Tag: MUDA Scam

  • ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್‌

    ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್‌

    ಬೆಂಗಳೂರು: ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಬಾಂಬ್‌ ಸಿಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇವೇಗೌಡರ (HD Devegowda) ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ (Siddaramaiah) ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದ್ದಾರೆ.

    ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: 1982-2024: ಇಸ್ರೇಲ್‌ vs ಹಿಜ್ಬುಲ್ಲಾ ನಡುವೆ ನಿಲ್ಲದ ಸಂಘರ್ಷ – 42 ವರ್ಷಗಳ ರಕ್ತಸಿಕ್ತ ಚರಿತ್ರೆ ಬಗ್ಗೆ ನಿಮಗೆಷ್ಟು ಗೊತ್ತು?

    ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ ಹೆಚ್‌ಡಿಕೆ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ.  ಅವರ ವಿರುದ್ಧ  ತನಿಖೆ ಮಾಡಬೇಕು ಎಂದು ಸವಾಲು ಹಾಕಿದ ಅವರು ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

     

  • MUDA Case| ರಾಜಧರ್ಮ ಪಾಲಿಸದಿದ್ದರೆ ಅದು ರಾವಣ ರಾಜ್ಯ ಆಗಲಿದೆ: ಕೋರ್ಟ್ ಆದೇಶದಲ್ಲಿ ಏನಿದೆ?

    MUDA Case| ರಾಜಧರ್ಮ ಪಾಲಿಸದಿದ್ದರೆ ಅದು ರಾವಣ ರಾಜ್ಯ ಆಗಲಿದೆ: ಕೋರ್ಟ್ ಆದೇಶದಲ್ಲಿ ಏನಿದೆ?

    ಬೆಂಗಳೂರು: ಮುಡಾ ಪ್ರಕರಣಕ್ಕೆ (MUDA Case) ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರಾಜಧರ್ಮ ಪಾಲಿಸದಿದ್ದರೆ ಅದು ರಾವಣ ರಾಜ್ಯ ಆಗಲಿದೆ. ರಾಮ ರಾಜ್ಯವೋ? ರಾವಣ ರಾಜ್ಯವೋ? ಅದು ನಿಮ್ಮ ಕೈಯಲ್ಲಿದೆ ಎಂಬ ಗಂಭೀರ ಅಭಿಪ್ರಾಯವನ್ನು ತನ್ನ ಆದೇಶದಲ್ಲಿ ವ್ಯಕ್ತಪಡಿಸಿತ್ತು.

    ಸಿಎಂ ಸಿದ್ದರಾಮಯ್ಯ ವಿರುದ್ಧ ವಿರುದ್ಧ ಲೋಕಾಯುಕ್ತ ತನಿಖೆಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (A Special Court ) ಆದೇಶ ನೀಡಿತ್ತು. ಈ ಆದೇಶ ಪ್ರತಿಯಲ್ಲಿ ಆಡಳಿತ ಮತ್ತು ಆಡಳಿತಗಾರರ ಕುರಿತಾಗಿ ನ್ಯಾಯಾಧೀಶರಾದ ಸಂತೊಷ್ ಗಜಾನನ ಭಟ್ ಅವರು ವ್ಯಕ್ತಪಡಿಸಿದ ಕೆಲವು ಗಂಭೀರ ಅಭಿಪ್ರಾಯಗಳು ಗಮನ ಸೆಳೆದಿವೆ. ಇದನ್ನೂ ಓದಿ: ಸಿಎಂ ವಿರುದ್ಧ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ವಂಚನೆ ಕೇಸ್‌ – RTI ಕಾರ್ಯಕರ್ತ ಸ್ಪಷ್ಟನೆ

    ಕೋರ್ಟ್ ಹೇಳಿದ್ದು ಏನು?
    ರಾಮ ಜೋಯಿಸರ `ರಾಜಧರ್ಮ ವಿತ್ ಲೆಸೆನ್ಸ್ ಆನ್ ರಾಜನೀತಿ’ ಕೃತಿಯ ಸಾಲುಗಳ ಉಲ್ಲೇಖಿಸಿದ ನ್ಯಾಯಾಧೀಶರು ಚುನಾಯಿತ ಜನಪ್ರತಿನಿಧಿಗಳ ಸರ್ಕಾರ ಆಡಳಿತದಲ್ಲಿದೆ. ಆಡಳಿತದಲ್ಲಿ ಇರುವವರು ರಾಜಧರ್ಮ ಪಾಲಿಸಬೇಕು.

    ರಾಜಧರ್ಮ ಪಾಲಿಸದಿದ್ದರೆ ಅದು ರಾವಣ (Ravana) ರಾಜ್ಯ ಆಗಲಿದೆ. ರಾಮ (Rama) ರಾಜ್ಯವೋ? ರಾವಣ ರಾಜ್ಯವೋ? ಅದು ನಿಮ್ಮ ಕೈಯಲ್ಲಿದೆ. ಗಾಂಧೀಜಿ ರಾಮರಾಜ್ಯ, ಮಾದರಿ ಸಮಾಜದ ಕನಸು ಕಂಡಿದ್ದರು. ಆಡಳಿತದಲ್ಲಿ ಇರುವವರು ಪಾರದರ್ಶಕವಾದ ಆಡಳಿತ ನೀಡಬೇಕು. ಆಡಳಿತಗಾರರು ನೈತಿಕತೆ ಮತ್ತು ಸೌಹಾರ್ದತೆ ಪಾಲಿಸಬೇಕು. ರಾಜನ ನಡೆಯಲ್ಲಿ ಯಾವುದೇ ಸಂಶಯಗಳಿಗೆ ಅವಕಾಶವಿರಬಾರದು. ಇದನ್ನೂ ಓದಿ: MUDA Scam| ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

    ರಾಮ ಜೋಯಿಸರ `ರಾಜಧರ್ಮ ವಿತ್ ಲೆಸೆನ್ಸ್ ಆನ್ ರಾಜನೀತಿ’ ಕೃತಿಯಲ್ಲಿ ಮಹಾತ್ಮ ಗಾಂಧೀಜಿಯವರ (Gandhiji) ರಾಮರಾಜ್ಯದ ಕಲ್ಪನೆ, ಆಡಳಿತಗಾರರು ಪಾಲಿಸಬೇಕಾದ ನೈತಿಕತೆ, ಸೌಹಾರ್ದತೆ ಕುರಿತು ಹೇಳಿದ್ದರು. ಅಷ್ಟೇ ಅಲ್ಲದೇ ಮಹಾಭಾರತ ಶಾಂತಿ ಪರ್ವದಲ್ಲಿನ ಆಡಳಿತ ನಡೆಸುವ ರಾಜನ ನಡೆಯಲ್ಲಿ ಯಾವುದೇ ಸಂಶಯಗಳಿಗೆ ಅವಕಾಶವಿರಬಾರದು ಎಂಬ ಸಾಲುಗಳನ್ನು ಜಡ್ಜ್ ಉಲ್ಲೇಖಿಸಿದ್ದಾರೆ.

     

  • MUDA Scam| ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

    MUDA Scam| ಸಿಬಿಐ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

    ಬೆಂಗಳೂರು/ಮೈಸೂರು: ಮಡಾ ಹಗರಣದ (MUDA Scam) ತನಿಖೆಯನ್ನು ಸಿಬಿಐಗೆ (CBI) ವರ್ಗಾಯಿಸುವಂತೆ ಕೋರಿ ದೂರುದಾರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರು ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಿದ್ದಾರೆ.

    ಮುಂದಿನ ವಾರ ಹೈಕೋರ್ಟ್‌ ಈ ಅರ್ಜಿಯ ವಿಚಾರಣೆಯನ್ನು ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ಇಂದು ಸಿಗಲಿಲ್ಲ ದರ್ಶನ್ ಗೆ ಜಾಮೀನು: ಸೆ.30ಕ್ಕೆ ಬೇಲ್ ಭವಿಷ್ಯ

    ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ,  ಮುಂದಿನ ವಾರ ನಾನು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬರಬಹುದು. ಇಂತಹ ಪ್ರಕರಣದಲ್ಲಿ ಪ್ರಭಾವ ಬೀರುವ ಸಾಧ್ಯತೆಯಿದೆ. ಹೀಗಾಗಿ ಹೀಗಾಗಿ ಸಿಎಂ ವಿರುದ್ಧದ ಪ್ರಕರಣವನ್ನ ಸಿಬಿಐ ತನಿಖೆ ಮಾಡಬೇಕು. 50 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಹಗರಣಗಳನ್ನ ಸಿಬಿಐ ತನಿಖೆ ಮಾಡಬೇಕೆಂಬ ನಿರ್ದೇಶನ ಇದೆ ಎಂದರು.

     

    ಈ ಹೋರಾಟಕ್ಕೆ ಅನೇಕ ಸಾಮಾಜಿಕ ಕಾರ್ಯಕರ್ತರು, ಒಂದು ತಂಡ ಕೆಲಸ ಮಾಡಿದೆ. ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ನಾನು ಮಾಡಿರುವ ಆರೋಪವನ್ನ ಸಾಬೀತು ಪಡಿಸುತ್ತೇನೆ ಎಂದು ತಿಳಿಸಿದರು.

    ಸಿಎಂ ವಿರುದ್ಧ ಎಫ್‌ಐಆರ್‌ ದಾಖಲಾಗುವ ಮುನ್ನ ಮಧ್ಯಾಹ್ನ ಮಾತನಾಡಿದ್ದ ಸ್ನೇಹಮಯಿ ಕೃಷ್ಣ, ಎರಡು ದಿನ ಕಳೆದರೂ ಎಫ್‌ಐಆರ್‌ (FIR) ದಾಖಲಿಸಿಲ್ಲ. ಬೇಕಂತಲೇ ಲೋಕಾಯುಕ್ತ ಎಸ್ಪಿ ಎಫ್ಐಆರ್ ದಾಖಲು ಮಾಡಲು ವಿಳಂಬ ಮಾಡುತ್ತಿದ್ದಾರೆ. ಆದೇಶದಲ್ಲಿ ಸ್ಪಷ್ಟವಾಗಿ ಸಿಆರ್‌ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್‌ ಹೇಳಿದೆ. ಇದೆಲ್ಲ ಎಸ್‌ಎಸ್‌ಎಲ್‌ಸಿ ಓದಿರುವ ನನಗೆ ಅರ್ಥ ಆಗುತ್ತದೆ. ಅಧಿಕಾರಿಗೆ ಅರ್ಥ ಆಗಲ್ವಾ? ನ್ಯಾಯಾಲಯಕ್ಕಿಂತ ಇವರು ದೊಡ್ಡವರಾ ಎಂದು ಪ್ರಶ್ನಿಸಿದ್ದರು.

    ಪೊಲೀಸರು ಮೊಬೈಲ್ ಹೊರಗಿಟ್ಟು ಬನ್ನಿ ಅಂತಾರೆ. ಮೊಬೈಲ್‌ಗೆ ಹೆದರಿಕೊಳ್ಳುವ ಅಧಿಕಾರಿಗೆ ಸಿಎಂ ವಿರುದ್ಧ ಕ್ರಮ ಕೈಗೊಳ್ಳುತ್ತಾರಾ? ಇಂಥ ಅಧಿಕಾರಿಗೆ ದೂರು ಕೊಟ್ಟು ಪ್ರಯೋಜನ ಇಲ್ಲ‌. ಇಂದು ಕೂಡ ಎಫ್ಐಆರ್ ದಾಖಲು ಮಾಡದೇ ಇದ್ದರೆ ಲೋಕಾಯುಕ್ತ ಪೊಲೀಸರ ವಿರುದ್ಧವೇ ಕೇಸ್ ದಾಖಲು ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯಗೆ ಸಮಯ ಸಿಗಲಿ ಎಂಬ ಕಾರಣಕ್ಕೆ ಈ ರೀತಿಯ ನಾಟಕ ಮಾಡ್ತಿದ್ದಾರೆ. ಇಂದು ಒಂದು ದಿನ ಕಳೆದರೆ ನಾಳೆ ಮತ್ತು ನಾಳಿದ್ದು ರಜೆ ಇದೆ‌. ಈ‌ ಮೂಲಕ ಸಿಎಂ ಸಮಯಾವಕಾಶ ಕೊಡಲು ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದ್ದರು.

    ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಅನ್ವಯ ಇಂದು ಮೈಸೂರು ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

  • ಸಿಬಿಐ ತನಿಖಾ ಸಮ್ಮತಿ ವಾಪಸ್ ಪಡೆದಿರುವುದು ಯೋಗ್ಯ ನಿರ್ಣಯ – ಶಾಸಕ ಬಿ.ಆರ್ ಪಾಟೀಲ್

    ಸಿಬಿಐ ತನಿಖಾ ಸಮ್ಮತಿ ವಾಪಸ್ ಪಡೆದಿರುವುದು ಯೋಗ್ಯ ನಿರ್ಣಯ – ಶಾಸಕ ಬಿ.ಆರ್ ಪಾಟೀಲ್

    ನವದೆಹಲಿ: ಕೇಂದ್ರ ಸರ್ಕಾರದ (Union Government) ಉದ್ದೇಶ ಸರಿಯಿಲ್ಲ ರಾಜ್ಯ ಸರ್ಕಾರಗಳ ವಿರುದ್ಧ ಕುತಂತ್ರ ಮಾಡಲಾಗುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳನ್ನು (CBI) ಬಳಸಿಕೊಂಡು ಪ್ರಹಾರ ಮಾಡಲಾಗುತ್ತಿದೆ. ಈ ದೃಷ್ಠಿಯಿಂದ ರಾಜ್ಯ ಸರ್ಕಾರ ಸಿಬಿಐ ತನಿಖಾ ಸಮ್ಮತಿ ವಾಪಸ್ ಪಡೆದಿರುವುದು ಸರಿಯಾಗಿದೆ ಎಂದು ಶಾಸಕ ಬಿ.ಆರ್ ಪಾಟೀಲ್ (BR Patil) ಹೇಳಿದ್ದಾರೆ. ಇದನ್ನೂ ಓದಿ: ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್ ಇದು: ಸಿಎಂ ಸಿದ್ದರಾಮಯ್ಯ ಬೇಸರ

    ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಯೋಗ್ಯವಾದ ನಿರ್ಣಯ ಕೈಗೊಂಡಿದೆ. ಮುಡಾ ಹಗರಣದಲ್ಲಿ (MUDA Scam) ಮೈಸೂರಿನ ನಾಯಕರು ಯಾಕೆ ಮಾತನಾಡುತ್ತಿಲ್ಲ? ಮುಡಾದಲ್ಲಿ ಸದಸ್ಯರಾಗಿದ್ದವರು ಯಾರೂ ಮಾತನಾಡುತ್ತಿಲ್ಲ. ಮುಡಾ ಹಗರಣವನ್ನು ಸೃಷ್ಟಿ ಮಾಡಿ ಸಿಎಂ ಅನ್ನು ಕೆಳಗಿಳಿಸುವ ಪ್ರಯತ್ನ ಆಗುತ್ತಿದೆ. ಸಿದ್ದರಾಮಯ್ಯ ಗಟ್ಟಿ ನಾಯಕ, ಅವರನ್ನು ಏನೂ ಮಾಡೋಕೆ ಆಗುವುದಿಲ್ಲ, 136 ಶಾಸಕರು ಸಿದ್ದರಾಮಯ್ಯ (Siddaramaiah) ಜೊತೆಗಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ವಿಜಯೇಂದ್ರರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿಸಲು ಸಾಧ್ಯವಿಲ್ಲ – ರೆಬಲ್‌ ಟೀಂಗೆ ರೇಣುಕಾಚಾರ್ಯ ಸವಾಲ್‌

    ಸಿಎಂ ರಾಜೀನಾಮೆ ನೀಡಬೇಕು ಎಂದಿರುವ ಕೆ.ಬಿ ಕೋಳಿವಾಡ ಅವರ ಹೇಳಿಕೆ ಸರಿಯಲ್ಲ, ಎಲ್ಲಾ ಶಾಸಕರು ಒಟ್ಟಾಗಿದ್ದೇವೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ಬಿಜೆಪಿಯವರ ಮನೆಯೇ ಸರಿಯಿಲ್ಲ, ಅವರ ಮನೆ ಮೊದಲು ಸರಿಮಾಡಿಕೊಳ್ಳಲಿ, ಒಬ್ಬ ಹೊಸಪೇಟಿಯಿಂದ ಮತ್ತೊಬ್ಬರು ಕೂಡಲಸಂಗಮದಿಂದ ಯಾತ್ರೆ ಮಾಡುತ್ತೇವೆ ಎನ್ನುತ್ತಾರೆ. ಮೊದಲು ಅವರ ಮನೆ ಮೊದಲು ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಜನ್ರ ದುಡ್ಡು ಚೀನಾ ಕಂಪನಿಗಳಿಗೆ ಜಮೆ – ಉತ್ತರ ಸೈಬರ್ ಠಾಣೆಯಲ್ಲಿ 122 ಕೇಸ್ ಪತ್ತೆ

  • ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್

    ನಿಮ್ಮಿಂದ ನಮ್ಮ ಸಿದ್ದರಾಮಯ್ಯಗೆ ಈ ಸ್ಥಿತಿ ಬಂತು – ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್

    – ಸಿಎಂ ಆಪ್ತನ ವಿರುದ್ಧ ಸಿಡಿದೆದ್ದ `ಕೈ’ ಕಾರ್ಯಕರ್ತರು

    ಮೈಸೂರು: ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಸ್ವಾಗತಕ್ಕೆ ಬಂದಿದ್ದ ಮುಡಾ (MUDA) ಅಧ್ಯಕ್ಷ ಕೆ.ಮರಿಗೌಡಗೆ (Marigowda) ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.

    ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಸ್ ಕಳುಹಿಸಿದ್ದಾರೆ.

    ಈ ವೇಳೆ ಮರೀಗೌಡ ಅವರು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳಿಸಿದ್ದಾರೆ.

    ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

    ನಾಳೆ ಕೂಡ ಸಿದ್ದರಾಮಯ್ಯ ಮೈಸೂರು ನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಘಾಟನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಪುಸ್ತಕ ಬಿಡುಗಡೆ ಸಮಾರಂಭ, ಮೈಸೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.

    ಭಾನುವಾರವೂ ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಶೋಕಪುರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಬಳಿಕ ಸಂಜೆ 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

  • ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಹೆಚ್‌ಡಿಕೆ

    ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ: ಹೆಚ್‌ಡಿಕೆ

    – ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು: ಸಿದ್ದರಾಮಯ್ಯ ಕಾಲೆಳೆದ ಕೇಂದ್ರ ಸಚಿವ

    ಬೆಂಗಳೂರು: ಸಿಬಿಐ (CBI) ರಾಜ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರದಿಂದ ನಿರ್ಬಂಧ ಮಾಡಿರೋ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ (MUDA Scam) ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಧಾರ್ಮಿಕ ಮತಾಂತರವು ರಾಷ್ಟ್ರೀಯ ಮೌಲ್ಯ, ಸಾಂವಿಧಾನಿಕ ತತ್ವಗಳಿಗೆ ವಿರುದ್ಧ: ಉಪರಾಷ್ಟ್ರಪತಿ

    ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ:  ಇಸ್ರೇಲ್ ವೈಮಾನಿಕ ದಾಳಿ – ಹಿಬ್ಜುಲ್ಲಾ ಡ್ರೋನ್ ಘಟಕದ ಮುಖ್ಯಸ್ಥನ ಹತ್ಯೆ

  • ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಕೇಂದ್ರದಿಂದ ದುರುಪಯೋಗ ತಡೆಯಲು ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ: ಚಲುವರಾಯಸ್ವಾಮಿ

    ಬೆಂಗಳೂರು: ಕೇಂದ್ರ ಸರ್ಕಾರದಿಂದ (Central Government) ದುರುಪಯೋಗ ಆಗುವುದನ್ನು ತಡೆಯಲು ಸಿಬಿಐಗೆ (CBI) ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Cheluvarayaswamy) ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರ ಎಲ್ಲರ ಮೇಲೆ ಮುಗಿಬೀಳ್ತಿದೆ. ಕೇಂದ್ರ ಸರ್ಕಾರ ತನ್ನ ಕೆಲಸ ಮಾಡಬೇಕು. ಇದು ಒಕ್ಕೂಟ ವ್ಯವಸ್ಥೆ. ಸಿಬಿಐ ತರಹದ ಸಂಸ್ಥೆಗಳ ದುರುಪಯೋಗ ಆಗ್ತಿದೆ. ಹೀಗಾಗಬಾರದು ಎನ್ನುವ ಕಾರಣಕ್ಕೆ ಸಿಬಿಐಗೆ ಕೊಟ್ಟಿದ್ದ ಅನುಮತಿ ವಾಪಸ್ ಪಡೆದಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದುರ್ಗಾ ಪೂಜೆಯಂದು ರಜೆ ನೀಡಬಾರದು, ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಬಾರದು: ಬಾಂಗ್ಲಾ ಹಿಂದೂಗಳಿಗೆ ಎಚ್ಚರಿಕೆ

    ಕೋಳಿವಾಡ (K.B Koliwada) ಹೇಳಿಕೆ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ (Congress) ಇದ್ದಾಗ ತನಿಖಾ ಸಂಸ್ಥೆಗಳ ದುರುಪಯೋಗ ಆಗಿರಲಿಲ್ಲ, ಈಗ ಆಗ್ತಿದೆ. ಕೋಳಿವಾಡ ಅವರು ಯಾಕೆ ಆ ರೀತಿ ಹೇಳಿದರು ಎನ್ನುವುದನ್ನು ಅವರೇ ಹೇಳಬೇಕು. ಎಲ್ಲರನ್ನೂ ಕಂಟ್ರೋಲ್ ಮಾಡಕ್ಕಾಗಲ್ಲ. ಸಿದ್ದರಾಮಯ್ಯ ಜತೆ ನಮ್ಮ ಸಚಿವರು, ಶಾಸಕರು, ಹೈಕಮಾಂಡ್‌ವರು ಇದ್ದಾರೆ. ಸಿದ್ದರಾಮಯ್ಯ (CM Siddaramaiah) ರಾಜೀನಾಮೆ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಲ್ಲ, ಅವರೇ ಮುಂದುವರೀತಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಇದೇ ವೇಳೆ ಪರಿಷತ್ ಸದಸ್ಯ ಸಲೀಂ ಅಹಮದ್ (Saleem Ahmed) ಮಾತನಾಡಿ, ರಾಜ್ಯಪಾಲರಿಗೆ ಸಂಪುಟದಲ್ಲೇ ಚರ್ಚಿಸಿ ಉತ್ತರ ಕೊಡಬೇಕು. ಈ ತೀರ್ಮಾನ ಒಳ್ಳೆಯದು, ಸ್ವಾಗತಾರ್ಹ. ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ಕೊಡಲ್ಲ, ಕೊಡಲೂಬಾರದು. ಕೋಳಿವಾಡ ಹೇಳಿಕೆ ಅವರ ವೈಯಕ್ತಿಕವಾದ ಹೇಳಿಕೆಯಾಗಿದೆ. ಆದರೆ ನಮ್ಮ ನಾಯಕರು, ಕಾರ್ಯಕರ್ತರು ಸಿಎಂ ಪರ ಒಟ್ಟಾಗಿ ಇದ್ದೀವಿ ಎಂದರು.ಇದನ್ನೂ ಓದಿ: ಸ್ವಚ್ಛ ಭಾರತ್ ಮಿಷನ್ ಯೋಜನೆ – ಕೋಲಾರ ನಗರಸಭೆಯಲ್ಲಿ ಭಾರಿ ಗೋಲ್‌ಮಾಲ್!

  • ಬಾಯಿ ತಪ್ಪಿನಿಂದ ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದೆ: ಕ್ಷಮೆ ಕೇಳಿದ ಜಮೀರ್

    ಬಾಯಿ ತಪ್ಪಿನಿಂದ ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದೆ: ಕ್ಷಮೆ ಕೇಳಿದ ಜಮೀರ್

    ಬೆಂಗಳೂರು: ಬಾಯಿ ತಪ್ಪಿನಿಂದ ನಾನು ಒಂದು ಪದ ಬಳಸಿದ್ದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹ್ಮದ್‌ (Zameer Ahmed)) ಹೇಳಿದ್ದಾರೆ.

    ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ (Political Judgement) ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್‌ ಕ್ಷಮೆ ಕೇಳಿದ್ದಾರೆ.  ಇದನ್ನೂ ಓದಿ: ರಾಜ್ಯದಲ್ಲಿ ಸಿಬಿಐ ಮುಕ್ತ ತನಿಖೆ ಅಧಿಕಾರಕ್ಕೆ ಬ್ರೇಕ್‌

     

    ನಿನ್ನೆ  ಹೇಳಿಕೆ ನೀಡುವಾಗ ಒಂದು ಪದ ಬಳಸಿದೆ. ರಾಜಕೀಯ ಮಾಡುತ್ತಾರೆ ಅಂತ ಹೇಳುವ ಬದಲು ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದೆ. ನಾನು ರಾಜಕೀಯ ಲಾಭ ಪಡೆಯುತ್ತಿದ್ದಾರೆ  ಅಂತ ಹೇಳೋಕೆ ಹೋಗಿದ್ದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ತಪ್ಪಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.‌

    ಇಂದು ನಡೆದ ಕ್ಯಾಬಿನೆಟ್‌ ಸಭೆಯಲ್ಲಿ ಜಮೀರ್‌ ಹೇಳಿಕೆಯ ಬಗ್ಗೆ ಜೋರು ಚರ್ಚೆ ನಡೆದಿದೆ. ಹಿರಿಯ ನಾಯಕರು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಜಮೀರ್‌ ಕ್ಷಮೆ ಕೇಳುವ ಮೂಲಕ ವಿಚಾರವನ್ನು ತಣ್ಣಗೆ ಮಾಡಲು ಮುಂದಾಗಿದ್ದಾರೆ.

    ಜಮೀರ್‌ ಹೇಳಿದ್ದೇನು?
    ಬುಧವಾರ ಮಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್‌, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್‌ ಜಡ್ಜ್‌ಮೆಂಟ್‌ . ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ತಿಳಿಸಿದ್ದರು.

     

  • ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಭಯಭೀತರಾಗಿದ್ದಾರೆ – ಪ್ರಹ್ಲಾದ್ ಜೋಶಿ

    ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ಭಯಭೀತರಾಗಿದ್ದಾರೆ – ಪ್ರಹ್ಲಾದ್ ಜೋಶಿ

    – ಸಿದ್ದರಾಮಯ್ಯನವರೇ ನಿಮ್ಮ 70 ಲಕ್ಷದ ವಾಚ್ ಏನಾಯ್ತು ಎಂದ ಸಚಿವ

    ನವದೆಹಲಿ: ಕಾಂಗ್ರೆಸ್ (Congress) ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಭಯಭೀತರಾಗಿದ್ದಾರೆ. ಕಾನೂನಿನ ಭಯದಿಂದ ಸಿಬಿಐ (CBI) ತನಿಖೆಗೆ ನೀಡಿದ ಮುಕ್ತ ಸಮ್ಮತಿಯನ್ನು ವಾಪಸ್ ಪಡೆಯುವ ಮೂಲಕ ಕ್ಷುಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಆರೋಪಿಸಿದರು.

    ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನಿಮ್ಮ ಪಕ್ಷದಲ್ಲಿ ಭ್ರಷ್ಟಾಚಾರ ಆರೋಪ ಇಲ್ಲದವರಿಗೆ ಸನ್ಮಾನ ಮಾಡುತ್ತೇನೆ ಎಂದಿದ್ದಾರೆ. ಅವರೇ ದೊಡ್ಡ ಭ್ರಷ್ಟಾಚಾರಿ, ಅವರು ಏನು ಸನ್ಮಾನ ಮಾಡುತ್ತಾರೆ? ಸಿದ್ದರಾಮಯ್ಯ ಅವರೇ ನಿಮ್ಮ 70 ಲಕ್ಷ ರೂ. ವಾಚ್ ಏನಾಯಿತು? ನಿಮ್ಮ ವಾಲ್ಮೀಕಿ ಹಗರಣ ಏನಾಯಿತು? ನೀವೇ ಮಾಡಿದ ರಿಡೂ ವಿಷಯದಲ್ಲಿ ಕೆಂಪಣ್ಣ ವರದಿ ಏನಾಯಿತು ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಯಶ್ `ಟಾಕ್ಸಿಕ್’ಗೆ ಹೊಸ ವಿಲನ್ ಸೇರ್ಪಡೆ

    ಈಗ ಸಿಬಿಐ ತನಿಖೆ ಮಾಡಲು ಬಾರದಂತೆ ಸಿಬಿಐ ತನಿಖೆಗೆ ನೀಡಿದ ಮುಕ್ತ ಸಮ್ಮತಿಯನ್ನು ವಾಪಸ್ ಪಡೆದಿದ್ದಾರೆ. ಲೋಕಾಯುಕ್ತ ತನಿಖೆ ಮಾಡಬೇಕು ಎಂದರೆ ಮಾಡಲಿ. ಆದರೆ ಅದಕ್ಕೂ ಮುನ್ನ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿಲಿ, ಇತ್ತಿಚೇಗೆ ಎಡಿಜಿಯನ್ನು ತಮಗೆ ಬೇಕಾದವರನ್ನು ನೇಮಕ ಮಾಡಿದ್ದಾರೆ. ಭ್ರಷ್ಟಾಚಾರದಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಬೇಕಾದ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದರು.

    ಕ್ಯಾಬಿನೆಟ್ ಮೂಲಕ ರಾಜ್ಯಪಾಲರಿಗೆ ಉತ್ತರ ಕೊಡುವ ವಿಚಾರದ ಬಗ್ಗೆ ರಾಹುಲ್ ಗಾಂಧಿ (Rahul Gandhi) ಉತ್ತರ ಕೊಡಬೇಕು. ಸಂವಿಧಾನದ ಕುತ್ತಿಗೆ ಹಿಸುಕಿದವರು ಇಂದು ಕೈಯಲ್ಲಿ ಹಿಡಿದು ಓಡಾಡ್ತಿದ್ದಾರೆ. ರಾಜ್ಯಪಾಲರು ಸಂವಿಧಾನದ ಒಬ್ಬ ಮುಖ್ಯಸ್ಥರು ಅವರಿಗೆ ಮಾಹಿತಿ ಕೊಡಲ್ಲ ಅಂದರೆ ಅದು ಸಂವಿಧಾನದ ವಿರೋಧಿ. ಇದನ್ನು ನಾನು ಖಂಡಿಸುತ್ತೇನೆ. ರಾಜ್ಯಪಾಲರಿಗೆ ಮಾಹಿತಿ ಹೋದರೆ ಹುಳುಕು ಹೊರ ಬರುತ್ತದೆ ಎಂದು ಭಯ ರಾಹುಲ್, ಸೋನಿಯಾ ಗಾಂಧಿ ಬೇಲ್ ಮೇಲೆ ಹೊರಗಿದ್ದಾರೆ. ಅವರೇ ಭ್ರಷ್ಟಾಚಾರದ ಪಿತಾಮಹಾರು ಎಂದು ಕಿಡಿಕಾರಿದರು.ಇದನ್ನೂ ಓದಿ: 5,800 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ `KWIN City’ – ಏನಿದು ವಿಶಿಷ್ಟ ಯೋಜನೆ?

  • ಕಾಂಗ್ರೆಸ್ ಸಿಎಂ ಬೆನ್ನಿಗೆ ನಿಂತಿದೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಶಿವಕುಮಾರ್

    ಕಾಂಗ್ರೆಸ್ ಸಿಎಂ ಬೆನ್ನಿಗೆ ನಿಂತಿದೆ, ರಾಜೀನಾಮೆ ನೀಡುವ ಅಗತ್ಯವಿಲ್ಲ: ಶಿವಕುಮಾರ್

    ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದಿಲ್ಲಿಯವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

    ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (CM Siddaramaiah) ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ (Congress) ನಾಯಕ ಹಾಗೂ ಮಾಜಿ ಸ್ಪೀಕರ್ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಕೆಪಿಸಿಸಿ (KPCC) ಅಧ್ಯಕ್ಷ ನಾನು, ಅವರ ರಾಜೀನಾಮೆ ಪ್ರಶ್ನೆಯೇ ಉದ್ಭವ ಆಗುವುದಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಈ ಸರ್ಕಾರದಲ್ಲಿ ಸುಳ್ಳು ಹೇಳಿಕೆ, ಸುಳ್ಳು ಪ್ರಚಾರ ನಡೆಯುತ್ತಿದೆ – ಹೆಚ್‌ಡಿಕೆ

    v

    ನಮ್ಮ ಮುಖ್ಯಮಂತ್ರಿಗಳ ವಿರುದ್ಧ ಬಿಜೆಪಿ (BJP) ಹಾಗೂ ಜೆಡಿಎಸ್‌ನವರು (JDS) ರಾಜಕೀಯವಾಗಿ ಷಡ್ಯಂತ್ರ ರೂಪಿಸುತ್ತಿದ್ದು, ನಮ್ಮ ಗ್ಯಾರಂಟಿ ಯೋಜನೆಗಳು ಜನರನ್ನು ತಲುಪುತ್ತಿರುವುದು ವಿರೋಧ ಪಕ್ಷಗಳಿಂದ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದರು.

    ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ದೊಡ್ಡ ರಾಜ್ಯ ಕರ್ನಾಟಕ (Karnataka). ಇಲ್ಲಿ ನಮ್ಮ ಸರ್ಕಾರ ಇರುವುದು ಅವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಸಿಎಂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಸಿಎಂ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (PM Narendra  Modi) ಅವರ ಟೀಕೆ ಬಗ್ಗೆ ಕೇಳಿದಾಗ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರದ ವೇಳೆ ಸಿಎಂ ಸಿದ್ದರಾಮಯ್ಯ ಅವರ ವಿಚಾರ ಪ್ರಸ್ತಾಪ ಮಾಡುತ್ತಿದ್ದು, ಈ ವಿಚಾರದಲ್ಲಿ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಸರ್ಕಾರದ ಸಚಿವರುಗಳು ಅನೇಕ ಪ್ರಕರಣಗಳ ತನಿಖೆ ಎದುರಿಸುತ್ತಿದ್ದು, ಮೊದಲು ಅವರನ್ನು ಸಚಿವ ಸಂಪುಟದಿಂದ ಕೈಬಿಡಲಿ. ನಂತರ ಈ ಬಗ್ಗೆ ಚರ್ಚೆ ಮಾಡಲಿ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ