Tag: motor vehicle act

  • ಚಲಿಸುತ್ತಿದ್ದ ಬೈಕ್‌ ಮೇಲೆ ಕುಳಿತು ಪ್ರಿಯಕರನೊಂದಿಗೆ ಲಿಪ್‌ ಲಾಕ್‌ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ ಮೇಲೆ ಕುಳಿತು ಪ್ರಿಯಕರನೊಂದಿಗೆ ಲಿಪ್‌ ಲಾಕ್‌ – ಪೊಲೀಸರು ಕೊಟ್ರು ಶಾಕ್

    ಜೈಪುರ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕ-ಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಅದೇ ರೀತಿ ಪ್ರೇಮಿಗಳಿಬ್ಬರು ಹಾಡಹಗಲೇ ನಡುರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ರಾಜಸ್ಥಾನದ (Rajasthan) ಜೈಪುರದಲ್ಲಿ ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ, ಈ ವೇಳೆ ಯುವಕ ಹಿಂಬದಿಗೆ ತಿರುಗಿ ಪರಸ್ಪರ ಲಿಪ್‌ಲಾಕ್‌ ಮಾಡಿ ಚುಂಬಿಸಿದ್ದಾರೆ. ಈ ವೀಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋ ಜಾಲತಾಣದಲ್ಲಿ (Social Media) ಹರಿದಾಡುತ್ತಿದ್ದಂತೆ ಜೈಪುರದ ಸಂಚಾರ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಇದನ್ನೂ ಓದಿ: ಗುಡ್ಡೆಯಂಗಡಿಯಲ್ಲಿ ಗೌಪ್ಯವಾಗಿ ನಿರ್ಮಾಣವಾಗುತ್ತಿದ್ದ ಮನೆ ಯಾರದ್ದು? ಚೈತ್ರಾ ಪ್ರಕರಣಕ್ಕೆ ಇದೆಯಂತೆ ಲಿಂಕ್

    ಬೈಕ್‌ ಸವಾರರು ಹೆಲ್ಮೆಟ್‌ ಧರಿಸಿರಲಿಲ್ಲ, ಜೊತೆಗೆ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ ಎಂದು ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ. ಮೋಟಾರು ವಾಹನ ಕಾಯ್ದೆ (ಎಂವಿ)-1988 (Motor Vehicle Act-1988) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಯುವಕನಿಗೆ ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: SIIMA 2023: ರಾರಾ ರಕ್ಕಮ್ಮ ಸೇರಿ ವಿಕ್ರಾಂತ್ ರೋಣಕ್ಕೆ ಎರಡು ಪ್ರಶಸ್ತಿ

    ಬೈಕ್‌ ಮೇಲೆ ಕುಳಿತು ಪ್ರೇಮಿಗಳು ಹುಚ್ಚಾಟ ಮೆರೆದಿರುವುದು ಇದೇ ಮೊದಲೇನಲ್ಲ. ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು. ಹೋಳಿ ಹಬ್ಬದಂದು ಜೈಪುರದಲ್ಲೇ ಇದೇ ರೀತಿ ಘಟನೆ ವರದಿಯಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಚಲಿಸುತ್ತಿದ್ದ ಬೈಕ್‌ಟ್ಯಾಂಕ್ ಮೇಲೆ ಕುಳಿತು ಪ್ರಿಯಕರನೊಂದಿಗೆ ರೊಮ್ಯಾನ್ಸ್ – ಪೊಲೀಸರು ಕೊಟ್ರು ಶಾಕ್

    ಅಮರಾವತಿ: ಪ್ರೇಮಿಗಳಿಗೆ (Lovers) ಜಗತ್ತೇ ಕುರುಡಾಗಿರುತ್ತದೆ. ಕೆಲ ಪ್ರೇಮಿಗಳಂತೂ ಅಕ್ಕಪಕ್ಕ ಯಾರಿರುತ್ತಾರೆ ಎಂಬ ಅರಿವೇ ಇಲ್ಲದೇ ಸಾರ್ವಜನಿಕ ಪ್ರದೇಶಗಳಲ್ಲೂ ಹುಚ್ಚಾಟ ಮರೆಯುವುದನ್ನು ನೋಡಿರುತ್ತೇವೆ. ಸದ್ಯ ಪ್ರೇಮಿಗಳಿಬ್ಬರು ಹಾಡಹಗಲೇ ರಸ್ತೆಯಲ್ಲಿ ಬೈಕ್ ಮೇಲೆ ಕುಳಿತು ರೊಮ್ಯಾನ್ಸ್ ಮಾಡಿಕೊಂಡು ಚಲಿಸುತ್ತಿರುವ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡ್ತಿದೆ.

    ಯುವ ಪ್ರೇಮಿಗಳಿಬ್ಬರು ಹಾಡಹಗಲೇ ಬೈಕ್ ಮೇಲೆ ರಾಜಾರೋಷವಾಗಿ ತಬ್ಬಿಕೊಂಡು ಹೋಗುತ್ತಿದ್ದಾರೆ. ಬೈಕಿನ (Bike) ಪೆಟ್ರೋಲ್ ಟ್ಯಾಂಕ್ ಮೇಲೆ ಉಲ್ಟಾ ಕುಳಿತ ಯುವತಿ ತನ್ನ ಪ್ರಿಯಕರನನ್ನು ಬಿಗಿದಪ್ಪಿಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದೇ ವೇಳೆ ಹಿಂಬಂದಿಯಿಂದ ಬರುತ್ತಿದ್ದ ವಾಹನ ಸವಾರರು ಇಬ್ಬರ ರೊಮ್ಯಾನ್ಸ್ (Romance) ದೃಶ್ಯವನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ (Social Media) ಹರಿಬಿಟ್ಟಿದ್ದಾರೆ. ಈ ಪ್ರೇಮಿಗಳ ನಡೆಗೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಹೊಸ ವರ್ಷದಂದೇ ವಾಣಿಜ್ಯ ಬಳಕೆಯ ಎಲ್‌ಪಿಜಿ ದರ 25 ರೂ. ಏರಿಕೆ

    ಪೊಲೀಸರು ಕೊಟ್ರು ಶಾಕ್: ಆಂಧ್ರಪ್ರದೇಶದ (Andhra Pradesh) ವಿಶಾಖಪಟ್ಟಣಂನ ಸ್ಟೀಲ್ ಪ್ಲಾಂಟ್ ರಸ್ತೆಯಲ್ಲಿ ಬೈಕ್ ಮೇಲೆ ರೊಮ್ಯಾನ್ಸ್ ಮಾಡುತ್ತಾ ತೆರಳುತ್ತಿದ್ದ ಪ್ರೇಮಿಗಳಿಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯನ್ನು ಇಲ್ಲಿನ ಚೋಡವರಂ ನಿವಾಸಿ ಕೆ.ಶೈಲಜಾ (19) ಹಾಗೂ ಯುವಕ ಅಜಯ್ ಕುಮಾರ್ (22) ಎಂದು ಗುರುತಿಸಲಾಗಿದೆ. ಬಳಿಕ ಯುವಕನ ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಪ್ರೇಮಿಗಳಿಬ್ಬರು ನಡೆಸಿದ ಹುಚ್ಚಾಟದಿಂದ ರಸ್ತೆ ಸುರಕ್ಷತೆ ನಿಯಮವನ್ನು ಉಲ್ಲಂಘಿಸಿದ್ದು, ಐಪಿಸಿ (IPC) ಸೆಕ್ಷನ್ 336, 279 ಹಾಗೂ ಮೋಟಾರು ವಾಹನ ಕಾಯ್ದೆ (Motor Vehicle Act) ಸೆಕ್ಷನ್ 132, 129ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ ಎಂದು ವಿಶಾಖಪಟ್ಟಣಂ ಪೊಲೀಸ್ ಆಯುಕ್ತ ಸಿ.ಎಚ್. ಶ್ರೀಕಾಂತ್ ತಿಳಿಸಿದ್ದಾರೆ. ಅಲ್ಲದೇ ನಾಗಕರಿಕರು ವಾಹನ ಚಲಾಯಿಸುವಾಗ ಸಂಚಾರ ನಿಯಮ ಪಾಲನೆ ಮಾಡುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬೈಕ್ ಟ್ಯಾಂಕ್ ಮೇಲೆ ಕುಳಿತು ಪ್ರೇಮಿಗಳ ಲಿಪ್‍ಲಾಕ್ – ಲವರ್ಸ್ ಜಾಲಿ ರೈಡ್ ವೀಡಿಯೋ ವೈರಲ್

    lovers

    ಈ ಹಿಂದೆ ದೆಹಲಿಯಲ್ಲಿ ರಾತ್ರಿ ವೇಳೆ ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲಿ ರೊಮ್ಯಾನ್ಸ್ ಮಾಡಿಕೊಂಡು ಹೋಗುತ್ತಿದ್ದದ್ದು, ರಾಜ್ಯಾದ್ಯಂತ ಭಾರೀ ಸದ್ದು ಮಾಡಿತ್ತು. ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲೂ ಇಂತಹದ್ದೇ ಕೇಸ್ ಬೆಳಕಿಗೆ ಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಟ್ರಾಫಿಕ್ಸ್ ರೂಲ್ಸ್ ಉಲ್ಲಂಘನೆ – ಬೆಂಗ್ಳೂರಲ್ಲಿ ಬರೋಬ್ಬರಿ 17 ಸಾವಿರ ದಂಡ ಕಟ್ಟಿದ ಬೈಕ್ ಸವಾರ

    ಟ್ರಾಫಿಕ್ಸ್ ರೂಲ್ಸ್ ಉಲ್ಲಂಘನೆ – ಬೆಂಗ್ಳೂರಲ್ಲಿ ಬರೋಬ್ಬರಿ 17 ಸಾವಿರ ದಂಡ ಕಟ್ಟಿದ ಬೈಕ್ ಸವಾರ

    ಬೆಂಗಳೂರು: ಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾಗಿದ್ದು, ಮೊದಲ ಬಾರಿಗೆ ಬೈಕ್ ಸವಾರ 17 ಸಾವಿರ ದಂಡ ಪಾವತಿ ಮಾಡಿದ್ದಾನೆ.

    ಮೋಟಾರು ವಾಹನ ಕಾಯ್ದೆ ಜಾರಿಯ ಆದೇಶ ಪ್ರತಿ ಸಿಕ್ಕ 24 ಗಂಟೆಯಲ್ಲಿ ಮೊದಲ ಬಾರಿಗೆ ಭಾರೀ ದಂಡ ವಿಧಿಸಲಾಗಿದೆ. ಸವಾರ ಆಕಾಶ್ ಹೆಲ್ಮೆಟ್ ಧರಿಸದೇ ಕುಡಿದು ವಾಹನ ಚಲಾಯಿಸಿದ್ದಾನೆ.

    ಈ ವೇಳೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಆಕಾಶ್‍ನನ್ನು ತಡೆದು ಪರಿಶೀಲನೆ ನಡೆಸಿದ್ದು, ಡಿಎಲ್ ಕೂಡ ಇಲ್ಲದಿರುವುದರಿಂದ ದಂಡ ವಿಧಿಸಿದ್ದಾರೆ. ನಿಯಮಗಳ ಅನ್ವಯ ಕುಡಿದು ವಾಹನ ಚಲಾಯಿಸಿದ ಹಿನ್ನೆಲೆಯಲ್ಲಿ 10 ಸಾವಿರ, ಡಿಎಲ್ ಇಲ್ಲದಿದ್ದಕ್ಕೆ 5 ಸಾವಿರ ರೂ. ಹಾಗೂ ಹೆಲ್ಮೆಟ್ ಧರಿಸಿದ ಕಾರಣ ಇಬ್ಬರಿಗೆ ತಲಾ 1 ಸಾವಿರದಂತೆ 2 ಸಾವಿರ ರೂ. ದಂಡ ಬಿಲ್ ನೀಡಿದ್ದಾರೆ.

    ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯ ಎಎಸ್‍ಐ ಶಿವಣ್ಣ ಅವರು ಬೈಕ್ ಸವಾರನಿಗೆ ದಂಡ ವಿಧಿಸಿದ್ದು, ದಂಡದ ಮೊತ್ತ ಕಂಡ ಆಕಾಶ್ ಕಂಗಾಲಾಗಿದ್ದಾರೆ. ಇದರೊಂದಿಗೆ ನಗರದಲ್ಲೂ ವಾಹನ ಸವಾರರಿಗೆ ಹೊಸ ನಿಯಮಗಳ ಬಿಸಿ ತಟ್ಟಿದೆ. ನಿನ್ನೆ ಸಂಜೆಯಷ್ಟೇ ರಾಜ್ಯ ಸರ್ಕಾರಕ್ಕೆ ಹೊಸ ಕಾಯ್ದೆ ಜಾರಿಯ ಆದೇಶ ಪ್ರತಿ ಲಭಿಸಿತ್ತು.

    ಇತ್ತ ಮಂಗಳವಾರ ದೆಹಲಿಯ ಗೀತಾ ಕಾಲೋನಿಯ ನಿವಾಸಿ ಗುರುಗ್ರಾಮದಲ್ಲಿ 23 ಸಾವಿರ ರೂ. ದಂಡ ಪಾವತಿಸಿದ್ದಾರೆ. ಗುರುಗ್ರಾಮದ ಸೆಕ್ಟರ್ 25ರ ಬಿಸ್ಟಲ್ ಚೌಕದ ಬಳಿ ಆಟೋ ಡ್ರೈವರ್ ಗೆ ಸಂಚಾರಿ ಪೊಲೀಸರು 32 ಸಾವಿರ ದಂಡ ವಿಧಿಸಿದ್ದರು.

  • ಆಕ್ಸಿಡೆಂಟ್ ಮಾಡಿದವ್ರೇ ಸಂತ್ರಸ್ತರಿಗೆ ಪರಿಹಾರ ಕೊಡ್ಬೇಕು

    ಆಕ್ಸಿಡೆಂಟ್ ಮಾಡಿದವ್ರೇ ಸಂತ್ರಸ್ತರಿಗೆ ಪರಿಹಾರ ಕೊಡ್ಬೇಕು

    – 2019ರ ಮೋಟಾರು ವಾಹನ ತಿದ್ದುಪಡಿ ವಿಧೇಯಕ
    – ವಿಧೇಯಕದಲ್ಲಿ ಏನಿದೆ?
    – ಯಾವ ನಿಯಮ ಉಲ್ಲಂಘಿಸಿದರೆ ಎಷ್ಟು ದಂಡ?

    ನವದೆಹಲಿ: ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ವಿರೋಧದ ಮಧ್ಯೆಯೇ ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ರಲ್ಲಿ, ಅಪಘಾತ ಎಸೆಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂಬ ನಿಯಮದ ಬಗ್ಗೆ ಲೋಕಸಭೆಯಲ್ಲಿ ಸೋಮವಾರದಂದು ಮಂಡಿಸಿದೆ.

    2019ರ ಮೋಟಾರು ವಾಹನ ತಿದ್ದುಪಡಿ ವಿಧೇಯಕದಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಮಾಡಿದವರಿಗೆ ಭಾರಿ ದಂಡ ವಿಧಿಸಲಾಗುತ್ತೆ. ಹಾಗೆಯೇ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದವರಿಗೆ ಹಾಗೂ ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡುವುದು, ಮಾನವೀಯ ದೃಷ್ಟಿಯಲ್ಲಿ ಗಾಯಾಳುಗಳ ಸಹಾಯಕ್ಕೆ ಬರುವ ಸಾರ್ವಜನಿಕರಿಗೆ ಪೊಲೀಸ್ ವಿಚಾರಣೆಯ ಕಿರಿಕಿರಿಯಿಂದ ವಿನಾಯಿತಿ ನೀಡುವುದು, ಹೀಗೆ ಹಲವು ಸುಧಾರಣಾ ಕ್ರಮಗಳ ಬಗ್ಗೆ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ.

    ಈ ಹಿಂದಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ 1988ರ ಮೋಟಾರು ವಾಹನ ಕಾಯ್ದೆಯನ್ನು ಪರಿಷ್ಕರಿಸುವ `ಮೋಟಾರು ವಾಹನ ತಿದ್ದುಪಡಿ ವಿಧೇಯಕ’ಕ್ಕೆ ಲೋಕಸಭೆ ಅನುಮೋದನೆ ದೊರಕಿತ್ತು. ಆದರೆ ರಾಜ್ಯಸಭೆಯಲ್ಲಿ ಇದಕ್ಕೆ ಅನುಮೋದನೆ ಸಿಕ್ಕಿರಲಿಲ್ಲ. ಹೀಗಾಗಿ ಈ ಭಾರಿಯಾದರೂ ಈ ತಿದ್ದುಪಡಿ ಕಾರ್ಯರೂಪಕ್ಕೆ ಬರಲಿ ಎಂಬ ನಿಟ್ಟಿನಲ್ಲಿ ಸಂಸತ್ತಿನ ಸ್ಥಾಯಿ ಸಮಿತಿಯ ಹಲವು ಶಿಫಾರಸುಗಳನ್ನು ಪರಿಗಣಿಸಿ ರಸ್ತೆ ಸಾರಿಗೆ ಖಾತೆ ಸಹಾಯಕ ಸಚಿವ ವಿ.ಕೆ.ಸಿಂಗ್ ಅವರು ವಿಧೇಯಕವನ್ನು ಮತ್ತೊಮ್ಮೆ ಲೋಕಸಭೆಯಲ್ಲಿ ಮಂಡಿಸಿದರು.

    ವಿಧೇಯಕದಲ್ಲಿ ಏನಿದೆ?
    ರಸ್ತೆ ಅಪಘಾತ ಪ್ರಕರಣಗಳಲ್ಲಿ ಮೃತರಿಗೆ ವಾಹನ ಮಾಲೀಕರು/ವಿಮೆದಾರರಿಂದ ಗರಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಗಂಭೀರವಾಗಿ ಗಾಯಗೊಂಡವರಿಗೆ ಅಪಘಾತ ಮಾಡಿದವರೇ 2.5 ಲಕ್ಷ ರೂ. ಕನಿಷ್ಠ ಆರ್ಥಿಕ ನೆರವನ್ನು ನೀಡಬೇಕು. ಹಾಗೆಯೇ ವಾಹನ ಪರವಾನಗಿ ನವೀಕರಣದ ಅವಧಿಯನ್ನು 3 ವರ್ಷದಿಂದ 5 ವರ್ಷಕ್ಕೆ ಏರಿಸಲಾಗಿದೆ. ಜೊತೆಗೆ ವಿಶೇಷ ಚೇತನರಿಗೆ ಲೈಸೆನ್ಸ್ ನೀಡಲು ಸಾರಿಗೆ ಇಲಾಖೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎನ್ನುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

    ಯಾವ ನಿಯಮ ಉಲ್ಲಂಘಿಸಿದರೆ ಎಷ್ಟು ದಂಡ?
    ಚಾಲನಾ ಪರವಾನಗಿ (ಡಿಎಲ್) ಇಲ್ಲದೆ ವಾಹನ ಚಲಾಯಿಸುವವರಿಗೆ 5,000 ರೂ. ದಂಡ ವಿಧಿಸಲಾಗುವುದು. ಹಾಗೆಯೇ ರಸ್ತೆಯಲ್ಲಿ ಸಾಗುವಾಗ ಆಂಬ್ಯುಲೆನ್ಸ್‍ಗೆ ದಾರಿ ಬಿಡದ ವಾಹನ ಸವಾರರಿಗೆ 10,000 ರೂ. ದಂಡ ಹಾಕಲಾಗುತ್ತದೆ. ಅತಿ ವೇಗದ ಚಾಲನೆಗೆ 2,000 ರೂ. ದಂಡ, ಹೆಲ್ಮೆಟ್ ಹಾಕದೆ ದ್ವಿಚಕ್ರ ಚಲಾಯಿಸಿದರೆ 1,000 ರೂ. ದಂಡದ ಜೊತೆಗೆ 3 ತಿಂಗಳು ಡಿಎಲ್ ರದ್ದುಗೊಳಿಸಲಾಗುತ್ತದೆ. ಜೊತೆಗೆ ವಿಮೆ ಇಲ್ಲದೆ ವಾಹನ ಓಡಿಸಿದರೆ 2,000 ರೂ. ಹಾಗೂ ಕುಡಿದು ವಾಹನ ಚಲಾವಣೆ( ಡ್ರಿಂಕ್ ಆ್ಯಂಡ್ ಡ್ರೈವ್) ಮಾಡಿದರೆ 10,000 ರೂ. ದಂಡ ಕಟ್ಟಬೇಕು ಎಂದು ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ದಲ್ಲಿ ತಿಳಿಸಲಾಗಿದೆ.

    ಆದರೆ ಲೋಕಸಭೆಯಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ತೃಣಮೂಲ ಕಾಂಗ್ರೆಸ್ ಸದಸ್ಯ ಸೌಗತ್ ರಾಯ್ ಸೇರಿದಂತೆ ಹಲವರು ಈ ವಿಧೇಯಕದಲ್ಲಿರುವ ಕೆಲವು ಅಂಶಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರು.

    ಆಗ ವಿರೋಧಗಳಿಗೆ ಪ್ರತಿಕ್ರಿಯಿಸಿದ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ವಿರೋಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ. ಯಾಕೆಂದರೆ ಸರ್ಕಾರ ತಿದ್ದುಪಡಿ ವಿಧೇಯಕದ ಕರಡು ಸಿದ್ಧಪಡಿಸುವ ಮುಂಚೆಯೇ 18 ರಾಜ್ಯಗಳ ಸಾರಿಗೆ ಸಚಿವರ ಜೊತೆ ಚರ್ಚೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿದೆ. ಅಲ್ಲದೆ ಈ ಬಿಲ್ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುವುದಿಲ್ಲ. ಕಾಯ್ದೆಯನ್ನು ಜಾರಿಗೊಳಿಸುವುದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರವಾಗಿದೆ ಎಂದು ಸ್ಪಷ್ಟನೆ ನೀಡಿದರು. ಅಷ್ಟೇ ಅಲ್ಲದೇ ವಿಧೇಯಕ ಜಾರಿಗೆ ತರಲು ಸರ್ಕಾರಕ್ಕೆ ಸಹಕರಿಸಿ ಎಂದು ಪ್ರತಿಪಕ್ಷಗಳ ನಾಯಕರಲ್ಲಿ ಮನವಿ ಮಾಡಿಕೊಂಡರು.

    ಬಳಿಕ ಮಾತನಾಡಿ, ಪ್ರತಿ ವರ್ಷ ರಸ್ತೆ ಅಪಘಾತದಲ್ಲಿ ಸುಮಾರು 1.5 ಲಕ್ಷ ಮಂದಿ ಸಾವನ್ನಪ್ಪುತ್ತಾರೆ. 5 ಲಕ್ಷಕ್ಕೂ ಅಧಿಕ ಮಂದಿ ಗಾಯಗೊಳ್ಳುತ್ತಾರೆ. ಹಾಗೆಯೇ ದೇಶದಲ್ಲಿ ಶೇ. 30ರಷ್ಟು ಡ್ರೈವಿಂಗ್ ಲೈಸನ್ಸ್ ಬೋಗಸ್ ಆಗಿದೆ ಎಂದು ಹೇಳಿದರು.

    ಅಲ್ಲದೆ ಕಳೆದ 5 ವರ್ಷಗಳಲ್ಲಿ ಈ ತಿದ್ದುಪಡಿಯನ್ನು ಜಾರಿಗೆ ತರಲು ನಮ್ಮ ಸರ್ಕಾರ ವಿಫಲವಾಗಿದೆ. ಆದರೆ ಕಳೆದ 5 ವರ್ಷಗಳಲ್ಲಿ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ತಮಿಳುನಾಡಿನಲ್ಲಿ ಶೇ.15ರಷ್ಟು ಅಪಘಾತಗಳು ಕಡಿಮೆಯಾಗಿದೆ ಎಂದು ತಿಳಿಸಿದರು.

  • ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಬಿಟ್ಟಿದ್ದಕ್ಕೆ 10 ಪೋಷಕರಿಗೆ ಜೈಲು

    ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಬಿಟ್ಟಿದ್ದಕ್ಕೆ 10 ಪೋಷಕರಿಗೆ ಜೈಲು

    – 14 ವರ್ಷದ ಬಾಲಕನನ್ನು ರಿಮ್ಯಾಂಡ್ ಹೋಮ್‍ಗೆ ಕಳಿಸಿದ ಕೋರ್ಟ್

    ಹೈದರಾಬಾದ್: ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆ ಮಾಡಲು ಬಿಟ್ಟಿದ್ದಕ್ಕೆ ಹೈದರಾಬಾದ್ ಕೋರ್ಟ್ ಗುರುವಾರದಂದು 10 ಪೋಷಕರಿಗೆ 1 ದಿನದ ಜೈಲು ಶಿಕ್ಷೆ ವಿಧಿಸಿದೆ.

    ಅಪ್ರಾಪ್ತರು ವಾಹನ ಚಾಲನೆ ಮಾಡೋ ಪ್ರಕರಣಗಳಿಗೆ ಬ್ರೇಕ್ ಹಾಕೋ ಸಲುವಾಗಿ ಇದೇ ಮೊದಲ ಬಾರಿಗೆ 14 ವರ್ಷದ ಬಾಲಕನನ್ನು ಒಂದು ದಿನದ ಮಟ್ಟಿಗೆ ರಿಮ್ಯಾಂಡ್ ಹೋಮ್‍ಗೆ ಕಳಿಸಲಾಗಿದೆ.

    ಜೈಲಿಗೆ ಕಳಿಸಲಾಗಿರೊ ಪೋಷಕರ ವಿರುದ್ಧ ಮೋಟಾರ್ ವಾಹನ ಕಾಯ್ದೆಯ ಸೆಕ್ಷನ್ 180ರಡಿ ಪ್ರಕರಣ ದಾಖಲಾಗಿದೆ. ಜೈಲು ಶಿಕ್ಷೆಯ ಜೊತೆಗೆ ಪೋಷಕರಿಗೆ 500 ರೂ. ದಂಡವನ್ನೂ ವಿಧಿಸಲಾಗಿದೆ.

    ರಸ್ತೆ ಸುರಕ್ಷತಾ ಕಾರ್ಯಕರ್ತರೊಬ್ಬರು ಈ ಬಗ್ಗೆ ಮಾತನಾಡಿ, ಪ್ರತಿನಿತ್ಯ ಪೊಲೀಸರು ಇಂತಹ 10ಕ್ಕೂ ಹೆಚ್ಚು ಪ್ರಕರಣಗಳನ್ನ ದಾಖಲಿಸಿಕೊಂಡು ಅವರೆಲ್ಲರನ್ನೂ ನ್ಯಾಯಾಲಯ ಜೈಲಿಗೆ ಕಳಿಸಿದ್ರೆ ಖಂಡಿತವಾಗಿಯೂ ಪೋಷಕರಲ್ಲಿ ಬದಲಾವಣೆ ತರುತ್ತದೆ. ಅಪ್ರಾಪ್ತರ ಮೇಲೂ ಇದರಿಂದ ಪರಿಣಾಮವಾಗುತ್ತದೆ ಎಂದು ಹೇಳಿದ್ದಾರೆ.

    ಅಪ್ರಾಪ್ತರು ವಾಹನ ಚಾಲನೆ ಮಾಡಿ ನಿಯಮ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ ಈವರೆಗೆ 1079 ಪ್ರಕರಣಗಳು ದಾಖಲಾಗಿವೆ. ಫೆಬ್ರವರಿ ತಿಂಗಳಲ್ಲೇ 45 ಪೋಷಕರನ್ನು ಜೈಲಿಗೆ ಕಳಿಸಲಾಗಿದೆ ಎಂದು ವರದಿಯಾಗಿದೆ.