Tag: model

  • ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ

    ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ ಸ್ಯಾನ್ ರೆಚಲ್ ಆತ್ಮಹತ್ಯೆ

    ಪುದುಚೆರಿ: ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ (Model), ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ (San Rechal) ಪುದುಚೆರಿಯಲ್ಲಿ (Puducherry) ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    26 ವರ್ಷದ ಸ್ಯಾನ್ ರೆಚಲ್ ತನ್ನ ತಂದೆಯ ಮನೆಗೆ ಭೇಟಿ ನೀಡಿದ ಸಂದರ್ಭ ಹೆಚ್ಚಿನ ಸಂಖ್ಯೆಯ ಮಾತ್ರೆಗಳನ್ನು ಸೇವಿಸಿದ್ದರು. ಮೊದಲಿಗೆ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ಯಾನ್ ರೆಚಲ್ ಸಾವನ್ನಪ್ಪಿದ್ದಾರೆ. ಆರ್ಥಿಕ ಒತ್ತಡ ಮತ್ತು ವೈಯಕ್ತಿಕ ಒತ್ತಡ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಸ್ಯಾನ್ ರೆಚಲ್ ಡೆತ್ ನೋಟ್‌ನಲ್ಲಿ ಆಕೆಯ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾರೆ. ಸದ್ಯ ಡೆತ್ ನೋಟ್ ವಶಪಡಿಸಿಕೊಂಡ ಪೊಲೀಸರು ಆಕೆಯ ವೈವಾಹಿಕ ಜೀವನದ ಬಗ್ಗೆಯೂ ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: 1 ಲಕ್ಷ ಹಣ, ಉಂಗುರ ನೀಡಿ ಕಲಾವಿದರನ್ನು ಸನ್ಮಾನಿಸಿ ಪ್ರಚಾರದಿಂದ ದೂರ ಇರುತ್ತಿದ್ರು : ಗಿರಿಜಾ ಲೋಕೇಶ್

    ಲಂಡನ್, ಜರ್ಮನಿ ಮತ್ತು ಫ್ರಾನ್ಸ್ನಂತಹ ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ರೆಚಲ್, ತಮ್ಮ ಸಾಧನೆಗಳ ಮೂಲಕ ಯುವತಿಯರಿಗೆ ಸ್ಫೂರ್ತಿಯಾಗಿದ್ದರು. ಸ್ಯಾನ್ ರೆಚಲ್ ಕೇವಲ ಮಾಡೆಲಿಂಗ್ ಲೋಕದಲ್ಲಿ ಮಿಂಚಿದ್ದಲ್ಲದೇ ವರ್ಣಭೇದ ನೀತಿಯನ್ನು ಪ್ರಶ್ನಿಸಿ, ಮಹಿಳಾ ಸುರಕ್ಷತೆಗಾಗಿ ಹೋರಾಡಿದ್ದರು. ಇದನ್ನೂ ಓದಿ: ಶಕ್ತಿಗೆ ಇಂದು 500 ಕೋಟಿ ಟಿಕೆಟ್‌ ಸಂಭ್ರಮ- ಕಂಡಕ್ಟರ್‌ ಆಗಿ ಟಿಕೆಟ್‌ ಹಂಚಿದ ಸಿಎಂ

    2020ರಲ್ಲಿ ಮಿಸ್ ಪುದುಚೇರಿ, 2019ರಲ್ಲಿ ಮಿಸ್ ಬೆಸ್ಟ್ ಆಟಿಟ್ಯೂಡ್, 2019ರಲ್ಲಿ ಮಿಸ್ ಡಾರ್ಕ್ ಕ್ವೀನ್ ತಮಿಳುನಾಡು ಮತ್ತು 2022 ರಲ್ಲಿ ಕ್ವೀನ್ ಆಫ್ ಮದ್ರಾಸ್ ಖ್ಯಾತಿಗಳನ್ನು ಗಳಿಸಿದ್ದ ರೆಚಲ್, 2023ರಲ್ಲಿ ಮಿಸ್ ಆಫ್ರಿಕಾ ಗೋಲ್ಡನ್ ಇಂಡಿಯಾ ಸ್ಪರ್ಧೆಯಲ್ಲಿ ದ್ವಿತೀಯ ರನ್ನರ್-ಅಪ್ ಆಗಿ ಸ್ಯಾನ್ ರೆಚಲ್ ಮಿಂಚಿದ್ದರು. ಇದನ್ನೂ ಓದಿ: ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

  • `ನನ್ನ ಬ್ಲೌಸ್ ಒಳಗೆ ಕೈಹಾಕಿದ’ – ಆಶೀರ್ವಾದದ ನೆಪದಲ್ಲಿ ಅರ್ಚಕನಿಂದ ಮಾಡೆಲ್‌ಗೆ ಲೈಂಗಿಕ ದೌರ್ಜನ್ಯ ಆರೋಪ

    `ನನ್ನ ಬ್ಲೌಸ್ ಒಳಗೆ ಕೈಹಾಕಿದ’ – ಆಶೀರ್ವಾದದ ನೆಪದಲ್ಲಿ ಅರ್ಚಕನಿಂದ ಮಾಡೆಲ್‌ಗೆ ಲೈಂಗಿಕ ದೌರ್ಜನ್ಯ ಆರೋಪ

    -2021ರಲ್ಲಿ ಮಿಸ್ ಗ್ರ‍್ಯಾಂಡ್ ಮಲೇಷ್ಯಾ ಕಿರೀಟ ಅಲಂಕರಿಸಿದ್ದ ಮಾಡೆಲ್

    ಕೌಲಾಲಂಪುರ್: ಆಶೀರ್ವಾದ ಮಾಡುವ ನೆಪದಲ್ಲಿ ಮಾಡೆಲ್ ಬ್ಲೌಸ್ ಒಳಗೆ ಕೈಹಾಕಿ ಹಿಂದೂ ಅರ್ಚಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಲೇಷ್ಯಾದ (Malaysia) ಸೆಪಾಂಗ್‌ನಲ್ಲಿರುವ (Sepang) ಮಾರಿಯಮ್ಮನ್ ದೇವಸ್ಥಾನದಲ್ಲಿ (Mariamman Temple) ನಡೆದಿದೆ.

    ಈ ಕುರಿತು ಮಾಡೆಲ್ ಲಿಶಲ್ಲಿನಿ ಕನರನ್ (Lishalliny Kanaran) ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ತಮ್ಮ ಮೇಲೆ ಆದ ದೌರ್ಜನ್ಯದ ಕುರಿತು ವಿವರಿಸಿದ್ದಾರೆ. ನನ್ನ ಅಮ್ಮ ಮಲೇಷ್ಯಾದಲ್ಲಿರಲಿಲ್ಲ, ಭಾರತಕ್ಕೆ ತೆರಳಿದ್ದರು. ಹೀಗಾಗಿ ಜೂ.21ರಂದು ನಾನು ಯಾವಾಗಲೂ ಹೋಗುತ್ತಿದ್ದ ದೇವಸ್ಥಾನವೊಂದಕ್ಕೆ ತೆರಳಿದ್ದೆ. ಭಕ್ತಿ, ದೇವರು ಇದೆಲ್ಲದಕ್ಕೂ ನಾನು ಹೊಸಬಳು. ಆದರೆ ಈ ದೇವಸ್ಥಾನಕ್ಕೆ ತೆರಳಲು ಪ್ರಾರಂಭಿಸಿದಾಗಲಿಂದಲೂ ನನಗೆ ಈ ಬಗ್ಗೆ ಮಾರ್ಗದರ್ಶನ ನೀಡುತ್ತಿದ್ದ ಅರ್ಚಕರು ನಿಂತಿದ್ದರು.ಇದನ್ನೂ ಓದಿ: 6ರ ಬಾಲಕಿಗೆ 45 ವರ್ಷದ ಅಫ್ಘಾನ್ ವ್ಯಕ್ತಿ ಜೊತೆ ಮದುವೆ – 9 ವರ್ಷದವರೆಗೆ ಮದುವೆಯಾದವನ ಮನೆಗೆ ಕಳಿಸದಂತೆ ತಾಲಿಬಾನ್ ಸೂಚನೆ

    ನಾನು ದೇವರಿಗೆ ನಮಸ್ಕರಿಸುತ್ತಿದ್ದೆ. ಆಗ ಆ ಅರ್ಚಕರು ಅಲ್ಲಿಗೆ ಬಂದು ನನ್ನ ಬಳಿ ಪವಿತ್ರ ನೀರಿದೆ, ಜೊತೆಗೆ ಒಂದು ದಾರವಿದೆ, ಅದನ್ನು ನಿನಗೆ ಕೊಡುತ್ತೇನೆ, ಅದು ನಿನಗೆ ಆರ್ಶೀವಾದದ ರೀತಿ ಎಂದು ಹೇಳಿ ಹೋದರು. ನಾನು ದೇವರ ಪಾರ್ಥನೆಯ ಬಳಿಕ ಅರ್ಚಕರ ಬಳಿಗೆ ಹೋದೆ. ಆದರೆ ಆ ದಿನ ಶನಿವಾರವಾಗಿದ್ದರಿಂದ ದೇವಸ್ಥಾನದಲ್ಲಿ ಜನ ಜಾಸ್ತಿಯಿದ್ದರು. ಹೀಗಾಗಿ ಸ್ವಲ್ಪ ಹೊತ್ತು ಕಾಯುವಂತೆ ಸೂಚಿಸಿದರು.

    ಅವರ ಸೂಚನೆಯಂತೆ ನಾನು ಒಂದೂವರೆ ಗಂಟೆಗಿಂತಲೂ ಹೆಚ್ಚು ಕಾಲ ಕಾಯುತ್ತಿದ್ದೆ. ಅದಾದ ಬಳಿಕ ಬಂದು ನನ್ನನ್ನು ಹಿಂಬಾಲಿಸಿಕೊಂಡು ಬಾ ಎಂದು ಹೇಳಿದರು. ಆದರೆ ನನಗೆ ಏನೋ ಸರಿಯಿಲ್ಲ ಎಂದು ಭಾಸವಾಯಿತು. ಹಾಗೆಯೇ ಹೋದೆ. ಅವರ ಕಚೇರಿಗೆ ಕರೆದುಕೊಂಡು ಹೋಗಿ, ಕುಳಿತುಕೊಳ್ಳಲು ಸೂಚಿಸಿದರು. ಆಗ ನನ್ನ ಮುಖದ ಮೇಲೆ ನೀರನ್ನು ಚುಮುಕಿಸಿದರು. ಅದು ಗುಲಾಬಿ ಹೂವಿನ ಸುಗಂಧ ಹಾಗೂ ಗಾಢವಾದ ಒಂದು ರೀತಿಯ ವಿಚಿತ್ರ ಸುವಾಸನೆಯನ್ನು ಬೀರುತ್ತಿತ್ತು. ಇದನ್ನು ಭಾರತದಿಂದ ತರಿಸಿದ್ದು, ಇದನ್ನು ಸಾಮಾನ್ಯ ಜನರಿಗೆ ನೀಡುವುದಿಲ್ಲ ಎಂದು ಹೇಳಿ ಮತ್ತೆ ಚುಮುಕಿಸಿದ್ದಕ್ಕೆ ಕಣ್ಣು ತೆರೆಯಲು ಸಾಧ್ಯವಾಗಲಿಲ್ಲ. ಬಳಿಕ ಧರಿಸಿದ್ದ ಬಟ್ಟೆ ತೆಗೆಯುವಂತೆ ಸೂಚಿಸಿದರು. ಆಗ ನಾನು ಅದು ತುಂಬಾ ಬಿಗಿಯಾಗಿದೆ, ತೆಗೆಯಲು ಆಗುವುದಿಲ್ಲ ಎಂದು ಹೇಳಿದೆ. ಆಗ ನನನ್ನು ಗದರಿಸಿ ಅಷ್ಟೊಂದು ಬಿಗಿ ಬಟ್ಟೆ ಧರಿಸಬಾರದು ಎಂದು ಹೇಳಿ ಹಿಂದೆ ಬಂದು ನಿಂತುಕೊಂಡರು. ಆಗ ತಕ್ಷಣವೇ ಏನೋ ಗೊಣುಗುತ್ತಾ, ನನ್ನ ಬ್ಲೌಸ್ ಒಳಗೆ ಕೈಹಾಕಿ ಅನುಚಿತವಾಗಿ ಮುಟ್ಟಲು ಆರಂಭಿಸಿದ. ನನಗೆ ಅಲ್ಲಿಂದ ಎದ್ದು ಹೋಗಲು ಸಾಧ್ಯವಾಗದೇ, ಮಾತನಾಡಲು ಆಗದೇ ತಟಸ್ಥಳಾಗಿ ನಿಂತುಬಿಟ್ಟೆ.

    ಆಗ ಅವನು, ನಾನು ದೇವರ ಸೇವೆ ಮಾಡುತ್ತೇನೆ. ನೀನು ಈ ರೀತಿ ನನ್ನ ಜೊತೆ ಮಾಡಿದರೆ ನಿನಗೆ ಆರ್ಶೀವಾದ ದೊರೆಯುತ್ತದೆ. ಜೊತೆಗೆ ಈ ವಾರ ನಿನಗೆ ತುಂಬಾ ಅದೃಷ್ಟಕರ ವಾರವಾಗಿರಲಿದೆ ಎಂದು ಹೇಳಿದ. ಈ ಘಟನೆ ನಡೆದ ಕೆಲವು ದಿನಗಳ ಕಾಲ ನಾನು ಆಘಾತದಲ್ಲಿದ್ದೆ. ನನಗೆ ಅರ್ಚಕನೊಬ್ಬ ಲೈಂಗಿಕ ದೌರ್ಜನ್ಯ ನೀಡಿದ ಎಂಬುವುದನ್ನು ನಂಬಲು ಸಾಧ್ಯವಾಗುತ್ತಿರಲಿಲ್ಲ. ಬಳಿಕ ಜು.4ರಂದು ನಾನು ನಡೆದ ವಿಷಯವನ್ನು ಅಮ್ಮನಿಗೆ ತಿಳಿಸಿದೆ. ಅದೇ ದಿನ ಪೊಲೀಸರಲ ಬಳಿ ದೂರು ದಾಖಲಿಸಿದೆ.

    ಪೊಲೀಸರು ದೇವಸ್ಥಾನಕ್ಕೆ ತೆರಳಿದಾಗ ಅರ್ಚಕ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದು, ದೇವಸ್ಥಾನ ಮಂಡಳಿಯುವರು ತಮ್ಮ ದೇವಸ್ಥಾನದ ಹೆಸರುಳಿಸಲು ಪ್ರಯತ್ನ ಪಡುತ್ತಿದ್ದಾರೆ. ಹೀಗಾಗಿ ಪೊಲೀಸರು ನೀನು ಈ ಕುರಿತು ಎಲ್ಲಿಯೂ ಪ್ರಚಾರ ಮಾಡಬೇಡ. ನೀನು ಹಾಗೇ ಮಾಡಿದರೆ ಅದು ನಿನ್ನ ತಪ್ಪು ಎಂದು ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಅತ್ತ ಡೆಲ್ಲಿಯಲ್ಲಿ ಸಿದ್ದರಾಮಯ್ಯ ಕ್ಲಿಯರ್ ಮೆಸೇಜ್ – ಬೆಂಗಳೂರಲ್ಲಿ ಆಪ್ತರು ದಿಲ್ ಖುಷ್


    .

  • ಮಾಡೆಲ್ ಹತ್ಯೆ ಕೇಸ್ – ಗಂಡನ ಬಿಟ್ಟಿದ್ದ ರೂಪದರ್ಶಿಗೆ ನನ್ನ ಮದುವೆಯಾಗು ಅಂತ ಪೀಡಿಸ್ತಿದ್ದ 2 ಮಕ್ಕಳ ತಂದೆ

    ಮಾಡೆಲ್ ಹತ್ಯೆ ಕೇಸ್ – ಗಂಡನ ಬಿಟ್ಟಿದ್ದ ರೂಪದರ್ಶಿಗೆ ನನ್ನ ಮದುವೆಯಾಗು ಅಂತ ಪೀಡಿಸ್ತಿದ್ದ 2 ಮಕ್ಕಳ ತಂದೆ

    – ರೂಪದರ್ಶಿ ಕೊಲೆ ಮಾಡಿದ್ದ ಬಾಯ್‌ಫ್ರೆಂಡ್ ಅರೆಸ್ಟ್

    ಚಂಡೀಗಢ: ಕತ್ತು ಸೀಳಿ ಖ್ಯಾತ ಮಾಡೆಲ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ರೂಪದರ್ಶಿಯ ಬಾಯ್‌ಫ್ರೆಂಡ್‌ನನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಸುನಿಲ್ ಎಂದು ಗುರುತಿಸಲಾಗಿದೆ. ಮೃತ ಶೀತಲ್ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದಳು. ಆಕೆಗೆ ಸುನಿಲ್ ಬಾಯ್‌ಫ್ರೆಂಡ್ ಆಗಿದ್ದ ಎನ್ನಲಾಗಿದೆ.ಇದನ್ನೂ ಓದಿ: ಕತ್ತು ಸೀಳಿ ಖ್ಯಾತ ಮಾಡೆಲ್‌ ಬರ್ಬರ ಹತ್ಯೆ – ಕಾಲುವೆಯಲ್ಲಿ ಶವ ಪತ್ತೆ

    ಸಂತ್ರಸ್ತೆಯ ಸಹೋದರಿ ನೇಹಾ ಮಾತಾನಾಡಿ, ಶೀತಲ್ ಹಾಗೂ ನಾನು ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದೆವು. ಜೂ.14ರಂದು ಶೀತಲ್ ಮಾಡೆಲ್ ಶೂಟಿಂಗ್‌ಗಾಗಿ ಅಹರ್ ಗ್ರಾಮಕ್ಕೆ ತೆರಳಿದ್ದರು. ಆ ಸಮಯದಲ್ಲಿ ಶೀತಲ್ ನನಗೆ ಕರೆ ಮಾಡಿ, ಸುನಿಲ್ ನನ್ನ ಮೇಲೆ ದೈಹಿಕ ದೌರ್ಜನ್ಯ ಎಸಗುತ್ತಿದ್ದಾನೆ ಹಾಗೂ ಬಲವಂತವಾಗಿ ಎಳೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾನೆ ಎಂದು ಹೇಳಿದ್ದಳು. ಸ್ವಲ್ಪ ಸಮಯದ ಬಳಿಕ ಶೀತಲ್‌ಗೆ ಮತ್ತೆ ಕರೆ ಮಾಡಿದಾಗ ಆಕೆಯನ್ನು ಸಂಪರ್ಕಿಸಲು ಸಾಧ್ಯವಾಗಿರಲಿಲ್ಲ. ರಾತ್ರಿಯಾದರೂ ಮನೆಗೆ ಬರದಿದ್ದಾಗ ಕಾಣೆಯಾಗಿರುವುದಾಗಿ ದೂರು ನೀಡಿದೆ ಎಂದು ಹೇಳಿಕೊಂಡಿದ್ದಾರೆ.

    ಆರು ತಿಂಗಳ ಹಿಂದೆ ಶೂಟಿಂಗ್ ಸಮಯದಲ್ಲಿ ಕರ್ನಾಲ್‌ನ ಮಾಡೆಲ್ ಟೌನ್‌ನಲ್ಲಿರುವ ಸುನಿಲ್ ಮಾಲೀಕತ್ವದ ಹೋಟೆಲ್‌ನಲ್ಲಿ ಶೀತಲ್ ತಂಗಿದ್ದಳು. ಆಗ ಶೀತಲ್ ಹಾಗೂ ಸುನಿಲ್ ಮಧ್ಯೆ ಸ್ನೇಹ ಬೆಳೆದಿತ್ತು. ಶೀತಲ್‌ಗೆ ಮದುವೆಯಾಗಿ ಒಂದು ಮಗು ಇತ್ತು. ಆದರೆ ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ಬಗ್ಗೆ ತಿಳಿದಿದ್ದರೂ ಕೂಡ ಶೀತಲ್‌ಗೆ ಮದುವೆಯಾಗುವಂತೆ ಸುನಿಲ್ ಕೇಳಿಕೊಂಡಿದ್ದ. ಅದಲ್ಲದೇ ಸುನಿಲ್‌ಗೂ ಕೂಡ ಮದುವೆಯಾಗಿ ಎರಡು ಮಕ್ಕಳಿದ್ದರು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:Thriller Stories | ಕಾಮದಾಟಕ್ಕೆ ಅಡ್ಡಿಯಾದ ಗಂಡಂದಿರನ್ನೇ ಕೊಂದವರಿವರು…

    ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಶೀತಲ್, ಸುನಿಲ್ ಜೊತೆಗೆ ಮಾತನಾಡುವುದನ್ನು ಮತ್ತು ಆತನ ಹೋಟೆಲ್‌ನಲ್ಲಿ ಇರುವುದನ್ನು ನಿಲ್ಲಿಸಿಬಿಟ್ಟಿದ್ದಳು. ಮಾಡೆಲಿಂಗ್‌ನ್ನು ಕೂಡ ಕಡಿಮೆ ಮಾಡಿದ್ದಳು. ಆದರೆ ಸುನಿಲ್ ಮಾತ್ರ ಆಕೆಯ ಮನವೊಲಿಸುವ ಪ್ರಯತ್ನ ನಿಲ್ಲಿಸಿರಲಿಲ್ಲ ಎಂದು ತನಿಖೆ ವೇಖೆ ತಿಳಿದುಬಂದಿದೆ.

    ದೂರಿನ ಆಧಾರದ ಮೇಲೆ ತನಿಖೆಗೆ ಇಳಿದ ಪೊಲೀಸರು, ಸೋಮವಾರ ಖಾಂಡಾ ಗ್ರಾಮದ ಬಳಿಯ ಕಾಲುವೆಯಲ್ಲಿ ಮಾಡೆಲ್ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಸದ್ಯ ಪೊಲೀಸರು ಆರೋಪಿ ಸುನಿಲ್‌ನನ್ನು ಬಂಧಿಸಿದ್ದಾರೆ. ಆರೋಪಿಯು ಕೊಲೆ ಮಾಡಿ ಶವವನ್ನು ಕಾಲುವೆಗೆ ಎಸೆದಿದ್ದಾನೆ. ಕೊಲೆಯನ್ನು ಅಪಘಾತವೆಂದು ಬಿಂಬಿಸಲು, ತನ್ನ ಕಾರನ್ನು ಸಹ ಕಾಲುವೆಗೆ ಇಳಿಸಿದ್ದ. ಸ್ವತಃ ತಾನು ಈಜಿಕೊಂಡು ಪಾರಾಗಿದ್ದೇನೆಂದು ಬಿಂಬಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಬುರ್ಖಾ ಧರಿಸಿ ಇಂದೋರ್ ಸೇರಿದ್ದಳು ಹನಿಮೂನ್ ಹಂತಕಿ – ಮದುವೆಗೆ 11 ದಿನ ಮುನ್ನವೇ ಕೊಲೆಗೆ ಪ್ಲ್ಯಾನ್‌!

  • ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡು ಮಾಡೆಲ್ ಆತ್ಮಹತ್ಯೆ

    ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡು ಮಾಡೆಲ್ ಆತ್ಮಹತ್ಯೆ

    ಗಾಂಧಿನಗರ: ಮಾಡೆಲ್ (Model) ಒಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ (Gujarat) ಸೂರತ್‌ನಲ್ಲಿ ನಡೆದಿದೆ.

    ಸೂರತ್‌ನಲ್ಲಿರುವ (Surat) ಮನೆಯಲ್ಲಿ ಮಾಡೆಲ್ ಅಂಜಲಿ ಅಲ್ಪೇಶ್ ವರ್ಮೋರಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂಜಲಿ ಕಳೆದ ಹಲವಾರು ವರ್ಷಗಳಿಂದ ಫ್ರೀಲ್ಯಾನ್ಸ್ ಮಾಡೆಲ್ ಮಾಡುತ್ತಿದ್ದಳು. ಇದನ್ನೂ ಓದಿ: ಅಭಿಮಾನಿಗಳಿಗೆ ಬಿಗ್‌ ಶಾಕ್‌ – ಆರ್‌ಸಿಬಿ ಸೇಲ್‌..?

    ಅಂಜಲಿ (Anjali Alpesh Varmora) ಆತ್ಮಹತ್ಯೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸೂರತ್‌ನ ಡಿಸಿಪಿ ವಿಜಯ್ ಸಿಂಗ್ ಗುರ್ಜಾರ್, ಮಾಡೆಲ್ ಅಂಜಲಿ ಸೂರತ್‌ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂಜಲಿ, ಫ್ಯಾಷನ್ ಶೂಟ್‌ಗಳ ಜೊತೆಗೆ ವಾಣಿಜ್ಯ ಮಾಡೆಲಿಂಗ್‌ಗಳಲ್ಲೂ ತೊಡಗಿಸಿಕೊಂಡಿದ್ದಳು ಎಂದಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ ದುರಂತ – ಬೆಂಗಳೂರಿನಿಂದ ಪಂದ್ಯಗಳು ಸ್ಥಳಾಂತರ

    ಅಂಜಲಿಗೆ ಈ ಹಿಂದೆಯೇ ನಿಶ್ಚಿತಾರ್ಥವಾಗಿತ್ತು. ಮದುವೆ ದಿನಾಂಕ ಕೂಡಾ ನಿಗದಿಯಾಗಿತ್ತು. ಆದರೆ ಆಕೆಯ ಭಾವಿ ಪತಿಯ ತಾಯಿ ನಿಧನರಾದ ಬಳಿಕ, ಈ ಮದವೆಯನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿತ್ತು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಅಂಜಲಿ ಭಾವಿ ಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದಳು. ಆ ಸಮಯದಲ್ಲಿ ಆತ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌

    ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಅಂಜಲಿ ನೇಣು ಬಿಗಿದುಕೊಂಡಿದ್ದಾಳೆ. ಮನೆಯವರು ಹಿಂದಿರುಗಿದಾಗ, ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮೊದಲು, ಅಂಜಲಿ ಸೋಷಿಯಲ್ ಮೀಡಿಯಾದಲ್ಲಿ ಕೆಲವು ಭಾವನಾತ್ಮಕ ಪೋಸ್ಟ್ ಹಾಕಿದ್ದಳು. ಆದರೆ ಅದರಲ್ಲಿ ಯಾರ ನಿರ್ದಿಷ್ಟ ಹೆಸರುಗಳನ್ನು ಉಲ್ಲೇಖಿಸಿಲ್ಲ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

  • ಶಿರಸಿ ಮೂಲದ ಯುವತಿ ಡಾ.ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ!

    ಶಿರಸಿ ಮೂಲದ ಯುವತಿ ಡಾ.ಶೃತಿ ಹೆಗಡೆಗೆ ವಿಶ್ವ ಸುಂದರಿ-2024 ಕಿರೀಟ!

    ಕಾರವಾರ: ಉತ್ತರ ಕನ್ನಡ (UttaraKannada) ಜಿಲ್ಲೆಯ ಶಿರಸಿ ತಾಲೂಕಿನ ಮುಂಡಿಗೆಸರ ಮೂಲದ ಯುವತಿಯೊಬ್ಬಳು ಇತ್ತೀಚಿಗೆ ಅಮೆರಿಕದಲ್ಲಿ ಜರುಗಿದ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.

    ಮುಂಡಿಗೆಸರ ಅಜ್ಜೊರಮನೆ ಕುಟುಂಬದವರಾದ ಹುಬ್ಬಳ್ಳಿಯಲ್ಲಿ ನೆಲೆಸಿದ ಕೃಷ್ಣ ಹೆಗಡೆ, ಕಮಲಾ ದಂಪತಿಯ ಪುತ್ರಿ ಶೃತಿ ಹೆಗಡೆ (Shruti Hegde) ಅಮೆರಿಕದಲ್ಲಿ ವಿಶ್ವ ಸುಂದರಿಯಾಗಿ ಹೊರಹೊಮ್ಮಿದ್ದಾರೆ. ಈಕೆ ಈ ಮೊದಲು 2018 ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ (Miss South India) ವಿಜೇತೆಯಾಗಿದ್ದರು. 2023 ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈಕೆ, ಈಗ ಅಮೆರಿಕದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ 7,581 ಕೋಟಿ ಮೌಲ್ಯದ ನೋಟುಗಳು ಜನರ ಬಳಿಯಿದೆ: RBI

    ಅಮೆರಿಕದ (USA) ಫ್ಲೋರಿಡಾದಲ್ಲಿ ಕಳೆದ ಜೂ.6 ರಿಂದ 10ರ ವರೆಗೆ ಆಯೋಜಿತವಾಗಿದ್ದ ಸ್ಪರ್ಧೆಯಲ್ಲಿ ಭಾರತ ಸೇರಿದಂತೆ ಒಟ್ಟು 40 ದೇಶಗಳ ಸುಂದರಿಯವರು ಪೈಪೋಟಿಯಲ್ಲಿದ್ದರು. ರಾಷ್ಟ್ರೀಯ ಉಡುಗೆ, ಈಜು ಉಡುಗೆ, ಪ್ರಶ್ನೋತ್ತರ, ವಯಕ್ತಿಕ ಸಂದರ್ಶನ ಸೇರಿ ಹಲವು ಸುತ್ತುಗಳಲ್ಲಿ ಸ್ಪರ್ಧೆ ಸಾಗಿತ್ತು. ಎಲ್ಲದರಲ್ಲೂ ಉತ್ತಮ ಪ್ರದರ್ಶನ ನೀಡಿದ ಶೃತಿ ಹೆಗಡೆ ಗೆಲುವು ಸಾಧಿಸಿದ್ದಾರೆ.‌ ಇದನ್ನೂ ಓದಿ: ಮೋದಿಗೆ ತಲೆಬಾಗಿ ನಮಿಸಿದ್ದು ಸರಿಯಲ್ಲ- ಸ್ಪೀಕರ್‌ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

    ಹುಬ್ಬಳ್ಳಿಯಲ್ಲಿಯೇ ಎಂಬಿಬಿಎಸ್ ಪೂರೈಸಿರುವ ಡಾ.ಶೃತಿ ಹೆಗಡೆ, ಚರ್ಮ ರೋಗ ತಜ್ಞೆಯಾಗುವ ಹಂಬಲದಿಂದ‌ ತುಮಕೂರಿನಲ್ಲಿ ಎಮ್.ಡಿ. ಅಧ್ಯಯನ ನಡೆಸುತ್ತಿದ್ದಾರೆ. ಈಕೆ ಭರತನಾಟ್ಯ ಕಲಾವಿದೆಯೂ ಆಗಿದ್ದು, ದುಬೈ, ಮಾಲ್ಡೀವ್ಸ್‌, ಭೂತಾನ್ ಮುಂತಾದ ದೇಶಗಳಲ್ಲಿ ಪ್ರದರ್ಶನ ನೀಡಿದ್ದಾಳೆ. ಕೆಲವು ಧಾರವಾಹಿ, ಕನ್ನಡ ಚಲನಚಿತ್ರ, ವೆಬ್ ಸಿರೀಸ್ ನಲ್ಲಿ ನಟಿಸಿದ್ದಾಳೆ. ಇದನ್ನೂ ಓದಿ: ಆಫ್ರಿಕಾ ವಿರುದ್ಧ 10 ವಿಕೆಟ್‌ಗಳ ಜಯ – ಭಾರತದ ವನಿತೆಯರಿಗೆ ಮತ್ತೊಂದು ಕಿರೀಟ! 

  • ಸನ್ಯಾಸಿನಿಯಾದ ಖ್ಯಾತ ಮಾಡೆಲ್ ಬರ್ಖಾ

    ಸನ್ಯಾಸಿನಿಯಾದ ಖ್ಯಾತ ಮಾಡೆಲ್ ಬರ್ಖಾ

    ಸುಶ್ಮಿತಾ ಸೇನ್, ಐಶ್ವರ್ಯ ರೈರಂಥ ಖ್ಯಾತ ಮಾಡೆಲ್ ಗಳಿಗೆ ಸೌಂದರ್ಯ ಸ್ಪರ್ಧೆಯಲ್ಲಿ ತೀವ್ರ ಪೈಪೋಟಿ ನೀಡಿ ಮೊದಲ ರನ್ನರ್ ಅಪ್ ಆಗಿದ್ದ ಖ್ಯಾತ ಮಾಡೆಲ್ (model), ನಟಿ ಬರ್ಖಾ ಮದನ್ (Barkha Madan) ಸನ್ಯಾಸಿನಿಯಾಗಿದ್ದಾರೆ (Nun). 1994ರಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಬರ್ಖಾ ಫೈನಲಿಸ್ಟ್ ಆಗಿದ್ದವರು.

    ಖಿಲಾಡಿ ಕಾ ಕಿಲಾಡಿ ಸಿನಿಮಾದ ಮೂಲಕ ಬಾಲಿವುಡ್ ಅನ್ನು ಪ್ರವೇಶ ಮಾಡಿದ್ದ ಇವರು, ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ಮಾಡೆಲಿಂಗ್ ಮತ್ತು ಸಿನಿಮಾ ರಂಗದಲ್ಲಿ ಹಲವಾರು ವರ್ಷಗಳ ಕಾಲ ಸಕ್ರೀಯರಾಗಿದ್ದವರು ನಂತರ ಬಣ್ಣದ ಲೋಕದಿಂದ ದೂರವಾದರು. ಇದೀಗ ಸನ್ಯಾಸಿನಿಯಾಗಿ ಬದಲಾಗಿದ್ದಾರೆ.

     

    ದಲೈ ಲಾಮಾ ಅವರ ಅನುನಾಯಿ ಆಗಿದ್ದ ಬರ್ಖಾ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಆಧ್ಯಾತ್ಮಿಕ ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದರು. ಕಾಡು ಮೇಡು ಗುಡ್ಡ ಬೆಟ್ಟಗಳ ಸಂಗ ಮಾಡಿದ್ದರು. ಇದೀಗ ಸನ್ಯಾಸಿನಿಯಾಗಿ ಪರ್ವತಗಳಲ್ಲಿ ವಾಸಿಸುತ್ತಿದ್ದಾರೆ ಎನ್ನುತ್ತಾರೆ ಅವರನ್ನು ಬಲ್ಲವರು.

  • ಕಾರ್ಡಿಯಾಕ್ ಅರೆಸ್ಟ್ : ಖ್ಯಾತ ಮಾಡೆಲ್ ನಿಧನ

    ಕಾರ್ಡಿಯಾಕ್ ಅರೆಸ್ಟ್ : ಖ್ಯಾತ ಮಾಡೆಲ್ ನಿಧನ

    ತ್ತೀಚಿನ ದಿನಗಳಲ್ಲಿ ಹೃದಯಾಘಾತ, ಹೃದಯಸ್ತಂಭನದಿಂದ (Cardiac Arrest) ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಅದರಲ್ಲೂ ಸೆಲೆಬ್ರಿಟಿಗಳನ್ನು ಇಂತಹ ಪ್ರಕರಣಗಳು ನಿದ್ದೆಗೆಡಿಸಿದೆ. ಬ್ರೆಜಿಲ್‍ (Model) ನ ಖ್ಯಾತ ಮಾಡೆಲ್, ಫ್ಯಾಷನ್ ಲೋಕದ ತಾರೆ 33 ವರ್ಷದ ಹರೆಯದ ಲಾರಿಸ್ಸಾ ಬೋರ್ಗೆಸ್ ಕಾರ್ಡಿಯಾಕ್ ಅರೆಸ್ಟ್ ಆಗಿದ್ದರಿಂದ ಸಾವನ್ನಪ್ಪಿದ್ದಾರೆ. ಅವರಿಗೆ ಎರಡು ಬಾರಿ ಕಾರ್ಡಿಯಾಕ್ ಅರೆಸ್ಟ್ ಆಗಿತ್ತು ಎಂದು ಹೇಳಲಾಗುತ್ತಿದೆ.

    ಮಾಡೆಲ್ ಸಾವಿನ ಕುರಿತು ಅವರ ಕುಟುಂಬಸ್ಥರೇ ಖಚಿತ ಪಡಿಸಿದ್ದು, ಸೋಷಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಇಷ್ಟು ಬೇಗ ನೀನು ನಮ್ಮನ್ನು ತೊರೆದಿದ್ದು ಅತೀವ ದುಃಖ ತಂದಿದೆ ಎಂದು ಸಂಕಟ ಹಂಚಿಕೊಂಡಿದ್ದಾರೆ.

     

    ಫಿಟ್ನೆಸ್ ಮತ್ತು ಫ್ಯಾಷನ್ ಲೋಕದಲ್ಲಿ ತಮ್ಮದೇ ಆದ ಹೆಸರು ಮಾಡಿದ್ದರು ಲಾರಿಸ್ಸಾ. ಸಾಕಷ್ಟು ಉತ್ಪನ್ನಗಳಿಗೆ ಅವರು ರೂಪದರ್ಶಿಯಾಗಿದ್ದರು. ಕಾರ್ಯಕ್ರಮಕ್ಕೆಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರಿಗೆ ಕಾರ್ಡಿಯಾಕ್ ಅರೆಸ್ಟ್ ಆಗಿದೆ. ಕೂಡಲೇ ಕೋಮಾಗೆ ಜಾರಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ – ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

    ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್ – ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಟೆಕ್ಕಿ ಆತ್ಮಹತ್ಯೆ!

    ಬೆಂಗಳೂರು: ಪ್ರಿಯಕರನ (Lover) ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ (Bengaluru North) ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ.

    ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ (IT Company) ಕೆಲಸ ಮಾಡುತ್ತಿದ್ದ ಯುವತಿ ವಿದ್ಯಾಶ್ರೀ ಡೆತ್‌ನೋಟ್‌ನಲ್ಲಿ ಪ್ರಿಯಕರನ ಹೆಸರು, ಕಾರಣ ಬರೆದಿಟ್ಟು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ರೈಲ್ವೇ ಹಳಿ ಮೇಲೆ ಕುಸಿದ ಮಣ್ಣು – ಗೋವಾ, ಕರ್ನಾಟಕ ರೈಲು ಸಂಚಾರದಲ್ಲಿ ಇನ್ನೆರಡು ದಿನ ವ್ಯತ್ಯಯ

    ಆರೋಪಿ ಅಕ್ಷಯ್ ಹಾಗೂ ವಿದ್ಯಾಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರ ತನ್ನಿಂದ ದೂರ ಹೋಗುತ್ತಿದ್ದಾನೆ ಅಂತಾ ಅನುಮಾನಗೊಂಡ ವಿದ್ಯಾಶ್ರೀ ಆತ್ಮಹತ್ಯೆ ಹಾದಿ ಹಿಡಿದಿದ್ದಾಳೆ. ಯುವತಿ ಮನೆಯಲ್ಲಿ ಬುಧವಾರ ಡೆತ್‌ನೋಟ್ ಪತ್ತೆಯಾದ ಬೆನ್ನಲ್ಲೇ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ನಂತರ ಆರೋಪಿ ಅಕ್ಷಯ್‌ನನ್ನ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಸದ್ಯ ಸೋಲದೇವನಹಳ್ಳಿ ಠಾಣೆಯಲ್ಲಿ (Soladevanahalli Police Station) ಕೇಸ್ ದಾಖಲಾಗಿದೆ. ಇದನ್ನೂ ಓದಿ: ಫ್ರೆಂಡ್ಸ್ ನಡುವಿನ ಘಟನೆಯನ್ನ ಎಲ್ಲಿಗೋ ತೆಗೆದುಕೊಂಡು ಹೋಗ್ಬೇಡಿ: ಉಡುಪಿ ಕೇಸ್ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

    ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ:
    ಮಾಡೆಲ್ ಸಹ ಆಗಿದ್ದ ವಿದ್ಯಾಶ್ರೀ ಮತ್ತು ಅಕ್ಷಯ್ ಕಳೆದ ಒಂದು ವರ್ಷದಿಂದ ಪ್ರೀತಿ ಮಾಡುತ್ತಿದ್ದರು. ಅಕ್ಷಯ್ ವಿದ್ಯಾ ಬಳಿ 1.76 ಲಕ್ಷ ಹಣ ಪಡೆದುಕೊಂಡಿದ್ದ. ಕೊಟ್ಟ ಹಣ ಕೇಳಿದ್ದಕ್ಕೆ ವಿದ್ಯಾ ಮತ್ತು ಆಕೆಯ ಕುಟುಂಬದವರನ್ನ ಅವಾಚ್ಯ ಶಬ್ಧಗಳಿಂದ ಬೈಯುತ್ತಿದ್ದ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾದ ವಿದ್ಯಾಶ್ರೀ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಮೀಸ್ ಆಂಧ್ರ ಕಾಂಪಿಟೇಷನ್ ನಲ್ಲಿ ವಿಜೇತಳಾಗಿದ್ದ ಮೃತ ವಿದ್ಯಾಶ್ರೀ ಬಸವೇಶ್ವರ ನಗರದಲ್ಲಿ ಜೀಮ್ ಟ್ರೈನರ್ ಆಗಿದ್ದ ಆರೋಪಿ ಅಕ್ಷಯ್‌ಗೆ ಹಣ ಕೊಟ್ಟಿದ್ದರ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾಳೆ.

    ಡೆತ್‌ನೋಟ್‌ನಲ್ಲಿ ಏನಿದೆ?
    `ನನ್ನ ಸಾವಿಗೆ ಅಕ್ಷಯ್ ಕಾರಣ, ಅವನು ನನ್ನ ನಾಯಿ ಥರ ಟ್ರೀಟ್ ಮಾಡ್ತಿದ್ದಾನೆ. ನನಗೆ ಕೊಡಬೇಕಾದ 1 ಲಕ್ಷದ 76 ಸಾವಿರ ದುಡ್ಡು ಕೇಳಿದರೆ, ನನಗೆ ಹಾಗೂ ನನ್ನ ಕುಟುಂಬಗ್ಗೆ ಕೆಟ್ಟ ಕೆಟ್ಟ ಮಾತಿನಲ್ಲಿ ಬೈದು ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ. ಖಿನ್ನತೆಗೆ ಬದುಕಲು ಆಗುತ್ತಿಲ್ಲ. ದಿನೇ ದಿನೇ ನನಗೆ ತುಂಬಾ ಸ್ಟ್ರೆಸ್ ಆಗ್ತಿದೆ. ಅಮ್ಮ, ಗುರು ಮಾವ ನನ್ನನ್ನು ಕ್ಷಮಿಸಿ, ನನ್ನನ್ನು ಮರೆತುಬಿಡಿ.. ಎಲ್ಲಾ ಹುಡುಗಿಯರಿಗೆ ವಿನಂತಿ ಮಾಡುತ್ತೇನೆ ಯಾರೂ ಪ್ರೀತಿ ಮಾಡಬೇಡಿ… ಗುಡ್ ಬೈ ಟು ದಿಸ್ ವರ್ಲ್ಡ್’ ಅಂತಾ ಮೃತ ವಿದ್ಯಾಶ್ರೀ ಡೆತ್‌ನೋಟ್‌ನಲ್ಲಿ ಬರೆದಿದ್ದಾಳೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಪ್ಪು, ಶಿವಣ್ಣನ ಹೆಸರಲ್ಲೂ ವಂಚನೆ – ಬಗೆದಷ್ಟೂ ಬಯಲಾಗ್ತಿದೆ ಮಾಡೆಲ್ ನಿಶಾಳ ಕರಾಳ ಮುಖ!

    ಅಪ್ಪು, ಶಿವಣ್ಣನ ಹೆಸರಲ್ಲೂ ವಂಚನೆ – ಬಗೆದಷ್ಟೂ ಬಯಲಾಗ್ತಿದೆ ಮಾಡೆಲ್ ನಿಶಾಳ ಕರಾಳ ಮುಖ!

    – ಈವರೆಗೆ 130ಕ್ಕೂ ಹೆಚ್ಚು ಜನರಿಂದ ನಿಶಾ ನರಸಪ್ಪ ವಿರುದ್ಧ ದೂರು

    ಬೆಂಗಳೂರು: ನಟ ಮಾಸ್ಟರ್ ಆನಂದ್ (Master Anand) ಪುತ್ರಿಯ ಹೆಸರಲ್ಲಿ ವಂಚನೆ ಮಾಡಿದ್ದ ಆರೋಪಿ ನಿಶಾ ನರಸಪ್ಪ (Nisha Narsappa) ಸದ್ಯ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಳೆ. ಆದ್ರೆ ನಿಶಾ ವಿರುದ್ಧ ಹರಿದು ಬರುತ್ತಿರೋ ದೂರಿನ ಸುರಿಮಳೆ ನಿಂತಿಲ್ಲ. ಸಾಲು-ಸಾಲು ದೂರುಗಳು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುತ್ತಿದ್ದು, ಆಕೆಯ ಮೋಸ ಮಾಡುವ ಮನಸ್ಸಿನ ಒಂದೊಂದೇ ಮುಖಗಳು ತೆರೆದುಕೊಳ್ತಿವೆ.

    ಅಪ್ಪು-ಶಿವಣ್ಣನ ಹೆಸ್ರಲ್ಲೂ ವಂಚನೆ:
    ದೊಡ್ದ-ದೊಡ್ಡ ಸ್ಟಾರ್‌ಗಳ ಹೆಸರು ಬಳಸಿಕೊಳ್ಳುತ್ತಿದ್ದ ನಿಶಾ, ದಿ. ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೆಸ್ರನ್ನೂ ಬಿಟ್ಟಿಲ್ಲ. ಅಪ್ಪುಗೆ ಟ್ರಿಬ್ಯೂಟ್ ಸಾಂಗ್ ಮಾಡ್ತಿದ್ದೀವಿ, ಅದ್ರಲ್ಲಿ ನಿಮ್ಮ ಮಕ್ಕಳನ್ನ ಕುಣಿಸ್ತೀವಿ ಅಂತಲೂ ಹಲವರಿಂದ ಹಣ ಪಡೆದಿರೋ ಆರೋಪ ಈಗ ಕೇಳಿ ಬಂದಿದೆ. ಅಲ್ಲದೇ ಶಿವರಾಜ್ ಕುಮಾರ್ (Shivarajkumar), ವಿಜಯರಾಘವೇಂದ್ರ ಸೇರಿದಂತೆ ಹಲವು ಸಿನಿಮಾ ನಟರ ಸಿನಿಮಾಗಳಲ್ಲಿ ಚಾನ್ಸ್ ಕೊಡಿಸೋದಾಗಿಯೂ ಹಣ ಪಡೆದು ವಂಚಿಸಿದ್ದಾಳೆ ಅನ್ನೋ ಸಾಲು ಸಾಲು ಆರೋಪಗಳು ನಿಶಾ ವಿರುದ್ದ ಕೇಳಿ ಬರ್ತಿವೆ. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

    ಲಕ್ಷ-ಲಕ್ಷ ವಂಚನೆ:
    ಈವರೆಗೆ ಆನ್ಲೈನ್, ವಾಟ್ಸಪ್ ಹಾಗೂ ನೇರವಾಗಿ ಠಾಣೆಯಲ್ಲಿ ದಾಖಲಾದ ದೂರುಗಳು ಸೇರಿ 130ಕ್ಕೂ ಹೆಚ್ಚು ಜನರಿಂದ ಕಂಪ್ಲೇಟ್‌ಗಳು ಬಂದಿದ್ದು ಲಕ್ಷ-ಲಕ್ಷ ಹಣ ವಂಚಿಸಿದ್ದಾಳೆ ಅಂತಾ ಹೇಳಲಾಗ್ತಿದೆ. ಸದ್ಯಕ್ಕೆ ವಂಚನೆ ಮಾಡಿರೋ ಆರೋಪದಡಿ ಅರೆಸ್ಟ್ ಆಗಿದ್ದ ನಿಶಾಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯ ಆದೇಶ ನೀಡಿತ್ತು. ಪರಪ್ಪನ ಅಗ್ರಹಾರ ಜೈಲಿನ ಮಹಿಳಾ ಅಡ್ಮಿಷನ್ ಬ್ಯಾರಕ್ ನಲ್ಲಿ ಇರಿಸಿದ್ದಾರೆ. ಇದನ್ನೂ ಓದಿ: ಮಾಡೆಲ್ ನಿಶಾ ವಂಚಿಸಿದ್ದು 2 ಕೋಟಿಗೂ ಅಧಿಕ?: ಹಣ ಕಳೆದುಕೊಂಡವರಿಂದ ಹಿಡಿಶಾಪ

    ಮತ್ತೆ ಬಲೆ ಬೀಸಿರೋ ನಿಶಾ ಟೀಂ:
    ನಿಶಾ ಜೈಲಿನಲ್ಲಿದ್ದರೂ ಆಕೆ ಮೇಲಿನ ಆರೋಪಗಳು ಹೆಚ್ಚಾಗುತ್ತಲೇ ಇವೆ. ಇನ್ನೂ ಬಹಳ ಮಂದಿ ದೂರು ನೀಡೋಕೆ ಬರ್ತಿದ್ದಾರೆ. ಈ ನಡುವೆ ಆಕೆಯ ಟೀಂ ಇನ್ಸ್ಟಾಗ್ರಾಮ್ ನಲ್ಲಿ ಎಲ್ಲದಕ್ಕೂ ಉತ್ತರ ಕೊಡ್ತೀವಿ, ಏನೂ ಆಗಿಲ್ಲ. ಹೊಸದಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳೋರು ಮಾಡಿಕೊಳ್ಳಿ ಅಂತಾ ಮತ್ತೆ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಬನ್ನೆ ತನಿಖೆ ಮುಂದುವರಿದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಡೆಲ್ ನಿಶಾ ವಂಚಿಸಿದ್ದು 2 ಕೋಟಿಗೂ ಅಧಿಕ?: ಹಣ ಕಳೆದುಕೊಂಡವರಿಂದ ಹಿಡಿಶಾಪ

    ಮಾಡೆಲ್ ನಿಶಾ ವಂಚಿಸಿದ್ದು 2 ಕೋಟಿಗೂ ಅಧಿಕ?: ಹಣ ಕಳೆದುಕೊಂಡವರಿಂದ ಹಿಡಿಶಾಪ

    ವಂಚನೆಯ  ಆರೋಪ ಎದುರಿಸುತ್ತಿರುವ ಮಾಡೆಲ್ (Model)  ನಿಶಾ ನರಸಪ್ಪ 2 ಕೋಟಿಗೂ ಅಧಿಕ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ನಿಶಾ ನ್ಯಾಯಾಂಗ ಬಂಧನದಲ್ಲಿದ್ದರೆ, ಇತ್ತ ನಿಶಾ ಮನೆಯ ಮುಂದೆ ಹಣ ಕಳೆದುಕೊಂಡವರು ಗಲಾಟೆ ಮಾಡುತ್ತಿದ್ದಾರೆ. ತಮ್ಮ ಹಣವನ್ನು ಮರಳಿಸುವಂತೆ ಮನೆಯಲ್ಲಿದ್ದವರನ್ನು ಒತ್ತಾಯಿಸುತ್ತಿದ್ದಾರೆ. ಅಲ್ಲದೇ ವಿವಿಧ ಠಾಣೆಗಳಿಗೂ ತೆರಳಿ ನಿಶಾ ವಿರುದ್ಧ ದೂರು ದಾಖಲಿಸುತ್ತಿದ್ದಾರೆ.

    ನಟ ಮಾಸ್ಟರ್ ಆನಂದ್ (Master Anand) ಪುತ್ರಿ, ಬಾಲನಟಿ ವಂಶಿಕಾ (Vamshika)  ಹೆಸರಿನಲ್ಲಿ ವಂಚನೆ ಮಾಡಿದ್ದ ಆರೋಪಿ ನಿಶಾ ನರಸಪ್ಪ (Nisha Narasappa) 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತ ನಿಶಾ ಕುರಿತು ಬಗೆದಷ್ಟು ಕರ್ಮಕಾಂಡ ಬಯಲಾಗುತ್ತಿದೆ. ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ಬಳಿಕ ಒಂದೊಂದು ಕೇಸ್ ಬೆಳಕಿಗೆ ಬರುತ್ತಿವೆ. ನಿಶಾ ಅಂದರ್ ಆಗಿ ಮೂರನೇ ದಿನವೂ ಆಕೆಯ ವಿರುದ್ಧ ದೂರು ದಾಖಲಾಗುತ್ತಿದೆ. ಜೈಲಿನಲ್ಲಿ ದೂರು ದಾಖಲಿಸಿದ ಪೋಷಕರು ನಿಶಾ ಬಳಿ ಮಾತಾನಾಡುವಾಗ ತಪ್ಪೇ ಮಾಡಿಲ್ಲ ಅಂತಾ ವಾದ ಮಾಡಿದ್ದಾರೆ. ವೀಡಿಯೋ ಮಾಡಲು ಹೋದಾಗ ಫೋನ್ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ.

    ವಂಶಿಕಾ (Vamshika)  ಸೇರಿದಂತೆ ಹಲವು ಸೆಲೆಬ್ರಿಟಿಗಳ ಹೆಸರಲ್ಲಿ ವಂಚನೆ ಮಾಡುತ್ತಿದ್ದ ನಿಶಾ ಈಗ 14 ದಿನಗಳ ನ್ಯಾಯಾಂಗ (Jail) ಬಂಧನದಲ್ಲಿದ್ದಾರೆ. ಮೋಸ ಹೋದ ಪೋಷಕರೊಂದಿಗೆ ಆರೋಪಿ ನಿಶಾ ಮಾತುಕತೆ ಮಾಡಿದ್ದಾರೆ. ಕೊಟ್ಟ ಹಣವನ್ನ ವಾಪಸ್ ಕೇಳಲು ಹೋದಾಗ ವೀಡಿಯೋ ಮಾಡಲು ಯತ್ನಿಸಿದ್ದಾರೆ. ನಿಶಾ ಅವರ ಫೋನ್ ಅನ್ನ ಕಸಿದುಕೊಳ್ಳಲು ಹೋಗಿರುವ ಘಟನೆ ನಡೆದಿದೆ.

    ಕಾಲ್ ಯಾಕೆ ಪಿಕ್ ಮಾಡುತ್ತಿಲ್ಲ ಎಂದು ಪೋಷಕರು ಈ ವೇಳೆ ಪ್ರಶ್ನಿಸಿದ್ದಾರೆ. ಅದಕ್ಕೆ ನಿಶಾ ಉತ್ತರವೇ ಕೊಟ್ಟಿಲ್ಲ. ಆಗ ನಾನು ತಪ್ಪೇ ಮಾಡಿಲ್ಲ ಎಂದು ನಿಶಾ ವಾದ ಮಾಡಿದ್ದಾರೆ. ಹಣ ಕೇಳಲು ಹೋದಾಗ ಬಾಗಿಲಲ್ಲೇ ನಿಂತು ವಾದ ಮಾಡಿದ್ದಾರೆ. ಇದಾದ ಬಳಿಕ ಮಾಧ್ಯಮದ ಮುಂದೆ ಈ ಬಗ್ಗೆ ಹೇಳಿಕೆ ನೀಡಲು ಪೋಷಕರು ನಿರಾಕರಿಸಿದ್ದಾರೆ. ಇದನ್ನೂ ಓದಿ:ತಮಿಳು ನಟ ಸೂರ್ಯ ಜೊತೆಗಿನ ಫೋಟೋ ಶೇರ್ ಮಾಡಿದ ರಮ್ಯಾ

    ಕಳೆದ ತಿಂಗಳು ದಾಖಲಾದ ದೂರುಗಳ ಬೆನ್ನಲ್ಲೇ ಇದೀಗ ಸಾಕಷ್ಟು ಮಂದಿಯಿಂದ ದೂರುಗಳು ದಾಖಲೆಯಾಗುತ್ತಿವೆ. ಈ ಹಿಂದೆ ತಾರಾ ಎಂಬುವರಿಗೆ ನಿಶಾ ಇಪ್ಪತ್ತು ಲಕ್ಷ ರೂಪಾಯಿ ವಂಚನೆ ಮಾಡಿದ್ದರು ಎನ್ನುವ ಆರೋಪ ಕೂಡ ಇದೆ. ಈವೆಂಟ್ ಮ್ಯಾನೇಜ್ಮೆಂಟ್ ಹೆಸರಲ್ಲಿ ನಿಶಾ ಲಕ್ಷಾಂತರ ರೂಪಾಯಿ ಹಣ ವಂಚನೆ ಮಾಡಿದ್ದಾರಂತೆ. ಈ ಬಗ್ಗೆ ಕಳೆದ ತಿಂಗಳು ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ.

     

    ಅಲ್ಲದೇ, ಕೋಣನಕುಂಟೆ ಹಾಗೂ ಜ್ಞಾನಭಾರತಿ ಠಾಣೆಯಲ್ಲಿ ನಿಶಾ ವಿರುದ್ದ ವಂಚನೆ ದೂರುಗಳು ದಾಖಲಾಗಿವೆ. ಸದಾಶಿವನಗರ ಠಾಣೆಯಲ್ಲಿ ದಾಖಲಾದ ಕೇಸ್ ನಲ್ಲಿ ಬರೋಬ್ಬರಿ 35 ಲಕ್ಷ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಸಾಲದ ರೂಪದಲ್ಲಿ ಹಾಗೂ ಇನ್ವೆಸ್ಟ್ ಮಾಡಿದ್ರೆ ಲಾಭಾಂಶ ನೀಡುವುದಾಗಿ ನಿಶಾ ವಂಚನೆ ಮಾಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಮೊದ ಮೊದಲು ಲಾಭಾಂಶದ ಹಣ ಕೊಟ್ಟು ಎರಡರಷ್ಟು ಹಣ ಪಡೆದು ವಂಚನೆ ಮಾಡಿದ್ದಾರಂತೆ ನಿಶಾ. ಬೆಂಗಳೂರು ದೊಡ್ಡ ಮಾಲ್ ಗಳಲ್ಲಿ ಈವೆಂಟ್ ಮ್ಯಾನೇಜ್ಮೆಂಟ್ ಮಾಡ್ತಿದ್ದ ರಾಮನಗರ ಮೂಲದ ನಿಶಾ, ಬೆಂಗಳೂರು ಹೊರಹೊಲಯದಲ್ಲಿನ ರೆಸಾರ್ಟ್ ಗಳಲ್ಲಿ ಶೂಟಿಂಗ್ ಮಾಡುವ ಮೂಲಕ ಪೋಷಕರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಸದಾಶಿವನಗರ ಠಾಣೆಗೆ ಬರುತ್ತಿರುವ ದೂರುಗಳನ್ನು ತಮ್ಮ ಮನೆ ವ್ಯಾಪ್ತಿಯ ಠಾಣೆಯಲ್ಲಿ ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]