Tag: mother in law

  • ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ – ಡೆಂಟಿಸ್ಟ್ ಅಳಿಯನಿಂದಲೇ ಅತ್ತೆಯ ಹತ್ಯೆ

    ಮಹಿಳೆಯ ದೇಹ ತುಂಡರಿಸಿ ಎಸೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ – ಡೆಂಟಿಸ್ಟ್ ಅಳಿಯನಿಂದಲೇ ಅತ್ತೆಯ ಹತ್ಯೆ

    – ನಾಲ್ವರು ಆರೋಪಿಗಳು ಅಂದರ್
    – ಕೊಲೆ ಬಳಿಕ ಧರ್ಮಸ್ಥಳ ಯಾತ್ರೆಗೆ ತೆರಳಿದ್ದ ಆರೋಪಿಗಳು

    ತುಮಕೂರು: ಜಿಲ್ಲೆಯ ಕೊರಟಗೆರೆಯಲ್ಲಿ (Koratagere) ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ (Son In Law) ಈ ಕೃತ್ಯ ನಡೆಸಿರೋದು ಬೆಳಕಿಗೆ ಬಂದಿದೆ.

    ವೃತ್ತಿಯಲ್ಲಿ ದಂತ ವೈದ್ಯನಾಗಿರುವ (Dentist) ಡಾ. ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣನ ಜೊತೆ ಸೇರಿ ಹತ್ಯೆ ಮಾಡಿದ್ದಾನೆ. ಮೃತ ಲಕ್ಷ್ಮೀದೇವಮ್ಮ ತನ್ನ ಮಗಳನ್ನೇ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರಚೋದಿಸುತಿದ್ದಳು ಎಂಬ ಆರೋಪ ಇದೆ. ಇದನ್ನು ಸಹಿಸದ ಅಳಿಯ ಡಾ.ರಾಮಚಂದ್ರ ಅತ್ತೆಯನ್ನೇ ಕೊಲೆ ಮಾಡಿದ್ದಾನೆ. ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶ್ ಎಂಬಾತನ ಫಾರ್ಮ್ ಹೌಸ್‌ನಲ್ಲಿ ಕೊಲೆ ಮಾಡಿ ದೇಹದ ಭಾಗಗಳನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿತ್ತು. ಬಳಿಕ ಆರೋಪಿಗಳು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ ಮುನ್ಸೂಚನೆ

    ಅತ್ತೆಯ ಕೊಲೆ ಆದರೂ ಅಳಿಯ ಸ್ಥಳದಲ್ಲಿ ಇಲ್ಲದಿರುವುದಕ್ಕೆ ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಹಾಯಕಿಗೆ 45,000 ರೂ. ಸೈಬರ್ ವಂಚನೆ

  • ಖಾಸಗಿ ವೀಡಿಯೊ ಇಟ್ಕೊಂಡು‌ ಬೆದರಿಸಿ ಮದುವೆ, ಅತ್ತೆಯ ಮೇಲೂ ಕಣ್ಣು – ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೆ ಬಿಗ್‌ ಟ್ವಿಸ್ಟ್‌

    ಖಾಸಗಿ ವೀಡಿಯೊ ಇಟ್ಕೊಂಡು‌ ಬೆದರಿಸಿ ಮದುವೆ, ಅತ್ತೆಯ ಮೇಲೂ ಕಣ್ಣು – ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೆ ಬಿಗ್‌ ಟ್ವಿಸ್ಟ್‌

    – ಹತ್ಯೆ ಪ್ಲ್ಯಾನ್‌ಗೆ ಹೌ ಟು ಕಿಲ್ ಅನ್ನೋ ಪುಸ್ತಕ ಓದಿದ್ದ ಅತ್ತೆ

    ಬೆಂಗಳೂರು: ಸೋಲದೇವನಹಳ್ಳಿ ರಿಯಲ್‌ ಎಸ್ಟೇಟ್ ಉದ್ಯಮಿ‌ (Real Estate Businessman) ಲೋಕನಾಥ್ ಸಿಂಗ್ ಕೊಲೆ ಪ್ರಕರಣದಲ್ಲಿ ಉದ್ಯಮಿಯ ಕರಾಳ ಮುಖ ಕೊಲೆ ಬಳಿಕ ರಿವೀಲ್ ಆಗುತ್ತಿದೆ. ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿರುವ ಆರೋಪಿ ಅಮ್ಮ ಮಗಳ ಸ್ಟೋರಿ ಕೇಳಿ ಪೊಲೀಸರೇ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

    ಅಪ್ರಾಪ್ತ ವಯಸ್ಸಿನಲ್ಲಿದ್ದಾಗಲೇ ಯುವತಿಯ ಜೊತೆಗೆ ಸಲುಗೆ ಬೆಳೆಸಿದ್ದ ಉದ್ಯಮಿ, ವೀಡಿಯೊ ಮಾಡಿಟ್ಟುಕೊಂಡು ಯುವತಿಯ ಬ್ಲ್ಯಾಕ್‌ಮೇಲ್ ಮಾಡಿ ಮದುವೆಯಾಗಿದ್ದಾನೆ. ಮದುವೆಯಾಗದಿದ್ದರೆ ವೀಡಿಯೊ ಹರಿಬಿಡೋದಾಗಿ ಧಮ್ಕಿ ಹಾಕಿದ್ದಾನೆ. ಬಳಿಕ ಡಿಸೆಂಬರ್‌ನಲ್ಲಿ ಯುವತಿ ಜೊತೆ ಉದ್ಯಮಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದ. ಇದನ್ನೂ ಓದಿ: Bengaluru | ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಕೇಸ್ – ಹೆಣ್ಣು ಕೊಟ್ಟ ಅತ್ತೆಯಿಂದಲೇ ಅಳಿಯನ ಕೊಲೆ

    ಮದುವೆ ಬಳಿಕ ಉದ್ಯಮಿಯ ವಂಚನೆಯ ಜಾಲ ಹೆಂಡತಿಗೆ ಗೊತ್ತಾಗಿದೆ. ಹಲವು ಮಹಿಳೆಯರ ಜೊತೆ ಉದ್ಯಮಿ ಸಂಬಂಧ ಹೊಂದಿದ್ದನಂತೆ. ಅಲ್ಲದೇ ಹೆಂಡ್ತಿಯ ತಾಯಿಯ ಮೇಲೂ ಆತ ಕಣ್ಣಿಟ್ಟಿದ್ದ. ಹೆಂಡತಿಯ ಬಳಿಯೇ ಆಕೆಯ ತಾಯಿಯ ಬಗ್ಗೆ ಕೆಟ್ಟದಾಗಿ ಮಾತಾಡಿದ್ದನಂತೆ. ಹೀಗಾಗಿ ಸಹಿಸಲಾರದೆ ಕೊಲೆ ಮಾಡಿರೋದಾಗಿ ಕೊಲೆಯಾದ ಲೋಕನಾಥ್‌ನ ಪತ್ನಿ ಹಾಗೂ ಅತ್ತೆ (Mother in law) ಹೇಳಿಕೆ ನೀಡಿದ್ದಾರೆ.

    ಅಳಿಯನನ್ನು ಮುಗಿಸುವ ಪ್ಲ್ಯಾನ್‌ ಮಾಡಿದ್ದ ಅತ್ತೆ, ಹೌ ಟು ಕಿಲ್ ಎನ್ನುವ ಪುಸ್ತಕ ಖರೀದಿಸಿ, ಓದಿದ್ದಾಳೆ. ಬಳಿಕ ಪಾರ್ಟಿ ನೆಪದಲ್ಲಿ ಮಗಳ ಮೂಲಕ ಅಳಿಯನನ್ನ ಕರೆಸಿಕೊಂಡು, ಊಟದಲ್ಲಿ ನಿದ್ರೆ ಮಾತ್ರೆ ಹಾಕಿ, ಅಳಿಯನ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಇದನ್ನೂ ಓದಿ: ಬಾಗಿಲು ಮುರಿದು ಕಳ್ಳತನ – ನಾಲ್ವರು ಅರೆಸ್ಟ್, 5 ಕೆಜಿ ಚಿನ್ನ ವಶ

  • Bengaluru | ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಕೇಸ್ – ಹೆಣ್ಣು ಕೊಟ್ಟ ಅತ್ತೆಯಿಂದಲೇ ಅಳಿಯನ ಕೊಲೆ

    Bengaluru | ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಕೇಸ್ – ಹೆಣ್ಣು ಕೊಟ್ಟ ಅತ್ತೆಯಿಂದಲೇ ಅಳಿಯನ ಕೊಲೆ

    -ಬ್ಲ್ಯಾಕ್‌ಮೇಲ್‌ ಮಾಡಿ ಯುವತಿಯನ್ನ ವಿವಾಹವಾಗಿದ್ದ ಉದ್ಯಮಿ

    ಬೆಂಗಳೂರು: ಹೆಸರಘಟ್ಟ (Hesaraghatta) ಬಳಿ ಬಿಜಿಎಸ್ ಲೇಔಟ್ (BGS Layout) ಬಳಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ (Real Estate Businessman) ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಹೆಣ್ಣು ಕೊಟ್ಟ ಅತ್ತೆಯೇ ತನ್ನ ಅಳಿಯನನ್ನು ಕೊಲೆಗೈದ ವಿಚಾರ ಪೊಲೀಸರ ತನಿಖೆ ವೇಳೆ ಬಯಲಾಗಿದೆ.

    ಮಾಗಡಿ ಶಾಸಕ ಬಾಲಕೃಷ್ಣ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಲೋಕನಾಥ್ ಸಿಂಗ್ ಮಾ.22ರಂದು ಕೊಲೆಯಾಗಿದ್ದರು. ಮೇಲ್ನೋಟಕ್ಕೆ ಹಳೇ ವೈರಿಗಳು ಅಥವಾ ರೌಡಿಶೀಟರ್‌ಗಳು ಕೊಲೆ ಮಾಡಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಸ್ವಂತ ಅತ್ತೆಯೇ (Mother-In-Law) ಅಳಿಯನನ್ನು ಕೊಲೆ ಮಾಡಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ. ಇದನ್ನೂ ಓದಿ: ʻಹನಿʼಟ್ರ್ಯಾಪ್‌ ಕೋಲಾಹಲದ ನಡುವೆ ಸಚಿವರು, ಶಾಸಕರ ಫೋನ್‌ ಟ್ಯಾಪಿಂಗ್‌ ಆರೋಪ!

    ಕಳೆದ ಡಿಸೆಂಬರ್‌ನಲ್ಲಿ ರಿಯಲ್ ಎಸ್ಟೆಟ್ ಉದ್ಯಮಿಯೊಬ್ಬರ ಮಗಳಿಗೆ ಬ್ಲಾಕ್‌ಮೇಲ್ ಮಾಡಿ ಲೋಕನಾಥ್ ಮದುವೆ ಮಾಡಿಕೊಂಡಿದ್ದರು. ಮಗಳ ಭವಿಷ್ಯ, ಹಾಗೂ ಕುಟುಂಬದ ಮರ್ಯಾದೆಗೆ ಅಂಜಿ ಯುವತಿಯ ತಂದೆ-ತಾಯಿ ಮಗಳನ್ನು ಮದುವೆ ಮಾಡಿಕೊಡುತ್ತಾರೆ. ಇದರಿಂದ ನೊಂದ ತಂದೆ, ತಾಯಿ ಇವನಿಗೆ ಒಂದು ಗತಿ ಕಾಣಿಸಬೇಕು ಎಂದು ಮೂಹರ್ತ ಫಿಕ್ಸ್ ಮಾಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲ, ಬೇಸಿಗೆಯಲ್ಲೂ ತೊಂದರೆಯಾಗಲ್ಲ: ಕೆಪಿಟಿಸಿಎಲ್ ಎಂಡಿ

    ಅಳಿಯ, ಮಗಳ ಜೊತೆ ಬಿಜಿಎಸ್ ಲೇಔಟ್‌ಗೆ ಮಾರ್ಚ್ 22ರಂದು ಯುವತಿಯ ತಾಯಿ ಬಂದಿದ್ದಾರೆ. ಲೋಕನಾಥ್ ಸಿಂಗ್‌ಗೆ ಸೇರಿದ ಜಾಗಕ್ಕೆ ಬಂದು ಪಾರ್ಟಿ ಮಾಡಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಗಂಡ-ಹೆಂಡತಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಜೊತೆಯಲ್ಲಿದ್ದ ಗನ್ ಮ್ಯಾನ್‌ಗೆ ಏನನ್ನೋ ತರಲು ಹೇಳಿ ಕಳುಹಿಸಿದ್ದಾರೆ. ಚೆನ್ನಾಗಿ ಎಣ್ಣೆ ಹೊಡೆದು ಟೈಟ್ ಆಗಿದ್ದ ಅಳಿಯ ಲೋಕನಾಥ್ ಸಿಂಗ್‌ಗೆ ಅತ್ತೆ ಊಟದಲ್ಲಿ ನಿದ್ದೆ ಮಾತ್ರೆ ಹಾಕಿದ್ದರು. ಯಾವಾಗ ಅಳಿಯ ನಿದ್ರೆಗೆ ಜಾರಿದ್ನೋ ಆಗ ಹರಿತವಾದ ಆಯುಧದಿಂದ ಅತ್ತೆ ಅಳಿಯನ ಕುತ್ತಿಗೆ ಕುಯ್ದಿದ್ದಾರೆ. ಮೊದಲೇ ನಿದ್ರೆ ಮಾತ್ರೆಯಿಂದ ನಿತ್ರಾಣರಾಗಿದ್ದ ಲೋಕನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಸೋಲದೇವನಹಳ್ಳಿ ಪೊಲೀಸರು ಅಮ್ಮ- ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: IPL 2025 | ಚೊಚ್ಚಲ ಪಂದ್ಯದಲ್ಲೇ 3 ವಿಕೆಟ್‌ ಕಿತ್ತ ಚಿರಯುವಕ – ಧೋನಿಯಿಂದ ಬೆನ್ನುತಟ್ಟಿಸಿಕೊಂಡ ವಿಘ್ನೇಶ್‌ ಪುತ್ತೂರು ಯಾರು?

  • Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ

    Hassan| ಅತ್ತೆ-ಸೊಸೆ ಜಗಳ; ಕೆರೆಗೆ ಹಾರಿ ತಾಯಿ, ಮಗ ಆತ್ಮಹತ್ಯೆ

    ಹಾಸನ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ (Hassan) ಜಿಲ್ಲೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.

    ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ ಎಂಟು ತಿಂಗಳ ಹಿಂದಷ್ಟೇ ಅರಸೀಕೆರೆ (Arasikere) ತಾಲೂಕು ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಅತ್ತೆ-ಸೊಸೆ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೇ ಜಗಳ ನಡೆಯುತ್ತಿತ್ತು. ಇದೇ ಕಾರಣಕ್ಕೆ ಭರತ್ ಪತ್ನಿ ಮನೆಬಿಟ್ಟು ತವರು ಮನೆಗೆ ಹೋಗಿದ್ದರು. ಇದನ್ನೂ ಓದಿ: ನಲ್ಲೂರು ಮಠ ವರ್ಸಸ್ ಬಡಾಮಕಾನ್ ತೆರವು ವಿವಾದ – ಜಿಲ್ಲಾ ವಕ್ಫ್ ಅಧಿಕಾರಿ ಅಮಾನತು

    ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಎರಡು ಬಾರಿ ರಾಜಿ ಪಂಚಾಯ್ತಿ ಮಾಡಿದ್ದರು. ಆದರೂ ಭರತ್ ಪತ್ನಿ ಗಂಡನ ಜೊತೆ ಇರದೇ ತವರು ಮನೆಗೆ ಹೋಗಿದ್ದರು. ಇದರಿಂದ ಮನನೊಂದಿದ್ದ ಭರತ್ ಹಾಗೂ ತಾಯಿ ಜಯಂತಿ ಕೆರೆಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಸಾವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನಾವ್ ಹೇಳಿದಂಗೆ ಕೆಲ್ಸ ಮಾಡೋ ಹಾಗಿದ್ರೆ ಇಲ್ಲಿರಿ, ಇಲ್ಲ ನಡೀರಿ: ಮಹಿಳಾ ಅಧಿಕಾರಿ ಮೇಲೆ ಸಚಿವ ವೆಂಕಟೇಶ್ ದರ್ಪ

  • ರೇಪ್‌ ಮಾಡಲು ಸಹಕರಿಸದ ಚಿಕ್ಕಮ್ಮನನ್ನೇ ಕೊಲೆಗೈದ ಬಾಲಕ!

    ರೇಪ್‌ ಮಾಡಲು ಸಹಕರಿಸದ ಚಿಕ್ಕಮ್ಮನನ್ನೇ ಕೊಲೆಗೈದ ಬಾಲಕ!

    ಮಂಗಳೂರು: ಅಪ್ರಾಪ್ತ ಬಾಲಕನೋರ್ವ ತನ್ನ ಚಿಕ್ಕಮ್ಮನ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿ, ಆಕೆ ಸಹಕರಿಸದ ಹಿನ್ನೆಲೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಉಪ್ಪಿನಂಗಡಿಯ (Uppinangady) ಪೆರ್ನೆ ಬಳಿ ನಡೆದಿದೆ.

    ಪೆರ್ನೆಯ ಬಿಳಿಯೂರು ನಿವಾಸಿ ಹೇಮಾವತಿ (37) ಕೊಲೆಯಾದ ದುರ್ದೈವಿ. ಕಳೆದ ಜೂ.17 ರಂದು ಮಲಗಿದ್ದಲ್ಲೇ‌ ಸಾವನ್ನಪ್ಪಿದ್ದ ಸ್ಥಿತಿಯಲ್ಲಿದ್ದ ಹೇಮಾವತಿ ಹೃದಯಾಘಾತದಿಂದ ಸಾವನ್ನಪ್ಪಿದರು ಎಂದು ಪೊಲೀಸರಿಗೆ ಮನೆಯವರು‌ ಮಾಹಿತಿ ನೀಡಿದ್ದರು. ಆದರೆ ಪೊಲೀಸರು ಅನುಮಾನದಿಂದ ತನಿಖೆ ನಡೆಸಿದ್ದರು.

    ಈ ವೇಳೆ 10 ನೇ ತರಗತಿಯ ವಿದ್ಯಾರ್ಥಿ 15 ವರ್ಷದ ಅಪ್ರಾಪ್ತ ಬಾಲಕ ತನ್ನ ಚಿಕ್ಕಮ್ಮನನ್ನೇ ಕೊಲೆ ಮಾಡಿರೋದು ಬೆಳಕಿಗೆ ಬಂದಿದ್ದು, ಬಾಲಕ ಕೃತ್ಯವನ್ನ ಒಪ್ಪಿಕೊಂಡಿದ್ದಾನೆ. ಕೊಲೆಗೀಡಾದ ಹೇಮಾವತಿಯ ಅಕ್ಕನ ಮಗನಾದ ಈ ಅಪ್ರಾಪ್ತ ಬಾಲಕ ಜೂ.17ರಂದು ಹೇಮಾವತಿ ಮನೆಗೆ ಬಂದು ತಂಗಿದ್ದ. ರಾತ್ರಿ ವೇಳೆ ಮಲಗಿದ್ದ ಚಿಕ್ಕಮ್ಮನನ್ನು ಅತ್ಯಾಚಾರ ಮಾಡಲು ಯತ್ನಿಸಿದ್ದು, ಈ ವೇಳೆ ಹೇಮಾವತಿ ತಡೆದು ಬಳಿಕ ಬಾಲಕನಿಗೆ ಬುದ್ದಿಮಾತು ಹೇಳಿ ಮಲಗಿಸಿದ್ದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಮೈಸೂರಿನ ಹೋಟೆಲ್‌ನಲ್ಲಿ ನಡೆದಿತ್ತಾ ಸ್ಕೆಚ್‌? – ಇಡೀ ಪ್ಲಾನ್ ಮಾಸ್ಟರ್ ಮೈಂಡ್‌ ಯಾರು?

    ಈ ಅತ್ಯಾಚಾರ ಬೆಳಕಿಗೆ ಬರುತ್ತೆ ಅನ್ನೋ ಹೆದರಿಕೆಯಿಂದ ಬಾಲಕ ಬಳಿಕ ಚಿಕ್ಕಮ್ಮನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮಾರನೇ ದಿನ ಎಲ್ಲರಿಗೂ ಆತನೇ ಕರೆ ಮಾಡಿ ಚಿಕ್ಕಮ್ಮ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದ. ಈ ಕಾರಣದಿಂದಲೇ‌ ಪೊಲೀಸರಿಗೆ ಅನುಮಾನವಾಗಿ ತನಿಖೆ ನಡೆಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಅತ್ತೆಯ ಕಾಟದಿಂದ ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ!

    ಅತ್ತೆಯ ಕಾಟದಿಂದ ಆತ್ಮಹತ್ಯೆಗೆ ಶರಣಾದ ಯೋಧನ ಪತ್ನಿ!

    ಚಿಕ್ಕೋಡಿ (ಬೆಳಗಾವಿ): ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಯೋಧರೊಬ್ಬರ ಪತ್ನಿ (Soldier Wife) ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ((Belagavi) ಜಿಲ್ಲೆಯ ಕಾಗವಾಡ ತಾಲೂಕಿನ ಮೋಳೆ ಗ್ರಾಮದಲ್ಲಿ ನಡೆದಿದೆ.

    ರೂಪಾಬಾಯಿ ಬಾಳು ರೂಪನವರ (31) ಆತ್ಮಹತ್ಯೆ ಮಾಡಿಕೊಂಡವರು. ಮೃತಳ‌ ಪತಿ ಬಾಳು ರೂಪನವರ ಅರುಣಾಚಲಪ್ರದೇಶ ಗ್ಯಾಂಟುಕನಲ್ಲಿ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಅತ್ತೆ ಸೇವಂತಾ ಸಿದರಾಯ ರೂಪನವರ ಅವರಿಂದ ರೂಪಾಬಾಯಿ ದಿನಂಪ್ರತಿ ಕಿರಿಕಿರಿ ಅನುಭವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇದೇ ಕಾರಣದಿಂದ ಮನನೊಂದು ಅವರು ಆತ್ಮಹತ್ಯೆ ದಾರಿ ಹಿಡಿದಿರುವುದಾಗಿ ಮೃತಳ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

    ರೂಪಾಬಾಯಿ ಪತಿ ಹಾಗೂ ತನ್ನ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸ್ಥಳಕ್ಕೆ ಕಾಗವಾಡ ಪೋಲಿಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – 50 ಸ್ಥಳೀಯರನ್ನು ವಶಕ್ಕೆ ಪಡೆದ ಪೊಲೀಸರು

  • ಅತ್ತೆ, ಮಾವನ ಮೇಲಿನ‌ ಸಿಟ್ಟಿಗೆ ಅಡಿಕೆ ಮರಗಳನ್ನು ಕಡಿದು ಹಾಕಿದ ಸೊಸೆ!

    ಅತ್ತೆ, ಮಾವನ ಮೇಲಿನ‌ ಸಿಟ್ಟಿಗೆ ಅಡಿಕೆ ಮರಗಳನ್ನು ಕಡಿದು ಹಾಕಿದ ಸೊಸೆ!

    ದಾವಣಗೆರೆ: ಐನಾತಿ ಸೊಸೆಯೊಬ್ಬಳು ತನ್ನ ಅತ್ತೆ ಹಾಗೂ ಮಾವನ ಮೇಲಿನ ಸಿಟ್ಟಿನಿಂದ ಅಡಿಕೆ ಮರಗಳನ್ನೇ ಕಡಿದು ಹಾಕಿದ ಪ್ರಸಂಗವೊಂದು ದಾವಣಗೆರೆಯಲ್ಲಿ (Davanagere) ನಡೆದಿದೆ.

    ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು (Arecanut Tree) ಕಡಿದು ಹಾಕಿದ ಆರೋಪಿ ಸೊಸೆ.

    ಘಟನೆ ವಿವರ: ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಗೆ ಮೂವರು ಪುತ್ರರಿದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿಗೆ ರೂಪಾಳೊಂದಿಗೆ ಮದುವೆ ಮಾಡಿಸಲಾಗಿತ್ತು. ಆದರೆ ಮದುವೆಯಾದ ಬಳಿಕ ರೂಪಾ, ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದಳು. ಅಲ್ಲದೇ ಮಾವ ಚಿದಾನಂದಸ್ವಾಮಿ ಬಳಿ 8 ಲಕ್ಷ ರೂಪಾಯಿ ‌ಪಡೆದು ಮನೆ ಕೂಡ ಕಟ್ಟಿಸಿಕೊಂಡಿದ್ದಳು. ಸದ್ಯ ಈಕೆ ಮೂರು ವರ್ಷದ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕುವ ಮೂಲಕ ಸಿಟ್ಟು ಹೊರಹಾಕಿದ್ದಾಳೆ. ಇದನ್ನೂ ಓದಿ: ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದರ್ಪ- ಸೊಪ್ಪನ್ನ ರಸ್ತೆಗೆ ಚೆಲ್ಲಿ ವಿಕೃತಿ!

    ಈ ಸಂಬಂಧ ಚಿದಾನಂದ ಸ್ವಾಮಿಯವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ, ನಮಗೆ ವಯಸ್ಸಾಗಿದೆ. ನಮ್ಮನ್ನ ಸರಿಯಾಗಿ ನೋಡಿಕೊಳ್ಳದೆ ಸೊಸೆ ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾಳೆ. ಸಾಲದು ಎಂಬಂತೆ ಮಚ್ಚು ತಂದು ಅಡಿಕೆ ಮರಗಳನ್ನು ಕಡಿದು ಹಾಕಿದ್ದಾಳೆ ಎಂದು ಆರೋಪಿಸಿದ್ದಾರೆ.

    ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೊತೆಗೆ ಆರೋಪಿ ರೂಪಾಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

  • ಅತ್ತೆ ಬೇಗ ಸಾಯಬೇಕು- 50 ರೂ. ನೋಟ್ ಮೇಲೆ ಹರಕೆ ಬರೆದ ಸೊಸೆ!

    ಅತ್ತೆ ಬೇಗ ಸಾಯಬೇಕು- 50 ರೂ. ನೋಟ್ ಮೇಲೆ ಹರಕೆ ಬರೆದ ಸೊಸೆ!

    ಕಲಬುರಗಿ: ಪ್ರಸಿದ್ಧ ದೇಗುಲಗಳ ಹುಂಡಿ ಎಣಿಕೆ ಕಾರ್ಯ ಮಾಡುವಾಗ ಅನೇಕ ರೀತಿಯ ಚೀಟಿಗಳು ಸಿಗುತ್ತವೆ. ಇವುಗಳಲ್ಲಿ ಪ್ರೀತಿ-ಪ್ರೇಮ, ಮದುವೆ, ಪತಿ-ಪತ್ನಿ, ಅತ್ತೆ-ಸೊಸೆ ನಡುವಿನ ಜಗಳಗಳು, ಪಕ್ಕದಮನೆಯವರ ವಿಚಾರ ಹೀಗೆ ದೇವರಿಗೆ ಹರಕೆ ಕಟ್ಟಿ ಚೀಟಿ ಬರೆದು ಹಾಕುವುದನ್ನು ನೋಡಿರುತ್ತೇವೆ. ಅಂಥದ್ದೇ ವಿಚಾರವೊಂದು ಇದೀಗ ಕಲಬುರಗಿಯಲ್ಲಿಯೂ ಬೆಳಕಿಗೆ ಬಂದಿದೆ.

    ಕೆಲ ದಿನಗಳ ಹಿಂದೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರ ಕ್ಷೇತ್ರ ದೇವಲಗಾಣಗಾಪುರ ದತ್ತನಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಬೇಡಿದ ವರ ಕೊಡುವ ಶ್ರೀಕ್ಷೇತ್ರ ದತ್ತಾತ್ರೇಯ ದೇವಸ್ಥಾನದ ಹುಂಡಿಯಲ್ಲಿ ವಿಶೇಷ ನೋಟ್ ಸಿಕ್ಕಿದೆ. ಈ ನೋಟಿನಲ್ಲಿ ಬರೆದಿದ್ದನ್ನು ಓದಿದ ಹುಂಡಿ ಎಣಿಕಾರ್ಯ ಮಾಡುತ್ತಿರುವ ಸಿಬ್ಬಂದಿಯೇ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಿಸಿ ಬಿಸಿ; 4 ವರ್ಷದ ದಾಖಲೆ ಮುರಿದ ಸಿಲಿಕಾನ್‌ ಸಿಟಿ

    ಚೀಟಿಯಲ್ಲಿ ಏನಿತ್ತು..?: ಸೊಸೆಯೊಬ್ಬಳು ತನ್ನ ಅತ್ತೆಯ ಮೇಲಿನ ಸಿಟ್ಟನ್ನು ಈ ನೋಟಿನಲ್ಲಿ ಬರೆಯುವ ಮುಖಾಂತರ ತೋರಿಸಿಕೊಂಡಿದ್ದಾಳೆ. ಅತ್ತೆ ಬೇಗ ಸಾಯಬೇಕು ಎಂದು ಹರಕೆ ಹೊತ್ತಿದ್ದಾಳೆ. ಅಲ್ಲದೆ 50 ರೂಪಾಯಿ ನೋಟಿನ ಮೇಲೆ “ಅತ್ತೆ ಬೇಗ ಸಾಯಬೇಕು” ಎಂದು ಬರೆದು ದತ್ತಾತ್ರೇಯ ದೇವಸ್ಥಾನದ ಹುಂಡಿಗೆ ಹಾಕಿದ್ದಾಳೆ. ಈ ವಿಚಾರ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

  • ಖಾಸಗಿ ಬಸ್, ಇನ್ನೋವಾ ಮುಖಾಮುಖಿ ಡಿಕ್ಕಿ – ಅತ್ತೆ, ಸೊಸೆ ಸ್ಥಳದಲ್ಲೇ ಸಾವು

    ಖಾಸಗಿ ಬಸ್, ಇನ್ನೋವಾ ಮುಖಾಮುಖಿ ಡಿಕ್ಕಿ – ಅತ್ತೆ, ಸೊಸೆ ಸ್ಥಳದಲ್ಲೇ ಸಾವು

    ರಾಯಚೂರು: ಖಾಸಗಿ ಬಸ್ (Private Bus) ಹಾಗೂ ಇನ್ನೋವಾ (Innova Car) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ರಾಯಚೂರಿನ  (Raichur) ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

    ಭೀಕರ ಅಪಘಾತದ ಪರಿಣಾಮ ಇನ್ನೋವಾ ಕಾರ್‌ನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೈದರಾಬಾದ್‌ನಿಂದ ಸಿಂಧನೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್, ಗದಗದಿಂದ ರಾಯಚೂರು ಮಾರ್ಗವಾಗಿ ಬರುತ್ತಿದ್ದ ಇನ್ನೋವಾ ಕಾರ್‌ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಇದನ್ನೂ ಓದಿ: ತಂಗಿಯ ನಿಶ್ಚಿತಾರ್ಥಕ್ಕೆ ಬಂದಿಲ್ಲವೆಂದು ಪತ್ನಿಗೇ ಚಾಕು ಇರಿದ!

    ಕಾರ್‌ನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಉಳಿದ ಐದು ಜನರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಂಧಾನಕ್ಕೆ ಹೋಗಿದ್ದ ಗರ್ಭಿಣಿ ಮೇಲೆ ಗ್ಯಾಂಗ್‌ ರೇಪ್‌; ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ದುರುಳರು!

  • ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

    ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

    ಮಂಡ್ಯ: ಸೊಸೆಯ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ (Mandya) ನಡೆದಿದೆ.

    ಮಂಡ್ಯ ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದಾಗಿ ಸೊಸೆ ಸುಶೀಲಾ (42) ನಿನ್ನೆ ಸಂಜೆ ಸಾವನ್ನಪ್ಪಿದ್ದರು. ಸೊಸೆಯ ಸಾವಿನ ಸುದ್ದಿ ಕೇಳಿದ ಅತ್ತೆ ಹುಚ್ಚಮ್ಮ (75) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

    ಹುಚ್ಚಮ್ಮನಿಗೆ ಐವರು ಗಂಡುಮಕ್ಕಳಿದ್ದು, ಅದರಲ್ಲಿ 2ನೇ ಮಗನ ಪತ್ನಿಯೇ ಸುಶೀಲಾ. ಸುಶೀಲಾಗೆ ಇಬ್ಬರು ಮಕ್ಕಳು ಕೂಡಾ ಇದ್ದರು. ಅತ್ತೆ-ಸೊಸೆಯ ಸಂಬಂಧ ತಾಯಿ ಮಗಳಂತಿತ್ತು ಎಂದು ಗ್ರಾಮಸ್ಥರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬೀದಿ ನಾಯಿಗಳಿಗೆ ಊಟ ನೀಡುವ ಕಾಯಕ – BCCI ಅಧ್ಯಕ್ಷರ ಶ್ವಾನ ಪ್ರೀತಿಗೆ ಜನರ ಮೆಚ್ಚುಗೆ

    ಇದೀಗ ಅತ್ತೆ-ಸೊಸೆಯ ಸಾವಿನಿಂದ ಇಡೀ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇದನ್ನೂ ಓದಿ: ನಾದಿನಿ ಜೊತೆ ಅಶ್ಲೀಲ ವರ್ತನೆ – ಪ್ರಶ್ನಿಸಿದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ