Tag: Motion Poster

  • ಮೋಷನ್ ಪೋಸ್ಟರ್ ಸತ್ಯದೇವ್ ಜೊತೆ ಡಾಲಿ: ದೀಪಾವಳಿಗೆ ‘ಜೀಬ್ರಾ’

    ಮೋಷನ್ ಪೋಸ್ಟರ್ ಸತ್ಯದೇವ್ ಜೊತೆ ಡಾಲಿ: ದೀಪಾವಳಿಗೆ ‘ಜೀಬ್ರಾ’

    ಟರಾಕ್ಷಸ ಡಾಲಿ ಧನಂಜಯ್ (Dhananjay) ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ (Satyadev) ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ (Zebra). ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ((Motion Poster)) ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್, ಡಾಲಿ ಧನಂಜಯ್ ಮತ್ತು ಸತ್ಯ ದೇವ್ ಅವರನ್ನು ಪರಿಚಯಿಸಲಾಗಿದೆ.

    ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು ಆಕರ್ಷಕವಾಗಿವೆ. ಬಹಳ ಕ್ರಿಯೇಟಿವಿಟಿಯಾಗಿ ಮೋಷನ್ ಪೋಸ್ಟರ್ ನ್ನು ಚಿತ್ರೀಕರಿಸಲಾಗಿದೆ. ಜೀಬ್ರಾ ಸಿನಿಮಾವನ್ನ ಈಶ್ವರ್ ಕಾರ್ತಿಕ್ ಡೈರೆಕ್ಷನ್ ಮಾಡಿದ್ದಾರೆ. ಕ್ರೈಂ ಮತ್ತು ಥ್ರಿಲ್ಲರ್ ಕಂಟೆಂಟ್ ಇರೋ ಚಿತ್ರ ಇದಾಗಿದೆ.

    ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡಲಾಗಿದೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್ ಸಂಭಾಷಣೆ ಇದೆ. ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು ಕಾಸ್ಟ್ಯೂಮ್ ಡಿಸೈನರ್  ಆಗಿ ದುಡಿದಿದ್ದಾರೆ. ಮೋಷನ್ ಪೋಸ್ಟರ್ ಜೊತೆಗೆ ಚಿತ್ರತಂಡ ಬಿಡುಗಡೆ ದಿನಾಂಕ ಕೂಡ ಘೋಷಣೆ ಮಾಡಿದೆ. ಬೆಳಕಿನ ಹಬ್ಬ ದೀಪಾವಳಿಗೆ ಜೀಬ್ರಾ ತೆರೆಗೆ ಬರಲಿದೆ.

  • ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಶಿವಣ್ಣ

    ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡಿದ ಶಿವಣ್ಣ

    ದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  ‘ಕಾಂಗರೂ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಆದಿತ್ಯ ಅವರ ಅಭಿಮಾನಿಗಳು ಮೋಷನ್ ಪೋಸ್ಟರ್ ಗೆ ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

    ಮೋಷನ್ ಪೋಸ್ಟರ್ ತುಂಬಾ ಚೆನ್ನಾಗಿದೆ. ನೋಡಿದಾಗ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂದಿನಿಸುತ್ತದೆ. ಆದಿತ್ಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶಿವಣ್ಣ ಹಾರೈಸಿದ್ದಾರೆ. ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನಿರ್ಮಾಣವಾಗುತ್ತಿದೆ.

    ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.  ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ  ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

    ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

  • ಆದಿತ್ಯ ನಟನೆಯ ‘ಕಾಂಗರೂ’ ಚಿತ್ರಕ್ಕೆ ಸೂಪರ್ ಸ್ಟಾರ್ ಸಾಥ್

    ಆದಿತ್ಯ ನಟನೆಯ ‘ಕಾಂಗರೂ’ ಚಿತ್ರಕ್ಕೆ ಸೂಪರ್ ಸ್ಟಾರ್ ಸಾಥ್

    ದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ  ‘ಕಾಂಗರೂ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ.  ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಕಾಂಗರೂ ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

    ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ  ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. ಕಾಂಗರೂ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ ಯಾರು ಎಂಬುದನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.

    ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.  ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

    ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ  ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ. ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

  • ‘ಹುಲಿ ನಾಯಕ’ ಮೋಷನ್ ಪೋಸ್ಟರ್ ರಿಲೀಸ್: ಕುತೂಹಲಕ್ಕೆ ಕಾರಣವಾದ ಪೋಸ್ಟರ್

    ‘ಹುಲಿ ನಾಯಕ’ ಮೋಷನ್ ಪೋಸ್ಟರ್ ರಿಲೀಸ್: ಕುತೂಹಲಕ್ಕೆ ಕಾರಣವಾದ ಪೋಸ್ಟರ್

    ಡಿ.ಜೆ ಚಕ್ರವರ್ತಿ (ಚಕ್ರವರ್ತಿ ಚಂದ್ರಚೂಡ) ನಿರ್ದೇಶನದಲ್ಲಿ ಮೂಡಿ ಬರಲಿರುವ ಹುಲಿ ನಾಯಕ ಸಿನಿಮಾದ ಮೋಷನ್ ಪೋಸ್ಟರ್  (Motion poster) ರಿಲೀಸ್ ಆಗಿದೆ. ಬಿಡುಗಡೆಯಾದ ಪೋಸ್ಟರ್ ನಲ್ಲಿ ಹತ್ತು ಹಲವು ಕೌತುಕದ ವಿಷಯಗಳು ತುಂಬಿವೆ. ವೀರ ಸಂಗೊಳ್ಳಿ ರಾಯಣ್ಣನ ಗಿಗಿ ಪದವನ್ನು ಬಳಸಿಕೊಂಡು ಅನ್ಯಾಯಕ್ಕೊಳಗಾದವರ ನ್ಯಾಯ ಕೇಳುತ್ತಿದ್ದಾರೆ ನಿರ್ದೇಶಕ. ಟ್ಯಾಗ್ ಲೈನ್ ಆಗಿ ಜಸ್ಟಿಸ್ ಫಾರ್ ಸೌಮ್ಯ ಎಂದು ಹೆಸರಿಟ್ಟಿದ್ದಾರೆ. ಹೀಗಾಗಿ ಈ ಸಿನಿಮಾದಲ್ಲಿ ಏನೆಲ್ಲ ವಿಷಯಗಳು ಇರಲಿವೆ ಎನ್ನುವುದು ಸದ್ಯಕ್ಕಿರುವ ಕ್ಯೂರಿಯಾಸಿಟಿ.

    ಹುಲಿ ನಾಯಕ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಜನವರಿಯಿಂದ ಚಿತ್ರೀಕರಣಕ್ಕೆ ನಿರ್ದೇಶಕರು ಪ್ಲ್ಯಾನ್ ಮಾಡಿದ್ದು, ಅದಕ್ಕೂ ಮುನ್ನ ತಮ್ಮ ಚಿತ್ರದ ನಾಯಕನಿಗೆ ಭರ್ಜರಿ ತಯಾರಿಯನ್ನೂ ಮಾಡಿಸುತ್ತಿದ್ದಾರೆ ಚಕ್ರವರ್ತಿ. ಸಿನಿಮಾ ಶುರುವಾಗುವ ಮುನ್ನವೇ ಆಡಿಯೋ ರೈಟ್ಸ್ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದ್ದು, ಚಿತ್ರದ ಬಗ್ಗೆ ಈಗಿನಿಂದಲೇ ಹೈಪ್ ಕ್ರಿಯೇಟ್ ಆಗುತ್ತಿದೆ.

    ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್. ಡಿ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ (Title) ಅನಾವರಣಗೊಳಿಸಿದ್ದರು.

    ಚಿತ್ರದ ಹೆಸರು ‘ಹುಲಿ ನಾಯಕ’ (Huli Nayaka) ಎಂದು ಘೋಷಣೆ ಮಾಡಿದ ಉಪೇಂದ್ರ, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದರು.

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

     

    ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

  • ‘ಕರಟಕ ದಮನಕ’ ಮೋಷನ್ ಪೋಸ್ಟರ್ ರಿಲೀಸ್: ಇದು ಕುತಂತ್ರಿ ನರಿಗಳ ಕಥನ ಎಂದ ಭಟ್

    ‘ಕರಟಕ ದಮನಕ’ ಮೋಷನ್ ಪೋಸ್ಟರ್ ರಿಲೀಸ್: ಇದು ಕುತಂತ್ರಿ ನರಿಗಳ ಕಥನ ಎಂದ ಭಟ್

    ಯೋಗರಾಜ್ ಭಟ್ (Yogaraj Bhat) ನಿರ್ದೇಶನದಲ್ಲಿ ಮೂಡಿ ಬರುತ್ತಿರುವ, ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ಮತ್ತು ಪ್ರಭುದೇವ (Prabhu Deva) ಜೊತೆಯಾಗಿ ನಟಿಸುತ್ತಿರುವ ‘ಕರಟಕ ದಮನಕ’ (Karataka Damanaka) ಚಿತ್ರದ ಮೋಷನ್ ಪೋಸ್ಟರ್ (Motion Poster) ರಿಲೀಸ್ ಆಗಿದೆ. ಪ್ರಮುಖ ಪಾತ್ರಗಳು ಮತ್ತು ಆ ಪಾತ್ರಗಳ ಪ್ರತಿಮೆಯನ್ನು ತೋರಿಸುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಕರಟಕ ದಮನಕ ಎರಡು ಕುತಂತ್ರ ನರಿಗಳ ಕಥನವನ್ನೂ ಈ ಮೋಷಲ್ ಪೋಸ್ಟರ್ ನಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ.

    ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇಂದಿಗೆ ಈ ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಕರಟಕ ದಮನಕ ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ ಕರಟಕ ದಮನಕ ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ. ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿದೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಅವರಂತಹ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ಶೇಕಡಾ ತೊಂಬತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು. ಇದನ್ನೂ ಓದಿ:2023: ಅತ್ಯುತ್ತಮ ಸಿನಿಮಾ, ರಾಕೆಟ್ರಿ ದಿ ನಂಬಿ ಎಫೆಕ್ಟ್

    ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.

     

    ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ.  ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ  ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ರೇಸರ್’ ಸಿನಿಮಾದ ಮೋಷನ್ ಪೋಸ್ಟರ್: ದುಬಾರಿ ಬೈಕ್ ಏರಿ ಬಂದ ಅಕ್ಷಿತಾ

    ‘ರೇಸರ್’ ಸಿನಿಮಾದ ಮೋಷನ್ ಪೋಸ್ಟರ್: ದುಬಾರಿ ಬೈಕ್ ಏರಿ ಬಂದ ಅಕ್ಷಿತಾ

    ರೇಸರ್ (Racer) ಸಿನಿಮಾ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರು ಆಗಿರುವ ವಿಷ್ಣುಕಾಂತ್ ಪುತ್ರ ಭರತ್ ವಿಷ್ಣುಕಾಂತ್ (Bharat Vishnukant) ನಿರ್ದೇಶನಕ್ಕಿಳಿದಿರುವುದು ಗೊತ್ತೇ ಇದೆ. ಬೈಕ್ ರೇಸಿಂಗ್ ಕುರಿತ ನೈಜ ಘಟನೆಯನ್ನು ಆಧಾರಿತ ಈ ಚಿತ್ರದ ಹೀರೋಯಿನ್ ಇಂಟ್ರೂಡಕ್ಷನ್ ಮೋಷನ್ ಪೋಸ್ಟರ್ (Motion Poster) ರಿಲೀಸ್ ಆಗಿದೆ.

    ತೆಲುಗು ಸೀರಿಯಲ್ ಮೂಲಕ ನಟನಾ ವೃತ್ತಿ ಆರಂಭಿಸಿದ್ದ ಅಕ್ಷಿತಾ ಸತ್ಯನಾರಾಯಣ್ ರೇಸರ್  ಮೂಲಕ ಕನ್ನಡ ಸಿನಿಮಾ ಲೋಕಕ್ಕೆ ಪದಾರ್ಪಣೆ ಮಾಡಿದ್ದಾರೆ. ಮೂಲತಃ ಕನ್ನಡದವರೇ ಆದ ಅಕ್ಷಿತಾ ಮಾಡೆಲ್ ಜಗತ್ತಿಗೆ ಚಿರಪರಿಚಿತರು. 2020ರ ವಿಕ ನವತಾರೆ ಕಿರೀಟ ಮುಡಿಗೇರಿಸಿಕೊಂಡಿರುವ ಅವರೀಗ ನಾಯಕಿಯಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.  ಇದನ್ನೂ ಓದಿ:‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ಲೋಕನಾಥ

    ಮೊದಲೇ ಹೇಳಿದಂತೆ ರೇಸರ್, ಗ್ಯಾರೇಜ್ ನಲ್ಲಿ ನಡೆದ ನೈಜ ಘಟನೆ ಇಟ್ಟುಕೊಂಡು ಅದಕ್ಕೆ ಸಿನಿಮ್ಯಾಟಿಕ್ ಟಚ್ ಕೊಟ್ಟು ಕಥೆ ಹೆಣೆಯಲಾಗಿದೆ. ಅದಕ್ಕಾಗಿ ನಾಯಕಿ ಅಕ್ಷಿತಾ ಸತ್ಯನಾರಾಯಣ್ (Akshita Satyanarayan) ಬೈಕ್ ರೇಸ್ ಕಲಿತಿದ್ದಾರೆ. ದುಬಾರಿ ಬೆಲೆ ಬೈಕ್ ಏರಿ ಅಕ್ಷಿತಾ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿರುವ ಮೋಷನ್ ಪೋಸ್ಟರ್ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಅಂದಹಾಗೇ ಅಕ್ಷಿತಾ ಸಿನಿಮಾದಲ್ಲಿ ಬಬ್ಲಿ ಹುಡುಗಿಯಾಗಿ ಪಾತ್ರ ನಿಭಾಯಿಸಿದ್ದಾರೆ.

    ಕಳೆದ ಜನವರಿಯಲ್ಲಿ ಸೆಟ್ಟೇರಿದ್ದ ರೇಸರ್ ಸಿನಿಮಾದ 35ರಷ್ಟು ಭಾಗ ಶೂಟಿಂಗ್ ಕಂಪ್ಲೀಟ್ ಆಗಿದೆ. ಇದೇ ತಿಂಗಳಾಂತ್ಯಕ್ಕೆ ಹಾಡುಗಳ ಚಿತ್ರೀಕರಣ ನಡೆಯಲಿದೆ. ಭಾಯ್ ಎಂಬ ದೊಡ್ಡ ಪಾತ್ರಕ್ಕಾಗಿ ಮಲಯಾಳಂ, ಕನ್ನಡದ ಇಬ್ಬರು ದೊಡ್ಡ ಸ್ಟಾರ್ ಗಳನ್ನು ಅಪ್ರೋಚ್ ಮಾಡಲಾಗಿದೆ.

    ಸಂದೇಶ್ ಪ್ರಸನ್ನ ನಾಯಕನಾಗಿ ನಟಿಸುತ್ತಿದ್ದು, ಯಶ್ ಶೆಟ್ಟಿ, ಕಾಕ್ರೋಚ್ ಸುಧಿ, ಬಾಲ ರಾಜ್ವಾಡಿ, ಕಾಮಿಡಿ ಕಿಲಾಡಿ ಸೂರಜ, ಸ್ವಾತಿ ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಮೈಸೂರು ಸ್ವಾಮಿ ಛಾಯಾಗ್ರಹಣ ಚಿತ್ರಕ್ಕಿದೆ. ಭರತ್ ವಿಷ್ಣುಕಾಂತ್ ನಿರ್ದೇಶನದ ಜೊತೆಗೆ ಭರತ್ ಫಿಲಂಸ್ ನಡಿ ತಾವೇ ರೇಸರ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

  • ಸೂರ್ಯ ಅಭಿನಯದ ‘ಕಂಗುವ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

    ಸೂರ್ಯ ಅಭಿನಯದ ‘ಕಂಗುವ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ

    ಮಿಳಿನ (Tamil) ಬಹುನಿರೀಕ್ಷಿತ ಚಿತ್ರಗಳ ಪೈಕಿ ಸೂರ್ಯ (Surya) ಅಭಿನಯದ ‘ಸೂರ್ಯ 42’ ಚಿತ್ರವೂ ಒಂದು . ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಘೋಷಣೆಯಾದ ಈ ಚಿತ್ರವು 3ಡಿಯಲ್ಲಿ ಮೂಡಿಬರುತ್ತಿದ್ದು, 10 ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿದೆ. ಈ ಬಹುನಿರೀಕ್ಷಿತ ಚಿತ್ರಕ್ಕೆ ಇದೀಗ ‘ಕಂಗುವ’ (Kanguva) ಎಂದು ನಾಮಕರಣ ಮಾಡಲಾಗಿದ್ದು ಮೋಷನ್ ಪೋಸ್ಟರ್ (Motion Poster) ಸಹ ಇತ್ತೀಚೆಗೆ ಬಿಡುಗಡೆಯಾಗಿದೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ‘ಕಂಗುವ’ ಚಿತ್ರವು 10 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

    ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿರುವ ಈ ಚಿತ್ರವು ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದ್ದು, ವಿ ಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿದ್ದು, ಚಿತ್ರವು 2024ರಲ್ಲಿ ಬಿಡುಗಡೆಯಾಗಲಿದೆ.

    ಈಗಾಗಲೇ ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರಕ್ಕೆ ಶೇ. 50ರಷ್ಟು ಚಿತ್ರೀಕರಣ ಮುಗಿದಿದ್ದು, ಬಾಕಿ ಇರುವ ಚಿತ್ರೀಕರಣವನ್ನು ಬೇಗ ಮುಗಿಸಿ, ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

  • ಸಿಂಹಪ್ರಿಯಾ ಮದುವೆಗೆ ‘ಯದಾ ಯದಾ ಹಿ’ ಮೋಷನ್ ಪೋಸ್ಟರ್ ಗಿಫ್ಟ್

    ಸಿಂಹಪ್ರಿಯಾ ಮದುವೆಗೆ ‘ಯದಾ ಯದಾ ಹಿ’ ಮೋಷನ್ ಪೋಸ್ಟರ್ ಗಿಫ್ಟ್

    ಸಿಷ್ಠ ಸಿಂಹ (Vasishtha Simha), ಹರಿಪ್ರಿಯ (Haripriya) ಹಾಗೂ ದಿಗಂತ್ ಮಂಚಾಲೆ (Digant) ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ,  ಮರ್ಡರ್ ಮಿಸ್ಟ್ರಿ ಸುತ್ತ ನಡೆಯೋ  ಕಥಾಹಂದರ ಒಳಗೊಂಡ   ‘ಯದಾ ಯದಾ ಹಿ’ ಚಿತ್ರವು ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ. ಜ.೨೬ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ವಸಿಷ್ಠ, ಹರಿಪ್ರಿಯ  ಜೋಡಿಗೆ ಮದುವೆ (Marriage) ಗಿಫ್ಟ್ ಆಗಿ ಈ  ಚಿತ್ರದ ವಿಶೇಷ ಮೋಷನ್ (Motion Poster) ಪೋಸ್ಟರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

    ತೆಲುಗಿನ ಎವುರು ಚಿತ್ರದ ರೀಮೇಕ್ ಇದಾಗಿದ್ದು, ತೆಲುಗಿನಲ್ಲಿ ೨ ಚಿತ್ರ ನಿರ್ದೇಶಿಸಿರುವ ಅಶೋಕ್‌ ತೇಜ  ಈ ಸಿನಿಮಾ  ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಹರಿಪ್ರಿಯಾ, ದಿಗಂತ್ ಹಾಗೂ ವಸಿಷ್ಠಸಿಂಹ ಮೂರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಒಂದು ಮರ್ಡರ್ ಮಿಸ್ಟರಿ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಹೇಳಲಾಗಿದೆ. ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ  ಪಾತ್ರವನ್ನು ಹರಿಪ್ರಿಯಾ ಹಾಗೂ ಅದ್ವಿಶೇಷ್ ಪಾತ್ರವನ್ನು ದಿಗಂತ್ ಮಾಡಿದ್ದಾರೆ. ಈ ಚಿತ್ರಕ್ಕೆ ರೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದ್ರಾಬಾದ್‌ನ ರಾಜೇಶ್ ಅಗರವಾಲ್  ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ಇಂಗ್ಲೀಷ್ ಭಾಷೆಯಲ್ಲಿ ದಿ ಇನ್ವಿಸಿಬಲ್ ಗೆಸ್ಟ್ ಹೆಸರಿನಲ್ಲಿ  ತಯಾರಾಗಿದ್ದ ಈ ಚಿತ್ರ ಹಿಂದಿ  ಭಾಷೆಯಲ್ಲೂ ನಿರ್ಮಾಣವಾಗಿತ್ತು, ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿ ಆಗಿದೆ.   ಚರಣ್‌ ಪಕಡ ಅವರ  ಸಂಗೀತ ನಿರ್ದೇಶನ,  ಯೋಗಿ ಅವರ ಕ್ಯಾಮೆರಾವರ್ಕ್, ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸವರ್ಷಕ್ಕೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಮೋಷನ್ ಪೋಸ್ಟರ್

    ಹೊಸವರ್ಷಕ್ಕೆ ಶಿವರಾಜ್ ಕುಮಾರ್ ನಟನೆಯ ‘ಘೋಸ್ಟ್’ ಮೋಷನ್ ಪೋಸ್ಟರ್

    ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ,  ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ (Srini) ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivraj Kumar) ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” (Ghost) ಚಿತ್ರದ ಮೋಷನ್ ಪೋಸ್ಟರ್ (Motion Poster) ನೂತನ ವರ್ಷದ ಮೊದಲ ದಿನ  ಬಿಡುಗಡೆಯಾಗಿದೆ‌.

    ಮೋಷನ್ ಪೋಸ್ಟರ್ ಬಾರಿ ಕುತೂಹಲ ಹುಟ್ಟಿಸಿದೆ‌‌. ಬಹು ನಿರೀಕ್ಷಿತ ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.  ಮೈಸೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮೂರನೇ ಹಂತದ ಚಿತ್ರೀಕರಣ ಫೆಬ್ರವರಿಯಲ್ಲಿ ಆರಂಭವಾಗಲಿದೆ‌. ನಾಯಕ ಶಿವರಾಜಕುಮಾರ್ ಸೇರಿದಂತೆ ಅನೇಕ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ದ್ವಿತೀಯ ಹಂತದ ಚಿತ್ರೀಕರಣ ಪೂರ್ಣವಾಗಿದೆ.  ಇದನ್ನೂ ಓದಿ: ನಾನಿಲ್ಲಿ ಗೆದ್ದಿರುವಂಥದ್ದು ನಿಮ್ಮಿಂದ, ನೀವು ನನ್ನನ್ನು ಗೆಲ್ಲಿಸಿದ್ದೀರಿ: ರೂಪೇಶ್ ಶೆಟ್ಟಿ

    ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ.  ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಬನಾರಸ್’ ಫಸ್ಟ್ ಲುಕ್ ಮೋಷನ್ ಪೋಸ್ಟರ್‌ಗೆ ಚಿತ್ರರಸಿಕರಿಂದ ಬಹುಪರಾಕ್

    ‘ಬನಾರಸ್’ ಫಸ್ಟ್ ಲುಕ್ ಮೋಷನ್ ಪೋಸ್ಟರ್‌ಗೆ ಚಿತ್ರರಸಿಕರಿಂದ ಬಹುಪರಾಕ್

    ವಿರಾದ ಪ್ರೇಮ ಕಥೆಯನ್ನು ತೆರೆ ಮೇಲೆ ಉಣಬಡಿಸಲು ಬರ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಬನಾರಸ್. ಬೆಲ್ ಬಾಟಂ ಸೂಪರ್ ಸಕ್ಸಸ್ ನಂತರ ನಿರ್ದೇಶಕ ಜಯತೀರ್ಥ ಹೊಸ ಮುಖವನ್ನು ಪ್ರೇಮ ಕಥೆಯ ಮೂಲಕ ಸ್ಯಾಂಡಲ್ ಅಂಗಳಕ್ಕೆ ಪರಿಚಯಿಸುತ್ತಿದ್ದಾರೆ. ಈಗಾಗಲೇ ಬನಾರಸ್ ಸಿನಿಮಾ ಟಾಕ್ ಚಂದನವನದಲ್ಲಿ ಜೋರಾಗಿದ್ದು ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ಎಲ್ಲರ ಹುಬ್ಬೇರಿಸಿದೆ.

    ಚಿತ್ರದ ಪ್ರಚಾರ ಕಾರ್ಯ ಆರಂಭಿಸಿರುವ ಬನಾರಸ್ ಚಿತ್ರತಂಡ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ. ಪ್ರಾಮಿಸಿಂಗ್ ಆಗಿ ಮೂಡಿ ಬಂದಿರುವ ಮೋಷನ್ ಪೋಸ್ಟರ್ ಎಲ್ಲರ ಹುಬ್ಬೇರುವಂತೆ ಮಾಡಿದೆ. ಸಿನಿಮಾ ಹಾಗೂ ಅಜನೀಶ್ ಲೋಕನಾಥ್ ಸಂಗೀತ ಬೇರೆಯದ್ದೇ ಲೆವೆಲ್ ನಲ್ಲಿ ಇರಲಿದೆ ಎಂಬ ಕುರುಹನ್ನು ಈ ಪೋಸ್ಟರ್ ನೀಡಿದೆ. ಮೋಷನ್ ಪೋಸ್ಟರ್ ಬಿಡುಗಡೆಯಾದ ಮೇಲೆ ಸಿನಿಮಾ ಮೇಲೆ ಟಾಕ್ ಜೋರಾಗಿದ್ದು, ಗಾಂದೀನಗರದಲ್ಲಿ ಬನಾರಸ್ ಸಖತ್ ಸೌಂಡ್ ಮಾಡಲಿದೆ ಎಂಬ ಭವಿಷ್ಯ ನುಡಿಯುತ್ತಿದ್ದಾರೆ.

    ಜಯತೀರ್ಥ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಬನಾರಸ್ ಸಿನಿಮಾ ಸ್ಯಾಂಡಲ್ ವುಡ್ ಅಂಗಳಕ್ಕೆ ತುಂಬಾನೇ ಸ್ಪೆಷಲ್. ಅದಕ್ಕೆ ಕಾರಣವೂ ಅಷ್ಟೇ ವಿಶೇಷವಾದದ್ದು. ಬನಾರಸ್ ನವೀರಾದ ಪ್ರೇಮ ಕಥೆ ಹೊತ್ತ ಸಿನಿಮಾ. ಪ್ರೇಮ ಕಥೆ ಹೇಳುವಲ್ಲಿ ನಿರ್ದೇಶಕ ಜಯತೀರ್ಥ ನಿಸ್ಸೀಮರು. ಈಗಾಗಲೇ ಇವರ ಒಲವೇ ಮಂದಾರ ಸಿನಿಮಾ ನೋಡಿ ಕಣ್ತುಂಬಿಕೊಂಡವರಿಗೆ ಅದು ಅರ್ಥವಾಗಿರುತ್ತೆ. ಬನಾರಸ್ ಅಂಗಳದಲ್ಲಿ ನಿಂತು ಅಲ್ಲಿನ ಸೌಂದರ್ಯದ ಜೊತೆಗೆ ನವಿರಾದ ಪ್ರೇಮಕಥೆಯನ್ನು ಹೆಣೆದು ತೆರೆಗೆ ತರಲು ಸಜ್ಜಾಗಿದ್ದಾರೆ. ಅಷ್ಟೇ ಅಲ್ಲ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಲವರ್ ಬಾಯ್ ಆಗಿ, ಚಾಕೋಲೇಟ್ ಹೀರೋ ಆಗಿ ಶಾಸಕ ಜಮೀರ್ ಅಹಮ್ಮದ್ ಪುತ್ರ ಝೈದ್ ಖಾನ್ ಚಂದನವನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹೀಗೆ ಸಾಕಷ್ಟು ವಿಶೇಷತೆಯನ್ನು ಬನಾರಸ್ ಚಿತ್ರ ಒಳಗೊಂಡಿದೆ. ಸಹಜವಾಗಿಯೇ ಈ ಎಲ್ಲಾ ಅಂಶಗಳು ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಇದನ್ನೂ ಓದಿ: ಹೊಸ ಇತಿಹಾಸ ಸೃಷ್ಟಿಸಿದ ಜಮೀರ್ ಪುತ್ರ ಝೈದ್ ಖಾನ್ ನಟನೆಯ ‘ಬನಾರಸ್’ ಚಿತ್ರ

    ಚಿತ್ರದಲ್ಲಿ ಝೈದ್ ಖಾನ್‌ಗೆ ಜೋಡಿಯಾಗಿ ಕರಾವಳಿ ಬೆಡಗಿ ಸೊನಲ್ ಮೊಂಥೆರೋ ತೆರೆ ಹಂಚಿಕೊಂಡಿದ್ದಾರೆ. ದೇವರಾಜ್ ಅಚ್ಯುತ್ ಕುಮಾರ್, ಸುಜಯ್ ಶಾಸ್ತ್ರಿ, ಸಪ್ನ ರಾಜ್, ಬರ್ಕತ್ ಅಲಿ ಒಳಗೊಂಡಂತೆ ಹಲವು ಕಲಾವಿದರ ತಾರಾಬಳಗವಿದೆ. ಈಗಾಗಲೇ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಸೇಲ್ ಆಗಿ ಇತಿಹಾಸ ಸೃಷ್ಟಿಸಿರುವ ಈ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನವಿದೆ.


    ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಎ. ವಿಜಯ್, ಡಿಫ್ರೆಂಟ್ ಡ್ಯಾನಿ ಸಾಹಸ ನಿರ್ದೇಶನ, ರಘು ನಿಡುವಳ್ಳಿ ಸಂಭಾಷಣೆ, ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಎ.ಹರ್ಷ ನೃತ್ಯ ನಿರ್ದೇಶನ ಬನಾರಸ್ ಚಿತ್ರಕ್ಕಿದೆ. ಎನ್.ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ತಿಲಕ್ ರಾಜ್ ಬಲ್ಲಾಳ್ ಬಂಡವಾಳ ಹಾಕಿ ಅದ್ದೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.