Tag: mls

  • ಬಂಡಾಯ ಶಾಸಕರು ಅವರಪ್ಪನ ಹೆಸರು ಬಳಸಿ ಚುನಾವಣೆ ಎದುರಿಸಲಿ – ಉದ್ಧವ್ ಠಾಕ್ರೆ ಕಿಡಿ

    ಬಂಡಾಯ ಶಾಸಕರು ಅವರಪ್ಪನ ಹೆಸರು ಬಳಸಿ ಚುನಾವಣೆ ಎದುರಿಸಲಿ – ಉದ್ಧವ್ ಠಾಕ್ರೆ ಕಿಡಿ

    ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆಯ ಯಾವುದೇ ಶಾಸಕನಿಗೂ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಹೆಸರನ್ನು ಬಳಸಲು ಬಿಡುವುದಿಲ್ಲ. ಬಂಡಾಯ ಶಾಸಕರು ಅವರ ತಂದೆಯ ಹೆಸರಿನಲ್ಲೇ ಚುನಾವಣೆ ಎದುರಿಸಲಿ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ.

    ಮಹಾರಾಷ್ಟ್ರದ ರಾಜಕೀಯದಲ್ಲಿ ಹಲವು ತಿರುವು ಪಡೆದುಕೊಳ್ಳುತ್ತಿವೆ. ಈ ನಡುವೆ ಏಕನಾಥ್ ಶಿಂಧೆ ಬಣದಲ್ಲಿರುವ ಬಂಡಾಯ ಶಾಸಕರು ತಮ್ಮ ಗುಂಪಿಗೆ `ಶಿವಸೇನಾ ಬಾಳಾಸಾಹೇಬ್’ ಎಂದು ಹೆಸರಿಸುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಫೋಟೋ ಕಳುಹಿಸುವಂತೆ ಪ್ರಿಯಕರನ ಕಾಟ – ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ

    ಇದಕ್ಕೆ ಸಂಬಂಧಿಸಿದಂತೆ ಇಂದಿನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಠಾಕ್ರೆ, ಚುನಾವಣೆಯಲ್ಲಿ ಗೆಲ್ಲಲು ನನ್ನ ತಂದೆಯ ಹೆಸರನ್ನು ಹೇಳಬೇಡಿ. ನಿಮ್ಮ ತಂದೆಯ ಹೆಸರನ್ನು ಬಳಸಿ ಚುನಾವಣೆ ಎದುರಿಸಿ ಎಂದು ಸವಾಲು ಹಾಕಿದ್ದಾರೆ.

    ಚುನಾವಣೆಯಲ್ಲಿ ಮತ ಪಡೆಯಲು ಇಚ್ಛಿಸಿದರೆ ಈ ಶಾಸಕರು ಅವರವರ ತಂದೆಯ ಹೆಸರನ್ನು ಹೇಳಿಕೊಂಡು ಹೋಗಲಿ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಹೆಸರನ್ನು ಬಳಸಬಾರದು. ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಬಾಳಾಸಾಹೇಬ್ ಠಾಕ್ರೆ ಹೆಸರು ಬಳಸಿಕೊಂಡವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಶಿವಸೇನಾ ಪಕ್ಷವು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಕಳಿಸಿ ತಗಲಾಕ್ಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ

    ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಬಂಡಾಯ ಶಾಸಕರ ವಿರುದ್ಧ ಕ್ರಮ, ಉದ್ಧವ್ ಠಾಕ್ರೆಗೆ ಅಧಿಕಾರ ಸೇರಿದಂತೆ ಕೆಲವು ಪ್ರಮುಖ ನಿರ್ಣಯಗಳನ್ನು ಅವಿರೋಧವಾಗಿ ಕೈಗೊಳ್ಳಲಾಗಿದೆ. ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವ ಸಿದ್ಧಾಂತ ಅನುಸರಣೆ, ಮಹಾರಾಷ್ಟ್ರದ ಏಕತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಿರುವುದು ಸೇರಿದಂತೆ 6 ನಿರ್ಣಯಗಳನ್ನು ಅಂಗೀಕರಿಸಲಾಗಿದೆ.

    Live Tv

  • ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ವಿದೇಶಕ್ಕೆ ಹೋಗೋಕೆ ನಲಪಾಡ್ ಕೋರ್ಟ್ ಗೆ ಮನವಿ

    ಬೆಂಗಳೂರು: ವಿದೇಶಕ್ಕೆ ತೆರಳಲು ತನಗೆ ಅನುಮತಿ ನಿಡಿ ಅಂತ ಶಾಸಕ ಹ್ಯಾರೀಸ್ ಪುತ್ರ ನಲಪಾಡ್ ಹೈಕೋರ್ಟ್ ಮೊರೆ ಹೋಗಿದ್ದಾನೆ. ವಿದ್ವತ್ ಮೇಲೆ ನಲಪಾಡ್ ಮತ್ತು ಗ್ಯಾಂಗ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳ ಸಡಿಲಿಕೆ ಕೋರಿ ನಲಪಾಡ್ ಈ ಅರ್ಜಿ ಸಲ್ಲಿಸಿದ್ದಾನೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ವೇಳೆ ನಗರ ಬಿಟ್ಟು ತೆರಳದಂತೆ ನಲಪಾಡ್ ಗೆ ಕೋರ್ಟ್ ಷರತ್ತು ವಿಧಿಸಿತ್ತು. ಇದೀಗ ನನ್ನ ಸಹೋದರ ಲಂಡನ್ ನಲ್ಲಿ ವಾಸವಾಗಿದ್ದಾನೆ. ಹೀಗಾಗಿ ತಮ್ಮನನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಿ. 15 ದಿನಗಳ ಕಾಲ ವಿದೇಶಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿ ಅಂತ ಮನವಿ ಮಾಡಿಕೊಂಡಿದ್ದಾನೆ.

    ಈ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 27 ಕ್ಕೆ ಮುಂದೂಡಿದೆ. ಇದನ್ನೂ ಓದಿ: ಕಷ್ಟ ಅಂದ್ರೆ ಏನು ಅನ್ನೋದು ಗೊತ್ತಾಗಿದೆ, ರಾತ್ರಿ 9 ಗಂಟೆಯ ನಂತ್ರ ಎಲ್ಲಿಗೂ ಬರಲ್ಲ: ನಲಪಾಡ್

    ಏನಿದು ಪ್ರಕರಣ?:
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.  ಇದನ್ನೂ ಓದಿ: ನಮ್ಮ ಅಣ್ಣನಿಗೆ ಹೊಡೆದಿದ್ದೆ ಸಾಕು, ನನ್ನ ಬಿಟ್ಬಿಡಿ- ನಲಪಾಡ್ ಸಹೋದರ

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿತ್ತು?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv