Tag: MP Tejasvi Surya

  • ಹಾಸನದಲ್ಲಿ ಯಾವುದೇ ಬಂಡಾಯ ಇಲ್ಲ, ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಸ್ವಾಗತ ಮಾಡ್ತೀನಿ: ತೇಜಸ್ವಿಸೂರ್ಯ

    ಹಾಸನದಲ್ಲಿ ಯಾವುದೇ ಬಂಡಾಯ ಇಲ್ಲ, ಜನಾರ್ದನ ರೆಡ್ಡಿ ಪಕ್ಷ ಸೇರ್ಪಡೆ ಸ್ವಾಗತ ಮಾಡ್ತೀನಿ: ತೇಜಸ್ವಿಸೂರ್ಯ

    ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಬಿಜೆಪಿ ಸೇರ್ಪಡೆಯನ್ನ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಸ್ವಾಗತ ಮಾಡಿದ್ದಾರೆ. ಇದೇ ವೇಳೆ ಹಾಸನದಲ್ಲಿ (Hassan) ಯಾವುದೇ ಬಂಡಾಯ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿ ನಾಯಕತ್ವ ಒಪ್ಪಿ ಹೊಸಬರು, ಹಿಂದೆ ಪಕ್ಷ ಬಿಟ್ಟು ಹೋದವರು ಬರ್ತಿದ್ದಾರೆ. ಒಂದು ಕುಟುಂಬದಲ್ಲಿ ಹೊಸದಾಗಿ ಸದಸ್ಯರು ಸೇರ್ಪಡೆಯಾದಾಗ ಮತ್ತು ಹಳಬರು ವಾಪಸ್ ಬಂದಾಗ ಕುಟುಂಬ ಬಲಿಷ್ಠವಾಗುತ್ತದೆ. ಕಾಂಗ್ರೆಸ್ (Congress) ಬಿಟ್ಟು ಅನೇಕ ಜನ ಬಿಜೆಪಿ ಸೇರ್ಪಡೆ ಆಗ್ತಿದ್ದಾರೆ. ನಿನ್ನೆ ನವೀನ್ ಜಿಂದಾಲ್ ಕೂಡಾ ಬಿಜೆಪಿಗೆ (BJP) ಸೇರ್ಪಡೆಯಾಗಿದ್ದಾರೆ. ಪಕ್ಷ ಬಿಟ್ಟು ಹೋದವರು ಮತ್ತೆ ಪಕ್ಷ ಸೇರ್ಪಡೆಯಿಂದ ಪಕ್ಷವೂ ಬಲವಾಗುತ್ತದೆ. ನಮ್ಮ ಪಕ್ಷಕ್ಕೆ ಯಾರೇ ಬಂದರು ನಾವು ಸ್ವೀಕಾರ ಮಾಡ್ತೀವಿ ಎಂದು ಜನಾರ್ದನ ರೆಡ್ಡಿ ಅವರ ಸೇರ್ಪಡೆಯನ್ನು ಸ್ವಾಗತಿಸಿದರು. ಇದನ್ನೂ ಓದಿ: ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇದೆ, ಷರತ್ತುಗಳಿಲ್ಲದೇ ಪಕ್ಷ ಸೇರಿದ್ದೇನೆ: ಜನಾರ್ದನ ರೆಡ್ಡಿ

    ಹಾಸನ ಬಂಡಾಯ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಾನಸದಲ್ಲಿ ಯಾವುದೇ ಬಂಡಾಯ ಇಲ್ಲ. ಮೈತ್ರಿಯ ನಿರ್ಧಾರವನ್ನ ಹಿರಿಯ ನಾಯಕರು ಮಾಡಿರೋದು. ರಾಜ್ಯಕ್ಕೆ ಉಪಯೋಗವಾಗುವ ದೃಷ್ಟಿಯಿಂದ ಈ ಮೈತ್ರಿ ಆಗಿರೋದು. ಎರಡು ಪಕ್ಷದ ಕಾರ್ಯಕರ್ತರು ಉತ್ಸಾಹದಿಂದ ಮೈತ್ರಿ ಒಪ್ಪಿದ್ದಾರೆ ಎಂದರು.

    ಮೈತ್ರಿಯಿಂದ ರಾಜ್ಯಕ್ಕೆ ಅನುಕೂಲ ಆಗಲಿದೆ. ಮೋದಿ ನಾಯಕತ್ವ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡ್ತಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಮೈತ್ರಿ ನಮಗೆ ಅನುಕೂಲ ಆಗುತ್ತದೆ. 28 ಕ್ಷೇತ್ರ ಗೆಲ್ಲೋಕೆ ಮೈತ್ರಿ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಕ್ಷೇತ್ರವನ್ನು ವಿಶ್ವದಲ್ಲೇ ಮಾದರಿ ಕ್ಷೇತ್ರ ಮಾಡುವ ಪ್ರಯತ್ನ ಮಾಡ್ತೀನಿ: ಕೆ.ಸುಧಾಕರ್

  • ಸೈಕಲ್ ಏರಿ ತೇಜಸ್ವಿಸೂರ್ಯ ಸಿಟಿ ರೌಂಡ್ಸ್- ಮಾಸ್ಕ್ ಎಲ್ಲಿ ಎಂದ ನೆಟ್ಟಿಗರು

    ಸೈಕಲ್ ಏರಿ ತೇಜಸ್ವಿಸೂರ್ಯ ಸಿಟಿ ರೌಂಡ್ಸ್- ಮಾಸ್ಕ್ ಎಲ್ಲಿ ಎಂದ ನೆಟ್ಟಿಗರು

    ಬೆಂಗಳೂರು: ಸಂಸದ ತೇಜಸ್ವಿಸೂರ್ಯ ಸೈಕಲ್ ಏರಿ ಬೆಂಗಳೂರು ಸುತ್ತಿದ್ದು, ಈ ವೇಳೆ ಮಾಸ್ಕ್ ಹಾಕಿಲ್ಲ. ಕೇವಲ ಸೈಕಲ್ ಓಡಿಸುವಾಗ ಮಾತ್ರವಲ್ಲ ಜನರೊಂದಿಗೆ ಮಾತನಾಡುವಾಗಲೂ ಸಂಸದರು ಮಾಸ್ಕ್ ಹಾಕಿಲ್ಲ. ಹೀಗಾಗಿ ನೆಟ್ಟಿಗರು ಮಾಸ್ಕ್ ಎಲ್ಲಿ ಎಂದು ಪ್ರಶ್ನಿಸಿದ್ದಾರೆ.

     

    View this post on Instagram

     

    A post shared by Tejasvi Surya (@tejasvisurya)

    ಸೈಕಲ್‍ನಲ್ಲಿ ನಗರ ಸುತ್ತಿರುವ ಫೋಟೋ ಹಾಗೂ ವೀಡಿಯೋಗಳನ್ನು ಸಂಸದ ತೇಜಸ್ವಿಸೂರ್ಯ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸಂಸದರ ಪೋಸ್ಟ್ ಗೆ ಜನರು ಕಮೆಂಟ್ ಮಾಡಿ ಮಾಸ್ಕ್ ಎಲ್ಲಿ ಸರ್ ಎಂದು ಪ್ರಶ್ನಿಸಿದ್ದಾರೆ. ಮಾಸ್ಕ್ ಎಲ್ಲಿ, ಮಾಸ್ಕ್ ಧರಿಸಿ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

     

    View this post on Instagram

     

    A post shared by Tejasvi Surya (@tejasvisurya)

    ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಇತರರಿಗೆ ಮಾದರಿಯಾಗಬೇಕಾದ ಜನಪ್ರತಿನಿಧಿಗಳೇ ಹೀಗೆ ಮಾಡಿದರೆ ಹೇಗೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಅಲ್ಲದೆ ರಾಜ್ಯದಲ್ಲಿ 2ನೇ ಅಲೆ ಇನ್ನೂ ಸಂಪೂರ್ಣವಾಗಿ ತೊಲಗಿಲ್ಲ. ಬೆಂಗಳೂರಿನಲ್ಲಿ ಪ್ರತಿ ದಿನ 400 ರಿಂದ 600 ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಿದ್ದರೂ ಸಂಸದರು ಎಚ್ಚರ ವಹಿಸಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

    View this post on Instagram

     

    A post shared by Tejasvi Surya (@tejasvisurya)

    ಚಿತ್ರ ಹಾಗೂ ವೀಡಿಯೋದಲ್ಲಿ ತೇಜಸ್ವಿಸೂರ್ಯ ಅವರು ಕೇವಲ ಸೈಕಲ್ ಓಡಿಸುವಾಗ ಮಾತ್ರವಲ್ಲ, ಜನರೊಂದಿಗೆ ಮಾತನಾಡುವಾಗಲೂ ಮಾಸ್ಕ್ ಧರಿಸಿಲ್ಲ. ಹೀಗಾಗಿ ಜನ ಕಮೆಂಟ್ ಮಾಡಿ ಪ್ರಶ್ನಿಸಿದ್ದಾರೆ.

  • ಬೆಂಗಳೂರು ಗಲಭೆ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ: ತೇಜಸ್ವಿಸೂರ್ಯ

    ಬೆಂಗಳೂರು ಗಲಭೆ ಬಗ್ಗೆ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ: ತೇಜಸ್ವಿಸೂರ್ಯ

    – ಎನ್‍ಐಎ ಶಾಶ್ವತ ಕಚೇರಿ ಸ್ಥಾಪಿಸಲು ನಿರ್ಧಾರ
    – ಬೆಂಗಳೂರನ್ನು ಸುರಕ್ಷಿತವಾಗಿಡಲು ಅಗತ್ಯ ಕ್ರಮ

    ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೇನೆ ಎಂದು ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿಸೂರ್ಯ ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಅವರು, ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರಿನ ಗಲಭೆಯ ಬಗ್ಗೆ ವಿವರಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರನ್ನು ಸುರಕ್ಷಿತವಾಗಿಡುವುದು ಅಗತ್ಯವಾಗಿದೆ. ಹೀಗಾಗಿ ನಗರದಲ್ಲಿ ಎನ್‍ಐಎ ಕಚೇರಿ ಸ್ಥಾಪಿಸಲು ಮನವಿ ಮಾಡಿದ್ದೇನೆ. ಎನ್‍ಐಎ ಶಾಶ್ವತ ಕಚೇರಿ ಸ್ಥಾಪಿಸಲು ಅಮಿತ್ ಶಾ ಒಪ್ಪಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

    ಬೆಂಗಳೂರಿನಲ್ಲಿ ಎನ್‍ಐಎ ಕಚೇರಿ ಸ್ಥಾಪಿಸಲು ಬಿಜೆಪಿ ನಿರ್ಧರಿಸಿದೆ. ಕರ್ನಾಟಕ, ಕೇರಳ, ತಮಿಳುನಾಡು ಅಂಧ್ರ ಪ್ರದೇಶ ಭಾಗದಲ್ಲಿ ಏನೇ ಉಗ್ರ ಚಟುವಟಿಕೆಗಳಾದರೂ ಬೆಂಗಳೂರಿನಲ್ಲಿರುವ ಎನ್‍ಐಎನ ಸ್ಟೇಷನ್ ಹೌಸ್ ನಿಭಾಯಿಸುತ್ತದೆ. ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ನಡೆದ ಗಲಾಟೆ ಸಂದರ್ಭದಲ್ಲಿ ಎಫ್‍ಐಆರ್ ದಾಖಲಿಸಬೇಕೆಂದರೂ ಆಗುತ್ತಿರಲಿಲ್ಲ. ಆದರೆ ಈಗ ಎನ್‍ಐಎ ಸ್ಟೇಷನ್ ಹೌಸ್ ನಿರ್ಮಾಣವಾಗುತ್ತಿರುವುದರಿಂದ ರಾಜ್ಯದಲ್ಲಿ ಏನೇ ಆದರೂ ನಿಭಾಯಿಸಲು ಸುಲಭವಾಗುತ್ತದೆ ಎಂದರು. ಜೆಪಿ ನಡ್ಡಾ ಅವರು ಬಿಜೆಪಿ ಯುವ ಮೋರ್ಚಾದ ರಾಷ್ಟ್ರಿಯ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದು, ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಇದೇ ವೇಳೆ ತಿಳಿಸಿದರು.

  • ಎದೆ ಸೀಳಿದರೆ ಎರಡಕ್ಷರ ಇಲ್ಲದವರು ಜಾಗೃತಿ ಸಭೆಗೆ ಬಂದಿಲ್ಲ: ತೇಜಸ್ವಿ ಸೂರ್ಯ

    ಎದೆ ಸೀಳಿದರೆ ಎರಡಕ್ಷರ ಇಲ್ಲದವರು ಜಾಗೃತಿ ಸಭೆಗೆ ಬಂದಿಲ್ಲ: ತೇಜಸ್ವಿ ಸೂರ್ಯ

    ಬೆಂಗಳೂರು: ಎದೆ ಸೀಳಿದರೆ ಎರಡಕ್ಷರ ಇಲ್ಲದಂತಹ ಪಂಕ್ಚರ್ ಅಂಗಡಿ ಹಾಕಿಕೊಂಡಿರುವಂತವರು ಈ ಕಾರ್ಯಕ್ರಮಕ್ಕೆ ಸೇರಿಲ್ಲ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಟೌನ್ ಹಾಲ್ ಮುಂಭಾಗ ನಡೆದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟೀಕೆ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಜಾಗೃತಿ ಸಭೆಗೆ ಸೇರಿದವರೆಲ್ಲರೂ ಐಟಿ ಕಂಪನಿಗಳ ಉದ್ಯೋಗಿಗಳು, ವೈದ್ಯರು, ವಕೀಲರು, ಆಟೋ ಚಾಲಕರು ಸೇರಿದಂತೆ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಹಾಗೂ ದೇಶದ ಆರ್ಥಿಕತೆಗೆ ತಮ್ಮದೇಯಾದ ಕೊಡುಗೆ ನೀಡುತ್ತಿರುವ ವಿದ್ಯಾವಂತರು. ನಮ್ಮ ಪ್ರತಿಭಟನೆಯಲ್ಲಿ ಎದೆ ಸೀಳಿದರೆ ಎರಡಕ್ಷರ ಇಲ್ಲದಂತಹ ಅನಕ್ಷರಸ್ಥರು, ಪಂಕ್ಚರ್ ಅಂಗಡಿ ಹಾಕಿಕೊಂಡಿರುವಂತಹವರು ಯಾರೂ ಸೇರಿಲ್ಲ ಎಂದು ಕಿಡಿ ಕಾರಿದ್ದಾರೆ.

    ಬೆಂಗಳೂರು ಪ್ರಪಂಚದಲ್ಲೇ ಪ್ರಸಿದ್ಧಿ ಪಡೆದಿರುವ ನಗರ, ಇಂತಹ ನಗರದಲ್ಲಿ ಹಿಂಸಾಚಾರ ನಡೆಸಿದ್ದಾರೆ. ಆದರೆ ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿದ್ದೇವೆ. ಹಿಂಸಾತ್ಮಕವಾಗಿ ಪ್ರತಿಭಟನೆ ಮಾಡಿದವರಿಗೆ ಅವರು ಯಾಕೆ ಪ್ರತಿಭಟನೆ ಮಾಡುತ್ತಿದ್ದರು ಎಂಬುದೇ ತಿಳಿದಿರಲಿಲ್ಲ. ಕೆಲವರು ಜಿಎಸ್‍ಟಿ ವಿರೋಧಿಸಿ, ಇನ್ನೂ ಕೆಲವು ಈರುಳ್ಳಿ, ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ ಹೀಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದಿದ್ದರು ಎಂದು ತಿಳಿಸಿದರು.

    ಅವರಲ್ಲಿ ಬಹುತೇಕರಿಗೆ ಈ ಕಾನೂನಿನ ಉದ್ದೇಶವೇನು, ಇದರ ಉಪಯೋಗವೇನು, ಇದನ್ನು ಯಾಕೆ ಜಾರಿಗೆ ತಂದಿದ್ದಾರೆ, ಇದಾವುದನ್ನೂ ಪ್ರತಿಭಟನಾಕಾರರಿಗೆ ತಿಳಿದಿರಲಿಲ್ಲ. ನಿಮ್ಮನ್ನು ಪಾಕಿಸ್ತಾನಕ್ಕೆ ಓಡಿಸಿ ಬಿಡುತ್ತಾರಂತೆ ಎಂದು ಸುಳ್ಳು ಹೇಳಿ ಕರೆ ತಂದಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಬೆಂಕಿ ಹಚ್ಚುವಂತಹ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಏನೂ ತಿಳಿಯದ ಮುಸ್ಲಿಂ ಯುವಕರಿಗೆ ತಪ್ಪು ಮಾಹಿತಿ ನೀಡಿ ಹಿಂಸಾಚಾರಕ್ಕೆ ತಳ್ಳಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಮಾಜಿ ಸಚಿವ ಯುಟಿ ಖಾದರೇ ಕಾರಣ. ಯುವಕರ ಜೀವನದ ಜೊತೆ ಚೆಲ್ಲಾಟವಾಡಬೇಡಿ, ಹೊರದೇಶದಿಂದ ಭಾರತಕ್ಕೆ ವಲಸೆ ಬರುವ ಮುಸ್ಲಿಮರನ್ನು ರಾಷ್ಟ್ರದೊಳಗೆ ಬಿಟ್ಟುಕೊಳ್ಳುವುದಿಲ್ಲ ಎಂದರೆ ಇವರಿಗೇನು ಸಮಸ್ಯೆ? ಪಾಕಿಸ್ತಾನದ ಇಮ್ರಾನ್ ಖಾನ್, ಕಾಂಗ್ರೆಸ್ ನ ರಾಹುಲ್ ಗಾಂಧಿ ಒಂದೇ ಭಾಷಣ ಮಾಡುತ್ತಾರೆ. ಈ ಕಾನೂನು, ಭಾರತೀಯ ಹಿಂದೂಗಳು, ಹಿಂದೂ ಮುಸ್ಲಿಮರನ್ನು ಒಂದೇ ರೀತಿಯಾಗಿ ನೋಡುತ್ತದೆ. ನಮ್ಮ ದೇಶ ಭಾರತ, ಮನಸ್ಸೋ ಇಚ್ಚೆ ಇರುವ ಧರ್ಮಕ್ಷೇತ್ರ ಭಾರತವಲ್ಲ ಎಂದು ಕಿಡಿಕಾರಿದರು.

    ಅಲ್ಲದೆ ಕಾಂಗ್ರೆಸ್ಸಿನವರದ್ದು, ಉಸರವಳ್ಳಿ ಮಾತುಗಳು. ಬಾಂಗ್ಲಾದೇಶ, ಅಫ್ಘಾನಿಸ್ತಾನ, ಪಾಕಿಸ್ತಾನದ ಮುಸ್ಲಿಮೇತರರಿಗೆ ಪೌರತ್ವ ನೀಡುವುದು ತಪ್ಪು ಎಂದಾದರೆ, ಈ ಹಿಂದೆ ಇವರೇ ಹುಡುಕಿ ವೋಟರ್ ಐಡಿ, ಆಧಾರ್ ಮಾಡಿಕೊಟ್ಟಿದ್ದಾರಲ್ಲ. ಇದು ಸೆಕ್ಯೂಲರಾ ಹಾಗಾದರೆ ಎಂದು ಪ್ರಶ್ನಿಸಿದರು.

  • ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಬೆಂಗಳೂರು: ಯುವ ಸಂಸದ ತೇಜಸ್ವಿ ಸೂರ್ಯ ತನ್ನ ರಾಜಕೀಯ ಗುರುವಿಗೆ ತಿರುಮಂತ್ರ ಹೊಡೆದ್ರಾ ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

    ಹೌದು. ಸಂಸದ ಅನಂತ ಕುಮಾರ್ ಉದ್ಘಾಟಿಸಿದ, ಶಾಸಕ ವಿಜಯ ಕುಮಾರ್ ಪಾಠ ಹೇಳಿದ್ದ ಲೈಬ್ರರಿ ಜಾಗಕ್ಕೆ ತೇಜಸ್ವಿ ಕಾಲಿಟ್ಟಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಸಂಸದರಾಗಿ ಆಯ್ಕೆಯಾದ ಬಳಿ ಸಂಸದರ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಬಿಬಿಎಂಪಿಗೆ ಮನವಿ ಮಾಡಿದ್ದರು. ಈ ವೇಳೆ ಅನಂತಕುಮಾರ್ ಅವರ ಕಚೇರಿಯನ್ನು ಬಳಕೆ ಮಾಡಲು ನಿರಾಕರಿಸಿದ ಪರಿಣಾಮ ಅವರಿಗೆ ಜಯನಗರದ ಸಾರ್ವಜನಿಕ ಲೈಬ್ರರಿ ಆವರಣದಲ್ಲಿ ಕಚೇರಿ ತೆರೆಯಲು ಅನುಮತಿ ನೀಡಲಾಗಿದೆ.

    ಇದು ಸರಿಯೇ?
    ಸಿಎ, ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಈ ಲೈಬ್ರರಿಯಲ್ಲಿ ವಿದ್ಯಾರ್ಥಿಗಳು ನಿತ್ಯ ಓದುತ್ತಾರೆ. ಸದ್ಯ ಸಂಸದರ ಕಚೇರಿ ಇಲ್ಲಿ ತೆರೆದರೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಸಂಸದರನ್ನು ನೋಡಲು ನಿತ್ಯ ಬರುತ್ತಾರೆ. ಈ ವೇಳೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ. ಅಲ್ಲದೇ ಜೊತೆಗೆ ಮುಖ್ಯ ರಸ್ತೆ ಆಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಹೆಚ್ಚಾಗಲಿದೆ. ಇದರಿಂದ ಲೈಬ್ರರಿಗೆ ಬರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತದೆ. ಈ ವಿಚಾರ ತಿಳಿದಿದ್ದರೂ ತೇಜಸ್ವಿ ಸೂರ್ಯ ಅವರು ಇಲ್ಲೇ ಕಚೇರಿ ಮಾಡುತ್ತಿರುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದಾರೆ.

    ಈ ಸ್ಥಳವನ್ನು ಕೆಲ ಸಂಘ ಸಂಸ್ಥೆಗಳು ಬಡ ಮಕ್ಕಳಿಗೆ ಟ್ಯೂಷನ್ ನೀಡಲು ಬಳಸುತ್ತಿದ್ದವು. ಈ ಎಲ್ಲಾ ಮಾಹಿತಿ ಸಂಸದರಿಗೆ ಗೊತ್ತಾಗಲಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರದಲ್ಲಿ ಮೂಡಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸಂಸದ ತೇಜಸ್ವಿ ಸೂರ್ಯ ಅವರು, ಸಂಸದರ ಕಚೇರಿ ನಿರ್ಮಾಣವಾಗುತ್ತಿರುವುದು ಜಯನಗರದ ಸಾರ್ವಜನಿಕ ಲೈಬ್ರರಿ ಇರುವ ಕಟ್ಟದ ಗ್ರೌಂಡ್ ಫ್ಲೋರಿನಲ್ಲಿ. ಈ ಕಟ್ಟಡ ಮೊದಲ ಫ್ಲೋರಿನಲ್ಲಿ ಲೈಬ್ರರಿ ಇದೆ. ಅದರ ಕೆಳಗೆ ಇರುವ ಟ್ರಸ್ಟ್ ಕಚೇರಿಯನ್ನು ಸಂಸದರ ಕಚೇರಿಯಾಗಿ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ವಿದ್ಯಾರ್ಥಿಗಳು ನನ್ನ ಪರವಿದ್ದಾರೆ. ಕೆಲವರು ಇದನ್ನೇ ದುರುಪಯೋಗ ಪಡಿಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ. ಕೆಲವರು ಮೊದಲು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಟ್ರಸ್ಟನ್ನು ಅಲ್ಲಿಂದ ಖಾಲಿ ಮಾಡಿಸಿ ಬೇರೆಯವರಿಗೆ ನೀಡಲು ತೀರ್ಮಾನ ಮಾಡಿದ್ದರು. ಸದ್ಯ ಬಿಬಿಎಂಪಿ ಸಂಸದರ ಕಚೇರಿಗೆ ನೀಡಿದೆ ಎಂದರು.