ರಾಯಚೂರು: ಹಾವು (Snake) ಕಚ್ಚಿ ತಾಯಿ ಹಾಗೂ ಮಗ ಸಾವನ್ನಪ್ಪಿದ ದಾರುಣ ಘಟನೆ ದೇವದುರ್ಗ (Devadurga) ತಾಲೂಕಿನ ಅಮರಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಸುಬ್ಬಮ್ಮ (35) ಹಾಗೂ ಬಸವರಾಜ (10) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಜಮೀನಿನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುವಾಗ ಹಾವು ಕಡಿದಿದೆ. ಮನೆಗೆ ಬರುತ್ತಿದ್ದಂತೆ ಇಬ್ಬರಿಗೂ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಕುಟುಂಬಸ್ಥರು ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯೆದಲ್ಲೇ ತಾಯಿ ಮಗ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಾಕೊಲೇಟ್‌ಗಾಗಿ ಹಣ ಕೇಳಿದ್ದಕ್ಕೆ 4 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದ ತಂದೆ
ಹೆರುಂಡಿ ಗ್ರಾಮದ ಕುಟುಂಬ ಕೂಲಿ ಕೆಲಸಕ್ಕಾಗಿ ಅಮರಾಪುರ ಗ್ರಾಮದಲ್ಲಿ ನೆಲೆಸಿತ್ತು. ಎಂದಿನಂತೆ ಕೃಷಿ ಕೆಲಸಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಮೃತ ಹಿಲ್ಡಾ ಪುತ್ರ ಮೆಲ್ವಿನ್ ಮೊಂತೆರೋನೊಂದಿಗೆ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಮಲಗಿದ್ದ ಹಿಲ್ಡಾರನ್ನು ಮುಂಜಾನೆ ಕೊಲೆಗೈದು, ಮೃತದೇಹವನ್ನು ಮನೆಯ ಹಿಂಬದಿಗೆ ಕೊಂಡೊಯ್ದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ.
ನೋಡಲು ಬಂದ ನೆರೆ ಮನೆಯವರಿಗೂ ಬೆಂಕಿ ಹಚ್ಚಿದ್ದ. ಆರೋಪಿ ಮೆಲ್ವಿನ್ ಮೊಂತೆರೋನನ್ನು ಕುಂದಾಪುರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಾದಕ ವ್ಯಸನಿಯಾಗಿದ್ದ ಮೆಲ್ವಿನ್ ಮೊಂತೆರೋ, ನಶೆಯಲ್ಲಿ ಕೊಂದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮಂಗಳೂರು: ಆತ ಮನೆ ಬಿಟ್ಟು ಮುಂಬೈ ಸೇರಿ 36 ವರ್ಷ ಕಳೆದಿತ್ತು. ಕೆಲಸ ಅರಸಿ ಮುಂಬೈ ಸೇರಿದ್ದ ಮಂಗಳೂರಿನ (Mangaluru) ಯುವಕ ಬಳಿಕ ಮಾನಸಿಕ ಆಘಾತದಿಂದ ಮನೆಯವರ ಸಂಪರ್ಕ ಕಡಿದುಕೊಂಡಿದ್ದ. ಆರೋಗ್ಯ ಸುಧಾರಿಸಿದರೂ ಮನೆಯ ಸಂಪರ್ಕ ಸಾಧ್ಯವಾಗಲೇ ಇಲ್ಲ. ಇದೀಗ, ಮನೆ ದೈವ ಮಂತ್ರದೇವತೆ ಅಭಯದಂತೆ ಮನೆಮಗ ಮನೆ ಸೇರಿದ್ದಾನೆ. 36 ವರ್ಷಗಳ ಬಳಿಕ ತಾಯಿ ಮಗ ಒಂದಾಗಿದ್ದಾರೆ. ಇದು ದೈವ ಪವಾಡ ಅಂತ ಮನೆಯವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡುಬಿದ್ರೆಯ (Mudbidri) ಇರುವೈಲು ಗ್ರಾಮದ ಸಂಕಪ್ಪ ಹಾಗೂ ಗೋಪಿ ದಂಪತಿಯ ಹಿರಿಯ ಪುತ್ರ ಚಂದ್ರಶೇಖರ್, ತಮ್ಮ 25ನೇ ವಯಸ್ಸಿನಲ್ಲಿ ಉದ್ಯೋಗ ಅರಸಿ ಮುಂಬೈಯತ್ತ ತೆರಳಿದ್ದರು. ಆ ಬಳಿಕ ಕೆಲ ತಿಂಗಳು ಪತ್ರದ ಮುಖೇನ ಮನೆಯವರೊಂದಿಗೆ ಸಂಪರ್ಕದಲ್ಲಿದ್ದರು. ನಂತರ ಸಂಪರ್ಕ ಕಡಿದುಕೊಂಡು ಎಲ್ಲಿದ್ದಾರೆಂದು ಪತ್ತೆಯೇ ಇರಲಿಲ್ಲ. ಮಾನಸಿಕ ಆಘಾತಗೊಂಡಿದ್ದ ಬಳಿಕ ದೇವಸ್ಥಾನ, ಮಠ, ಮಂದಿರಗಳಲ್ಲಿ ದಿನ ಕಳೆಯುತ್ತಿದ್ದರಂತೆ. ಇದನ್ನೂ ಓದಿ: ಕಬಿನಿಯಿಂದ 25 ಸಾವಿರ ಕ್ಯುಸೆಕ್ ನೀರು ಹೊರಕ್ಕೆ – ಯಾವುದೇ ಕ್ಷಣದಲ್ಲಿ ಮತ್ತಷ್ಟು ನೀರು ಬಿಡುಗಡೆ
36 ವರ್ಷದ ಹಿಂದೆ ಮುಂಬೈನಲ್ಲಿ ಅಲೆದಾಡುತ್ತಿದ್ದ ಚಂದ್ರಶೇಖರ್ ಸ್ಥಿತಿ ಕಂಡು ಮುಂಬೈನ ಬಾಲು ಕಾಂಬ್ಳಿ ಎಂಬವರು ತಮ್ಮ ಮನೆಗೆ ಕರೆದೊಯ್ದು ಆರೈಕೆ ಮಾಡಿ, ಚಿಕಿತ್ಸೆ ಕೊಡಿಸಿದ್ದರು. ಆರೋಗ್ಯದಲ್ಲಿ ಸುಧಾರಣೆಯಾದ ಬಳಿಕ ಚಂದ್ರಶೇಖರ್ ಮರಳಿ ಕೆಲಸಕ್ಕೆ ಸೇರಿದ್ದರು. ಜತೆಗೆ ರಾತ್ರಿ ಶಾಲೆಗೆ ಸೇರಿ ಓದು ಮುಂದುವರಿಸಿದ್ದರು. ಆದರೂ ಮನೆಯವರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಊರಿಗೂ ಬಂದಿರಲಿಲ್ಲ. ಪುತ್ರನಿಗಾಗಿ ಮೂರೂವರೆ ದಶಕಗಳ ಕಾಲ ಹೆತ್ತತಾಯಿ ದೇವರನ್ನು ಬೇಡಿಕೊಳ್ಳದ ದಿನಗಳಿಲ್ಲ. ಮನೆ ದೈವ ಮಂತ್ರದೇವತೆಗೆ ಮಗನಿಂದಲೇ ಕೋಲ ಸೇವೆ ಕೊಡಿಸುತ್ತೇನೆ ಎಂದು ಹರಕೆಯನ್ನೂ ಹೊತ್ತಿದ್ದರು. ಬಳಿಕ ಮನೆಯಲ್ಲಿ ನಡೆದ ಮಂತ್ರದೇವತೆ ದೈವದ ದರ್ಶನ ವೇಳೆ ಆತ ಜೀವಂತವಾಗಿ ಇದ್ದಾನೆ ಅಂತ ಅಭಯ ನೀಡಿತ್ತು. ಒಂದು ವರ್ಷದೊಳಗೆ ಮನೆಗೆ ಬರುವಂತೆ ಮಾಡುತ್ತೇನೆ ಎಂದು ಅಭಯ ನೀಡಿತ್ತು. ಹೀಗಾಗಿ ಮತ್ತೊಮ್ಮೆ ದರ್ಶನ ಸೇವೆ ನೀಡಲು ಮನೆಯವರು ತಯಾರಿ ನಡೆಸಿದ್ದರು.
ದೈವ ಮಂತ್ರದೇವತೆ ನುಡಿಯಂತೆ ದರ್ಶನ ಸೇವೆಗೆ ಮೂರು ದಿನಗಳ ಮೊದಲು ಚಂದ್ರಶೇಖರ್ ಮನೆ ಸೇರಿದ್ದಾರೆ. ಮುಂಬೈನವರೊಬ್ಬರು ಚಂದ್ರಶೇಖರ್ ಇರುವ ಸುಳಿವು ನೀಡಿದ್ದರು. ಅದೇ ಸುಳಿವುನಲ್ಲಿ ಹುಡಕಾಟ ನಡೆಸಿದಾಗ ಪತ್ತೆಯಾದ. ಇದೀಗ ಚಂದ್ರಶೇಖರ್ ತಾಯಿಗೆ 80 ವರ್ಷ ದಾಟಿದೆ. ಜೀವನದ ಇಳಿವಯಸ್ಸಿನಲ್ಲಿ ಮಗ ಮನೆ ಸೇರಿದ್ದು, ಕಂಡು ತಾಯಿಯ ಸಂತೋಷಕ್ಕೆ ಪಾರವೇ ಇಲ್ಲವಾಗಿದೆ. ಇದು ಮನೆ ದೈವ ಮಂತ್ರ ದೇವತೆಯಿಂದಲೇ ಸಾಧ್ಯ ಆಯ್ತು ಅನ್ನೋದು ಮನೆಯವರು ನಂಬಿಕೆ. ಇದನ್ನೂ ಓದಿ: ಬೆಳಗಾವಿ | ಭಾರೀ ಮಳೆಗೆ ಮುಳುಗಿತು ಹಬ್ಬಾನಟ್ಟಿ ಮಾರುತಿ ದೇವಸ್ಥಾನ – ಎಲ್ಲೆಲ್ಲಿ ಏನಾಗಿದೆ?
ಹಾಸನ: ನೀರಿನ ತೊಟ್ಟಿಯಲ್ಲಿ ಮುಳುಗಿಸಿ 6 ವರ್ಷದ ಮಗಳನ್ನೇ ತಾಯಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಕಳೆದ ಏಳು ವರ್ಷಗಳ ಹಿಂದೆ ಶಿವಮೊಗ್ಗದ ರಘು ಎಂಬವರ ಜೊತೆ ಶ್ವೇತಾ ವಿವಾಹವಾಗಿದ್ದರು. ಆರಂಭದಿಂದಲೂ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ ನಾಲ್ಕು ವರ್ಷಗಳಿಂದ ಸಾನ್ವಿಯನ್ನು ರಘು ಪೋಷಕರು ಸಾಕುತ್ತಿದ್ದರು. ಗಂಡನಿಂದ ದೂರವಾಗಿ ಶ್ವೇತಾ ಕಳೆದ ಐದು ವರ್ಷಗಳಿಂದ ತವರು ಮನೆಯಲ್ಲಿದ್ದರು. ವಿಚ್ಛೇದನಕ್ಕೂ ಅರ್ಜಿ ಸಲ್ಲಿಸಿದ್ದರು. ಕುಟುಂಬಸ್ಥರು ಹಲವು ಬಾರಿ ರಾಜಿ ಸಂಧಾನ ಮಾಡಿದ್ದರು. ಆದರೂ ಗಂಡ-ಹೆಂಡತಿ ನಡುವೆ ಒಮ್ಮತ ಮೂಡಿರಲಿಲ್ಲ.
ಹಲವು ವರ್ಷಗಳಿಂದ ನೆಲಮಂಗಲದಲ್ಲಿ ರಘು ಕೆಲಸ ಮಾಡುತ್ತಿದ್ದರು. ಶನಿವಾರ ಬೆಂಗಳೂರಿನ ನೆಲಮಂಗಲದಿಂದ ಮಗಳು ಸಾನ್ವಿಯನ್ನು ಕರೆದುಕೊಂಡು ಶ್ವೇತಾ ತವರು ಮನೆಗೆ ಬಂದಿದ್ದರು. ಮನೆ ಕೀ ಇಲ್ಲದ ಕಾರಣ ಪಕ್ಕದ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಒಂಬತ್ತು ಗಂಟೆ ಸಮಯದಲ್ಲಿ ಜಮೀನು ಕಡೆಗೆ ಹೋಗುತ್ತೇನೆಂದು ಪುತ್ರಿಯನ್ನು ಕರೆದುಕೊಂಡು ಹೋಗಿದ್ದರು. ತಮ್ಮ ಜಮೀನಿನ ಪಕ್ಕದಲ್ಲಿದ್ದ ಕಟ್ಟೆಯಲ್ಲಿ ಮಗಳನ್ನು ಮುಳುಗಿಸಿದ್ದಾರೆ.
ಮಗು ಕಿರುಚಾಡುತ್ತಿದ್ದನ್ನು ಕೇಳಿ ಅಕ್ಕಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಓಡಿಬಂದಿದ್ದಾರೆ. ಕೂಡಲೇ ವರಸೆ ಬದಲಿಸಿ ನಾನು ಮಗು ಇಬ್ಬರೂ ಸಾಯಲು ಪ್ರಯತ್ನಿಸಿದ್ದೆವು ಎಂದು ಗ್ರಾಮಸ್ಥರಿಗೆ ಶ್ವೇತಾ ಹೇಳಿಕೊಂಡಿದ್ದಾರೆ. ತಕ್ಷಣವೇ ಬಾಲಕಿಯನ್ನು ಎತ್ತಿಕೊಂಡು ಗ್ರಾಮಸ್ಥರು ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಹಿರಿಸಾವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ: ಒಂದು ವರ್ಷದ ಮಗುವಿನ ಎದುರೇ ಮಹಿಳೆಯೊಬ್ಬಳು ಜೋಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಚಿಕ್ಕಬಳ್ಳಾಪುರ (Chikkaballapura) ನಗರದ ಸಿಎಂಸಿ ಬಡಾವಣೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಝಾನ್ಸಿ (23) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಈಶ್ವರ್, ಕ್ರೈನ್ ಅಪರೇಟರ್ ಆಗಿದ್ದು, ಮನೆಗೆ ಊಟಕ್ಕೆ ಬಂದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ತಾಯಿಯ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದರೆ, ಮಗು ತಾಯಿಯ ಕಾಲುಗಳ ಬಳಿ ಮಲಗಿತ್ತಂತೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ: ಕೌಟುಂಬಿಕ ಕಲಹದಿಂದ (Family Feud) ಬೇಸತ್ತು ಎರಡು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು (Hanur) ತಾಲೂಕಿನ ಮಹದೇಶ್ವರಬೆಟ್ಟ ಸಮೀಪದ ಕಾಡುಹೊಲ ಗ್ರಾಮದಲ್ಲಿ ನಡೆದಿದೆ.
ಸುಶೀಲ (30), ಆಕೆಯ ಮಕ್ಕಳಾದ ಚಂದ್ರು (8), ದಿವ್ಯ (11) ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾವಿಯ ದಡದಲ್ಲಿ ಚಪ್ಪಲಿ ಹಾಗೂ ತಾಳಿ ಇಟ್ಟು ತಾಯಿ ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ನೀರು ತರಲು ಬಾವಿಯ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಲ್ಜಿಯಂನಲ್ಲಿ ಮೆಹುಲ್ ಚೋಕ್ಸಿ ಅರೆಸ್ಟ್ – ಭಾರತಕ್ಕೆ ಹಸ್ತಾಂತರಿಸಲು ಸಿಬಿಐ ಮನವಿ
ಚಿತ್ರದುರ್ಗ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ತಾಯಿ-ಮಗ ಇಬ್ಬರೂ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ತುಮಕೂರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬೋರಮ್ಮ (25) ಮತ್ತು ಪ್ರಣೀತ್ ಗೌಡ @ಅಜಯ್ (03) ಮೃತ ದುರ್ದೈವಿಯಾಗಿದ್ದಾರೆ. ಮನೆಯಿಂದ ಶೌಚಾಲಯಕ್ಕೆ ಎಳೆದಿರುವ ವಿದ್ಯುತ್ ವೈಯರ್ ಡ್ಯಾಮೇಜ್ ಆಗಿದ್ದು, ಅದನ್ನು ಆಕಸ್ಮಿಕವಾಗಿ ಹಿಡಿದುಕೊಂಡ ಪ್ರಣೀತ್ ಗೌಡಗೆ ಕರೆಂಟ್ ಶಾಕ್ ಹೊಡಿದಿದೆ. ಆಗ ಮಗನನ್ನು ರಕ್ಷಿಸಲು ಮುಂದಾದ ಮಗುವಿನ ತಾಯಿ ಬೋರಮ್ಮಗೂ ಸಹ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೋರಮ್ಮನ ಎದೆ ಮತ್ತು ಕೈಭಾಗದಲ್ಲಿ ಸುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಮೋದಿಗೆ ಭವ್ಯ ಸ್ವಾಗತ – ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಭಾಗಿ
ಇನ್ನು ಏಕಾಕಾಲದಲ್ಲಿ ತಾಯಿ ಮತ್ತು ಮಗುವಿನ ಶವ ನೋಡಿದ ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ ಮತ್ತು ಮೊಳಕಾಲ್ಮೂರು ಪೊಲೀಸ್ ಠಾಣೆಯ ಪಿಎಸ್‌ಐ ಪಾಂಡುರಂಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಕೊಪ್ಪಳದಲ್ಲೊಂದು ಅಂತಾರಾಷ್ಟ್ರೀಯ ಮದುವೆ – ಲಂಡನ್ ಯುವತಿಗೆ ಗಂಗಾವತಿ ಗಂಡ!
ಲಕ್ನೋ: ಉತ್ತರ ಪ್ರದೇಶದ (Utttar Pradesh) ಹಾಪುರ್ ಜಿಲ್ಲೆಯಲ್ಲಿ (Hapur District) 50 ವರ್ಷದ ಮಹಿಳೆಯೊಬ್ಬರು ಅಂಬುಲೆನ್ಸ್‌ನಲ್ಲಿ (Ambulance) 14ನೇ ಮಗುವಿಗೆ ಜನ್ಮ ನೀಡಿದ್ದಾರೆ.
ಪಿಲ್ಖುವಾದ ಮೊಹಲ್ಲಾ ಬಜರಂಗಪುರಿಯ ನಿವಾಸಿ ಇಮಾಮುದ್ದೀನ್ ಅವರ ಪತ್ನಿ 50 ವರ್ಷದ ಗುಡಿಯಾ ಬೇಗಂ ಅವರಿಗೆ ಹೆರಿಗೆ ನೋವು ಇತ್ತು. ಅವರನ್ನು ಪಿಲ್ಖುವಾ ಪ್ರಾಥಮಿಕ ಆರೋಗ್ಯಕ್ಕೆ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ವೈದ್ಯರು ಮೀರತ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದರು. ಆರೋಗ್ಯ ಇಲಾಖೆಯ 108 ಆಂಬ್ಯುಲೆನ್ಸ್ ಮಹಿಳೆಯನ್ನು ಕರೆದೊಯ್ಯಲಾಯಿತು. ಇದನ್ನೂ ಓದಿ: ಭೂಕಂಪದಿಂದಾಗಿ ಆಸ್ಪತ್ರೆ ನಾಮಾವಶೇಷ – ಬ್ಯಾಂಕಾಕ್‌ನ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ದಾರಿಯಲ್ಲಿ ಗುಡಿಯಾಗೆ ಹೆರಿಗೆ ನೋವು ಹೆಚ್ಚಾಯಿತು. ಪರಿಸ್ಥಿತಿ ಹದಗೆಟ್ಟಾಗ ಅಂಬುಲೆನ್ಸ್ ನಿಲ್ಲಿಸಿ ಸಿಬ್ಬಂದಿ ಲಭ್ಯವಿರುವ ಹೆರಿಗೆ ಕಿಟ್ ಸಹಾಯದಿಂದ ಮಹಿಳೆಗೆ ಹೆರಿಗೆ ಮಾಡುವಲ್ಲಿ ಯಶಸ್ವಿಯಾದರು. ಹೆರಿಗೆಯ ನಂತರ, ತಾಯಿ ಮತ್ತು ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಸಮಯದಲ್ಲಿ ಮಹಿಳೆಯ 22 ವರ್ಷದ ಮಗ ಕೂಡ ಆಸ್ಪತ್ರೆಗೆ ಬಂದಿದ್ದ.
ಸ್ಯಾಂಡಲ್‌ವುಡ್ ನಟಿ ಶುಭಾ ಪೂಂಜಾ (Shubha Poonja) ಅವರ ತಾಯಿ (Mother) ನಿಧನರಾಗಿರುವ ನೋವಿನಲ್ಲಿದ್ದಾರೆ. ಅಮ್ಮ ವಿಧಿವಶರಾಗಿ ಒಂದು ವಾರದ ಬಳಿಕ ಅವರು ರಿಯಾಲಿಟಿ ಶೋ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ, ಅಗಲಿದ ಅಮ್ಮನ ನೆನೆದು ಅವರನ್ನು ಬಿಟ್ಟು ಹೇಗಿರುವುದು ಅಂತಲೇ ಗೊತ್ತಾಗುತ್ತಿಲ್ಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದನ್ನೂ ಓದಿ:ಪುನೀತ್ ಸರ್ ಫ್ಯಾನ್ಸ್‌ಗೆ ಇವತ್ತು ಹಬ್ಬ – ಅಪ್ಪು ರೀ-ರಿಲೀಸ್ ಬಗ್ಗೆ ಅನುಶ್ರೀ ಮಾತು
‘ಬಾಯ್ಸ್ ವರ್ಸಸ್ ಗರ್ಲ್ಸ್’ ಶೋನಲ್ಲಿ ಮಾತನಾಡಿದ ಶುಭಾ ಪೂಂಜಾ, ಅಮ್ಮ ಸಾಯುವ ಹಿಂದಿನ ದಿನದ ರಾತ್ರಿ, ಅವರು ನನ್ನ ಕೈಯನ್ನು ಬಿಟ್ಟೆ ಇಲ್ಲ. ನಾನು ಕೂಡ ಗಟ್ಟಿಯಾಗಿ ಹಿಡಿದುಕೊಂಡಿದ್ದೆ ಎಂದರು. ಇಡೀ ರಾತ್ರಿ ಅಮ್ಮನಿಗೆ ಉಸಿರಾಡುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಈಗ ಅವರನ್ನು ಬಿಟ್ಟು ನಾನು ಹೇಗೆ ಇರುವುದು ಅಂತ ಗೊತ್ತಾಗುತ್ತಲೇ ಇಲ್ಲ. ಐ ಆಮ್ ನಾಟ್ ಓಕೆ ಎನ್ನುತ್ತಾ ಶುಂಭಾ ಪೂಂಜಾ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಈ ವೇಳೆ, ಕಾರ್ಯಕ್ರಮ ಇತರೆ ಸ್ಪರ್ಧಿಗಳು ಅವರಿಗೆ ಸಂತೈಸಿದ್ದಾರೆ.
ಮಾ.6ರಂದು ಶುಭಾ ತಾಯಿ ನಿಧನರಾದರು. ಆ ಸಂದರ್ಭದಲ್ಲಿ ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೆ ನನಗೆ ಜೀವನವಿಲ್ಲ. ನಿನ್ನ ಬಿಟ್ಟು ನನಗೆ ಬದುಕೋಕೆ ಬರೋದು ಇಲ್ಲ. 24 ಗಂಟೆ ನಿನ್ನ ಜೊತೆನೇ ಇರುತ್ತಿದ್ದೆ, ಈಗ ನಾನು ಏನು ಮಾಡಲಿ. ಎಲ್ಲಿ ಹೋಗಲಿ ಯಾರಿಗೋಸ್ಕರ ವಾಪಸ್ ಮನೆಗೆ ಬರಲಿ, ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ, ನನ್ನ ಯಾಕೆ ಬಿಟ್ಟು ಹೋದೆ ಎಂದು ನಟಿ ಎಮೋಷನಲ್ ಆಗಿ ಬರೆದುಕೊಂಡಿದ್ದರು.
ಅಂದಹಾಗೆ, ಮೊಗ್ಗಿನ ಮನಸ್ಸು, ಚೆಂಡ, ಜಾಕ್‌ಪಾಟ್, ಪರಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಹಾಸನ: ಕೌಟುಂಬಿಕ ಕಲಹ (Family Feud) ಹಿನ್ನೆಲೆ ಹಾಸನ (Hassan) ಜಿಲ್ಲೆಯ ಚನ್ನರಾಯಪಟ್ಟಣ (Channarayapatna) ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಇವರಿಬ್ಬರ ಸಾವಿಗೆ ಅತ್ತೆ-ಸೊಸೆ ನಡುವಿನ ಹೊಂದಾಣಿಕೆ ಕಾರಣ ಅಲ್ಲ ಎಂಬ ಸ್ಫೋಟಕ ಸತ್ಯ ಹೊರಬಿದ್ದಿದೆ.
ಮೃತ ಭರತ್ ಹೆಚ್‌ಐವಿ ಸೋಂಕಿತನಾಗಿದ್ದ ಎಂಬ ಸತ್ಯವನ್ನು ಆತನ ಪತ್ನಿ ಕುಟುಂಬದವರು ಇದೀಗ ಬಹಿರಂಗಪಡಿಸಿದ್ದಾರೆ. ಪತ್ನಿ ಕುಟುಂಬಸ್ಥರು ಭರತ್‌ಗೆ 8 ತಿಂಗಳ ಹಿಂದೆ ನಾಲ್ಕು ಲಕ್ಷ ಹಣ, 100 ಗ್ರಾಂ ಚಿನ್ನ ನೀಡಿ ಮಗಳನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ ಭರತ್ ಮೂರು ವರ್ಷಗಳ ಹಿಂದಿನಿಂದಲೇ ಹೆಚ್‌ಐವಿ ಸೋಂಕಿತನಾಗಿದ್ದ. ಮಾರಣಾಂತಿಕ ಕಾಯಿಲೆ ಸೋಂಕು ತಗುಲಿರುವುದನ್ನು ಮುಚ್ಚಿಟ್ಟು ಮದುವೆಯಾಗಿದ್ದ ಭರತ್, ಮದುವೆಯಾದ ಹದಿನೈದು ದಿನ ಮಾತ್ರ ಪತ್ನಿ ಜೊತೆ ಸಂಸಾರ ಮಾಡಿದ್ದ. ಬಳಿಕ ಪತ್ನಿಯಿಂದ ಅಂತರ ಕಾಯ್ದುಕೊಂಡಿದ್ದ. ಅಲ್ಲದೇ ಈ ವಿಚಾರವನ್ನು ಪತ್ನಿಯಿಂದ ಮುಚ್ಚಿಟ್ಟು ಕಾಯಿಲೆಗೆ ಮಾತ್ರೆ ತೆಗೆದುಕೊಳ್ಳುತ್ತಿದ್ದ. ಇದನ್ನೂ ಓದಿ: ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ ಅಂದ್ರೆ.. – ದರ್ಶನ್ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್
ತನ್ನ ಹುಳುಕು ಮುಚ್ಚಿಕೊಳ್ಳಲು ಪಂಚಾಯ್ತಿ ಸೇರಿಸಿ ನನ್ನ ಪತ್ನಿ ಹೆಣ್ಣೇ ಅಲ್ಲ, ಮದ್ಯಪಾನ ಮಾಡುತ್ತಾಳೆ, ಮಾದಕ ವಸ್ತು ತೆಗೆದುಕೊಳ್ಳುತ್ತಾಳೆ ಎಂದು ಭರತ್ ಸುಳ್ಳು ಆರೋಪ ಮಾಡಿದ್ದ. ಕೆಲವು ದಿನಗಳ ಕಾಲ ಸಂಬಂಧಿಕರ ಮನೆಯಲ್ಲಿ ಕೂಡ ಪತ್ನಿಯನ್ನು ಉಳಿಸಿದ್ದ. ಭರತ್ ವಂಚನೆ ತಿಳಿಯದೇ ಮತ್ತೊಂದು ಪಂಚಾಯ್ತಿ ನಡೆಸಿ ಪತ್ನಿ ಕುಟುಂಬಸ್ಥರು ಆಕೆಗೆ ಬುದ್ಧಿವಾದ ಹೇಳಿ ಗಂಡನ ಮನೆಗೆ ಕಳುಹಿಸಿದ್ದರು. ಆದರೆ ಭರತ್ ತನ್ನ ಪತ್ನಿ ತಪ್ಪು ಮಾಡದೇ ಇದ್ದರೂ ಮತ್ತೆ ತವರು ಮನೆಗೆ ಕಳುಹಿಸಿದ್ದ. ಇದನ್ನೂ ಓದಿ: ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ: ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ರಾಜಸ್ಥಾನ ಸಿಎಂ
ಭರತ್ ಹೆಚ್‌ಐವಿ ರೋಗಕ್ಕೆ ತೆಗೆದುಕೊಳ್ಳುವ ಮಾತ್ರೆ ಡಬ್ಬಿಯನ್ನು ಸದಾ ಕೊರಳಿಗೆ ಕಟ್ಟಿಕೊಂಡು ತಿರುಗುತ್ತಿದ್ದ. ತನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದು ಹಾಗೂ ಮಾತ್ರೆ ತೆಗೆದುಕೊಳ್ಳುವ ಬಗ್ಗೆ ಅನುಮಾನ ಪಟ್ಟ ಪತ್ನಿ, ಭರತ್ ಸ್ನಾನಕ್ಕೆ ಹೋಗಿದ್ದಾಗ ಮಾತ್ರೆಯ ಫೋಟೋ ತೆಗೆದು ತನ್ನ ಅಕ್ಕನಿಗೆ ಕಳುಹಿಸಿದ್ದಳು. ಆಕೆಯ ಸಹೋದರಿ ಮಾತ್ರೆಯ ಫೋಟೋಗಳನ್ನು ತನಗೆ ಪರಿಚಯ ಇರುವ ನರ್ಸ್‌ಗೆ ಕಳುಹಿಸಿದ್ದರು. ಇದನ್ನು ಪರಿಶೀಲಿಸಿದ ನರ್ಸ್ ಇದು ಹೆಚ್‌ಐವಿ ಸೋಂಕಿತರು ತೆಗೆದುಕೊಳ್ಳುವ ಮಾತ್ರೆ ಎಂದು ತಿಳಿಸಿದ್ದಾರೆ. ಇದರಿಂದ ಭರತ್ ಹೆಚ್‌ಐವಿ ಸೋಂಕಿತ ಎಂದು ಪತ್ನಿ ಕುಟುಂಬಸ್ಥರು ಅನುಮಾನಗೊಂಡಿದ್ದಾರೆ. ಇದನ್ನೂ ಓದಿ: ಬಸ್, ಮೆಟ್ರೋ ಬಳಿಕ ಪ್ರಯಾಣಿಕರಿಗೆ ಮತ್ತೊಂದು ಶಾಕ್ – ಇಂದೇ ಫೈನಲ್ ಆಗುತ್ತಾ ಆಟೋ ದರ ಏರಿಕೆ?
ಬಳಿಕ ಎರಡೂ ಕಡೆಯ ಕುಟುಂಬಸ್ಥರಿಂದ ಮತ್ತೊಂದು ರಾಜಿ ಪಂಚಾಯ್ತಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಭರತ್ ಆಧಾರ್ ಕಾರ್ಡ್ ತರಬೇಕು. ಇಬ್ಬರೂ ಮೆಡಿಕಲ್ ಟೆಸ್ಟ್‌ಗೆ ಒಳಪಡಬೇಕು ಎಂದು ನಿರ್ಧಾರ ಮಾಡಿ ಸೋಮವಾರ ಮೆಡಿಕಲ್ ಟೆಸ್ಟ್‌ಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಭರತ್ ಆಧಾರ್ ಕಾರ್ಡ್ ಕೊಡದೇ ಸತಾಯಿಸಿದ್ದ. ಪಂಚಾಯ್ತಿ ನಡೆದರೆ ತಾನು ಮುಚಿಟ್ಟಿದ್ದ ಎಲ್ಲಾ ಸತ್ಯ ಬಯಲಾಗಲಿದೆ ಎಂಭ ಭಯದಿಂದ ಭರತ್ ಮಾ.9 ರಂದು ರಾತ್ರಿ ಬೆಂಗಳೂರಿನಿಂದ ತಾಯಿ ಜೊತೆ ದಿಡಿಗದ ಸಂಬಂಧಿಕರ ಮನೆಗೆ ಬಂದಿದ್ದ. ಬಳಿಕ ಸಂಬಂಧಿಕರಿಂದ ಬೈಕ್ ಪಡೆದು ಕಬ್ಬಳಿ ಮನೆಗೆ ಬಂದು ಅಲ್ಲಿಂದ ನೆರಲೆಕೆರೆ ಗ್ರಾಮದಲ್ಲಿರುವ ಅಜ್ಜಿ ಮನೆಗೆ ತಾಯಿ ಮಗ ತೆರಳಿದ್ದರು. 100 ಗ್ರಾಂ ಒಡವೆ, 30 ಗ್ರಾಂ ಚೈನು ಎಲ್ಲವನ್ನೂ ಅಜ್ಜಿಗೆ ಕೊಟ್ಟು ಅವರ ಆಶೀರ್ವಾದ ಪಡೆದು ಭರತ್ ಹಾಗೂ ತಾಯಿ ಮರಳಿ ಗ್ರಾಮಕ್ಕೆ ಬಂದಿದ್ದರು. ಮಾ.10ರ ಮುಂಜಾನೆ 3:15 ರಿಂದ 4 ಗಂಟೆ ನಡುವೆ ಗ್ರಾಮದ ನೀರಿನ ಕಟ್ಟೆಗೆ ಬಿದ್ದು ತಾಯಿ-ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಭರತ್ ತಾಯಿ ಜಯಂತಿ ಗ್ರಾಮದ ದೇವರಿಗೆ ಕೈಮುಗಿದು ಹೋಗಿದ್ದರು. ಇದನ್ನೂ ಓದಿ: ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ – ಕರ್ನಾಟಕಕ್ಕೂ ವಿಸ್ತರಿಸಲು ಸಚಿವ ಪ್ರಹ್ಲಾದ್ ಜೋಶಿ ಒತ್ತಾಯ
ಭರತ್ ತಾಯಿ ಜಯಂತಿ ಅವರಿಗೆ ಸೇರಿದ್ದ 150 ತೆಂಗಿನ ಮರ, 2 ಎಕರೆ ಹೊಲ ಮತ್ತು 1 ಮನೆ ಮತ್ತು ಆಸ್ತಿ ಲಪಟಾಯಿಸಲು ಜಯಂತಿ ಸಂಬಂಧಿಕರಿಂದ ಭರತ್ ಪತ್ನಿ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ ಎಂದು ಪತ್ನಿ ಕುಟುಂಬಸ್ಥರು ತಿಳಿಸಿದ್ದು, ಭರತ್‌ನಿಂದ ಮಗಳ ಬಾಳು ಹಾಳಾಗಿದೆ ಎಂದು ಕಣ್ಣೀರಿಡುತ್ತಿದ್ದಾರೆ. ಸದ್ಯ ಭರತ್ ಪತ್ನಿಯನ್ನು ಆಕೆಯ ಕುಟುಂಬಸ್ಥರು ಹೆಚ್‌ಐವಿ ಪರೀಕ್ಷೆಗೆ ಒಳಪಡಿಸಿದ್ದು, ನೆಗೆಟಿವ್ ರಿಪೋರ್ಟ್ ಬಂದಿದೆ. ಆದರೆ ಭರತ್ ಪತ್ನಿಯ ಮಾನಸಿಕ ಕಿರುಕುಳ, ಹಠಮಾರಿತನದಿಂದ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಾಯಿ ಜಯಂತಿ ಸಂಬಂಧಿಕರು ಬಿಂಬಿಸಿದ್ದಾರೆ. ತಾಯಿ-ಮಗನ ಸಾವಿಗೆ ನಮ್ಮ ಮಗಳು ಕಾರಣಳಲ್ಲ ಎಂದು ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ. ಸದ್ಯ ತಾಯಿ-ಮಗನ ಮೃತದೇಹ ನೋಡಲು ಭರತ್ ಸಂಬಂಧಿಕರು ಆತನ ಪತ್ನಿ ಹಾಗೂ ಕುಟುಂಬಸ್ಥರಿಗೆ ಅವಕಾಶ ನೀಡಿಲ್ಲ. ಇದನ್ನೂ ಓದಿ: EXCLUSIVE |ರನ್ಯಾ ಬಳಿ ಇದೆ ದುಬೈ ರೆಸಿಡೆಂಟ್ ವೀಸಾ – ಜಾಮೀನು ಸಿಕ್ರೆ ದೇಶ ಬಿಟ್ಟು ಹೋಗ್ತಾರಾ?