Tag: MUDA Scam

  • ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ

    ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ

    – ಪ್ರಕರಣ ಕೋರ್ಟ್‌ ತನಿಖೆಯಲ್ಲಿದ್ದಾಗ ಸೈಟು ವಾಪಸ್‌ ಪಡೆಯಬಹುದೇ?

    ಬೆಂಗಳೂರು: ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರ ಪತ್ನಿ ಸೈಟು ವಾಪಸ್‌ ನೀಡಿದ ಬೆನ್ನಲ್ಲೇ ವಿಪಕ್ಷಗಳ ನಡುವಿನ ವಾಗ್ದಾಳಿ ಇನ್ನಷ್ಟು ತೀವ್ರಗೊಂಡಿದೆ. ಈ ನಡುವೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನು ಬಂಧಿಸಬೇಕು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಆಗ್ರಹಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನ ವಾಪಸ್ ಪಡೆದರು ಅನ್ನೋದು ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತನಿಖೆ ನಡೆಯುವಾಗ ಸೈಟ್ ವಾಪಸ್ ಪಡೆಯಬಹುದೇ? ಅದನ್ನ ಬೇರೆಯವರಿಗೆ ಹಂಚಬಹುದೇ?; ಮುಡಾ ಆಯುಕ್ತ ಹೇಳಿದ್ದೇನು?

    ಮೂಡಾ ಸೈಟ್ ವಿಚಾರದಲ್ಲಿ ಅಧಿಕಾರಿಗಳು ಸಿಎಂ ಪರ ಕೆಲಸ ಮಾಡ್ತಿದ್ದಾರೆ. ಕೋರ್ಟ್‌ನಲ್ಲಿ 62 ಕೋಟಿ ಬೆಲೆ ಬಾಳುವ ಜಾಗವದು, ನಮಗೆ 62 ಕೋಟಿ ನೀಡಿ ಜಾಗ ವಾಪಸ್ ಪಡೆಯಿರಿ ಅಂತಾ ಹೇಳಿದ್ದು, ಈಗ ತನಿಖೆಯ ದಿಕ್ಕು ತಪ್ಪಿಸಲು ಸೈಟ್ ವಾಪಸ್ ಕೊಡೋ ಡ್ರಾಮವನ್ನ ಮಾಡಿದ್ದಾರೆ. ಕೋರ್ಟ್‌ನಲ್ಲಿ ಕೇಸ್ ಇದೆ. ಮೂಡಾ ಆಯುಕ್ತರು ಯಾವ ಆಧಾರದ ಮೇಲೆ ಕೇಸ್ ವಾಪಸ್ ಪಡೆದ್ರು ಅನ್ನೋದು ತನಿಖೆಯಾಗಬೇಕು. ಲೋಕಾಯುಕ್ತದವರು ಮೊದಲು ಮೂಡಾ ಆಯುಕ್ತರನ್ನ ಬಂಧಿಸಬೇಕು, ಜಾರಿ ನಿರ್ದೇಶನಾಲಯವು ಮುಡಾ ವಿಚಾರದಲ್ಲಿ ತನಿಖೆ ಶುರು ಮಾಡ್ತಿದ್ದಂತೆ ಈ ರೀತಿ ಯಾಕೆ ಮಾಡಿದ್ರು ಎಂದು ಪ್ರಶ್ನೆ ಮಾಡಿದ್ದಾರೆ.

    ಹಣ ಅಕ್ರಮ ವರ್ಗಾವಣೆ ಆಗಿಲ್ಲ ಅಂತಿದ್ದಾರೆ. 62 ಕೋಟಿ ಅಂದಿದ್ದು ಯಾರು? ನನ್ನ ರಾಜೀನಾಮೆ ಯಾಕ್ ಕೇಳ್ತಾರೆ? ನನ್ನನ್ನ ಏನೂ ಮಾಡಲು ಆಗಲ್ಲ. ನಿನ್ನೆ ಕೂಡ ನನ್ನ ಮೇಲೆ ಎಫ್‌ಐಆರ್‌ ಆಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇದನ್ನೂ ಓದಿ: 14 ಸೈಟ್‌ ಕೇಸ್‌ಗಿಂತಲೂ ಇದು ದೊಡ್ಡ ಪ್ರಕರಣ – ಹಳೆಯ ಡಿನೋಟಿಫಿಕೇಶನ್‌ ಕೆದಕಿ ಸಿಎಂಗೆ ಹೆಚ್‌ಡಿಕೆ ಗುದ್ದು

    ಮುಡಾ ಆಯುಕ್ತರು ಹೇಳಿದ್ದೇನು?
    ಸಿಎಂ ಪತ್ನಿ ಪಾರ್ವತಮ್ಮ ಸಿದ್ದರಾಮಯ್ಯ ಅವರು ಸ್ವಇಚ಼್ಛೆಯಿಂದ ಸೈಟ್‌ ವಾಪಸ್‌ ಮಾಡಿದ್ದರ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರದ ಆಯುಕ್ತ ರಘನಂದನ್ ಪ್ರತಿಕ್ರಿಯೆ ನೀಡಿದ್ದರು. ಈಗ ಸ್ವ ಇಚ್ಛೆಯಿಂದ ಸೈಟ್ ವಾಪಸ್ ಕೊಟ್ಟಿದ್ದಾರೆ. ಕಾನೂನು ಪರಿಗಣಿಸಿ ನಾವು ಪಾರ್ವತಮ್ಮ ಅವರ ಹೆಸರಿನಲ್ಲಿ ಇದ್ದ 14 ಸೈಟ್‌ಗಳ ಸೇಲ್ ಡೀಡ್ ರದ್ದು ಮಾಡಿದ್ದೇವೆ. ಈಗ 14 ನಿವೇಶನ ಮುಡಾ ವ್ಯಾಪ್ತಿಗೆ ಬಂದಿವೆ. ಈ ಸೈಟ್‌ಗಳನ್ನು ಬೇರೆಯವರಿಗೆ ಹಂಚಬಹುದಾ ಅಥವಾ ತನಿಖೆ ಮುಗಿಯುವವರೆಗೂ ಅದನ್ನು ಹಂಚಬಾರದ ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇವೆ. ಪಾರ್ವತಿ ಅವರ ಸೈಟ್‌ಗಳು ತಮ್ಮ ವಶಕ್ಕೆ ಪಡೆದ ಬಗ್ಗೆ ತನಿಖಾ ಸಂಸ್ಥೆಗಳಿಗೆ ಮಾಹಿತಿ ಕೊಡುತ್ತೇವೆ ಎಂದಿದ್ದರು.

    ಮುಡಾ ಕಾರ್ಯದರ್ಶಿ ಹೇಳಿದ್ದೇನು?
    1991ನ ರೂಲ್ಸ್ 8ನಲ್ಲಿ ಸ್ವ ಇಚ್ಚೆಯಿಂದ ಸೈಟ್ ಕೊಡಬಹುದು. ಆ ಸೈಟ್ ಅನ್ನು ನಾವು ಪಡೆದುಕೊಳ್ಳಲು ಅವಕಾಶವಿದೆ. ನಮ್ಮ ಬಳಿ ಮಾಲೀಕರು ಬಂದಿಲ್ಲ. ಅವರೇ ಖಾಸಗಿಯಾಗಿಯೂ ಅಧಿಕಾರಿಗಳನ್ನು ಕರೆಸಿಕೊಳ್ಳಬಹುದು. ಅದರಂತೆ ಅವರ ಸ್ಥಳಕ್ಕೆ ಹೋಗಿ ಪ್ರಕ್ರಿಯೆ ನಡೆಸಲಾಗುತ್ತದೆ. ನಾವು ಈಗ ಸೈಟ್ ವಾಪಸ್ ಪಡೆದುಕೊಂಡಿದ್ದೇವೆ. ಈಗ ಇದನ್ನು ರಿಜಿಸ್ಟರ್‌ಗೆ ಕಳುಹಿಸಿಕೊಟ್ಟಿದ್ದೇವೆ. ಮುಂದಿನ ಎಲ್ಲಾ ಪ್ರಕ್ರಿಯೆಯನ್ನು ರಿಜಿಸ್ಟರ್ ಮಾಡುತ್ತಾರೆ ಎಂದು ಮೈಸೂರು ಮುಡಾ (MUDA) ಕಾರ್ಯದರ್ಶಿ ಪ್ರಸನ್ನ ಕುಮಾರ್ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: MUDA Scam | ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ: ಪ್ರತಾಪ್‌ ಸಿಂಹ ಪ್ರಶ್ನೆ

  • ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲ ನಾಟಕ – ರಮೇಶ ಜಿಗಜಿಣಗಿ

    ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲ ನಾಟಕ – ರಮೇಶ ಜಿಗಜಿಣಗಿ

    – ಸಿಎಂ ಸಲಹೆಯಿಂದಲೇ ಅವರ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ

    ವಿಜಯಪುರ: ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲ ನಾಟಕ ಎಂದು ಹೇಳುವ ಮೂಲಕ ಸಿಎಂ ಪತ್ನಿ ಮುಡಾ ಸೈಟ್ (MUDA Site) ವಾಪಸ್ ನೀಡಿರುವ ವಿಚಾರವಾಗಿ ಸಂಸದ ರಮೇಶ ಜಿಗಜಿಣಗಿ (Ramesh Jigajinagi) ವಾಗ್ದಾಳಿ ನಡೆಸಿದ್ದಾರೆ.

    ಜಿಲ್ಲೆಯಲ್ಲಿ ಮಾತನಾಡಿದ ಅವರು, ಸಿಎಂ ಯಾಕೆ ಸೈಟ್ ತಗೋಬೇಕಿತ್ತು? ಸೈಟ್ ತಗೊಂಡ ಮೇಲೆ ವಾಪಸ್ ಯಾಕೆ ಕೊಡಬೇಕು? ತಪ್ಪು ಮಾಡಿದ್ದಾರೆ ಅದಕ್ಕೆ ವಾಪಸ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ (CM Siddaramaiah) ಸಲಹೆಯಿಂದಲೇ ಅವರ ಪತ್ನಿ ಸೈಟ್ ವಾಪಸ್ ನೀಡಿದ್ದಾರೆ. ನಮ್ಮ ಮನೆಯಲ್ಲಿ ನಾನು ಹೇಳದೇ ನನ್ನ ಹೆಂಡತಿ ತೀರ್ಮಾನ ಮಾಡ್ತಾಳಾ? ಇದೆಲ್ಲವೂ ನಾಟಕ? ಸೈಟ್ ವಾಪಸ್ ನೀಡಿದ್ದು ನಾಟಕ? ಎಂದರು.ಇದನ್ನೂ ಓದಿ: ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ಕಿತ್ತೂರು ರಾಣಿ ಚನ್ನಮ್ಮ – ಸಿಎಂ

    ರಾಮಕೃಷ್ಣ ಹೆಗಡೆಯವರಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ. ನಾನು ಹಿಂದೆನೇ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಯೋಗ್ಯ ಎಂದು ಹೇಳಿದ್ದೆ. ಈಗ ಸಿಎಂ ಕೆಸರಲ್ಲಿ ಸಿಕ್ಕು ಒದ್ದಾಡುತ್ತಿದ್ದಾರೆ. ಕೆಸರಲ್ಲಿ ಸಿಕ್ಕು ಒದ್ದಾಡುವಾಗ ಯಾರು ಬದುಕಿಸುತ್ತಾರೆ? ರಾಜಕಾರಣ ಗಬ್ಬೆದ್ದು ನಾರುತ್ತಿದೆ. ಎಲ್ಲ ಪಕ್ಷಗಳಲ್ಲೂ ಇದೆ ಸ್ಥಿತಿಯಿದೆ. ಎಲ್ಲರೂ ಸೇರಿಕೊಂಡೆ ರಾಜಕಾರಣವನ್ನ ಗಬ್ಬು ಹಿಡಿಸಿದ್ದೇವೆ. ಎಲ್ಲ ಪಕ್ಷಗಳು ನಿಷ್ಠೆಯಿಂದ ಕೆಲಸ ಮಾಡುತ್ತಿವೆ. ನಾವು ರಾಜಕಾರಣಿಗಳು ಗಬ್ಬು ಹಿಡಿಸಿದ್ದೇವೆ ಎಂದು ಸದ್ಯದ ರಾಜಕೀಯದ ಬಗ್ಗೆ ಅಸಮಧಾನ ಹೊರಹಾಕಿದರು.

    ಇದೇ ವೇಳೆ ದಲಿತರ ಗೌಪ್ಯ ಮೀಟಿಂಗ್ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್‌ನಲ್ಲಿ (Congress) ದಲಿತರ ಗೌಪ್ಯ ಮೀಟಿಂಗ್ ನಾಟುವುದಿಲ್ಲ. ದೆಹಲಿಯಿಂದ ಏನು ಬರುತ್ತದೆ ಅದು ಮಾತ್ರ ನಾಟುತ್ತದೆ. ಜನುಮದಲ್ಲಿ ಕಾಂಗ್ರೆಸ್‌ನವರು ದಲಿತರನ್ನು ಸಿಎಂ ಮಾಡಲ್ಲ. ಇದು ಸತ್ಯ. ಕಾಂಗ್ರೆಸ್‌ನ ದಲಿತರು ಕನಸು ಕಾಣುತ್ತಿದ್ದಾರೆ ಅಷ್ಟೇ. ಮಹದೇವಪ್ಪ ಹುಚ್ಚನಿದ್ದಾನೆ. ಪೈಪೋಟಿ ನಡೆಯುತ್ತದೆ ಅದರಿಂದ ಏನು ನಡೆಯಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: HMT ಕ್ಯಾಂಪಸ್‌ನಲ್ಲಿ ಪೌರ ಕಾರ್ಮಿಕರೊಂದಿಗೆ ಕಸ ಗುಡಿಸಿದ ಹೆಚ್‌ಡಿಕೆ

  • ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ: ಬೋಸರಾಜು

    ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ: ಬೋಸರಾಜು

    ರಾಯಚೂರು: ಮುಡಾ ಪ್ರಕರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ಪತ್ನಿ ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು (NS Bosaraju) ಪ್ರತಿಕ್ರಿಯಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ (CM Siddaramaiah) ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ ನಡೆದಿದೆ. ಇದಕ್ಕೆ ಬೇಸರಗೊಂಡು ನ್ಯಾಯಬದ್ಧವಾಗಿ ಪಡೆದಿರುವ ಸೈಟ್‌ಗಳನ್ನು ಸಿಎಂ ಪತ್ನಿ ವಾಪಸ್ ಕೊಟ್ಟಿದ್ದಾರೆ. ಪಾರ್ವತಿಯವರ ನಿರ್ಧಾರ ಉತ್ತಮವಾಗಿದೆ. ನಾವು ಅಭಿನಂದಿಸುತ್ತೇವೆ ಎಂದರು.ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – ತುಮಕೂರು ಜೈಲಿನಿಂದ ಮೂವರು ರಿಲೀಸ್!

    ಬಿಜೆಪಿಯವರಿಗೆ (BJP) ನ್ಯಾಯ, ಅಭಿವೃದ್ಧಿ ಬೇಕಿಲ್ಲ. ಕೇವಲ ಕುತಂತ್ರ ರಾಜಕೀಯ ಮಾತ್ರ ಬೇಕು. ನ್ಯಾಯ ಅನ್ಯಾಯದ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಮಾಡಬೇಕು ಎಂದು ಕೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯ ವಾಚ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿರುವ ವಿಚಾರದ ಕುರಿತು ಮಾತನಾಡಿ ವಿದೇಶದಲ್ಲಿದ್ದ ಸ್ನೇಹಿತರು ಬಂದು ವಾಚ್ ಕೊಟ್ಟಿದ್ದರು. ಅದರ ಬಗ್ಗೆ ಟೀಕೆ ಟಿಪ್ಪಣಿಗಳು ಬಂದ ಕೂಡಲೇ ತಕ್ಷಣ ಸರೆಂಡರ್ ಮಾಡಿದ್ದಾರೆ. ಜವಾಬ್ದಾರಿಯುತ ಜನಪ್ರತಿನಿಧಿ ಮಾಡಬೇಕಾದ ಕೆಲಸ ಮಾಡಿದ್ದಾರೆ. ಅದು ತಪ್ಪಾ? ಕುಮಾರಸ್ವಾಮಿ (HD Kumaraswamy) ಅವರ ಕುಟುಂಬ ಮಾಡಿದ ಹಾಗೆ ಕಳ್ಳತನ ಮಾಡಬೇಕಿತ್ತಾ? ಅವರು ಯಾವ ರೀತಿ ಲೂಟಿ ಮಾಡಿ ಸಾವಿರಾರು ಕೋಟಿ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿಲ್ವಾ? ಇದನ್ನೆಲ್ಲಾ ಮಾಡಿರುವವರ ಮಾತುಗಳಿಗೆ ದೇಶ ಹಾಗೂ ರಾಜ್ಯದ ಜನರು ಹೆಚ್ಚು ಗಮನ ಕೊಡುವ ಅವಶ್ಯಕತೆಯಿಲ್ಲ ಎಂದ ಹೇಳಿದರು.

    ಯಡಿಯೂರಪ್ಪನವರು (BS Yadiyurappa) ಯಾಕೆ ಜೈಲಿಗೆ ಹೋಗಬೇಕಿತ್ತು? ಅವರ ಅಕೌಂಟ್‌ಗೆ ಎಂಟು ಕೋಟಿ ಲಂಚ ನೇರವಾಗಿ ಬಂದಿತ್ತು. ಹಾಗಾಗಿ ಅವರ ಕೇಂದ್ರದ ನಾಯಕರು ಅವರಿಗೆ ರಾಜಿನಾಮೆ ಮಾಡಲು ಹೇಳಿದ್ದರು. ನಾವು ಹೇಳಿಲ್ಲ. ಆ ತರಹದ ಪ್ರಶ್ನೆ ಸಿದ್ದರಾಮಯ್ಯನವರ ವಿಷಯದಲ್ಲಿ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: Israel | ಜಾಫಾದಲ್ಲಿ ಉಗ್ರರಿಂದ ಮನ ಬಂದಂತೆ ಗುಂಡಿನ ದಾಳಿಗೆ 8 ಬಲಿ

  • ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ, ರಾಜೀನಾಮೆ ಕೊಡಲ್ಲ: ಸಿಎಂ ಸ್ಪಷ್ಟನೆ

    ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ, ರಾಜೀನಾಮೆ ಕೊಡಲ್ಲ: ಸಿಎಂ ಸ್ಪಷ್ಟನೆ

    ಬೆಂಗಳೂರು: ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

    ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಹೆಂಡತಿ ಸ್ವತಂತ್ರವಾಗಿ ತೀರ್ಮಾನ ಕೈಗೊಂಡಿದ್ದಾರೆ. ನನ್ನ ಜೊತೆಗೆ ಚರ್ಚೆ ಮಾಡಿಲ್ಲ. ಅವರ ಸಹೋದರ ನೀಡಿದ ಜಮೀನು ಅದು. ಮುಡಾದವರು ಅವರನ್ನು ಸ್ವಾಧೀನಕ್ಕೆ ಪಡೆದುಕೊಂಡು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿದ್ದರು. ಬದಲಿ ನಿವೇಶನವಾಗಿ ವಿಜಯ ನಗರದಲ್ಲಿ ನೀಡಿದ್ದರು. ಮುಡಾಗೆ ನಾವೇನು ಅಲ್ಲೇ ಕೊಡಿ ಎಂದು ಕೇಳಿರಲಿಲ್ಲ. ಅವರೇ ವಿಜಯನಗರದಲ್ಲಿ (Vijayanagara) ಕೊಟ್ಟಿದ್ದರು. ಆದರೆ ಈಗ ವಿವಾದದಿಂದ ಮನನೊಂದು ನನ್ನ ಯಜಮಾನರಿಗೆ ರಾಜಕೀಯ ತೇಜೋವಧೆ ಆಗುತ್ತಿದೆ. ಹಾಗಾಗಿ ಸೈಟ್ ಬೇಡವೇ ಬೇಡ ಎಂದು ವಾಪಸ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ನೆಲಮಂಗಲ – ಹಿರಿಯ ಇತಿಹಾಸ ತಜ್ಞ ಗೋಪಾಲ ರಾವ್ ವಿಧಿವಶ

    ಮುಡಾ ಕೇಸ್‌ನಲ್ಲಿ (MUDA Scam) ಇಡಿ ಎಫ್‌ಐಆರ್ ದಾಖಲು ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾನೂನು ಏನಾದರೂ ಕ್ರಮ ಕೈಗೊಳ್ಳಲಿ. ಯಾವ ಆಧಾರದಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಗೊತ್ತಿಲ್ಲ. ಈ ಪ್ರಕರಣದಲ್ಲಿ ಹಣಕಾಸು ವರ್ಗಾವಣೆ ಆಗಿಲ್ಲ(ಮನಿ ಲ್ಯಾಂಡ್ರಿಗ್) ನನ್ನ ಪಾತ್ರ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದರು. ಇದನ್ನೂ ಓದಿ: ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು: ಸುಪ್ರೀಂ

    ಸೈಟ್ ವಾಪಸ್ ನೀಡಿ ತಪ್ಪು ಒಪ್ಪಿಕೊಂಡಿದ್ದಾರೆ ಅನ್ನೋ ಬಿಜೆಪಿ (BJP) ಆರೋಪಕ್ಕೆ ತಿರುಗೇಟು ಕೊಟ್ಟ ಅವರು, ಹೇಗೆ ತಪ್ಪು ಒಪ್ಪಿದಂತಾಗುತ್ತದೆ? ನನ್ನ ಹೆಂಡತಿ ಮನನೊಂದು ಸೈಟ್ ವಾಪಸ್ ಮಾಡಿದ್ದಾರೆ. ಬಿಜೆಪಿಗರು ಸುಳ್ಳು ಹೇಳೋದರಲ್ಲಿ ನಿಸ್ಸೀಮರು. ರಾಜೀನಾಮೆ ಕೊಟ್ಟರೆ ಮುಗಿದು ಹೋಗುತ್ತಾ? ನಾನು ತಪ್ಪೇ ಮಾಡಿಲ್ಲವಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ

    ಯಡಿಯೂರಪ್ಪನವರದು (B S Yediyurappa) ನನ್ನದು ಬೇರೆ ಬೇರೆ ಪ್ರಕರಣ. ಅವರು ಡಿನೋಟಿಫಿಕೇಷನ್ ಮಾಡಿದ್ದಾರೆ. ನಾನೇನು ಮಾಡಿದ್ದೇನಾ? ನನ್ನ ಆದೇಶ ಪತ್ರ ವ್ಯವಹಾರ ಇತ್ತಾ? ಆ ಪ್ರಕರಣಕ್ಕೆ ಇದಕ್ಕೆ ಸಂಬಂಧ ಇಲ್ಲ. ನಾನು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದೇನೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

  • ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ

    ಅಣ್ಣನಿಗೆ ಆಗದೇ ಇರೋರು ಹಗರಣ ಮಾಡಿದ್ದಾರೆ, ಸಿದ್ದರಾಮಯ್ಯ ರಾಜೀನಾಮೆ ಕೊಡಬಾರದು: ಸಿಎಂ ಸಹೋದರ

    ಮಂಡ್ಯ/ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ತಪ್ಪು ಮಾಡಿದ್ದಾರೋ ಇಲ್ಲವೋ ನಮಗೆ ಗೊತ್ತಿಲ್ಲ. ಅವರು ರಾಜೀನಾಮೆ ಕೊಡುವುದು ನಮಗೆ ಇಷ್ಟ ಇಲ್ಲ. ನಮ್ಮ ಅಣ್ಣನಿಗೆ ಆಗದೇ ಇರುವವರು ಹಗರಣ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಸಹೋದರ ಸಿದ್ದೇಗೌಡ (Siddegowda) ಹೇಳಿದ್ದಾರೆ.

    ಮೈಸೂರಿನ (Mysuru) ಸಿದ್ದರಾಮನ ಹುಂಡಿಯಲ್ಲಿ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಏನಾದರೂ ಮಾಡಿ ಕೆಡವಬೇಕೆಂದು ಹೀಗೆ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಅವರ ವಿರುದ್ಧ ಈ ರೀತಿಯ ಆರೋಪ ಮಾಡುತ್ತಿದ್ದಾರೆ. ಈಗ ಸೈಟ್ ಹಿಂದಕ್ಕೆ ಕೊಡುತ್ತಿದ್ದಾರೆ ಎಂದು ಹೇಳುತ್ತಾರೆ. ತಪ್ಪು ನಡೆದಿದೆಯೋ ಇಲ್ಲವೋ ಗೊತ್ತಿಲ್ಲ. ಪಾರ್ವತಮ್ಮ ಅವರಿಗೆ ಕುಂಕುಮ ರೂಪದಲ್ಲಿ ಜಮೀನು ಕೊಟ್ಟಿರೋದು ನಮಗೆ ಗೊತ್ತಿಲ್ಲ. ವಿಜಯನಗರದಲ್ಲಿ ಸೈಟ್ ಕೊಟ್ಟಿರೋದು ಗೊತ್ತಿಲ್ಲ ಎಂದರು. ಇದನ್ನೂ ಓದಿ: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ – ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ 67 FIR

    ಸಿದ್ದರಾಮಯ್ಯ ಅವರಿಗೂ ಈ ವಿಚಾರ ಗೊತ್ತಿಲ್ಲ. ಈಗ ಅವರನ್ನು ರಾಜೀನಾಮೆ ಕೇಳಿದರೆ ಹೇಗೆ ಕೊಡೋಕೆ ಆಗುತ್ತೆ. 40 ವರ್ಷದಿಂದ ಸಿದ್ದರಾಮಯ್ಯ ಕೆಟ್ಟ ಹೆಸರು ತಗೊಂಡಿರಲಿಲ್ಲ. ಈಗ ಇವರು ಆರೋಪ ಮಾಡುತ್ತಿದ್ದಾರೆ. ನಮ್ಮ ಬಳಿ ಇರೋದು ಎಲ್ಲಾ ಪಿತ್ರಾರ್ಜಿತ ಆಸ್ತಿ. ನಾವು ಖರೀದಿ ಮಾಡಿದ ಜಮೀನು ಇಲ್ಲ. ಸಿದ್ದರಾಮಯ್ಯ ಅವರು ಈ ಬಗ್ಗೆ ನಮ್ಮ ಜೊತೆ ಏನೂ ಹೇಳಿಕೊಂಡಿಲ್ಲ. ಅವರು ನೊಂದಿದ್ದಾರೆ ಎಂದು ನಮಗೆ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಗದಗದಲ್ಲಿ ಜೆಡಿಎಸ್ ಪ್ರೊಟೆಸ್ಟ್

  • ಸೈಟ್ ವಾಪಸ್ ಕೊಟ್ಟು ಸಿಎಂ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ : ಬೊಮ್ಮಾಯಿ

    ಸೈಟ್ ವಾಪಸ್ ಕೊಟ್ಟು ಸಿಎಂ ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ : ಬೊಮ್ಮಾಯಿ

    ಹುಬ್ಬಳ್ಳಿ: ಸೈಟ್ ವಾಪಸ್ ಕೊಡುವ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮತ್ತಷ್ಟು ಸಂಕಷ್ಟವನ್ನು ಮೈಮೇಲೆ ಎಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್ (MUDA Site) ವಾಪಸ್ ಕೊಟ್ಟಿರುವ ವಿಚಾರವಾಗಿ ಈ ಕೆಲಸವನ್ನು ಅವರು ಮೊದಲೇ ಮಾಡಬೇಕಿತ್ತು. ಹೈಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತನಿಖೆ ಮಾಡಿಸಿದ್ದರೆ ಮುಗಿದಿತ್ತು. ಸಿದ್ದರಾಮಯ್ಯ ಅವರ ಪ್ರಾಮಾಣಿಕತೆ ಬಗ್ಗೆ ಪ್ರಶ್ನೆ ಬರುತ್ತಿರಲಿಲ್ಲ. ಆದರೆ ಆಗ ಸಮರ್ಥನೆ ಮಾಡಿಕೊಂಡರು ಎಂದು ಪ್ರತಿಕ್ರಿಯೆ ನೀಡಿದರು.ಇದನ್ನೂ ಓದಿ: ರಾಯಚೂರಿನಿಂದ ಬೀದರ್‌ಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 6 ಲಾರಿಗಳ ಜಪ್ತಿ

    ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಟ್ಟು, ಪ್ರಕರಣ ದಾಖಲಾಗಿ, ಈಗ ತನಿಖೆ ಆರಂಭವಾಗಿದೆ. ಈಗ ಸೈಟ್ ವಾಪಸ್ ಕೊಟ್ಟಿರುವುದರಿಂದ ಹಲವಾರು ಪ್ರಶ್ನೆಗಳು ಉದ್ಭವಿಸಿವೆ. ವಾಪಸ್ ಕೊಡುವ ಮೂಲಕ ಮೂಲಕ ಮತ್ತಷ್ಟು ಜಟಿಲ ಮಾಡಿಕೊಂಡಿದ್ದಾರೆ. ಎಫ್‌ಐಆರ್ ಆದ ಮೇಲೆ ತನಿಖೆ ಆಗಲೇಬೇಕು. ಒಂದು ಕಡೆ ಲೋಕಾಯುಕ್ತ ತನಿಖೆ ನಡೆದಿದೆ. ಮತ್ತೊಂದು ಕಡೆ ಇಡಿ ಎಫ್‌ಐಆರ್ ಮಾಡಿಕೊಂಡು ತನಿಖೆ ಮಾಡುತ್ತಿದೆ. ಕಾಂಗ್ರೆಸ್ (Congress) ನಾಯಕರು ತಪ್ಪೇ ನಡೆದಿಲ್ಲ ಎಂದು ಹೇಳುತ್ತಿದ್ದರು ಎಂದು ತಿಳಿಸಿದರು.

    ಸೈಟ್ ವಾಪಸ್ ಕೊಡುವ ಮೂಲಕ ತಪ್ಪಾಗಿದೆ ಎನ್ನುವುದು ಒಪ್ಪಿಕೊಂಡಂತಾಗಿದೆ. ಈ ಹಿಂದೆ ಯಡಿಯೂರಪ್ಪ ಸೈಟ್ ವಾಪಸ್ ಮಾಡಿದಾಗ ಇದೇ ಸಿದ್ದರಾಮಯ್ಯ ಏನು ಹೇಳಿದ್ದರು ಎಂದು ನೆನಪಿಸಿಕೊಳ್ಳಲಿ. ಆಗ ಸಿದ್ದರಾಮಯ್ಯ ಸೈಟ್ ವಾಪಸ್ ಮಾಡುವ ಮೂಲಕ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದರು. ಇದೇ ಮಾತು ಈಗ ಸಿದ್ದರಾಮಯ್ಯ ಅವರಿಗೂ ಅನ್ವಯ ಆಗುತ್ತದೆ. ಸೈಟ್ ವಾಪಸ್‌ನೊಂದಿಗೆ ಸೈಟು ಹಂಚಿಕೆ ಕಾನೂನುಬಾಹಿರವಾಗಿ ಹಾಗೂ ಅಕ್ರಮವಾಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಯುಕೆ ಸಂಸತ್‌ನಲ್ಲಿ ಬಸವಣ್ಣನ `ಇವನ್ಯಾರವ’ ವಚನ ಪಠಿಸಿ ಕನ್ನಡ ಪ್ರೇಮ ಮೆರೆದ ಆದೀಶ್

  • MUDA Scam | ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ: ಪ್ರತಾಪ್‌ ಸಿಂಹ ಪ್ರಶ್ನೆ

    MUDA Scam | ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ: ಪ್ರತಾಪ್‌ ಸಿಂಹ ಪ್ರಶ್ನೆ

    – ಮಕ್ಕಳನ್ನು ಬೆಳೆಸಲು ಮುಂದಾದರೆ ಹೆಸರಿಗೆ ಕಳಂಕ ತರ್ತಾರೆ
    – ವರುಣಾ ಚುನಾವಣೆ ವೇಳೆ ಸೈಟ್‌ ದಾಖಲಾತಿ ಬಂದಿತ್ತು

    ಮೈಸೂರು: ಹೊಗಳು ಭಟ್ಟರು ಬಹುಪರಾಕ್ ಹಾಕುವವರನ್ನು ಇಟ್ಟುಕೊಂಡ ಪರಿಣಾಮ ಸಿಎಂ ಸಿದ್ದರಾಮಯ್ಯನವರಿಗೆ (CM Siddaramaiah) ಈ ಸ್ಥಿತಿ ಬಂದಿದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಹೇಳಿದ್ದಾರೆ.

    ಸಿದ್ದರಾಮಯ್ಯನವರ ಪತ್ನಿ 14 ಸೈಟ್‌ ಅನ್ನು ಮರಳಿ ಮುಡಾಕ್ಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ. ಒಡವೆ ಕದ್ದ ಕಳ್ಳ ಒಡವೆ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ? ಇಲ್ಲ‌ ಅಲ್ವಾ? ಎಂದು ಪ್ರಶ್ನಿಸಿದರು.

    ಎರಡೂವರೆ ತಿಂಗಳ ಹಿಂದೆಯೇ ನಾನು ಸಿಎಂಗೆ ನಿಮಗೆ ಬಂದ ಅಕ್ರಮ ಸೈಟ್ ವಾಪಸ್‌ ಕೊಟ್ಟು ಬಿಡಿ ಎಂದು ಹೇಳಿದ್ದೆ. ಸಿಎಂ ಅವರ ಇಷ್ಟು ವರ್ಷದ ರಾಜಕೀಯ ಜೀವನವನ್ನು 14 ಸೈಟ್ ನುಂಗಬಾರದು ಎಂದು ಅಂದೇ ಹೇಳಿದ್ದೆ. ಎರಡೂವರೆ ತಿಂಗಳ ಹಿಂದೆ ವಾಪಸ್ ಕೊಟ್ಟಿದ್ದರೆ ಇವತ್ತು ಪ್ರಾಸಿಕ್ಯೂಷನ್, ಕೇಸ್ ಏನೂ ಆಗುತ್ತಿರಲಿಲ್ಲ. ಕುರ್ಚಿಯೂ ಅಲುಗಾಡುತ್ತಿರಲಿಲ್ಲ ಎಂದರು.

    ಸಿಎಂ ತಮ್ಮ ಸೈಟ್‌ಗೆ 64 ಕೋಟಿ ರೂ. ಕೇಳಿದ ದಿನವೇ ಸಿಎಂ ಮೇಲಿನ ಗೌರವ, ವಿಶ್ವಾಸ ನೆಲ ಕಚ್ಚಿತು. ಈಗ ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟರೂ ಅಷ್ಟೇ. ಕೊಡದಿದ್ದರೂ ಅಷ್ಟೇ. ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.

     

    ವರುಣಾ ಚುನಾವಣೆ ಸಂದರ್ಭದಲ್ಲೇ ನನಗೆ ಈ ಸೈಟ್ ದಾಖಲಾತಿ ಬಂದಿತ್ತು. ಪತ್ನಿ ಹೆಸರಿದೆ ವೈಯಕ್ತಿಕ ದಾಳಿ ಬೇಡ ಎಂದು ಸುಮ್ಮನಿದ್ದೆ. ರಾಜಕಾರಣಿಗಳೇ ನಿಮ್ಮ ಹೆಂಡತಿ, ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ. ಈ ಹಿಂದೆ ಸಿಎಂಗಳಾಗಿ ಜೈಲಿಗೆ ಹೋಗಿದ್ದು ಅವರ ಕುಟುಂಬದ, ಮಕ್ಕಳ ಕಾರಣಕ್ಕಾಗಿ ಎಂಬುದು ನೆನಪಿರಲಿ ಎಂದರು.

    ಈಗ ಸಿಎಂ ಪತ್ನಿಯ ಭಾವನಾತ್ಮಕ ಕಾರ್ಡ್ ಕೆಲಸ ಮಾಡುವುದಿಲ್ಲ. ಪಾರ್ವತಮ್ಮ ಅವರಿಗೆ ತಮ್ಮ ಪತಿಯ ತಪಸ್ಸಿನ ರೀತಿಯ ರಾಜಕಾರಣಕ್ಕಿಂತಾ ಸೈಟ್ ಮುಖ್ಯವಾಗಿ ಇಷ್ಟು ದಿನ ಹಠ ಹಿಡಿದು ಕೂತಿದ್ದೆ ಬಹುದೊಡ್ಡ ತಪ್ಪು. ಈಗ ಸೈಟ್ ವಾಪಸ್ ಕೊಡುವುದಾಗಿದ್ದರೆ ಹೈಕೋರ್ಟ್‌ನಲ್ಲಿ ಹೋರಾಟ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿದರು.

     

  • MUDA Scam| ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

    MUDA Scam| ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ಮತ್ತೊಂದು ಇಸಿಐಆರ್‌(ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ.

    2022ರಲ್ಲಿ ಲೋಕಾಯುಕ್ತ (Lokayukta) ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಇದನ್ನೂ ಓದಿ: ವಿಮಾನ ಪತನಗೊಂಡ 56 ವರ್ಷಗಳ ಬಳಿಕ 4 ಮೃತದೇಹಗಳು ಪತ್ತೆ

    ಹಿನಕಲ್ ಸರ್ವೇ ನಂಬರ್ 89ರಲ್ಲಿ ಮುಡಾದಿಂದ ನಿವೇಶನ ಹಂಚಿಕೆಯಾಗಿತ್ತು. 350 ಕ್ಕೂ ಹೆಚ್ಚು ಪ್ರಭಾವಿಗಳಿಗೆ 7.18 ಎಕರೆ ಜಮೀನನ್ನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ  2017ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ. ಇದನ್ನೂ ಓದಿ: ಪ್ರಜ್ವಲ್‌ ಪ್ರಕರಣಕ್ಕೆ ಭವಾನಿಯನ್ನು ಎಳೆ ತಂದಾಗ ಸರಿ ಅನ್ನಿಸಿತ್ತಾ: ಕಾಂಗ್ರೆಸ್‌ಗೆ ಟೀಕೆಗೆ ಅಶೋಕ್‌ ಪ್ರಶ್ನೆ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆ.9ರಂದು 18 ಅಧಿಕಾರಿಗಳಿಗೆ ಲೋಕಾಯುಕ್ತ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.

    14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸೆ.30 ರಂದು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿತ್ತು. ಇಡಿಯಿಂದ ECIR ದಾಖಲಾದ ಬೆನ್ನಲ್ಲೇ ಸಿಎಂ ಅವರ ಪತ್ನಿ ಪಾರ್ವತಿ ಅವರು 14 ಸೈಟ್‌ಗಳನ್ನು ಮುಡಾಗೆ ನೀಡುವುದಾಗಿ ಪತ್ರ ಬರೆದಿದ್ದರು.

     

  • ಮುಡಾ ಸೈಟ್ ವಾಪಸ್ ನೀಡಿರುವುದು ಒಳ್ಳೆಯ ನಿರ್ಧಾರ – ಪರಮೇಶ್ವರ್

    ಮುಡಾ ಸೈಟ್ ವಾಪಸ್ ನೀಡಿರುವುದು ಒಳ್ಳೆಯ ನಿರ್ಧಾರ – ಪರಮೇಶ್ವರ್

    ಬೆಂಗಳೂರು: ಮುಡಾ ಸೈಟ್ (MUDA Site) ವಾಪಾಸ್ ನೀಡಿರುವುದು ಒಳ್ಳೆಯ ನಿರ್ಧಾರ ಎಂದು ಸಿಎಂ ಪತ್ನಿ ಮುಡಾ ಸೈಟ್ ವಾಪಸ್ ನೀಡಿರುವ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ( G.Parameshwar) ಹೇಳಿದ್ದಾರೆ.ಇದನ್ನೂ ಓದಿ: ನಟ ಗೋವಿಂದ ಕಾಲಿಗೆ ಗುಂಡೇಟು – ಆಸ್ಪತ್ರೆಗೆ ದಾಖಲು : ಆಗಿದ್ದೇನು?

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ಮನೆಯಲ್ಲಿ ಯಜಮಾನರಿಗೆ ತೊಂದರೆ ಆಗುತ್ತಿದೆ ಅಥವಾ ತೇಜೋವಧೆ ಆಗುತ್ತಿದೆ ಎನ್ನವುದು ಅವರಿಗೆ ಗೊತ್ತಾಗಿದೆ. ಅದಕ್ಕಾಗಿ ವಾಪಸ್ ಮಾಡುತ್ತೇನೆ ಎಂದಿದ್ದಾರೆ. ಇದೊಂದು ಒಳ್ಳೆಯ ನಿರ್ಧಾರ ಅನಿಸುತ್ತದೆ. ತನಿಖೆ ಇರಲಿ ಆಪಾದನೆ ಬಂದ ತಕ್ಷಣ ಇದು ಸತ್ಯ ಆಗುವುದಿಲ್ಲ. ಆದರೆ ಇಷ್ಟು ದಿನ ರಾಜಕೀಯಕ್ಕೆ ಉಪಯೋಗಿಸುತ್ತಿದ್ದಾರೆ ಎನ್ನುವುದು ಅವರ ಅಭಿಪ್ರಾಯ ಅಷ್ಟೇ ಎಂದರು.

    ಕಾನೂನು ದೃಷ್ಟಿಯಲ್ಲಿ ಮುಂದೆ ಏನಾಗುತ್ತದೆ ಗೊತ್ತಿಲ್ಲ. ಸರೆಂಡರ್ ಮಾಡಿದ ಮೇಲೆ ಏನಾಗುತ್ತದೆ ಎಂದು ಗೊತ್ತಿಲ್ಲ. ರಾಜಕೀಯಕ್ಕೆ ಉಪಯೋಗ ಮಾಡುತ್ತಿದ್ದಾರೆ. ನನಗೆ ಮರ್ಯಾದೆ ಮುಖ್ಯ ಅನ್ನುವುದು ಅವರ ಭಾವನೆಯಾಗಿದೆ. ಹಾಗಾಗಿಯೇ ಮುಡಾ ಸೈಟುಗಳನ್ನು ವಾಪಸ್ ನೀಡಿದ್ದಾರೆ. ಆದರೆ ಮುಡಾ (MUDA Scam) ವಿಚಾರ ಬಿಜೆಪಿಯವರಿಗೆ (BJP) ರಾಜಕೀಯಕ್ಕೆ ಉಪಯೋಗ ಆಗುತ್ತಿದೆ ಎನ್ನುವುದು ಖಾತ್ರಿಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಅಂದು ಹುಬ್ಲೋಟ್‌ ವಾಚ್‌, ಇಂದು ಮುಡಾ ಸೈಟ್‌ಗಳು! – ಭಾರೀ ಚರ್ಚೆಗೆ ಗ್ರಾಸವಾಗಿದ್ದ ಗಿಫ್ಟ್‌

  • `ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಸಿಎಂಗೆ ಅನ್ವಯ- ವಿಜಯೇಂದ್ರ

    `ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಸಿಎಂಗೆ ಅನ್ವಯ- ವಿಜಯೇಂದ್ರ

    ಬೆಂಗಳೂರು: ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆ ಮಾತು ಸಿಎಂಗೆ (CM Siddaramaiah) ಅನ್ವಯವಾಗುತ್ತದೆ ಎಂದು ಮುಡಾ ಪ್ರಕರಣ (MUDA Scam) ಸಂಬಂಧ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

    ಮುಡಾ ಪ್ರಕರಣ ಸಂಬಂಧಿಸಿದಂತೆ ಸಿಎಂ ಪತ್ನಿ ಪಾರ್ವತಿ (Parvathi Siddaramaiah) ಸೈಟ್ ವಾಪಸ್ಸು ಕೊಡುವುದಾಗಿ ತಿಳಿಸಿದ ಮೇಲೆ ತಮ್ಮ ಎಕ್ಸ್ (X) ಖಾತೆಯಲ್ಲಿ ಟ್ವೀಟ್ ಹಾಕಿಕೊಂಡಿದ್ದಾರೆ.ಇದನ್ನೂ ಓದಿ: MUDA Case| ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ: ಸಿದ್ದರಾಮಯ್ಯ

    ಸಿಎಂ ಸಿದ್ದರಾಮಯ್ಯರಿಗೆ ರಾಜೀನಾಮೆಯೊಂದೇ ಉಳಿದಿರುವ ದಾರಿ. ‘ಕೆಟ್ಟ ಮೇಲೆ ಬುದ್ಧಿ ಬಂತು’ ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ. ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಅಂದು ಸಿಎಂ ಆರ್ಭಟಿಸಿದ್ದರು. ಮಾನ್ಯ ಸಿದ್ದರಾಮಯ್ಯನವರು ಇಂದು ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.

    ಬಿಜೆಪಿ (BJP) ಆರೋಪಗಳನ್ನು ಸಾರಾಸಗಟಾಗಿ ನಿರಾಕರಿಸಿದರು. ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿದ್ದೇವು. ಆರೋಪಿಸಿ ನಾವು ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದಿದ್ದರು. ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದ್ದರು. ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು ಎಂದು ಆಗ್ರಹಿಸಿದರು.

    ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, ಸಿಬಿಐ-ಇಡಿ (CBI-ED) ತನಿಖೆಗಳ ನಿರೀಕ್ಷೆಯಿಂದ ಬೆದರಿದ ಮುಖ್ಯಮಂತ್ರಿಗಳು ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಅವರು ಕಾನೂನು ಹೋರಾಟಕ್ಕೆ ಮುನ್ನವೇ ಶಸ್ತ್ರ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ. ಅಂದ ಮಾತ್ರಕ್ಕೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಅಂದುಕೊಂಡಿದ್ದರೆ ಅದು ಅವರ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ. ನಿವೇಶನಗಳನ್ನು ಹಿಂದಿರುಗಿಸಿ ತಪ್ಪೊಪ್ಪಿಕೊಂಡಂತೆ ಸಿಎಂ ಸ್ಥಾನಕ್ಕೂ ರಾಜೀನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರಜ್ಞೆ ಪ್ರದರ್ಶಿಸಿದಂತಾಗುತ್ತದೆ ಎಂದು ಹೇಳಿದರು.ಇದನ್ನೂ ಓದಿ: Davanagere | ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ದುರ್ಮರಣ