Tag: MRM

  • ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತವಾಗಿ, ಸಂತೋಷವಾಗಿದ್ದಾರೆ: ಸಯ್ಯದ್ ಸಯೀದ್

    ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತವಾಗಿ, ಸಂತೋಷವಾಗಿದ್ದಾರೆ: ಸಯ್ಯದ್ ಸಯೀದ್

    ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಆರ್‍ಎಸ್‍ಎಸ್ ಮುಸ್ಲಿಂ ವಿಭಾಗ ಮನವಿ ಮಾಡಿದ್ದು, ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ‘ಅತ್ಯಂತ ಸುರಕ್ಷಿತ ಮತ್ತು ಸಂತೋಷದಿಂದ ಇದ್ದಾರೆ’ ಎಂದು ಆರ್‌ಎಸ್‌ಎಸ್ ಮುಸ್ಲಿಂ ವಿಭಾಗದ ರಾಷ್ಟ್ರೀಯ ಸಂಚಾಲಕ ಸಯ್ಯದ್ ಸಯೀದ್ ತಿಳಿಸಿದರು.

    ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ನ ‘ನಿವೇದನ್ ಪತ್ರ’ (ಮನವಿ ಪತ್ರ) ವನ್ನು ಆರ್‌ಎಸ್‌ಎಸ್ ಮುಸ್ಲಿಂ ವಿಭಾಗ ಮುಖ್ಯ ಪೋಷಕ ಇಂದ್ರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ವೇಳೆ ಸಯ್ಯದ್ ಸಯೀದ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ಮತ್ತು ಪಂಜಾಬ್‍ನಲ್ಲಿ ಬಿಜೆಪಿಗೆ ಮತಯಾಚಿಸಿ ಅಲ್ಪಸಂಖ್ಯಾತ ಸಮುದಾಯದವರಿಗೆ ಕರಪತ್ರಗಳನ್ನು ಹಂಚಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ವಸತಿ ಶಾಲೆಯ 16 ಮಕ್ಕಳಿಗೆ ವಕ್ಕರಿಸಿದ ಕೊರೊನಾ

    ಎಂಆರ್‌ಎಂ ಸಮುದಾಯದ ಕಲ್ಯಾಣಕ್ಕಾಗಿ ಕೇಂದ್ರ ಮತ್ತು ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಹಲವು ಅಂಶಗಳನ್ನು ಜಾರಿಗೊಳಿಸಿದೆ. ಈ ಪಕ್ಷವು ದೇಶದ ಮುಸ್ಲಿಮರ ‘ಅತಿದೊಡ್ಡ ಹಿತೈಷಿ’ ಎಂದು ಪ್ರಶಂಸಿದರು.

    ಕಾಂಗ್ರೆಸ್, ಸಮಾಜವಾದಿ ಪಕ್ಷ(ಎಸ್‍ಪಿ) ಮತ್ತು ಬಹುಜನ ಸಮಾಜ ಪಕ್ಷ(ಬಿಎಸ್‍ಪಿ) ಸೇರಿದಂತೆ ವಿರೋಧ ಪಕ್ಷಗಳು ಮುಸ್ಲಿಮರನ್ನು ತಮ್ಮ ಮತಬ್ಯಾಂಕ್ ಎಂದು ಪರಿಗಣಿಸಿವೆ. ಆ ಪಕ್ಷಗಳು ಅಧಿಕಾರಕ್ಕೆ ಬಂದ ನಂತರ ನಮ್ಮ ಮೇಲೆ ದೌರ್ಜನ್ಯ ಮಾಡಿದೆ. ನಮ್ಮ ಸಮುದಾಯದ ಬಡತನ, ಅನಕ್ಷರತೆ, ಹಿಂದುಳಿದಿರುವಿಕೆ ಬಗ್ಗೆ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರವು 2014 ರಿಂದ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕಾಗಿ ನೈ ರೋಶ್ನಿ, ನಯಾ ಸವೇರಾ, ನಯೀ ಉಡಾನ್, ಸೀಖೋ ಔರ್ ಕಾಮಾವೋ, ಉಸ್ತಾದ್ ಮತ್ತು ನಾಯ್ ಮಂಜಿಲ್ ಸೇರಿದಂತೆ 36 ಯೋಜನೆಗಳನ್ನು ಪ್ರಾರಂಭಿಸಿದೆ ಎಂದು ವಿವರಿಸಿದರು.

    ಅಲ್ಪಸಂಖ್ಯಾತ ಸಮುದಾಯದವರು ಪ್ರಧಾನ ಮಂತ್ರಿ ಆವಾಸ್ ಯೋಜನೆ, ಮುದ್ರಾ ಯೋಜನೆ, ಜನ್ ಧನ್ ಯೋಜನೆ, ಉಜ್ವಲ ಯೋಜನೆ, ಅಟಲ್ ಪಿಂಚಣಿ ಯೋಜನೆ, ಸ್ಟಾರ್ಟ್ಆಪ್ ಇಂಡಿಯಾ ಮತ್ತು ಮೋದಿ ಸರ್ಕಾರ ಪ್ರಾರಂಭಿಸಿದ ಇತರ ಯೋಜನೆಗಳಿಂದ ಪ್ರಯೋಜನವನ್ನು ಪಡೆದುಕೊಂಡಿದೆ ಎಂದು ತಿಳಿಸಿದರು.

    ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರನ್ನು ದೇಶದಿಂದ ಹೊರಹಾಕಲಾಗುವುದು ಎಂದು ಕಾಂಗ್ರೆಸ್, ಎಸ್‍ಪಿ ಮತ್ತು ಬಿಎಸ್‍ಪಿ ಸೇರಿದಂತೆ ವಿರೋಧ ಪಕ್ಷಗಳು ಆರ್‍ಎಸ್‍ಎಸ್ ಮತ್ತು ಬಿಜೆಪಿ ವಿರುದ್ಧ ಬಹಳ ಹಿಂದಿನಿಂದಲೂ ಅಪಪ್ರಚಾರ ನಡೆಸುತ್ತಿವೆ. ಈ ಏಳು ವರ್ಷಗಳಿಂದ ಎಷ್ಟು ಮುಸ್ಲಿಮರನ್ನು ದೇಶದಿಂದ ಹೊರಹಾಕಲಾಗಿದೆ ಎಂದು ವಿರೋಧ ಪಕ್ಷಗಳಿಗೆ ಪ್ರಶ್ನಿಸಿದರು.

    ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮುಸ್ಲಿಮರನ್ನು ಕೇವಲ ತಮ್ಮ ಮತಬ್ಯಾಂಕ್ ಎಂದು ಪರಿಗಣಿಸಿವೆ. 2014 ರಿಂದ ಮುಸ್ಲಿಮರ ಮೇಲೆ ‘ಕೋಮು ಗಲಭೆಗಳು ಮತ್ತು ದೌರ್ಜನ್ಯಗಳ’ ಘಟನೆಗಳು ತೀವ್ರವಾಗಿ ಕಡಿಮೆಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಸಂಕ್ರಾಂತಿ ಪುಣ್ಯಸ್ನಾನ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು

    ಬಿಜೆಪಿ ಸರ್ಕಾರವು ಮುಸ್ಲಿಮರ ದೊಡ್ಡ ಹಿತೈಷಿ. ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್, ಎಸ್‍ಪಿ-ಬಿಎಸ್‍ಪಿಗೆ ಬಲಿಯಾಗಬೇಡಿ. ಬಿಜೆಪಿಯ ಆಡಳಿತದಲ್ಲಿ ದೇಶದ ಮುಸ್ಲಿಮರು ಅತ್ಯಂತ ಸುರಕ್ಷಿತ ಮತ್ತು ಸಂತೋಷದಿಂದ ಇದ್ದಾರೆ. ಮುಂದೆಯೂ ಹಾಗೆಯೇ ಇರುತ್ತಾರೆ. ನಿಮ್ಮ ಮತಗಳನ್ನು ಬುದ್ಧಿವಂತಿಕೆಯಿಂದ ಚಲಾಯಿಸಿ. ಒಂದು ಸಣ್ಣ ತಪ್ಪು ಕೂಡ ನಿಮ್ಮ ತೊಂದರೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದರು.

  • ಮದರಸಾ ತೆರೆಯಲು ಮುಂದಾದ ಆರ್‌ಎಸ್‌ಎಸ್

    ಮದರಸಾ ತೆರೆಯಲು ಮುಂದಾದ ಆರ್‌ಎಸ್‌ಎಸ್

    ಡೆಹ್ರಾಡೂನ್: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಶೀಘ್ರದಲ್ಲೇ ಉತ್ತರಾಖಂಡದ ಡೆಹ್ರಾಡೂನ್‍ನಲ್ಲಿ ಮದರಸಾವನ್ನು ಸ್ಥಾಪಿಸಲು ಮುಂದಾಗಿದೆ.

    ಆರ್‌ಎಸ್‌ಎಸ್ ಅಂಗ ಸಂಸ್ಥೆಯಾಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ವತಿಯಿಂದ ಧಾರ್ಮಿಕ ಶಿಕ್ಷಣ, ಶಾಲಾ ಶಿಕ್ಷಣ, ಕಂಪ್ಯೂಟರ್ ಶಿಕ್ಷಣವನ್ನೊಳಗೊಂಡಂತೆ ಡೆಹ್ರಾಡೂನ್‍ನಲ್ಲಿ ಮದರಸಾ ಸ್ಥಾಪಿಸಲು ನಿರ್ಧರಿಸಲಾಗಿದೆ. ಈವರೆಗೆ ಎಂಆರ್‌ಎಂ ನಿಂದ 5 ಮದರಸಾವನ್ನು ತೆರೆಯಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್, ಬುಲಂದ್‍ಶಹರ್, ಹಾಪುರದಲ್ಲಿ ತಲಾ ಒಂದು ಮತ್ತು ಮುಝಪ್ಫರ್ ನಗರದಲ್ಲಿ ಎರಡು ಮದರಸಾಗಳನ್ನು ಸಂಘದ ಅಡಿಯಲ್ಲಿ ನಡೆಸಲಾಗುತ್ತಿದೆ.

    ಡೆಹ್ರಾಡೂನ್‍ನಲ್ಲಿ ಮದರಸಾ ನಿರ್ಮಾಣ ಮಾಡಲು ನಿವೇಶನವನ್ನು ಈಗಾಗಲೇ ಖರೀದಿ ಮಾಡಲಾಗಿದೆ. ಹೀಗಾಗಿ 6 ತಿಂಗಳೊಳಗೆ ಮದರಸಾವನ್ನು ನಿರ್ಮಿಸಿ ಕಾರ್ಯರೂಪಕ್ಕೆ ತರಲಾಗುವುದು. ವಿದ್ಯಾರ್ಥಿಗಳಿಂದ ಕಡಿಮೆ ಶುಲ್ಕಗಳನ್ನು ಪಡೆದುಕೊಳ್ಳಲಾಗುವುದು. ಆರಂಭದಲ್ಲಿ 1 ರಿಂದ 3 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಬಳಿಕ ಮುಂದಿನ ತರಗತಿಗಳನ್ನು ವಿಸ್ತರಿಸಲಾಗುವುದು ಎಂದು ಸಂಘದ ಮೂಲಗಳು ತಿಳಿಸಿವೆ.

    ನಮ್ಮ ಮದರಸಾದಲ್ಲಿ ಓದುವ ವಿದ್ಯಾರ್ಥಿಗಳು ಕೇವಲ ಖಾಜಿ (ಷರಿಯಾ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರು), ಕಾರಿಸ್ ( ಮದರಸಾದ ಧಾರ್ಮಿಕ ಶಿಕ್ಷಕ) ಇಮಾಂ (ಸಾಮುದಾಯಿಕ ನಮಾಜ್ ನಾಯಕ), ಮೌಲಾನಾಸ್ ಮತ್ತು ಮುಫ್ತಿ (ಫತ್ವಾ ಹೊರಡಿಸುವವರು) ಆಗುವುದಿಲ್ಲ. ಎಂಜಿನಿಯರುಗಳು, ವೈದ್ಯರು, ವಿಜ್ಞಾನಿಗಳು ಮತ್ತು ಇತರ ವೃತ್ತಿಪರ ಪದವೀಧರರಾಗಿಯೂ ಬದುಕನ್ನು ಕಟ್ಟಿಕೊಳ್ಳಬೇಕೆಂಬ ಗುರಿ ನಮ್ಮದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾವು ಈ ಮದರಸಾವನ್ನು ನಿರ್ಮಾಣ ಮಾಡುತ್ತಿದ್ದೇವೆ ಎಂದು ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಂಆರ್‌ಎಂನ ರಾಷ್ಟ್ರೀಯ ಉಪಸಂಸ್ಥೆ ಪ್ರಧಾನ ಕಾರ್ಯದರ್ಶಿ ತುಷಾರ್ ಕಾಂತ್ ಹಿಂದೂಸ್ತಾನಿ ತಿಳಿಸಿದ್ದಾರೆ.

    ಮಾನವತಾವಾದ ಮತ್ತು ರಾಷ್ಟ್ರೀಯತೆಯನ್ನು ಬೆಳೆಸುವುದೇ, ಹಿಂದೂಸ್ತಾನಿ ಮದರಸಾದ ಗುರಿ. ಎಲ್ಲ ಧರ್ಮದ ಜನರು, ಬಡವ, ಶ್ರೀಮಂತ ಎಂಬ ಬೇದವಿಲ್ಲದೆ ಎಲ್ಲಾ ವರ್ಗದ ಜನರು ಇಲ್ಲಿ ಪ್ರವೇಶಾತಿ ಪಡೆಯಬಹುದು. ಮಕ್ಕಳಿಗೆ ಶಿಕ್ಷಣವನ್ನು ನೀಡುವುದೇ ಇದರ ಮುಖ್ಯ ಉದ್ದೇಶವಾಗಿದೆ ಎಂದರು.

    ನಾವು ಹಿಂದೂಸ್ತಾನಿ ಮದರಸಾಗಳಲ್ಲಿ ಮಾನವೀಯತೆ, ದೇಶಭಕ್ತಿ ಹಾಗೂ ಜೀವನ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಕಲಿಸುತ್ತೇವೆ. ಕೇವಲ ಪುಸ್ತಕದ ಜ್ಞಾನ ಮಾತ್ರವಲ್ಲದೇ ಸಮಾಜದಲ್ಲಿ ಹೇಗೆ ನಡೆದುಕೊಳ್ಳಬೇಕು ಎನ್ನುವ ಬಗ್ಗೆ ನಾವು ಕಲಿಸುತ್ತೇವೆ. ಇಲ್ಲಿ ಕಲಿಯುವ ಮಕ್ಕಳು ಎ.ಪಿ.ಜೆ ಅಬ್ದುಲ್ ಕಲಾಂ, ಆಶ್ಫಾಕುಲ್ಲಾ ಖಾನ್ ತರಹ ಮಾದರಿ ವ್ಯಕ್ತಿಗಳು ಆಗುತ್ತಾರೆಯೇ ಹೊರತು ಅಜ್ಮಲ್ ಕಸಬ್ ರೀತಿ ಆಗುವುದಿಲ್ಲ ಎಂದು ಹೇಳಿದರು.