Tag: Montepadavu

  • Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

    Mangaluru Landslide | ಮಕ್ಕಳ ಅಗಲಿಕೆ ಮಧ್ಯೆ ಎರಡೂ ಕಾಲು ಕಳೆದುಕೊಂಡ ಅಶ್ವಿನಿ

    ಮಂಗಳೂರು: ಮೊಂಟೆಪದವು (Montepadavu) ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು (Landslide) ಇಬ್ಬರು ಮಕ್ಕಳನ್ನು ಕಳೆದುಕೊಂಡಿದ್ದ ಮಹಿಳೆ ಎರಡೂ ಕಾಲುಗಳು ಸ್ವಾಧಿನ ಕಳೆದುಕೊಂಡಿದ್ದಾರೆ. ಇದರಿಂದ ವೈದ್ಯರು ಶಸ್ತ್ರ ಚಿಕಿತ್ಸೆ ಮಾಡಿ ಎರಡೂ ಕಾಲನ್ನು ಕತ್ತರಿಸಿ ತೆಗೆದಿದ್ದಾರೆ.

    ಮೇ 30ರ ಬೆಳಗಿನ ಜಾವ ಭಾರೀ ಮಳೆಯಿಂದ (Rain) ಮೊಂಟೆಪದವಿನಲ್ಲಿ ಮನೆ ಮೇಲೆ ಗುಡ್ಡ ಕುಸಿದಿತ್ತು. ಅವಶೇಷಗಳ ಅಡಿ ಸಿಲುಕಿದ್ದ ಮಹಿಳೆ ಅಶ್ವಿನಿ, ಅವರ ಇಬ್ಬರು ಮಕ್ಕಳನ್ನು ಬಿಗಿದಪ್ಪಿ ಕಾಪಾಡಲು ಯತ್ನಿಸಿದ್ದರು. ಆದರೆ ಒಂದು ಮಗು ಅಲ್ಲಿಯೇ ಸಾವನ್ನಪ್ಪಿತ್ತು. ಇನ್ನೊಂದು ಮಗು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯೆ ಸಾವನ್ನಪ್ಪಿತ್ತು. ಗಾಯಗೊಂಡಿದ್ದ ಅಶ್ವಿನಿಯವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

    ಮಹಿಳೆಯ ಸಂಪೂರ್ಣ ಸ್ವಾಧೀನ ಕಳೆದುಕೊಂಡಿರುವ ಕಾಲುಗಳನ್ನು ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಕತ್ತರಿಸಿದ್ದಾರೆ. ಒಂದು ಕಾಲಿನ ಪಾದದ ಭಾಗದಿಂದ ಕತ್ತರಿಸಲಾಗಿದೆ. ಮತ್ತೊಂದು ಪೂರ್ತಿ ಕಾಲು ಕತ್ತರಿಸಿದ್ದಾರೆ. 24 ಗಂಟೆಗಳ ಕಾಲ ವೈದ್ಯರು ಅವರ ಮೇಲೆ ನಿಗ ಇಟ್ಟಿದ್ದಾರೆ.

    ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ ಪಕ್ಕದಲ್ಲೇ ಅಂತ್ಯಕ್ರಿಯೆ ಮಾಡಿದ್ದಾರೆ. ಇಬ್ಬರು ಮಕ್ಕಳಾದ ಆರ್ಯನ್ ಮತ್ತು ಆರುಷ್ ಮೃತದೇಹವನ್ನು ಮಣ್ಣಿನಲ್ಲಿ ಹೂಳಲಾಗಿದೆ. ಪಕ್ಕದಲ್ಲೇ ಅಜ್ಜಿ ಪ್ರೇಮಾ ಅವರ ಶವಕ್ಕೆ ಅಗ್ನಿ ಸ್ಪರ್ಶ ಮಾಡಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

  • ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

    – ಬದುಕುಳಿದಿದ್ದ ಎರಡೂವರೆ ವರ್ಷದ ಮಗುವೂ ಸಾವು

    ಮಂಗಳೂರು: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ 9 ಗಂಟೆಗಳ ಜೀವನ್ಮರಣ ಹೋರಾಟದ ನಡೆಸಿದ್ದ 9 ವರ್ಷದ ಮಗು ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲೇ ಮೃತಪಟ್ಟಿರುವ ಘಟನೆ ಮಂಗಳೂರಿನ (Mangaluru) ದೇರಳ ಕಟ್ಟೆ ಸಮೀಪದ ಮೊಂಟೆಪದವು ಕೋಡಿ ಎಂಬಲ್ಲಿ ನಡೆದಿದೆ.

    ಘಟನೆಯಲ್ಲಿ ಒಂದೇ ಕುಟುಂಬದ ಐವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (54) ಮಕ್ಕಳಾದ ಮೂರು ವರ್ಷದ ಮಗು ಆರ್ಯನ್, ಎರಡು ವರ್ಷ ಪ್ರಾಯದ ಆರುಷ್ (2) ಮೃತರು. ಆರುಷ್ ನನ್ನು ಮಣ್ಣಿನಡಿಯಿಂದ ತೆಗೆದು ರಕ್ಷಣೆ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ. ಇನ್ನೂ ತನ್ನ ಮಕ್ಕಳನ್ನು ತೋಳಲ್ಲಿ ಅಪ್ಪಿಕೊಂಡು ಹೋರಾಡಿದ ತಾಯಿಯನ್ನ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

    ಗುರುವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ದೇರಳಕಟ್ಟೆ ಸಮೀಪದ ಕಾನಕೆರೆ ಹಾಗೂ ಮೊಂಟೆಪದವು ಕೋಡಿ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೊಂದು ಮಗು ಪ್ರಜ್ಞಾನಹೀನ ಸ್ಥಿತಿಯಲ್ಲಿತ್ತು, ಪ್ರಜ್ಞೆ ಬರುತ್ತಿದ್ದಂತೆ ತನ್ನ ತಾಯಿಯ ತೋಳನ್ನು ಬಿಗಿದಪ್ಪಿಕೊಂಡು ಕಾಪಾಡಿ.. ಕಾಪಾಡಿ.. ಎನ್ನುತ್ತಾ ಚೀರತೊಡಗಿತ್ತು. ಸತತ 9 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದ ರಕ್ಷಣಾ ತಂಡಗಳು ತಾಯಿ ಅಶ್ವಿನಿ, ಮಗು ಆರುಷ್‌ ಇಬ್ಬರನ್ನೂ ರಕ್ಷಣೆ ಮಾಡಿದ್ದವು. ಆದ್ರೆ ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದಾಗಲೇ ಮಗುವಿನ ಪ್ರಾಣಪಕ್ಷಿ ಹಾರಿದೆ.

    ಏನಿದು ಘಟನೆ?
    ಮೊಂಟೆಪದವು ಕೋಡಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಕಾಂತಪ್ಪ ಪೂಜಾರಿ ಎಂಬುವವರ ಮನೆ ಮೇಲೆ ಬಿದ್ದಿದೆ. ಬೃಹತ್‌ ಮರದ ಸಹಿತ ಸುಮಾರು 30 ಅಡಿ ಮಣ್ಣು ಕುಸಿದು ಬಿದ್ದಿತ್ತು. ಶುಕ್ರವಾರ (ಇಂದು) ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಈ ವೇಳೆ ಮನೆಯಲ್ಲಿದ್ದ ಒಂದೇ ಕುಟುಂಬದ ಐವರು ಸಿಲುಕಿಕೊಂಡಿದ್ದು, ಈ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಇದನ್ನೂ ಓದಿ: ಸಲೂನ್‌ಗೆ ನುಗ್ಗಿ ಲೇಡಿ ರೌಡಿ ಗ್ಯಾಂಗ್‌ನಿಂದ ದಾಂಧಲೆ – ಮೂವರು ಅರೆಸ್ಟ್‌

    ಸ್ಥಳಕ್ಕೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದವು. ಕಾಂತಪ್ಪ ಪೂಜಾರಿ (65) ಅವರನ್ನು ರಕ್ಷಣೆ ಮಾಡಲಾಗಿತ್ತು. ಆದ್ರೆ ಅಶ್ವಿನಿ (31), ಆರ್ಯನ್ (2.5) ಆರುಷ್‌ (1) ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿತ್ತು. ಆರ್ಯನ್‌ ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದರಿಂದ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಅಶ್ವಿನಿ, ಆರುಷ್‌ ರಕ್ಷಣೆಗೆ ಹೋರಾಟ ನಡೆದಿತ್ತು. ತಾಯಿ-ಮಕ್ಕಳಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿತ್ತು.

    ಆದ್ರೆ 9 ಗಂಟೆಗಳ ಕಾರ್ಯಾಚರಣೆ ಬಳಿಕ ಇಬ್ಬರನ್ನೂ ರಕ್ಷಿಸಿ ಹೊರತೆಗೆಯಲಾಗಿತ್ತು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ 1 ವರ್ಷದ ಮಗುವನ್ನು ಕರೆದೊಯ್ಯುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ