– ಐಸಿಯುನಲ್ಲಿದ್ದ ಮತ್ತೋರ್ವ ವಿದ್ಯಾರ್ಥಿ ಮೈಸೂರಿಗೆ ಶಿಫ್ಟ್
ಹಾಸನ: ಮೊಸಳೆಹೊಸಳ್ಳಿಯಲ್ಲಿ (Mosale Hosalli) ಟ್ರಕ್ ಹರಿದು ಸಾವನ್ನಪ್ಪಿದ (Hassan Tragedy) ಸಂತ್ರಸ್ತರ ಮನೆಗಳಿಗೆ ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಕಬ್ಬಿನಹಳ್ಳಿ ಗ್ರಾಮದ ಪ್ರವೀಣ್, ಕುಮಾರ್ ಮನೆಗೆ ಶ್ರೀಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಹಾಸನ ದುರಂತ – ಕಂಬನಿ ಮಿಡಿದ ಟ್ರಕ್ ಚಾಲಕನ ಗ್ರಾಮಸ್ಥರು
ವಿದ್ಯಾರ್ಥಿ ಮೈಸೂರಿಗೆ ಶಿಫ್ಟ್
ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ನಗರದ ಹಿಮ್ಸ್ ಆಸ್ಪತ್ರೆಯಿಂದ ಮೈಸೂರಿಗೆ ಶಿಫ್ಟ್ ಮಾಡಲಾಗಿದೆ. ಆಕಾಶ್ (21) ಗಂಭೀರ ಗಾಯಗೊಂಡಿದ್ದು, ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈತ ಮೊಸಳೆಹೊಸಳ್ಳಿಯ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ. ಇದನ್ನೂ ಓದಿ: Hassan Tragedy | ಹೆಚ್ಚಿನ ಪರಿಹಾರ ಕೊಡದಿದ್ರೆ ರಾಜೀನಾಮೆ ಕೊಟ್ಟು ಹೋಗಿ – ಸಿಎಂ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ಹಾಸನ: ಮೊಸಳೆಹೊಸಳ್ಳಿಯಲ್ಲಿ (Mosalehosalli) ನಡೆದ ಭೀಕರ ದುರಂತದಲ್ಲಿ ಹತ್ತು ಜನ ಸಾವನ್ನಪಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಟ್ರಕ್ ಚಾಲಕ ಭುವನೇಶ್ ಬಗ್ಗೆ ಆತನ ಗ್ರಾಮಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ. ಇದೇ ವೇಳೆ ಆತನಿಂದ ಆದ ಈ ದುರಂತಕ್ಕೆ ಕಂಬನಿ ಮಿಡಿದಿದ್ದಾರೆ.
ಗ್ರಾಮದಲ್ಲಿ ಸ್ವಂತ ಮನೆ ಹಾಗೂ ಸ್ವಲ್ಪ ಜಮೀನು ಹೊಂದಿರುವ ಭುವನೇಶ್ ಕುಟುಂಬ, ಸೆ.12 ರಂದು ಕೆಲಸ ಮುಗಿಸಿ ಹೊಳೆನರಸೀಪುರದ ಮನೆಗೆ ಹೊರಡುವ ವೇಳೆ ಈ ದುರಂತ ಸಂಭವಿಸಿತ್ತು. ದುರಂತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದರು. ಅಪಘಾತದಲ್ಲಿ 22 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ ಓರ್ವನ ಸ್ಥಿತಿ ಗಂಭಿರವಾಗಿದೆ.
– ರಾಜ್ಯದಲ್ಲಿ ಗಲಾಟೆಗಳಿಗೆ ಸಿದ್ದರಾಮಯ್ಯ ಅಹಂಕಾರವೇ ಕಾರಣ ಎಂದ ಕೇಂದ್ರ ಸಚಿವೆ
ಶಿವಮೊಗ್ಗ: ಮೊಸಳೆಹೊಸಳ್ಳಿಯಲ್ಲಿ (MosaleHosalli) ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟುಹೋಗಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ, ರಾಜ್ಯದಲ್ಲಿ ಹಿಂದೂ ವಿರೋಧಿ ಸರ್ಕಾರ ಆಡಳಿತ ನಡೆಸುತ್ತಿದೆ. ಸರ್ಕಾರ ಒಂದು ಸಮುದಾಯದ ಓಲೈಕೆಗೆ ಮುಂದಾಗಿದೆ. ಈ ಸರ್ಕಾರಕ್ಕೆ ಅಲ್ಪಸಂಖ್ಯಾತರ ನೋವು ಕಾಣುತ್ತಿದೆ. ಬೇರೆ ಸಮುದಾಯದ ನೋವುಗಳು ಕಾಣುತ್ತಿಲ್ಲ. ಕೇರಳದ ಆನೆಯಿಂದ ಸಾವನಪ್ಪಿದವರಿಗೆ ಪರಿಹಾರ ನೀಡುತ್ತಾರೆ. ಆರ್‌ಸಿಬಿ ವಿಜಯೋತ್ಸವದಲ್ಲಿ ಸತ್ತವರಿಗೆ ಹೆಚ್ಚಿನ ಪರಿಹಾರ ನೀಡುತ್ತಾರೆ. ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರಿಗೆ ಯಾಕೆ ಹೆಚ್ಚಿನ ಪರಿಹಾರ ಇಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಹಾಸನ ದುರಂತ – ಮೃತ ಎಂಜಿನಿಯರಿಂಗ್ ವಿದ್ಯಾರ್ಥಿ ಕುಟುಂಬಕ್ಕೆ ನೆರವಾದ ಹೆಚ್‌ಡಿಡಿ
ಹಾಸನ: ಮೊಸಳೆಹೊಸಳ್ಳಿ (MosaleHosalli) ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ 10 ಜನರ ಸಾವಿಗೆ ಕಾರಣನಾಗಿದ್ದ ಟ್ರಕ್ ಚಾಲಕನನ್ನು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಟ್ರಕ್ ಚಾಲಕ ಭುವನೇಶ್‍ನನ್ನು ಶನಿವಾರ ರಾತ್ರಿಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಪೊಲೀಸರು ಆತನನ್ನು ಕರೆದೊಯ್ದು, ಇಂದು (ಸೆ.14) ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ತೀರ್ಮಾನಿಸಿದ್ದರು. ಅಪಘಾತದಲ್ಲಿ (Accident) ಚಾಲಕನಿಗೆ ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಪೆಟ್ಟಾಗಿತ್ತು. ಆತನನ್ನು ನಾಗಮಂಗಲದ ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಆರೋಗ್ಯದಲ್ಲಿ ಸುಧಾರಣೆಯಾದ ಹಿನ್ನೆಲೆ ಡಿಸ್ಚಾರ್ಜ್ ಮಾಡಲಾಗಿತ್ತು. ಇದನ್ನೂ ಓದಿ: Hassan Tragedy | ಟ್ರಕ್ ಅಪಘಾತ ನಡೆದ ಜಾಗದಲ್ಲಿ ಹಂಪ್ಸ್ ನಿರ್ಮಿಸಲು ತೀರ್ಮಾನ
ಪೊಲೀಸರು ಆತನನ್ನು ವಶಕ್ಕೆ ಪಡೆದ ಬಳಿಕ ಎದೆನೋವು, ಆರೋಗ್ಯದ ಸಮಸ್ಯೆ ಆಗುತ್ತಿದೆ ಎಂದು ಹೇಳಿಕೊಂಡಿದ್ದಾನೆ. ಆತನನ್ನು ಮತ್ತೆ ಪೊಲೀಸರು ಹಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಾಸನ: ಗಣೇಶ ಮೆರವೆಣಿಗೆಯಲ್ಲಿ ಹೋಗುತ್ತಿದ್ದವರ ಮೇಲೆ ಏಕಾಏಕಿ ಟ್ರಕ್ ಹರಿದು ದುರಂತ ಸಂಭವಿಸಿದ ಹಿನ್ನೆಲೆ ಮೊಸಳೆಹೊಸಳ್ಳಿ (MosaleHosalli) ಮದಲ್ಲಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತಾಗಿ ಬಂದ್ ಮಾಡಿದ್ದಾರೆ.
ಮೊಸಳೆಹೊಸಳ್ಳಿ ಗ್ರಾಮದಲ್ಲಿ ಘಟನೆ ನಡೆದ ಸ್ಥಳಕ್ಕೆ ನೂರಾರು ಜನರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮುಂಜಾಗೃತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೀಗಾಗಿ ವರ್ತಕರು ಕೂಡ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತಾಗಿ ಬಂದ್ ಮಾಡಿದ್ದು, ವ್ಯಾಪಾರ ವಹಿವಾಟು ಸಂಪೂರ್ಣ ಬಂದ್ ಆಗಿದೆ.ಇದನ್ನೂ ಓದಿ: ಹಾಸನ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಪ್ರಧಾನಿ ಮೋದಿ ಸಂತಾಪ
ಏನಿದು ಘನಘೋರ ದುರಂತ?
ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಡಿಸಿ ಲತಾ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
ಗಣೇಶ ಮೆರವಣಿಗೆ ವೇಳೆ ಏಕಾಏಕಿ ಟ್ರಕ್ ಹರಿದು ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೊಸಳೆಹೊಸಳ್ಳಿ ಗ್ರಾಮಸ್ಥರು ಗ್ರಾಮದಲ್ಲಿ 25 ವರ್ಷಗಳಿಂದ ಗಣಪತಿ ಕೂರಿಸುತ್ತಿದ್ದಾರೆ. ಇಂದು ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಆರ್ಕೆಸ್ಟ್ರಾ ಬಳಿಗೆ ಸಾವಿರಾರು ಮಂದಿ ಬರುತ್ತಿದ್ದರು. ಈ ವೇಳೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಯಮಸ್ವರೂಪಿ ಟ್ರಕ್ ಹರಿದು ದುರಂತ ಸಂಭವಿಸಿದೆ.
ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರಂತ ಸಾವು ಕಂಡಿದ್ದಾರೆ. ಮೊಸಳೆಹೊಸಳ್ಳಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈವರೆಗೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. 20 ಗಾಯಾಳುಗಳಿಗೆ ಹಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪೈಕಿ ಮೂವರು ಐಸಿಯುನಲ್ಲಿದ್ದಾರೆ. 7 ಮಂದಿ ಗಾಯಳುಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪೊಲೀಸರ ವೈಫಲ್ಯದಿಂದಲೇ ದುರಂತ
ಇದು ಪೊಲೀಸರ ವೈಫಲ್ಯದಿಂದಾಗಿರುವ ಘಟನೆ ಎಂದು ಶಾಸಕ ಎಚ್‌ಡಿ ರೇವಣ್ಣ ಆರೋಪಿಸಿದ್ದಾರೆ. ಇನ್ನು ಸಂಸದ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ಇದೊಂದು ಕರಾಳ ದಿನ. ಎಲ್ಲಿಂದ ಲೋಪ ಆಗಿದೆ ಅಂತ ತಿಳಿಸಲು ಸೂಕ್ತ ತನಿಖೆಗೆ ಆಗ್ರಹಿಸುತ್ತೇನೆ ಎಂದಿದ್ದಾರೆ.ಇದನ್ನೂ ಓದಿ:ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಘನಘೋರ ದುರಂತ – ಸಾವಿನ ಸಂಖ್ಯೆ 9ಕ್ಕೆ ಏರಿಕೆ