Tag: MNM

  • ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ – ಕಮಲ್ ಹಾಸನ್ ಆಶ್ವಾಸನೆ

    ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ – ಕಮಲ್ ಹಾಸನ್ ಆಶ್ವಾಸನೆ

    ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮಕ್ಕಳ್ ನಿಧಿ ಮೈಯಂ(ಎಂಎನ್‍ಎಂ) ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರ ಮತ್ತು ಯುವ ಜನರ ಅಭಿವೃದ್ಧಿಗಳಿಗೆ ಹೆಚ್ಚು ಹೊತ್ತು ನೀಡುವುದಾಗಿ ಕಾಲಿವುಡ್ ನಟ ಕಮಲ್ ಹಾಸನ್ ಬುಧವಾರ ಘೋಷಿಸಿದ್ದಾರೆ.

    ಏಪ್ರಿಲ್ 6ರಂದು ನಡೆಯಲಿರುವ ತಮಿಳುನಾಡು ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಅವಕಾಶ ನೀಡಿದರೆ ಶೇ.50ರಷ್ಟು ಮೀಸಲಾತಿಯನ್ನು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರಿಗೆ ನೀಡುವುದಾಗಿ ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಭರವಸೆ ನೀಡಿದ್ದಾರೆ.

    ಇಷ್ಟೇ ಅಲ್ಲದೇ ಸ್ಯಾನಿಟರಿ ನ್ಯಾಪ್‍ಕಿನ್ ವಿತರಣೆ, ಮಹಿಳೆಯರಿಗೆ ರಕ್ಷಣೆ, ಒಂಟಿ ತಾಯಂದಿರಿಗೆ ಬೆಂಬಲ, ಎಲ್ಲಾ ಗರ್ಭಿಣಿಯರಿಗೆ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಹಲವು ರೀತಿಯ ಸೌಲಭ್ಯಗಳನ್ನು ಒದಗಿಸುವುದಾಗಿ ತಿಳಿಸಿದ್ದಾರೆ. ಯುವಕರಿಗೆ 50 ಲಕ್ಷ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದು, ನಿರುದ್ಯೋಗ ಭತ್ಯೆ ಮಾಡಲಾಗುವುದು ಎಂದು ಹೇಳಿದ್ದಾರೆ.

    ಮುಂಬರುವ ಚುನಾವಣೆಯಲ್ಲಿ ಎಂಎನ್‍ಎಂ ಮೈತ್ರಿಗಾಗಿ ಈಗಾಗಲೇ ಹಲವಾರು ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

    ಎಂಎನ್‍ಎಂ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಮಾರ್ಚ್ 7ರಂದು ಪ್ರಕಟಿಸುವ ನಿರೀಕ್ಷೆ ಇದೆ. ಆಡಳಿತ ಪಕ್ಷ ಎಐಎಡಿಎಂಕೆ-ಬಿಜೆಪಿ ಮತ್ತು ಡಿಎಂಕೆ-ಕಾಂಗ್ರೆಸ್ ನೇತೃತ್ವದ ಮಯತ್ರಿ ಪಕ್ಷಗಳು ಈಗಾಗಲೇ ಚುನಾವಣೆ ಪ್ರಚಾರವನ್ನು ಆರಂಭಿಸಿದೆ.

  • 20 ಕ್ಷೇತ್ರಗಳ ಉಪಚುನಾವಣೆಯಲ್ಲಿ ಎಂಎನ್‍ಎಂ ಸ್ಪರ್ಧೆಗೆ ಸಿದ್ಧ: ಕಮಲ್ ಹಾಸನ್

    20 ಕ್ಷೇತ್ರಗಳ ಉಪಚುನಾವಣೆಯಲ್ಲಿ ಎಂಎನ್‍ಎಂ ಸ್ಪರ್ಧೆಗೆ ಸಿದ್ಧ: ಕಮಲ್ ಹಾಸನ್

    ಚೆನ್ನೈ: ತಮಿಳುನಾಡಿನಲ್ಲಿ ಮುಂಬರುವ 20 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮಕ್ಕಳ್ ನಿದಿ ಮೈಯಂ (ಎಂಎನ್‍ಎಂ) ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಾರೆಂದು ಎಂಎನ್‍ಎಂ ಮುಖ್ಯಸ್ಥ ಹಾಗೂ ಬಹುಭಾಷಾ ನಟ ಕಮಲ್ ಹಾಸನ್ ಹೇಳಿದ್ದಾರೆ.

    ರಾಜಧಾನಿಯ ಪಕ್ಷದ ಕಚೇರಿಯಲ್ಲಿ ತಮ್ಮ 64ನೇ ಹುಟ್ಟುಹಬ್ಬವನ್ನು ಕಾರ್ಯಕರ್ತರೊಂದಿಗೆ ಕಮಲ್ ಹಾಸನ್ ಆಚರಿಸಿಕೊಂಡರು. ಇದೇ ವೇಳೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಮುಂಬರುವ 20 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎಂಎನ್‍ಎಂ ಸ್ಪರ್ಧೆಗೆ ಸಿದ್ಧವಾಗಿದ್ದು, ಈಗಾಗಲೇ ಎಲ್ಲಾ 20 ಕ್ಷೇತ್ರಗಳಲ್ಲಿ ಶೇ.80 ರಷ್ಟು ಪದಾಧಿಕಾರಿಗಳ ನೇಮಕ ಆಗಿದೆ ಎಂದು ಹೇಳಿದರು.

    ಭ್ರಷ್ಟಾಚಾರ ಸಂಪೂರ್ಣವಾಗಿ ನಿರ್ಮೂಲನೆಯಾದರೆ ಆಡಳಿತ ಪಾರದರ್ಶಕವಾಗಿರುತ್ತದೆ. ಈ ಬಗ್ಗೆ ಎಲ್ಲಾ ಪಕ್ಷಗಳು ಸಹ ಚಿಂತನೆ ನಡೆಸಬೇಕು. ನಮ್ಮ ಎಂಎನ್‍ಎಂ ಪಕ್ಷ ಸಂಪೂರ್ಣವಾಗಿ ಸದ್ಯದ ರಾಜಕಾರಣದ ಪದ್ಧತಿಯಲ್ಲಿ ಬದಲಾವಣೆ ತರಲಿದೆ. ನಮ್ಮದು ಸಂಪೂರ್ಣ ಜನರ ಪಕ್ಷವಾಗಿದೆ. ಹೀಗಾಗಿ ಜನರ ತೀರ್ಮಾನದಂತೆ ರಾಜಕೀಯದಲ್ಲಿ ಸರಿಯಾದ ಬದಲಾವಣೆಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

    ನಾವು ಮಾಡುವ ಬದಲಾವಣೆಗಳಿಂದ ಮುಂದಿನ ದಿನಗಳಲ್ಲಿ ಜನ ದುಡ್ಡು ತೆಗೆದುಕೊಂಡು ಮತ ಹಾಕುವುದನ್ನೇ ನಿಲ್ಲಿಸುತ್ತಾರೆ. ಮುಂಬರುವ ಚುನಾವಣೆಗಳಲ್ಲಿ ಜನ ಸರಿಯಾದ ಆಯ್ಕೆ ಮಾಡುತ್ತಾರೆ. ಈಗಾಗಲೇ ಉಪ ಚುನಾವಣೆಯ ಬಗ್ಗೆ ಚರ್ಚೆ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಧರ್ಮಪುರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುತ್ತೇನೆ ಎಂದರು.

    ಉಪಚುನಾವಣೆ ಏಕೆ?
    ತಮಿಳುನಾಡು ವಿಧಾನಸಭಾ ಸ್ಪೀಕರ್ ಪಿ. ಧನ್‍ಪಾಲ್ ಆಡಳಿತರೂಢ ಎಐಎಡಿಎಂಕೆ ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದ ಟಿಟಿವಿ ದಿನಕರನ್ ಬಣದ 18 ಶಾಸಕರ ಶಾಸಕತ್ವವನ್ನು ಅನರ್ಹಗೊಳಿಸಿದ್ದರು. ಸ್ಪೀಕರ್ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಇದರ ಜೊತೆ ಇಬ್ಬರು ಶಾಸಕರ ಅಕಾಲಿಕ ಮರಣದಿಂದ 20 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ಎದುರಾಗಿದೆ. ಶೀಘ್ರವೇ ಚುನಾವಣಾ ಆಯೋಗ ಉಪ ಚುನಾವಣೆ ನಡೆಸಲಿದ್ದು, ಈಗಾಗಲೇ ಪೂರಕ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv