Tag: Monument

  • ನಟ ಚೇತನ್ ವಿರುದ್ಧ ತಿರುಗಿ ಬಿದ್ದ ವಿಷ್ಣುವರ್ಧನ್ ಫ್ಯಾನ್ಸ್

    ನಟ ಚೇತನ್ ವಿರುದ್ಧ ತಿರುಗಿ ಬಿದ್ದ ವಿಷ್ಣುವರ್ಧನ್ ಫ್ಯಾನ್ಸ್

    ಸಿನಿಮಾ ಸಿಲೆಬ್ರೆಟಿಗಳಿಗೆ ಸಾರ್ವಜನಿಕ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಮಾರಕ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ನಿನ್ನೆಯಷ್ಟೇ ನಟ, ಸಾಮಾಜಿಕ ಹೋರಾಟಗಾರ ಚೇತನ್ (Chetan) ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದರು. ಈ ಬರಹಕ್ಕೆ ಡಾ.ವಿಷ್ಣುವರ್ಧನ್ (Vishnuvardhan) ಅಭಿಮಾನಿಗಳು (Fans) ಗರಂ ಆಗಿದ್ದಾರೆ. ಚೇತನ್ ಹೇಳುತ್ತಿರುವ ಮಾತು ಸರಿಯಾಗಿಯೇ ಇರಬಹುದು. ಆದರೆ, ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗಿರುವ ಈ ಹೊತ್ತಿನಲ್ಲಿ ಅವರ ಪ್ರತಿಕ್ರಿಯೆ ದುರುದ್ದೇಶದಿಂದ ಕೂಡಿದ್ದು ಎಂದಿದ್ದಾರೆ ಅಭಿಮಾನಿಗಳು.

    ಕನ್ನಡ ಸಿನಿಮಾ ರಂಗದಲ್ಲಿ ಯಾವೆಲ್ಲ ನಟ, ನಟಿಯರ, ನಿರ್ಮಾಪಕರ ಸ್ಮಾರಕಗಳು ಆಗಿವೆ ಎನ್ನುವುದು ಚೇತನ್ ಗೆ ಗೊತ್ತಿದೆ. ಆಗೆಲ್ಲ ಮಾತಾಡದೇ ಇರುವವರು ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯಾದ ಸಂದರ್ಭದಲ್ಲಿ ಮಾತನಾಡಿದ್ದಾರೆ ಅಂದರೆ, ಆ ಮಾತಿನ ಹಿಂದಿರುವ ಉದ್ದೇಶವನ್ನೂ ಅವರು ಸ್ಪಷ್ಟ ಪಡಿಸಬೇಕು ಎಂದು ಅನೇಕ ಅಭಿಮಾನಿಗಳು ಚೇತನ್ ಪೇಜ್ ನಲ್ಲಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಅವರು ಎಲ್ಲರ ಸ್ಮಾರಕಗಳ ಬಗ್ಗೆಯೂ ಮಾತನಾಡಲಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಮುಖಮುಚ್ಚಿಕೊಂಡು ‘ಪಠಾಣ್’ ಸಿನಿಮಾಗೆ ಬಂದ ದೀಪಿಕಾ ಪಡುಕೋಣೆ

    ನಿನ್ನೆ ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಚಲನಚಿತ್ರ ತಾರೆಯರಿಗೆ ಸಾರ್ವಜನಿಕ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಮಾರಕ ನಿರ್ಮಾಣ ಮಾಡಬಾರದು. ಹಲವಾರು ಕನ್ನಡಿಗರಂತೆಯೇ ನಟ, ನಟಿಯರು ಕೂಡ ಕೆಲಸ ಮಾಡಿ ಸಂಪಾದಿಸುತ್ತಾರೆ. ಈಗಾಗಲೇ ನಮ್ಮ ಸಮಾಜದಲ್ಲಿ ಅವರಿಗೆ ಅನಗತ್ಯ ಪ್ರಚಾರ ನೀಡಿದ್ದೇವೆ. ಅವರ ಸಿನಿಮಾ ಯಶಸ್ಸಿಗೆ ಅನಗತ್ಯವಾಗಿಯೇ ಗಮನ ಸೆಳೆಯುತ್ತಾರೆ. ಹಾಗಾಗಿ ಸ್ಮಾರಕಗಳನ್ನು ಕಟ್ಟದಂತೆ ಅವರು ಮನವಿ ಮಾಡಿದ್ದರು. ನಾಡಿಗೆ ಬೇಕಾಗಿದ್ದು ಸ್ಟಾರ್ ಗಳ ಸ್ಮಾರಕಗಳ ಬದಲು ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವಂತಹ ವಸ್ತು ಸಂಗ್ರಹಾಲಯಗಳು. ನಮ್ಮ ನೆಲ ಸ್ಮಾರಕಗಳಿಗಿಂತ ವಸ್ತು ಸಂಗ್ರಹಾಲಯಗಳಿಗೆ ಬಳಕೆಯಾಗಲಿ ಎಂದು ನಟ ಚೇತನ್ ಆಗ್ರಹಿಸಿದ್ದರು.

    ಸಿನಿಮಾ ರಂಗದ ವಿಚಾರವಾಗಿ ಚೇತನ್ ಈ ಹಿಂದೆಯೇ ಅನೇಕ ಮಾತುಗಳನ್ನು ಆಡಿದ್ದಾರೆ. ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಹೋರಾಟವನ್ನೇ ಅವರು ಕೈಗೆತ್ತಿಕೊಂಡಿದ್ದರು. ನಟ ನಟಿಯರ ತಾರತಮ್ಯದ ಬಗ್ಗೆ ಧ್ವನಿ ಎತ್ತಿದ್ದರು. ಕಾರ್ಮಿಕರ ಕಷ್ಟಗಳ ಕುರಿತು ಮಾತನಾಡಿದ್ದರು. ಇದೀಗ ಸ್ಮಾರಕಗಳ ಬಗ್ಗೆ ಚೇತನ್ ಮಾತನಾಡಿದ್ದಾರೆ. ಜನರ ಹಣವನ್ನು ಈ ರೀತಿಯಾಗಿ ದುಂದುವೆಚ್ಚ ಮಾಡಬೇಡಿ ಎಂದು ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿನಿಮಾ ಸ್ಟಾರ್ ಗಳಿಗೇಕೆ ಸ್ಮಾರಕ? : ನಟ ಚೇತನ್ ಪ್ರಶ್ನೆ

    ಸಿನಿಮಾ ಸ್ಟಾರ್ ಗಳಿಗೇಕೆ ಸ್ಮಾರಕ? : ನಟ ಚೇತನ್ ಪ್ರಶ್ನೆ

    ಲನಚಿತ್ರ ತಾರೆಯರಿಗೆ ಸಾರ್ವಜನಿಕ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು ಸ್ಮಾರಕ (memorial) ನಿರ್ಮಾಣ ಮಾಡಬಾರದು ಎಂದು ನಟ (Actor), ಸಾಮಾಜಿಕ ಹೋರಾಟಗಾರ ಚೇತನ್ (Chetan) ಸರಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.  ಹಲವಾರು ಕನ್ನಡಿಗರಂತೆಯೇ ನಟ, ನಟಿಯರು ಕೂಡ ಕೆಲಸ ಮಾಡಿ ಸಂಪಾದಿಸುತ್ತಾರೆ. ಈಗಾಗಲೇ ನಮ್ಮ ಸಮಾಜದಲ್ಲಿ ಅವರಿಗೆ ಅನಗತ್ಯ ಪ್ರಚಾರ ನೀಡಿದ್ದೇವೆ. ಅವರ ಸಿನಿಮಾ ಯಶಸ್ಸಿಗೆ ಅನಗತ್ಯವಾಗಿಯೇ ಗಮನ ಸೆಳೆಯುತ್ತಾರೆ. ಹಾಗಾಗಿ ಸ್ಮಾರಕಗಳನ್ನು ಕಟ್ಟದಂತೆ ಅವರು ಮನವಿ ಮಾಡಿದ್ದಾರೆ.

    Actor chetan (1)

    ನಾಡಿಗೆ ಬೇಕಾಗಿದ್ದು ಸ್ಟಾರ್ ಗಳ ಸ್ಮಾರಕಗಳ ಬದಲು ಕರ್ನಾಟಕ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವಂತಹ ವಸ್ತು ಸಂಗ್ರಹಾಲಯಗಳು. ನಮ್ಮ ನೆಲ ಸ್ಮಾರಕಗಳಿಗಿಂತ ವಸ್ತು ಸಂಗ್ರಹಾಲಯಗಳಿಗೆ ಬಳಕೆಯಾಗಲಿ ಎಂದು ನಟ ಚೇತನ್ ಆಗ್ರಹಿಸಿದ್ದಾರೆ. ನಿನ್ನೆಯಷ್ಟೇ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ಉದ್ಘಾಟನೆ ಆಗಿದೆ. ಈ ಬೆನ್ನಲ್ಲೇ ಚೇತನ್ ಇಂತಹ ಮಾತುಗಳನ್ನು ಆಡಿದ್ದಾರೆ. ಇವರ ಮಾತು ಯಾವ ಸ್ವರೂಪ ಪಡೆದುಕೊಳ್ಳುತ್ತದೆಯೋ ಕಾದು ನೋಡಬೇಕು. ಇದನ್ನೂ ಓದಿ: ದೈವ ದರ್ಶನ ಪಡೆದ ನಿರೂಪಕಿ ಅನುಶ್ರೀ

    ಸಿನಿಮಾ ರಂಗದ ವಿಚಾರವಾಗಿ ಚೇತನ್ ಈ ಹಿಂದೆಯೇ ಅನೇಕ ಮಾತುಗಳನ್ನು ಆಡಿದ್ದಾರೆ. ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಹೋರಾಟವನ್ನೇ ಅವರು ಕೈಗೆತ್ತಿಕೊಂಡಿದ್ದರು. ನಟ ನಟಿಯರ ತಾರತಮ್ಯದ ಬಗ್ಗೆ ಧ್ವನಿ ಎತ್ತಿದ್ದರು. ಕಾರ್ಮಿಕರ ಕಷ್ಟಗಳ ಕುರಿತು ಮಾತನಾಡಿದ್ದರು. ಇದೀಗ ಸ್ಮಾರಕಗಳ ಬಗ್ಗೆ ಚೇತನ್ ಮಾತನಾಡಿದ್ದಾರೆ. ಜನರ ಹಣವನ್ನು ಈ ರೀತಿಯಾಗಿ ದುಂದುವೆಚ್ಚ ಮಾಡಬೇಡಿ ಎಂದು ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಧಿಯಾಸೆಗೆ ಶಿವಲಿಂಗ ಕೆತ್ತನೆ ಇರುವ ಸ್ಮಾರಕ ಧ್ವಂಸ

    ನಿಧಿಯಾಸೆಗೆ ಶಿವಲಿಂಗ ಕೆತ್ತನೆ ಇರುವ ಸ್ಮಾರಕ ಧ್ವಂಸ

    ಶಿವಮೊಗ್ಗ: ನಿಧಿಯಾಸೆಗಾಗಿ ಶಿವಲಿಂಗದ (Shivalinga Monument) ಕೆತ್ತನೆ ಇರುವ ಸ್ಮಾರಕ ಸ್ಥಳವನ್ನು ಧ್ವಂಸಗೊಳಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಹೊಸನಗರ ತಾಲೂಕಿನ ಬಿದನೂರು ನಗರ ಸಮೀಪದ ನೇತ್ರಬೈಲು ಗುಡ್ಡದಲ್ಲಿ ನಡೆದಿದೆ. ನಿಧಿಚೋರರು ನಿಧಿಯಾಸೆಗೆ ಶೋಧ ನಡೆಸಿದ ನಂತರ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ.

    ನಿಧಿಯಾಸೆಗಾಗಿ ನಿಧಿಚೋರರು ಐತಿಹಾಸಿಕ ಸ್ಥಳಗಳ ಬಳಿ ಶೋಧ ಕಾರ್ಯ ನಡೆಸುತ್ತಿದ್ದು, ಎಲ್ಲೆಂದರಲ್ಲಿ ಐತಿಹಾಸಿಕ ಸ್ಮಾರಕಗಳನ್ನು ಅಗೆದು ಹಾಕುತ್ತಿದ್ದಾರೆ. ಇದೀಗ ಅಂತಹದ್ದೆ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೇತ್ರಬೈಲುಗುಡ್ಡದಲ್ಲಿ ನಡೆದಿದೆ. ಶ್ರೀಧರಪುರದ ಶಿವಪ್ಪನಾಯಕ ಮತ್ತು ಅರಸರ ಸಮಾಧಿ ಸ್ಥಳದಿಂದ ಒಂದು ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ಶಿವಲಿಂಗದ ಕಲ್ಲಿನ ಕೆಳಭಾಗದಲ್ಲಿ ಆರೇಳು ಅಡಿ ಅಗೆಯಲಾಗಿದೆ. ಇದನ್ನೂ ಓದಿ: ಗೋಮಾಂಸ ಮಾರಾಟ ಮಾಡ್ತಿದ್ದ ಇಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ – ವೀಡಿಯೋ ವೈರಲ್

    ಅಷ್ಟೇ ಅಲ್ಲದೇ ನಿಧಿಗಾಗಿ ಶೋಧ ಕಾರ್ಯ ನಡೆದಿದ್ದ ಸ್ಥಳದ ಸುತ್ತಲೂ ದಾರ ಕಟ್ಟಿ, ಅರಿಶಿನ, ಕುಂಕುಮ ಹಾಕಿ ನಿಂಬೆಹಣ್ಣು, ಕುಂಬಳಕಾಯಿ, ತೆಂಗಿನಕಾಯಿ, ಒಡೆಯಲಾಗಿದೆ. ಶಿವಲಿಂಗದ ಮೂರ್ತಿಗೆ ಭಸ್ಮ ಬಳಿದಿರುವುದು ಮಾತ್ರವಲ್ಲದೇ ಸುತ್ತಲೂ ಹಾಕಲಾಗಿದೆ. ಹೊರಭಾಗ ಮತ್ತು ಲಿಂಗದ ಸಮೀಪ‌ ಹಣತೆ ಇಟ್ಟು ದೀಪ ಬೆಳಗಿಸಲಾಗಿದೆ. ನಿಧಿ ಶೋಧಕ್ಕೂ ಮೊದಲು ನಿಧಿಚೋರರು ವಾಮಾಚಾರ ನಡೆಸಿರುವ ಬಗ್ಗೆ ಶಂಕಿಸಲಾಗಿದೆ.

    ನೇತ್ರಬೈಲು ಗುಡ್ಡ ಜನವಸತಿ ಪ್ರದೇಶದಿಂದ ದೂರದಲ್ಲಿದೆ. ಹೀಗಾಗಿ ಈ ಸ್ಥಳಕ್ಕೆ ಸ್ಥಳೀಯರು ಆಗಾಗ ಹೋಗುವುದು ಕಡಿಮೆ. ಆದರೆ ಸ್ಥಳೀಯರು ತಮ್ಮ ಕೆಲಸಗಳಿಗೆ ಗುಡ್ಡಕ್ಕೆ ಹೋದ ಸಂದರ್ಭದಲ್ಲಿ ಇದು ಬೆಳಕಿಗೆ ಬಂದಿದೆ. ವಾರದ ಹಿಂದೆ ಗ್ರಹಣದ ವೇಳೆ ಈ ಕೃತ್ಯ ನಡೆಸಿರಬಹುದು ಎಂಬ ಅನುಮಾನ ಸ್ಥಳೀಯರದ್ದಾಗಿದೆ. ಇದನ್ನೂ ಓದಿ: ಬಸವಲಿಂಗ ಶ್ರೀ ಆತ್ಮಹತ್ಯೆ ಕೇಸ್- ಬಂಧಿತರ ಮೊಬೈಲ್ FSLಗೆ ರವಾನೆ

    ಕಳೆದ ಐದಾರು ವರ್ಷದಿಂದ ನಿರಂತರವಾಗಿ ನಿಧಿಯಾಸೆಗೆ ಸ್ಮಾರಕ ಧ್ವಂಸಗೊಳಿಸುತ್ತಿರುವ ಘಟನೆ ನಡೆಯುತ್ತಿದೆ. ಶಿವಪ್ಪನಾಯಕ ಅರಸರ ಸಮಾಧಿ, ಶೂಲದ ಗುಡ್ಡ, ಬರೇಕಲ್ ಬತೇರಿ, ಗಳಿಗೆಬಟ್ಟಲು ಸೇರಿದಂತೆ ವಿವಿಧ ಕಡೆ ಸ್ಮಾರಕ ಹಾಳುಗೆಡವಿದ ಘಟನೆ ಈ ಹಿಂದೆಯೂ ನಡೆದಿತ್ತು. ನಿಧಿಯಾಸೆಗೆ ಬಿದನೂರಿನ ಸ್ಮಾರಕಗಳು ಅವಸಾನಗೊಳ್ಳುತ್ತಿವೆ.

    ಘಟನೆ ನಂತರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನಾದರೂ ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಇಂತಹ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಧಿಚೋರರನ್ನು ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಳೆಬೀಡಿನಲ್ಲಿ ಉತ್ಕನನದ ವೇಳೆ ಎಡವಟ್ಟು – ಬೆಂಕಿಯಿಂದ ಹಲವು ವಿಗ್ರಹಗಳಿಗೆ ಹಾನಿ

    ಹಳೆಬೀಡಿನಲ್ಲಿ ಉತ್ಕನನದ ವೇಳೆ ಎಡವಟ್ಟು – ಬೆಂಕಿಯಿಂದ ಹಲವು ವಿಗ್ರಹಗಳಿಗೆ ಹಾನಿ

    ಹಾಸನ: ಹಳೆಬೀಡಿನ ಹೊಯ್ಸಳೇಶ್ವರ ದೇಗುಲದ ಆವರಣದಲ್ಲಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚುವಾಗ ಎಡವಟ್ಟಾಗಿದ್ದು ಹಲವು ವಿಗ್ರಹಗಳಿಗೆ ಹಾನಿಯಾಗಿದೆ.

    ಸ್ಮಾರಕದ ಸುತ್ತ ಬೆಳೆದಿದ್ದ ಅನುಪಯುಕ್ತ ಕಳೆ ತೆಗೆದು ಸ್ವಚ್ಛಗೊಳಿಸುವ ಕೆಲಸವನ್ನು ಸುಲಭ ಮಾಡಿಕೊಳ್ಳುವ ಸಲುವಾಗಿ ಒಣಗಿದ್ದ ಗಿಡಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ವೇಳೆ ಎಡವಟ್ಟಾಗಿದ್ದು, ಅತ್ಯಮೂಲ್ಯ ವಿಗ್ರಹಗಳು ಸುಟ್ಟು ಮಸಿ ಹಿಡಿದು ಮೂಲ ರೂಪ ಕಳೆದುಕೊಂಡಿದೆ.

    ಭಾರತೀಯ ಪುರಾತತ್ವ ವಿಭಾಗದಿಂದ ನಿಯೋಜಿರಾಗಿದ್ದ ಕಾರ್ಮಿಕರು ಈ ಅಚಾತುರ್ಯ ಎಸಗಿದ್ದಾರೆ. ಬಿಸಿಲಿಗೆ ಒಣಗಿದ್ದ ಗಿಡ-ಬಳ್ಳಿಗಳು ಧಗಧಗನೆ ಹೊತ್ತಿಕೊಂಡು ಉರಿದಿದ್ದು ಕೆರೆ ದಂಡೆಯಲ್ಲಿದ್ದ ಹುಚ್ಚೇಶ್ವರ(ಬ್ರಹ್ಮೇಶ್ವರ) ಸ್ಮಾರಕದ ಬಹುಭಾಗ ಬೆಂಕಿಯ ಜ್ವಾಲೆಗೆ ಸಿಲುಕಿ ಕರಕಲಾಗಿದೆ.

    ಘಟನೆಯ ತರುವಾಯ ಸಿಬ್ಬಂದಿ ಹಾಗೂ ಕಾರ್ಮಿಕರು ನೀರು ಹಾಕಿ ಬೆಂಕಿಯನ್ನು ಆರಿಸಿದರೂ ವಿಗ್ರಹಗಳಿಗೆ ಆಗಿರುವ ಹಾನಿಯನ್ನು ಸರಿಪಡಿಸಲು ಆಗಿಲ್ಲ. ಜೈನ ಬಸದಿ ಹಿಂಭಾಗದಲ್ಲಿ ಪುರಾತತ್ವ ವಿಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಸುತ್ತಲು ಬೆಳೆದಿದ್ದ ಗಿಡಗಂಟೆ ನಾಶಪಡಿಸಲು ಬೆಂಕಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳು ಕರಕಲಾಗಿವೆ. ಉತ್ಖನನ ಕಾರ್ಯದಲ್ಲಿ ಪಾಲ್ಗೊಂಡವರು ವಿಗ್ರಹಗಳ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಉತ್ಖನನ ಮಾಡಿ ಪ್ರಯೋಜನವೇನು ಎಂದು ಸ್ಥಳೀಯರು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

    ಹಂಪಿಯಲ್ಲಿ ಸ್ಮಾರಕ ಧ್ವಂಸ – ವಿಜಯನಗರ, ಮೈಸೂರು ಮಹಾರಾಜರಿಂದ ಪ್ರತಿಭಟನೆ

    ಬಳ್ಳಾರಿ: ವಿಶ್ವ ವಿಖ್ಯಾತ ಹಂಪಿಯ ಸ್ಮಾರಕಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿ ಹಂಪಿಯಲ್ಲಿಂದು ವಿಜಯನಗರ ಹಾಗೂ ಮೈಸೂರು ಮಹಾರಾಜರು ಪ್ರತಿಭಟನೆ ನಡೆಸಿದ್ದಾರೆ.

    ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ ನಡೆಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ ಮೈಸೂರಿನ ಯುವರಾಜ ಯದುವೀರ್ ಹಾಗೂ ವಿಜಯನಗರದ ಕೃಷ್ಣದೇವರಾಜರು ಪ್ರತಿಭಟನೆಯಲ್ಲಿ ಭಾಗವಹಿಸಿ ಸ್ಮಾರಕ ಧ್ವಂಸಗೊಳಿಸಿರುವುದನ್ನು ಖಂಡಿಸಿದ್ದಾರೆ. ಕಮಲಾಪುರದ ಪುರಾತತ್ವ ಇಲಾಖೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮಹಾರಾಜರು ಹಾಗೂ ನೂರಾರು ಸ್ಥಳೀಯರು, ಹಂಪಿಯಲ್ಲಿ ಸ್ಮಾರಕಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

    ಈ ವೇಳೆ ಮಾತನಾಡಿದ ಮೈಸೂರಿನ ಯುವರಾಜ ಯದುವೀರ್ ಅವರು ಹಂಪಿಯನ್ನು ಉಳಿಸುವ ಕೆಲಸವನ್ನು ನಾವೆಲ್ಲ ಮಾಡಬೇಕಾಗಿದೆ. ಪುರಾತತ್ವ ಇಲಾಖೆ ಈ ಬಗ್ಗೆ ಇನ್ನಷ್ಟು ಕಾರ್ಯಪ್ರವೃತ್ತರಾಗಬೇಕು, ನಮ್ಮ ಮೈಸೂರಿನಲ್ಲಿಯೂ ಸ್ಮಾರಕಗಳಿಗೆ ಧಕ್ಕೆಯಾಗುತ್ತಿವೆ. ಸ್ಮಾರಕಗಳನ್ನು ಉಳಿಸಲು ಜನರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕಿಡಿಗೇಡಿಗಳ ಅಟ್ಟಹಾಸ – ಹಂಪಿಯ ಐತಿಹಾಸಿಕ ಸ್ಮಾರಕಗಳನ್ನ ಕೆಡವಿದ ವಿಡಿಯೋ ವೈರಲ್..!

    ಯದುವೀರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಒಡೆಯರ್ ನೋಡಿ ಪ್ರವಾಸಿಗರು ಅವರ ಜೊತೆ ಫೋಟೋ, ಸೆಲ್ಫಿ ತಗೆದುಕೊಂಡಿದ್ದಾರೆ. ಇದನ್ನೂ ಓದಿ: ಕಿಡಿಗೇಡಿಗಳಿಂದ ಸ್ಮಾರಕ ಧ್ವಂಸ – ಎಸ್‍ಪಿಯಿಂದ ಸ್ಥಳ ಪರಿಶೀಲನೆ

    ಇದಾದ ಬಳಿಕ ಯದುವೀರ್ ಅವರು ಸಂಗೀತ ಮಂಟಪಕ್ಕೆ ತೆರಳಿ, ಸಪ್ತಸ್ವರ ಕಂಬಗಳಿಂದ ನಾದ ಆಲಿಸಿ ಖುಷಿಪಟ್ಟರು. ನಂತರ ತುಂಗಭದ್ರಾ ನದಿ ತೀರದಲ್ಲಿರುವ ಪುರಂದರ ಮಂಟಪ ವೀಕ್ಷಣೆ ಮಾಡಿದ್ದಾರೆ. ಯದುವೀರ್ ಅವರ ಜೊತೆ ಕನ್ನಡ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಸಿ.ಎಸ್.ವಾಸುದೇವನ್ ಮತ್ತಿತರರು ಇದ್ದರು. ಯದುವೀರ್ ಅವರು ಹಂಪಿಗೆ ಆಗಾಗ ಭೇಟಿ ನೀಡುತ್ತಾರೆ. ಈ ಬಾರಿಯೂ ಹಂಪಿ ಪ್ರಸಿದ್ಧ ಸ್ಮಾರಕ ಸೇರಿದಂತೆ ಪ್ರಕೃತಿ ಸೊಬಗನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv