Tag: morning consult political intelligence

  • ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿ ಬಿಡುಗಡೆ – ಮೋದಿ ನಂ.1

    ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿ ಬಿಡುಗಡೆ – ಮೋದಿ ನಂ.1

    ನವದೆಹಲಿ: ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯನ್ನು ಮಾರ್ನಿಂಗ್‌ ಕನ್ಸಲ್ಟ್‌ ಪೊಲಿಟಿಕಲ್ ಇಂಟೆಲಿಜೆನ್ಸ್‌ ಬಿಡುಗಡೆ ಮಾಡಿದೆ. ಸಮೀಕ್ಷೆಯ ಪಟ್ಟಿಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಗ್ರ ಸ್ಥಾನದಲ್ಲಿದ್ದಾರೆ.

    ಜಾಗತಿಕ ಪಟ್ಟಿಯಲ್ಲಿ ವಿಶ್ವದ 13 ನಾಯಕರು ಸ್ಥಾನ ಪಡೆದಿದ್ದಾರೆ. ಶೇ.71 ರೇಟಿಂಗ್‌ ಪಡೆದಿರುವ ಪ್ರಧಾನಿ ಮೋದಿ ಅವರು ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಶೇ.43 ರೇಟಿಂಗ್‌ ಪಡೆದಿದ್ದು, 6ನೇ ಸ್ಥಾನದಲ್ಲಿದ್ದಾರೆ. ಕೆನಡಾದ ಅಧ್ಯಕ್ಷ ಜಸ್ಟಿನ್‌ ಟ್ರುಡೋ ಕೂಡ ಶೇ.43 ರೇಟಿಂಗ್‌ ಪಡೆದು ಜೋ ಬೈಡೆನ್‌ ಅವರಿಗೆ ಸಮಾನಾಂತರ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್‌ ಮಾರಿಸನ್‌ ಶೇ.41 ರೇಟಿಂಗ್‌ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಮಾವನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಪರ್ಣಾ ಯಾದವ್

    2021ರಲ್ಲೂ ಬಿಡುಗಡೆಯಾದ ಪಟ್ಟಿಯಲ್ಲಿ ಪ್ರಧಾನಿ ಮೋದಿ ಅವರು ಮೊದಲ ಸ್ಥಾನದಲ್ಲಿದ್ದರು. ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಇಟಲಿ, ಜಪಾನ್, ಮೆಕ್ಸಿಕೋ, ದಕ್ಷಿಣ ಕೊರಿಯಾ, ಸ್ಪೇನ್, ಯುನೈಟೆಡ್ ಕಿಂಗ್‌ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್‌ ನಾಯಕರು ಸ್ಥಾನ ಪಡೆದುಕೊಂಡಿದ್ದಾರೆ.

    ಸಮೀಕ್ಷೆಯಲ್ಲಿ ನೀಡಲಾದ ರೇಟಿಂಗ್‌ 2022ರ ಜನವರಿ 13ರಿಂದ 19ರವರೆಗೆ ಸಂಗ್ರಹಿಸಲಾದ ಡೇಟಾವನ್ನು ಆಧರಿಸಿದೆ ಎಂದು ಮಾರ್ನಿಂಗ್‌ ಕನ್ಸಲ್ಟ್‌ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: 50 ವರ್ಷಗಳಿಂದ ಬೆಳಗುತ್ತಿದ್ದ ಅಮರ್‌ ಜವಾನ್‌ ಜ್ಯೋತಿ ಇನ್ಮುಂದೆ ಇಂಡಿಯಾ ಗೇಟ್‌ನಲ್ಲಿ ಬೆಳಗಲ್ಲ!

    2020ರಲ್ಲಿ ಮಾರ್ನಿಂಗ್‌ ಕನ್ಸಲ್ಟ್‌ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಶೇ.84 ರೇಟಿಂಗ್‌ನೊಂದಿಗೆ ಪ್ರಧಾನಿ ಮೋದಿ ಅಗ್ರಸ್ಥಾನದಲ್ಲಿದ್ದರು. 2021ರಲ್ಲಿ ಆ ಪ್ರಮಾಣ ಶೇ.63ಕ್ಕೆ ಇಳಿದಿತ್ತು.