ಬಳ್ಳಾರಿ: ವಿಪರೀತ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಿಸಲಾಯಿತು.
ಕೊಲೆ ಆರೋಪಿ ದರ್ಶನ್ ಬೆಂಗಳೂರಿನಲ್ಲೇ ಎಂಆರ್‌ಐ ಸ್ಕ್ಯಾನ್‌ಗೆ ಹಠ ಹಿಡಿದಿದ್ದರು. ಅದರೆ, ಸಂಜೆ ವೇಳೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನವೂಲಿಕೆ ಬಳಿಕ ರಾತ್ರಿ ವೇಳೆ ವಿಮ್ಸ್‌ನಲ್ಲೇ ಎಂಆರ್‌ಐ ಮಾಡಿಸಿಕೊಂಡು ಜೈಲಿಗೆ ಮರಳಿದರು. ಈ ದರ್ಶನ್ ನೋಡಲಿ ಅಭಿಮಾನಿಗಳು ಮುಗಿಬಿದ್ದರು. ಅಭಿಮಾನಿಗಳನ್ನ ಚದುರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಜಾಮೀನು ಅರ್ಜಿ ವಜಾವಾದ ಬಳಿಕ ಬೆನ್ನುನೋವಿನಿಂದ ಬಳಲುತ್ತಿದ್ದ ಆರೋಪಿ ದರ್ಶನ್ ಎಂಆರ್‌ಐ ಸ್ಕ್ಯಾನ್ ನೆಪದಲ್ಲಾದರೂ ಬಳ್ಳಾರಿ ಜೈಲಿನಿಂದ ಬೆಂಗಳೂರು ಜೈಲಿಗೆ ಶಿಫ್ಟ್ ಅಗುವ ಪ್ಲ್ಯಾನ್‌ನಲ್ಲಿದ್ದರು. ಅದರೆ, ವಿಮ್ಸ್‌ನಲ್ಲೇ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.
ಎಂಆರ್‌ಐ ಸ್ಕ್ಯಾನ್‌ಗೂ ಮುನ್ನ ಆಸ್ಪತ್ರೆಯಲ್ಲಿ ದರ್ಶನ್‌ಗೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಬಳಿಕ ಜೈಲಿನಿಂದ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನ್ ಮಾಡಲಾಯಿತು. ಬಳಿಕ ಮತ್ತೆ ನಟನನ್ನು ಜೈಲಿಗೆ ಕರೆತರಲಾಯಿತು. ಈ ವೇಳೆ ಜೈಲಿನ ಬಳಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ನೆಚ್ಚಿನ ನಟನನ್ನು ಕಂಡು ಶಿಳ್ಳೆ, ಕೇಕೆ ಹಾಕಿದರು.
ಬೆಂಗಳೂರು: ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ (CT Scan) ಹಾಗೂ ಎಂಆರ್‌ಐ ಸ್ಕ್ಯಾನಿಂಗ್ (MRI Scan) ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ (Health Department) ಸ್ಪಷ್ಟನೆ ನೀಡಿದೆ.
ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ.ಇದನ್ನೂ ಓದಿ: ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ
ರಾಜ್ಯದಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರ ರಹಿತವಾಗಿದೆ. ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳಿಗೆ ಅಗತ್ಯವಿರುವ 63.49 ಕೋಟಿ ರೂ. ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು, ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ.
ರಾಜ್ಯದಲ್ಲಿ ಒಟ್ಟು 3 ಸಂಸ್ಥೆಗಳು ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳನ್ನು ಒದಗಿಸುತ್ತಿವೆ. ಅದರಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯು ಬಿಲ್ ಪಾವತಿಗಾಗಿ ನೀಡಿದ ದಾಖಲಾತಿಗಳಲ್ಲಿ ಮಾಹಿತಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ವಿವರಣೆ ಕೇಳಲಾಗಿದೆ. ಜೂನ್ & ಜುಲೈ 2 ತಿಂಗಳುಗಳ ಬಿಲ್ ಪಾವತಿಯಲ್ಲಿ ಮಾತ್ರವೇ ವಿಳಂಬವಾಗಿದೆ. ಉಳಿದ ಸಂಸ್ಥೆಗಳ ಬಿಲ್ ಪಾವತಿಯಲ್ಲಿ ಯಾವುದೇ ಬಾಕಿ ಇರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಇಲಾಖೆ ಕೇಳಿರುವ ಪೂರಕ ಮಾಹಿತಿಯನ್ನ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆ (Krsnaa Diagnostics) ಒದಗಿಸಿದ ತಕ್ಷಣ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಸ್ಥೆಯಿಂದ ಆಗಿರುವ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳ ವ್ಯತ್ಯಯವನ್ನು ಸರಿಪಡಿಸಲು ಬದಲಿ ಕ್ರಮವನ್ನೂ ಈಗಾಗಲೇ ಕೈಗೊಳ್ಳಲಾಗಿದೆ. ಈ ಕೂಡಲೇ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ಸೇವೆಗಳನ್ನು ಪುನರಾರಂಭಿಸಲು ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ವ್ಯತ್ಯಯ ಕಂಡುಬಂದಲ್ಲಿ ಕೃಷ್ಣ ಡಯಾಗ್ನೋಸ್ಟಿಕ್ ಸಂಸ್ಥೆಯ ವಿರುದ್ಧ ಇಲಾಖೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಮಗುವಿನ ಜನನದ ಬಗ್ಗೆ ಅನುಮಾನ – 5 ವರ್ಷದ ಮಗುವನ್ನೇ ಕೊಂದ ಪಾಪಿ ತಂದೆ!
ಬೆಂಗಳೂರು: ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ ಸ್ಕ್ಯಾನ್ (MRI Scan) ಹಾಗೂ ಡಯಾಲಿಸಿಸ್ (Dialysis) ಯಂತ್ರಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಗ್ಯ ಇಲಾಖೆ ಅಧಿಕಾರಿಗಳನ್ನು (Health Department) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಅವರು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗಿಲ್ಲ. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಎದ್ದು ಕಾಣುತ್ತಿದೆ. ಇದನ್ನೂ ಮುಂದಿನ ಸಭೆಯೊಳಗೆ ಸರಿಪಡಿಸಬೇಕು ಎಂದು ಆದೇಶಿಸಿದ್ದಾರೆ. ಇದನ್ನೂ ಓದಿ: Breakingː ಜಮ್ಮು-ಕಾಶ್ಮೀರದಲ್ಲಿ 5.4 ತೀವ್ರತೆಯ ಭೂಕಂಪ
ಅಲ್ಲದೇ ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಆರೋಗ್ಯ ಸೇವೆಯ ಲಭ್ಯತೆ ಕುರಿತಂತೆ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್‍ನ ಅನುದಾನ ಸಕಾಲದಲ್ಲಿ ವೆಚ್ಚವಾಗದಿರುವ ಬಗ್ಗೆ, ಆರೋಗ್ಯ ವ್ಯವಸ್ಥೆ ಬಲಪಡಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ಈ ಯೋಜನೆಯಡಿ 52% ರಷ್ಟು ತಜ್ಞ ವೈದ್ಯರ ಕೊರತೆ ಇದೆ. 31% ರಷ್ಟು ವೈದ್ಯರ ಕೊರತೆ ಹಾಗೂ 18% ರಷ್ಟು ನರ್ಸ್ ಸಿಬ್ಬಂದಿ ಕೊರತೆ ಇರುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ವೇತನ ಹೆಚ್ಚಳ ಮಾಡುವ ಬಗ್ಗೆ ಪರಿಶೀಲಿಸಿ, ಖಾಲಿ ಇರುವ ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ನಿರಂತರವಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ ಪರಿಶೀಲನೆ ಮಾಡಬೇಕು. ನಿಗದಿತ ಗುರಿ ಸಾಧನೆಯನ್ನು ಖಾತರಿ ಪಡಿಸಬೇಕು ಹಾಗೂ ಅನುದಾನ ಸಕಾಲದಲ್ಲಿ ಬಳಕೆ ಮಾಡಬೇಕು. ಕಳೆದ ಒಂದು ವರ್ಷದಲ್ಲಿ ನಿಗಮಕ್ಕೆ 5 ಎಂಡಿ ನೇಮಕ ಮಾಡಿರುವುದರಿಂದ ಸಮಸ್ಯೆ ಆಗಿರುವುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು. ನಮ್ಮ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುವುದಿಲ್ಲ. ನಿಗಮದ ವ್ಯವಸ್ಥಾಪಕ ನಿರ್ದೇಶಕರು ಕನಿಷ್ಠ 2 ವರ್ಷ ಸೇವೆ ಸಲ್ಲಿಸಬೇಕು ಎಂದು ಇಲಾಖೆಯ ಆಯುಕ್ತರಿಗೆ ಸೂಚಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಡಜನರಿಗೆ ಈ ವಿಶೇಷ ಸೇವೆಗಳನ್ನು ಒದಗಿಸದಿದ್ದರೆ ಅವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹೇಗೆ ಸಾಧ್ಯ? ಗ್ರಾಮೀಣ ಪ್ರದೇಶದಲ್ಲಿ ವೈದ್ಯರಿಗೆ ಕಟ್ಟಿಸಿರುವ ವಸತಿಗೃಹದಲ್ಲಿ ಯಾವ ವೈದ್ಯರೂ ಉಳಿದುಕೊಳ್ಳುತ್ತಿಲ್ಲ ಈ ಎಲ್ಲಾ ಸಮಸ್ಯೆಗಳು ಮೂರು ತಿಂಗಳಲ್ಲಿ ಸರಿಪಡಿಸಬೇಕು. ಇದು ಮುಂದುವರೆದರೆ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 70,000 ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ಮುಂಬೈ: ಎಂಆರ್ ಐ ಸ್ಕ್ಯಾನ್ ಮಾಡಿಸಲು ಆಸ್ಪತ್ರೆ ತೆರಳಿದ್ದ ವ್ಯಕ್ತಿಯ ಸಂಬಂಧಿ ಅದೇ ಯಂತ್ರದಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಂಬೈನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ರಾಜೇಶ್ ಮರು (32) ಮೃತ ಪಟ್ಟ ದುರ್ದೈವಿಯಾಗಿದ್ದು, ಶನಿವಾರ ಸಂಜೆ ಮುಂಬೈನ ಬಿಎಲ್‍ವೈ ನೈರ್ ಚಾರಿಟಬಲ್ ಆಸ್ಪತ್ರೆಗೆ ಸಂಬಂಧಿಕರನ್ನು ಭೇಟಿ ಮಾಡಲು ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.
ಘಟನೆ ಕುರಿತು ಮಾಹಿತಿ ನೀಡಿದ ಮೃತ ರಾಜೇಶ್ ಕುಟುಂಬಸ್ಥರು, ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷದಿಂದಲೇ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ. ಎಂಆರ್ ಐ ಕೊಠಡಿಗೆ ಲೋಹದ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿಗೆ ತಿಳಿಸಿದ್ದೇವು. ಆದರೆ ಅವರು ಪ್ರತಿದಿನ ನಾವು ಇದೇ ಕೆಲಸವನ್ನು ಮಾಡುತ್ತೇವೆ. ಕೊಠಡಿಯಲ್ಲಿ ಯಂತ್ರ ಆಫ್ ಆಗಿದೆ ಎಂದು ಹೇಳಿದರು. ಆದರೆ ಕೊಠಡಿ ಪ್ರವೇಶ ಮಾಡುತ್ತಿದಂತೆ ಸ್ಕ್ಯಾನಿಂಗ್ ಯಂತ್ರ ರಾಜೇಶ್ ಹಾಗೂ ಆಮ್ಲಜನಕ ಸಿಲಿಂಡರ್ ಅನ್ನು ಸೆಳೆದುಕೊಂಡಿತು. ಈ ವೇಳೆ ರಾಜೇಶ್ ಯಂತ್ರದಲ್ಲಿ ಸಿಲುಕಿ ಸಾವನ್ನಪ್ಪಿದರು ಎಂದು ತಿಳಿಸಿದರು.
ಘಟನೆ ನಡೆದ ತಕ್ಷಣ ಎಚ್ಚೆತ್ತ ಆಸ್ಪತ್ರೆಯ ವಾರ್ಡ್ ಸಿಬ್ಬಂದಿ ರಾಜೇಶ್ ಅವರನ್ನು ಯಂತ್ರದಿಂದ ಹೊರಗೆಳೆಯಲು ಯಶ್ವಸಿಯಾದರೂ ಆ ವೇಳೆಗೆ ತೀವ್ರ ರಕ್ತಸ್ರಾವ ಉಂಟಾಗಿ ರಾಜೇಶ್ 10 ನಿಮಿಷಗಳಲ್ಲೇ ಸಾವನ್ನಪ್ಪಿದ್ದಾರೆ.
ರಾಜೇಶ್ ಸಾವಿಗೆ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ ಕಾರಣವಾಗಿದ್ದು, ಈ ಕೂಡಲೇ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ರಾಜೇಶ್ ಕುಟುಂಬ ಸಂಬಂಧಿಕರು ಆಗ್ರಹಿಸಿದ್ದಾರೆ.
ಘಟನೆ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಯ ವಿರುದ್ಧ ಕರ್ತವ್ಯ ಲೋಪದ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.