Tag: Mrinal

  • ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ವಿಜಯ್ ದೇವರಕೊಂಡ ಟೀಮ್

    ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ ವಿಜಯ್ ದೇವರಕೊಂಡ ಟೀಮ್

    ದಿ ಫ್ಯಾಮಿಲಿ ಸ್ಟಾರ್ ಕುರಿತಂತೆ ತಪ್ಪು ಮಾಹಿತಿಗಳನ್ನು ಹಂಚುತ್ತಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ತೆಲುಗಿನ ಹೆಸರಾಂತ ನಟ ವಿಜಯ್ ದೇವರಕೊಂಡ ಟೀಮ್ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದೆ. ಸಿನಿಮಾ ಕುರಿತಂತೆ ನೆಗೆಟಿವ್ ಸುದ್ದಿ ಹರಡುತ್ತಿರುವುದರಿಂದ ತಮ್ಮ ಸಿನಿಮಾಗೆ ಅದು ದೊಡ್ಡ ಮಟ್ಟದಲ್ಲಿ ಪೆಟ್ಟು ನೀಡುತ್ತಿದೆ ಎಂದು ಆರೋಪಿಸಲಾಗಿದೆ.

    ಮೊನ್ನೆಯಷ್ಟೇ ವಿಜಯ್ ದೇವರಕೊಂಡ (Vijay Devarakonda) ನಟನೆಯ ‘ಫ್ಯಾಮಿಲಿ ಸ್ಟಾರ್’ (Family Star) ಸಿನಿಮಾ ರಿಲೀಸ್ ಆಗಿದೆ. ರಿಲೀಸ್ ಆದ ಎರಡನೇ ದಿನಕ್ಕೆ ಚಿತ್ರಮಂದಿರದಲ್ಲಿ ಡುಮ್ಕಿ ಹೊಡೆದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆಯಂತೆ. ವಿಜಯ್ ಮತ್ತು ಮೃಣಾಲ್ ಠಾಕೂರ್ (Mrunal Thakur) ನಟನೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆಯಿತ್ತು. ಆದರೆ ಸಿನಿಮಾ ಈಗ ನೆಲಕಚ್ಚಿದೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಲೈಗರ್, ಖುಷಿ ಸಿನಿಮಾದ ನಂತರ ‘ಫ್ಯಾಮಿಲಿ ಸ್ಟಾರ್’ ಚಿತ್ರದ ಮೇಲೆ ಫ್ಯಾನ್ಸ್‌ಗೆ ನಿರೀಕ್ಷೆಯಿತ್ತು. ಈ ಸಿನಿಮಾ ವಿಜಯ್ ದೇವರಕೊಂಡ ಕೆರಿಯರ್‌ಗೆ ತಿರುವು ಕೊಡಲಿದೆ ಎಂದೇ ಹೇಳಲಾಗಿತ್ತು. ಆದರೆ ಚಿತ್ರದ ಕುರಿತು ಇದೀಗ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಲೆಕ್ಷನ್‌ನಲ್ಲಿ ಸಿನಿಮಾ ಎಡವಿದೆ.‌

     

    ವಿಜಯ್ ಮತ್ತು ಮೃಣಾಲ್ (Mrunal Thakur) ಟ್ರ್ಯಾಕ್ ಅದ್ಭುತವಾಗಿ ಮೂಡಿ ಬಂದಿದೆ. ಕಥೆಯಲ್ಲಿ ಸಿನಿಮಾ ತಂಡ ಪಲ್ಟಿ ಹೊಡೆದಿದೆ. ಸ್ಟೋರಿ ಲೈನ್ ಜನರ ಗಮನ ಸೆಳೆಯುವಲ್ಲಿ ವಿಫಲವಾಗಿದೆ ಎನ್ನುವುದು ಹರಿದು ಬರುತ್ತಿರುವ ಮಾಹಿತಿ. ಏ.5ರಂದು ಫ್ಯಾಮಿಲಿ ಸ್ಟಾರ್ ತೆಲುಗು ಮತ್ತು ತಮಿಳಿನಲ್ಲಿ ರಿಲೀಸ್ ಆಗಿದೆ.

  • ಹಿಂದಿ ಆಯ್ತು, ಇದೀಗ ಮರಾಠಿಯಲ್ಲೂ ಕನ್ನಡದ ದಿಯಾ

    ಹಿಂದಿ ಆಯ್ತು, ಇದೀಗ ಮರಾಠಿಯಲ್ಲೂ ಕನ್ನಡದ ದಿಯಾ

    ಪೃಥ್ವಿ ಅಂಬರ್ ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದ ‘ದಿಯಾ’ ಸಿನಿಮಾ 2020ರಲ್ಲಿ ರಿಲೀಸ್ ಆಗಿ, ಬಾಕ್ಸ್ ಆಫೀಸ್ ಅನ್ನು ಭರ್ತಿ ಮಾಡಿತ್ತು. ಬಹುತೇಕ ಹೊಸಬರೇ ತುಂಬಿದ್ದ ಈ ಸಿನಿಮಾ ಕೇವಲ ಹಣ ಗಳಿಕೆಯಲ್ಲಿ ಮಾತ್ರವಲ್ಲ, ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ವಿಮರ್ಶೆಕರೂ ಮೆಚ್ಚಿಕೊಂಡಿದ್ದರು. ಹೀಗಾಗಿ ಪೃಥ್ವಿ ಅಂಬರ್ ಯುವ ಪೀಳಿಗೆಯ ಭರವಸೆಯ ನಟ ಅನಿಸಿಕೊಂಡರು. ಇದನ್ನೂ ಓದಿ : ಸಿಂಬು ನಟನೆಯ ಚಿತ್ರಕ್ಕೆ ಐಶ್ವರ್ಯ ರಜನೀಕಾಂತ್ ನಿರ್ದೇಶಕಿ

    ನಂತರ ಈ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್ ಮಾಡಲಾಯಿತು. ಹಿಂದಿಯಲ್ಲಿ ರೀಮೇಕ್ ಆದರೂ, ನಿರ್ದೇಶಕ ಕೆ.ಎಸ್. ಅಶೋಕ್, ತನ್ನ ಹೀರೋನನ್ನು ತಮ್ಮೊಂದಿಗೆ ಬಾಲಿವುಡ್ ಗೂ ಕರೆದುಕೊಂಡು ಹೋದರೂ, ಇನ್ನೇನು ಆ ಸಿನಿಮಾ ಸಂಪೂರ್ಣ ಶೂಟಿಂಗ್ ಮುಗಿಸಿದೆ ಎನ್ನುವ ಹೊತ್ತಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಈ ಸಿನಿಮಾ ಇದೀಗ ಮರಾಠಿಯಲ್ಲೂ ರಿಮೇಕ್ ಆಗುತ್ತಿದೆ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಹೌದು, ಕನ್ನಡದ ದಿಯಾ, ಹಿಂದಿಯ ನಂತರ ಮರಾಠಿಯಲ್ಲೂ ಮೂಡಿ ಬರಲಿದೆ. ವಿಶೇಷ ಅಂದರೆ, ನಾಯಕ ಪೃಥ್ವಿ ಅಂಬರ್ ಮರಾಠಿ ಸಿನಿಮಾದಲ್ಲೂ ನಾಯಕನಾಗಿ ಮುಂದುವರೆಯಲಿದ್ದಾರೆ. ಸಿನಿಮಾ ಮರಾಠಿಯಲ್ಲಿ ಮೂಡಿ ಬಂದರೂ, ಕನ್ನಡದ ನೆಲದಲ್ಲೇ ಚಿತ್ರವನ್ನು ಶೂಟ್ ಮಾಡಲಾಗುತ್ತಿದೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲೇ ಚಿತ್ರಕ್ಕೆ ಮುಹೂರ್ತ ನಡೆದಿದೆ. ಮೈಸೂರು, ಮಂಗಳೂರು ಸೇರಿದಂತೆ ಇತರ ಸ್ಥಳಗಳಲ್ಲಿ ಶೂಟಿಂಗ್ ಮಾಡುವ ಪ್ಲ್ಯಾನ್ ಚಿತ್ರತಂಡದ್ದು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    ನಾಯಕಿಯಾಗಿ ರಿತಿಕಾ ಶ್ರೋತ್ರಿ ನಟಿಸುತ್ತಿದ್ದು, ಕಿರುತೆರೆ ನಟಿ ಅಜಿಂಕ್ಯಾ ರಾವುದ್, ಮೃಣಾಲ್ ಕುಲಕರ್ಣಿ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿ ಇರಲಿದ್ದಾರೆ.

  • ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ

    ರಾತ್ರಿ ನಿದ್ದೆ ಬರುತ್ತಿಲ್ಲ, ಕಣ್ಣಲ್ಲಿ ನೀರು ಬರುತ್ತೆ, ತಾಯಿ ಕಷ್ಟ ನೋಡಿ ತಡೆದುಕೊಳ್ಳಲು ಆಗುತ್ತಿಲ್ಲ- ಹೆಬ್ಬಾಳ್ಕರ್ ಪುತ್ರ

    ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದು, ಈ ಕುರಿತು ಶಾಸಕಿ ಪುತ್ರ ಮೃಣಾಲ್ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.

    ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಕೆರೆ ಅಭಿವೃದ್ಧಿ ಕುರಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಅವರು, ನನ್ನ ತಾಯಿ ಕಷ್ಟ ನೋಡಿ ನನಗೆ ತಡೆದುಕೊಳ್ಳಲು ಆಗುತ್ತಿಲ್ಲ. ರಾತ್ರಿ ಸರಿಯಾಗಿ ನಿದ್ದೆ ಬರುವುದಿಲ್ಲ, ಕಣ್ಣಲ್ಲಿ ನೀರು ಬರುತ್ತವೆ ಎಂದು ಕ್ಷೇತ್ರದ ಮತದಾರರ ಮುಂದೆ ಮೃಣಾಲ್ ಅಳಲು ತೊಡಿಕೊಂಡಿದ್ದಾರೆ.

    ಯಾವುದೇ ಕಷ್ಟದಲ್ಲೂ ನನ್ನ ತಾಯಿ ಮುಖದಲ್ಲಿ ನಗು ಇರುತ್ತದೆ. ನನ್ನ ತಾಯಿಯ ಈ ಗುಣವನ್ನು ನಾವು ಕಲಿಯಬೇಕು. ನಿಮಗೆ ಕಾಲು ಮುಗಿದು ಕೇಳುತ್ತೇನೆ ನಿಮ್ಮ ಆಶೀರ್ವಾದ ನಮ್ಮ ತಾಯಿಯ ಮೇಲೆ ಇರಲಿ. ನಿಮ್ಮ ಆಶೀರ್ವಾದ ಇದ್ದಷ್ಟು ಒಳ್ಳೆ ಕೆಲಸ ಕ್ಷೇತ್ರದಲ್ಲಿ ಮಾಡುತ್ತೇವೆ. ನನ್ನ ತಾಯಿ ಕಾರಣಾಂತರಗಳಿಂದ ಈ ಕಾರ್ಯಕ್ರಮಕ್ಕೆ ಬಂದಿಲ್ಲ. ತಾಯಿ ಕಾರ್ಯಕ್ರಮಕ್ಕೆ ಬಾರಲು ಸಾಧ್ಯವಾಗಿಲ್ಲ. ಹೀಗಾಗಿ ನಾನು ಬಂದಿದ್ದೇನೆ ಎಂದು ತಿಳಿಸಿದರು.

    ಶುಕ್ರವಾರವೂ ಸಹ ಇಡಿ ಅಧಿಕಾರಿಗಳ ಎದುರು 2ನೇ ದಿನ ವಿಚಾರಣೆಗೆ ಹಾಜರಾಗಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ 6 ಗಂಟೆಗಳ ವಿಚಾರಣೆ ಎದುರಿಸಿದ್ದರು. ಮಧ್ಯಾಹ್ನ 12 ಗಂಟೆ ವೇಳೆಗೆ ಇಡಿ ಕಚೇರಿಗೆ ತೆರಳಿದ್ದ ಅವರು, ನಗುಮುಖದೊಂದಿಗೆ ಕಂಡರು. ಆದರೆ ಗುರುವಾರ ವಿಚಾರಣೆಗೆ ತೆರಳಿದ್ದ ವೇಳೆ ಅವರ ಮುಖದಲ್ಲಿ ಆತಂಕ ಕಂಡು ಬಂದಿತ್ತು. ಗುರುವಾರ ವಿಚಾರಣೆ ಅಂತ್ಯವಾದ ಬಳಿಕ ಮತ್ತೆ ಶುಕ್ರವಾರ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸೂಚಿಸಿದ್ದರು.

    ಶುಕ್ರವಾರ ವಿಚಾರಣೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಹಲವು ದಾಖಲೆಗಳೊಂದಿಗೆ ಹಾಜರಾಗಿದ್ದರು. ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ದಾಖಲೆ ಸಮೇತ ಮಾಹಿತಿ ಪಡೆದಿದ್ದಾರೆ. ವಿಚಾರಣೆಯ ವೇಳೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗ್ಗೆ ಇಡಿ ಅಧಿಕಾರಿಗಳು ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪ್ರಶ್ನಿಸಿದ್ದಾರೆ. ಅಲ್ಲದೇ ವಿವಿಧ ಕಂಪನಿಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೂಡಿಕೆ ಹಾಗೂ ಹೂಡಿಕೆ ಮಾಡಿರುವ ಹಣದ ಮೂಲದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂಬ ಸಂಗತಿ ಮೂಲಗಳಿಂದ ಲಭಿಸಿದೆ.

    ವಿಚಾರಣೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ ಮತ್ತೆ ವಿಚಾರಣೆಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿಲ್ಲ. ಮುಂದೆ ವಿಚಾರಣೆ ಬರುವ ಬಗ್ಗೆ ಅಧಿಕಾರಿಗಳು ಏನು ಹೇಳಿಲ್ಲ. ಇಂದಿನ ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದು, ವಿಚಾರಣೆಗೆ ಸಹಕರಿಸಿದ್ದೇನೆ ಎಂದಿದ್ದರು.

    ಡಿಕೆ ಶಿವಕುಮಾರ್ ನನ್ನ ರಾಜಕೀಯ ಗುರು ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳ್ಕರ್, ನನ್ನನ್ನು ರಾಜಕೀಯವಾಗಿ ಡಿಕೆಶಿ ಬೆಳೆಸಿದ್ದಾರೆ. ಆದರೆ ನನ್ನ ಮತ್ತು ಡಿಕೆಶಿ ಅವರ ನಡುವೆ ಯಾವುದೇ ಹಣ ವರ್ಗಾವಣೆ ನಡೆದಿಲ್ಲ. ನಮ್ಮ ನಡುವೆ ವ್ಯವಹಾರಿಕ ಸಂಬಂಧ ಇಲ್ಲ. ಈ ಕುರಿತು ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ದಾಖಲೆ ನೀಡಿ ಉತ್ತರಿಸಿದ್ದೇನೆ. ಈ ಸಂದರ್ಭ ವಿಚಾರಣೆಗೆ ಸಂಬಂಧ ಇಷ್ಟು ಮಾತ್ರ ಹೇಳಬಲ್ಲೆ ಎಂದು ತಿಳಿಸಿದ್ದರು.