Tag: Most Promising Actor

  • ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿ

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿ

    – ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್’ ಪ್ರಶಸ್ತಿಗೆ ಮುತ್ತಿಟ್ಟ ಕಿಚ್ಚ

    ಮುಂಬೈ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಪ್ರತಿಷ್ಠಿತ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ.

    ದಾದಾ ಸಾಹೇಬ್ ಪಾಲ್ಕೆ ಹಾಗೂ ಮಹಾತ್ಮ ಗಾಂಧೀಜಿ ಅವರ 150ನೇ ವರ್ಷದ ಜನ್ಮದಿನೋತ್ಸವದ ಅಂಗವಾಗಿ ಮುಂಬೈನಲ್ಲಿ ಗುರುವಾರ ಅದ್ದೂರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುದೀಪ್ ಅವರಿಗೆ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ 2020ರ ‘ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

    `ದಬಾಂಗ್ 3′ ಸಿನಿಮಾದ ಬಲ್ಲಿಸಿಂಗ್ ಪಾತ್ರಕ್ಕೆ ಕಿಚ್ಚನಿಗೆ ಈ ಹೆಮ್ಮೆಯ ಪ್ರಶಸ್ತಿ ಒಲಿದಿದೆ. ಪ್ರಶಸ್ತಿ ಸ್ವೀಕರಿಸಿದ ಸುದೀಪ್, ‘ದಬಾಂಗ್ 3’ ಚಿತ್ರತಂಡಕ್ಕೆ ಧನ್ಯವಾದ ಅರ್ಪಿಸಿ, ಪ್ರಶಸ್ತಿಯನ್ನು ಫ್ಯಾಮಿಲಿಗೆ ಡೆಡಿಕೇಟ್ ಮಾಡಿದ್ದಾರೆ.

    ಇದೇ ವೇಳೆ ಮಾತನಾಡಿ ಸುದೀಪ್, ಇಂತಹ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ ತಮಗೆಲ್ಲರಿಗೂ ಧನ್ಯವಾದ. ಕಳೆದ ಹದಿನೈದು, ಹದಿನಾರು ವರ್ಷಗಳಿಂದ ನಾನು ಯಾವುದೇ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಹೋಗಿಲ್ಲ. ಆದರೆ ನೀವು ನೀಡಿದ ಗೌರವದಿಂದ ಇಲ್ಲಿಗೆ ಬಂದು ಪ್ರಶಸ್ತಿ ಸ್ವೀಕರಿಸುತ್ತಿರುವೆ ಎಂದು ತಿಳಿಸಿದರು.