ಬೆಂಗಳೂರು: ಸಿದ್ದರಾಮಯ್ಯ ಮಾತನಾಡಿಸಲು ಬಂದಿದ್ದ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನಳಪಾಡ್‌ಗೆ ಮುಜುಗರವಾಗಿದೆ.
ಕಾರ್ಯಕ್ರಮವೊಂದಕ್ಕೆ ಆಹ್ವಾನಿಸಲು ಸಮಯ ನಿಗದಿ ಮಾಡಲು ನಳಪಡ್ ಸಿದ್ದರಾಮಯ್ಯ ನಿವಾಸಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷ ಬಂದಿದ್ದರೂ ಸಿದ್ದರಾಮಯ್ಯ ತಿರುಗಿಯೂ ನೋಡದೇ ಕಾರು ಹತ್ತಿದ್ದಾರೆ.
ಮೈಸೂರಿಗೆ ಹೋಗಲು ಸಿದ್ದರಾಮಯ್ಯ ಕಾರು ಹತ್ತಿದಾಗಲೂ ಅಲ್ಲಿಗೆ ಬಂದ ನಳಪಾಡ್ ಮಾತನಾಡಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಆಪ್ತ ಸಹಾಯಕರು ನಳಪಡ್ ಬಂದಿದ್ದಾರೆ ಅಂದರೂ ಸಿದ್ದರಾಮಯ್ಯ ಡೋಂಟ್ ಕೇರ್ ಅಂದಿದ್ದಾರೆ. ನಳಪಡ್ ಮಾತನಾಡಿಸಲು ಪ್ರಯತ್ನಿಸಿದರೂ ಸಿದ್ದರಾಮಯ್ಯ ಮಾತನಾಡದೇ ಬೇರೊಬ್ಬ ರೈತನನ್ನು ಮಾತನಾಡಿಸಿದ್ದಾರೆ. ಇದನ್ನೂ ಓದಿ: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ
ಕಾರಿನ ಈ ಪ್ರಸಂಗ ನಡೆಯುವ ಮೊದಲು ತನ್ನ ನಿವಾಸದಲ್ಲಿ ರೈತರನ್ನು ಸಿದ್ದರಾಮಯ್ಯ ಮಾತನಾಡಿಸುತ್ತಿದ್ದರು. ಅಲ್ಲೂ ನಳಪಡ್‌ಗೆ ಮಾತನಾಡಲು ಸಿದ್ದರಾಮಯ್ಯ ಅವಕಾಶ ನೀಡಿರಲಿಲ್ಲ. ಹೊರಗಡೆ ಮಾತನಾಡಲು ಅವಕಾಶ ನೀಡದ್ದಕ್ಕೆ ಸಿದ್ದರಾಮಯ್ಯ ಬರುವ ಮೊದಲೇ ನಳಪಾಡ್ ನಿವಾಸದ ಒಳಗಡೆ ಹೋಗಿದ್ದರು.
ಒಟ್ಟಿನಲ್ಲಿ ಮನೆ ಒಳಗೂ ನಳಪಾಡ್ ಅವರನ್ನು ಮಾತನಾಡಿಸಿಲ್ಲ. ಮನೆಯಿಂದ ಹೊರಗೂ ಮಾತನಾಡಿಸಿಲ್ಲ. ಕೊನೆ ಗಳಿಗೆಯಲ್ಲಿ ಕಾರಿನಲ್ಲಿ ಕುಳಿತಿದ್ದರೂ ತಿರುಗಿ ಸಹಾ ನೋಡದ ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಹುಲ್ ಗಾಂಧಿ ಮೇಲೆ ಅತ್ಯಾಚಾರ ಆಗುತ್ತಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ನೀಡಿರುವ ಹೇಳಿಕೆಯೊಂದು ವೈರಲ್ ಆಗುತ್ತಿದೆ.
ರಾಹುಲ್ ಗಾಂಧಿ ಈಡಿ ವಿಚಾರಣೆ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆ ಸಂದರ್ಭದಲ್ಲಿ ಪೊಲೀಸರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದರು. ಈ ವೇಳೆ ಬಸ್‍ನಲ್ಲಿ ಹೋಗುವಾಗ ಮಾತನಾಡಿರುವ ನಲಪಾಡ್, ಇವತ್ತು ರಾಹುಲ್ ಗಾಂಧಿ ಅವರ ಮೇಲೆ ಅತ್ಯಾಚಾರ ಆಗ್ತಿದೆ. ಪ್ರತಿಯೊಬ್ಬ ಭಾರತೀಯನ ಮೇಲೆ ಆಗ್ತಿದೆ ಎಂದಿರುವ ವೀಡಿಯೋ ಹರಿದಾಡುತ್ತಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್
ಅತ್ತ ದೆಹಲಿ ಪೊಲೀಸ್ ಯೂಥ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷವೇ ಏರ್ಪಟ್ಟಿತ್ತು. ಕಾಂಗ್ರೆಸ್ ನಾಯಕರು ಎಐಸಿಸಿ ಕಚೇರಿಯಿಂದ ಇಡಿ ಕಚೇರಿವರೆಗೂ ಪ್ರತಿಭಟನೆ ನಡೆಸಲು ಪ್ರಯತ್ನಿಸಿರು. 144 ಸೆಕ್ಷನ್ ಜಾರಿ ಹಿನ್ನಲೆ ಪ್ರತಿಭಟನೆ ಆರಂಭವಾಗುತ್ತಿದ್ದಂತೆ ತಡೆಯಲು ದೆಹಲಿ ಪೊಲೀಸರು ಪ್ರಯತ್ನಿಸಿದರು. ಈ ವೇಳೆ ದೆಹಲಿ ಪೊಲೀಸ್ ಕಾಂಗ್ರೆಸ್ ಕಾರ್ಯಕರ್ತರ ನಡುವೆ ದೊಡ್ಡ ಸಂಘರ್ಷವೇ ನಡೆದು ಹೊಯ್ತು. ಇದನ್ನೂ ಓದಿ: ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ತೀವ್ರ – ರಸ್ತೆಗಳಲ್ಲಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದ ಡಿ.ಕೆ ಸುರೇಶ್, ಯೂಥ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರನ್ನು ಪೊಲೀಸರು ಕೈ ಕಾಲು ಹಿಡಿದು ಹೊತ್ತಿಕೊಂಡು ಹೋಗಿ ಪೊಲೀಸ್ ವಾಹನದಲ್ಲಿ ತುಂಬಿಸಿದ್ದಾರೆ. ಪ್ರತಿಭಟನೆ ವೇಳೆ ಡಿ.ಕೆ ಸುರೇಶ್ ದೆಹಲಿ ಪೊಲೀಸರ ಜೊತೆಗೆ ವಾಗ್ವಾದ ನಡೆಸಿದರು. ಪ್ರತಿಭಟನೆ ನಡೆಸಲು ಅವಕಾಶ ಕೇಳಿದರು. ಇದಕ್ಕೆ ದೆಹಲಿ ಪೊಲೀಸರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಏರ್ಪಟ್ಟ ಸಂಘರ್ಷದಲ್ಲಿ ಪೊಲೀಸರು ಡಿ.ಕೆ ಸುರೇಶ್ ಅವರನ್ನು ವಶಕ್ಕೆ ಪಡೆದುಕೊಂಡರು.
ಬೆಂಗಳೂರು: ಒಂದು ಚಡ್ಡಿ ಸುಟ್ಟಿದ್ದಕ್ಕೆ ಅರೆಸ್ಟ್ ಮಾಡ್ತೀರಾ ಅಲ್ವಾ? ಎಲ್ಲಾ ಜಿಲ್ಲೆಗಳಲ್ಲೂ ಚಡ್ಡಿಗಳನ್ನು ಸುಡ್ತೀವಿ. ಎಷ್ಟು ಜನರನ್ನು ಅರೆಸ್ಟ್ ಮಾಡ್ತೀರಾ ನೋಡೋಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಆರ್‌ಎಸ್‌ಎಸ್ ಚಡ್ಡಿ ಸುಟ್ಟು ಪ್ರತಿಭಟನೆ ಮಾಡಿದ ಕಾರಣಕ್ಕೆ ಎನ್‍ಎಸ್‍ಯುಐ ಅಧ್ಯಕ್ಷ ಕೀರ್ತಿ ಗಣೇಶ್ ಮತ್ತಿತರರ ಬಂಧನ ವಿರೋಧಿಸಿ ಯೂತ್ ಕಾಂಗ್ರೆಸ್ ವತಿಯಿಂದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ನಲಪಾಡ್, ಚಡ್ಡಿಗೆ ಬೆಂಕಿ ಹಾಕಿದ್ದಕ್ಕೆ ಮನೆ ಸುಡಲು ಹೋದ್ರು ಅಂತ ಆರೋಪ ಮಾಡುತ್ತಿದ್ದಾರೆ. ಚಡ್ಡಿಯ ಬೆಂಕಿಯಿಂದ ಮನೆ ಸುಡಕ್ಕಾಗುತ್ತಾ? ಆರ್‌ಎಸ್‌ಎಸ್ ದೇಶವನ್ನು ಸುಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಖಾಕಿ ಚಡ್ಡಿ ಏನು ಈ ದೇಶದ ರಾಷ್ಟ್ರಧ್ವಜವೇ: ಎನ್‍ಎಸ್‍ಯುಐ ಉಪಾಧ್ಯಕ್ಷೆ
ಮೊದಲು ಹಿಜಬ್ ಎಂದು ಬಿಜೆಪಿಯವರು ಮುಸ್ಲಿಮರನ್ನು ಒಡೆದರು. ನಂತರ ಕ್ರೈಸ್ತರು, ದಲಿತರನ್ನು ಒಡೆದರು. ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುವನ್ನೂ ಕೂಡ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಿಟ್ಟಿಲ್ಲ. ಆರ್‌ಎಸ್‌ಎಸ್‌ನವರು ಸಂವಿಧಾನದ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್‌ನವರಿಗೆ ಎಲ್ಲರೂ ಒಂದಾಗಿ ಇರೋಣ ಎಂಬ ಮನಸ್ಥಿತಿ ಇಲ್ಲ. ಆರ್‌ಎಸ್‌ಎಸ್‌ಸ್‍ನವರು ನಮ್ಮ ಹಕ್ಕನ್ನು ಕಸಿದುಕೊಳ್ಳುತ್ತಿದ್ದಾರೆ. ನನ್ನ ಮಿತ್ರ ಒಂದೇ ಒಂದು ಚಡ್ಡಿಗೆ ಬೆಂಕಿ ಇಟ್ಟಿದ್ದಕ್ಕೆ ಮನೆಗೆ ಬೆಂಕಿ ಇಟ್ಟ ಎಂದು ಬಂಧಿಸುತ್ತಾರೆ. ಆ ಚಡ್ಡಿಯ ಪವರ್ ಈ ದೇಶವನ್ನು ಒಡೆಯುವ ಪವರ್. ಚಡ್ಡಿಗೆ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಸಾಮರ್ಥ್ಯ ಇಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್‍ಗೆ ಮಾತ್ರ. ಈ ಸಮಾಜವನ್ನು ಒಡೆಯುವ ಸರ್ಕಾರ ಇದೆ ಇದನ್ನು ಕಿತ್ತೊಗೆಯುವುದು ನಮ್ಮ ಮುಂದಿರುವ ಮೊದಲ ಗುರಿ ಎಂದು ಕರೆ ನೀಡಿದರು. ಇದನ್ನೂ ಓದಿ: ಮದರಸಾ ತೆರವು ಮಾಡದೆ ಇದ್ದರೆ ನಾವೇ ಅವರ ಕೊರಳಪಟ್ಟಿ ಹಿಡಿದು ಹೊರ ಹಾಕ್ತಿವಿ: ಹಿಂದೂ ಸಂಘಟನೆಗಳು
ನಾವು ಇಲ್ಲಿಂದ ಗೃಹ ಸಚಿವರ ಮನೆಗೆ ಹೋಗಿ ಮುತ್ತಿಗೆ ಹಾಕ್ತೇವೆ. ಪೊಲೀಸರು ಬಂಧಿಸಬಹುದು, ಬಂಧಿಸಲಿ ಎಷ್ಟು ಜನ ನಲಪಾಡ್, ಶ್ರೀನಿವಾಸರನ್ನು ಬಂಧಿಸ್ತಾರೆ, ಬಂಧಿಸಲಿ. ಇನ್ನಷ್ಟು ಜನ ನಲಪಾಡ್, ಶ್ರೀನಿವಾಸ್ ಹುಟ್ಟಿ ಬರುತ್ತಾರೆ. ಇದು ರಾಹುಲ್ ಗಾಂಧಿ ಕಂಡಂತಹ ಯುವ ಕಾಂಗ್ರೆಸ್ ಎಂದರು.
ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಳೆಲೆದಿದೆ.
ಟ್ವೀಟ್‍ನಲ್ಲಿ ಏನಿದೆ?
ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ಎನ್‍ಎಸ್‍ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು?. ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ ಘಟಕಕ್ಕೆ ನೇಮಿಸಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ. ಇವರಿಂದ ಪ್ರೇರಣೆ ಪಡೆದ ಎನ್‍ಎಸ್‍ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ. ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ. ಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು. ಮಾರಣಾಂತಿ ಹಲ್ಲೆ ಮಾಡಿ ಜೈಲು ವಾಸ ಮುಗಿಸಿ ಬಂದವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿದರು. ಸಚಿವರ ಮನೆಮೇಲೆ ದಾಳಿ ಮಾಡಿದವರಿಗೆ ಯಾವ ಹುದ್ದೆ ತಯಾರಿದೆ? ಇದನ್ನೂ ಓದಿ: ಶಾಸಕ ಶಿವನಗೌಡ ನಾಯಕ್ ವಿರುದ್ಧ 100% ಕಮಿಷನ್ ಆರೋಪ
ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ.
ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ ಘಟಕಕ್ಕೆ ನೇಮಿಸಿದೆ.
ಇವರಿಂದ ಪ್ರೇರಣೆ ಪಡೆದ ಎನ್‍ಎಸ್‍ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ.
ಸಿದ್ದರಾಮಯ್ಯ ಅವರ ಸಿದ್ಧಾಂತ ಯಾವುದು, ಮಜಾವಾದವೋ, ಸಮಾಜವಾದವೋ? ಯಾವ ಸೈದ್ಧಾಂತಿಕ ಬದ್ಧತೆಯೂ ಇಲ್ಲದೇ ಎಲ್ಲರ ಮೇಲೂ ಎರಗುವ, ಎಲ್ಲರನ್ನೂ ಕಬಳಿಸುವ ಸಿದ್ದರಾಮಯ್ಯ ಅವರ ರಾಜಕೀಯ ಬೆಳವಣಿಗೆಯನ್ನು ಅನಾವರಣಗೊಳಿಸಲಿದು ಸಕಾಲ. ಜನತಾ ಪರಿವಾರದಲ್ಲಿರುವ ಸಿದ್ದರಾಮಯ್ಯ ಅವರ ಆಪ್ತರನ್ನು ತುಸು ವಿಚಾರಿಸಿದರೆ ಮೈಸೂರು ಜಲದರ್ಶಿನಿಯ ಕಲ್ಯಾಣಲೀಲೆಗಳು ಹೊರಬೀಳುತ್ತವೆ. ಪಕ್ಷದ ಚೌಕಟ್ಟಿನಲ್ಲಿ ಯಾವ ಹೋರಾಟವನ್ನೂ ರೂಪಿಸದ ಸಿದ್ದರಾಮಯ್ಯ ಹುತ್ತದಲ್ಲಿ ಸೇರುವ ಹಾವು, ಅಷ್ಟೇ. ನಂಜುಂಡಸ್ವಾಮಿಯ ಶಿಷ್ಯ ಎಂದು ಬಡಾಯಿ ಕೊಚ್ಚಿಕೊಳ್ಳುವ ಮಜವಾದಿಸಿದ್ದರಾಮಯ್ಯ ಅವರೇ, ನೀವು ಎಂದಾದರೂ ರೈತರಿಗೆ ನ್ಯಾಯ ಕೊಡಿಸಿದ್ದೀರಾ? ಸಿಎಂ ಆಗಿದ್ದಾಗ, ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಕುಡಿದ ಸತ್ತ ಎಂದು ನಿಂದಿಸಿರಲಿಲ್ಲವೇ? ನಂಜುಂಡಸ್ವಾಮಿ ಆ ಕ್ಷಣದಲ್ಲಿ ಬದುಕಿರುತ್ತಿದ್ದರೆ ಹಸಿರುಶಾಲಿನಲ್ಲೇ ನಿಮಗೆ ಕಪಾಳಮೋಕ್ಷ ಮಾಡಿರುತ್ತಿದ್ದರು. ನಾನು ಕಾರ್ಮಿಕ ನಾಯಕ ಜಾರ್ಜ್ ಫರ್ನಾಂಡೀಸ್ ಶಿಷ್ಯ ಎಂದೂ ಮಜವಾದಿಸಿದ್ದರಾಮಯ್ಯ ಹೇಳುತ್ತಿರುತ್ತಾರೆ. ಕಾರ್ಮಿಕರ ಕಲ್ಯಾಣಕ್ಕೆ ಹೋರಾಟ ಮಾಡಿದ ಒಂದಾದರೂ ಉದಾಹರಣೆ ಇದೆಯೇ? ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ
"ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು"
ಮಹಿಷಿ ವರದಿಯನ್ವಯ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಸಿದ್ದರಾಮಯ್ಯ ಅವರದ್ದು ಬಂಡವಾಳ ಇಲ್ಲದ ಶೂನ್ಯಬಡ್ಡಿ ಭಾಷಣ! ದೇವೇಗೌಡ ಅವರು ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆಯ ನಿಜವಾದ ಗುರು. ಆದರೆ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಮಾಡಿದ್ದೇನು? ಒಂದಿಷ್ಟು ಜನ “ರಾತ್ರಿ ಗೆಳೆಯರ” ಜೊತೆ ಗುಂಪುಕಟ್ಟಿಕೊಂಡು ಉಂಡ ಮನೆಗೆ ಬೆಂಕಿ ಹಚ್ಚುವ ಯೋಜನೆ ರೂಪಿಸಿದ್ದು ನಿಜವಲ್ವೇ? ಈಗ ಕಾಂಗ್ರೆಸ್ ಪಕ್ಷದಲ್ಲೂ ನಡೆಸುತ್ತಿರುವುದು ಅದನ್ನೇ ಅಲ್ಲವೇ? ಅಧಿಕಾರಕ್ಕಾಗಿ ನಡೆಸಿದ ಬಳ್ಳಾರಿ ಪಾದಯಾತ್ರೆ ಹೊರತುಪಡಿಸಿ, ಸಿದ್ದರಾಮಯ್ಯ ರಾಜಕೀಯ ಬದುಕಿನ ಮೈಲಿಗಲ್ಲುಗಳೇನು? ನಾಡು, ನುಡಿ, ಸಂಸ್ಕೃತಿ, ಜಲ, ಪರಿಸರಕ್ಕಾಗಿ ಸಿದ್ದರಾಮಯ್ಯ ಕೊಡುಗೆ ಏನು? ಜನತಾ ಪರಿವಾರದಲ್ಲಿದ್ದಾಗ ದೇವೇಗೌಡರು ಉಪವಾಸ ಸತ್ಯಾಗ್ರಹ ನಡೆಸುವಾಗ, ಮಜವಾದಿಸಿದ್ದರಾಮಯ್ಯ ಮಾತ್ರ ಭಾಷಣದಲ್ಲಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ಪ್ರತೀ ನಡೆಯಲ್ಲೂ ದೇಶದ್ರೋಹಿ ಛಾಯೆ ಅಚ್ಚೊತ್ತಿದೆ. ದೇಶದ್ರೋಹಿಗಳನ್ನು ಪ್ರಧಾನಿ ಕಚೇರಿಗೆ ಆಹ್ವಾನಿಸಿದ ಕಾಂಗ್ರೆಸ್ಸಿಗರಿಂದ ಬೇರೇನನ್ನು ಅಪೇಕ್ಷಿಸಲು ಸಾಧ್ಯ? ನಮ್ಮ ಸರ್ಕಾರದಲ್ಲಿ ಅವೆಲ್ಲ ನಡೆಯುವುದಿಲ್ಲ. ನಮ್ಮ ಸರ್ಕಾರ ಮಣೆ ಹಾಕುವುದು ದೇಶಭಕ್ತರಿಗೆ ಮಾತ್ರ. ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು ಈ ಹೇಳಿಕೆಯ ಕುರಿತು ಕಾಂಗ್ರೆಸ್ ಅಭಿಪ್ರಾಯವೇನು?.
ಉಡುಪಿ: ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ಹಾರೀಸ್ ನಲಪಾಡ್ ಉಡುಪಿಯಲ್ಲಿ ಟಾಂಗ್ ಕೊಟ್ಟಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಮಾಜಿ ಸಂಸದೆ ನಟಿ ರಮ್ಯಾ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಮ್ಯಾ ತನ್ನ ಅಸ್ತಿತ್ವ ತೋರಿಸಲು ಬಂದಿದ್ದಾರಾ? ನಾನು ಒಬ್ಬಳು ಇದ್ದೀನಿ ಅಂತ ತೋರಿಸಿಕೊಳ್ಳುತ್ತಿದ್ದಾರಾ? ಯಾವುದಾದರೂ ಒಂದು ಕುರ್ಚಿ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರಾ? ರಮ್ಯಾ ಬಂದದ್ದು ಯಾಕೆ? ಹೀಗೆಲ್ಲ ಮಾಡುತ್ತಿರುವುದು ಯಾವುದಕ್ಕೆ ಅಂತ ನಾವು ಅರ್ಥಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್ ಬಂಧನ
ಎಂಬಿ ಪಾಟೀಲ್ ಅಶ್ವಥ್ ನಾರಾಯಣ್ ಭೇಟಿ ವಿಚಾರವಾಗಿ ಮಾತನಾಡಿ, ಶಿವಕುಮಾರ್ ಅವರು ಬಹಳ ಕ್ಲೀಯರ್ ಆಗಿ ಇವತ್ತು ಸ್ಪಷ್ಟಪಡಿಸಿದ್ದಾರೆ. ಎಂಬಿ ಪಾಟೀಲ್, ಅವರು ಅಶ್ವತ್ ನಾರಾಯಣ್ ಹತ್ತಿರ ಹೋಗಿದ್ದಾರೆ ಎಂದು ಎಲ್ಲಿಯೂ ಅವರು ಹೇಳಿಲ್ಲ. ಕಾಂಗ್ರೆಸ್‍ನಲ್ಲಿ ಎಲ್ಲ ನಾಯಕರು ಒಗ್ಗಟ್ಟಾಗಿದ್ದಾರೆ. ಡಿಕೆಶಿ ಎಂಬಿ ಪಾಟೀಲ್ ಸಿದ್ದರಾಮಯ್ಯ ನಾವೆಲ್ಲ ಜೊತೆಗಿದ್ದೇವೆ. ಸುಮ್ಮನೆ ನಮ್ಮ ಪಕ್ಷಕ್ಕೆ ತೊಂದರೆ ನೀಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಇನ್ನು ಮುಂದೆ ಬಲವಂತದ ಮತಾಂತರ ಅಪರಾಧ: ಕಾಯ್ದೆಯಲ್ಲಿ ಏನಿದೆ?
ರಮ್ಯಾಗೆ ಎನೋ ಗಮನ ಸೆಳೆಯುತ್ತಿದೆ ಅನ್ನಿಸುತ್ತಿದೆ. ನಾನು ಇನ್ನೂ ಇದ್ದೀನಿ ಎಂದು ತೋರಿಸಿ ಕೊಳ್ಳುತ್ತಿರಬಹುದು. ನನಗೂ ಒಂದು ಕುರ್ಚಿ ಕೊಡಿ ಎಂದು ಟವಲ್ ಹಾಕುತ್ತಿರಬಹುದು. ಈ ವಿಚಾರಕ್ಕೂ ರಮ್ಯಾಗೂ ಏನು ಸಂಬಂಧ? ರಮ್ಯಾ ಅವರ ಹಳೆಯ ಟ್ವೀಟ್‍ಗಳನ್ನು ತೆಗೆದುಕೊಂಡು ನೋಡಿ. ಯಾವುದೋ ಸಿನಿಮಾಗಳ ಬಗ್ಗೆ ಮಾತ್ರ ಟ್ವೀಟ್ ಮಾಡಿಕೊಂಡಿದ್ದರು. ಇತ್ತೀಚಿಗೆ ಅವರು ಯಾವುದೇ ರಾಜಕೀಯ ಟ್ವೀಟ್‍ಗಳನ್ನು ಮಾಡಿಲ್ಲ ಎಂದು ಕುಟುಕಿದರು.
ರಮ್ಯಾ ಹಠಾತ್ ಆಗಿ ಯಾಕೆ ನಮ್ಮ ನಾಯಕರ ಮೇಲೆ ಬಿದ್ದಿದ್ದಾರೆ? ಇದರಲ್ಲಿ ಯಾವುದೋ ಒಳ ಉದ್ದೇಶ ಇದೆ. ನಟಿ ರಮ್ಯಾಗೆ ಯಾರು ಹೆಚ್ಚು ಪ್ರಾಮುಖ್ಯತೆ ಕೊಡಬಾರದು ಅಂತ ಕೈಮುಗಿದು ಕೇಳಿಕೊಂಡರು. ರಮ್ಯಾ ಅವರು ಒಳ್ಳೆಯವರೇ. ಚಿಕ್ಕ ವಯಸ್ಸಿನಲ್ಲಿ ಸಂಸದರಾದವರು. ರಮ್ಯ ಈಗಾಗಲೇ ಒಳ್ಳೆಯ ಸಾಧನೆಗಳನ್ನು ಮಾಡಿದ್ದಾರೆ. ನಾನು ರಮ್ಯಾ ಅವರ ವಿರುದ್ಧ ಇಲ್ಲ. ನಟಿ ರಮ್ಯಾ ಇಂತಹ ಚೀಪ್ ಪಾಲಿಟಿಕ್ಸ್ ಮಾಡಬಾರದು. ನಟಿ ರಮ್ಯಾ ಅವರ ಆರೋಗ್ಯ ತಪಾಸಣೆ ಮಾಡಿಸಬೇಕು ಎಂದು ಸಲಹೆ ನೀಡಿದರು.
ಉಡುಪಿ: ಎಂಬಿಎ ಪದವಿ ಪಡೆದಿದ್ದರೂ ವಿದ್ಯಾರ್ಹತೆಗೆ ಸೂಕ್ತ ಉದ್ಯೋಗ ಸಿಗದ ಹಿನ್ನೆಲೆ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿಯ ಕಾಪು ತಾಲೂಕಿನಲ್ಲಿ ನಡೆದಿದೆ.
ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಸಹನಾ (23) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಒಂದೂವರೆ ವರ್ಷದ ಹಿಂದೆ ಎಂಬಿಎ ಪದವಿ ಮುಗಿಸಿದ್ದಳು. ಆಕೆಗೆ ಸೂಕ್ತ ಕೆಲಸ ಸಿಕ್ಕಿರಲಿಲ್ಲ. ಏಪ್ರಿಲ್ 30 ರಂದು ಶಿರ್ವ ಸಮೀಪದ ಕಟ್ಟಿಂಗೇರಿ ಗ್ರಾಮದ ಸಹೋದರಿ ಸೌಮ್ಯ ಅವರ ಮನೆಗೆ ಬಂದಿದ್ದ ಸಹನಾ ಅಲ್ಲೇ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೆÇಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಎಮ್ಮೆಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಬಸ್ ಪಲ್ಟಿ
ಮೇ 1ರ ಬೆಳಗ್ಗೆ ಸಹನಾ ವಿಪರೀತ ವಾಂತಿ ಮಾಡಿದ್ದು, ಹೀಗಾಗಿ ಆಕೆಯನ್ನು ಉಡುಪಿ ನಗರದ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಂತರ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಆಕೆಯ ಸ್ಥಿತಿ ಚಿಂತಾಜನಕ ಹಂತಕ್ಕೆ ತಲುಪಿದ್ದರಿಂದ ಮೇ 7 ರಂದು ಉಡುಪಿಯ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಹನಾ ಅವರನ್ನು ಸ್ಥಳಾಂತರಿಸಲಾಯಿತು. ಮೇ 9 ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕಾಂಗ್ರೆಸ್ ಇಂದು ಸಂಜೆ ಉಡುಪಿಯಲ್ಲಿ ಪ್ರತಿಭಟನೆ ನಡೆಸಲಿದೆ. ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ನೇತೃತ್ವದಲ್ಲಿ ರಾಜ್ಯ, ಕೇಂದ್ರ ಸರಕಾರ ಯುವಕರಿಗೆ ಉದ್ಯೋಗ ಸೃಷ್ಟಿಸದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದೆ.
ಬೆಳಗಾವಿ: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಡಪಾಲ್ ಆರೋಪ ಮಾಡಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎಂದರೆ ಬೆಲೆ ಏರಿಕೆ ಸರ್ಕಾರ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೂಪಾಯಿ ಎರಡೂ ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ರಸ್ತೆಗೆ ಬಂದು ಗ್ಯಾಸ್ ಹಿಡಿದು ಪ್ರತಿಭಟನೆ ಮಾಡುತ್ತಿದ್ದರು. ಈಗ ಎಲ್ಲಿದ್ದಾರೆ ಆ ನಾಯಕರು? ಜನಸಾಮಾನ್ಯರಿಗೆ ಆಗುತ್ತಿರುವ ಕಷ್ಟಕ್ಕೆ ಮಾತನಾಡಲು ಯಾರೂ ಬರುತ್ತಿಲ್ಲ ಎಂದು ಹರಿಹಾಯ್ದರು.
ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ಅವರ ವೈಫಲ್ಯ ಹಾಗೂ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈಗ ಜಾತಿ ಮೇಲೆ ಬಲ ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಜೊತೆ ಕರ್ನಾಟಕದ ಯುವಕರು ಇದ್ದಾರೆ. ಸರ್ಕಾರದ ಭ್ರಷ್ಟಾಚಾರ ಬೆಲೆ ಏರಿಕೆ ವಿರುದ್ಧ ಹೋರಾಟ ನಿರಂತರವಾಗಿರುವುದು ಎಂದರು.
ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ಕಾಟ, ಬಿಜೆಪಿ ಸರ್ಕಾರದ ನಡೆಯಿಂದ ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಡಿಕಾರಿದ ಅವರು, ಹಿಂದೂತ್ವ ಕೇವಲ ಬಿಜೆಪಿಯವರ ಆಸ್ತಿನಾ ಎಂದು ಪ್ರಶ್ನಿಸಿದ ಅವರು, ಹಿಂದುತ್ವ ಕೇವಲ ಬಿಜೆಪಿಗೆ ಬರೆದುಕೊಟ್ಟಿದ್ದಾರೆ. ಮಠದ ಸ್ವಾಮೀಜಿಗೆ ನೀಡಿರುವ ಅನುದಾನ ನೀಡಲು 30% ಕಮಿಷನ್ ಕೇಳುತ್ತಾರೆ. ಇಂಥಾ ಸರ್ಕಾರ ಬೇಕಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ:ಮೇ 3ಕ್ಕೆ ಕೇಂದ್ರ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ – ಕಾರ್ಯಕ್ರಮಗಳ ವಿವರ ಹೀಗಿದೆ
ಜಿಲ್ಲಾ ಯುವ ಘಟಕದ ಜಿಲ್ಲಾ ಉಪಾಧ್ಯಕ್ಷ ಮೃಣಾಲ್ ಹೆಬ್ಬಾಳ್ಕರ್ ಮಾತನಾಡಿ, ಡಬಲ್ ಎಂಜಿನ್ ಸರ್ಕಾರದಿಂದ ಸಾಮಾನ್ಯ ಜನರಿಗೆ ಬೆಲೆ ಏರಿಕೆಯಿಂದ ಸಾಕಷ್ಟು ತೊಂದರೆ ಮಾಡುತ್ತಿದೆ. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಯುವಕರಿಗೆ ವಂಚನೆ ಮಾಡಿದೆ. ರಾಜ್ಯದಲ್ಲಿ 40% ಕಮಿಷನ್ ಸರ್ಕಾರಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಲಿಯಾಗಿದ್ದಾರೆ. ಇದು ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್
ವಿಜಯಪುರ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗುವುದಿಲ್ಲ ಎಂದು ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ತಿಳಿಸಿದರು.
ಬೆಲೆ ಏರಿಕೆ ಖಂಡಿಸಿ ವಿಜಯಪುರದಲ್ಲಿ ಯೂಥ್ ಕಾಂಗ್ರೆಸ್‍ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಕಾಂಗ್ರೆಸ್ ಪಕ್ಷದ ಇತಿಹಾಸ ಈ ದೇಶದ ಇತಿಹಾಸ. ಆ ಇತಿಹಾಸವನ್ನು ಯಾರ ಕೈಯಲ್ಲೂ ಬದಲಾಯಿಸೋಕೆ ಆಗಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಸ್ವಾತಂತ್ರ್ಯ ಹೋರಾಟ ಮಾಡುವಾಗ ಯಾವ ಬಿಜೆಪಿ, ಆರ್‌ಎಸ್‍ಎಸ್, ಎಎಪಿಯೂ ಇರಲಿಲ್ಲ. ಬರೀ ಕಾಂಗ್ರೆಸ್ ಪಕ್ಷವೊಂದೇ ಇತ್ತು. ನಮ್ಮ ನಿಮ್ಮ ಪರವಾಗಿ ಹೋರಾಡಿ ಸ್ವಾತಂತ್ರ್ಯ ತಂದು ಕೊಟ್ಟಿದೆ. ಹಾಗಾಗಿ ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲಿ ಆಗೋಲ್ಲ ಎಂದರು. ಇದನ್ನೂ ಓದಿ:ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ
2023 ರಾಜ್ಯದಲ್ಲಿ ಹಾಗೂ 2024ರಲ್ಲಿ ದೆಹಲಿಯಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಸೋಲಾಗುವುದಿಲ್ಲ ಎಂದು ಭವಿಷ್ಯ ನುಡಿದ ಅವರು, ಕಾಂಗ್ರೆಸ್ ಸರ್ಕಾರ ಮಾತ್ರ ಜನಪರ ಯೋಚನೆ ಮಾಡುತ್ತದೆ. ಯುವಕರ ಬಗ್ಗೆ ಕಾಳಜಿ ಇರುವ ನಾಯಕ ರಾಹುಲ್ ಗಾಂಧಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಪುಂಡರ ಬೈಕ್ ವೀಲ್ಹಿಂಗ್ ಕ್ರೇಜ್‍ಗೆ ಆಸ್ಪತ್ರೆ ಸೇರಿದ ಪಾದಚಾರಿ
ಬೆಂಗಳೂರು: ಅನಧಿಕೃತ ಫ್ಲೆಕ್ಸ್ ಅಳವಡಿಕೆ ಆರೋಪದಡಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ನಗರದ ಟೌನ್ ಹಾಲ್ ಮುಂಭಾಗ, ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಕೆ ಬಗ್ಗೆ ಬಿಬಿಎಂಪಿ ಕಂದಾಯ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರರಿಂದ ಪ್ರತ್ಯೇಕ ಎರಡು ದೂರು ದಾಖಲಾದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್ ನಿಷೇಧಿಸಿ ಬಿಬಿಎಂಪಿ ಮತ್ತು ಸರ್ಕಾರ ಆದೇಶಿಸಿದೆ. ಅಲ್ಲದೇ ಈ ಬಗ್ಗೆ ಹೈಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದೀಗ ನಗರದಲ್ಲಿ ಅಳವಡಿಸುವ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ಮತ್ತು ಕಾನೂನು ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶಿಸಿದೆ. ಈ ನಡುವೆ ಬಿ.ಕೆ ಹರಿಪ್ರಸಾದ್‍ಗೆ ಅಭಿನಂದನಾ ಸಮಾರಂಭದ ಹಿನ್ನೆಲೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಪೋರೇಷನ್ ವೃತ್ತದ ಸುತ್ತಮುತ್ತ ಫ್ಲೆಕ್ಸ್, ಬ್ಯಾನರ್ ಅಳವಡಿಸಲಾಗಿದೆ ಈ ಬಗ್ಗೆ ಕ್ರಮ ವಹಿಸಬೇಕಾಗಿ ಹಲಸೂರು ಗೇಟ್ ಠಾಣೆಯಲ್ಲಿ ಪ್ರತ್ಯೇಕ ಎರಡು ದೂರು ದಾಖಲಾಗಿತ್ತು. ಇದನ್ನೂ ಓದಿ: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್
ಈ ಬಗ್ಗೆ ಕ್ರಮಕ್ಕೆ ಮುಂದಾಗಿರುವ ಪೊಲೀಸರು, ಬಿಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕೆ 150ಕ್ಕೂ ಹೆಚ್ಚು ಫ್ಲೆಕ್ಸ್ ಅಳವಡಿಕೆ ಮಾಡಿದ್ದ ನಲಪಾಡ್ ಅಂಡ್ ಟೀಂ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಯಥಾ ಗುರು ತಥಾ ಶಿಷ್ಯ ಎಂಬ ಹುಕುಂ ಜಾರಿಯಾಯ್ತಾ? ನನ್ನಂತೆ ನನ್ನ ಶಿಷ್ಯನು ಗ್ರಾಂಡ್ ಎಂಟ್ರಿ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಯಸಿದ್ರಾ ಎಂಬ ಪ್ರಶ್ನೆ ಎದ್ದಿದೆ.
ವಿಶೇಷ ಸ್ಥಳದಲ್ಲಿ ಭರ್ಜರಿಯಾಗಿ ನಲಪಾಡ್ ಪದಗ್ರಹಣ ಮಾಡಲು ಡಿಕೆಶಿ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಈ ಪ್ರಶ್ನೆ ಈಗ ಎದ್ದಿದೆ.
ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ನಲಪಾಡ್ ಫೆಬ್ರವರಿ 10 ರಂದು ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕಾರ್ಯಕ್ರಮ ಆಯೋಜಿಸುವುದು ದೊಡ್ಡ ವಿಚಾರ ಅಲ್ಲ. ಆದರೆ ಪ್ರಮುಖ ನಾಯಕರನ್ನು ಆಹ್ವಾನಿಸಿ ಭರ್ಜರಿ ಕಾರ್ಯಕ್ರಮ ಆಯೋಜಿಸಿದ್ದರಿಂದ ಈ ಮೇಲಿನ ಪ್ರಶ್ನೆ ಎದ್ದಿದೆ.
ಡಿ.ಕೆ.ಶಿವಕುಮಾರ್ 2020 ಜುಲೈ 2 ರಂದು ನೂತನ ಕೆಪಿಸಿಸಿ ಕಚೇರಿ ಆವರಣದಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸಿ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದರು. ಈಗ ನಲಪಾಡ್‌ಗೂ ಅದೇ ಜಾಗದಲ್ಲಿ ಪದಗ್ರಹಣ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಶಕ್ತಿಧಾಮದ ಮಕ್ಕಳ ಜೊತೆ ಪ್ರವಾಸಕ್ಕೆ ಬಂದ ನಟ ಶಿವಣ್ಣ
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿ ನೂತನ ಕಚೇರಿ ನಿರ್ಮಾಣ ಕಾರ್ಯ ಕಳೆದ 6 ವರ್ಷದಿಂದ ನಡೆಯುತ್ತಲೇ ಇದೆ. ನೂತನ ಕಚೇರಿಯ ಕೆಲಸ ಮುಗಿದಿಲ್ಲ ಮತ್ತು ಕಚೇರಿಯ ಉದ್ಘಾಟನೆಯೂ ನಡೆದಿಲ್ಲ. ಆದರೆ ತಮ್ಮ ಶಿಷ್ಯ ತಮ್ಮಂತೆ ಗ್ರಾಂಡ್ ಎಂಟ್ರಿ ಕೊಡಲಿ ಎಂದು ಡಿಕೆಶಿ ನಲಪಾಡ್ ಕಾರ್ಯಕ್ರಮಕ್ಕೆ ಸ್ಪೆಷಲ್ ಅನುಮತಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಪ್ಪು ಜೊತೆ ಡ್ಯಾನ್ಸ್ ಕಾರ್ಯಕ್ರಮಕ್ಕೆ ಹೋಗಿದ್ದು, ನನ್ನ ಜೀವನದ ಮರೆಯಲಾಗದ ಕ್ಷಣ: ಅಲ್ಲು ಅರ್ಜುನ್
ಒಟ್ಟಿನಲ್ಲಿ ತನ್ನಂತೆ ತನ್ನ ಶಿಷ್ಯನ ಇಮೇಜ್ ಹೆಚ್ಚಿಸಲು ಡಿಕೆಶಿ ಅವಕಾಶ ಮಾಡಿಕೊಟ್ಟಿದ್ದಾರೆ. ಇಷ್ಟೇ ಅಲ್ಲದೇ ತಮ್ಮ ಪಿಆರ್ ಮಾಡುತ್ತಿದ್ದ ಡಿಸೈನ್ ಬಾಕ್ಸ್ ಸಂಸ್ಥೆಗೆ ನಲಪಾಡ್ ಪರವಾಗಿ ಕೆಲಸ ಮಾಡಲು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.