Tag: monsoon session

  • ಇತಿಹಾಸದ ಪುಟ ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ – ಕೊನೆಯ ಅಧಿವೇಶನಕ್ಕೆ ಸಿದ್ಧತೆ

    ಇತಿಹಾಸದ ಪುಟ ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ – ಕೊನೆಯ ಅಧಿವೇಶನಕ್ಕೆ ಸಿದ್ಧತೆ

    ನವದೆಹಲಿ: ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ ಶೀಘ್ರವೇ ಇತಿಹಾಸದ ಪುಟಗಳನ್ನು ಸೇರಲಿದೆ. ಹಾಲಿ ಸಂಸತ್ ಭವನದಲ್ಲಿ ಜುಲೈ 18 ರಿಂದ ಆಗಸ್ಟ್ 12 ರವರೆಗೆ ಮಳೆಗಾಲದ ಸಂಸತ್ ಅಧಿವೇಶನ ನಡೆಯಲಿದೆ. ಇದೇ ಕೊನೆಯ ಅಧಿವೇಶನ ಆಗಲಿದೆ.

    ಸೋಮವಾರದಿಂದ ಮಳೆಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗುತ್ತಿದೆ. ಬಳಿಕ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಸೆಂಟ್ರಲ್ ವಿಸ್ತಾ ಭಾಗವಾಗಿ ಮೋದಿ ಸರ್ಕಾರ ನಿರ್ಮಿಸುತ್ತಿರುವ ನೂತನ ಸಂಸತ್ ಭವನದಲ್ಲಿ ನಡೆಸುವುದಾಗಿ ಈಗಾಗಲೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ. ಹಾಲಿ ಸಂಸತ್ ಭವನದಲ್ಲಿಯೇ ನೂತನ ರಾಷ್ಟ್ರಪತಿ ಚುನಾವಣೆ ಜುಲೈ 19 ರಂದು ನಡೆಯಲಿದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆಯೂ ಇಲ್ಲಿಯೇ ನಡೆಯಲಿದೆ. ಇದನ್ನೂ ಓದಿ: ಹುಂಡಿ ಎಣಿಕೆಯಲ್ಲಿ ಕೋಟ್ಯಾಧೀಶನಾದ ಮಾದಪ್ಪ – ಎಣಿಕೆ ವೇಳೆ 500 ರೂ.ಗಳ 80 ನೋಟು ಕದ್ದು ಗುತ್ತಿಗೆ ನೌಕರ

    ಹಾಲಿ ಸಂಸತ್ ಭವನದ ನಿರ್ಮಾಣವನ್ನು 1921ರಲ್ಲಿ ಶುರು ಮಾಡಿ, 1927ರಲ್ಲಿ ಪೂರ್ಣಗೊಳಿಸಲಾಗಿತ್ತು. ಎಡ್ವಿನ್ ಲೂಟಿನ್ಸ್ ಮತ್ತು ಹೆರ್ಬೆಟ್ ಬೇಕರ್ ಎಂಬ ಆರ್ಕಿಟೆಕ್ಟ್‌ಗಳು ಇದರ ನಿರ್ಮಾಣದ ಹೊಣೆ ಹೊತ್ತಿದ್ದರು. ಡಿಸೆಂಬರ್ 10ರಂದು ಸೆಂಟ್ರಲ್ ವಿಸ್ತಾ ಭೂಮಿ ಪೂಜೆಯನ್ನು ಪ್ರಧಾನಿ ನರೇಂದ್ರ ಮೋದಿ  ನೆರವೇರಿಸಿದ್ದರು. ಈಗಿರುವ ಸಂಸತ್ ಭವನವನ್ನು ನಿರ್ಮಿಸಿದ್ದು ಬ್ರಿಟೀಷರು. 1921ರಲ್ಲಿ ಭೂಮಿಪೂಜೆ ನೆರವೇರಿಸಿ, 1927ಕ್ಕೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗಿತ್ತು. ಆಗ ಇದಕ್ಕೆ 83 ಲಕ್ಷ ರೂಪಾಯಿ ವೆಚ್ಚ ಆಗಿತ್ತು. ಇನ್ನು ಹೊಸ ಸಂಸತ್ ಭವನ ಸುಮಾರು 20 ಸಾವಿರ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಇದನ್ನೂ ಓದಿ: ಸಂಸತ್ ಕಲಾಪದಲ್ಲಿ ಅಸಂಸದೀಯ ಪದಗಳಿಗೆ ಕತ್ತರಿ – ಈ ಪದಗಳು ಬ್ಯಾನ್

    Live Tv
    [brid partner=56869869 player=32851 video=960834 autoplay=true]

  • ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

    ವಿಧಾನಸಭೆಯಲ್ಲಿ ಹಲವು ವಿಧೇಯಕಗಳ ಮಂಡನೆ

    ಬೆಂಗಳೂರು: 2021ನೇ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗಗಳ (ತಿದ್ದುಪಡಿ) ವಿಧೇಯಕವನ್ನು ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್. ನಾಗರಾಜು ಎಂ.ಟಿ.ಬಿ ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

    ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಸಭೆಯಲ್ಲಿ ಪರಿಣಾಮಕಾರಿಯಾಗಿ ಹಾಗೂ ವಿಷಯಾಧಾರಿತ ಚರ್ಚೆಯನ್ನು ನಡೆಸುವುದಕ್ಕಾಗಿ, ನಿರ್ದೇಶಕರ ಮಂಡಳಿಯಲ್ಲಿ ಸರ್ಕಾರೇತರ ಸದಸ್ಯರ ಸಂಖ್ಯೆಯನ್ನು ರಾಜ್ಯದ ಪ್ರತಿಯೊಂದು ಜಿಲ್ಲೆಯಿಂದ ಒಬ್ಬ ವ್ಯಕ್ತಿಯ ಬದಲಾಗಿ, ಪ್ರತಿಯೊಂದು ಕಂದಾಯವಲಯದಿಂದ ಮೂವರು ವ್ಯಕ್ತಿಗಳಂತೆ, ಆದರೆ ಒಂದೇ ಜಿಲ್ಲೆಯಿಂದ ಒಂದಕ್ಕಿಂತ ಹೆಚ್ಚಿರದಂತೆ ಹನ್ನೆರಡು ಸರ್ಕಾರೇತರ ಸದಸ್ಯರಿಗೆ ಕಡಿತಗೊಳಿಸಲು ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯಮಗಳ ಅಧಿನಿಯಮ, 1956ನ್ನು (1957ರ ಕರ್ನಾಟಕ ಅಧಿನಿಯಮ ಸಂಖ್ಯೆ 7) ತಿದ್ದುಪಡಿ ಮಾಡುವುದಯ ಅವಶ್ಯಕವೆಂದು ಪರಿಗಣಿಸಿದ ವಿಧೇಯಕವಾಗಿದೆ.

    2021ನೇ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್(ತಿದ್ದುಪಡಿ) ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

     

    2021ನೇ ಸಾಲಿನ ಕರ್ನಾಟಕ ಸ್ಥಳೀಯ ನಿಧಿ ಪ್ರಾಧಿಕಾರಗಳ ಆರ್ಥಿಕ ಹೊಣೆಗಾರಿಕೆ (ತಿದ್ದುಪಡಿ) ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು. ಇದನ್ನೂ ಓದಿ: ಮಂಡ್ಯ ಮೈಶುಗರ್ ಕಾರ್ಖಾನೆಗೆ ಬಿಡ್ ಮಾಡಲ್ಲ – ಪರಿಷತ್‍ನಲ್ಲಿ ನಿರಾಣಿ ಪ್ರಕಟ

    2021ನೇ ಸಾಲಿನ ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕವನ್ನು ಪೌರಾಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್.ನಾಗರಾಜು, ಎಂ.ಟಿ.ಬಿ. ಅವರ ಪರವಾಗಿ ಸಣ್ಣ ನೀರಾವರಿ ಮತ್ತು ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ವಿಧಾನ ಸಭೆಯಲ್ಲಿ ಮಂಡಿಸಿದರು.

  • ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟ

    ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟ

    ಬೆಂಗಳೂರು: ಇಂದಿನಿಂದ ಹತ್ತು ದಿನಗಳ ಕಾಲ ಮಳೆಗಾಲದ ಅಧಿವೇಶನ ಪ್ರಾರಂಭವಾಗಲಿದೆ.

    ಸರ್ಕಾರದ ಸಾರಥಿ ಬದಲಾವಣೆ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಕೋವಿಡ್, ನೆರೆ ಹಾವಳಿ, ಬೆಲೆಯೇರಿಕೆ, ಅಭಿವೃದ್ಧಿ ಕುಂಠಿತ ಸೇರಿದಂತೆ ಕೆಲ ಬಹುಚರ್ಚಿತ, ಬಹು ವಿವಾದಿತ ವಿಷಯಗಳು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ, ಗಲಾಟೆ ಸೃಷ್ಟಿಸುವುದು ಖಂಡಿತ ಎಂದೇ ಹೇಳಬಹುದು. ಪ್ರತಿಪಕ್ಷಗಳ ತಂತ್ರಗಳಿಗೆ ಬಿಜೆಪಿ ತಕ್ಕ ಪ್ರತಿತಂತ್ರಗಳನ್ನು ರೆಡಿ ಮಾಡಿಕೊಂಡಿದೆ. ಸಿಎಂ ಬೊಮ್ಮಾಯಿ ಅಧಿವೇಶನ ಅಗ್ನಿ ಪರೀಕ್ಷೆಗೆ ಸಜ್ಜಾಗಿದ್ದಾರೆ.

    ಹಲವು ಸವಾಲುಗಳ ಮಧ್ಯೆ ಬೊಮ್ಮಾಯಿ ಸರ್ಕಾರ ಅಧಿವೇಶನಕ್ಕೆ ಸಿದ್ಧವಾಗಿದ್ದು, ವಿಪಕ್ಷ ಕಾಂಗ್ರೆಸ್ ಸಹ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತನ್ನದೇ ಆದ ಸಿದ್ಧತೆಯನ್ನು ಮಾಡಿಕೊಂಡಿದೆ. ಸರ್ಕಾರದ ಮೇಲೆ ಮುಗಿಬೀಳಲು ಕಾಂಗ್ರೆಸ್ ಪ್ರತ್ಯಾಸ್ತ್ರಗಳ ರೆಡಿಮಾಡಿಕೊಂಡಿದೆ. ಇದನ್ನೂ ಓದಿ: ನಾನು ಕೂಡು ಒಕ್ಕಲಿಗ ಪಂಗಡದವನು, ಆದರೆ ನಾವು ಲಿಂಗಾಯತರು: ಎಂ.ಬಿ.ಪಾಟೀಲ್

    ಅಧಿವೇಶನ ಮೊದಲ ದಿನವೇ ಕಾಂಗ್ರೆಸ್ ಪಕ್ಷ ಫುಲ್ ಆಕ್ಟೀವ್ ಆಗಿದ್ದು, ಬೆಲೆ ಏರಿಕೆ ಖಂಡಿಸಿ ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು, ಎತ್ತಿನಗಾಡಿ ಮೂಲಕವೇ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಡಿ.ಕೆ.ಶಿವಕುಮಾರ್‌ರವರು  ಸದಾಶಿವನಗರದಿಂದ ಎತ್ತಿನ ಗಾಡಿ ಮೂಲಕ ಬಂದರೆ, ಸಿದ್ದರಾಮಯ್ಯನವರು ಕುಮಾರಕೃಪಾ ರಸ್ತೆಯಿಂದ ನಗರ ಪ್ರಮುಖ ರಸ್ತೆಗಳಲ್ಲಿ ಎತ್ತಿನಗಾಡಿಯಲ್ಲಿ ವಿಭಿನ್ನವಾಗಿ ಬರುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಇದನ್ನೂ ಓದಿ: ಸೋಮವಾರ ತೆರೆಬೀಳುತ್ತಾ ಕಲಬುರಗಿ ಮಹಾನಗರ ಪಾಲಿಕೆ ಮೈತ್ರಿ ಸರ್ಕಸ್?

  • ಕೊರೊನಾ ಲಸಿಕೆ ಪಡೆದವರೆಲ್ಲ ಬಾಹುಬಲಿ: ಪ್ರಧಾನಿ ಮೋದಿ

    ಕೊರೊನಾ ಲಸಿಕೆ ಪಡೆದವರೆಲ್ಲ ಬಾಹುಬಲಿ: ಪ್ರಧಾನಿ ಮೋದಿ

    ನವದೆಹಲಿ: ಮಾನ್ಸೂನ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸಂಪ್ರದಾಯದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳನ್ನು ಸಂಭೋದಿಸಿ ಮಾತನಾಡಿದರು. ಈ ಈ ವೇಳೆ ಕೊರೊನಾ ಲಸಿಕೆ ಪಡೆದವರೆಲ್ಲರೂ ಬಾಹುಬಲಿಗಳು ಎಂದು ಹೇಳಿದರು.

    ಅಧಿವೇಶನದಲ್ಲಿ ವಿಪಕ್ಷದ ನಾಯಕರು ಕಷ್ಟದ ಪ್ರಶ್ನೆಗಳನ್ನು ಕೇಳಲಿ. ಆದ್ರೆ ನಮಗೆ ಉತ್ತರ ನೀಡಲು ಅವಕಾಶ ನೀಡಬೇಕು. ಕಾರಣ ಸಾಮಾನ್ಯ ಜನರಿಗೂ ಸರ್ಕಾರದ ಧ್ವನಿ ತಲುಪಬೇಕಿದೆ. ಬಹುತೇಕ ಎಲ್ಲರೂ ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಸದನದ ಸದಸ್ಯರು ಮತ್ತು ಇನ್ನುಳಿದ ಎಲ್ಲರೂ ಕೊರೊನಾ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ. ಲಸಿಕೆ ನಿಮ್ಮ ‘ಬಾಹು’ (ತೋಳು)ಗಳ ಮೇಲೆ ಹಾಕಿರೋದರಿಂದ ನೀವೆಲ್ಲ ಬಾಹುಬಲಿಗಳು ಆಗುತ್ತೀರಿ. ಈಗಾಗಲೇ ಕೊರೊನಾ ವಿರುದ್ಧದ ಹೋರಾಟದಲ್ಲಿ ಸುಮಾರು 40 ಕೋಟಿ ಬಾಹುಬಲಿಗಳು ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

    ಕೊರೊನಾ ಸೋಂಕು ಇಡೀ ವಿಶ್ವವನ್ನೇ ತಲ್ಲಣಗೊಳಿಸಿತು. ಕೊರೊನಾಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಗುಣಮಟ್ಟದ ಚರ್ಚೆ ನಡೆಯಲಿ ಎಂದು ಇಚ್ಛಿಸುತ್ತೇನೆ. ಕೊರೊನಾ ವಿಷಯದಲ್ಲಿ ವಿಪಕ್ಷಗಳು ನೀಡುವ ಸಲಹೆಯನ್ನು ಸ್ವೀಕರಿಸಿ ನಮ್ಮ ಮಹಾಮಾರಿ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುತ್ತೇವೆ.

    ನಾನೇ ಸ್ವತಃ ಕೊರೊನಾಗೆ ಸಂಬಂಧಿಸಿದ ಮಾಹಿತಿ ನೀಡಲು ಇಷ್ಟಪಡುತ್ತೇನೆ. ಫ್ಲೋರ್ ಲೀಡರ್ ಜೊತೆ ಮಾತುಕತೆ ನಡೆಯಲಿದೆ. ಈಗಾಗಲೇ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದೇನೆ. ದೇಶದ ಜನತೆಯ ಪ್ರಶ್ನೆಗಳಿಗೆ ಉತ್ತರ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದರು. ಇದನ್ನೂ ಓದಿ: ತನ್ನನ್ನು ಕಾಪಾಡುವಂತೆ ಕನ್ನಂಬಾಡಿ ಕೂಗಿ ಹೇಳುತ್ತಿದೆ: ಸುಮಲತಾ

  • 5 ವರ್ಷದಲ್ಲಿ ಬ್ಯಾಂಕುಗಳಿಗೆ ವಂಚಿಸಿದವರೆಷ್ಟು ಮಂದಿ- ವಿಪಕ್ಷದ ಪ್ರಶ್ನೆಗೆ ಠಾಕೂರ್ ಉತ್ತರ

    5 ವರ್ಷದಲ್ಲಿ ಬ್ಯಾಂಕುಗಳಿಗೆ ವಂಚಿಸಿದವರೆಷ್ಟು ಮಂದಿ- ವಿಪಕ್ಷದ ಪ್ರಶ್ನೆಗೆ ಠಾಕೂರ್ ಉತ್ತರ

    ನವದೆಹಲಿ: ಕಳೆದ ಐದು ವರ್ಷದಲ್ಲಿ ಬ್ಯಾಂಕ್‍ಗಳಿಗೆ ವಂಚಿಸಿ ವಿದೇಶಕ್ಕೆ ಹೋದ ಪಲಾಯಾನವಾದಿಗಳ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ ವಿತ್ತ ರಾಜ್ಯ ಸಚಿವ ಅನುರಾಗ್ ಠಾಕೂರ್ ಲೋಕಸಭೆ ಅಧಿವೇಶನದಲ್ಲಿ ಉತ್ತರ ನೀಡಿದ್ದಾರೆ. ಬ್ಯಾಂಕ್ ಗಳಿಗೆ ವಂಚನೆ ಕುರಿತು ವಿಪಕ್ಷಗಳು ಸರ್ಕಾರದ ವಿರುದ್ಧ ಪ್ರಶ್ನೆ ಮಾಡುತ್ತಿರುತ್ತವೆ. ಮಾನ್ಸೂನ್ ಅಧಿವೇಶನದ ಮೊದಲ ದಿನವೇ ಬ್ಯಾಂಕ್ ವಂಚನೆಕಾರರ ಬಗ್ಗೆ ಮಾಹಿತಿ ಕೇಳಲಾಗಿತ್ತು.

    ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಪ್ರಕಾರ ಕಳೆದ ಐದು ವರ್ಷದಲ್ಲಿ ಬರೋಬ್ಬರಿ 38 ಆರೋಪಿಗಳು ಬ್ಯಾಂಕ್‍ಗಳಿಗೆ ವಂಚಿಸಿ ವಿದೇಶಗಳಿಗೆ ಪಲಾಯಾನ ಮಾಡಿದ್ದಾರೆ. ಈ ಸಂಖ್ಯೆ ಜನವರಿ 1, 2015 ರಿಂದ ಡಿಸೆಂಬರ್ 31, 2019ರ ನಡುವೆ ಬ್ಯಾಂಕ್ ವ್ಯವಹಾರಗಳಲ್ಲಾದ ವಂಚನೆಗಳ ಪ್ರಕರಣಗಳಿಗೆ ಸಂಬಂಧಿಸಿದ್ದಾಗಿದೆ. ಈ ಎಲ್ಲ ಪ್ರಕರಣಗಳ ತನಿಖೆಯನ್ನ ಸಿಬಿಐ ಮೂಲಕ ನಡೆಸಲಾಗುತ್ತಿದೆ ಎಂದು ವಿತ್ತ ರಾಜ್ಯ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

    ಮಲ್ಯ, ನೀರವ್ ಮೋದಿ ಹೆಸ್ರು ಸೇರ್ಪಡೆ: 38 ಆರೋಪಿಗಳಲ್ಲಿ ವಿಜಯ್ ಮಲ್ಯ, ನೀರವ್ ಮೋದಿ ಹೆಸರುಗಳಿವೆ. ವಿವಿಧ ಬ್ಯಾಂಕುಗಳಿಗೆ ವಿಜಯ್ ಮಲ್ಯ 9 ಸಾವಿರ ಕೋಟಿ ವಂಚಿಸಿದ್ದು, ನೀರವ್ ಮೋದಿ ಮತ್ತು ಮೆಹುಲ್ ಚೊಕ್ಸಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 12 ಸಾವಿರ ಕೋಟಿ ವಂಚಿಸಿ ವಿದೇಶದಲ್ಲಿ ಉಳಿದುಕೊಂಡಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಈ ಮೂವರ ಕುಟುಂಬಸ್ಥರ ಹೆಸರುಗಳಿವೆ. ಇದರ ಜೊತೆಗೆ 15 ಸಾವಿರ ಕೋಟಿ ಫ್ರಾಡ್ ಆರೋಪಿ ಸಂದೇಸಾರ ಸಮೂಹದ ಮಾಲೀಕ ಮತ್ತು ಆಪ್ತರು ಸಹ ದೇಶ ತೊರೆದಿದ್ದಾರೆ. ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯಗೆ ಹಿನ್ನಡೆ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

    ಜನವರಿ 4, 2019ರಂದು ಸರ್ಕಾರ ಬ್ಯಾಂಕ್‍ಗಳಿಗೆ ವಂಚನೆ ಮಾಡಿದ ಆರೋಪಿಗಳ ಸಂಖ್ಯೆ 27 ಎಂದು ಹೇಳಿತ್ತು. ಎರಡೂವರೆ ವರ್ಷದಲ್ಲಿ ಈ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ದೇಶದ ಹಣವನ್ನ ಕೊಳ್ಳೆ ಹೊಡೆದು ಹೋಗುವವರನ್ನು ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು. ಇದನ್ನೂ ಓದಿ: ವಿಜಯ್ ಮಲ್ಯ ಭಾರತದ ಮೊದಲ ‘ದೇಶಭ್ರಷ್ಟ ಆರ್ಥಿಕ ಅಪರಾಧಿ’

    ಇದೇ ವೇಳೆ ಸದನದಲ್ಲಿ ಉತ್ತರಿಸಿದ ಅನುರಾಗ್ ಠಾಕೂರ್, ವಿದೇಶಕ್ಕೆ ಓಡಿ ಹೋಗಿರುವ 20 ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಅಂತರಾಷ್ಟ್ರೀಯ ಇಂಟರ್‍ಪೋಲ್ ಸಂಸ್ಥೆಗೂ ಪ್ರಕರಣಗಳ ಮಾಹಿತಿ ನೀಡಲಾಗಿದೆ. ಆರೋಪಿಗಳನ್ನು ಭಾರತದ ವಶಕ್ಕೆ ನೀಡುವಂತೆ ಅಲ್ಲಿ ಸರ್ಕಾರಗಳಿಗೆ ಮನವಿಯನ್ನ ಸಹ ಸಲ್ಲಿಸಲಾಗಿದ ಎಂದರು. ಇದನ್ನೂ ಓದಿ: ನನ್ನನ್ನು ಭಾರತಕ್ಕೆ ಹಸ್ತಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ – ನೀರವ್ ಮೋದಿ

  • ಸಂಸತ್ ಅಧಿವೇಶನದ ಮೊದಲು ಪ್ರಧಾನಿ ಮೋದಿ ಮಾತು

    ಸಂಸತ್ ಅಧಿವೇಶನದ ಮೊದಲು ಪ್ರಧಾನಿ ಮೋದಿ ಮಾತು

    -ಕೊರೊನಾಗೆ ಲಸಿಕೆ ಸಿಗೋವರೆಗೂ ನಿರ್ಲಕ್ಷ್ಯ ಬೇಡ

    ನವದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಶಿಷ್ಟಾಚಾರದ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾಧ್ಯಮಗಳನ್ನ ಉದ್ದೇಶಿಸಿ ಮಾತನಾಡಿದರು.

    ಈ ಬಾರಿ ವಿಭಿನ್ನ ಪರಿಸ್ಥಿತಿಯಲ್ಲಿ ಅಧಿವೇಶನ ಆರಂಭಗೊಳ್ಳಲಿದೆ. ಕೊರೊನಾ ಜೊತೆಗೆ ಕರ್ತವ್ಯ ನಿರ್ವಹಿಬೇಕಾದ ಸ್ಥಿತಿಯಲ್ಲಿ ನಾವಿದ್ದೇವೆ. ಗಡಿಯಲ್ಲಿ ಚೀನಾ ವಿರುದ್ಧ ಹೋರಾಡುತ್ತಿರುವ ಸೈನಿಕರಿಗಾಗಿ ಎಲ್ಲ ಸಂಸದರು ಒಗ್ಗಟ್ಟು ಪ್ರದರ್ಶಿಸಬೇಕಿದೆ. ನನಮ್ಮ ಸಂಸದರು ಇಂತಹ ಕಠಿಣ ಪರಿಸ್ಥಿತಿಯಲ್ಲೂ ಕರ್ತವ್ಯವನ್ನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಬಜೆಟ್ ಅಧಿವೇಶನವನ್ನ ಸಮಯಕ್ಕಿಂಂತ ಮುಂಚಿತವಾಗಿ ನಿಲ್ಲಿಸಬೇಕಾಯ್ತು ಎಂದರು.

    ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಿಂತುನಮ್ಮ ಸೈನಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾವು ಸಹ ಸೇನೆಯ ದೇಶವಿದೆ ಎಂಬ ಸಂದೇಶವನ್ನು ರವಾನಿಸಬೇಕು. ಸೈನಿಕರೊಂದಿಗೆ ನಾವಿದ್ದೇವೆ ಎಂದು ಇಡೀ ಸದನವಿದೆ. ಅಧಿವೇಶನದಲ್ಲಿ ಹಲವು ವಿಷಯಗಳ ಬಗ್ಗೆ ಗಹನವಾದ ಚರ್ಚೆಗಳು ನಡೆಯಲಿವೆ. ಎಷ್ಟು ಆಳವಾದ ಚರ್ಚೆಗಳು ನಡೆಯುತ್ತೋ ಅಷ್ಟು ಸದನ ಮತ್ತು ದೇಶಕ್ಕೆ ಲಾಭದಾಯವಾಗಲಿದೆ. ಕೊರೊನಾ ವೈರಸ್ ಹಿನ್ನೆಲೆ ಸದನಗಳಲ್ಲಿ ಹಲವು ನಿಯಮಗಳನ್ನ ರೂಪಿಸಲಾಗಿದ್ದು, ಎಲ್ಲರೂ ಪಾಲಿಸಬೇಕು ಎಂದು ತಿಳಿಸಿದರು.

    ಮಾಹಾಮಾರಿ ಕೊರೊನಾಗೆ ಲಸಿಕೆ ಸಿಗೋವರೆಗೂ ನಿರ್ಲಕ್ಷ್ಯ ಬೇಡ. ನಮ್ಮ ವಿಜ್ಞಾನಿಗಳು ಲಸಿಕೆ ಕಂಡುಹಿಡಿಯುವಲ್ಲಿ ಆದಷ್ಟು ಬೇಗ ಸಫಲರಾಗಬೇಕಿದೆ. ವಿಶ್ವದ ಯಾವುದೇ ಮೂಲೆಯಿಂದ ಔಷಧಿ ಸಿದ್ಧವಾದ್ರೆ ಅದುವೇ ಸಂತೋಷದ ವಿಚಾರ. ಹಾಗೆ ಪತ್ರಕರ್ತರು ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಎಂದು ಹೇಳಿದರು.

    ಈ ಬಾರಿ ಕಲಾಪಗಳು ನಿರ್ಧಿಷ್ಟವಾಧಿಗೆ ನಡೆಯದೇ ಕೇವಲ ನಾಲ್ಕು ಗಂಟೆಗಷ್ಟೇ ಸೀಮಿತವಾಗಲಿದೆ. ಇಂದು ಮೊದಲು ಲೋಕಸಭೆ ಬಳಿಕ ರಾಜ್ಯಸಭೆ ಕಲಾಪ ನಡೆಯಲಿದೆ. ನಾಳೆಯಿಂದ ಬೆಳಗ್ಗೆ ರಾಜ್ಯಸಭೆ ಮತ್ತು ಮಧ್ಯಾಹ್ನ ಲೋಕಸಭೆ ಕಲಾಪ ನಡೆಯಲಿವೆ. ಸಮಯ ಅಭಾವದ ಹಿನ್ನೆಲೆಯಲ್ಲಿ ಪ್ರಶ್ನಾವಳಿ ಸಮಯ ರದ್ದು ಮಾಡಿದ್ದು, ಶೂನ್ಯ ಅವಧಿಯನ್ನು ಅರ್ಧಕ್ಕೆ ಇಳಿಸಲಾಗಿದೆ.

    ಕಲಾಪಗಳಲ್ಲಿ ಭಾಗಿಯಾಗುವ ಸಂಸದರಿಗೆ 72 ಗಂಟೆ ಮುಂಚೆ ಕೊರೊನಾ ಟೆಸ್ಟ್ ಮಾಡಿಸಲು ಸೂಚಿಸಲಾಗಿತ್ತು. ಅದರಂತೆ ಕೊರೊನಾ ಟೆಸ್ಟ್ ಮಾಡಿಸಿರುವ ಸಂಸದರ ಪೈಕಿ ಐದು ಮಂದಿ ಲೋಕಸಭೆ ಸದಸ್ಯರಿಗೆ ಪಾಸಿಟಿವ್ ಇರುವುದು ದೃಢವಾಗಿದೆ.

    ಕೇಂದ್ರವನ್ನು ತರಾಟೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಸೇರಿ ಎಲ್ಲಾ ವಿಪಕ್ಷಗಳು ಸಿದ್ಧವಾಗಿದೆ. ದೇಶದಲ್ಲಿನ ಆರ್ಥಿಕ ಕುಸಿತ, ಜಿಡಿಪಿ ಕುಸಿತ, ಉದ್ಯೋಗ ನಷ್ಟ, ಭಾರತ ಮತ್ತು ಚೀನಾ ಗಡಿ ವಿಚಾರ ಸೇರಿದಂತೆ ಹಲವು ಗಂಭೀರ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಮತ್ತು ಈ ಸಂಬಂಧ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿದೆ. ವಿಪಕ್ಷಗಳ ಟೀಕೆಗೆ ಉತ್ತರ ನೀಡಲು ಮೋದಿ ಮತ್ತು ತಂಡ ಕೂಡ ಸಿದ್ಧವಾಗಿದ್ದು, ಕೊರೊನಾ ರಣಾರ್ಭಟದ ನಡುವೆ ಸದನದಲ್ಲಿ ವಾಕ್ಸಮರವೇ ನಡೆಯುವ ಸಾಧ್ಯತೆಗಳಿವೆ

  • ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಶಾಸಕರಿಗೆ ಬರ

    ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಶಾಸಕರಿಗೆ ಬರ

    ಬೆಂಗಳೂರು: ಮುಂಗಾರು ಅಧಿವೇಶನದ ಮೊದಲ ದಿನ ವಿಧಾನಸಭೆಯಲ್ಲಿ ಶಾಸಕರಿಗೆ ಬರ ಬಂದಿತ್ತು. ಕೇವಲ 45 ಶಾಸಕರು ಮಾತ್ರ ಹಾಜರಿದ್ರು. ಮೌಢ್ಯದ ಬಗ್ಗೆ ಹಾಸ್ಯದ ಶೈಲಿಯಲ್ಲಿ ಚರ್ಚೆಯಾಯ್ತು.

    ಮಳೆಗಾಗಿ ಸಚಿವ ಎಂಬಿ ಪಾಟೀಲ್ ಪರ್ಜನ್ಯ ಹೋಮದ ಬಗ್ಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಸ್ತಾಪಿಸಿದಾಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿ, ಸರ್ಕಾರ ದುಡ್ಡು ಭರಿಸಲ್ಲ. ಅದು ಎಂಬಿ ಪಾಟೀಲ್ ಸ್ವಂತ ಖರ್ಚು. ಅದು ಅವರ ನಂಬಿಕೆ. ವೈಯಕ್ತಿಕವಾಗಿ ನಾನು ನಂಬುವುದಿಲ್ಲ ಎಂದರು.

    ಈ ವೇಳೆ ಎದ್ದು ನಿಂತ ಜಗದೀಶ್ ಶೆಟ್ಟರ್, ಸಚಿವರಾಗಿ ಎಂಬಿ ಪಾಟೀಲ್ ಮಾಡಿದ್ದನ್ನ ಸಿಎಂ ಸಮರ್ಥಿಸಿಕೊಳ್ಳುವ ಮಟ್ಟಕ್ಕೆ ಬಂದಿರೋದು ಖೇದಕರ. ಮೋಡ ಬಿತ್ತನೆ ಬದಲು ಮೂಢ ಬಿತ್ತನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

    ಈಶ್ವರಪ್ಪ ಗರಂ: ಪರಿಷತ್‍ನಲ್ಲಿ ಈಶ್ವರಪ್ಪ ಗರಂ ಆಗಿದ್ರು. ವಿಮಲಗೌಡರಿಗೆ ಸಂತಾಪ ಸೂಚಿಸುವ ವೇಳೆ, ಪಕ್ಷಾಂತರ ಮಾಡುವವರು ಪಕ್ಷ ಕಟ್ಟಲು ಬರೋದಿಲ್ಲ. ಅಧಿಕಾರ ಅನುಭವಿಸಲು ಬರುತ್ತಾರೆ ಅಂತ ಪಕ್ಷದ ನಾಯಕರ ವಿರುದ್ಧವೇ ಈಶ್ವರಪ್ಪ ಪರೋಕ್ಷ ವಾಗ್ದಾಳಿ ನಡೆಸಿದರು.

    ವಿಮಲಗೌಡರು ಚುನಾವಣೆಗೆ ನಿಂತು ಸೋತಿದ್ದಾಗ ಧೈರ್ಯ ಹೇಳಲು ಹೋಗಿದ್ದೆ. ಆಗ, ಸೋಲು ಬೇಸರ ತಂದಿಲ್ಲ. ನಮ್ಮವರೇ ನಮಗೆ ಸೋಲಿಸಿದ್ರಲ್ಲ ಅಂತ ವಿಮಲ ಬೇಸರಗೊಂಡಿದ್ದರು ಎಂದು ಅವರು ಹೇಳಿದರು.