Tag: mohammad paigambar

  • ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು

    ಪ್ರವಾದಿ ವಿರುದ್ಧ ಅವಹೇಳನ – ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಮುಸ್ಲಿಮರ ಪ್ರತಿಭಟನೆ, ಬುರ್ಕಾ ಧರಿಸಿ ಬೀದಿಗಿಳಿದ ಮಹಿಳೆಯರು

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ, ನವೀನ್ ಜಿಂದಾಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಇಂದು ಬೃಹತ್‌ ಪ್ರತಿಭಟನೆ ನಡೆಯಿತು.

    ಶುಕ್ರವಾರದ ಪ್ರಾರ್ಥನೆಯ ನಂತರ ದೆಹಲಿಯ ಜಾಮಾ ಮಸೀದಿ ಹೊರಗೆ ಪ್ರತಿಭಟನೆ ನಡೆದಿದೆ. ಅದರ ಬೆನ್ನಲ್ಲೇ ಕಾಶ್ಮೀರ, ಉತ್ತರ ಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಉತ್ತಾರಖಂಡ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಮೂಹಿಕ ಪ್ರತಿಭಟನೆಗಳು ನಡೆದವು. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR

    ನವಿ ಮುಂಬೈನಲ್ಲಿ ಬುರ್ಕಾ ಧರಿಸಿ ಬೀದಿಗಿಳಿದು ಮಹಿಳೆಯರ ಪ್ರತಿಭಟನೆ ನಡೆಸಿದರು. ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಂಐಎಂ ಕಾರ್ಯಕರ್ತರು ನಮಾಜ್ ಮಾಡಿ ವಿಶೇಷ ರೀತಿಯಲ್ಲಿ ಪ್ರತಿಭಟಿಸಿದರು.

    ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು. ಈ ವೇಳೆ ಪೊಲೀಸರು ಲಾಠಿಚಾರ್ಜ್‌ ಮತ್ತು ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಪ್ರವಾದಿಗೆ ಅವಹೇಳನ – ಭಾರತದ ನಿಲುವಿನ ಬಗ್ಗೆ ತೃಪ್ತಿಯಿದೆ ಎಂದ ಇರಾನ್

    ಜಮ್ಮು-ಕಾಶ್ಮೀರದಲ್ಲಿ ಹಲವೆಡೆ ಭಾರಿ ಪ್ರತಿಭಟನೆ ನಡೆಯಿತು. ಇದರಿಂದ ಜಮ್ಮುವಿನ ಭದರ್ವಾ ಹಾಗೂ ಕಿಶ್ತ್‌ವಾರ್‌ ಕೆಲವು ಭಾಗಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಲಾಗಿದೆ.

    30 ಮಂದಿ ಅರೆಸ್ಟ್‌
    ಸಾರ್ವಜನಿಕ ಸ್ಥಳಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಬಂಧನ ಖಂಡಿಸಿ ಪಕ್ಷದ ಕಾರ್ಯಕರ್ತರು ಪಾರ್ಲಿಮೆಂಟ್‌ ಸ್ಟ್ರೀಟ್‌ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ಆದೇಶ ಧಿಕ್ಕರಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ 33 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    ನೂಪುರ್ ಶರ್ಮಾ ಪ್ರತಿಕೃತಿ ಮಾಡಿ ನೇಣು ಹಾಕಿದ ಕಿಡಿಗೇಡಿಗಳು

    ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಪ್ರತಿಕೃತಿಯನ್ನು ಮಾಡಿ ಕಿಡಿಗೇಡಿಗಳು ಅದನ್ನು ನೇಣು ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ನಗರದ ಫೋರ್ಟ್ ರಸ್ತೆಯ ಮಸೀದಿಯ ಬಳಿಯ ನಡುರಸ್ತೆಯಲ್ಲೇ ಎರಡು ಬದಿಯ ಕಟ್ಟಡಗಳಿಗೆ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇಣು ಹಾಕಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ನಡು ರಸ್ತೆಯಲ್ಲೇ ಪ್ರತಿಕೃತಿಗೆ ನೇಣು ಹಾಕಿದ ಫೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ನಿನ್ನೆ ತಡರಾತ್ರಿ ಅಪರಿಚಿತ ಕಿಡಿಗೇಡಿಗಳು ಈ ಕೃತ್ಯವನ್ನ ಎಸಗಿದ್ದಾರೆ. ಇದನ್ನೂ ಓದಿ: ಬೇರೆಯವರು ತಾಳಿಕಟ್ಟಿದವರ ಬಳಿ ಹೋಗಿ ಲವ್ ಲೆಟರ್ ಬರೆದರೆ ಆಗುತ್ತಾ : ಸಿಎಂ ಇಬ್ರಾಹಿಂ

    ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಮಾರ್ಕೇಟ್ ಠಾಣೆ ಪೊಲಿಸರು ಭೇಟಿ ನೀಡಿ ಹಗ್ಗ ಕಟ್ಟಿ ನೇತು ಹಾಕಿದ್ದ ಪ್ರತಿಕೃತಿ ತೆರವುಗೊಳಿಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಮಾರ್ಕೆಟ್ ಪೊಲೀಸರು ಸುತ್ತಲಿನ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್

    ಬೆಳಗಾವಿಯ ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಮುಂಬೈ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ.

    ನೂಪುರ್ ಶರ್ಮಾ ಜ್ಞಾನವಾಪಿ ಮಸೀದಿ ಕುರಿತ ಚರ್ಚೆಯ ವೇಳೆ ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಗದ್ದಲ ಎಬ್ಬಿದ್ದಾರೆ. ಈ ಸಂಬಂಧ ಇದೇ ಜೂನ್ 22ರಂದು ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ನೂಪುರ್ ಶರ್ಮಾಗೆ ಇ-ಮೇಲ್ ಮತ್ತು ಸ್ಪೀಡ್ ಪೋಸ್ಟ್ ಮೂಲಕ ಸಮನ್ಸ್ ಕಳುಹಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ, ಕೊಲೆ ಬೆದರಿಕೆ – ವಿವಾದಿತ ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ದೆಹಲಿ ಪೊಲೀಸರಿಂದ ಭದ್ರತೆ 

    ಈಗಾಗಲೇ ಅವಹೇಳನಕಾರಿ ಹೇಳಿಕೆ ಕುರಿತಂತೆ ನೂಪುರ್ ವಿರುದ್ಧ ಥಾಣೆ ಜಿಲ್ಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಂಬರ್‌ನಾಥ್ ಪೋಲೀಸರೂ ಸಹ ದೂರನ್ನು ಸ್ವೀಕರಿಸಿದ್ದಾರೆ. ಇದೂ ಸಹ ಎಫ್‌ಐಆರ್ ಆದರೆ ಥಾಣೆ ಜಿಲ್ಲೆಯಲ್ಲೇ ಮೂರು ಪ್ರಕರಣ ದಾಖಲಾಗಲಿದೆ. ಈ ಹಿನ್ನೆಲೆಯಲ್ಲಿ ಜೂನ್ 22ರಂದು ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸಮನ್ಸ್ ಜಾರಿ ಮಾಡಲಾಗಿದೆ ಎಂದು ಥಾಣೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‍ ಕುರಿತು ಆಕ್ಷೇಪಾರ್ಹ ಹೇಳಿಕೆ – ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅಮಾನತು

    ಭಾರತದ ರಾಯಭಾರಿಗೂ ಸಮನ್ಸ್: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಜಕಾರ್ತದಲ್ಲಿರುವ ಭಾರತದ ರಾಯಭಾರಿಗೆ ಇಂಡೋನೇಷ್ಯಾ ಸರ್ಕಾರ ಸಮನ್ಸ್ ನೀಡಿದೆ. ಸಮನ್ಸ್ ನೀಡಿರುವ ವಿಚಾರವನ್ನು ಇಂಡೋನೇಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರ ತೆವುಕು ಫಜಾಸ್ಯಾಹ್ ಖಚಿತಪಡಿಸಿದ್ದಾರೆ. ಜಕಾರ್ತದಲ್ಲಿರುವ ಭಾರತದ ರಾಯಭಾರಿ ಮನೋಜ್ ಕುಮಾರ್ ಭಾರ್ತಿ ಅವರನ್ನು ನಿನ್ನೆ ಕರೆದು ಪ್ರತಿಭಟನೆ ದಾಖಲಿಸಿದ್ದು, ಸಮನ್ಸ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಬ್ ರಾಷ್ಟ್ರಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಲವು ಮಧ್ಯಪ್ರಾಚ್ಯ ರಾಷ್ಟ್ರಗಳು ಭಾರತದ ರಾಯಭಾರಿಗಳಿಗೆ ಸಮನ್ಸ್ ನೀಡಿದ್ದವು. ಕುವೈತ್ ಸೂಪರ್ ಮಾರ್ಕೆಟ್‌ನಿಂದ ಭಾರತದ ಉತ್ಪನ್ನಗಳನ್ನು ತೆಗೆದುಹಾಕಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಇಂಡೋನೇಷ್ಯಾ ಕೂಡ ಕ್ರಮ ಕೈಗೊಂಡಿದೆ.

    ಈ ಸಂಬಂಧ ಟ್ವೀಟ್ ಮಾಡಿರುವ ಇಂಡೋನೇಷ್ಯಾ ವಿದೇಶಾಂಗ ಸಚಿವಾಲಯವು, ಪ್ರವಾದಿ ಮೊಹಮ್ಮದ್ ಅವರ ವಿರುದ್ಧ ಭಾರತದ ಇಬ್ಬರು ರಾಜಕಾರಣಿಗಳು ನೀಡಿರುವ ಆಕ್ಷೇಪಾರ್ಹ, ಅವಹೇಳನಕಾರಿ ಹೇಳಿಕೆಗಳನ್ನು ಬಲವಾಗಿ ಖಂಡಿಸಿದ್ದೇವೆ ಎಂದು ಹೇಳಿದೆ.

  • ಪೈಗಂಬರ್‌ರ ವಿರುದ್ಧ ವಿವಾದಾತ್ಮಕ ಹೇಳಿಕೆ – ಯಾರು ಈ ನೂಪುರ್ ಶರ್ಮಾ?

    ಪೈಗಂಬರ್‌ರ ವಿರುದ್ಧ ವಿವಾದಾತ್ಮಕ ಹೇಳಿಕೆ – ಯಾರು ಈ ನೂಪುರ್ ಶರ್ಮಾ?

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್‌ರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಒಳಗಾಗಿರುವ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತು ಮಾಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬಳಿಕ ದೆಹಲಿಯ ಅಧ್ಯಕ್ಷ ಆದೇಶ ಗುಪ್ತಾ ಅವರನ್ನು ಪಕ್ಷದಿಂದ ಹೊರ ಹಾಕಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

    ನೂಪುರ್ ಶರ್ಮಾ ಹೇಳಿಕೆ ವೈರಲ್ ಆಗುತ್ತಿದ್ದಂತೆ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ನಡೆದವು, ಬಳಿಕ ಇದು ಅಂತಾರಾಷ್ಟ್ರೀಯ ಸುದ್ದಿಯಾಗಿ ಹೊರಹೊಮ್ಮಿತು. ಈ ಹೇಳಿಕೆ ಗಮನಿಸಿದ ಕತಾರ್, ಸೌದಿ, ಪಾಕಿಸ್ತಾನದಂತಹ ಇಸ್ಲಾಮಿಕ್ ದೇಶಗಳು ವ್ಯಾಪಕವಾದ ವಿರೋಧ ವ್ಯಕ್ತಪಡಿಸಿದವು. ಕತಾರ್ ಭಾರತದ ರಾಯಭಾರಿ ಅಧಿಕಾರಿಯನ್ನು ಕರೆಸಿ ವಿರೋಧವನ್ನು ದಾಖಲು ಮಾಡಿತ್ತು. ಅಂತರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಸೃಷ್ಟಿಯಾದ ಬೆನ್ನಲೆ ಬಿಜೆಪಿ ಶಿಸ್ತು ಪಾಲನ ಸಮಿತಿ ನುಪುರ್ ಶರ್ಮಾ ವಿರುದ್ಧ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ರಸ್ತೆ ಬದಿಗೆ ಉರುಳಿ ಬಿದ್ದ ಕೆಎಸ್‌ಆರ್‌ಟಿಸಿ ಬಸ್ – ಐವರಿಗೆ ಗಾಯ

    ದೆಹಲಿಯಲ್ಲಿ ಸಾಮಾನ್ಯ ಬಿಜೆಪಿ ನಾಯಕಿಯಾಗಿ ಕೆಲಸ ಮಾಡುತ್ತಿದ್ದ ನೂಪುರ್ ಶರ್ಮಾ ತಮ್ಮ ಒಂದು ಹೇಳಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯ ವಿಷಯ ವಸ್ತುವಾಗಿದ್ದಾರೆ. ಬಹಳಷ್ಟು ಜನರು ನೂಪುರ್ ಶರ್ಮಾ ಯಾರು? ಅವರ ರಾಜಕೀಯ ಹಿನ್ನಲೆ ಏನು ಎಂದು ಹುಡುಕಾಡುತ್ತಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

    37 ವಯಸ್ಸಿನ ನೂಪುರ್ ಶರ್ಮಾ, ದೆಹಲಿ ವಿಶ್ವವಿದ್ಯಾನಿಲಯದ ಹಿಂದೂ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಪದವೀಧರರಾಗಿದ್ದಾರೆ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ಕಾನೂನು ವಿಭಾಗದಿಂದ ಎಲ್‍ಎಲ್‍ಬಿ ಪದವಿ ಪಡೆದಿದ್ದಾರೆ. ಅಲ್ಲದೇ ಲಂಡನ್‍ನ ಸ್ಕೂಲ್ ಆಫ್ ಎಕನಾಮಿಕ್ಸ್‌ನಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಸಹ ಪಡೆದಿದ್ದಾರೆ.

    ವಿದ್ಯಾರ್ಥಿ ನಾಯಕಿಯಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಕಾಂಗ್ರೆಸ್‍ನ ವಿದ್ಯಾರ್ಥಿ ವಿಭಾಗವಾದ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್‍ಎಸ್‍ಯೂಐ) ಕ್ಯಾಂಪಸ್‍ಗಳಲ್ಲಿ ಪ್ರಬಲ ಅಸ್ತಿತ್ವವನ್ನು ಹೊಂದಿದ್ದ ಸಮಯದಲ್ಲಿ ನೂಪುರ್ ಶರ್ಮಾ 2008 ರಲ್ಲಿ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

    2015ರಲ್ಲಿ ನವದೆಹಲಿ ಕ್ಷೇತ್ರದಲ್ಲಿ ಆಮ್ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಫರ್ಧಿಸಿದ್ದ ನೂಪುರ್ ಶರ್ಮಾ 31,583 ಮತಗಳ ಅಂತರದಿಂದ ಸೋಲನ್ನಪ್ಪಿದ್ದರು. ಭಾರತೀಯ ಜನತಾ ಯುವ ಮೋರ್ಚಾದ ಪ್ರಮುಖ ಮುಖವಾಗಿರುವ ಶರ್ಮಾ ಅವರು ಯುವ ಘಟಕದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ, ಹಾಗೂ ದೆಹಲಿ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹಲವಾರು ಸ್ಥಾನಗಳನ್ನು ಅಲಂಕರಿಸಿದ್ದಾರೆ.

    2017 ರಲ್ಲಿ, ಆಗಿನ ರಾಜ್ಯ ಘಟಕದ ಮುಖ್ಯಸ್ಥ ಮನೋಜ್ ತಿವಾರಿ ಅವರ ತಂಡವನ್ನು ರಚಿಸಿದಾಗ ನೂಪುರ್ ಶರ್ಮಾರನ್ನ ದೆಹಲಿ ಬಿಜೆಪಿಯ ವಕ್ತಾರರನ್ನಾಗಿ ನೇಮಿಸಲಾಯಿತು. ಸೆಪ್ಟೆಂಬರ್ 2020 ರಲ್ಲಿ, ಜೆಪಿ ನಡ್ಡಾ ಅವರ ತಂಡವನ್ನು ಸ್ಥಾಪಿಸಿದಾಗ, ಶರ್ಮಾ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿತ್ತು.

  • ಮಠದಲ್ಲಿ ರಂಜಾನ್‌, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ

    ಮಠದಲ್ಲಿ ರಂಜಾನ್‌, ಬಸವ ಜಯಂತಿ ಆಚರಣೆ – ಬಸವಣ್ಣ, ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ

    ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣ ಹಾಗೂ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ವಿಭಿನ್ನವಾಗಿ ರಂಜಾನ್ ಹಾಗೂ 889ನೇ ಬಸವ ಜಯಂತಿ ಆಚರಿಸಲಾಯಿತು.

    ಗಜೇಂದ್ರಗಡ, ಸೂಡಿಯ ಮೈಸೂರು ಮಠದ ಶ್ರೀ ವಿಜಯ ಮಹಾಂತೇಶ್ವರ ಸ್ವಾಮೀಜಿ ಹಾಗೂ ಮೌಲ್ವಿ ನೇತೃತ್ವದಲ್ಲಿ ʻಭಾವೈಕ್ಯತೆ ನಡಿಗೆ ಸಾಮರಸ್ಯದ ಕಡೆಗೆʼ ಎಂಬ ವಿಭಿನ್ನ ಹಾಗೂ ವಿಶೇಷವಾದ ಪಾದಯಾತ್ರೆ ಮಾಡಲಾಯಿತು. ಈ ವೇಳೆ ಬಸವಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ಮಾಡಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಮರಸ್ಯ ಬಿಂಬಿಸುವ ಪಾದಯಾತ್ರೆ ನಡೆಯಿತು. ಈ ಮೆರವಣಿಗೆಯಲ್ಲಿ ವಿಶ್ವ ಗುರು ಬಸವಣ್ಣ, ಪ್ರವಾದಿ ಮಹಮ್ಮದ್‌ ಪೈಗಂಬರ್‌ಗೆ ಜಯಘೋಷ ಕೂಗಿದರು. ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ

    ಧರ್ಮ ದೊಡ್ಡದಲ್ಲ ದಯೆ ದೊಡ್ಡದು, ಜಾತಿಗಿಂತ ನೀತಿ ಮೇಲು, ಮಾನವ ಜನ್ಮಕ್ಕೆ ಜಯವಾಗಲಿ, ದೇವನೊಬ್ಬ ನಾಮ ಹಲವು ಎಂಬ ಘೋಷವಾಕ್ಯದೊಂದಿಗೆ ಹಿಂದೂ-ಮುಸ್ಲಿಂ ನಾವೆಲ್ಲಾ ಒಂದು ಎಂಬ ಸಂದೇಶ ಸಾರಿದರು. ನಂತರ ಸಾಮೂಹಿಕವಾಗಿ ಪ್ರಾರ್ಥನೆ ಮಾಡಿದರು. ಈ ವೇಳೆ ವಿಜಯ ಮಹಾಂತೇಶ್ವರ ಶ್ರೀಗಳು, ಜಗತ್ತಿನಲ್ಲಿ ಶಾಂತಿ ಸಿಗಬೇಕು ಅಂದರೆ ಎಲ್ಲರೂ ಭಾವೈಕ್ಯತೆಯಿಂದ ನಡೆದುಕೊಳ್ಳಬೇಕು. ಇಂತಹ ಭಾವೈಕ್ಯ ಕಾರ್ಯಗಳಲ್ಲಿ ರಾಜಕೀಯ ವ್ಯಕ್ತಿಗಳು ಬೆರೆಯಬೇಕು. ಈಗ ರಾಜಕೀಯ ವ್ಯಕ್ತಿಗಳಲ್ಲಿ ಸಮಾಧಾನ ಶಾಂತಿ ಇಲ್ಲ. ಬರೀ ಪಾರ್ಟಿ, ಪಕ್ಷ ನೋಡ್ತಾರೆ. ಸಮಾಜ, ನಾಡಿನ ಜನತೆಯನ್ನು ನೋಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ದೇವರಿಗೆ ಜಾತಿಯ ಮಿತಿ ಇಲ್ಲ. ಜಾತಿ ಅಂದರೆ ವಿಷ. ಧರ್ಮ ಅಂದರೆ ಅಮೃತ. ಜಾತಿ ಧರ್ಮಗಳ ನಡುವೆ ವಿಷ ಬೀಜ ಬಿತ್ತುವುದನ್ನು ಎಲ್ಲರೂ ಬಿಡಬೇಕು ಎಂದು ಶ್ರೀಗಳು ಮನವಿ ಮಾಡಿದರು. ಇದನ್ನೂ ಓದಿ: ರಾಯಚೂರಿನಲ್ಲಿ ರಂಜಾನ್ ಸಂಭ್ರಮ ಜೋರು: ಸಾವಿರಾರು ಜನರಿಂದ ಸಾಮೂಹಿಕ ಪ್ರಾರ್ಥನೆ

    ಮುಂಡರಗಿ ಪಟ್ಟಣದ ಶ್ರೀ ಅನ್ನದಾನೀಶ್ವರ ಮಠದಲ್ಲೂ ಪವಿತ್ರ ರಂಜಾನ್ ಹಬ್ಬ ಹಾಗೂ ವಿಶ್ವಗುರು ಬಸವಣ್ಣನವರ 889ನೇ ಜಯಂತಿಯನ್ನು ಒಟ್ಟಾಗಿ ಭಾವೈಕ್ಯತೆಯಿಂದ ಆಚರಿಸಲಾಯಿತು. ಎಲ್ಲೆಡೆ ಧರ್ಮ ಧಂಗಲ್ ನಡೆಯುವ ಸಂದರ್ಭದಲ್ಲಿ ಮುಂಡರಗಿ ಶ್ರೀ ಅನ್ನದಾನೀಶ್ವರ ಮಠದಲ್ಲಿ ಹಿಂದೂ-ಮುಸ್ಲಿಮರು ಒಟ್ಟಾಗಿ ಬಸವ ಜಯಂತಿ ಹಾಗೂ ರಂಜಾನ್ ಆಚರಿಸಿದರು. ನಾಡೋಜ ಶ್ರೀ ಅಭಿನವ ಅನ್ನದಾನೀಶ್ವರ ಮಹಾಸ್ವಾಮೀಜಿ, ಬೈರನಹಟ್ಟಿ ದೊರೆಸ್ವಾಮಿ ಮಠದ ಶಿವಶಾಂತವೀರ ಶ್ರೀಗಳು ಹಾಗೂ ಮೌಲ್ವಿಗಳ ನೇತೃತ್ವದಲ್ಲಿ ಈ ಕೋಮುಸೌಹಾರ್ದತೆ ಕಾರ್ಯಕ್ರಮ ಜರುಗಿತು.

    ಬಸವಣ್ಣನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಹಿಂದೂ-ಮುಸ್ಲಿಂ ಸಮಾಜದ ಬಾಂಧವರು ಒಟ್ಟಾಗಿ ಬಸವಣ್ಣ ಹಾಗೂ ಮಹಮ್ಮದ್ ಪೈಗಂಬರ್ ಪ್ರಾರ್ಥನೆ, ಪೂಜೆ, ಜಪತಪ ಮಾಡಿ ಜಯಘೋಷ ಕೂಗಿದರು. ಈ ವೇಳೆ ಮುಸ್ಲಿಮರು ಹಾಗೂ ಬಸವಣ್ಣನ ಅಯಾಯಿಗಳನ್ನು ಒಟ್ಟಾಗಿ ಸನ್ಮಾನಿಸಲಾಯಿತು‌. ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ವೈ.ಎನ್.ಗೌಡರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ರಂಜಾನ್ ಮುನ್ನಾ ದಿನವೇ ಎರಡು ಗುಂಪುಗಳ ಮಧ್ಯೆ ಗಲಾಟೆ – ಇಂಟರ್ನೆಟ್ ಸ್ಥಗಿತ