Tag: Mosque Survey

  • ಜಾಮಾ ಮಸೀದಿ ಸರ್ವೇಗೆ ವಿರೋಧ – ಹಿಂಸಾಚಾರದಲ್ಲಿ ಮೂವರು ಸಾವು, 20 ಪೊಲೀಸರಿಗೆ ಗಾಯ

    ಜಾಮಾ ಮಸೀದಿ ಸರ್ವೇಗೆ ವಿರೋಧ – ಹಿಂಸಾಚಾರದಲ್ಲಿ ಮೂವರು ಸಾವು, 20 ಪೊಲೀಸರಿಗೆ ಗಾಯ

    – ಮಸೀದಿ ಜಾಗದಲ್ಲಿ ಹಿಂದೂ ದೇವಾಲಯವಿತ್ತೆ ಎಂದು ಸರ್ವೇ

    ಲಕ್ನೋ: ಮೊಘಲರ ಕಾಲದ ಜಾಮಾ ಮಸೀದಿ ಸರ್ವೇಗೆ ವಿರೋಧಿಸಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, 20 ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಸಂಭಾಲ್‌ನಲ್ಲಿ ನಡೆದಿದೆ.

    ನ್ಯಾಯಾಲಯದ ಆದೇಶದ ಮೇರೆಗೆ ಸರ್ವೇ ತಂಡ ಮಸೀದಿ ಬಳಿ ಆಗಮಿಸಿತ್ತು. ಇದು, ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು.

    ಅಡ್ವೋಕೇಟ್ ಕಮಿಷನರ್ ನೇತೃತ್ವದ ಸಮೀಕ್ಷಾ ತಂಡವು ಸರ್ವೇ ಕೆಲಸ ಪ್ರಾರಂಭಿಸುತ್ತಿದ್ದಂತೆ ಮಸೀದಿಯ ಬಳಿ ಗುಂಪು ಜಮಾಯಿಸಿದಾಗ ಹಿಂಸಾಚಾರ ನಡೆಯಿತು. ಪೊಲೀಸರು ಮಸೀದಿಗೆ ಪ್ರವೇಶಿಸದಂತೆ ತಡೆಯಲು ಜನರು ಪ್ರಯತ್ನಿಸಿದರು.

    ಗುಂಪಿನಲ್ಲಿದ್ದ ಕೆಲವು ವ್ಯಕ್ತಿಗಳು ಸ್ಥಳದಲ್ಲಿ ಬೀಡುಬಿಟ್ಟಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಿದರು. ಗುಂಪು ಹತ್ತಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದೆ. ಗುಂಪು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು.

    ನಯೀಮ್, ಬಿಲಾಲ್ ಮತ್ತು ನೌಮನ್ ಮೃತರು ಎಂದು ಗುರುತಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಯ ಗನ್ನರ್ ಸೇರಿದಂತೆ ಕೆಲವು ಪೊಲೀಸರೂ ಗಾಯಗೊಂಡಿದ್ದಾರೆ ಎಂದು ಮೊರಾದಾಬಾದ್ ವಿಭಾಗೀಯ ಆಯುಕ್ತ ಆಂಜನೇಯ ಕುಮಾರ್ ಸಿಂಗ್ ತಿಳಿಸಿದ್ದಾರೆ.

    ಮಸೀದಿಯು ಈಗ ಇರುವ ಸ್ಥಳದಲ್ಲಿ ಒಂದು ಕಾಲದಲ್ಲಿ ದೇವಾಲಯವಿತ್ತು. ಮಸೀದಿ ಸರ್ವೇ ನಡೆಸುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್‌ ಸರ್ವೇಗೆ ಅನುಮತಿ ನೀಡಿತು. ಮಂಗಳವಾರವೂ ಇದೇ ಸಮೀಕ್ಷೆ ನಡೆದಿರುವುದರಿಂದ ಸಂಭಾಲ್‌ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

  • ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

    ಜ್ಞಾನವಾಪಿ ಮಸೀದಿ ಸರ್ವೆಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

    ನವದೆಹಲಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI) ವಾರಣಾಸಿಯ ಜ್ಞಾನವಾಪಿ ಮಸೀದಿ (Gyanvapi Mosque) ಸಮೀಕ್ಷೆ ನಡೆಸಲು ಅನುಮತಿ ನೀಡಿ ಅಲಹಾಬಾದ್‌ ಹೈಕೋರ್ಟ್‌ (Allahabad High Court) ಗುರುವಾರ ತೀರ್ಪು ನೀಡಿದೆ.

    ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಯನ್ನು ಪ್ರಾರಂಭಿಸಲಾಗುವುದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರವಾಗಿ ವಾದ ಮಂಡಿಸಿದ್ದ ವಿಷ್ಣು ಶಂಕರ್ ಜೈನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿಯಲ್ಲಿ ತ್ರಿಶೂಲ ಏನು ಮಾಡುತ್ತಿದೆ? – ಯೋಗಿ ಆದಿತ್ಯನಾಥ್ ಪ್ರಶ್ನೆ

    Allahabad high court

    ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಮಸೀದಿ ಸಂಕೀರ್ಣದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಸಮೀಕ್ಷೆಯನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.

    ಹಿಂದೂ ದೇವಾಲಯವನ್ನು ನೆಲಸಮಗೊಳಿಸಿ ಮಸೀದಿ ನಿರ್ಮಿಸಲಾಗಿದೆ. ಇದನ್ನು ನಿರ್ಧರಿಸುವ ಏಕೈಕ ಮಾರ್ಗ ಮಸೀದಿಯನ್ನು ಸರ್ವೆಗೆ ಒಳಪಡಿಸುವುದು ಎಂದು ನಾಲ್ವರು ಮಹಿಳೆಯರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ವಾರಣಾಸಿ ನ್ಯಾಯಾಲಯವು ಮಸೀದಿ ಸಮೀಕ್ಷೆ ನಡೆಸಲು ಅನುಮತಿಸಿ ಜು.21 ರಂದು ಆದೇಶ ಹೊರಡಿಸಿತ್ತು.

    ಜುಲೈ 24 ರಂದು ಸಮೀಕ್ಷೆ ಪ್ರಾರಂಭವಾಯಿತು. ಆದರೆ ಅದನ್ನು ವಿರೋಧಿಸಿ ಮಸೀದಿ ಸಮಿತಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸರ್ವೆ ಆರಂಭವಾದ ಕೆಲವೇ ಗಂಟೆಗಳಲ್ಲಿ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆ – ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]