Tag: MTHL

  • 17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    17,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಅಟಲ್‌ ಸೇತು ರಸ್ತೆಯಲ್ಲಿ ಬಿರುಕು – ಭಾರೀ ಭ್ರಷ್ಟಾಚಾರ ಆರೋಪ; ಬಿಜೆಪಿ ತಿರುಗೇಟು

    – 5 ತಿಂಗಳ ಹಿಂದೆ ಪ್ರಧಾನಿ ಮೋದಿಯಿಂದ ಚಾಲನೆಗೊಂಡಿದ್ದ ʻಅಟಲ್‌ ಸೇತುʼ

    ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ʻಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ʼನಲ್ಲಿ (MTHL) ಬಿರುಕು ಕಾಣಿಸಿಕೊಂಡಿದ್ದು, ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಳೆದ ಐದು ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ (Narendra Modi) ಅಟಲ್‌ ಸೇತುಗೆ ಚಾಲನೆ ನೀಡಿದ್ದರು.

    ಮಹಾರಾಷ್ಟ್ರ ಕಾಂಗ್ರೆಸ್‌ ಘಟಕದ ಅಧ್ಯಕ್ಷ ನಾನಾ ಪಟೋಲೆ (Nana Patole), ರಸ್ತೆ ಮೇಲೆ ಸಂಚರಿಸಿ, ಬಿರುಕು ಬಿಟ್ಟ ಜಾಗವನ್ನು ತೋರಿಸಿ ರಸ್ತೆ ಸುರಕ್ಷತೆಯ ಬಗ್ಗೆ ಪರಿಶೀಲಿಸಿದ್ದಾರೆ. ಜೊತೆಗೆ ಅದರ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ಮರದ ಪಟ್ಟಿಯನ್ನು ಬಿರುಕಿನೊಳಗೆ ಇಳಿಸಿ, ಬಿರುಕಿನ ಆಳದ ಪ್ರಮಾಣವನ್ನು ತೋರಿಸಿದ್ದಾರೆ. ಬಳಿಕ ಭಾರೀ ಭ್ರಷ್ಟಾಚಾರ ನಡೆದಿದೆ ಎಂಬುದಾಗಿಯೂ ಅವರು ಆರೋಪಿಸಿದ್ದಾರೆ.

    ಅಲ್‌ ಸೇತು ಉದ್ಘಾಟನೆಯಾದ ಕೆಲ ತಿಂಗಳಲ್ಲೇ ಸೇತುವೆಯ ಬಳಿ ಅರ್ಧ ಕಿಮೀ ನಷ್ಟು ರಸ್ತೆ ಬಿರುಕು ಬಿಟ್ಟಿದೆ. ನಾನು ಬರೀ ಆರೋಪ ಮಾಡುವ ಬದಲು ನಿಜವಾಗಿಯೂ ಏನಾಗಿದೆ ಎಂಬುದನ್ನು ಜನರಿಗೆ ತೋರಿಸಲು ಬಂದಿದ್ದೇನೆ. ಸರ್ಕಾರವು ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತದೆ. ಆದರೆ, ಇಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ನೋಡಿ. ಸೇತುವೆ ಮೇಲಿನ ರಸ್ತೆ ಬಿರುಕು ಬಿಟ್ಟಿದೆ ಎಂದು ಪಟೋಲೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ED ಜಾಹೀರಾತು ನೋಡುತ್ತಿದ್ದೇವೆ: ಬಾಂದ್ರಾ-ವರ್ಲಿ ಸೀ ಲಿಂಕ್ ಉದಾಹರಿಸಿ ರಶ್ಮಿಕಾಗೆ ಕೇರಳ ಕಾಂಗ್ರೆಸ್‌ ತಿರುಗೇಟು

    ಅಲ್ಲದೇ ಸರ್ಕಾರವು ಜನರ ದುಡ್ಡನ್ನು ಜೇಬಿಗೆ ಇಳಿಸಿಕೊಂಡು, ಜನರ ಪ್ರಾಣವನ್ನು ಅಪಾಯಕ್ಕೆ ತಳ್ಳುತ್ತಿದೆ. ಇಂತಹ ಭ್ರಷ್ಟ ಸರ್ಕಾರವನ್ನು ಜನ ಕಿತ್ತೆಸೆಯಬೇಕು. ಸೇತುವೆಗೆ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಟ್ಟಿದ್ದಾರೆ. ನಮಗೆ ಅವರ ಬಗ್ಗೆ ಗೌರವ ಇದೆ. ಆದರೆ, ಅವರ ಹೆಸರಿನ ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ. ಮೋದಿ ಅವರು ಈ ಕುರಿತು ಗಮನಿಸಬೇಕು ಎಂದು ಆಗ್ರಹಿಸಿದ್ದಾರೆ.

    ಬಿಜೆಪಿ ತಿರುಗೇಟು:
    ನಾನಾ ಪಟೋಲೆ ಅವರ ಆರೋಪಕ್ಕೆ ಆಡಳಿತಾರೂಢ ಬಿಜೆಪಿ ಯೋಜನೆಯ ನೋಡಲ್ ಏಜೆನ್ಸಿಯಾಗಿರುವ ಮುಂಬೈ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಎಂಎಂಆರ್‌ಡಿಎ) ಸ್ಪಷ್ಟನೆ ನೀಡಿದೆ. ಬಿರುಕು ಬಿಟ್ಟಿರುವುದು ಅಟಲ್‌ ಸೇತುವೆಯ ಮೇಲೆ ಅಲ್ಲ, ನವಿ ಉಲ್ವೆಯಿಂದ ಬರುವ ಸರ್ವಿಸ್‌ ರಸ್ತೆಯಲ್ಲಿ ಎಂದು ತಿಳಿಸಿದೆ. ಇದನ್ನೂ ಓದಿ: ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಇನ್ನೂ ಈ ಬಗ್ಗೆ ಸ್ಪಷನೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಅಟಲ್‌ ಸೇತುಗೆ ಯಾವುದೇ ಅಪಾಯವಿಲ್ಲ. ಕಾಂಗ್ರೆಸ್‌ ಆರೋಪ ಸುಳ್ಳು. ಪಟೋಳೆ ಅವರು ಹಂಚಿಕೊಂಡಿರುವ ಚಿತ್ರ ಸರ್ವೀಸ್‌ ರಸ್ತೆಯದ್ದು ಎಂದು ತಿಳಿಸಿದ್ದಾರೆ.

    ಇದು ಸರ್ವಿಸ್ ರಸ್ತೆ, ಇದು ಮುಖ್ಯ ಸೇತುವೆಯ ಸಂಪರ್ಕ ಭಾಗವಾಗಿದೆ. ಇವುಗಳಲ್ಲಿ ಸಣ್ಣಪುಟ್ಟ ಬಿರುಕುಗಳಾಗಿದ್ದು, ಅವುಗಳನ್ನು ದುರಸ್ತಿ ಮಾಡಲಾಗುತ್ತಿದೆ. ಇದರಿಂದಾಗಿ ಯಾವುದೇ ಸಂಚಾರ ವ್ಯತ್ಯಯ ಉಂಟಾಗಿಲ್ಲ ಎಂದು ಅಟಲ್‌ ಸೇತು ಯೋಜನೆ ಮುಖ್ಯಸ್ಥ ಕೈಲಾಶ್ ಗಣತ್ರ ತಿಳಿಸಿದ್ದಾರೆ. ಇದನ್ನೂ ಓದಿ: ಕೇಂದ್ರದ ಸಾಧನೆ ಹಾಡಿಹೊಗಳಿದ ರಶ್ಮಿಕಾ ಮಂದಣ್ಣಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

    5 ತಿಂಗಳ ಹಿಂದೆ ಉದ್ಘಾಟನೆ:
    ಕಳೆದ 5 ತಿಂಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಸೇತುವೆಯನ್ನು ಉದ್ಘಾಟಿಸಿದ್ದರು. ನಟಿ ರಶ್ಮಿಕಾ ಮಂದಣ್ಣ ಸಹ ಈ ಸೇತುವೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

  • ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

    ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (Mumbai Trans Harbour Link) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆಗೊಳಿಸಿದ್ದಾರೆ. ಈ ಸೇತುವೆಗೆ ʻಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನ್ಹವ ಶೇವಾ ಅಟಲ್ ಸೇತುʼ ಎಂದು ಹೆಸರಿಡಲಾಗಿದೆ.

    ಈ ಸಮುದ್ರ ಸೇತುವೆಯ ಮೂಲಕ ಎರಡು ಮಹಾನಗರಗಳ ಸಂಪರ್ಕ ಸುಲಭವಾಗಿದೆ. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

    ಸೇತುವೆಯ ವಿಶೇಷತೆ ಏನು?
    ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

    ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

    1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

    ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದೂಡಲಾಗಿತ್ತು. ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 17,840 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು. ಇದನ್ನೂ ಓದಿ: ರಾಮಮಂದಿರ ಥೀಮ್‌ನ ಬನಾರಸಿ ಸೀರೆಗಳಿಗೆ ಹೊರ ದೇಶಗಳಲ್ಲೂ‌ ಇದೆ ಬೇಡಿಕೆ- ವಿಶೇಷತೆ ಏನು..?

  • ಜ.12 ರಂದು ದೇಶದ ಅತಿ ಉದ್ದದ ಸಮುದ್ರ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಮೋದಿ

    ಜ.12 ರಂದು ದೇಶದ ಅತಿ ಉದ್ದದ ಸಮುದ್ರ ಸೇತುವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಮೋದಿ

    ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆಯಾದ (India’s Longest Sea Bridge) ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್(MTHL) ಅನ್ನು ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಲೋಕಾರ್ಪಣೆ ಮಾಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Maharashtra Chief Minister Eknath Shinde) ಹೇಳಿದ್ದಾರೆ.

    ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಎಂದು ಸಿಎಂ ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು (ಶುಕ್ರವಾರ) MTHL ಅನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆಯಿಂದ ಆರ್ಥಿಕ ಅಭಿವೃದ್ಧಿಯಾಗಲಿದೆ ಎಂದು ಶಿಂಧೆ ಮಾಧ್ಯಮಗಳಿಗೆ ತಿಳಿಸಿದರು.

    ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. MTHL 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ʼಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತುʼ ಎಂದು ಹೆಸರನ್ನು ಇಡಲಾಗುತ್ತದೆ. ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಭಕ್ತರಿಗೆ ಸಲಹೆ

    ಸೇತುವೆಯ ವಿಶೇಷತೆ ಏನು?
    ಈ ಯೋಜನೆಯು ಸರಿಸುಮಾರು 22 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ.

    1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

    ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌ ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದಕ್ಕೆ ಹೋಗಿ ಈಗ ಜನವರಿಯಲ್ಲಿ ಉದ್ಘಾಟನೆಯಾಗುತ್ತಿದೆ.

    ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 16,904.43 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು. ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

  • ಮಹಾರಾಷ್ಟ್ರ ರಸ್ತೆಗಳಿಗೆ ಸಾವರ್ಕರ್‌, ವಾಜಪೇಯಿ ಹೆಸರು ಮರು ನಾಮಕರಣ

    ಮಹಾರಾಷ್ಟ್ರ ರಸ್ತೆಗಳಿಗೆ ಸಾವರ್ಕರ್‌, ವಾಜಪೇಯಿ ಹೆಸರು ಮರು ನಾಮಕರಣ

    ಮುಂಬೈ: ಎರಡು ಪ್ರಮುಖ ರಸ್ತೆಗಳಿಗೆ ಮಹಾರಾಷ್ಟ್ರ (Maharashtra) ಸರ್ಕಾರ ಮರುನಾಮಕರಣ ಮಾಡಿದೆ. ವರ್ಸೋವಾ-ಬಾಂದ್ರಾ ಸೀ ಲಿಂಕ್ ಅನ್ನು ವೀರ ಸಾವರ್ಕರ್ ಸೇತು (Veer Savarkar Setu) ಮತ್ತು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಅಟಲ್ ಬಿಹಾರಿ ವಾಜಪೇಯಿ ಸ್ಮೃತಿ ನ್ಹವ ಶೇವಾ ಅಟಲ್ ಸೇತು (Atal Bihari Vajpayee Smruti Nhava Sheva Atal Setu) ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ.

    ವಿನಾಯಕ ದಾಮೋದರ್ ಸಾವರ್ಕರ್ ಹಿಂದೂ ರಾಷ್ಟ್ರೀಯವಾದಿ ನಾಯಕ. 1910 ರಲ್ಲಿ ಅವರನ್ನು ಬಂಧಿಸಿ 1911 ರಲ್ಲಿ 50 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸೆಲ್ಯುಲರ್ ಜೈಲಿನಲ್ಲಿ ಶಿಕ್ಷೆ ಅನುಭವಿಸಿದರು. 1921 ರಲ್ಲಿ ‘ಎಸೆನ್ಷಿಯಲ್ಸ್ ಆಫ್ ಹಿಂದುತ್ವ’ ಎಂಬ ಪುಸ್ತಕವನ್ನು ಬರೆದರು. ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿದೆ ದರೋಡೆ ಕೇಸ್‌ – ಅಮಿತ್‌ ಶಾ ವಿರುದ್ಧ ಆಕ್ರೋಶ

    ಅಟಲ್ ಬಿಹಾರಿ ವಾಜಪೇಯಿ ಮಾಜಿ ಪ್ರಧಾನಮಂತ್ರಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಕೂಟದ ಅಧ್ಯಕ್ಷರಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]