Tag: moral policing

  • ಬಂಟ್ವಾಳದಲ್ಲಿ ಪೊಲೀಸ್‌ ಸಿಬ್ಬಂದಿಯ ಮೇಲೆ ನೈತಿಕ ಪೊಲೀಸ್‌ಗಿರಿ – ಇಬ್ಬರು ಅರೆಸ್ಟ್‌

    ಬಂಟ್ವಾಳದಲ್ಲಿ ಪೊಲೀಸ್‌ ಸಿಬ್ಬಂದಿಯ ಮೇಲೆ ನೈತಿಕ ಪೊಲೀಸ್‌ಗಿರಿ – ಇಬ್ಬರು ಅರೆಸ್ಟ್‌

    ಮಂಗಳೂರು: ಸರ್ಕಾರದ ಎಚ್ಚರಿಕೆ ನಡುವೆಯೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣಗಳು ಮೇಲಿಂದ ಮೇಲೆ ವರದಿ ಆಗುತ್ತಿವೆ. ಇದೀಗ ಪೊಲೀಸ್ (Police) ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿ ನೈತಿಕ ಪೊಲೀಸ್‍ಗಿರಿ ಮಾಡಿರುವ ಪ್ರಕರಣವೊಂದು ಬಂಟ್ವಾಳದ (Bantwal) ಬಿಸಿ ರೋಡ್‍ನಲ್ಲಿ ನಡೆದಿದೆ.

    ಮುಸ್ಲಿಂ ಮತ್ತು ಹಿಂದೂ ಹುಡುಗಿಯರನ್ನು ಎಲ್ಲಿಗೆ ಕರೆದುಕೊಂಡು ಹೋಗ್ತಿದ್ದೀಯಾ? ಇಲ್ಲಿನ ವಿಚಾರ ನಿನಗೆ ಗೊತ್ತಲ್ಲ ಎನ್ನುತ್ತಾ ಪೊಲೀಸ್ ಸಿಬ್ಬಂದಿಗೆ ಹಲ್ಲೆ ಮಾಡಿದ ಗುಂಪೊಂದು, ಪೊಲೀಸ್ ಸಿಬ್ಬಂದಿಯ ಪತ್ನಿ ಮೇಲೆ ಮಾನಭಂಗಕ್ಕೂ ಯತ್ನಿಸಿದೆ ಎಂಬ ಆರೋಪ ಕೇಳಿಬಂದಿದೆ.  ಇದನ್ನೂ ಓದಿ: ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

    ಮಾನಭಂಗ ಯತ್ನ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಪೊಲೀಸರು, ಆರೋಪಿಗಳಾದ ತುಂಬೆ ನಿವಾಸಿ ಮನೀಶ್ ಪುಜಾರಿ, ಮಂಜುನಾಥ್ ಆಚಾರ್ಯನನ್ನು ಬಂಧಿಸಿದ್ದಾರೆ.

    ಬಂಟ್ವಾಳ ಡಿವೈಎಸ್‍ಪಿ ಕಚೇರಿಯ ಸಿಬ್ಬಂದಿ ಪ್ರಸ್ತುತ ಎನ್‍ಐಎ (NIA) ವಿಭಾಗದಲ್ಲಿ ಕರ್ತವ್ಯ ನಿರ್ವಹಿಸ್ತಿರುವ ಕುಮಾರ್ ಮೇಲೆ ಈ ಗುಂಪು ಹಲ್ಲೆ ನಡೆಸಿದೆ. ಜೊತೆಗೆ ಕುಮಾರ್ ಕುಟುಂಬದ ಮೇಲೆ ಮಾನಭಂಗ ಯತ್ನ ನಡೆದಿದೆ ಎಂದು ತಿಳಿದುಬಂದಿದೆ.

     

    ಕುಮಾರ್ ಆರೋಪವೇನು?
    ಗುರುವಾರ ರಾತ್ರಿ ಪತ್ನಿ ಮತ್ತು ಪತ್ನಿಯ ಸಹೋದರಿ ಜೊತೆ ಬಿಸಿ ರೋಡ್ ವಸತಿ ಗೃಹದಲ್ಲಿ ತಂಗಿದ್ದೆ. ರಾತ್ರಿ ಊಟಕ್ಕೆಂದು ಹೊಟೆಲ್‍ಗೆ ಹೋಗಿ ವಾಪಸ್ ಆಗುವಾಗ ಇಬ್ಬರು ಹಿಂಬಾಲಿಸಿ ಬಂದು ನಮ್ಮನ್ನು ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿದರು. ಮುಸ್ಲಿಂ ಮತ್ತು ಹಿಂದೂ ಹುಡುಗಿಯರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದರು. ಇಲ್ಲಿನ ವಿಚಾರ ನಿನಗೆ ಗೊತ್ತಲ್ಲವೇ ಎಂದು ಬೆದರಿಕೆ ಹಾಕಿ ಹಲ್ಲೆಗೆ ಮುಂದಾದರು. ನನ್ನ ಪತ್ನಿಯ ವಿಡಿಯೋ ಚಿತ್ರೀಕರಣ ಮಾಡಿ ಮಾನಭಂಗಕ್ಕೂ ಯತ್ನಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೈತಿಕ ಪೊಲೀಸ್‌ಗಿರಿ: ಪೊಲೀಸರಿಂದ ಇಬ್ಬರು ಯುವಕರ ಬಂಧನ

    ನೈತಿಕ ಪೊಲೀಸ್‌ಗಿರಿ: ಪೊಲೀಸರಿಂದ ಇಬ್ಬರು ಯುವಕರ ಬಂಧನ

    ದಾವಣಗೆರೆ: ನೈತಿಕ ಪೊಲೀಸ್‌ಗಿರಿ (Moral Policing) ಮಾಡಿದ್ದ ಇಬ್ಬರು ಯುವಕರನ್ನು ದಾವಣಗೆರೆಯ ಕೆಟಿಜೆ‌ನಗರ ಠಾಣೆಯ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ದಾವಣಗೆರೆಯ (Davanagere) ಎಸ್‌ಪಿ ಡಾ. ಅರುಣ್ ತಿಳಿಸಿದ್ದಾರೆ.

    ಶುಕ್ರವಾರ ಕೆಟಿಜೆನಗರ ಠಾಣೆಯ ವ್ಯಾಪಿಗೆ ಬರುವ ಚಿತ್ರಮಂದಿರಕ್ಕೆ ಅನ್ಯಕೋಮಿನ ಯುವಕರ ಜೊತೆ ಯುವತಿಯೊಬ್ಬಳು ಸಿನಿಮಾಗೆ ಬಂದಿದ್ದಳು. ಇದರ ಬಗ್ಗೆ‌ ಮಾಹಿತಿ ತಿಳಿದ ದೊಡ್ಡೇಶ್, ಲಿಂಗರಾಜ್ ಹಾಗೂ ಆತನ ಸ್ನೇಹಿತರು, ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದನ್ನೂ ಓದಿ: ಖಟಕಬಾವಿ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆ – ಪೀಸ್ ಪೀಸ್ ಮಾಡಿ ಎಸೆದ ಹಂತಕರು

    ದೊಡ್ಡೇಶ್ ಎಂಬಾತ ನಟರೊಬ್ಬರ ಅಭಿಮಾನಿ ಸಂಘದ ಮಾಜಿ ಅಧ್ಯಕ್ಷನಾಗಿದ್ದು, ಈಗ ಹಿಂದೂಪರ ಸಂಘಟನೆಗಳ ಜೊತೆ ಗುರುತಿಸಿಕೊಂಡಿದ್ದ. ಅಲ್ಲದೇ ಪೊಲೀಸರಿಗೆ ಮಾಹಿತಿ ನೀಡಿದ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿದ್ದಕ್ಕೆ ಹಾಗೂ ಯುವತಿಯನ್ನು ಅಶ್ಲೀಲವಾಗಿ ನಿಂದನೆ ಮಾಡಿ ಪೇಸ್‌ಬುಕ್‌ನಲ್ಲಿ ಲೈವ್ ವೀಡಿಯೋ ಮಾಡಿದ್ದಕ್ಕೆ ಈತನ ವಿರುದ್ಧ ನೈತಿಕ ಪೊಲೀಸ್‌ಗಿರಿ ಹಾಗೂ ಜಾತಿ‌ ನಿಂದನೆಯ ಕೇಸ್ ದಾಖಲಾಗಿದೆ.

    ದೊಡ್ಡೇಶ್ ಹಾಗೂ ಲಿಂಗರಾಜ್ ಇಬ್ಬರನ್ನೂ ಕೆಟಿಜೆನಗರ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೈನಮುನಿ ಕೊಲೆ- ಆರೋಪಿಗಳಿಂದ ತಪ್ಪೊಪ್ಪಿಗೆ

    ಕಾಂಗ್ರೆಸ್‌ ನೇತೃತ್ವದ ಸರ್ಕಾರವು ನೈತಿಕ ಪೊಲೀಸ್‌ಗಿರಿ ವಿರುದ್ಧ ಕಿಡಿಕಾರಿದೆ. ನೈತಿಕ ಪೊಲೀಸ್‌ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಶುಕ್ರವಾರ ಬಜೆಟ್‌ ಮಂಡನೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

    ಮಂಗಳೂರು: ನೈತಿಕ ಪೊಲೀಸ್ ಗಿರಿ (Moral Policing) ತಡೆಯಲು ಮಂಗಳೂರು (Mangaluru) ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸದಾಗಿ ಕೋಮು ದ್ವೇಷ ನಿಗ್ರಹ (Anti Communal Wing) ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr.G.Parameshwara) ಭರವಸೆ ನೀಡಿದ್ದಾರೆ.

    ಮಂಗಳೂರಿನಲ್ಲಿ ಪಶ್ಚಿಮ ವಲಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಒಳ್ಳೆಯ ಜನರಿದ್ದಾರೆ ಎಂದು ಇಡೀ ದೇಶವೇ ನಂಬಿದೆ. ಆದರೆ ಅದರ ಜೊತೆಗೆ ಇಲ್ಲಿ ಶಾಂತಿ ಇಲ್ಲ, ಕೋಮು ಸಾಮರಸ್ಯ ಇಲ್ಲ ಎಂಬ ಮಾತು ಕೇಳಿಬರುತ್ತಿದೆ. ನಾನು ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದಾಗ ಇಪ್ಪತ್ತು ಸಂಸ್ಥೆಗಳ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಆಗ ಅವರೂ ಇಲ್ಲಿ ಶಾಂತಿ ಕೊಡಿ ಎಂಬ ಮಾತನ್ನಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ

    ಕರಾವಳಿಯಲ್ಲಿ ಇಂದು ಭಯದ ವಾತಾವರಣ ಇದೆ ಎಂದು ಜನ ಮಾತಾನಾಡಿಕೊಳ್ಳುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನಾವು ತಡೆಯುತ್ತೇವೆ. ನೈತಿಕ ಪೊಲೀಸ್‌ಗಿರಿ ಇಲ್ಲಿ ಜಾಸ್ತಿಯಾಗಿದೆ. ಇದೆಲ್ಲವನ್ನೂ ನಾವು ತಡೆಯದೇ ಇದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು. ಇದನ್ನೂ ಓದಿ: ಬಾಡಿಗೆದಾರರೇ ನಿಮಗೆ ಉಚಿತ ವಿದ್ಯುತ್‌ ಬೇಕೇ – ಷರತ್ತುಗಳನ್ನು ಪೂರ್ಣಗೊಳಿಸಿದ್ರೆ ಮಾತ್ರ ಫ್ರೀ

  • ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‍ಗಿರಿ – ಅನ್ಯಕೋಮಿನ ಯುವತಿ ಜೊತೆ ಬಂದಿದ್ದಕ್ಕೆ ಯುವಕರ ಮೇಲೆ ಹಲ್ಲೆ

    ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‍ಗಿರಿ – ಅನ್ಯಕೋಮಿನ ಯುವತಿ ಜೊತೆ ಬಂದಿದ್ದಕ್ಕೆ ಯುವಕರ ಮೇಲೆ ಹಲ್ಲೆ

    ಮಂಗಳೂರು: ಮಂಗಳೂರಿನ (Mangaluru) ಸೋಮೇಶ್ವರ ಬೀಚ್‍ನಲ್ಲಿ (Someshwar Beach) ನಡೆದಿದ್ದ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ನಗರದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಕೇರಳ (Kerala) ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು (Students) ಬೀಚ್‍ಗೆ ತೆರಳಿದ್ದರು. ಯುವತಿಯರೊಂದಿಗೆ ಬಂದಿದ್ದ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ನೈತಿಕ ಪೊಲೀಸ್‍ಗಿರಿ ನಡೆದಿರುವುದಾಗಿ ತಿಳಿದುಬಂದಿದೆ. ಕೇರಳ ಮೂಲದ ಕಣ್ಣೂರು ಹಾಗೂ ಕಾಸರಗೋಡಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳಿಂದ ಹಾನಿಗೊಳಗಾಗಿದ್ದ ಶಾರದಾ ಮಂದಿರ ಪುನರ್‌ ನಿರ್ಮಾಣ – ಶೃಂಗೇರಿ ಶ್ರೀ ಭೇಟಿ

    ಹಲ್ಲೆಯ ವೇಳೆ ವಿದ್ಯಾರ್ಥಿಗಳಾದ ಜಾಫರ್ ಶರೀಫ್, ಮುಜೀಬ್, ಆಶಿಕ್‍ಗೆ ಗಾಯಗಳಾಗಿವೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರೊಂದಿಗಿದ್ದ ವಿದ್ಯಾರ್ಥಿನಿಯರು ವಾಪಸ್ ತಮ್ಮ ಊರಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಮಂಗಳೂರಿನ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ – ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ

  • ಮಂಗಳೂರಿನ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ – ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಮಂಗಳೂರಿನ ಬೀಚ್‌ನಲ್ಲಿ ನೈತಿಕ ಪೊಲೀಸ್‌ಗಿರಿ – ಕೇರಳ ಮೂಲದ ವಿದ್ಯಾರ್ಥಿಗಳ ಮೇಲೆ ಹಲ್ಲೆ

    ಮಂಗಳೂರು: ನಗರದ ಹೊರವಲಯದ ಸೋಮೇಶ್ವರ ಬೀಚ್‌ನಲ್ಲಿ (Someshwar Beach) ನೈತಿಕ ಪೊಲೀಸ್‌ಗಿರಿ (Moral Policing) ನಡೆದಿದೆ. ಕೇರಳ ಮೂಲದ ವಿದ್ಯಾರ್ಥಿಗಳ (Kerala Students) ಮೇಲೆ ಹಲ್ಲೆ ನಡೆಸಲಾಗಿದೆ.

    ನಗರದ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳು ಸಮುದ್ರ ತೀರದಲ್ಲಿ ವಿಹಾರ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಯುವಕರು ಹಾಗೂ ಕಾಸರಗೋಡಿನ ಯುವತಿಯರ ಮೇಲೆ ಹಲ್ಲೆ ನಡೆಸಲಾಗಿದೆ.

    ವಿದ್ಯಾರ್ಥಿಗಳು ಸಮುದ್ರ ತೀರಕ್ಕೆ ಹೋಗಿದ್ದ ಸಂದರ್ಭ ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಅವರನ್ನು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿ ನಡೆದಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ಅತ್ಯಾಚಾರವಾದರೆ ದೇಶದ ಮೇಲೆ ಅತ್ಯಾಚಾರವಾದಂತೆ: ನಟ ಕಿಶೋರ್

    ಹಲ್ಲೆಯ ವೇಳೆ ಜಾಫರ್ ಶರೀಫ್, ಮುಜೀಬ್ , ಆಶಿಕ್‌ಗೆ ಗಾಯಗಳಾಗಿವೆ. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಅವರೊಂದಿಗಿದ್ದ ವಿದ್ಯಾರ್ಥಿನಿಯರು ವಾಪಸ್ ತಮ್ಮ ಊರಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ಪಡೆದಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆ ನಡೆಸಿದ ಯುವಕರ ತಂಡದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಇದನ್ನೂ ಓದಿ: ಐದರ ಪೈಕಿ 3 ಗ್ಯಾರಂಟಿ ಆರಂಭದಲ್ಲಿ ಜಾರಿ – ಷರತ್ತುಗಳು ಏನಿರಬಹುದು?

  • ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಸುಬ್ರಹ್ಮಣ್ಯದಲ್ಲಿ ಥಳಿತ

    ಅಪ್ರಾಪ್ತ ವಿದ್ಯಾರ್ಥಿನಿ ಜೊತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಸುಬ್ರಹ್ಮಣ್ಯದಲ್ಲಿ ಥಳಿತ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ(Moral Policing) ಮತ್ತೆ ಮುಂದುವರಿದಿದ್ದು ಇದೀಗ ಕುಕ್ಕೆ ಸುಬ್ರಹ್ಮಣ್ಯ(Kukke Subramanya) ಕ್ಷೇತ್ರಕ್ಕೂ ಕಾಲಿಟ್ಟಿದೆ.

    ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಪರಿಸರದಲ್ಲಿ ಹಿಂದೂ(Hindu) ಹುಡುಗಿಯೊಂದಿಗೆ ತಿರುಗಾಡುತ್ತಿದ್ದ ಮುಸ್ಲಿಂ (Muslim) ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಇದನ್ನೂ ಓದಿ: ಐಸಿಸ್‌ ಜೊತೆ ಲಿಂಕ್‌ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಾಯಕನ ಮಗ ಅರೆಸ್ಟ್‌

    ಕುಕ್ಕೆ ಸುಬ್ರಹ್ಮಣ್ಯದ ಬಸ್ ನಿಲ್ದಾಣದ ಬಳಿ ಹಿಂದೂ ವಿದ್ಯಾರ್ಥಿನಿಯೊಂದಿಗೆ ತಿರುಗಾಡುತ್ತಿದ್ದ ಸುಳ್ಯದ ಕಲ್ಲಗುಂಡಿ ನಿವಾಸಿ ಅಫೀದ್ ಎಂಬಾತನಿಗೆ ಯುವಕರ ಗುಂಪೊಂದು ಕುಮಾರಧಾರ ನದಿ ಬಳಿಯ ನಿರ್ಜನ‌ ಪ್ರದೇಶದಲ್ಲಿ ಥಳಿಸಿದೆ.

    ಹಲ್ಲೆಗೊಳಗಾದ ಯುವಕ ಅಫೀದ್ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಯುವಕನ ದೂರಿನಂತೆ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ನಡುವೆ ವಿದ್ಯಾರ್ಥಿನಿ ಅಪ್ರಾಪ್ತೆಯಾಗಿದ್ದು, ಆಕೆಯ ತಂದೆಯೂ ಪೊಲೀಸ್ ದೂರು ನೀಡಿದ್ದು ಯುವಕನ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜ್ಯದಲ್ಲಿ ಹೆಚ್ಚಾಗ್ತಿದೆ ನೈತಿಕ ಪೊಲೀಸ್ ಗಿರಿ – ಪುಂಡ ಪೋಕರಿಗಳಿಗೆ ಕಾನೂನಿನ ಭಯನೇ ಇಲ್ವಾ..?

    ರಾಜ್ಯದಲ್ಲಿ ಹೆಚ್ಚಾಗ್ತಿದೆ ನೈತಿಕ ಪೊಲೀಸ್ ಗಿರಿ – ಪುಂಡ ಪೋಕರಿಗಳಿಗೆ ಕಾನೂನಿನ ಭಯನೇ ಇಲ್ವಾ..?

    – ಸಿಎಂ ಹೇಳಿಕೆಯಿಂದಲೇ ಚಿಗುರಿಕೊಂಡ್ರಾ..?

    ಬೆಂಗಳೂರು: ರಾಜ್ಯದಲ್ಲಿ ಪುಂಡ-ಪೋಕರಿಗಳಿಗೆ ಪೊಲೀಸರು, ಕಾನೂನಿನ ಭಯವೇ ಇಲ್ಲದಂತಾಗಿದೆ. 1 ತಿಂಗಳ ಅವಧಿಯಲ್ಲಿ 6 ನೈತಿಕ ಪೊಲೀಸ್‍ಗಿರಿ ಪ್ರಕರಣಗಳು ವರದಿಯಾಗಿದೆ. ಮಂಗಳೂರು, ಮೂಡಬಿದ್ರೆ, ಮಂಡ್ಯ, ಬೆಂಗಳೂರು ಬಳಿಕ ಈಗ ಬೆಳಗಾವಿ ಸರದಿಯಾಗಿದೆ.

    ಇಂದು ತುಮಕೂರು ನಗರದ ಗುಬ್ಬಿ ಗೇಟ್‍ನಲ್ಲಿ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ ಎಂಬವರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಕಾರು ಅಡ್ಡ ಹಾಕಿ ಜೊತೆಗೆಯಲ್ಲಿದ್ದ ಮತ್ತೊಬ್ಬ ಕಾರ್ಯಕರ್ತ ಕಿರಣ್ ಅನ್ನೋವ್ರ ಮೇಲೂ ರಾಡ್‍ನಿಂದ ಹಲ್ಲೆ ಮಾಡಿದ್ದಾರೆ. ಗಾಯಗೊಂಡಿರುವ ಮಂಜುಭಾರ್ಗವ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ವ್ಹೀಲಿಂಗ್ ಮಾಡುತ್ತಾ ಕಾರಿಗೆ ಅಡ್ಡ ಬಂದಿದ್ದ ಮೂವರು ಯುವಕರು. ಇದನ್ನು ಪ್ರಶ್ನಿಸಿದ್ದಕ್ಕೆ ಕಾರು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ ಅಂತ ಶಾಸಕ ಜ್ಯೋತಿ ಗಣೇಶ್ ಹೇಳಿದ್ದಾರೆ.

    ಅಕ್ಟೋಬರ್ 14ರಂದು ಅನ್ಯಕೋಮಿನ ಯುವತಿಯರೊಂದಿಗೆ ಮಾತಾಡ್ತಿದ್ದ ಯುವಕನ ಮೇಲೆ ಪುಂಡರು ಹಲ್ಲೆಗೆ ಯತ್ನಿಸಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. `ನಿನ್ನ ಹೆಸರೇನು, ಅಡ್ರೆಸ್ ಏನೂ’ ಅಂತ ಯುವತಿಯರಿಗೆ ಅವಾಜ್ ಹಾಕಿದ್ದಾರೆ. ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ ಆಟೋ ಚಾಲಕನಲ್ಲಿ ಉದ್ಯಾನವನಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದರು. ಬಳಿಕ ನಿರ್ಜನ ಪ್ರದೇಶದಲ್ಲಿ ಹಲ್ಲೆ ನಡೆಸಿದ್ದಾರೆ. ಯುವತಿ ದೂರಿನ ಮೇರೆಗೆ ನಾಲ್ವರನ್ನು ಬಂಧಿಸಿರೋದು ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ಇಷ್ಟೆಲ್ಲ ನೈತಿಕ ಪೊಲೀಸ್‍ಗಿರಿ ಘಟನೆಗಳು ನಡೀತಿದ್ರೂ ಪೊಲೀಸರೂ ಪುಂಡರನ್ನು ಬಂಧಿಸದೇ ರಾಜೀ ಸಂಧಾನ ಮಾಡಿ ಕಳಿಸ್ತಿದ್ದಾರೆ. ಮಂಗಳೂರಲ್ಲಿ ಅಕ್ಟೋಬರ್ 13ರಂದು ಸಿಎಂ ಮಾತನಾಡಿ, ಸಮಾಜದಲ್ಲಿ ಎಲ್ಲಾ ಧರ್ಮದವರು ಇದ್ದಾರೆ. ಭಾವನೆಗಳಿಗೆ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ಭಾವನೆಗಳಿಗೆ ಧಕ್ಕೆಯಾದಾಗ ಕ್ರಿಯೆ – ಪ್ರತಿಕ್ರಿಯೆ ಆಗುತ್ತೆ. ನೈತಿಕತೆ ಇಲ್ಲದೆ ಸಮಾಜದಲ್ಲಿ ಬದುಕೋಕೆ ಆಗಲ್ಲ ಅಂತ ಸಿಎಂ ಸಮರ್ಥಿಸಿಕೊಂಡಿದ್ದರು.

    ಇದು ಪುಂಡರಿಗೆ ರೆಕ್ಕೆ-ಪುಕ್ಕ ಬಲಿಯುವಂತಾಗಿದೆ. ಇತ್ತ ಗೃಹ ಸಚಿವ ಆರಗ ಜ್ಞಾನೇಂದ್ರ ಹಳೇ ಡೈಲಾಗ್ ರಿಪೀಟ್ ಮಾಡಿದ್ದಾರೆ. ಈ ರೀತಿಯ ಪ್ರಕರಣಗಳನ್ನ ಸಹಿಸೋದಿಲ್ಲ. ಎಲ್ಲಾ ಘಟನೆಗಳಲ್ಲೂ ಪೋಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ. ಇದ್ರಲ್ಲಿ ಧರ್ಮದ ಪ್ರಶ್ನೆ ಬರಲ್ಲ. ಕೆಲವರು ಮಾನಸಿಕವಾಗಿ ಹೀಗೆ ಇರ್ತಾರೆ ಅಂತ ಹಾರಿಕೆ ಉತ್ತರ ಕೊಟ್ಟರು.

  • ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ

    ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ

    ಬೆಳಗಾವಿ: ಮಂಗಳೂರು ಆಯ್ತು ಈಗ ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ ವರದಿಯಾಗಿದೆ. ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ  ಪುಂಡರು ಇಬ್ಬರನ್ನು ಥಳಿಸಿದ್ದಾರೆ.

    ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ ಆಟೋ ಚಾಲಕನಲ್ಲಿ ಉದ್ಯಾನವನಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದರು.

    ಆಟೋ ಚಾಲಕ ಉದ್ಯಾನವನದ ಬದಲು ಅಮನ್ ನಗರದ ನಿರ್ಜನ ಪ್ರದೇಶದ ಹೊಲಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಸ್ನೇಹಿತರ ಜೊತೆಗೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

    ಬೇರೆ ಧರ್ಮದ ಯುವಕನ ಜೊತೆಗೆ ಓಡಾಡ್ತೀಯಾ ಎಂದು ಥಳಿಸಿದ್ದಾರೆ. ಅವರ ಬಳಿ ಇದ್ದ 20 ಸಾವಿರ ರೂ.ಮೌಲ್ಯದ ಮೊಬೈಲ್, 50 ಸಾವಿರ ರೂ. ನಗದು ಹಣ ಮತ್ತು ಆಧಾರ್‌ ಕಾರ್ಡ್, ಎಟಿಎಂ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

    ಹಲ್ಲೆ ನಡೆಸಿದ ಬಳಿಕ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಯುವತಿ 20 ಜನರು ನನ್ನ ಮೇಲೆ ರಾಡ್‌, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಳು. ದೂರಿನ ಮೇರೆಗೆ ಬೆಳಗಾವಿ ನಗರದ ಆಟೋ ಚಾಲಕ, ದಾವತ್ ಕತೀಬ್, ಅಯುಬ್, ಯುಸೂಫ್ ಪಠಾಣ ಬಂಧಿಸಲಾಗಿದ್ದು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

  • ಬಾಯಿಗೆ ಬಂದಂತೆ ಬೈದು ಕಿರಿಕ್‌ – ಸಂಯುಕ್ತ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ

    ಬಾಯಿಗೆ ಬಂದಂತೆ ಬೈದು ಕಿರಿಕ್‌ – ಸಂಯುಕ್ತ ಬಳಿ ಕ್ಷಮೆ ಕೇಳಿದ ಕವಿತಾ ರೆಡ್ಡಿ

    ಬೆಂಗಳೂರು: ಪಾರ್ಕ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ನಟಿ ಸಂಯುಕ್ತ ಹೆಗ್ಡೆ ಮತ್ತು ಗೆಳತಿಯರಿಗೆ ಬಾಯಿಗೆ ಬಂದಂತೆ ಬೈದಿದ್ದ ಕಾಂಗ್ರೆಸ್‌ ನಾಯಕಿ ಕವಿತಾ ರೆಡ್ಡಿ ಈಗ ಬಹಿರಂಗ ಕ್ಷಮೆಯಾಚಿಸಿದ್ದಾರೆ.

    ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿದ ಅವರು, ನನಗೆ ನನ್ನ ತಪ್ಪು ಗೊತ್ತಾಗಿದೆ. ನೈತಿಕ ಪೊಲೀಸ್‌ಗಿರಿಯನ್ನು ನಾನು ಯಾವಾಗಲೂ ವಿರೋಧಿಸುತ್ತೇನೆ. ಪ್ರಗತಿಪರ ಮಹಿಳೆಯಾಗಿ ಈ ವಿಷಯದಲ್ಲಿ ಸಂಯುಕ್ತಾ ಹೆಗಡೆ ಮತ್ತು ಇಬ್ಬರು ಸ್ನೇಹಿತರ ಜೊತೆ ನಾನು ಹಾಗೂ ಸಾರ್ವಜನಿಕರು ನಡೆದುಕೊಂಡ ಬಗೆಗೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

    ಕವಿತಾ ರೆಡ್ಡಿ ಅವರ ಕ್ಷಮೆಯನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಸಂಯುಕ್ತ ಹೆಗ್ಡೆ ಟ್ವೀಟ್‌ ಮಾಡಿದ್ದು ಕಿರಿಕ್‌ ಪ್ರಕರಣ ಅಂತ್ಯ ಕಂಡಿದೆ.

    ನಡೆದಿದ್ದೇನು?
    ಬೆಂಗಳೂರಿನ ಅಗರ ಉದ್ಯಾನವನದಲ್ಲಿ ಸಂಯುಕ್ತಾ ಹೆಗಡೆ ಸ್ನೇಹಿತರೊಂದಿಗೆ ಹುಲಾ ಹೂಪ್ ಅಭ್ಯಾಸ ಮಾಡುತ್ತಿದ್ದರು. ಸಾಮಾಜಿಕ ಅಂತರ ಕಾಪಾಡಿಕೊಂಡು ಸಂಯುಕ್ತಾ ಮತ್ತು ಅವರ ಸ್ನೇಹಿತರು ವರ್ಕೌಟ್ ಮಾಡುತ್ತಿದ್ದರೂ ಕೂಡ ಕವಿತಾ ರೆಡ್ಡಿ ಸಂಯುಕ್ತಾಗೆ ಬೈಯ್ಯುತ್ತಿದ್ದರು. ಈ ವಿಚಾರ ನಟಿ ಸಂಯುಕ್ತ ಹೆಗ್ಡೆ ಪ್ರತಿಕ್ರಿಯಿಸಿದ್ದಾಗ ನಿಮ್ಮ ಮೇಲೆ ಡ್ರಗ್‌ ಕೇಸ್‌ ಫಿಟ್‌ ಮಾಡುತ್ತೇನೆ ಎಂದು ಗದರಿದ್ದರು. ಅಷ್ಟೇ ಅಲ್ಲದೇ ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ ಎಂದು ಕವಿತಾ ರೆಡ್ಡಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಅಲ್ಲಿದ್ದ ಸ್ಥಳೀಯರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟ್ ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದರು.

    https://twitter.com/ShobhaBJP/status/1302112068565266432

    ನಂತರ ಏನಾಯ್ತು?
    ಸಂಯುಕ್ತ ಹೆಗ್ಡೆ ಲೈವ್‌ ವಿಡಿಯೋ ಮಾಡಿ ನಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದರು. ಅಷ್ಟೇ ಅಲ್ಲದೇ ಕವಿತಾ ರೆಡ್ಡಿ ತನ್ನ ಗೆಳತಿಗೆ ಹಲ್ಲೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್‌ ಮಾಡಿದ್ದರು. ಈ ಕುರಿತು ಟ್ವಿಟ್ಟರ್ ನಲ್ಲಿ ವಿಡಿಯೋ ಹಾಕಿ ಕಿಡಿ ಕಾರಿದ್ದ ಅವರು ನಮ್ಮ ದೇಶದ ಭವಿಷ್ಯವು ಇಂದು ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅಗರ ಕೆರೆ ಬಳಿಯ ಉದ್ಯಾನವನದಲ್ಲಿ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯಕರವಾಗಿ ವರ್ತಿಸಿದರು. ಇದಕ್ಕೆ ಹೆಚ್ಚಿನ ವಿಡಿಯೋ ಪುರಾವೆಗಳು ಸಹ ಇವೆ. ಈ ಕುರಿತು ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬೆಂಗಳೂರು ಪೊಲೀಸರಿಗೆ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಟ್ಯಾಗ್ ಮಾಡಿ ದೂರು ನೀಡಿದ್ದರು. ದೂರಿನ ಬಳಿಕ ಎಫ್‌ಐಆರ್‌ ಸಹ ದಾಖಲಾಗಿತ್ತು.

    ನೆಟ್ಟಿಗರಿಂದ ವ್ಯಾಪಕ ಬೆಂಬಲ:
    ಕವಿತಾ ರೆಡ್ಡಿ ಹೊಡೆಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ನೆಟ್ಟಿಗರು ಸಂಯುಕ್ತ ಹೆಗ್ಡೆ ಪರ ಅಭಿಪ್ರಾಯ ಹಂಚಿಕೊಳ್ಳಲು ಆರಂಭಿಸಿದರು. ಶೋಭಾ ಕರಂದ್ಲಾಜೆ, ನಟಿ ರಮ್ಯಾ, ಕಾಜಲ್‌ ಅಗರ್‌ವಾಲ್‌, ಜಗ್ಗೇಶ್, ಹಿತಾ ಚಂದ್ರಶೇಖರ್, ಮೇಘನಾ, ಸಂತೋಷ್ ಆನಂದರಾಮ್, ಸಿಂಪಲ್ ಸುನಿ ಸೇರಿದಂತೆ ಅನೇಕರು ಕವಿತಾ ರೆಡ್ಡಿ ನಡೆ ವಿರೋಧಿಸಿ ಟ್ವೀಟ್‌ ಮಾಡಿದ್ದರು.

  • ಮಂಗ್ಳೂರಿನಲ್ಲಿ ನೈತಿಕ ಪೊಲೀಸ್‍ಗಿರಿ -ಬಕ್ರೀದ್ ಆಚರಿಸಲು ಬಂದ ಯುವಕ, ಯುವತಿಯರನ್ನು ತಡೆದು ಹಲ್ಲೆ

    ಮಂಗ್ಳೂರಿನಲ್ಲಿ ನೈತಿಕ ಪೊಲೀಸ್‍ಗಿರಿ -ಬಕ್ರೀದ್ ಆಚರಿಸಲು ಬಂದ ಯುವಕ, ಯುವತಿಯರನ್ನು ತಡೆದು ಹಲ್ಲೆ

    ಮಂಗಳೂರು: ಬಕ್ರೀದ್ ಆಚರಿಸಲು ಬಂದ ಅನ್ಯಧರ್ಮೀಯ ಯುವಕ, ಯುವತಿಯರನ್ನು ತಡೆದು ಹಲ್ಲೆಗೈಯುವ ಮೂಲಕ ನೈತಿಕ ಪೊಲೀಸ್‍ಗಿರಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸಂಟ್ಯಾರ್ ಸಮೀಪದ ರೆಂಜದಲ್ಲಿ ನಡೆದಿದೆ.

    ಮಂಗಳವಾರ ಬಕ್ರೀದ್ ಆಚರಣೆ ಇದ್ದ ಕಾರಣ 5 ಯುವತಿಯರು ಮತ್ತು 5 ಯುವಕರು ಆಗಮಿಸಿದ್ದರು. ಈ ವೇಳೆ ಗುಂಪೊಂದು ತಡೆದು ಯುವತಿಯರನ್ನು ನಿಂದಿಸಿದ್ದಾರೆ. ಇದನ್ನು ತಡೆಯಲು ಬಂದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಂಪ್ಯ ಪೊಲೀಸರು ಏಳು ಮಂದಿ ಆರೋಪಿಗಳ ಬಂಧಿಸಿದ್ದಾರೆ. ರುಕ್ಮ, ಗಣೇಶ್, ಕುಂಞ, ದುಗ್ಗಪ್ಪ, ಪುರುಷೋತ್ತಮ್, ಸತೀಶ್, ಶೇಷಪ್ಪ ಬಂಧಿತ ಆರೋಪಿಗಳಾಗಿದ್ದಾರೆ.

    ನಡೆದಿದ್ದು ಏನು?
    ಹಲ್ಲೆಗೊಳಾಗದ ಯುವಕ, ಯುವತಿಯರು ಮಂಗಳೂರಿನ ಮೂಲದವರಾಗಿದ್ದು, ಸ್ನೇಹಿತನ ಆಹ್ವಾನ ಮೇಲೆ ಪುತ್ತೂರು ಬಳಿಯ ನಿದ್ಬಪಳ್ಳಿ ಗ್ರಾಮದ ಅಬ್ದುಲ್ ಎಂಬವರ ಮನೆಗೆ ಬಕ್ರೀದ್ ಆಚರಿಸಲು ಮಂಗಳವಾರ ಮಧ್ಯಾಹ್ನದ ವೇಳೆ ಬಂದಿದ್ದರು. ಮನೆಗೆ ತೆರಳಲು ಆಟೋದಲ್ಲಿ ಹೋಗುವ ವೇಳೆ ಇದನ್ನು ಆಕ್ಷೇಪಿಸಿದ ಸ್ಥಳೀಯ ಆಟೋ ಚಾಲಕ ಯುವತಿಯರನ್ನು ನಿಂದನೆ ಮಾಡಿದ್ದಾನೆ. ಈ ವೇಳೆ ಅಡ್ಡ ಬಂದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

    ಬಳಿಕ ಹಲ್ಲೆಗೊಳಗಾದ ಯುವಕ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿ ತೆರಳಿದ್ದು, ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಯುವತಿಯರು ನೀಡಿದ ದೂರಿನ ಮೇಲೆ ಪೊಲೀಸರು ಕ್ರಮಗೈಗೊಂಡಿದ್ದಾರೆ. ಘಟನೆ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv