Tag: morbi

  • ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಮೋದಿ ಬರ್ತಾರೆ ಅಂತ ರಾತ್ರೋರಾತ್ರಿ ಆಸ್ಪತ್ರೆ ಕ್ಲೀನ್

    ಗಾಂಧೀನಗರ: ಬೃಹತ್ ಸೇತುವೆ (Bridge) ಕುಸಿತದ ದುರಂತದ ವೇಳೆ ಗಾಯಗೊಂಡಿದ್ದವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಗುಜರಾತ್‍ನ ಮೋರ್ಬಿಯ ಸಿವಿಲ್ ಆಸ್ಪತ್ರೆಗೆ ಬರುತ್ತಿದ್ದರಿಂದ ನಿನ್ನೆ ರಾತ್ರಿಯಿಡೀ ಅಲ್ಲಿನ ಸಿಬ್ಬಂದಿ ಸ್ವಚ್ಛತೆ ಮಾಡಿದ್ದಾರೆ. ಇದೀಗ ಈ ಘಟನೆ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ.

    ಗುಜರಾತ್‍ನ (Gujarat) ಮೊರ್ಬಿಯಲ್ಲಿ (Morbi) ನಡೆದ ತುಗುಸೇತುವೆ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದರು. ಜೊತೆಗೆ 100ಕ್ಕೂ ಹೆಚ್ಚು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ಹಲವರು ಮೋರ್ಬಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ಪ್ರಧಾನಿ ಮೋದಿ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡುವ ವಿಷಯವನ್ನು ಅಲ್ಲಿನ ಸಿಬ್ಬಂದಿ ತಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಆಸ್ಪತ್ರೆ ಪೂರ್ತಿ ಸ್ವಚ್ಛಗೊಳಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ಕೆಲವು ಗೋಡೆಗಳು ಮತ್ತು ಚಾವಣಿಯ ಭಾಗಗಳಿಗೆ ಹೊಸದಾಗಿ ಬಣ್ಣ ಬಳಿಯಲಾಗಿದೆ ಮತ್ತು ಹೊಸ ವಾಟರ್ ಕೂಲರ್‌ಗಳನ್ನು ತರಲಾಯಿತು. ಸೇತುವೆ ದುರಂತದಲ್ಲಿ ಗಾಯಗೊಂಡ ಸುಮಾರು 13 ಮಂದಿ ದಾಖಲಾಗಿರುವ ಎರಡು ವಾರ್ಡ್‍ಗಳಲ್ಲಿನ ಬೆಡ್‍ಶೀಟ್‍ಗಳನ್ನು ಸಹ ತ್ವರಿತವಾಗಿ ಬದಲಿಸಿದ್ದಾರೆ. ಇದನ್ನೂ ಓದಿ: ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ

    ಘಟನೆಗೆ ಸಂಬಂಧಿಸಿ ಪ್ರತಿಪಕ್ಷಗಳು ಬಿಜೆಪಿಯನ್ನು ಟೀಕಿಸಿದೆ. ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಾರ್ಟಿ (ಎಎಪಿ) ಟ್ವೀಟ್ ಮಾಡಿ, ಬಿಜೆಪಿಯು ಪ್ರಧಾನಿಗೆ ಫೋಟೋಶೂಟ್ ಮಾಡಿಸಲು ಈವೆಂಟ್ ಮ್ಯಾನೇಜ್‍ಮೆಂಟ್‍ನಲ್ಲಿ ನಿರತವಾಗಿದೆ ಎಂದು ಆರೋಪಿಸಿದೆ. ಇದನ್ನೂ ಓದಿ: ಗುಜರಾತ್ ಸೇತುವೆ ಕುಸಿತ – ಇಂದು ಮೊರ್ಬಿಗೆ ಪ್ರಧಾನಿ ಮೋದಿ ಭೇಟಿ

    Live Tv
    [brid partner=56869869 player=32851 video=960834 autoplay=true]

  • ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ

    ಮೊರ್ಬಿ ತೂಗು ಸೇತುವೆ ದುರಂತ – ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ

    ನವದೆಹಲಿ: ಗುಜರಾತ್‌ನ (Gujarat) ಮೊರ್ಬಿ (Morbi) ತೂಗು ಸೇತುವೆ (Bridge) ಕುಸಿತ ಪ್ರಕರಣವನ್ನು ನ್ಯಾಯಾಲಯದ ಮೇಲ್ವಿಚಾರಣೆಯ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ (Supreme Court) ಒಪ್ಪಿಕೊಂಡಿದೆ. ನವೆಂಬರ್ 14 ರಂದು ಕೋರ್ಟ್ ವಿಚಾರಣೆ ನಡೆಸಲಿದೆ.

    ವಕೀಲ ವಿಶಾಲ್ ತಿವಾರಿ ಈ ಪಿಐಎಲ್ ಸಲ್ಲಿಸಿದ್ದರು. ಅರ್ಜಿಯಲ್ಲಿ, ಸೇತುವೆ ಕುಸಿದು 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ 40ಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ರಚನೆ ಮಾಡಿದೆ. ಆದರೆ ಚುನಾವಣಾ ರಾಜ್ಯವಾಗಿರುವ ಹಿನ್ನೆಲೆ ಸ್ವತಂತ್ರ ತನಿಖೆಗೆ ಹಲವು ನಾಯಕರು ಮನವಿ ಮಾಡಿದ್ದಾರೆ.

    ಈ ಹಿನ್ನೆಲೆ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು. ಈ ದುರ್ಘಟನೆ ಬಗ್ಗೆ ನಿಖರವಾದ ಕಾರಣ ಪತ್ತೆಹಚ್ಚಬೇಕು. ಜೊತೆಗೆ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಮನವಿ ಮಾಡಲಾಗಿದೆ. ಇದನ್ನೂ ಓದಿ: ಗುಜರಾತ್‍ನ ಮೋರ್ಬಿ ದುರಂತ- ಉತ್ತರವಿಲ್ಲದ ಐದು ಪ್ರಶ್ನೆಗಳು

    ಇದರೊಂದಿಗೆ ದೇಶದಲ್ಲಿರುವ ಹಳೆಯ ಮತ್ತು ಅಪಾಯಕಾರಿ ಸ್ಮಾರಕಗಳು, ಸೇತುವೆಗಳ ಸಮೀಕ್ಷೆ ಮಾಡಿ, ಅದರ ಅಪಾಯದ ಮೌಲ್ಯಮಾಪನ ಮಾಡಬೇಕು. ಇದಕ್ಕಾಗಿ ಸಮಿತಿಯನ್ನು ರಚಿಸಬೇಕು. ಈ ನಿಟ್ಟಿನಲ್ಲಿ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಲಯಕ್ಕೆ ಕೋರಲಾಗಿದೆ. ಇದನ್ನೂ ಓದಿ: ಮೋರ್ಬಿ ದುರಂತ ರಾಜಕೀಯಗೊಳಿಸೋದು ಅಗೌರವ – ಮೃದು ಸ್ವಭಾವ ತೋರಿದ ರಾಹುಲ್

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‍ನ ಮೋರ್ಬಿ ದುರಂತ- ಉತ್ತರವಿಲ್ಲದ ಐದು ಪ್ರಶ್ನೆಗಳು

    ಗುಜರಾತ್‍ನ ಮೋರ್ಬಿ ದುರಂತ- ಉತ್ತರವಿಲ್ಲದ ಐದು ಪ್ರಶ್ನೆಗಳು

    ಅಹಮದಾಬಾದ್: ಗುಜರಾತ್ ಮೋರ್ಬಿ (Gujrat Morbi) ನಡೆದ ತೂಗು ಸೇತುವೆ ಕುಸಿತ ದುರಂತದಲ್ಲಿ 135 ಮಂದಿ ಸಾವನ್ನಪ್ಪಿದ್ದಾರೆ. ಬಹಳಷ್ಟು ಜನರು ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನಷ್ಟು ಶವಗಳು ನದಿಯ ತಳದಲ್ಲಿ ಸಿಲುಕಿರುವ ಅನುಮಾನಗಳಿದ್ದು, ಅವರ ಹುಡುಕಾಟಕ್ಕೆ NDRF ಪ್ರಯತ್ನ ಮುಂದುವರಿಸಿದೆ.

    ಈ ನಡುವೆ ದುರಂತಕ್ಕೆ ಕಾರಣಗಳೇನು ಎನ್ನುವ ಬಗ್ಗೆ ಚರ್ಚೆ ನಡೆಗಳು ನಡೆಯುತ್ತಿದೆ. ಇದಕ್ಕಾಗಿ ಗುಜರಾತ್ ಸರ್ಕಾರ ಎಸ್‍ಐಟಿ (SIT) ರಚನೆ ಮಾಡಿದ್ದು, ತನಿಖೆ ಆರಂಭಿಸಿದೆ. ಆದರೆ ಈ ದುರಂತದ ಬಳಿಕ ಐದು ಪ್ರಶ್ನೆಗಳು ಮುನ್ನಲೆಗೆ ಬಂದಿದ್ದು, ಈವರೆಗೂ ಅವುಗಳಿಗೆ ಉತ್ತರ ಸಿಕ್ಕಿಲ್ಲ.

    ಪ್ರಶ್ನೆಗಳು ಇಂತಿವೆ..:
    1. ಮೋರ್ಬೀ ತೂಗು ಸೇತುವೆ ಸಾಕಷ್ಟು ಜನಪ್ರಿಯ ಮತ್ತು ಆಕರ್ಷಣೆಯ ಕೇಂದ್ರ. ಇಲ್ಲಿ ನಿತ್ಯ ಸಾವಿರಾರು ಜನರು ಭೇಟಿ ನೀಡುತ್ತಾರೆ. ನವೀಕರಣಕ್ಕಾಗಿ ಕಳೆದ ಆರು ತಿಂಗಳಿಂದ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಕಳೆದ ಐದು ದಿನಗಳ ಹಿಂದೆ ಇದನ್ನು ನವೀಕರಣದ ಬಳಿಕ ಜನರ ಪ್ರವೇಶಕ್ಕೆ ಮುಕ್ತಗೊಳಿಸಲಾಯಿತು. ಆದರೆ ಈ ಬಗ್ಗೆ ಸ್ಥಳೀಯ ಅಡಳಿತಕ್ಕೆ ಮಾಹಿತಿ ಇಲ್ಲ ಎನ್ನಲಾಗಿದೆ. ಸ್ಥಳೀಯ ಆಡಳಿತದ ಅನುಮತಿ ಇಲ್ಲದೇ, ಸರ್ಟಿಫಿಕೇಟ್ ಇಲ್ಲದೇ ಅವಕಾಶ ನೀಡಿದ್ದೇಗೆ. ಜನರ ಪ್ರದೇಶದ ಬಳಿಕವೂ ಸ್ಥಳೀಯ ಆಡಳಿತ ಮಧ್ಯಪ್ರವೇಶ ಮಾಡದೆ ಸುಮ್ಮನಿದ್ದಿದ್ಯಾಕೆ..?

    2. 143 ವರ್ಷಗಳಷ್ಟು ಹಳೆಯದಾದ ಸೇತುವೆಯನ್ನು ಏಕಕಾಲದಲ್ಲಿ 125 ಪ್ರವಾಸಿಗರಿಗೆ ವಿನ್ಯಾಸಗೊಳಿಸಲಾಗಿದೆ ಎಂದು ಸ್ಥಳೀಯ ಪುರಸಭೆಯ ಅಧಿಕಾರಿಗಳು ಹೇಳುತ್ತಾರೆ. ಸೇತುವೆಯ ಮೇಲೆ ಅಂದಾಜು 450 ಪ್ರವಾಸಿಗರಿಗೆ ಹೇಗೆ ಅನುಮತಿಸಲಾಯಿತು.

    3. ಮೋರ್ಬಿ ಪುರಸಭೆ ಮತ್ತು ಓರೆವಾ ಗ್ರೂಪ್‍ನ ಮಾರ್ಚ್ 2022 ರ ಒಪ್ಪಂದ ಪ್ರಕಾರ ಸೇತುವೆಯನ್ನು ದುರಸ್ತಿಗಾಗಿ 8 ರಿಂದ 12 ತಿಂಗಳವರೆಗೆ ಮುಚ್ಚಲಾಗುವುದು ಎಂದು ಅಂದಾಜಿಸಲಾಗಿತ್ತು. ಏಳನೇ ತಿಂಗಳಲ್ಲಿ ಸೇತುವೆಯನ್ನು ಸಾರ್ವಜನಿಕರಿಗೆ ತೆರೆದಾಗ ಅದರ ಸಾಮಥ್ರ್ಯ ಮತ್ತು ಸುರಕ್ಷತಾ ಪ್ರಮಾಣೀಕರಣಗಳನ್ನು ಯಾರು ಪರಿಶೀಲಿಸಿದರು?

    4. ಗುತ್ತಿಗೆ ಏಜೆನ್ಸಿ ಒರೆವಾ ಗ್ರೂಪ್ ನಿಗದಿತ ಸಂಖ್ಯೆ ಮೀರಿ ಟಿಕೆಟ್‍ಗಳನ್ನು ನೀಡಿದ್ದೇಗೆ? ಸೇತುವೆಯ ಮೇಲಿನ ಜನರ ಲೆಕ್ಕ ಹಾಕದೇ ಎಲ್ಲರಿಗೂ ಪ್ರವೇಶಕ್ಕೆ ಪುರಸಭೆಯ ಸಿಬ್ಬಂದಿ ಅವಕಾಶ ನೀಡಿದ್ದೇಗೆ, ಇದಕ್ಕೆ ಯಾಕೆ ಆಕ್ಷೇಪ ವ್ಯಕ್ತಪಡಿಸಿಲ್ಲ?

    5. ಸೇತುವೆಯ ನಿರ್ವಹಣೆಯನ್ನು ಖಾಸಗಿ ಎಂಜಿನಿಯರಿಂಗ್ ಸಂಸ್ಥೆಗೆ ಉಪ ಗುತ್ತಿಗೆ ನೀಡಲಾಗಿದೆ. ಅಧಿಕಾರಿಗಳು ಉಪಗುತ್ತಿಗೆದಾರರ ರುಜುವಾತುಗಳನ್ನು ಪರಿಶೀಲಿಸಿದ್ದಾರೆಯೇ?.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 60ಕ್ಕೇರಿಕೆ, ನೂರಾರು ಮಂದಿ ನೀರುಪಾಲು

    ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿತ – ಸಾವಿನ ಸಂಖ್ಯೆ 60ಕ್ಕೇರಿಕೆ, ನೂರಾರು ಮಂದಿ ನೀರುಪಾಲು

    ಗಾಂಧೀನಗರ: ಈಚೆಗಷ್ಟೇ ನವೀಕರಣಗೊಂಡು ಉದ್ಘಾಟನೆಯಾಗಿದ್ದ ಗುಜರಾತ್‌ನ (Gujarat) ತೂಗು ಸೇತುವೆ (Cable Bridge Collapse) ಕುಸಿತದಿಂದಾಗಿ ಈವರೆಗೆ 60 ಮಂದಿ ಸಾವನ್ನಪ್ಪಿದ್ದು, ನೂರಾರು ಅಪಾಯದಲ್ಲಿ ಸಿಲುಕಿದ್ದಾರೆ. ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

    ಕುಸಿತದ ವೇಳೆ ಸೇತುವೆ ಮೇಲೆ 500ಕ್ಕೂ ಹೆಚ್ಚು ಮಂದಿ ಇದ್ದರು. ಕುಸಿತದಿಂದಾಗಿ ಇನ್ನೂ 100ಕ್ಕೂ ಹೆಚ್ಚು ಮಂದಿ ನೀರುಪಾಲಾಗಿದ್ದಾರೆ. ಅಪಾಯದಲ್ಲಿದ್ದವರ ರಕ್ಷಣೆ ಕಾರ್ಯಾಚರಣೆ ಭರದಿಂದ ಸಾಗಿದೆ. ಇದನ್ನೂ ಓದಿ: 5 ದಿನಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ಗುಜರಾತ್‌ನ ಕೇಬಲ್‌ ಸೇತುವೆ ಕುಸಿತ – ಅಪಾಯದಲ್ಲಿ 100ಕ್ಕೂ ಹೆಚ್ಚು ಮಂದಿ

    ಇಂದು ಗುಜರಾತ್‌ನಲ್ಲಿದ್ದ ಪ್ರಧಾನಿ ನರೇಂದ್ರ ಅವರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಿದ್ದಾರೆ. ಗಾಯಾಳುಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಹಲವು ಸ್ಥಳೀಯರು ಸಹ ಕೈಜೋಡಿಸಿದ್ದಾರೆ. ಪ್ರಧಾನಿಯವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುವಂತೆ ಹೇಳಿದರು. ಅಪಘಾತದ ಸುದ್ದಿ ಬರುತ್ತಿದ್ದಂತೆ ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಮೊರ್ಬಿಗೆ ಧಾವಿಸಿದ್ದಾರೆ.

    ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ಘೋಷಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಲಿದೆ. ಇದನ್ನೂ ಓದಿ: 50ಕ್ಕೂ ಹೆಚ್ಚು ಜನರನ್ನು ಹೊತ್ತು ಹಳ್ಳದಾಟುತ್ತಿದ್ದಾಗ ಸಿಲುಕಿದ ಲಾರಿ

    ಮೊರಬಿ ಪಟ್ಟಣಕ್ಕೆ ಭೇಟಿ ನೀಡುವ ಪ್ರವಾಸಿಗರ ಪ್ರಮುಖ ಆಕರ್ಷಣಿಯ ಕೇಂದ್ರವಾಗುರುವ ತೂಗು ಸೇತುವೆ ಇದಾಗಿದೆ. ಸೇತುವೆಯ ನವೀಕರಣಕ್ಕೆ ಖಾಸಗಿ ಒಡೆತನದ ಒರೆವಾ ಕಂಪನಿಗೆ ನೀಡಲಾಗಿತ್ತು. ಶಿಥಿಲಗೊಂಡಿದ್ದ ಹಿನ್ನೆಲೆ ನವೀಕರಣಕ್ಕೆ ನೀಡಲಾಗಿತ್ತು. ನವೀಕರಣಕ್ಕಾಗಿ ಆರು ತಿಂಗಳ ಹಿಂದೆ ಬಂದ್ ಮಾಡಲಾಗಿತ್ತು. ಎರಡು ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗಿತ್ತು. 2001 ರಲ್ಲಿ ಗುಜರಾತ್‌ನಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ ಮೊದಲ ಬಾರಿಗೆ ಸೇತುವೆಯು ಹಾನಿಗೊಳಗಾಗಿತ್ತು. 140 ವರ್ಷದ ಹಳೆಯ ತೂಗು ಸೇತುವೆ ಇದಾಗಿತ್ತು.

    Live Tv
    [brid partner=56869869 player=32851 video=960834 autoplay=true]