Tag: Mohsin Naqvi

  • ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಏಪ್ಯಾ ಕಪ್ ಗೆದ್ದ ಭಾರತಕ್ಕೆ ವಿಶ್, ಬಳಿಕ ಟ್ವಿಸ್ಟ್ ಕೊಟ್ಟ ನಖ್ವಿ!

    ಮುಂಬೈ: ಏಷ್ಯಾಕಪ್ (Asia Cup) ಟ್ರೋಫಿ ಹಿಂದಿರುಗಿಸುವಂತೆ ಬಿಸಿಸಿಐ (BCCI) ಇಮೇಲ್ ಪತ್ರಕ್ಕೆ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqwi) ಪ್ರತಿಕ್ರಿಯಿಸಿದ್ದಾರೆ. ಟ್ರೋಫಿ ಗೆದ್ದ ಟೀಂ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿರುವ ನಖ್ವಿ ಕೊನೆಯಲ್ಲಿ ಟ್ವಿಸ್ಟ್ ಕೊಟ್ಟಿದ್ದಾರೆ. `ಬಿಸಿಸಿಐ ಅಥವಾ ತಂಡದ ಯಾರಾದ್ರೂ ಬಂದು ಟ್ರೋಫಿ ಪಡೆಯಬಹುದು’ ಅಂತ ಹೇಳಿದ್ದಾರೆ.

    ಮಂಗಳವಾರ (ಅ.21) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮೊಹ್ಸಿನ್ ನಖ್ವಿಗೆ ಏಷ್ಯಾ ಕಪ್ ಟ್ರೋಫಿ ಹಸ್ತಾಂತರಿಸುವಂತೆ ಇಮೇಲ್ ಮೂಲಕ ಪತ್ರ ಬರೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಏಪ್ಯಾ ಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಬಿಸಿಸಿಐ ಅಥವಾ ಭಾರತ ತಂಡದ ಯಾರಾದರೂ ಬಂದು ತೆಗೆದುಕೊಂಡು ಹೋಗಬಹುದು. ಅಲ್ಲದೇ ಭಾರತ ತಂಡಕ್ಕೆ ಏಷ್ಯಾ ಕಪ್ ಟ್ರೋಫಿಯನ್ನು ನೀಡಬೇಕೆಂದು ಬಯಸಿದರೆ, ದುಬೈನಲ್ಲಿ ಇನ್ನೊಮ್ಮೆ ಪ್ರಶಸ್ತಿ ವಿತರಿಸಲು ಕಾರ್ಯಕ್ರಮ ಆಯೋಜಿಸುವಂತೆ ಕೇಳಿಕೊಂಡಿದ್ದಾರೆ.ಇದನ್ನೂ ಓದಿ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮೂಲಗಳ ಪ್ರಕಾರ, ಭಾರತಕ್ಕೆ ನಾನು ಟ್ರೋಫಿ ನೀಡುವುದಿಲ್ಲ, ಅದರ ಬದಲು ನವೆಂಬರ್ ಮೊದಲ ವಾರದಲ್ಲಿ ಕಾರ್ಯಕ್ರಮ ಆಯೋಜಿಸುತ್ತೇವೆ. ಭಾರತ ತಂಡದ ಯಾರಾದರೂ ಬಂದು ಟ್ರೋಫಿ ಪಡೆಯಬಹುದು ಎಂದು ತಿಳಿಸಿದ್ದಾರೆ. ನಖ್ವಿ ಪ್ರತಿಕ್ರಿಯೆನ್ನು ಬಿಸಿಸಿಯ ನಿರಾಕರಿಸಿದ್ದು, ನಮಗೆ ಏಷ್ಯಾ ಕಪ್ ಟ್ರೋಫಿಯೇ ಬೇಡ ಎನ್ನುವ ನಿರ್ಧಾರ ಕೈಗೊಂಡಿದೆ ಎನ್ನಲಾಗುತ್ತಿದೆ. ಜೊತೆಗೆ ಈ ಕುರಿತು ಐಸಿಸಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

    ಕಳೆದ ಸೆಪ್ಟೆಂಬರ್ 28ರಂದು ನಡೆದ ಟಿ೨೦ ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ, ಪಾಕ್ ವಿರುದ್ಧ ೫ ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್ ಟ್ರೋಫಿ ದುಬೈನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.ಇದನ್ನೂ ಓದಿ: ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

  • ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸಿ – ಮೊಹ್ಸಿನ್‌ ನಖ್ವಿಗೆ ಬಿಸಿಸಿಐ ವಾರ್ನಿಂಗ್‌

    ಮುಂಬೈ: ಏಷ್ಯಾ ಕಪ್‌ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸುವಂತೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ (ACC) ಅಧ್ಯಕ್ಷ ಹಾಗೂ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮೊಹ್ಸಿನ್‌ ನಖ್ವಿಗೆ (Mohsin Naqvi) ಅಧಿಕೃತವಾಗಿ ಇ-ಮೇಲ್‌ ಪತ್ರ ಬರೆದಿದೆ.

    ಕಳೆದ ಸೆಪ್ಟೆಂಬರ್‌ 28ರಂದು ನಡೆದ ಟಿ20 ಏಷ್ಯಾಕಪ್‌ (Asia Cup ) ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ, ಪಾಕ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು. ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವಂತೆ ಹೇಳಿದೆ.

    ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಬಿಸಿಸಿಐ ನಖ್ವಿ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅವರ ಕಡೆಯಿಂದ ಯಾವುದೇ ಉತ್ತರ ಬರದಿದ್ದರೆ, ಐಸಿಸಿಗೆ (ICC) ದೂರು ನೀಡುವುದಾಗಿ ಎಚ್ಚರಿಸಿದೆ.

    ಟ್ರೋಫಿ ಎಲ್ಲಿದೆ?
    ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್‌ ಟ್ರೋಫಿ ದುಬೈನ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

    ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.

  • ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಭಾರತಕ್ಕೆ ಏಷ್ಯಾ ಕಪ್‌ ನೀಡದ ಸಚಿವ ನಖ್ವಿಗೆ ಪಾಕ್‌ನಲ್ಲಿ ಚಿನ್ನದ ಪದಕ ನೀಡಿ ಸನ್ಮಾನಕ್ಕೆ ನಿರ್ಧಾರ

    ಇಸ್ಲಾಮಾಬಾದ್: ಏಷ್ಯಾ ಕಪ್‌ನಲ್ಲಿ (Asia Cup 2025) ಭಾರತದ ವಿರುದ್ಧದ ನಿಲುವಿಗಾಗಿ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಖ್ಯಸ್ಥ ಹಾಗೂ ಸಚಿವ ಮೊಹ್ಸಿನ್‌ ನಖ್ವಿಯನ್ನು (Mohsin Naqvi) ಗೌರವಿಸಲು ಪಾಕಿಸ್ತಾನ ಸರ್ಕಾರ ಮುಂದಾಗಿದೆ.

    ದುಬೈನಲ್ಲಿ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದ ನಂತರ ನಖ್ವಿ ಅವರ ಕ್ರಮಗಳು ವ್ಯಾಪಕ ಟೀಕೆಗೆ ಗುರಿಯಾಗಿದ್ದರೂ, ಈಗ ಅವರನ್ನು ಪಾಕಿಸ್ತಾನದಲ್ಲಿ ಸನ್ಮಾನಿಸಲಾಗುವುದು. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದೆ ಎಂದು ವರದಿಯಾಗಿದೆ. ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಿಲ್ಲ. ಇದನ್ನೂ ಓದಿ: ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ, ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿತ್ತು. ನಂತರ ನಖ್ವಿ ಏಷ್ಯಾ ಕಪ್ ಟ್ರೋಫಿಯನ್ನು ವಿಜೇತರ ಪದಕಗಳ ಜೊತೆಗೆ ತಮ್ಮ ಹೋಟೆಲ್ ಕೋಣೆಗೆ ತೆಗೆದುಕೊಂಡು ಹೋದರು. ವ್ಯಾಪಕ ಟೀಕೆ ಬಳಿಕ ಟ್ರೋಫಿ ಮತ್ತು ಪದಕಗಳನ್ನು ಯುಎಇ ಕ್ರಿಕೆಟ್ ಮಂಡಳಿಗೆ ಹಸ್ತಾಂತರಿಸಲಾಗಿದೆ. ಆದರೆ, ಅವುಗಳನ್ನು ಯಾವಾಗ ಮತ್ತು ಹೇಗೆ ಭಾರತಕ್ಕೆ ತಲುಪಿಸಲಾಗುತ್ತದೆ ಎಂಬುದರ ಕುರಿತು ಯಾವುದೇ ಮಾಹಿತಿಯಿಲ್ಲ.

    ಕ್ರಿಕೆಟ್ ವಲಯದಲ್ಲಿ ನಖ್ವಿಯವರ ನಡೆಗೆ ಖಂಡಿಸಿದ್ದರೂ, ಏಷ್ಯಾ ಕಪ್‌ನಲ್ಲಿ ಭಾರತದ ವಿರುದ್ಧ ಇಂತಹ ನಿಲುವನ್ನು ತೆಗೆದುಕೊಂಡಿದ್ದಕ್ಕಾಗಿ ಅವರು ಶಹೀದ್ ಜುಲ್ಫಿಕರ್ ಅಲಿ ಭುಟ್ಟೋ ಎಕ್ಸಲೆನ್ಸ್ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ. ಕರಾಚಿಯಲ್ಲಿ ಔಪಚಾರಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಯೋಜಿಸಲಾಗಿದ್ದು, ಅಲ್ಲಿ ನಖ್ವಿ ಅವರಿಗೆ ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುವುದು ಎಂದು ವರದಿಯಾಗಿದೆ. ಪಿಪಿಪಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ. ಕಾರ್ಯಕ್ರಮದ ದಿನಾಂಕವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಸಿಂಧ್ ಮತ್ತು ಕರಾಚಿ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್‌ಗಳ ಅಧ್ಯಕ್ಷ ವಕೀಲ ಗುಲಾಮ್ ಅಬ್ಬಾಸ್ ಜಮಾಲ್ ಅವರು ನಖ್ವಿ ಅವರನ್ನು ಸನ್ಮಾನಿಸಲಾಗುವುದು ಎಂದು ಘೋಷಿಸಿದ್ದಾರೆ. ಭಾರತದೊಂದಿಗೆ ರಾಜಕೀಯ ಮತ್ತು ಕ್ರೀಡಾ ಬಿಕ್ಕಟ್ಟಿನ ಸಮಯದಲ್ಲಿ ನಖ್ವಿಯವರ ಕ್ರಮಗಳು ರಾಷ್ಟ್ರೀಯ ಹೆಮ್ಮೆಯನ್ನು ಪುನಃಸ್ಥಾಪಿಸಿವೆ ಎಂದು ಜಮಾಲ್ ಹೇಳಿದ್ದಾರೆ.

  • ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಬಿಸಿಸಿಐ ಮುಂದೆ ಮಂಡಿಯೂರಿದ ಪಾಕ್‌ ಸಚಿವ – ಕದ್ದೊಯ್ದಿದ್ದ ಏಷ್ಯಾ ಕಪ್‌ ವಾಪಸ್‌

    ಮುಂಬೈ: ಬಿಸಿಸಿಐ ಮುಂದೆ ಕೊನೆಗೂ ಪಾಕ್‌ ಸಚಿವ, ಎಸಿಸಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ (Mohsin Naqvi) ಮಂಡಿಯೂರಿದ್ದಾರೆ. ಏಷ್ಯಾ ಕಪ್‌ ಟ್ರೋಫಿಯನ್ನು ಯುಎಇ ಕ್ರಿಕೆಟ್‌ ಮಂಡಳಿಗೆ ವಾಪಸ್‌ ಕೊಟ್ಟಿದ್ದಾರೆ.

    ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ಮಣಿಸಿ ಏಷ್ಯಾ ಕಪ್‌ (Asia Cup) ಟ್ರೋಪಿ ಜಯಿಸಿತು. ಆದರೆ, ಪಾಕ್‌ ಸಚಿವ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡ ನಿರಾಕರಿಸಿತು. ಈ ವೇಳೆ, ಟ್ರೋಫಿ ಕೊಡದೇ ಪಾಕ್‌ ಸಚಿವ ಉದ್ಧಟತನ ತೋರಿದರು. ಈ ಬೆಳವಣಿಗೆ ಸಾಕಷ್ಟು ವಿವಾದ ಸೃಷ್ಟಿಸಿತು. ಇದನ್ನೂ ಓದಿ: ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ಏಷ್ಯಾ ಕಪ್‌ ಟ್ರೋಫಿ ಕಳ್ಳತನ ಮಾಡಿದ್ದಾರೆಂಬ ಅಪವಾದವನ್ನೂ ನಖ್ವಿ ಹೊತ್ತುಕೊಂಡರು. ಟ್ರೋಫಿಯನ್ನು ಟೀಂ ಇಂಡಿಯಾ ಕ್ಯಾಪ್ಟನ್‌ ಕಚೇರಿಗೆ ಬಂದು ತೆಗೆದುಕೊಂಡು ಹೋಗಬಹುದು ಎಂಬಂತಹ ದರ್ಪದ ಮಾತುಗಳನ್ನು ಆಡಿದ್ದರು.

    ನಖ್ವಿ ನಡೆಯನ್ನು ಖಂಡಿಸಿದ ಬಿಸಿಸಿಐ, ಪಾಕ್‌ ಜೊತೆಗೆ ಕ್ರಿಕೆಟ್‌ ಪಂದ್ಯವಾಡುವ ಯಾವ ತಂಡದ ಜೊತೆಗೂ ಭಾರತದ ತಂಡ ಆಟವಾಡಲ್ಲ ಎಂದು ಖಡಕ್‌ ಸಂದೇಶ ರವಾನಿಸಿತು. ಬಿಸಿಸಿಐನಿಂದ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಕದ್ದೊಯ್ದಿದ್ದ ಕಪ್‌ನ್ನು ನಖ್ವಿ ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಚೆಕ್‌ ಹರಿದು ಎಸೆದ ಪಾಕ್‌ ಕ್ಯಾಪ್ಟನ್‌ ದುರಹಂಕಾರ – ಗೆದ್ರೂ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ!

    ನವೆಂಬರ್‌ನಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ದೂರು ಸಲ್ಲಿಸುವುದಾಗಿ ಭಾರತ ಬೆದರಿಕೆ ಹಾಕಿತ್ತು. ‘ಟ್ರೋಫಿ ಮತ್ತು ಪದಕಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವ ಹಕ್ಕನ್ನು ನೀಡುವುದಿಲ್ಲ. ಇದು ಅತ್ಯಂತ ದುರದೃಷ್ಟಕರ ಮತ್ತು ಕ್ರೀಡಾ ಮನೋಭಾವಕ್ಕೆ ವಿರುದ್ಧವಾಗಿದೆ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ಬಿಸಿಸಿಐ ತಿಳಿಸಿತ್ತು.

  • ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

    ದುಬೈ: ಏಷ್ಯಾಕಪ್‌ ಫೈನಲ್‌ ಮುಗಿದ ಬಳಿಕವೂ ಹೈಡ್ರಾಮಾ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಟ್ರೋಫಿ ಎತ್ತಿಕೊಂಡು ಹೋಗಿ ಟ್ರೋಲ್‌ ಆದ ಬೆನ್ನಲ್ಲೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮುಖ್ಯಸ್ಥ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಹೊಸ ನಾಟಕ ಆಡಲು ಆರಂಭಿಸಿದ್ದಾರೆ.

    ನಾನು ಟ್ರೋಫಿಯನ್ನು ಟೀಂ ಇಂಡಿಯಾಗೆ ನೀಡುತ್ತೇನೆ. ಆದರೆ ‘ಔಪಚಾರಿಕ ಸಮಾರಂಭ’ವನ್ನು ಆಯೋಜಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: 1 ಗಂಟೆ ಹೈಡ್ರಾಮಾ, ಟ್ರೋಫಿ ಜೊತೆ ಓಡಿದ ನಖ್ವಿ – ಮಧ್ಯರಾತ್ರಿ ಏನಾಯ್ತ? ಇಲ್ಲಿದೆ ಪೂರ್ಣ ವಿವರ

    ತನ್ನ ಕೈಯಿಂದ ಟ್ರೋಫಿ ಪಡೆಯಲು ಭಾರತ ನಿರಾಕರಿಸಿದ ಬೆನ್ನಲ್ಲೇ ನಖ್ವಿ ಎಸಿಸಿ ಈ ಹೊಸ ಷರತ್ತನ್ನು ನಖ್ವಿ ಇರಿಸಿದ್ದಾರೆ. ಆದರೆ ಈ ರೀತಿಯ ಕಾರ್ಯಕ್ರಮ ನಡೆಯದ ಟ್ರೋಫಿ ಹೇಗೆ ಭಾರತಕ್ಕೆ ಹೇಗೆ ಹಸ್ತಾಂತರವಾಗುತ್ತದೆ ಎನ್ನುವುದೇ ಸದ್ಯ ಕುತೂಹಲ. ಇದನ್ನೂಓದಿ: Asia Cup 2025 | ಚಾಂಪಿಯನ್‌ ಭಾರತ ತಂಡಕ್ಕೆ ಬಿಸಿಸಿಐನಿಂದ 21 ಕೋಟಿ ಗಿಫ್ಟ್‌

    ನಖ್ವಿ ನಡೆ ವಿರುದ್ಧ ಐಸಿಸಿಗೆ ದೂರು ನೀಡಲು ಬಿಸಿಸಿಐ ನಿರ್ಧರಿಸಿದೆ. ಟೀಂ ಇಂಡಿಯಾದ ನಿಲುವನ್ನು ಬಿಸಿಸಿಐ ಸಮರ್ಥಿಸಿಕೊಂಡಿದೆ. ನಮ್ಮ ವಿರುದ್ಧ ಯುದ್ಧ ನಡೆಸುತ್ತಿರುವ ವ್ಯಕ್ತಿಯಿಂದ ಭಾರತ ಟ್ರೋಫಿ ಸ್ವೀಕರಿಸಲು ಸಾಧ್ಯವಿಲ್ಲ. ಟ್ರೋಫಿ ಮತ್ತು ಪದಕಗಳನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಅಂದಿದೆ. ಹೀಗಾಗಿ ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಸಭೆಯಲ್ಲಿ ಪ್ರತಿಭಟಿಸಲು ಬಿಸಿಸಿಐ ನಿರ್ಧರಿಸಿದೆ.

  • ಯುದ್ಧವನ್ನ ಕ್ರೀಡೆಗೆ ಎಳೆದು ತರೋದು ಹತಾಶೆಯನ್ನ ತೋರಿಸುತ್ತೆ – ಮೋದಿ ಟ್ವೀಟ್‌ಗೆ ನಖ್ವಿ ರಿಯಾಕ್ಷನ್‌

    ಯುದ್ಧವನ್ನ ಕ್ರೀಡೆಗೆ ಎಳೆದು ತರೋದು ಹತಾಶೆಯನ್ನ ತೋರಿಸುತ್ತೆ – ಮೋದಿ ಟ್ವೀಟ್‌ಗೆ ನಖ್ವಿ ರಿಯಾಕ್ಷನ್‌

    – ಪಾಕ್‌ನಿಂದ ಅನುಭವಿಸಿದ ಅವಮಾನಕರ ಸೋಲುಗಳನ್ನ ಇತಿಹಾಸ ದಾಖಲಿಸಿದೆ ಎಂದ ಸಚಿವ

    ಇಸ್ಲಾಮಾಬಾದ್‌/ದುಬೈ: ಯುದ್ಧವನ್ನು ಕ್ರೀಡೆಗೆ ಎಳೆದು ತರುವುದು ಹತಾಶೆಯನ್ನು ತೋರಿಸುತ್ತದೆ ಎಂದು ಪಾಕಿಸ್ತಾನದ ಸಚಿವ ಹಾಗೂ ಏಷ್ಯನ್‌ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಹೇಳಿದ್ದಾರೆ.

    ಭಾನುವಾರ ಏಷ್ಯಾಕಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತ ಗೆದ್ದ ಬಳಿಕ ಪ್ರಧಾನಿ ಮೋದಿ (PM Modi) ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದರು. ʻಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರʼ (Operation Sindoor) ಫಲಿತಾಂಶ ಒಂದೇ – ಭಾರತ ಗೆಲ್ಲುತ್ತದೆ ಎಂದು ಆಟಗಾರರಿಗೆ ಶುಭಕೋರಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನಖ್ವಿ, ಯುದ್ಧವನ್ನು ಕ್ರೀಡೆಗೆ ಎಳೆದು ತರೋದು ಹತಾಶೆ ತೋರಿದ್ದಾರೆಂದು ಬರೆದುಕೊಂಡಿದ್ದಾರೆ.

    ಯುದ್ಧವೇ ನಿಮ್ಮ ಮಾನದಂಡವಾಗಿದ್ದರೆ, ಪಾಕಿಸ್ತಾನದ (Pakistan) ಕೈಯಲ್ಲಿ ನೀವು ಅನುಭವಿಸಿದ ಅವಮಾನಕರ ಸೋಲುಗಳನ್ನ ಇತಿಹಾಸವು ಈಗಾಗಲೇ ದಾಖಲಿಸಿದೆ. ಯಾವುದೇ ಕ್ರಿಕೆಟ್ ಪಂದ್ಯವು ಆ ಸತ್ಯವನ್ನ ಪುನಃ ಬರೆಯಲು ಸಾಧ್ಯವಿಲ್ಲ. ಆದ್ರೆ ಯುದ್ಧವನ್ನ ಕ್ರೀಡೆಗೆ ಎಳೆದುತರುವುದು ಹತಾಶೆಯನ್ನು ಬಹಿರಂಗಪಡಿಸುತ್ತದೆ. ಜೊತೆಗೆ ಆಟದ ಸ್ಫೂರ್ತಿ ಮತ್ತು ಗೌರವವನ್ನು ಅವಮಾನಿಸುತ್ತದೆ ಎಂದು ನಖ್ವಿ ತಿರುಗೇಟು ನೀಡಿದ್ದಾರೆ.

    ಮೈದಾನದಲ್ಲಿ ಭಾರೀ ಹೈಡ್ರಾಮಾ
    ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೂ, ಏಷ್ಯಾ ಕಪ್ ಟ್ರೋಫಿ ತಂಡದ ಕೈ ಸೇರಿಲ್ಲ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷ ಮತ್ತು ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಇಂಡಿಯಾ ತಂಡ ನಿರಾಕರಿಸಿದ ಕಾರಣ ವಿಜೇತ ತಂಡಕ್ಕೆ ಟ್ರೋಫಿಯನ್ನು ನೀಡದ ವಿಚಿತ್ರ ಘಟನೆ ನಡೆಯಿತು. ತಡರಾತ್ರಿ ನಡೆದ ಈ ನಾಟಕೀಯ ಬೆಳವಣಿಗೆಯಿಂದಾಗಿ, ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ತಂಡವು ಟ್ರೋಫಿ ಇಲ್ಲದೆಯೇ ತಮ್ಮ ವಿಜಯ ಆಚರಿಸಬೇಕಾಯಿತು.

    ಭಾನುವಾರ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿದ ಭಾರತ, ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ಕಾಯುತ್ತಿತ್ತು. ಆದರೆ, ವಿಜೇತರ ಟ್ರೋಫಿಯನ್ನು ಯಾರು ನೀಡುತ್ತಾರೆ ಎಂದು ಭಾರತೀಯ ತಂಡದ ಆಡಳಿತ ಮಂಡಳಿ ವಿಚಾರಿಸಿದಾಗ, ಅದು ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಎಂದು ತಿಳಿದು ಬಂತು. ಪಾಕಿಸ್ತಾನಿ ಸಚಿವರಾಗಿರುವ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡವು ಸ್ಪಷ್ಟವಾಗಿ ನಿರಾಕರಿಸಿತು.

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಳಂಬ
    ಈ ಹಿನ್ನೆಲೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಬಹಳ ವಿಳಂಬವಾಗಿ ನಡೆಯಿತು. ನಖ್ವಿ ವೇದಿಕೆಯ ಮೇಲೆ ಬಂದು ನಿಂತಾಗ, ಭಾರತೀಯ ಆಟಗಾರರು ಸುಮಾರು 15 ಗಜಗಳಷ್ಟು ದೂರದಲ್ಲಿಯೇ ನಿಂತು, ಮುಂದೆ ಬರಲು ಒಪ್ಪಲೇ ಇಲ್ಲ. ಈ ಸಂದರ್ಭದಲ್ಲಿ, ಇನ್ನೂ ಕ್ರೀಡಾಂಗಣದಲ್ಲಿದ್ದ ಭಾರತೀಯ ಅಭಿಮಾನಿಗಳು ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗುತ್ತಾ ನಖ್ವಿಯವರನ್ನು ಹೀಯಾಳಿಸಿದರು.

  • ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ಪಾಕ್‌ ಸಚಿವನಿಂದ ಏಷ್ಯಾಕಪ್‌ ಟ್ರೋಫಿ ಸ್ವೀಕರಿಸಲು ನಿರಾಕರಿಸಿದ ಟೀಂ ಇಂಡಿಯಾ

    ದುಬೈ: ಪಾಕಿಸ್ತಾನ ಸಚಿವ ಹಾಗೂ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಮೊಹ್ಸಿನ್‌ ನಖ್ವಿಯಿಂದ ಏಷ್ಯಾ ಕಪ್‌ ಚಾಂಪಿಯನ್ಸ್‌ ಟ್ರೋಫಿಯನ್ನು ಸ್ವೀಕರಿಸಲು ಭಾರತ ನಿರಾಕರಿಸಿದ ಪ್ರಸಂಗ ನಡೆಯಿತು.

    2025 ರ ಏಷ್ಯಾಕಪ್‌ನ ಉದ್ವಿಗ್ನ ಮತ್ತು ರಾಜಕೀಯವಾಗಿ ತುಂಬಿದ ಪರಾಕಾಷ್ಠೆಯಲ್ಲಿ ಭಾರತೀಯ ಕ್ರಿಕೆಟ್ ತಂಡವು ಪಾಕಿಸ್ತಾನದ ಆಂತರಿಕ ಸಚಿವ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ವಿಜೇತರ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ಈ ಹಿನ್ನೆಲೆಯಲ್ಲಿ ಟ್ರೋಫಿ ಸ್ವೀಕಾರ ಸಮಾರಂಭದಲ್ಲಿ ವಿಳಂಬವಾಯಿತು.

    ಎರಡೂ ರಾಷ್ಟ್ರಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಮತ್ತು ಕ್ರೀಡಾ ಉದ್ವಿಗ್ನತೆಯನ್ನು ಪ್ರತಿಬಿಂಬಿಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

    ಈ ವರ್ಷದ ಏಪ್ರಿಲ್‌ನಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿ ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದರು. ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತು. ಇದು ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಅಲ್ಲಿಂದ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿದೆ.

    ಇದು ಕ್ರಿಕೆಟ್‌ ತಂಡದ ಮೇಲೆಯೂ ಪರಿಣಾಮ ಬೀರಿತ್ತು. ಭಾರಿ ವಿರೋಧದ ನಡುವೆಯೂ ಟೀಂ ಇಂಡಿಯಾ ಏಷ್ಯಾ ಕಪ್‌ ಟೂರ್ನಿಯಲ್ಲಿ ಆಡಿತು. ಆದರೆ, ಪಾಕ್‌ ವಿರುದ್ಧದ ಪಂದ್ಯದಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿತು. ಪಾಕ್‌ ಆಟಗಾರರಿಗೆ ಹ್ಯಾಂಡ್‌ಶೇಕ್‌ ಮಾಡಲಿಲ್ಲ. ಹೀಗೆ, ಎರಡೂ ದೇಶಗಳ ನಡುವಿನ ಪಂದ್ಯದಲ್ಲಿ ಕ್ರಿಕೆಟ್‌ ನಿಯಮ ಉಲ್ಲಂಘನೆಯಂತಹ ಪ್ರಸಂಗಗಳು ನಡೆದವು.

  • Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    Asia Cup T20 | ಏಷ್ಯಾ ಕಪ್‌ ಟೂರ್ನಿಗೆ ದಿನಾಂಕ ಪ್ರಕಟ; ಭಾರತ – ಪಾಕ್ ಕದನಕ್ಕೆ ಮುಹೂರ್ತ ಫಿಕ್ಸ್!

    ನವದೆಹಲಿ/ಇಸ್ಲಾಮಾಬಾದ್‌: ಬಹುನಿರೀಕ್ಷಿತ 2025ರ ಟಿ20 ಏಷ್ಯಾ ಕಪ್ (Asia Cup 2025 T20I) ಟೂರ್ನಿಯ ದಿನಾಂಕ ಪ್ರಕಟವಾಗಿದೆ. ಮುಂದಿನ ಸೆಪ್ಟೆಂಬರ್‌ 9 ರಿಂದ 28ರ ವರೆಗೆ ಯುಎಇಯಲ್ಲಿ ನಡೆಯಲಿದೆ.

    ಜುಲೈ 24 ರಂದು ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ (Asian Cricket Council) ಟೂರ್ನಿಯ ಸ್ಥಳವನ್ನ ಅಧಿಕೃತಗೊಳಿಸಲಾಯಿತು. ಎಲ್ಲಾ 25 ಸದಸ್ಯ ರಾಷ್ಟ್ರಗಳು ಸಭೆಯಲ್ಲಿ ಭಾಗವಹಿಸಿದ್ದವು. ಸಭೆಯ ಬಳಿಕ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಧ್ಯಕ್ಷರೂ ಆಗಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ

    ಈ ಬಾರಿ ಟೂರ್ನಿಯ ಹಕ್ಕು ಬಿಸಿಸಿಐನದ್ದೇ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಆಗಿದೆ. ಆದ್ರೆ ಭಾರತ ಮತ್ತು ಪಾಕ್‌ ನಡುವಿನ ಉದ್ವಿಗ್ನತೆಯಿಂದಾಗಿ 2027ರ ವರೆಗೂ ತಟಸ್ಥ ಸ್ಥಳಗಳಲ್ಲಿ ಟೂರ್ನಿ ನಡೆಸಲು ನಿರ್ಧರಿಸಲಾಗಿದೆ. ಸೆ.9 ರಿಂದ ಸೆ.28ರ ವರೆಗೆ ಟೂರ್ನಿ ನಿಗದಿಯಾಗಿದ್ದು, ಭಾರತ ಮತ್ತು ಪಾಕ್‌ ನಡುವಿನ ಪಂದ್ಯ ಸೆ.14ರಂದು ನಡೆಯಲಿದೆ.  ಇದನ್ನೂ ಓದಿ: ಬೆಂಗಳೂರಿನ ಧನುಷ್ ಬಾಬುಗೆ ಏಷ್ಯನ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ

    ಈ ಬಾರಿ 8 ತಂಡಗಳು
    ಇಷ್ಟು ವರ್ಷ 6 ತಂಡಗಳ ನಡುವೆ ನಡೆಯುತ್ತಿದ್ದ ಹಣಾಹಣಿ ಈ ಬಾರಿ 8 ತಂಡಗಳ ನಡುವೆ ನಡೆಯಲಿದೆ. ಭಾರತ ಮತ್ತು ಪಾಕಿಸ್ತಾನ ಒಂದೇ ಗುಂಪಿನಲ್ಲಿ ಇರಲಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಭಾರತ ಮತ್ತು ಪಾಕಿಸ್ತಾನ (Ind vs Pak) ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಗಳೂ ಇವೆ. ಲೀಗ್‌ ಹಂತ, ಸೂಪರ್‌ ಸಿಕ್ಸ್‌ ಹಾಗೂ ಪ್ರಶಸ್ತಿ ಸುತ್ತಿಗೆ ತಲುಪಿದ್ರೆ ಮೂರು ಬಾರಿ ಮುಖಾಮುಖಿ ಆಗುವ ಸಾಧ್ಯತೆಗಳು ಇವೆ.  ಇದನ್ನೂ ಓದಿ: ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

    ಕಳೆದ ಬಾರಿ ಪಾಕ್‌ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ಏಕದಿನ ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ನಡೆದಿತ್ತು. ಭಾರತ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಈ ಬಾರಿ ಟಿ20 ಮಾದರಿಯಲ್ಲಿ ಏಷ್ಯಾಕಪ್‌ ಟೂರ್ನಿ ನಡೆಯಲಿದೆ. ಇದು 2026ರ ವಿಶ್ವಕಪ್‌ ಟೂರ್ನಿಗೂ ಅನುಕೂಲವಾಗಲಿದೆ.  ಇದನ್ನೂ ಓದಿ: ಅಪ್ರಾಪ್ತೆ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿದ ಆರೋಪ – RCB ಸ್ಟಾರ್‌ ಯಶ್‌ ದಯಾಳ್‌ ವಿರುದ್ಧ ಪೋಕ್ಸೊ ಕೇಸ್‌

    ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಏಷ್ಯಾ ಕಪ್ 2025ರ ಭವಿಷ್ಯ ಅತಂತ್ರವಾಗಿತ್ತು. ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಭಾರತದ `ಆಪರೇಷನ್ ಸಿಂಧೂರ’ ಪ್ರತೀಕಾರ ದಾಳಿಯಿಂದಾಗಿ ಎರಡೂ ದೇಶಗಳ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತು. ಇದರಿಂದಾಗಿ ಭಾರತವು ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ವರದಿಯಾಗಿತ್ತು. ಆದ್ರೆ ಬಿಸಿಸಿಐ ಮತ್ತು ಎಸಿಸಿ ಪಾಲಿಗೆ ಚಿನ್ನದ ಮೊಟ್ಟೆಯಾಗಿರುವ ಭಾರತ-ಪಾಕ್ ಪಂದ್ಯ ನಡೆಸಲು ಎಸಿಸಿ ಮನವೊಲಿಸಿದೆ.

  • ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್‌ ಗೃಹ ಸಚಿವ

    ಭಾರತದ ವಿರುದ್ಧ ಯುದ್ಧಕ್ಕೆ ಸಿದ್ಧ – ಬುಸುಗುಟ್ಟಿದ ಪಾಕ್‌ ಗೃಹ ಸಚಿವ

    ಇಸ್ಲಾಮಾಬಾದ್‌: ಭಾರತ (India) ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದ್ರೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ ಎಂದು ಪಾಕಿಸ್ತಾನದ ಗೃಹ ಸಚಿವ ಮೊಹ್ಸಿನ್ ನಖ್ವಿ (Mohsin Naqvi) ಬೆದರಿಕೆ ಹಾಕಿದ್ದಾರೆ.

    ಪಹಲ್ಗಾಮ್‌ ದಾಳಿಯ ಬಳಿಕ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ವ್ಯಾಪಕವಾಗುತ್ತಿದೆ. ಸಿಂಧೂ ಜಲ ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಸರ್ಕಾರ ತೆಗೆದುಕೊಂಡ ಬಳಿಕ ಪಾಕಿಸ್ತಾನದ ಒಬ್ಬೊಬ್ಬರು ಸಚಿವರು ಬಾಲ ಬಿಚ್ಚುತ್ತಿದ್ದಾರೆ. ಸಿಂಧೂ ನೀರು ಪಾಕ್‌ಗೆ ಹರಿಯಬೇಕು, ಇಲ್ಲದಿದ್ರೆ ಭಾರತೀಯರ ರಕ್ತ ಹರಿಯುತ್ತೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ ಹೇಳಿದ್ದರು. ಇದೀಗ ನಖ್ವಿ ಯುದ್ಧಕ್ಕೆ ಸಿದ್ಧ ಎಂದು ಬುಸುಗುಟ್ಟಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತವು ಸಿಂಧೂ ಜಲ ಒಪ್ಪಂದವನ್ನ ಏಕಪಕ್ಷೀಯವಾಗಿ ಕೊನೆಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ವಿಶ್ವಬ್ಯಾಂಕ್ (World Bank) ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದೆ. ಅಂತಹ ಯಾವುದೇ ಕ್ರಮ ಕೈಗೊಂಡರೆ, ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಗಿದೆ ಎಂದು ನಖ್ವಿ ಎಚ್ಚರಿಕೆ ನೀಡಿದ್ದಾರೆ.

    bilawal bhutto

    ಇದಕ್ಕೂ ಮುನ್ನ ಮಾತನಾಡಿದ್ದ ಬಿಲಾವಲ್‌ ಭುಟ್ಟೋ, ಸಿಂಧೂ ನಮ್ಮದು. ಅದು ನಮ್ಮದೇ ಆಗಿರುತ್ತದೆ ಎಂದು ನಾನು ಭಾರತಕ್ಕೆ ಹೇಳಲು ಬಯಸುತ್ತೇನೆ. ನಮ್ಮ ನೀರು ಅದರ ಮೂಲಕ ಹರಿಯುತ್ತದೆ. ಇಲ್ಲದಿದ್ದರೆ ಅವರ ರಕ್ತ ಹರಿಯುತ್ತದೆ ಎಂದು ಹೇಳಿದ್ದರು.

  • Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್‌ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ

    Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್‌ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ

    ಇಸ್ಲಾಮಾಬಾದ್‌/ಅಬುಧಾಬಿ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ (ICC Champions Trophy 2025) ಫೆಬ್ರವರಿ 23ರ ಸೂಪರ್‌ ಸಂಡೇ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಬ್ಲಾಕ್‌ಬಸ್ಟರ್ ಪಂದ್ಯಕ್ಕಾಗಿ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ 30 ಆಸನಗಳ ವಿಐಪಿ ಬಾಕ್ಸ್ ಟಿಕೆಟ್‌ಗಳನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್‌ ನಖ್ವಿ (PCB Chairman Mohsin Naqvi) ಮಾರಿಕೊಂಡಿದ್ದಾರೆ ಎಂದು ವರದಿಯಾಗಿದೆ.

    ಹೌದು.. ಭದ್ರತಾ ಕಾರಣಗಳಿಂದ ಈ ಬಾರಿಯ ಟೂರ್ನಿ ಹೈಬ್ರಿಡ್‌ ಮಾದರಿಯಲ್ಲಿ ನಡೆಯುತ್ತಿದ್ದು, ಭಾರತದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದೆ. ಹಾಗಾಗಿ ದುಬೈನಲ್ಲಿ ನಡೆಯುವ ಪಂದ್ಯಗಳನ್ನು ಕ್ರೀಡಾಂಗಣದಲ್ಲಿ ಉತ್ತಮ ಆಸನ, ವಿಶೇಷ ಸೌಕರ್ಯವುಳ್ಳ ಬಾಕ್ಸ್‌ನಲ್ಲಿ ತಮ್ಮ ಕುಟುಂಬ, ಆಪ್ತರೊಂದಿಗೆ ಕುಳಿತು ವೀಕ್ಷಿಸಲು ನಖ್ವಿ ಅವರಿಗೆ ಸುಮಾರು 95 ಲಕ್ಷ ರೂ. (4 ಲಕ್ಷ ದುಬೈ ಕರೆನ್ಸಿ) ಬೆಲೆಯ 30 ವಿಐಪಿ ಆಸನದ ಟಿಕೆಟ್‌ಗಳನ್ನು (VIP box Tickets) ನೀಡಲಾಗಿತ್ತು. ಆದ್ರೆ ಈ ಟಿಕೆಟ್‌ಗಳನ್ನ ಪಿಸಿಬಿ ಅಧ್ಯಕ್ಷ ಬರೋಬ್ಬರಿ 3.5 ಕೋಟಿ ರೂ. (ಸುಮಾರು 4 ಲಕ್ಷ ಡಾಲರ್‌)ಗೆ ಮಾರಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ವಿಐಪಿ ಟಿಕೆಟ್‌ಗಳನ್ನು ಮಾರಾಟ ಮಾಡಿಕೊಂಡಿರುವ ನಖ್ವಿ ಅಭಿಮಾನಿಗಳೊಂದಿಗೆ ಕುಳಿತು ಸಾಮಾನ್ಯರಂತೆ ಕ್ರಿಕೆಟ್‌ ಪಂದ್ಯ ವೀಕ್ಷಣೆ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಟಿಕೆಟ್‌ ಮಾರಾಟ ಮಾಡಿದ ಹಣವನ್ನ ಕರಾಚಿ, ಲಾಹೋರ್ ಮತ್ತು ಪಾಕಿಸ್ತಾನದ ಇತರೇ ಕ್ರೀಡಾಂಗಣಗಳ ನವೀಕರಣಕ್ಕೆ ಬಳಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: Champions Trophy 2025 – ಚಾಂಪಿಯನ್ಸ್‌ ಟ್ರೋಫಿ ದಾಲ್ಮೀಯಾರ ಕನಸಿನ ಕೂಸು

    ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಪಾಕಿಸ್ತಾನ ಆತಿಥ್ಯದಲ್ಲಿ ನಡೆಯುತ್ತಿದೆ. ಇದರೊಂದಿಗೆ, ಸುಮಾರು 30 ವರ್ಷಗಳ ಬಳಿಕ ಪ್ರಮುಖ ಟೂರ್ನಿಯೊಂದಕ್ಕೆ ಪಾಕ್ ಆತಿಥ್ಯ ವಹಿಸಿದೆ. ಟೂರ್ನಿಯು ಫೆಬ್ರುವರಿ 19ರಂದು (ಇಂದಿನಿಂದ) ಆರಂಭವಾಗಲಿದೆ. ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಕಿವೀಸ್‌ ಪಡೆಯು ಅತಿಥೇಯ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಇದನ್ನೂ ಓದಿ: Champions Trophy | ಯಾವ ವರ್ಷ – ಯಾರು ಚಾಂಪಿಯನ್ಸ್‌? – ಭಾರತ ಕೊನೇ ಬಾರಿ ಟ್ರೋಫಿ ಗೆದ್ದಿದ್ದು ಯಾವಾಗ?

    ಪಾಕಿಸ್ತಾನದ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್‌ ಕ್ರೀಡಾಂಗಣಗಳು ಟೂರ್ನಿಯ ಆತಿಥ್ಯ ವಹಿಸಿವೆ. ಪಾಕಿಸ್ತಾನಕ್ಕೆ ತೆರಳಲು ನಿರಾಕರಿಸಿರುವ ಭಾರತ ತನ್ನ ಪಾಲಿನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.