Tag: Mohan Das Pai

  • ಉದ್ಯಮಿ ಮೋಹನ್ ದಾಸ್ ಪೈ ಮೇಲೆ FIR ಖಂಡನೀಯ – ಯಡಿಯೂರಪ್ಪ

    ಉದ್ಯಮಿ ಮೋಹನ್ ದಾಸ್ ಪೈ ಮೇಲೆ FIR ಖಂಡನೀಯ – ಯಡಿಯೂರಪ್ಪ

    ಬೆಂಗಳೂರು: ಉದ್ಯಮಿ ಮೋಹನ್ ದಾಸ್ ಪೈ (Mohan D ಮೇಲೆ ಎಫ್‌ಐಆರ್ ದಾಖಲಿಸಿರುವ ಸರ್ಕಾರದ ನಡೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಖಂಡಿಸಿದ್ದಾರೆ.

    ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಮೋಹನ್ ದಾಸ್ ಅಂತಹ ಹಿರಿಯರ ಮೇಲೆ ಸುಳ್ಳು ಕಾರಣ ಹೇಳಿ, ಎಫ್‌ಐಆರ್ ಹಾಕುವ ಧೈರ್ಯ ಈ ಸರ್ಕಾರ ಮಾಡುತ್ತಿದೆ. ರಾಜಕೀಯದಿಂದ ದೂರ ಇರುವವರು ಈ ಸರ್ಕಾರದ ಬಗ್ಗೆ ಮಾತನಾಡಬಾರದು ಎನ್ನೋದು ಈ ಸರ್ಕಾರದ ಧೋರಣೆ ಎಂದು ದೂರಿದ್ದಾರೆ.ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

    ಸರ್ಕಾರದ ಬಗ್ಗೆ ಭಯ ಹುಟ್ಟಿಸುವ ವಾತಾವರಣ ತರುವ ಪ್ರಯತ್ನ ಈ ಸರ್ಕಾರ, ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇದಕ್ಕೆ ಡಿಕೆ ಶಿವಕುಮಾರ್ ಅವರು ಹೆಜ್ಜೆ ಹೆಜ್ಜೆಗೂ ಬೆಂಬಲ ಕೊಡುತ್ತಿದ್ದಾರೆ. ಇದನ್ನ ಖಂಡಿಸುತ್ತೇನೆ. ಈ ಎಲ್ಲಾ ಸಂಗತಿಗಳನ್ನು ಜನರಿಗೆ, ಕಾರ್ಯಕರ್ತರಿಗೆ ತಿಳಿಸಿ ರಾಜ್ಯಾದ್ಯಂತ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಸಂಬAಧ ಹೈಕೋರ್ಟ್ ಆದೇಶದ ಬಳಿಕ ಆರ್‌ಟಿಒ ಬೈಕ್ ಟ್ಯಾಕ್ಸಿ ವಿರುದ್ಧ ಸಮರ ಸಾರಿತ್ತು. ಆದರೆ ಬೈಕ್ ಟ್ಯಾಕ್ಸಿ ನಿಷೇಧ ವಿಚಾರವಾಗಿ ಪರ ವಿರೋಧ ಚರ್ಚೆಗಳು ಜೋರಾಗಿದ್ದು, ಈ ಮಧ್ಯೆ ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ದೂರು ದಾಖಲಿಸಿತ್ತು.ಇದನ್ನೂ ಓದಿ: ದುಡ್ಡು ಕೊಟ್ಟರೆ ಮಾತ್ರ ವರ್ಕ್‌ ಆರ್ಡರ್‌: ಬಿಆರ್‌ ಪಾಟೀಲ್‌ ಬಳಿಕ ರಾಜು ಕಾಗೆ ದಂಗೆ

  • ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

    ಬೈಕ್ ಟ್ಯಾಕ್ಸಿಗೆ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು

    ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ (Bike Taxi) ನಿಷೇಧ ಸಂಬಂಧ ಹೈಕೋರ್ಟ್ ಆದೇಶದ ಬಳಿಕ ಆರ್‌ಟಿಒ ಬೈಕ್ ಟ್ಯಾಕ್ಸಿ ವಿರುದ್ಧ ಸಮರ ಸಾರಿದೆ. ಆದರೆ ಬೈಕ್ ಟ್ಯಾಕ್ಸಿ ನಿಷೇಧ ವಿಚಾರವಾಗಿ ಪರ ವಿರೋಧ ಚರ್ಚೆಗಳು ಜೋರಾಗಿದ್ದು, ಈ ಮಧ್ಯೆ ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದ ಉದ್ಯಮಿ ಮೋಹನ್ ದಾಸ್ ಪೈ (Mohan Das Pai) ವಿರುದ್ಧ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ದೂರು ದಾಖಲು ಮಾಡಿದೆ.

    ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಇಂದು ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಮಾತನಾಡಿದ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ, ಕಳೆದ ಏಪ್ರಿಲ್‌ನಲ್ಲಿ ಹೈಕೋರ್ಟ್ ಬೈಕ್ ಟ್ಯಾಕ್ಸಿ ರದ್ದು ಮಾಡಿ ಆದೇಶ ಮಾಡಿದೆ. ಆದರೂ ಉಲ್ಲಂಘನೆ ಮಾಡಿ ಪರೋಕ್ಷವಾಗಿ ಬೈಕ್ ಟ್ಯಾಕ್ಸಿ ನಡೆಸಲಾಗುತ್ತಿದೆ. ಈ ಮಧ್ಯೆ ಮೋಹನ್ ದಾಸ್ ಪೈ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವವರು ಬೈಕ್ ಟ್ಯಾಕ್ಸಿ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. ಇವರಿಗೆ ಕಾನೂನಿನ ಕನಿಷ್ಠ ಜ್ಞಾನ ಇಲ್ಲವೇ? ನ್ಯಾಯಾಲಯದ ಆದೇಶ ಇದ್ದರೂ ಬೈಕ್ ಟ್ಯಾಕ್ಸಿ ಪರ ಟ್ವೀಟ್ ಮಾಡಿ ಪ್ರವೋಕ್ ಮಾಡಿದ್ದಾರೆ. ಬನ್ನಿ ಚರ್ಚೆ ಮಾಡೋಣ. ಬೈಕ್ ಟ್ಯಾಕ್ಸಿಯಿಂದ ಏನೆಲ್ಲಾ ಸಮಸ್ಯೆಗಳು ಆಗುತ್ತೆ ಎಂದು ಹೇಳುತ್ತೇವೆ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

    ಇನ್ನೂ ಕೆಲವು ಬೈಕ್ ಟ್ಯಾಕ್ಸಿ ಚಾಲಕರು, ಫ್ರೀಡಂ ಪಾರ್ಕ್ ಬಿಟ್ಟು ಬೇರೆಲ್ಲೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂಬುದು ಗೊತ್ತಿದ್ದರೂ, ವಿಧಾನಸೌಧದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದು ಕಾನೂನಿನ ಉಲ್ಲಂಘನೆ. ಟ್ವೀಟ್ ಮಾಡಿದ ಮೋಹನ್ ದಾಸ್ ಪೈ ಹಾಗೂ ಪ್ರತಿಭಟನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ದೂರು ನೀಡಿದ್ದೇನೆ. ಈಗಾಗಲೇ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ಇದನ್ನೂ ಓದಿ: ಮಳೆ ಅಬ್ಬರ – ಮುರುಡೇಶ್ವರದಲ್ಲಿ ಕಡಲ ತೀರಕ್ಕೆ ನಿಷೇಧ

    ಬೈಕ್ ಟ್ಯಾಕ್ಸಿ ನಿಂತಮೇಲೆ ಆಟೋದವರು ಹೆಚ್ಚು ಹಣ ಪಡೆಯುತ್ತಿದ್ದಾರೆ ಎಂದು ಸುದ್ದಿ ಹಬ್ಬಿಸಲಾಗುತ್ತಿದೆ. ಈ ರೀತಿ ಇದ್ದರೆ ರಿಯಾಲಿಟಿ ಚೆಕ್ ಆಗಲಿ, ಅವರ ವಿರುದ್ಧ ಕ್ರಮ ಆಗಲಿ. ದರ ನಿಗದಿ ಡ್ರೈವರ್‌ಗಳ ಕೈಯಲ್ಲಿ ಇಲ್ಲ. ಎಲ್ಲವೂ ಆಪ್ ಕಾರ್ಪೋರೇಟ್ ಕಂಪನಿಗಳ ಕೈಯಲ್ಲಿದೆ. ಸರ್ಕಾರದ ದರವನ್ನ ಆರ್‌ಟಿಒ ಜಾರಿ ಮಾಡಲಿ. ಅದರ ಉದ್ದೇಶ ನಿಜಕ್ಕೂ ಇದ್ದರೆ ಸಾರಿಗೆ ಇಲಾಖೆ ಕಾರ್ಪೋರೇಟ್ ಕಂಪನಿಗಳ ವಿರುದ್ಧ ದೂರು ನೀಡಲಿ. ಕಾನೂನು ವಿರುದ್ಧ ಹೇಳಿಕೆ ಕೊಡುವವರ ವಿರುದ್ಧ ಕ್ರಮ ಆಗಬೇಕು. ನ್ಯಾಯಾಲಯದ ಆದೇಶ ಇರುವುದರಿಂದ ಯಾವ ಪ್ರತಿಭಟನೆ ಆಗಿಲ್ಲ. ಈಗ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಬೈಕ್ ಟ್ಯಾಕ್ಸಿಯವರು ಸುಪ್ರೀಂ ಕೋರ್ಟ್‌ಗೆ ಹೋಗಲಿ, ಅಲ್ಲಿ ಡಿಸೈಡ್ ಆಗಲಿ. ಆದರೆ ಕಾರ್ಪೋರೇಟ್ ಕಂಪನಿಯವರ ಮಾತು ಕೇಳಿ ಬೈಕ್ ಟ್ಯಾಕ್ಸಿ ಓಡಿಸೋರು ಪ್ರತಿಭಟನೆ ಮಾಡುತ್ತಿದ್ದಾರೆ. ಬೈಕ್ ಟ್ಯಾಕ್ಸಿ ಓಡಿಸುವವರು ಹುಷಾರಾಗಿರಿ. ಕಂಪನಿಯವರು ಪ್ರೇರಣೆ ಕೊಟ್ಟು ನಿಮ್ಮನ್ನು ಕ್ರಿಮಿನಲ್‌ಗಳನ್ನಾಗಿ ಮಾಡುತ್ತಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನ ಬೀದಿ-ಬೀದಿಗಳಲ್ಲಿ ಮಾತಾಡ್ತಿದ್ದಾರೆ: ಹೆಚ್‌ಡಿಕೆ

  • ಕರ್ನಾಟಕದಲ್ಲಿ 67% ಬಡವರಿದ್ದಾರಾ? – ಸಿಎಂ ಟ್ವೀಟ್‌ಗೆ ಮೋಹನ್ ದಾಸ್ ಪೈ ಕಿಡಿ

    ಕರ್ನಾಟಕದಲ್ಲಿ 67% ಬಡವರಿದ್ದಾರಾ? – ಸಿಎಂ ಟ್ವೀಟ್‌ಗೆ ಮೋಹನ್ ದಾಸ್ ಪೈ ಕಿಡಿ

    ಬೆಂಗಳೂರು: ಕರ್ನಾಟಕದಲ್ಲಿ 67% ಕನ್ನಡಿಗರು ಬಡತನದಲ್ಲಿದ್ದಾರಾ ಎಂಬ ಪ್ರಶ್ನೆಯನ್ನು ಉದ್ಯಮಿ ಮೋಹನ್ ದಾಸ್ ಪೈ ಎತ್ತಿದ್ದಾರೆ. ಸಿಎಂ ಪ್ರಕಾರ 67% ರಾಜ್ಯದಲ್ಲಿ ಅತಿ ಕಡುಬಡವರು ಇದ್ದಾರೆ. ಇದು ಕರ್ನಾಟಕಕ್ಕೆ ಶೇಮ್. ಆದರೆ ಭಾರತದ ಜಿಡಿಪಿ ಪ್ರಕಾರ ಕರ್ನಾಟಕ ಶ್ರೀಮಂತ ರಾಜ್ಯ ಎಂದು ವ್ಯಂಗ್ಯವಾಡಿದ್ದಾರೆ.

    ಅನ್ನಭಾಗ್ಯದ ಲಾಭ ಬಡ ಜನರಿಗೆ ತಲುಪುತ್ತಿದೆ. ಬಡತನ ಮುಕ್ತ ಕರ್ನಾಟಕ ಎಂಬ ಮುಖ್ಯಮಂತ್ರಿಗಳ ಟ್ವೀಟ್‍ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಸಿದ್ದರಾಮಯ್ಯ ಸರ್ಕಾರ ವಿಪರೀತವಾಗಿ ಸಾಲ ಮಾಡುತ್ತಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಇದಕ್ಕೆ ಪೂರಕವಾಗಿಯೇ ಡಿಸಿಎಂ ಮಾತಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

    ಸಾಲ ಸೋಲಾ ಮಾಡಿಯಾದರು ಬೆಂಗಳೂರು ಜನಕ್ಕೆ ರಿಲೀಫ್ ಕೊಡ್ತೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿರೋದು ಚರ್ಚೆಗೆ ಗ್ರಾಸವಾಗಿದೆ. 5 ಕೆಜಿ ಫ್ರೀ ಅಕ್ಕಿಗಿಂತ ಮೂಲಭೂತ ಸೌಕರ್ಯ, ಒಳ್ಳೆಯ ಉದ್ಯೋಗ ಕೊಡಿ. ನಿಜವಾದ ಬಡವರಿಗೆ ಸಬ್ಸಿಡಿ ಕೊಡಿ. 67% ಕನ್ನಡಿಗರಿಗಲ್ಲ ಎಂದು ಅನ್ನಭಾಗ್ಯ ಯೋಜನೆಯನ್ನು ಅವರು ವಿರೋಧಿಸಿದ್ದಾರೆ.

    ಡಿ.ಕೆ ಶಿವಕುಮಾರ್‌ ಅವರು, ಸಾಲ ಸೂಲ ಏನಾದರೂ ಮಾಡಿ ಬೆಂಗಳೂರು ಜನಕ್ಕೆ ರಿಲೀಫ್ ಕೊಡ್ತೇವೆ. ಟನಲ್ ಆಗೇ ಆಗುತ್ತೇ. ಹೊಸ ಮೆಟ್ರೋ ಏನೇ ಮಾಡಿದ್ರು ಅದರ ಜೊತೆ ಎಲಿವೇಟೇಡ್ ಕಾರಿಡರ್ ಕೂಡ ನಾವು ಮಾಡ್ತೇವೆ. 300 ಕಿಮೀ ರಸ್ತೆ. ಕಾಲುವೆ ಪಕ್ಕದಲ್ಲಿ 50 ಅಡಿ ಬಿಟ್ಟು ರಸ್ತೆ ನಿರ್ಮಾಣ ಮಾಡ್ತೇವೆ. ಅದರ ಬದಲಾಗಿ ಅವರಿಗೆ ಟಿಡಿಆರ್ ಕೊಟ್ಟು ಅಲ್ಲಿ ರೋಡ್ ಮಾಡ್ತೇವೆ ಎಂದು ಹೇಳಿದ್ದರು.

  • ಮಣಿಪಾಲದ ಹಿರಿಯ ಚೇತನ, ಉದಯವಾಣಿ ಸಂಸ್ಥಾಪಕ ಮೋಹನ್‌ ದಾಸ್‌ ಪೈ ನಿಧನ

    ಮಣಿಪಾಲದ ಹಿರಿಯ ಚೇತನ, ಉದಯವಾಣಿ ಸಂಸ್ಥಾಪಕ ಮೋಹನ್‌ ದಾಸ್‌ ಪೈ ನಿಧನ

    ಉಡುಪಿ: ʻಉದಯವಾಣಿʼ ಸಂಸ್ಥಾಪಕ ಹಾಗೂ ಮಣಿಪಾಲದ ಪೈ ಕುಟುಂಬದ ಹಿರಿಯರಾದ ಮೋಹನ್‌ ದಾಸ್‌ ಪೈ (89) ಅವರು ನಿಧನರಾಗಿದ್ದಾರೆ.

    ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಇಂದು ಕೊನೆಯುಸಿರೆಳೆದರು. ಮಣಿಪಾಲದ ಪೈ ಕುಟುಂಬದ ಹಿರಿಯರಾದ ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದರು.

    ಮೋಹನ್ ದಾಸ್ ಪೈ ಅವರು ಮಣಿಪಾಲದ ಶಿಲ್ಪಿ ಡಾ. ಟಿ.ಎಮ್.ಎ ಪೈ ಅವರ ಹಿರಿಯ ಪುತ್ರರು. ಡಾ. ಟಿಎಂಎ ಪೈ ಫೌಂಡೇಶನ್, ಎಂಜಿಎಂ ಕಾಲೇಜ್ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ಮೋಹನ್‌ ದಾಸ್‌ ಪೈ ಅವರ ಪಾರ್ಥಿವ ಶರೀರವನ್ನು ಎಂಜಿಎಂ ಕಾಲೇಜಿನಲ್ಲಿ ಸೋಮವಾರ ಅಂತಿಮ ದರ್ಶನಕ್ಕೆ ಇಡಲಾಗುವುದು. ಇದನ್ನೂ ಓದಿ: ದೊಡ್ಡಗೌಡರ ಮೇಲೆ ಯಾರದ್ದೋ ಕೆಟ್ಟ ಕಣ್ಣು ಬಿದ್ದಿದೆ – ಹೆಚ್‌ಡಿಕೆ, ರೇವಣ್ಣ ಕಣ್ಣೀರು

    ಹಿರಿಯ ಉದ್ಯಮಿ, ಉದಯವಾಣಿ ದಿನಪತ್ರಿಕೆಯ ಸಂಸ್ಥಾಕರು ಆಗಿದ್ದ ಟಿ. ಮೋಹನದಾಸ್ ಪೈ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

    ಮೋಹನದಾಸ ಪೈ ಅವರು ನಿಧನ ಹೊಂದಿದ್ದಾರೆ ಎನ್ನುವ ವಿಷಯ ನನಗೆ ಆಘಾತ ಉಂಟು ಮಾಡಿದೆ. ಹಿರಿಯ ಚೇತನರು, ಎಲ್ಲರ ಮಾರ್ಗದರ್ಶಕರಂತಿದ್ದ ಟಿ. ಮೋಹನ್ ದಾಸ್ ಪೈ ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ದವರಿಗೆ ಪೈ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಕೋರಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ

    Live Tv
    [brid partner=56869869 player=32851 video=960834 autoplay=true]

  • ಟ್ಯಾಕ್ಸ್ ಟೆರರಿಸಂ ದೇಶದ ಸಾಧನೆಯನ್ನು ಕುಗ್ಗಿಸುತ್ತಿದೆ: ಇನ್ಫೋಸಿಸ್ ಮಾಜಿ ನಿರ್ದೇಶಕ

    ಟ್ಯಾಕ್ಸ್ ಟೆರರಿಸಂ ದೇಶದ ಸಾಧನೆಯನ್ನು ಕುಗ್ಗಿಸುತ್ತಿದೆ: ಇನ್ಫೋಸಿಸ್ ಮಾಜಿ ನಿರ್ದೇಶಕ

    ನವದೆಹಲಿ: ಕೆಫೆ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರ ಸಾವಿನ ಬೆನ್ನಲ್ಲೇ ಉದ್ಯಮಿಗಳು ಟ್ಯಾಕ್ಸ್ ಟೆರರಿಸಂ ಕುರಿತು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ.

    ಇದೀಗ ಉದ್ಯಮಿ ಹಾಗೂ ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದು, ಉದ್ಯಮಿಗಳು ಟ್ಯಾಕ್ಸ್ ಟೆರರಿಸಂನಿಂದ ಬೇಸತ್ತು ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

    ಟ್ಯಾಕ್ಸ್ ಟೆರರಿಸಂ ಉದ್ಯಮಿಗಳನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ ಎಂಬ ಮಾತುಗಳು ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ.ಸಿದ್ಧಾರ್ಥ್ ಅವರ ಸಾವಿನ ನಂತರ ಕೇಳಿ ಬಂದಿತ್ತು. ಇದೀಗ ಮೋಹನ್ ದಾಸ್ ಪೈ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಸಹ ಈ ಕುರಿತು ಅಸಮಾಧಾನ ಹೊರ ಹಾಕಿದ್ದು, ರಾಷ್ಟ್ರೀಯ ವಾಹಿನಿಯೊಂದಕ್ಕೆ ನೀಡಿದ ಸಂರ್ದಶದಲ್ಲಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

    ತೆರಿಗೆ ಭಯೋತ್ಪಾದನೆಯು ದೇಶದಲ್ಲಿನ ವ್ಯಾಪಾರದ ಸರಳತೆಗೆ ಅಪಾಯವನ್ನು ತಂದೊಡ್ಡಿದೆ. ಇದನ್ನು ಕೊನೆಗೊಳಿಸಲು ಸರ್ಕಾರ ಭರವಸೆ ನೀಡಿದರೂ ಅನಗತ್ಯ ತೆರಿಗೆ ಕುರಿತು ದೂರುಗಳು ಇನ್ನೂ ವ್ಯಾಪಕವಾಗಿವೆ. ಇದು ದೇಶದ ಸಾಧನೆಯನ್ನು ಕುಗ್ಗಿಸುತ್ತದೆ ಎಂದು ಮೋಹನ್ ದಾಸ್ ಪೈ ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಪೈ ಅವರು ತಮ್ಮ ಜೀವನದಲ್ಲಾದ ಘಟನೆ ಮೂಲಕ ವಿವರಿಸಿದ್ದು, ಕಿರಣ್ ಎಂಬ ಸರ್ಕಾರಿ ಅಧಿಕಾರಿ ಸಂದೇಶ ಕಳುಹಿಸಿದ್ದರು. ಇದಕ್ಕೆ ನಾನು ಉತ್ತರಿಸಿ, ಇದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದೆ. ಇದು ಅಧಿಕಾರಿಗಳಲ್ಲಿ ಯಾವ ರೀತಿಯ ಸಂಸ್ಕøತಿ ಬೆಳೆದಿದೆ ಎಂಬುದನ್ನು ತೋರಿಸುತ್ತದೆ. ಇದನ್ನು ಯಾರು ಯೋಚಿಸುತ್ತಾರೆ, ಅವರು ಹುಟ್ಟಿರುವುದೇ ನಮ್ಮನ್ನು ಆಳುವುದಕ್ಕಾಗಿ ಎಂಬ ಅಹಂನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಘಟನೆ ಕುರಿತು ಅಧಿಕಾರಿ ಮತ್ತೆ ಪ್ರತ್ಯುತ್ತರ ನೀಡಿದ್ದು, ಇನ್ಫೋಸಿಸ್‍ನ ಸಹೋದ್ಯೋಗಿಯನ್ನು ಕರೆದು ನನ್ನನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಬೆದರಿಕೆ ಹಾಕಿದ್ದರು ಎಂದು ಘಟನೆಯನ್ನು ವಿವರಿಸಿದ್ದಾರೆ. ಇಂತಹ ವರ್ತನೆಗಳನ್ನು ಖಂಡಿಸಬೇಕಿದೆ. ಈ ಮೂಲಕ ತೆರಿಗೆ ಭಯೋತ್ಪಾದನೆಯನ್ನು ತೊಲಗಿಸಬೇಕಿದೆ. ಆದರೆ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಈ ಕುರಿತು ಭರವಸೆ ನೀಡಿದ್ದರು. ಅಲ್ಲದೆ, ಇದು 2014ರ ಎನ್‍ಡಿಎ ಪ್ರಣಾಳಿಕೆಯಲ್ಲಿಯೂ ಇದೆ. ಕಳೆದ 5 ವರ್ಷಗಳಿಂದ ಇದು ದ್ವಿಗುಣಗೊಂಡಿದ್ದು, 6 ಲಕ್ಷ ಕೋಟಿ ರೂ. ಸಂಗ್ರಹವಾಗುತ್ತಿದೆ. ಹೀಗಾಗಿ ಟ್ಯಾಕ್ಸ್ ಟೆರರಿಸಂ ಕಡಿಮೆಯಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಕಳೆದ ವರ್ಷದ ಬಜೆಟ್‍ನಲ್ಲಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸದೆ ಹಣಕಾಸು ಸಚಿವರನ್ನು ದೋಷಿಸಿದ್ದರು ಎಂದು ಪೈ ವಿವರಿಸಿದ್ದಾರೆ.

    ಈ ಟ್ಯಾಕ್ಸ್ ಟೆರರಿಸಂ ತೊಲಗಿಸಬೇಕಾದಲ್ಲಿ ಸರ್ಕಾರ ಹಾಗೂ ಕಂಪನಿಗಳ ಸಿಇಓಗಳ ನಡುವೆ ಆಗಾಗ ಸಭೆ ಅಥವಾ ಮಾತುಕತೆ ನಡೆಸಬೇಕು. ಆಗ ಉದ್ಯಮಿಗಳ ಸಮಸ್ಯೆಗಳನ್ನು ತಿಳಿಯಬಹುದು ಎಂದು ಹೇಳಿದ್ದಾರೆ.

    ಕೆಫೆ ಕಾಫಿ ಡೇ ಸಿದ್ಧಾರ್ಥ್ ಅವರು ಸಾವನ್ನಪ್ಪುವುದಕ್ಕೂ ಮುನ್ನ ತಮ್ಮ ಪತ್ರದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು. ನಮ್ಮ ಶೇರನ್ನು ಎರಡು ವಿವಿಧ ಹಂತಗಳಲ್ಲಿ ಸಲ್ಲಿಸಿ, ನಮ್ಮ ಕಾಫಿಯ ದಿನದ ಶೇರುಗಳ ಸ್ಥಾನವನ್ನು ಪಡೆದುಕೊಂಡಿದ್ದೇವೆ. ಪರಿಷ್ಕೃತ ಆದಾಯ ತೆರಿಗೆಯನ್ನೂ ನಮ್ಮಿಂದ ಸಲ್ಲಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದರು. ಆದಾಯ ತೆರಿಗೆ ಇಲಾಖೆಯು ಈ ಆರೋಪಗಳನ್ನು ತಳ್ಳಿ ಹಾಕಿತ್ತು, ಆದಾಯ ತೆರಿಗೆ ಕಾಯ್ದೆಯ ನಿಬಂಧನೆಗಳ ಪ್ರಕಾರ ಇಲಾಖೆ ಕಾರ್ಯನಿರ್ವಹಿಸಿದೆ ಎಂದು ಪ್ರತಿಕ್ರಿಯಿಸಿತ್ತು.