Tag: Mohan Juneja

  • ಪುನೀತ್ ರಾಜ್ ಕುಮಾರ್ ಪ್ರೇರಣೆ: ಕಣ್ಣುದಾನ ಮಾಡಿ ಮಾದರಿಯಾದ ಮೋಹನ್ ಜುನೇಜ

    ಪುನೀತ್ ರಾಜ್ ಕುಮಾರ್ ಪ್ರೇರಣೆ: ಕಣ್ಣುದಾನ ಮಾಡಿ ಮಾದರಿಯಾದ ಮೋಹನ್ ಜುನೇಜ

    ಇಂದು ಬೆಳಗ್ಗೆ ನಿಧನರಾದ ಹಾಸ್ಯ ನಟ ಮೋಹನ್ ಜುನೇಜ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆ ಮರೆದಿದ್ದಾರೆ ಮೋಹನ್ ಕುಟುಂಬ. ಡಾ.ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಅವರನ್ನು ಪ್ರೇರಣೆಯಾಗಿ ತಗೆದುಕೊಂಡಿದ್ದ ಇವರು, ನೇತ್ರದಾನಕ್ಕೆ ಒಲವು ತೋರಿದ್ದರಂತೆ. ಹಾಗಾಗಿ ಮೋಹನ್ ಅವರ ಕಣ್ಣುಗಳನ್ನು ದಾನ ಮಾಡುವ ಮೂಲಕ ಅವರ ಆಸೆಯನ್ನು ಕುಟುಂಬ ಈಡೇರಿಸಿದೆ. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಈ ಅನಾರೋಗ್ಯದ ನಡುವೆಯೂ ಅವರು ಉಪೇಂದ್ರ ನಟನೆಯ ಕಬ್ಜ ಸೇರಿದಂತೆ ನಾಲ್ಕೈದು ಚಿತ್ರಗಳಲ್ಲಿ ನಟಿಸುತ್ತಿದ್ದರು. ಜೀ ಕನ್ನಡ ವಾಹಿನಿಯ ಹೆಸರಾಂತ ಧಾರಾವಾಹಿ ಹಿಟ್ಲರ್ ಕಲ್ಯಾಣದಲ್ಲೂ ಅವರು ಪಾತ್ರ ನಿರ್ವಹಿಸುತ್ತಿದ್ದರು. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ಕೆಜಿಎಫ್ ಚಾಪ್ಟರ್ ಒಂದು ಮತ್ತು ಎರಡರಲ್ಲೂ ಮೋಹನ್ ಜುನೇಜಾ ವಿಶೇಷ ಪಾತ್ರ ಮಾಡಿದ್ದರು. ಹಾಗಾಗಿ ಹೊಂಬಾಳೆ ಫಿಲ್ಮಸ್ ಮನೋಜ್ ಸೇವೆಯನ್ನು ನೆನಪಿಸಿಕೊಂಡಿದೆ. ‘ಕನ್ನಡದ ಖ್ಯಾತ ಹಾಸ್ಯ ನಟರಾದ ಮೋಹನ್ ಜುನೇಜಾ ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಮ್ಮ ಕೆಜಿಎಫ್ ಚಿತ್ರತಂಡದ ಜತೆಗಿನ ಅವರ ಅವಿನಾಭಾವ ಸಂಬಂಧ ಮರೆಯಲಾರೆವು’ ಎಂದು ಟ್ವಿಟ್ ಮಾಡಿದೆ.  ಇದನ್ನೂ ಓದಿ : ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ವಾಲ್ ಪೋಸ್ಟರ್ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ ಅವರು ಗಣೇಶ್ ನಟನೆಯ ಚೆಲ್ಲಾಟ ಚಿತ್ರದಿಂದ ಫೇಮಸ್ ಆದರು. ಜೋಗಿ, ಕಬ್ಜ, ಜೇಮ್ಸ್ ಹೀಗೆ ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ಕೆಜಿಎಫ್ ಚಿತ್ರದಲ್ಲೂ ಅವರು ಗುರುತಿಸಿಕೊಳ್ಳುವಂತಹ ಪಾತ್ರ ಮಾಡಿದ್ದರು. ಕಿರುತೆರೆ ಮತ್ತು ಸಿನಿಮಾ ಎರಡೂ ರಂಗದಲ್ಲೂ ಸಕ್ರೀಯರಾಗಿದ್ದರು.

  • ನಿಧನರಾದ ಮೋಹನ್ ಜುನೇಜಾ ಹೂವಿನ ಹಾದಿಯಲ್ಲಿ ನಡೆದು ಬಂದವರಲ್ಲ

    ನಿಧನರಾದ ಮೋಹನ್ ಜುನೇಜಾ ಹೂವಿನ ಹಾದಿಯಲ್ಲಿ ನಡೆದು ಬಂದವರಲ್ಲ

    ಕೆಜಿಎಫ್ ಸೇರಿದಂತೆ ಐನೂರಕ್ಕೂ ಹೆಚ್ಚು ಸಿನಿಮಾಗಳು, ಹಲವು ಕಿರುತೆರೆ ಧಾರಾವಾಹಿಗಳು ಮತ್ತು ರಂಗಭೂಮಿಯಲ್ಲಿ ಅನೇಕ ನಾಟಕಗಳಲ್ಲಿ ನಟಿಸಿರುವ ಹಾಸ್ಯ ಕಲಾವಿದ ಮೋಹನ್ ಜುನೇಜಾ ಅವರು ನಡೆದು ಬಂದ ಹಾದಿ, ಹೂವಿನದಾರಿ ಆಗಿರಲಿಲ್ಲ. ಸ್ಥಿತಿವಂತ ಕುಟುಂಬದಲ್ಲಿ ಬೆಳೆದು ಬಂದರೂ, ಮೋಹನ್ ಮಾತ್ರ ಕಷ್ಟದ ಹಾದಿಯನ್ನೇ ಆಯ್ಕೆ ಮಾಡಿಕೊಂಡರು. ಇದನ್ನೂ ಓದಿ : ಪ್ರಶಾಂತ್ ನೀಲ್ -ಜ್ಯೂ.ಎನ್‌ಟಿಆರ್ ವಿವಾಹ ವಾರ್ಷಿಕೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

    ಶಾಲಾ ದಿನಗಳಲ್ಲಿ ಉತ್ತಮ ಅಂಕಗಳನ್ನೇ ಪಡೆಯುತ್ತಿದ್ದ ಮೋಹನ್ ಜುನೇಜಾ ಅವರ ತಂದೆಗೆ ಮಗನು ಇಂಜಿನಿಯರ್ ಆಗಬೇಕು ಎನ್ನುವುದು ಆಸೆಯಾಗಿತ್ತಂತೆ. ಆದರೆ, ಮೋಹನ್ ಕಂಡ ಕನಸೇ ಬೇರೆ. ಶಾಲಾ ಕಾಲೇಜುಗಳ ಹತ್ತಿರದಲ್ಲೇ ಇರುತ್ತಿದ್ದ ಚಿತ್ರಮಂದಿರಗಳಿಗೆ ಸಿನಿಮಾ ನೋಡಲು ಹೋಗುತ್ತಿದ್ದರು. ಮಗನು ತನ್ನ ಕನಸಿನಂತೆ ಇಂಜಿನಿಯರ್ ಆಗಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ಅವರ ತಂದೆಯು ಹಣ ಕೊಡುವುದನ್ನೇ ನಿಲ್ಲಿಸಿದ್ದರಂತೆ. ಹಾಗಾಗಿ ಅವರು ಹಣಕ್ಕಾಗಿ ಬೇರೆ ಬೇರೆ ಕೆಲಸಗಳನ್ನು ಮಾಡಬೇಕಾಗಿ ಬಂದಿತ್ತು. ಇದನ್ನೂ ಓದಿ : ಯಶ್ ಮುಂದಿನ ಚಿತ್ರ ಯಾರ ಜೊತೆ? ಹೊರಬಿತ್ತು ಬಿಗ್ ನ್ಯೂಸ್

    ಕೆಲಸ ಹುಡುಕಿಕೊಂಡು ಗೋವಾಗೂ ಹೋಗಿದ್ದರಂತೆ ಮೋಹನ್, ಅಲ್ಲಿ ಕೆಲ ತಿಂಗಳ ಕಾಲ ಸೆಕ್ಯೂರಿಟಿ ಗಾಡ್ ಆಗಿಯೂ ಕೆಲಸ ಮಾಡಿದ್ದಾರೆ. ಫೋಟೋಗ್ರಾಫರ್ ಹಾಗೂ ಟ್ರೈಲರ್ ಅಂಗಡಿಯಲ್ಲಿ ಗುಂಡಿ ಹೊಲಿಯುವುದಕ್ಕೂ ಹೋಗಿದ್ದುಂಟು. ಹಾಗೇ ರಂಗಭೂಮಿಯತ್ತ ಆಸಕ್ತಿವಹಿಸಿ ಅದರತ್ತ ನಡೆದು ಹೋದರು. ಬಿ.ಸುರೇಶ ಸೇರಿದಂತೆ ಹಲವು ನಿರ್ದೇಶಕರ ಬಳಿ ನಾಟಕಗಳನ್ನೂ ಮಾಡಿದ್ದಾರೆ. ಇದನ್ನೂ ಓದಿ : ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಮುಂದೆ ವಠಾರ ಧಾರಾವಾಹಿಯ ಮೂಲಕ ಸೀರಿಯಲ್ ಪ್ರಪಂಚಕ್ಕೂ ಕಾಲಿಟ್ಟರು. ವಠಾರ ಧಾರಾವಾಹಿ ಅವರಿಗೆ ಹೆಸರು ತಂದುಕೊಟ್ಟಿತ್ತು. ಅಲ್ಲಿಂದ ಅನೇಕ ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ. ಸಾವಿರಾರು ಕಂತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಿರುತೆರೆಯಲ್ಲಿ ನಟಿಸುತ್ತಲೇ ಸಿನಿಮಾ ರಂಗದತ್ತಲೂ ಮುಖ ಮಾಡಿದರು.

    ವಾಲ್ ಪೋಸ್ಟರ್ ಸಿನಿಮಾದ ಮೂಲಕ ಸಿನಿ ರಂಗಕ್ಕೆ ಎಂಟ್ರಿ ಕೊಟ್ಟ ಅವರು ಗಣೇಶ್ ನಟನೆಯ ಚೆಲ್ಲಾಟ ಚಿತ್ರದಿಂದ ಫೇಮಸ್ ಆದರು. ಜೋಗಿ, ಕಬ್ಜ, ಜೇಮ್ಸ್ ಹೀಗೆ ಐನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆ ಆಗಿರುವ ಕೆಜಿಎಫ್ ಚಿತ್ರದಲ್ಲೂ ಅವರು ಗುರುತಿಸಿಕೊಳ್ಳುವಂತಹ ಪಾತ್ರ ಮಾಡಿದ್ದರು. ಕಿರುತೆರೆ ಮತ್ತು ಸಿನಿಮಾ ಎರಡೂ ರಂಗದಲ್ಲೂ ಸಕ್ರೀಯರಾಗಿದ್ದರು.

  • ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ಇನ್ನಿಲ್ಲ

    ಬೆಂಗಳೂರು: ಸ್ಯಾಂಡಲ್‍ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ

    ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಗಂಗೂಲಿ, ಅಮಿತ್ ಶಾ ಭೇಟಿ – ಬಿಜೆಪಿ ಸೇರ್ತಾರಾ ದಾದಾ?

    ಮೋಹನ್ ಜೂನೇಜ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಿರುತೆರೆಯ `ವಠಾರ’ ಸೀರಿಯಲ್‍ನಿಂದ ಜನಪ್ರಿಯತೆ ಗಳಿಸಿದ್ದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು ಹಾಸ್ಯನಟನಾಗಿ ರಂಜಿಸಿದ್ದ ಮೋಹನ್ ಜೂನೇಜ ಅವರಿಗೆ `ಚೆಲ್ಲಾಟ’ ಚಿತ್ರದ ಮಧುಮಗನ ಪಾತ್ರ ತುಂಬಾ ಖ್ಯಾತಿ ತಂದುಕೊಟ್ಟಿತ್ತು. ಇತ್ತೀಚೆಗಷ್ಟೇ ಬಿಡುಗಡೆಯಾದ ಕೆಜಿಎಫ್ ಭಾಗ ಒಂದು ಮತ್ತು ಎರಡರಲ್ಲೂ ಪೋಷಕ ನಟನಾಗಿ ಮೋಹನ್ ಜೂನೇಜ ಅವರು ಅಭಿನಯಿಸಿದ್ದರು.

    ಸ್ಯಾಂಡಲ್‍ವುಡ್‍ನ ಪ್ರಮುಖ ನಾಯಕ ನಟರ ಜೊತೆ ತೆರೆ ಹಂಚಿಕೊಂಡಿರುವ ಮೋಹನ್ ಜೂನೇಜ ಅವರು ನವಗ್ರಹ, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇದೀಗ ಪತ್ನಿ ಕುಸುಮಾ, ಇಬ್ಬರು ಪುತ್ರರು ಅಕ್ಷಯ್, ಅಶ್ವಿನ್‌ರನ್ನು ಅಗಲಿದ್ದಾರೆ  ಇದನ್ನೂ ಓದಿ: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ – 5 ವಾರಗಳಲ್ಲಿ ಎರಡನೇ ಬಾರಿ ಹೇರಿಕೆ

    ಬೆಂಗಳೂರಿನ ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ವಾಸಿಸುತ್ತಿದ್ದ ಮೋಹನ್ ಜುನೇಜ ಮೃತದೇಹವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು, ಕುಟುಂಬಸ್ಥರು, ಬಂಧುಗಳು, ಕಲಾವಿದರು ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.