Tag: modi govt

  • ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

    ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

    -ಕೇಂದ್ರದಿಂದ SC-ST, ಮಹಿಳೆಯರಿಗೆ 2,946 ಕೋಟಿ ಸಾಲ: ಎಂಪಿ ಕ್ಯಾ.ಚೌಟ ಶ್ಲಾಘನೆ

    ನವದೆಹಲಿ: ಕೇಂದ್ರದ ಮೋದಿ ಸರ್ಕಾರವು (Modi Govt), ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ಸ್ಟ್ಯಾಂಡ್ ಅಪ್ ಇಂಡಿಯಾ (Stand Up India Scheme) ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ (Karnataka) ರಾಜ್ಯಕ್ಕೆ ಅತೀ ಹೆಚ್ಚಿನ ಸಾಲದ ನೆರವು ನೀಡಿದೆ ಎಂದು ದಕ್ಷಿಣ ಕನ್ನಡ (Dakshina Kannada) ಸಂಸದ ಕ್ಯಾ. ಬ್ರಿಜೇಶ್ ಚೌಟ (Capt Brijesh Chowta) ಶ್ಲಾಘಿಸಿದ್ದಾರೆ.

    ಈ ಕುರಿತು ಚೌಟ ಅವರು ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ, ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ನೀಡಿರುವ ಲಿಖಿತ ಉತ್ತರದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಹಣಕಾಸು ಸಚಿವಾಲಯದ (Ministry of Finance) ಈ ಲಿಖಿತ ಪ್ರತಿಕ್ರಿಯೆಯಲ್ಲಿ, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಹಿಂದುಳಿದ ಸಮುದಾಯಗಳನ್ನು ಸ್ವಂತ ಉದ್ಯಮ ಸ್ಥಾಪಿಸಿ, ಸ್ವಾವಲಂಬಿಯಾಗಿಸುವ ಮೂಲಕ ಯುವ ಉದ್ದಿಮೆದಾರರನ್ನು ತಯಾರಿಸುವಲ್ಲಿ ಈ ಯೋಜನೆಯಡಿ ಕರ್ನಾಟಕಕ್ಕೆ ಹೆಚ್ಚಿನ ಸಾಲದ ನೆರವನ್ನು ಕೇಂದ್ರ ಸರ್ಕಾರ (Central Govt) ನೀಡಿದೆ ಎಂದು ಉಲ್ಲೇಖಿಸಿದೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯು 2016ರಲ್ಲಿ ಪ್ರಾರಂಭವಾಗಿದ್ದು, ಇಲ್ಲಿಯವರೆಗೆ 16,846 ಸಾಲದ ಖಾತೆಗಳನ್ನು ತೆರೆದು ಈ ಮೂಲಕ ಒಟ್ಟು 3,750.40 ಕೋಟಿ ರೂ. ಸಾಲವನ್ನು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿ ಕರ್ನಾಟಕದ ಅರ್ಹ ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಈ ಯೋಜನೆಯಡಿ ಮಹಿಳೆಯರು ಒಳಗೊಂಡಂತೆ ಪರಿಶಿಷ್ಟ ಜಾತಿಯ ಫಲಾನುಭವಿಗಳು 3,108 ಖಾತೆಗಳನ್ನು ಹೊಂದಿದ್ದು, 661.10 ಕೋಟಿ ರೂ. ಸಾಲ ನೀಡಲಾಗಿದೆ. ಹಾಗೆಯೇ ಪರಿಶಿಷ್ಟ ಪಂಗಡದವರು 868 ಖಾತೆಗಳನ್ನು ಹೊಂದಿದ್ದು, 166.96 ಕೋಟಿ ರೂ. ಸಾಲ ಒದಗಿಸಲಾಗಿದೆ. ಇನ್ನೂ ಸಾಮಾನ್ಯ ಮಹಿಳಾ ವಿಭಾಗದಡಿ 12,870 ಸಾಲದ ಖಾತೆಯನ್ನು ಹೊಂದಿದ್ದು, 2,922.34 ಕೋಟಿ ರೂ. ಸಾಲ ನೀಡಲಾಗಿದೆ. ಈ ಮೂಲಕ ಮೋದಿ ಸರ್ಕಾರದ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಕರ್ನಾಟಕದ ಫಲಾನುಭವಿಗಳಿಂದ ಅತೀ ಹೆಚ್ಚಿನ ಸ್ಪಂದನೆ ವ್ಯಕ್ತವಾಗಿದೆ.

    ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ಅಭೂತಪೂರ್ವ ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯು ಕರ್ನಾಟಕದಲ್ಲಿ ಸಾವಿರಾರು ಮಂದಿಯನ್ನು ಉದ್ದಿಮೆದಾರರನ್ನಾಗಿ ರೂಪಿಸುವಲ್ಲಿ ಬಹುದೊಡ್ಡ ಮಟ್ಟದಲ್ಲಿ ನೆರವಾಗಿದೆ. ಅದರಲ್ಲಿಯೂ ಶೋಷಿತ ಸಮಾಜದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಯುವ ಉದ್ದಿಮೆದಾರರನ್ನು ಕೂಡ ತಮ್ಮ ಕಾಲ ಮೇಲೆ ನಿಲ್ಲುವಂತೆ ಮಾಡಿದೆ. ಜೊತೆಗೆ ಸ್ವಂತ ಉದ್ಯಮವನ್ನು ಕಟ್ಟಿ ಬೆಳೆಸುವುದಕ್ಕೆ ಮೋದಿ ಸರ್ಕಾರದ ಸ್ಟ್ಯಾಂಡ್ ಅಪ್ ಇಂಡಿಯಾ ದೊಡ್ಡ ಪ್ರಮಾಣದಲ್ಲಿ ಬ್ಯಾಂಕ್ ಸಾಲವನ್ನು ನೀಡಿರುವುದು ನಿಜಕ್ಕೂ ಗಮನಾರ್ಹವಾದದ್ದು. ಕೇಂದ್ರ ಸರ್ಕಾರವು ಈ ಯೋಜನೆಯಡಿ ಕರ್ನಾಟಕದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ದಿಮೆದಾರ ಆಕಾಂಕ್ಷಿಗಳನ್ನು ಆರ್ಥಿಕವಾಗಿ ಸೇರ್ಪಡೆಗೊಳಿಸುವಲ್ಲಿ ಭದ್ರ ಅಡಿಪಾಯವನ್ನು ಹಾಕುತ್ತಿದೆ ಎನ್ನುವುದಕ್ಕೆ ಕಳೆದ ಐದಾರು ವರ್ಷಗಳಲ್ಲಿ ನೀಡಿರುವ ಬ್ಯಾಂಕ್ ಸಾಲದ ಪ್ರಮಾಣವೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯು ಸ್ವಂತ ಉದ್ದಿಮೆ ಸ್ಥಾಪಿಸುವುದಕ್ಕೆ 10 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯವನ್ನು ಒದಗಿಸುತ್ತದೆ. ವಿಶೇಷವಾಗಿ ಉತ್ಪಾದನೆ, ಸೇವಾ ಕ್ಷೇತ್ರ, ವ್ಯಾಪಾರ ಮತ್ತು ಸಂಬಂಧಿತ ಕೃಷಿ ವಲಯಗಳಲ್ಲಿನ ಗ್ರೀನ್‌ಫೀಲ್ಡ್ ಯೋಜನೆಗಳಿಗೆ ಆರ್ಥಿಕ ಸಹಾಯ ನೀಡುತ್ತದೆ.ಇದನ್ನೂ ಓದಿ: ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

  • ಕುಮಾರಸ್ವಾಮಿ ಸರ್ಕಾರದ ಅಂಗಳಕ್ಕೆ ಚೆಂಡು ಎಸೆದ ಮೋದಿ ಸರ್ಕಾರ!

    ಕುಮಾರಸ್ವಾಮಿ ಸರ್ಕಾರದ ಅಂಗಳಕ್ಕೆ ಚೆಂಡು ಎಸೆದ ಮೋದಿ ಸರ್ಕಾರ!

    ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಎಚ್‍ಡಿ ಕುಮಾರಸ್ವಾಮಿ ಅವರಿಗೆ ಒಂದರಂತೆ ಒಂದು ಸವಾಲುಗಳು ಎದುರಾಗುತ್ತಿದೆ.

    ಶುಕ್ರವಾರ ವಿಧಾನ ಸದನದಲ್ಲಿ ಬಿಜೆಪಿಯವರು ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಸಭಾತ್ಯಾಗ ಮಾಡಿ ಹೊರಟಿದ್ದರು. ಈ ತಲೆನೋವಿನ ಜೊತೆ ಸಿಎಂ ಕುಮಾರಸ್ವಾಮಿಗೆ ಸರ್ಕಾರಕ್ಕೆ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ತಲೆನೋವು ಎದುರಾಗಿದೆ.

    ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ಹೊಸದಾಗಿ ಶಿಫಾರಸ್ಸು ಕಳುಹಿಸಿ ಕೊಡಬೇಕು. ಹೊಸದಾಗಿ ರಚನೆಯಾಗಿರುವ ರಾಜ್ಯ ಸರ್ಕಾರದಿಂದ ಶಿಫಾರಸ್ಸು ಬರಬೇಕು. ಅಷ್ಟೇ ಅಲ್ಲದೇ ಕರ್ನಾಟಕಕ್ಕೆ ಪ್ರತ್ಯೇಕ ಧ್ವಜ ಬಗ್ಗೆಯೂ ಹೊಸದಾಗಿ ಶಿಫಾರಸ್ಸು ಕಳುಹಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರದ ಅಂಗಳಕ್ಕೆ ಮೋದಿ ಸರ್ಕಾರ ಚೆಂಡು ಎಸೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಮತ್ತೊಂದು ಟೆನ್ಷನ್ – ಹೊಸ ಬೇಡಿಕೆ ಇಟ್ಟ ಲಿಂಗಾಯತ ಸಮುದಾಯ

    ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ನಾವು ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಧರ್ಮ ಗುರುಗಳು ಮತ್ತು ಸ್ವಾಮಿಗಳ ನಿರ್ಧಾರಕ್ಕೆ ತಲೆ ಬಾಗುತ್ತೇವೆ ಎಂದು ಸ್ಥಿರತೆ ಕಾಯ್ದುಕೊಂಡಿದ್ದರು. ಆದರೆ ಕಾಂಗ್ರೆಸ್ ಹೆಚ್ಚಿನ ಉತ್ಸಾಹ ತೋರಿಸಿದ್ದು, ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಇದನ್ನೂ ಓದಿ; ಕೈ ಶಾಸಕಾಂಗ ಸಭೆಯಲ್ಲಿ ಲಿಂಗಾಯತ ಶಾಸಕರ ಅಸಮಾಧಾನ ಸ್ಫೋಟ!

    ಚುನಾವಣೆ ಮುಗಿದ ಬಳಿಕ ಹೊಸ ಸರ್ಕಾರ ಮತ್ತೊಮ್ಮೆ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸ್ಸನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು. ಸದ್ಯಕ್ಕೆ ಈಗ ಸಮ್ಮಿಶ್ರ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

  • ಮೋದಿ ಸರ್ಕಾರ ವಿಶ್ವದ 3ನೇ ಅತ್ಯಂತ ವಿಶ್ವಾಸಾರ್ಹ ಸರ್ಕಾರ

    ಮೋದಿ ಸರ್ಕಾರ ವಿಶ್ವದ 3ನೇ ಅತ್ಯಂತ ವಿಶ್ವಾಸಾರ್ಹ ಸರ್ಕಾರ

    ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಇಡೀ ವಿಶ್ವದಲ್ಲೇ ಅತ್ಯಂತ ವಿಶ್ವಾಸಾರ್ಹ ಸರ್ಕಾರಗಳಲ್ಲೊಂದು ಎಂದು ಆರ್ಗನೈಸೇಷನ್ ಫಾರ್ ಎಕಾನಾಮಿಕ್ ಕೊ-ಆಪರೇಷನ್ ಅಂಡ್ ಡೆವಲಪ್‍ಮೆಂಟ್(ಓಇಸಿಡಿ) ನಡೆಸಿರುವ ಸಮೀಕ್ಷೆ ತಿಳಿಸಿದೆ.

    ಸಮೀಕ್ಷೆಯ ಪ್ರಕಾರ ಮೋದಿ ಸರ್ಕಾರ ಇಡೀ ವಿಶ್ವದಲ್ಲಿ ಮೂರನೇ ಅತ್ಯಂತ ವಿಶ್ವಾಸಾರ್ಹ ಸರ್ಕಾರ ಎನಿಸಿಕೊಂಡಿದೆ. ಭಾರತದ ಮುಕ್ಕಾಲು ಭಾಗದಷ್ಟು ಜನ ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆಂದು ವಲ್ರ್ಡ್ ಎಕನಾಮಿಕ್ ಫೋರಂ ಈ ವರದಿಯ ಬಗ್ಗೆ ಪ್ರಸ್ತಾಪಿಸುತ್ತಾ ತಿಳಿಸಿದೆ.

    ಭಾರತದ ಇತ್ತೀಚಿನ ಭ್ರಷ್ಟಾಚಾರ ವಿರೋಧಿ ಹಾಗೂ ತೆರಿಗೆ ಸುಧಾರಣೆ ಕ್ರಮಗಳು ಸರ್ಕಾರದ ಮೇಲೆ ಜನರಿಗಿರುವ ವಿಶ್ವಾಸವನ್ನು ವಿವರಿಸಲು ಸಹಾಯವಾಗಬಹುದು ಎಂದು ವಲ್ರ್ಡ್ ಎಕನಾಮಿಕ್ ಫೋರಂ ಹೇಳಿದೆ. ಸುಮಾರು 74% ಭಾರತೀಯರು ಮೋದಿ ಸರ್ಕಾರದ ಮೇಲೆ ವಿಶ್ವಾಸ ಹೊಂದಿದ್ದಾರೆ ಎಂದು ವರದಿ ಹೇಳಿದೆ.

    ಈ ಹೊಸ ಸಮೀಕ್ಷೆಯ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಟ್ವೀಟ್ ಮಾಡಿದ್ದು, ಕಳೆದ ಕೆಲವು ವರ್ಷಗಳಲ್ಲಿ ಪ್ರಜೆಗಳು ಸರ್ಕಾರ ಹಾಗೂ ರಾಜಕಾರಣಿಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದರು. ನರೇಂದ್ರ ಮೋದಿ ಅವರ ನಾಯಕತ್ವ ಹಾಗೂ ಯೋಜನೆಗಳು ಆ ನಂಬಿಕೆಯನ್ನು ವಾಪಸ್ ತಂದಿದೆ. ಪ್ರತಿಯೊಬ್ಬ ಭಾರತೀಯರು ಪ್ರಧಾನಿಯ ನಾಯಕತ್ವದಲ್ಲಿ ಹೊಸ ಭಾರತವನ್ನು ಕಾಣುತ್ತಿದ್ದಾರೆ ಎಂದು ಹೇಳಿದ್ದಾರೆ.

    ಈ ಸಮೀಕ್ಷೆಯ ಪ್ರಕಾರ ಸ್ವಿಜಲ್ರ್ಯಾಂಡ್ ಜಗತ್ತಿನ ಅತ್ಯಂತ ವಿಶ್ವಾಸಾರ್ಹ ಸರ್ಕಾರಗಳಲ್ಲಿ ಮೊದಲನೇ ಸ್ಥಾನದಲ್ಲಿದೆ. ಇಂಡೋನೇಷ್ಯಾ ಎರಡನೇ ಸ್ಥಾನದಲ್ಲಿದ್ದು, ಭಾರತ ಮೂರನೇ ಸ್ಥಾನದಲ್ಲಿದೆ. ದೇಶದ ಆರ್ಥಿಕ ಸ್ಥಿತಿ, ರಾಜಕೀಯ ದಂಗೆ ಹಾಗೂ ಪ್ರಮುಖ ಭ್ರಷ್ಟಾಚಾರ ಪ್ರಕರಣಗಳು ಜನ ಸರ್ಕಾರದ ಮೇಲೆ ನಂಬಿಕೆ ಇಡಲು ಕಾರಣವಾಗೋ ಅಂಶಗಳಾಗಿವೆ.

    ಇನ್ನು ಸರ್ಕಾರದ ಮೇಲೆ ಅತ್ಯಂತ ಕಡಿಮೆ ನಂಬಿಕೆ ಪಡೆದಿರುವ ರಾಷ್ಟ್ರಗಳೆಂದರೆ ಚಿಲಿ, ಫಿನ್‍ಲ್ಯಾಂಡ್, ಗ್ರೀಸ್ ಹಾಗೂ ಸ್ಲೊವೇನಿಯಾ.

  • ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ

    ಮೋದಿ ಸರ್ಕಾರ ಬಂದ್ಮೇಲೆ ಪಾಕಿಸ್ತಾನದಲ್ಲಿ 4 ಬಾರಿ ಮನೆ ಬದಲಿಸಿದ್ದಾನೆ ದಾವೂದ್: ಸಹೋದರನೇ ಬಾಯ್ಬಿಟ್ಟ ಸತ್ಯ

    ಮುಂಬೈ: 1993ರ ಮುಂಬೈ ಸರಣಿ ಸ್ಫೋಟದ ಆರೋಪಿಯಾದ ಭೂಗತ ದೊರೆ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲೇ ಇದ್ದಾನೆ ಎಂದು ಸಹೋದರ ಇಕ್ಬಾಲ್ ಕಸ್ಕರ್ ಬಾಯ್ಬಿಟ್ಟಿದ್ದಾನೆ.

    ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿ 8 ದಿನಗಳ ಪೊಲೀಸ್ ವಶದಲ್ಲಿರೋ ಕಸ್ಕರ್, ವಿಚಾರಣೆ ವೇಳೆ ಹಲವಾರು ಸಂಗತಿಗಳನ್ನ ಬಹಿರಂಗಪಡಿಸಿದ್ದಾನೆ. ಡಿ ಕಂಪೆನಿ ಮುಖ್ಯಸ್ಥನಾದ ದಾವೂದ್ ಪಶ್ಚಿಮ ಮತ್ತು ಪೂರ್ವ ಆಫ್ರಿಕಾ ರಾಷ್ಟ್ರಗಳಲ್ಲಿ ಹೂಡಿಕೆ ಮಾಡಿದ್ದಾನೆಂದು ತಿಳಿಸಿದ್ದಾನೆ. ಅಲ್ಲದೆ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದಾವೂದ್ ಪಾಕಿಸ್ತಾನದಲ್ಲಿ 4 ಬಾರಿ ತನ್ನ ವಿಳಾಸವನ್ನ ಬದಲಾಯಿಸಿದ್ದಾನೆ ಎಂದು ಕಸ್ಕರ್ ಹೇಳಿದ್ದಾನೆ.

    ಜೊತೆಗೆ ಪಾಕಿಸ್ತಾನದಲ್ಲಿ ದಾವೂದ್‍ನ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ದಾವೂದ್ ತನ್ನ ಕುಟುಂಬ ಸದಸ್ಯರೊಂದಿಗೆ ಫೋನ್‍ನಲ್ಲಿ ಮಾತನಾಡುವುದಿಲ್ಲ. ಆತನಿಗೆ ಲ್ಯಾಟಿನ್ ಅಮೆರಿಕದ ಡ್ರಗ್ಸ್ ದೊರೆಗಳೊಂದಿಗೆ ಸಂಪರ್ಕವಿದೆ ಎಂದು ಹೇಳಿದ್ದಾನೆ.

    ದಾವೂದ್ ನೇರವಾಗಿ ಅಥವಾ ಪರೋಕ್ಷವಾಗಿ ಸುಲಿಗೆ ದಂಧೆಯಲ್ಲಿ ಭಾಗಿಯಾಗಿದ್ದಾನಾ? ಆತನನ್ನು ಈ ಪ್ರಕರಣದಲ್ಲಿ ಆರೋಪಿಯನ್ನಾಗಿಸಬಹುದಾ ಎಂಬ ನಿಟ್ಟಿನಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಈ ವೇಳೆ ಕಸ್ಕರ್ ಈ ಎಲ್ಲಾ ವಿಚಾರವನ್ನ ಬಹಿರಂಗಪಡಿಸಿದ್ದಾನೆ.

    ಸೋಮವಾರದಂದು ಮುಂಬೈನ ಮನೆಯಿಂದ ಇಕ್ಬಾಲ್ ಕಸ್ಕರ್‍ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಭಾರೀ ಭದ್ರತೆಯೊಂದಿಗೆ ನಡೆದ ಈ ಕಾರ್ಯಾಚರಣೆಯಲ್ಲಿ ಹಲವಾರು ಪೊಲೀಸ್ ಸಂಸ್ಥೆಗಳು ಭಾಗಿಯಾಗಿದ್ದವು. 2003ರಲ್ಲಿ ಯುನೈಟೆಡ್ ಅರಬ್ ಎಮಿರೈಟ್ಸ್ ನಿಂದ ಗಡಿಪಾರಾದ ಇಕ್ಬಾಲ್ ನಗರದಲ್ಲಿ ತನ್ನ ಸಹೋದರನ ರಿಯಲ್ ಎಸ್ಟೇಟ್ ಉದ್ಯಮವನ್ನ ನೋಡಿಕೊಳ್ಳುತ್ತಿದ್ದಾನೆ ಎಂದು ಹೇಳಲಾಗಿದೆ ಅಂತ ಪೊಲೀಸರು ಹೇಳಿದ್ದಾರೆ.

    ಸರಣಿ ಸ್ಫೋಟಗಳ ನಂತರ ಪಾಕಿಸ್ತಾನಕ್ಕೆ ಪರಾರಿಯಾಗಿರುವ ದಾವೂದ್ ಕರಾಚಿಯಲ್ಲಿ ಬಂಗ್ಲೋ ನಂ. 13, ಬ್ಲಾಕ್ 4 ಕ್ಲಿಫ್ಟನ್- ಈ ವಿಳಾದಲ್ಲಿ ನೆಲೆಸಿದ್ದಾನೆ ಎಂದು ನಂಬಲಾಗಿದೆ. 1986ರಲ್ಲಿ ಭಾರತದಿಂದ ಪರಾರಿಯಾದ ದಾವೂದ್‍ನನ್ನು ಸೆರೆಹಿಡಿಯಲು ಭಾರತ ತನ್ನ ಪ್ರಯತ್ನವನ್ನ ಮತ್ತಷ್ಟು ತೀವ್ರಗೊಳಿಸಿದೆ. ದಾವೂದ್ ಪಾಕಿಸ್ತಾನದಲ್ಲೇ ಇದ್ದು, ಆತನನ್ನು ಭಾರತಕ್ಕೆ ವಾಪಸ್ ಕರೆತರಲು ಭಾರತ ನಿಶ್ಚಯಿಸಿದೆ ಎಂದು ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ ಹೇಳುತ್ತಾ ಬಂದಿದೆ. ಆದ್ರೆ ದಾವೂದ್ ಪಾಕಿಸ್ತಾನಲ್ಲಿ ಇದ್ದಾನೆ ಎಂಬುದನ್ನ ಪಾಕಿಸ್ತಾನ ನಿರಾಕರಿಸುತ್ತಲೇ ಬಂದಿದೆ.

    ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಕರ್, ಹತ್ತಿರದ ಸಂಬಂಧಿ ಮುಮ್ತಾಜ್ ಈಜಾಝ್ ಶೇಕ್ ಹಾಗೂ ಮತ್ತೊಬ್ಬ ಸಹಚರ ಇಸ್ರಾರ್ ಜಮೀಲ್ ಸಯ್ಯದ್‍ನನ್ನು ಥಾಣೆ ಪೊಲೀಸ್‍ನ ಆ್ಯಂಟಿ ಎಕ್ಟಾರ್ಷನ್ ಸೆಲ್ ಬಂಧಿಸಿದೆ. 2013ರಿಂದ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಈ ಮೂವರನ್ನೂ ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿ ಮತ್ತಷ್ಟು  ವಿಚಾರಣೆ ನಡೆಯುತ್ತಿದೆ.

    ಕಸ್ಕರ್ ಹಾಗೂ ಆತನ ಸಹಚರರು 2013ರಿಂದಲೂ ದಾವೂದ್ ಹೆಸರಿನಲ್ಲಿ ಥಾಣೆಯ ಪ್ರಮುಖ ಬಿಲ್ಡರ್‍ವೊಬ್ಬರನ್ನ ಬೆದರಿಸಿ 30 ಲಕ್ಷ ರೂ. ಹಾಗೂ ನಾಲ್ಕು ಫ್ಲಾಟ್‍ಗಳನ್ನ ಸುಲಿಗೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಮಂಗಳವಾರದಂದು ದಾವೂದ್ ಸಹೋದರ ಇಕ್ಬಾಲ್‍ನನ್ನು 8 ದಿನಗಳ ಕಾಲ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

  • ಮೋದಿ ಸರ್ಕಾರಕ್ಕೆ ಮೂರರ ಸಂಭ್ರಮ – ಈಶಾನ್ಯ ರಾಜ್ಯಗಳಿಗೆ `ಧೋಲಾ-ಸದಿಯಾ’ ಸೇತುವೆ ಗಿಫ್ಟ್

    ಮೋದಿ ಸರ್ಕಾರಕ್ಕೆ ಮೂರರ ಸಂಭ್ರಮ – ಈಶಾನ್ಯ ರಾಜ್ಯಗಳಿಗೆ `ಧೋಲಾ-ಸದಿಯಾ’ ಸೇತುವೆ ಗಿಫ್ಟ್

    ನವದೆಹಲಿ: ನವಭಾರತ ನಿರ್ಮಾಣದ ಅದಮ್ಯ ಚೈತನ್ಯದೊಂದಿಗೆ ಹೊಸಮಿಂಚಿನಂತೆ ಸಂಚಲನ ಸೃಷ್ಟಿಸಿರೋ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಇಂದಿಗೆ ಮೂರು ವರ್ಷ. ಕನಿಷ್ಠ ಸರ್ಕಾರ – ಗರಿಷ್ಠ ಆಡಳಿತ ಅಂತ ಮುಂದಿನ ಬಾರಿಯೂ ಅಧಿಕಾರ ಉಳಿಸಿಕೊಳ್ಳುವ ಉಮೇದು ಮೋದಿ ಅವ್ರದ್ದು.

    ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಮೋದಿ ಅಸ್ಸಾಂ ಪ್ರವಾಸದಲ್ಲಿದ್ದಾರೆ. ಬ್ರಹ್ಮಪುತ್ರ ನದಿಯ ಉಪನದಿಗೆ ಅಡ್ಡಲಾಗಿ 950 ಕೋಟಿ ರೂ. ವೆಚ್ಚದಲ್ಲಿ ಕಟ್ಟಿರೋ ದೇಶದ ಅತೀ ದೊಡ್ಡ `ಧೋಲಾ-ಸದಿಯಾ’ ಸೇತುವೆಯನ್ನ ಉದ್ಘಾಟಿಸಲಿದ್ದಾರೆ. ಈ ಮೂಲಕ ಈಶಾನ್ಯ ಭಾರತೀಯರು ಭಾರತದ ಒಂದು ಬಹುಮುಖ್ಯ ಅಂಗ. ಅವರನ್ನ ನಾವೂ ಎಂದಿಗೂ ಕಡೆಗಣಿಸಲ್ಲ ಅನ್ನೋ ಸಂದೇಶ ಸಾರಲಿದ್ದಾರೆ. ಸಿಎಂ ತರುಣ್ ಗೊಯೋಯ್ ಸಾಥ್ ನೀಡಲಿದ್ದಾರೆ.

    ರಾಜ್ಯಗಳ ರಾಜಧಾನಿ ಸೇರಿದಂತೆ ಪ್ರಮುಖ 300 ನಗರಗಳಲ್ಲಿ ಇಂದಿನಿಂದ ಮೂರು ದಿನ `ಮೋದಿ ಫೆಸ್ಟ್’ ನಡೆಯಲಿದೆ. ಮೋದಿ ಹಬ್ಬದಲ್ಲಿ ಯುವಜನತೆಯನ್ನು ಆಕರ್ಷಿಸಲು ಕ್ವಿಜ್, ಡಿಬೇಟ್, ಚರ್ಚಾಕೂಟ ಏರ್ಪಡಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಎಷ್ಟು ಗ್ರಾಮಗಳು ವಿದ್ಯುದ್ದೀಕರಣವಾಗಿವೆ? 2014ರ ನಂತರ ಎಷ್ಟು ಶೌಚಾಲಯಗಳ ನಿರ್ಮಾಣವಾಗಿದೆ? ಹೀಗೆ ಸಾಕಷ್ಟು ಪ್ರಶ್ನೆ ಕೇಳಲಾಗ್ತಿದೆ.

    ಇವತ್ತಿನ ತಮ್ಮ ಭಾಷಣದಲ್ಲಿ ಪ್ರಧಾನಿ ಏನೆಲ್ಲಾ ಹೇಳ್ತಾರೆ ಅನ್ನೋದು ಜನಸಾಮಾನ್ಯರ ಕುತೂಹಲವಾಗಿದೆ.