Tag: Model Code of Conduct

  • ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್‌? – ಪ್ರಚಾರದ ವೇಳೆ ಮಹಿಳೆಗೆ 500 ರೂ. ಹಣಕೊಟ್ಟ ಸಚಿವ

    ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ರಾ ಜಮೀರ್‌? – ಪ್ರಚಾರದ ವೇಳೆ ಮಹಿಳೆಗೆ 500 ರೂ. ಹಣಕೊಟ್ಟ ಸಚಿವ

    – ಗನ್‌ಮ್ಯಾನ್‌ ಜೇಬಿನಿಂದ ಹಣ ತೆಗೆದು ಮಹಿಳೆಗೆ ಕೊಟ್ಟ ಜಮೀರ್‌

    ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಕಾಂಗ್ರೆಸ್‌ ಅಭ್ಯರ್ಥಿ ಪರ ಪ್ರಚಾರದಲ್ಲಿ ಸಚಿವ ಜಮೀರ್‌ ಅಹ್ಮದ್‌ (Zameer Ahmed) ಅವರು ನೀತಿ ಸಂಹಿತೆ ಉಲ್ಲಂಘಿಸಿದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರಚಾರದ ವೇಳೆ ಮಹಿಳೆಯೊಬ್ಬರಿಗೆ ಸಚಿವರು 500 ರೂ. ದುಡ್ಡು ಕೊಟ್ಟಿರುವ ವೀಡಿಯೋ ವೈರಲ್‌ ಆಗಿದೆ.

    ನಿನ್ನೆ ರಾತ್ರಿ ನಗರದ ಯಾರಬ್ ನಗರದಲ್ಲಿ ಸಿ.ಪಿ.ಯೋಗೇಶ್ವರ್‌ ಪರ ಜಮೀರ್‌ ಪ್ರಚಾರ ನಡೆಸಿದ್ದರು. ಪ್ರಚಾರದ ವೇಳೆ ಮಹಿಳೆಗೆ 500 ಮುಖಬೆಲೆಯ ನೋಟನ್ನು ಜಮೀರ್ ಕೊಟ್ಟಿದ್ದಾರೆ. ಗನ್ ಮ್ಯಾನ್ ಬಳಿಯಿಂದ ಹಣ ಪಡೆದು ಪ್ರಚಾರ ವಾಹನದ ಮೇಲಿಂದಲೇ ಮಹಿಳೆಗೆ ಹಣ ನೀಡಿದ್ದಾರೆ. ಈ ದೃಶ್ಯದ ವೀಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದನ್ನೂ ಓದಿ: ಮುಡಾದಲ್ಲಿ ಸಿಎಂ ಪ್ರಭಾವಕ್ಕೆ ಮತ್ತೊಂದು ಸಾಕ್ಷಿ – ಸಿಎಂ ಪತ್ನಿ ಕ್ರಯಪತ್ರದ ಮುದ್ರಾಂಕ ಶುಲ್ಕ ತಹಶೀಲ್ದಾರ್‌ರಿಂದಲೇ ಪಾವತಿ

    ಶನಿವಾರ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಪರ ಸಚಿವ ಜಮೀರ್, ರಹೀಂ ಖಾನ್, ಡಿ.ಕೆ.ಸುರೇಶ್ ಪ್ರಚಾರ ನಡೆಸಿದ್ದರು.

    ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್‌ ಸಚಿವರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಈ ಉಪಚುನಾವಣೆ ಬಿಜೆಪಿ ಬಸವರಾಜ ಬೊಮ್ಮಾಯಿ ವರ್ಸಸ್ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

  • ಚುನಾವಣೆ ನೀತಿ ಸಂಹಿತೆ ಕಾರಣದಿಂದ ಪಂಚಮಸಾಲಿ ಮೀಸಲಾತಿ ನಿರ್ಧಾರ ಸಾಧ್ಯವಿಲ್ಲ: ಸಿದ್ದರಾಮಯ್ಯ

    ಚುನಾವಣೆ ನೀತಿ ಸಂಹಿತೆ ಕಾರಣದಿಂದ ಪಂಚಮಸಾಲಿ ಮೀಸಲಾತಿ ನಿರ್ಧಾರ ಸಾಧ್ಯವಿಲ್ಲ: ಸಿದ್ದರಾಮಯ್ಯ

    ಬೆಂಗಳೂರು: ಚುನಾವಣೆ ನೀತಿ ಸಂಹಿತೆ (Model Code of Conduct) ಇರುವುದರಿಂದ ಈಗ ಮೀಸಲಾತಿ (Reservation) ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪಂಚಮಸಾಲಿಗಳಿಗೆ 2ಎ ಮೀಸಲಾತಿ ಬೇಡಿಕೆ ಇಟ್ಟ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

    ಜಯ ಮೃತ್ಯುಂಜಯ ಸ್ವಾಮೀಜಿ (Jaya Mrityunjaya Swamiji) ನೇತೃತ್ವದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ನಡೆಸಿತು. ಈ ವೇಳೆ ಮಾತನಾಡಿದ ಸಿಎಂ, ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

    ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು. ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: MUDA Scam| ಸಿಎಂ ತಕ್ಷಣ ರಾಜೀನಾಮೆ ನೀಡಬೇಕು, ಸಿಬಿಐಗೆ ನೀಡದಿದ್ರೆ ಕೇಸ್‌ ಮುಚ್ಚಿ ಹಾಕ್ತಾರೆ: ಛಲವಾದಿ ನಾರಾಯಣಸ್ವಾಮಿ

    ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು. ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು. ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದು ಹೇಳಿದರು.

    ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದುವರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವ ನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಅಂತ ತಿಳಿಸಿದರು.

     

  • ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಕಾರನ್ನೇ ತಡೆದು ಪರಿಶೀಲಿಸಿದ ಪೊಲೀಸರು

    ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಕಾರನ್ನೇ ತಡೆದು ಪರಿಶೀಲಿಸಿದ ಪೊಲೀಸರು

    – ಅಧಿಕಾರಿಗಳಿಗೆ ಸಹಕಾರ ನೀಡಿ ಕರ್ತವ್ಯನಿಷ್ಠೆ ಮೆರೆದ ಸಿದ್ದರಾಮಯ್ಯ

    ಕೋಲಾರ: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಕಾರನ್ನು ಅಧಿಕಾರಿಗಳು ತಡೆದು ಪರಿಶೀಲಿಸಿದ ಘಟನೆ ಜಿಲ್ಲೆಯ ರಾಮಸಂದ್ರ ಬಳಿ ನಡೆದಿದೆ.

    ಕೋಲಾರ (Kolar) ನಗರದ ಹೊರಭಾಗದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದರು. ಈ ವೇಳೆ ಅವರ ಕಾರನ್ನು ಕೋಲಾರ ಜಿಲ್ಲೆಯ ಗಡಿಯಲ್ಲಿ ಸ್ಥಾಪಿಸಲಾದ ರಾಮಸಂದ್ರ ಚೆಕ್ ಪೋಸ್ಟ್ ಬಳಿ ಪೋಲೀಸರು ತಪಾಸಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

    ಇದಕ್ಕೆ ಕಿಂಚಿತ್ತೂ ಬೇಸರಿಸಿಕೊಳ್ಳದ ಸಿಎಂ, ತಪಾಸಣೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಈ ವೇಳೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್ ಸುರೇಶ್ ಸಹ ಅವರ ಜೊತೆಗಿದ್ದರು. ಬಳಿಕ ಅವರು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ವಾಪಸ್ ಬೆಂಗಳೂರಿಗೆ ತೆರಳಿದ್ದಾರೆ.

    ಲೋಕಸಭಾ ಚುನಾವಣೆಯನ್ನು (Lok Sabha Election 2024) ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸುವ ಉದ್ದೇಶದಿಂದ ಚುನಾವಣಾಧಿಕಾರಿಗಳ ತಂಡ ಎಲ್ಲೆಡೆ ಕಾರ್ಯನಿರ್ವಹಿಸುತ್ತಿದೆ. ಪ್ರತಿ ವಾಹನವನ್ನು ಸಮಗ್ರವಾಗಿ ತಪಾಸಣೆಗೆ ಒಳಪಡಿಸಬೇಕು ಎಂಬ ಆದೇಶದ ಮೇರೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಇದನ್ನೂ ಓದಿ: ಮತ್ತೆ ಮೋದಿಯನ್ನ ಪ್ರಧಾನಿ ಮಾಡೋದು ಪರಿಶಿಷ್ಟರ ಸಂಕಲ್ಪ: ಪ್ರಹ್ಲಾದ್ ಜೋಶಿ

  • ಲೋಕಸಭಾ ಚುನಾವಣೆ ಘೋಷಣೆ ಬಳಿಕ 79,000ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ದೂರು

    ಲೋಕಸಭಾ ಚುನಾವಣೆ ಘೋಷಣೆ ಬಳಿಕ 79,000ಕ್ಕೂ ಹೆಚ್ಚು ನೀತಿ ಸಂಹಿತೆ ಉಲ್ಲಂಘನೆ ದೂರು

    ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024) ಘೋಷಣೆಯಾದ ಬಳಿಕ ಶುಕ್ರವಾರದವರೆಗೆ ದೇಶದಾದ್ಯಂತ ಸಿ-ವಿಜಿಲ್ ಆಪ್ (C-Vigil App) ಮೂಲಕ 79,000ಕ್ಕೂ ಹೆಚ್ಚು ಮಾದರಿ ನೀತಿ ಸಂಹಿತೆ (Model code of conduct) ಉಲ್ಲಂಘನೆ ದೂರುಗಳು ದಾಖಲಾಗಿವೆ. ಇದರಲ್ಲಿ 99%ಕ್ಕೂ ಹೆಚ್ಚು ದೂರುಗಳನ್ನು ಪರಿಹರಿಸಲಾಗಿದೆ ಮತ್ತು ಈ ದೂರುಗಳಲ್ಲಿ 89% ದೂರುಗಳನ್ನು 100 ನಿಮಿಷಗಳಲ್ಲಿ ಪರಿಹರಿಸಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (Election Commission of India) ತಿಳಿಸಿದೆ.

    ಭಾರತೀಯ ಚುನಾವಣಾ ಆಯೋಗದ ಸಿ-ವಿಜಿಲ್ ಅಪ್ಲಿಕೇಶನ್ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಹಿತಿ ಹಂಚಿಕೊಳ್ಳಲು ಜನರಿಗೆ ಪರಿಣಾಮಕಾರಿ ಸಾಧನವಾಗಿದೆ. ಅಕ್ರಮ ಹೋಡಿರ್ಂಗ್‍ಗಳು ಮತ್ತು ಬ್ಯಾನರ್‌ಗಳ ವಿರುದ್ಧ 58,500ಕ್ಕೂ ಹೆಚ್ಚು ದೂರುಗಳು (73% ದೂರುಗಳು) ಸ್ವೀಕರಿಸಲಾಗಿದೆ. ಹಣ, ಉಡುಗೊರೆಗಳು ಮತ್ತು ಮದ್ಯ ವಿತರಣೆಗೆ ಸಂಬಂಧಿಸಿದಂತೆ 1400ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ. ಬಂದೂಕು ಪ್ರದರ್ಶನ ಮತ್ತು ಬೆದರಿಕೆಗೆ ಸಂಬಂಧಿಸಿದಂತೆ ಬಂದ 535 ದೂರುಗಳಲ್ಲಿ 529ನ್ನು ಈಗಾಗಲೇ ಪರಿಹರಿಸಲಾಗಿದೆ ಎಂದು ಆಯೋಗ ತಿಳಿಸಿದೆ. ಇದನ್ನೂ ಓದಿ: ದೈವಕೋಲದ ವೇಳೆ ಸಾರ್ವಜನಿಕ ಸಭೆ – ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್

    1,000 ದೂರುಗಳು ನಿಷೇಧಿತ ಅವಧಿಯನ್ನು ಮೀರಿ ಪ್ರಚಾರಕ್ಕಾಗಿ ದಾಖಲಾಗಿದೆ. ಇದರಲ್ಲಿ ಅನುಮತಿಸಲಾದ ಸಮಯವನ್ನು ಮೀರಿ ಸ್ಪೀಕರ್‌ಗಳ ಬಳಕೆ ಸೇರಿದೆ. ಅಲ್ಲದೇ 2454 ದೂರುಗಳು ಆಸ್ತಿಗಳ ಹಾನಿಗೆ ಸಂಬಂಧಿಸಿದ್ದಾಗಿದೆ.

    2024ರ ಸಾರ್ವತ್ರಿಕ ಚುನಾವಣೆಯ ಘೋಷಣೆಯ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ನಾಗರಿಕರು ಜಾಗರೂಕರಾಗಿರಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಮತದಾರರಿಗೆ ಯಾವುದೇ ರೀತಿಯ ಪ್ರಚೋದನೆ, ವಿತರಣೆಯನ್ನು ದೂರು ನೀಡಲು ಅಪ್ಲಿಕೇಶನ್‍ನ್ನು ಬಳಸಬೇಕು ಎಂದು ಮಾಹಿತಿ ನೀಡಿದ್ದರು. ಇದನ್ನೂ ಓದಿ: ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

  • ದೈವಕೋಲದ ವೇಳೆ ಸಾರ್ವಜನಿಕ ಸಭೆ – ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್

    ದೈವಕೋಲದ ವೇಳೆ ಸಾರ್ವಜನಿಕ ಸಭೆ – ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್

    ಉಡುಪಿ: ದೈವಕೋಲದ ವೇಳೆ ಸಭೆ ನಡೆಸಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ (Udupi Chikmagalur Lok Sabha constituency) ಕಾಂಗ್ರೆಸ್ (Congress) ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ (Jayaprakash Hegde) ವಿರುದ್ಧ ಕೇಸ್ ದಾಖಲಾಗಿದೆ.

    ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದ ಜಯಪ್ರಕಾಶ್ ಹೆಗ್ಡೆ, ಸಾರ್ವಜನಿಕರೊಂದಿಗೆ ಚುನಾವಣಾ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಫ್ಲೈಯಿಂಗ್ ಸ್ಕಾಡ್‍ಗೆ ಮಾಹಿತಿ ಬಂದಿತ್ತು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ

    ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ (Model code of conduct) ಉಲ್ಲಂಘನೆ ಪ್ರಕರಣ ದಾಖಲಾಗಿದೆ.

    ಬಿಜೆಪಿ ಭದ್ರಕೋಟೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. 2002ರಲ್ಲಿ ಡಿಲಿಮಿಟೇಶನ್ ಕಮಿಷನ್ ಆಫ್ ಇಂಡಿಯಾದ ಶಿಫಾರಸಿನ ಆಧಾರದ ಮೇಲೆ 2008 ರಲ್ಲಿ ಈ ಕ್ಷೇತ್ರ ರಚನೆಯಾಯಿತು. 2009ರಲ್ಲಿ ಕ್ಷೇತ್ರದಲ್ಲಿ ಮೊದಲ ಚುನಾವಣೆ ನಡೆಯಿತು. ಅದರ ಮೊದಲ ಸದಸ್ಯರಾಗಿ ಬಿಜೆಪಿಯ ಡಿ.ವಿ.ಸದಾನಂದ ಗೌಡ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದರು. ಬಳಿಕ 2014 ಮತ್ತು 2019ರಲ್ಲಿ ಅಖಾಡಕ್ಕಿಳಿದಿದ್ದ ಶೋಭಾ ಕರಂದ್ಲಾಜೆ ಮೋದಿ ಹೆಸರಲ್ಲಿ ಪ್ರಚಂಡ ಬಹುಮತದಿಂದ ಗೆದ್ದು ಬೀಗಿದ್ದರು.

    ಈ ಬಾರಿ ಬಿಜೆಪಿಯಿಂದ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ಕಣಕ್ಕಿಳಿದಿದ್ದು, ಕಾಂಗ್ರೆಸ್‍ನಿಂದ ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ

  • ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು

    ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು

    ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ. ಯಾವುದೇ ಅನುಮತಿ ಪಡೆಯದೆ ಪಕ್ಷದ ಬಾವುಟ ಹಿಡಿದುಕೊಂಡು ಮೆರವಣಿಗೆ ನಡೆಸಿದ ಆರೋಪದಡಿ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್, ಹಾನಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗನಗೌಡ ಪಾಟೀಲ್ ಮತ್ತು ಬಿಜೆಪಿ ಉಪಾಧ್ಯಕ್ಷ ರವಿರಾಜ್ ಕಲಾಲ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಅ.7 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮತ್ತು ಜೆಡಿಎಸ್ ನ ನಿಯಾಜ್ ಶೇಖ್ ಹಾಗೂ ನಿನ್ನೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಪರಂ ವಿರುದ್ಧ ಜೋಡೆತ್ತಾದ ಸಿದ್ದು, ಡಿಕೆಶಿ – ರಾಷ್ಟ್ರ ರಾಜಕಾರಣಕ್ಕೆ ಮಾಜಿ ಡಿಸಿಎಂ ಕಳುಹಿಸಲು ತಂತ್ರ

    ಫ್ಲೈಯಿಂಗ್ ಸ್ಕ್ವಾಡ್ ಗಳಾದ ರಾಘವೇಂದ್ರ ಹರಿಗೌಡರ, ಮಂಜಪ್ಪ ಗುಂಡಪಲ್ಲಿ ಮತ್ತು ರಾಘವೇಂದ್ರ ಹರಿಗೋಲ್ ಎಂಬವರು ದೂರು ದಾಖಲು ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಬಿಟ್ಟು ಪಕ್ಷದ ಮುಖಂಡರ ಮೇಲೆ ಕೇಸ್ ಮಾಡಲಾಗಿದೆ.