Tag: MP Navneet Kaur Rana

  • ನಟಿ, ಸಂಸದೆ ನವನೀತ್ ಕೌರ್ ರಾಣಾಗೆ ಕೊರೊನಾ ಪಾಸಿಟಿವ್

    ನಟಿ, ಸಂಸದೆ ನವನೀತ್ ಕೌರ್ ರಾಣಾಗೆ ಕೊರೊನಾ ಪಾಸಿಟಿವ್

    ಮುಂಬೈ: ಕೊರೊನಾ ಮಹಾಮಾರಿ ಸೋಂಕಿಗೆ ತುತ್ತಾಗುತ್ತಿರುವ ಪ್ರಮುಖರ ಪಟ್ಟಿ ಹೆಚ್ಚಾಗುತ್ತಿದ್ದು, ನಟಿ ಹಾಗು ಅಮರಾವತಿ ಸಂಸದೆ ನವನೀತ್ ಕೌರ್ ರಾಣಾ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

    ಆ.6 ರಂದು ನಡೆಸಿದ ಕೊರೊನಾ ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢವಾಗಿದೆ ಎಂದು ನಟಿ ನವನೀತ್ ಕೌರ್ ತಿಳಿಸಿದ್ದಾರೆ. ಸದ್ಯ ನಟಿ ಮಹಾರಾಷ್ಟ್ರದ ನಾಗಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ನವನೀತ್ ಕೌರ್ ಅವರ ಕುಟುಂಬದಲ್ಲಿ 10 ಮಂದಿಗೆ ಕೊರೊನಾ ಸೋಂಕು ಇರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲು ರ್ಯಾಪಿಡ್ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದ್ದು, ಯಾವುದೇ ರೋಗ ಲಕ್ಷಣಗಳು ಇರಲಿಲ್ಲ ಎನ್ನಲಾಗಿದೆ.

    2019ರ ಸಾರ್ವತ್ರೀಕ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ನಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಜಂಟಿ ಅಭ್ಯರ್ಥಿಯಾಗಿ ಅಮರಾವತಿಯಲ್ಲಿ ಸ್ಪರ್ಧೆ ಮಾಡಿದ್ದ ನವನೀತ್ ಕೌರ್ ಗೆಲುವು ಪಡೆದು ಸಂಸದರಾಗಿ ಆಯ್ಕೆಯಾಗಿದ್ದರು. ಲೋಕಸಭೆಗೆ ಆಯ್ಕೆಯಾದ ಬಳಿಕ ಸಂಸತ್‍ನಲ್ಲಿ ಹಲವು ವಿಚಾರಗಳ ಕುರಿತು ಧ್ವನಿ ಎತ್ತಿದ್ದರು. ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ ಹಿಂದಿ ಭಾಷೆಗಳ ಚಿತ್ರಗಳಲ್ಲಿ ನವನೀತ್ ಕೌರ್ ನಟಿಸಿದ್ದರು.