚಾರವಾಗಿ ಮಾತನಾಡಿ, ಎಲ್ಲಾ ಕೂತುಕೊಂಡು ಒಮ್ಮತವಾಗಿಯೇ ಶಿಫಾರಸ್ಸು ಮಾಡಿದ್ದು, ನಾನು ಸಿದ್ದರಾಮಯ್ಯ ಕುತ್ಕೊಂಡೇ ಶಿಫಾರಸ್ಸು ಮಾಡಿದ್ದು. ಒಂದು ಅಥವಾ ಎರಡು ಹೆಸರು ನಾವು ಕೊಟ್ಟಿಲ್ಲ. ಇರೋದು ಎರಡು ಸೀಟ್ ಎಷ್ಟು ಹೆಸರು ಕೊಡೋಕೆ ಆಗುತ್ತೆ. ಎಲ್ಲಾ ವರ್ಗದದವರನ್ನು ಗಮನದಲ್ಲಿ ಇಟ್ಟುಕೊಂಡು ಶಿಫಾರಸ್ಸು ಮಾಡಲಾಗಿದೆ. ಇದನ್ನು ತಿಳಿದಿಕೊಂಡು ವರಿಷ್ಟರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

  • ಹಾಲಿ ಎಂಎಲ್‍ಸಿ ಅರುಣ್ ಶಹಾಪುರ ವಿರುದ್ಧ ಅಸಮಾಧಾನ ಸ್ಪೋಟ…!

    ಹಾಲಿ ಎಂಎಲ್‍ಸಿ ಅರುಣ್ ಶಹಾಪುರ ವಿರುದ್ಧ ಅಸಮಾಧಾನ ಸ್ಪೋಟ…!

    ಬೆಳಗಾವಿ: ಜಿಲ್ಲೆಯವರಿಗೆ ಬಿಜೆಪಿ ಟಿಕೆಟ್ ನೀಡದಿರುವುದ್ದಕ್ಕೆ ಆಕ್ರೋಶ ಭುಗಿಲೆದ್ದಿದ್ದು, ಈ ನಡುವೆ ಹಾಲಿ ಎಂಎಲ್‍ಸಿ ಅರುಣ್ ಶಹಾಪುರ್‌ಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನ ಸ್ಫೋಟಗೊಂಡಿದೆ. ಬೆಳಗಾವಿಯಲ್ಲಿ ಸಭೆ ಸೇರಿದ ಎರಡು ಸಾವಿರಕ್ಕೂ ಹೆಚ್ಚು ಶಿಕ್ಷಕರು, ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

    ಬೆಳಗಾವಿ ಜಿಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ ಆಡಳಿತ ಮಂಡಳಿ ಹಾಗೂ ನೌಕರರ ಒಕ್ಕೂಟದಿಂದ ನಡೆದ ಸಭೆಯಲ್ಲಿ ಬೆಳಗಾವಿ ಜಿಲ್ಲೆಯವರಿಗೇ ಟಿಕೆಟ್ ನೀಡುವಂತೆ ಆಗ್ರಹ ವ್ಯಕ್ತವಾಯಿತು. ಈಗಾಗಲೇ ಘೋಷಣೆ ಮಾಡಿದ ಟಿಕೆಟ್ ವಾಪಸ್ ಪಡೆದು ಬೆಳಗಾವಿ ಜಿಲ್ಲೆಯವರಿಗೆ ಟಿಕೆಟ್ ಕೊಟ್ಟರೆ ಸ್ವಾಗತ. ಇಲ್ಲವಾದ್ರೆ ಬೆಳಗಾವಿ ಜಿಲ್ಲೆಯ ಎಲ್ಲ ಶಿಕ್ಷಕರು ಸೇರಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಿ ಪಕ್ಷೇತರ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸೈಕಲ್ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿ ಕಿಡ್ನಾಪ್ 

    ಈಗಾಗಲೇ ಐವರು ಆಕಾಂಕ್ಷಿಗಳು ಪಕ್ಷೇತರರಾಗಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ, ಬೆಳಗಾವಿ ಜಿಲ್ಲಾ ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಎಸ್.ಎಸ್.ಮಠದ ಸೇರಿ ಐವರು ಆಕಾಂಕ್ಷಿಗಳಿದ್ದಾರೆ.

    ಬಂಡಾಯ ಅಭ್ಯರ್ಥಿಯಾಗಿ ಕೋರೆ ಪುತ್ರಿ ಕಣಕ್ಕೆ!
    ವಾಯುವ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಪ್ರಭಾಕರ್ ಕೋರೆ ಪುತ್ರಿ ಕಣಕ್ಕಿಳಿಯುವ ಕುರಿತಾದ ಚರ್ಚೆಗಳು ಗರಿಗೆದರಿವೆ. ಕೆಎಲ್‍ಇ ಕಾರ್ಯಾಧ್ಯಕ್ಷರಾಗಿರುವ ಡಾ.ಪ್ರಭಾಕರ್ ಕೋರೆ, ರಾಜ್ಯಸಭಾ ಮಾಜಿ ಸದಸ್ಯರು ಹೌದು. ಕೆಎಲ್‍ಇ ದಂತ ವಿಜ್ಞಾನ ಮಹಾವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿರುವ ಪ್ರಭಾಕರ್ ಕೋರೆ ಪುತ್ರಿ ಡಾ.ಪ್ರೀತಿ ಕೋರೆ ಅವರು, ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆದಿವೆ. ಪ್ರಸ್ತುತ ಐವರು ಆಕಾಂಕ್ಷಿಗಳ ಪಟ್ಟಿಯಲ್ಲಿ ಡಾ.ಪ್ರೀತಿ ಕೋರೆ ಹೆಸರಿಲ್ಲ. ಇದನ್ನೂ ಓದಿ: ‘ಜೇಮ್ಸ್’ ಜೊತೆ ‘ಬೈರಾಗಿ’ ಟೀಸರ್ – ಪುನೀತ್ ಹುಟ್ಟುಹಬ್ಬಕ್ಕೆ ಶಿವಣ್ಣನ ಝಲಕ್