Tag: MUDA Record

  • ಸಿದ್ದರಾಮಯ್ಯರನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

    ಸಿದ್ದರಾಮಯ್ಯರನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಿ – ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ

    – ಸಾಕ್ಷಿಗಳ ನಾಶ ಮಾಡ್ತಿದ್ದಾರೆ, ಭಾಷಣದ ಮೂಲಕ ಪ್ರಚೋದನೆ ಕೊಡ್ತಿದ್ದಾರೆಂದು ಆರೋಪ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ (MUDA Scam) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಲೋಕಾಯುಕ್ತ ವಿಚಾರಣೆಗೆ ಒಳಪಡಿಸುವಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮನವಿ ಸಲ್ಲಿಸಿದ್ದಾರೆ.

    ಸೋಮವಾರ ಮೈಸೂರಿನ ಲೋಕಾಯುಕ್ತ ಕಚೇರಿಗೆ ಬಂದು ಸ್ನೇಹಮಹಿ ಕೃಷ್ಣ (Snehamayi Krishna), ಲೋಕಾಯುಕ್ತಕ್ಕೆ ಪತ್ರದ ಮೂಲಕ ಮನವಿ ಸಲ್ಲಿಕೆ ಮಾಡಿದ್ದಾರೆ. ಅಕ್ಟೋಬರ್‌ 10ರಂದು ವಾಟ್ಸಪ್‌ ಮೂಲಕ ಮನವಿ ಮಾಡಿದ್ದ ಸ್ನೇಹಮಯಿ ಕೃಷ್ಣ ಸೋಮವಾರ ಖುದ್ದು ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: MUDA Scam | ಮೊದಲ ಹಂತದ ತನಿಖೆ ಮುಕ್ತಾಯ – 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆ ಸೀಜ್‌

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯರನ್ನು ವಿಚಾರಣೆಗೆ ಒಳಪಡಿಸಬೇಕು. ಅವರು ಸಾಕ್ಷಿಗಳ ನಾಶ ಮಾಡುತ್ತಿದ್ದಾರೆ. ಮುಚ್ಚಿಡುತ್ತಿದ್ದಾರೆ. ಭಾಷಣದಲ್ಲಿ ಪ್ರಚೋದನೆ ನೀಡುತ್ತಿದ್ದಾರೆ. ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ವಿಚಾರಣೆಗೆ ಒಳಪಡಿಸಿ, ಬಂಧಿಸಿ ಎಂದು ಮನವಿ ಮಾಡಿದ್ದಾರೆ.

    ಲೋಕಾಯುಕ್ತ ಕಚೇರಿಗೆ ಕೂಡಲೆ ಸಿಸಿಟಿವಿ ಅಳವಡಿಸಿ, ಕೆಪಿಸಿಸಿ ವಕ್ತಾರರು ಪದೇ ಪದೇ ಲೋಕಾಯುಕ್ತ ಕಚೇರಿಗೆ ಬರುತ್ತಿದ್ದಾರೆ ಎಂಬ ಮಾಹಿತಿ ಇದೆ ಎಂದು ದೂರಿದ್ದಾರೆ. ಇದನ್ನೂ ಓದಿ: ದಸರಾ ಸಂಭ್ರಮದಲ್ಲಿದ್ದ ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

    1935 ರಿಂದ 2010ರ ವರೆಗಿನ ಎಲ್ಲಾ ದಾಖಲೆ ಸೀಜ್‌:
    ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ (Lokayukta) ಮೊದಲ ಹಂತದ ತನಿಖೆ ಈಗಾಗಲೇ ಮುಕ್ತಾಯಗೊಂಡಿದ್ದು, 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್‌ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಗುರುವಾರ ಲೋಕಾಯುಕ್ತ ತಂಡ ಇಬ್ಬರು ಆರೋಪಿಗಳನ್ನ ಸುದೀರ್ಘ 10 ತಾಸುಗಳ ವಿಚಾರಣೆಗೆ ಒಳಪಡಿಸಿತ್ತು. ಇಬ್ಬರು ಆರೋಪಿಗಳಿಂದ 1935 ರಿಂದ 2010ರ ವರೆಗಿನ ಎಲ್ಲಾ ವ್ಯವಹಾರದ ಬಗ್ಗೆ ಮಾಹಿತಿ ಪಡೆದುಕೊಂಡಿತ್ತು. ಇದೇ ವೇಳೆ ಕೆಸರೆಯಲ್ಲಿ ಸರ್ವೆ ನಂಬರ್‌ 426ರ ಮೂರುಕಾಲು ಎಕರೆ ಭೂಮಿಯ ವಾರಸುದಾರಿಕೆ ಕುರಿತು ವಿಚಾರಣೆ ನಡೆಸಲಾಗಿತ್ತು.

    ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ಎ4 ಆರೋಪಿ ದೇವರಾಜು ಹಲವು ದಾಖಲೆಗಳನ್ನು ಸಲ್ಲಿಸಿದರು. ನಂತರ ಎ3 ಆರೋಪಿಯಿಂದಲೂ ದಾಖಲೆಗಳನ್ನು ಪಡೆದು ಮಾಹಿತಿ ಕಲೆಹಾಕಿತ್ತು ಲೋಕಾಯುಕ್ತ ಟೀಂ.

  • MUDA Scam | ಮೊದಲ ಹಂತದ ತನಿಖೆ ಮುಕ್ತಾಯ – 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆ ಸೀಜ್‌

    MUDA Scam | ಮೊದಲ ಹಂತದ ತನಿಖೆ ಮುಕ್ತಾಯ – 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆ ಸೀಜ್‌

    ಮೈಸೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಲೋಕಾಯುಕ್ತದ (Lokayukta) ಮೊದಲ ಹಂತದ ತನಿಖೆ ಮುಕ್ತಾಯಗೊಂಡಿದ್ದು, 1935 ರಿಂದ 2010ರ ವರೆಗಿನ ಎಲ್ಲಾ ದಾಖಲೆಗಳನ್ನು ಸೀಜ್‌ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಗುರುವಾರ ಲೋಕಾಯುಕ್ತ ತಂಡ ಇಬ್ಬರು ಆರೋಪಿಗಳನ್ನ ಸುದೀರ್ಘ 10 ತಾಸುಗಳ ವಿಚಾರಣೆಗೆ ಒಳಪಡಿಸಿತ್ತು. ಇಬ್ಬರು ಆರೋಪಿಗಳಿಂದ 1935 ರಿಂದ 2010ರ ವರೆಗಿನ ಎಲ್ಲಾ ವ್ಯವಹಾರದ ಬಗ್ಗೆ ಮಾಹಿತಿ ಪಡೆದುಕೊಂಡಿತ್ತು. ಇದೇ ವೇಳೆ ಕೆಸರೆಯಲ್ಲಿ ಸರ್ವೆ ನಂಬರ್‌ 426ರ ಮೂರುಕಾಲು ಎಕರೆ ಭೂಮಿಯ ವಾರಸುದಾರಿಕೆ ಕುರಿತು ವಿಚಾರಣೆ ನಡೆಸಲಾಗಿತ್ತು.

    ವಿಚಾರಣೆ ಸಂದರ್ಭದಲ್ಲಿ ಪ್ರಕರಣದ ಎ4 ಆರೋಪಿ ದೇವರಾಜು ಹಲವು ದಾಖಲೆಗಳನ್ನು ಸಲ್ಲಿಸಿದರು. ನಂತರ ಎ3 ಆರೋಪಿಯಿಂದಲೂ ದಾಖಲೆಗಳನ್ನು ಪಡೆದು ಮಾಹಿತಿ ಕಲೆಹಾಕಿತ್ತು ಲೋಕಾಯುಕ್ತ ಟೀಂ. ಇದನ್ನೂ ಓದಿ: ದಸರಾ ಸಂಭ್ರಮದಲ್ಲಿದ್ದ ಮೈಸೂರು ರಾಜಪರಿವಾರಕ್ಕೆ ಹೊಸ ಅತಿಥಿಯ ಆಗಮನ – 2ನೇ ಮಗುವಿಗೆ ಜನ್ಮ ನೀಡಿದ ತ್ರಿಷಿಕಾ

    2ನೇ ಹಂತದ ಅ.14ರಿಂದ ತನಿಖೆ ಶುರು:
    ಮೊದಲ ಹಂತದ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ತಂಡ ಅಕ್ಟೋಬರ್‌ 14ರಿಂದ 2ನೇ ಹಂತದ ತನಿಖೆ ನಡೆಸಲಿದೆ. ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಮುಂದಿನ 10 ದಿನಗಳಲ್ಲಿ ನೋಟಿಸ್‌ ಕೊಡುವ ಸಾಧ್ಯತೆಗಳಿವೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನವರಾತ್ರಿಯ 9ನೇ ದಿನ ಆಯುಧ ಪೂಜೆ – ಖಾಸಾ ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ

    ಅಧಿಕಾರಿಗಳು ಪಾರ್ವತಮ್ಮಗೆ ನೋಟಿಸ್ ನೀಡುವ ಮುನ್ನ ಯಾವ ಯಾವ ಅನುಮಾನದ ಆಧಾರದ ಮೇಲೆ ನೋಟಿಸ್ ನೀಡ್ತಿದ್ದೇವೆ ಎಂಬ ಟಿಪ್ಪಣಿ ಸಿದ್ಧ ಮಾಡಿಕೊಳ್ಳಲಾಗುತ್ತದೆ. 2010 ರಿಂದ ಕೆಸರೆ ಜಾಗದ ವಿಚಾರದಲ್ಲಿ ನಡೆದ ಎಲ್ಲಾ ಪತ್ರ ವ್ಯವಹಾರಗಳ ಕುರಿತು ಪಾರ್ವತಮ್ಮ ಬಳಿಯಿಂದ ಹೇಳಿಕೆ ಪಡೆಯಲು ಪ್ರಶ್ನಾವಳಿ ತಯಾರಿಗೂ ಮುಂದಾಗಿದ್ದಾರೆ. ಪಾರ್ವತಮ್ಮ ವಿಚಾರಣೆ ಬಳಿಕ ಅವರು ನೀಡುವ ಹೇಳಿಕೆಗಳ ಆಧರಿಸಿ ಸಿಎಂಗೆ ನೋಟಿಸ್ ಕೊಡಬೇಕೋ ಬೇಡವೋ ಅನ್ನೋದನ್ನು ತೀರ್ಮಾನ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.