Tag: MUDA Scam

  • ಸಿಎಂ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಪರಮೇಶ್ವರ್

    ಸಿಎಂ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ: ಪರಮೇಶ್ವರ್

    ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ (CM Siddaramaiah) ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ (G Paramwshwar) ಹೇಳಿಕೆ ನೀಡಿದ್ದಾರೆ.

    ಈ ಬಗ್ಗೆ ಮಾಧ್ಯಮದವರಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡಬೇಕು ಎಂಬ ಮಾತು ಕೇಳಿ ಬರ್ತಿದೆ. ನಾವು ನ್ಯಾಯಕ್ಕಾಗಿ ಹೈಕೋರ್ಟ್‌ಗೆ ಹೋಗಿದ್ದೆವು. ಸಿಎಂ ಪಾತ್ರ ಮುಡಾ ಪ್ರಕರಣದಲ್ಲಿ (MUDA Scam) ಏನೂ ಇಲ್ಲ. ಅವರಿಂದ ಯಾವುದೇ ಅಧಿಕಾರ ದುರುಪಯೋಗ ಆಗಿಲ್ಲ. ಆದರೆ ಕೋರ್ಟಿನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ಮುಂದೆ ನ್ಯಾಯಾಲಯದಲ್ಲಿ ಹೋರಾಟ ಮಾಡುವುದಿದೆ. ಡಬಲ್ ಬೆಂಚ್‌ನಲ್ಲಿ ಇದರ ಬಗ್ಗೆ ಪ್ರಶ್ನೆ ಮಾಡುತ್ತೇವೆ. ಮುಖ್ಯಮಂತ್ರಿಗಳು ರಾಜಿನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು. ಇದನ್ನೂ ಓದಿ: ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ- 26 ಕ್ಷೇತ್ರಗಳ 239 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

    ವಿಚಾರಣೆ ವೇಳೆ ಸಿಎಂ ಪಾತ್ರ ಏನು ಎಂದು ನ್ಯಾಯಾಧೀಶರೇ ಕೇಳಿದರು. ಆಗ ಇದರ ವಿಚಾರವಾಗಿ ತೀರ್ಪಿನಲ್ಲಿ ಹೇಳಿಲ್ಲ. ಕಾನೂನಾತ್ಮಕ ಹೋರಾಟ ಮುಂದುವರೆಸುತ್ತೇವೆ. ಸಿಎಂಗೆ 40 ರಿಂದ 45 ವರ್ಷ ರಾಜಕೀಯ ಜೀವನದಲ್ಲಿ ಯಾವುದೇ ಆಪಾದನೆ ಇರಲಿಲ್ಲ. ಇದು ರಾಜಕೀಯ ಪ್ರೇರಿತ ಅನ್ನೋ ನೋವಾಗಿದೆ. ರಾಜ್ಯಪಾಲರು ಕ್ಯಾಬಿನೆಟ್ ನಿರ್ಣಯ ಪಾಲಿಸಬೇಕು ಅನ್ನೋ ಮಾತಿದೆ. ವಿವೇಚನೆ ಬಳಸಬಹುದು ಅಂತಲೂ ಇದೆ. ಅದಕ್ಕೆ ಸಮರ್ಥನೆ ಕೂಡ ಕೊಡಬೇಕು. ತೀರ್ಪಿನಲ್ಲಿ ರಾಜ್ಯಪಾಲರ ನಿರ್ಧಾರಕ್ಕೆ ಸಮರ್ಥನೆ ಕಾಣಲಿಲ್ಲ. ಜಡ್ಜ್ಮೆಂಟ್‌ನಲ್ಲಿ ಸಮರ್ಥನೆ ಇದೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮಗೆ ಸಮಾಧಾನ ತಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ – ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

    ರಾಜ್ಯಪಾಲರಿಗೆ ಬಲ ಬಂದಿದೆ ಅನ್ನಬಹುದು. ಆದರೆ ಇದು ಎಲ್ಲರಿಗೂ ಅನ್ವಯವಾಗಬೇಕಲ್ಲ. ಮಾಜಿ ಸಿಎಂ ಕುಮಾರಸ್ವಾಮಿ( H D Kumaraswamy), ಶಶಿಕಲಾ ಜೊಲ್ಲೆ ಎಲ್ಲರ ವಿಚಾರದಲ್ಲಿಯೂ ಇರಬೇಕಲ್ವಾ. ಆ ಬಲ ಅಲ್ಲಿಯೂ ಉಪಯೋಗಿಸಬೇಕಲ್ಲ ಎಂದು ಪ್ರಶ್ನಿಸಿದರು. ಜನಪ್ರತಿನಿಧಿ ಕೋರ್ಟ್‌ನಲ್ಲಿ ಏನಾಗುತ್ತೋ ಗೊತ್ತಿಲ್ಲ. ನ್ಯಾಯಯುತ ತೀರ್ಪು ಬರುತ್ತದೆ ಅನ್ನುವ ವಿಶ್ವಾಸವಿದೆ. ಪಕ್ಷದ ತೀರ್ಮಾನದ ಮೇಲೆ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.

    ಸಿಎಂ ರಾಜೀನಾಮೆ ಆಗ್ರಹಿಸಿ ಬಿಜೆಪಿ (BJP) ಪ್ರತಿಭಟನೆ ವಿಚಾರವಾಗಿ ಮಾತನಾಡಿ, ಬಿಜೆಪಿ ಉದ್ದೇಶವೇ ಸಿಎಂ ರಾಜೀನಾಮೆ ಕೊಡಿಸಬೇಕು ಅನ್ನೋದು. ಹಾಗಾಗಿ ಅವರ ಹೋರಾಟ ಆಶ್ಚರ್ಯ ಏನಿಲ್ಲ. ರಾಜೀನಾಮೆ ಕೊಡಬೇಡಿ ಎಂದು ನಾವು ಈಗಾಗಲೇ ಸಿಎಂಗೆ ಹೇಳಿದ್ದೇವೆ ಎಂದರು. ಇದನ್ನೂ ಓದಿ: ಪಿಜಿ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿ ಅರೆಸ್ಟ್

    ಹೈಕಮಾಂಡ್ ಸಿಎಂ ಜೊತೆಗಿದೆ. ಈಗಾಗಲೇ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಇಬ್ಬರೂ ಹೇಳಿದ್ದಾರೆ. ಹೈಕಮಾಂಡ್ ಸಹ ಇದನ್ನು ಸ್ಪಷ್ಟಪಡಿಸಿದೆ. ನಾವೆಲ್ಲಾ ಸಿಎಂ ಬೆನ್ನಿಗೆ ನಿಂತಿದ್ದೇವೆ. ಗವರ್ನರ್ ಅವರು ತಮ್ಮ ಬಲವನ್ನು ಕುಮಾರಸ್ವಾಮಿ, ನಿರಾಣಿ ವಿಚಾರದಲ್ಲೂ ತೋರಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ವಾರದ ರಜೆ ದಿನ ಮಹಾಲಕ್ಷ್ಮಿ ಕೊಲೆ? – ಸೆಪ್ಟೆಂಬರ್ 1, 2, 3ರ ಮರ್ಡರ್ ಮಿಸ್ಟ್ರಿಯ ಎಕ್ಸ್‌ಕ್ಲೂಸಿವ್‌ ಮಾಹಿತಿ

  • ಮೇಲ್ನೋಟಕ್ಕೆ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ – ಪ್ರಹ್ಲಾದ್ ಜೋಶಿ

    ಮೇಲ್ನೋಟಕ್ಕೆ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ – ಪ್ರಹ್ಲಾದ್ ಜೋಶಿ

    ನವದೆಹಲಿ: ಮುಡಾ ಪ್ರಕರಣ (MUDA Scam) ದೇಶದ್ಯಾಂತ ಚರ್ಚೆಯಾಗುತ್ತಿದೆ. ಕಾಂಗ್ರೆಸ್ (Congress) ಡಿಎನ್‌ಎಯಲ್ಲಿ ಭ್ರಷ್ಟಾಚಾರ ಇದೆ ಎಂದು ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾದ ಆದೇಶವನ್ನು ಹೈಕೋರ್ಟ್ (High Court) ನೀಡಿದೆ. ಮೇಲ್ನೋಟಕ್ಕೆ ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.

    ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹೈಕೋರ್ಟ್ ಆದೇಶದಲ್ಲಿ ಸಿಎಂ ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೈಕೋರ್ಟ್ ಹೇಳಿದೆ. ಸಾಮಾನ್ಯ ವ್ಯಕ್ತಿಗೆ ಈ ಪ್ರಮಾಣದಲ್ಲಿ ಪರಿಣಾಮ ನೀಡಲು ಸಾಧ್ಯವಿಲ್ಲ. ಹೈಕೋರ್ಟ್ ಆದೇಶದ ಹಿನ್ನಲೆ ಮುಖ್ಯಮಂತ್ರಿ ಸ್ಥಾನಕ್ಕೆ ತಡ ಮಾಡದೇ ಸಿದ್ದರಾಮಯ್ಯ (CM Siddaramaiah) ಅವರು ರಾಜೀನಾಮೆ ನೀಡಬೇಕು ಎಂದರು.ಇದನ್ನೂ ಓದಿ: ಮುಡಾ ಕೇಸ್‌: ಕಾನೂನಾತ್ಮಕವಾಗಿ ಮುಂದೇನು? ಕಾಂಗ್ರೆಸ್‌ ಹೈಕಮಾಂಡ್‌ ಮುಂದಿರುವ ಆಯ್ಕೆಗಳೇನು?

    ದಲಿತರ ಕೋಟಿ ಬೆಲೆ ಬಾಳುವ ಭೂಮಿಯನ್ನು ಲಕ್ಷಗಳಲ್ಲಿ ಖರೀದಿಸಿ, ಸಿಎಂ ಹೆಂಡ್ತಿಗೆ ಗಿಫ್ಟ್ ನೀಡುವುದು ಹಾಸ್ಯಾಸ್ಪದ, ಇಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ರಾಜ್ಯಪಾಲರು, ದಲಿತ ನಾಯಕರಿಗೆ ಚಪ್ಪಲಿಯಿಂದ ಹೊಡೆಸುವ ಯತ್ನ ಮಾಡಿದೆ. ಈಗಲಾದರೂ ಸಿಎಂ ಬಹಿರಂಗ ಕ್ಷಮೆ ಕೇಳುವ ಮೂಲಕ ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದ್ದಾರೆ.

    ರಾಹುಲ್ ಗಾಂಧಿ (Rahul Gandhi) ಡೋಂಗಿ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ನಿಜವಾದ ನೈತಿಕತೆ ಇದ್ದರೆ ಅವರು ಸಿದ್ದರಾಮಯನವರ ರಾಜೀನಾಮೆ ಕೇಳಬೇಕು. ಲೋಕಾಯುಕ್ತದಲ್ಲಿ ನಿವೃತ್ತ ನ್ಯಾಯಾಧೀಶರು ಇರುತ್ತಾರೆ. ಬಾಕಿ ಅಧಿಕಾರಿಗಳು ರಾಜ್ಯ ಸರ್ಕಾರದವರೇ ಇರುತ್ತಾರೆ. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದರೆ ಸಿಬಿಐಗೆ ನೀಡಬೇಕು. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಹೃದಯಾಘಾತದಿಂದ ಸಾವು

  • ಮುಡಾ ಕೇಸ್‌: ಕಾನೂನಾತ್ಮಕವಾಗಿ ಮುಂದೇನು? ಕಾಂಗ್ರೆಸ್‌ ಹೈಕಮಾಂಡ್‌ ಮುಂದಿರುವ ಆಯ್ಕೆಗಳೇನು?

    ಮುಡಾ ಕೇಸ್‌: ಕಾನೂನಾತ್ಮಕವಾಗಿ ಮುಂದೇನು? ಕಾಂಗ್ರೆಸ್‌ ಹೈಕಮಾಂಡ್‌ ಮುಂದಿರುವ ಆಯ್ಕೆಗಳೇನು?

    ಬೆಂಗಳೂರು:  ಮುಡಾ ಹಗರಣದಲ್ಲಿ (MUDA Scam) ಹೈಕೋರ್ಟ್ (High Court) ತೀರ್ಪು ತಮ್ಮ ವಿರುದ್ದವಾಗಿ ಬಂದ ಕಾರಣ ಸಿಎಂ ಸಿದ್ದರಾಮಯ್ಯಗೆ (CM Siddaramaiah) ಕಾನೂನು ಹೋರಾಟದ ಜೊತೆ ಜೊತೆಗೆ ರಾಜಕೀಯವಾಗಿಯೂ ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.

    ಇಂದು ಸಿಎಂ ನಿವಾಸಕ್ಕೆ ಅವರ ಬೆಂಬಲಿಗ ಸಚಿವರು, ಶಾಸಕರು ಧಾವಿಸಿ ಚರ್ಚೆ ನಡೆಸಿದರು. ಹೈಕಮಾಂಡ್ ಕೂಡ ಕರೆ ಮಾಡಿ ಮಾಹಿತಿ ಪಡೆದುಕೊಂಡಿದೆ. ಸದ್ಯದ ಬೆಳವಣಿಗೆಯಿಂದ ಹೀಗಾಗಿ ಮುಂದೆ ಕಾನೂನಾತ್ಮಕವಾಗಿ, ರಾಜಕೀಯವಾಗಿ ಮುಂದೆ ಏನೆಲ್ಲಾ ಆಗಬಹುದು? ಯಾರ ನಡೆ ಏನಾಗಿರಬಹುದು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ. ಇದನ್ನೂ ಓದಿ: ಸಿಎಂಗೆ ಮುಡಾ ಸಂಕಷ್ಟ – ತನಿಖೆ ಹೇಗೆ? ಪ್ರಾಸಿಕ್ಯೂಷನ್ ಯಾಕಿಲ್ಲ?

    ಕಾನೂನಾತ್ಮಕವಾಗಿ ಮುಂದೇನು?
    ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್​ಗೆ ಸ್ನೇಹಮಯಿ ಕೃಷ್ಣ ಅವರು ಖಾಸಗಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್​ ಮೆಟ್ಟಿಲೇರಿದ್ದರು. ಹೀಗಾಗಿ ಹೈಕೋರ್ಟ್​ ಜನಪ್ರತಿನಿಧಿಗಳ ಕೋರ್ಟ್​ ವಿಚಾರಣೆಗೆ ತಡೆ ನೀಡಿತ್ತು.

    ಈಗ ಹೈಕೋರ್ಟ್​ ತೀರ್ಪು ಪ್ರಕಟವಾಗಿದ್ದು ಬುಧವಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದೆ. ಒಂದು ವೇಳೆ ಕೋರ್ಟ್‌ ತನಿಖೆಗೆ ಆದೇಶ ನೀಡಿದರೆ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

    ಸಿಎಂ ಮುಂದಿರುವ ಆಯ್ಕೆಗಳೇನು?
    ರಾಜೀನಾಮೆ ನೀಡದೇ ತನಿಖೆ ಎದುರಿಸುವುದು ಮತ್ತು ಕಾನೂನು ಹೋರಾಟಕ್ಕೆ ಮುಂದಾಗುವುದು. ಕಾಂಗ್ರೆಸ್ ಹೈಕಮಾಂಡ್ (Congress High Command) ನಿರ್ಧಾರದವರೆಗೂ ಕಾಯುವುದು.

    ಹೈಕಮಾಂಡ್ ಮುಂದಿರುವ ಆಯ್ಕೆಗಳೇನು?
    ಸಿದ್ದರಾಮಯ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಮುಂದುವರೆಯುವುದು. ಸರಣಿ ಚುನಾವಣೆ ಇರುವ ಸದ್ಯಕ್ಕೆ ಆತುರದ ನಿರ್ಧಾರ ಕೈಗೊಳ್ಳುವುದು ಅನುಮಾನ. ರಾಜಕೀಯ ನಿರ್ಧಾರ ತೆಗೆದುಕೊಳ್ಳಲು ಹೈಕಮಾಂಡ್ ಹಿಂಜರಿಯಬಹುದು. ಡಿಸೆಂಬರ್ ಬಳಿಕ ಸಿಎಂ ವಿಚಾರದಲ್ಲಿ ಹೈಕಮಾಂಡ್‌ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.

  • ಸಿಎಂಗೆ ಮುಡಾ ಸಂಕಷ್ಟ – ತನಿಖೆ ಹೇಗೆ? ಪ್ರಾಸಿಕ್ಯೂಷನ್ ಯಾಕಿಲ್ಲ?

    ಸಿಎಂಗೆ ಮುಡಾ ಸಂಕಷ್ಟ – ತನಿಖೆ ಹೇಗೆ? ಪ್ರಾಸಿಕ್ಯೂಷನ್ ಯಾಕಿಲ್ಲ?

    ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ (High Court) ತೀರ್ಪು ಪ್ರಕಟವಾದ ಬೆನ್ನಲ್ಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್‌) ಸೆಕ್ಷನ್‌ 218 ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್‌ 17ಎ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ.

    BNSS ಸೆಕ್ಷನ್‌ 218, ಭ್ರಷ್ಟಾಚಾರ ತಡೆ ಕಾಯ್ದೆ (PC Act) ಸೆಕ್ಷನ್ 17 ಎ, 19 ರ ಅಡಿ ಪ್ರಾಸಿಕ್ಯೂಷನ್‌ಗೆ ದೂರುದಾರರು ಅನುಮತಿ ಕೇಳಿದ್ದರು. ಪಿಸಿ ಕಾಯ್ದೆಯ 19 ಅಡಿ ಕೇಳಿದ್ದ ಮನವಿಯನ್ನು ರಾಜ್ಯಪಾಲರೇ ತಿರಸ್ಕರಿಸಿದ್ದರು. ಈಗ ಕೋರ್ಟ್‌ ಬಿಎನ್‌ಎಸ್‌ಎಸ್‌ ಸೆಕ್ಷನ್‌ 218ರ ಅಡಿ ನೀಡಿರುವ ಅನುಮತಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಈಗ ಪಿಸಿ ಕಾಯ್ದೆಯ ಸೆಕ್ಷನ್‌ 17 ಎ ಮಾತ್ರ ಸೀಮಿತಗೊಳಿಸಿ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ

    17 (ಎ) ಅಡಿ ಹೇಗೆ ತನಿಖೆ?
    ಮುಡಾ ಕೇಸಲ್ಲಿ ಈಗ ಪ್ರಾಥಮಿಕ ತನಿಖೆ ನಡೆಸಬಹುದು. ಪ್ರಕರಣದ ಸತ್ಯಾಸತ್ಯತೆ ಬಗ್ಗೆ ಮಾಹಿತಿ ಕಲೆ ಹಾಕಬಹುದು. ಅಂದರೆ ಈ ಪ್ರಕರಣದಲ್ಲಿ ಯರ‍್ಯಾರ ಪಾತ್ರವೇನು? ಸಿಎಂ ಪಾತ್ರ, ಪ್ರಭಾವದ ಬಗ್ಗೆ ತನಿಖೆ ನಡೆಸಬಹುದು. ತನಿಖೆಯ ನಂತರ 19 (ಎ) ಅಡಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ರಾಜ್ಯಪಾಲರ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಇದನ್ನೂ ಓದಿ: ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

    ಏನಿದು ಪ್ರಾಸಿಕ್ಯೂಷನ್?
    ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್‌ 19 (ಎ) ಅಡಿ ರಾಜ್ಯಪಾಲರು ಅನುಮತಿ ಕೊಟ್ಟಿದ್ದರೆ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಬಹುದಿತ್ತು. ಆದರೆ ಸೆಕ್ಷನ್ 19 (ಎ) ರಾಜ್ಯಪಾಲರು ಅನುಮತಿ ನೀಡದ ಕಾರಣ ಸಿಎಂ ಸ್ವಲ್ಪ ನಿರಾಳವಾಗಿದ್ದಾರೆ.

     

    ಬಿಎನ್‌ಎಸ್‌ಎಸ್ 218 ಯಾಕಿಲ್ಲ?
    ಸಿಎಂ ಪ್ರಕರಣಕ್ಕೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್‌ 218 ಅನ್ವಯವಾಗುವುದಿಲ್ಲ. ಜಡ್ಜ್, ಸರ್ಕಾರಿ ಅಧಿಕಾರಿಗಳ ಪ್ರಾಸಿಕ್ಯೂಷನ್‌ಗೆ ಮಾತ್ರ ಈ ಸೆಕ್ಷನ್‌ ಅನ್ವಯವಾಗುತ್ತದೆ. ವಿಚಾರಣೆ ವೇಳೆ ಈ ವಿಚಾರವನ್ನು ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಕೋರ್ಟ್ ಗಮನಕ್ಕೆ ತಂದಿದ್ದರು.

  • ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ

    ರಾಜೀನಾಮೆ ಯಾಕೆ ಕೊಡಬೇಕು? ತನಿಖೆಗೆ ಮಾತ್ರ ಅನುಮತಿ, ಪ್ರಾಸಿಕ್ಯೂಷನ್‌ಗೆ ಅಲ್ಲ: ಸಿದ್ದರಾಮಯ್ಯ

    ಬೆಂಗಳೂರು: ಹೈಕೋರ್ಟ್‌ (High Court) ತನಿಖೆ ಮಾತ್ರ ಅನುಮತಿ ನೀಡಿದೆ ಹೊರತು ಪ್ರಾಸಿಕ್ಯೂಷನ್‌ಗೆ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಹೈಕೋರ್ಟ್‌ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಎನ್‌ಎಸ್‌ ಸೆಕ್ಷನ್‌ 218, ಭ್ರಷ್ಟಾಚಾರ ತಡೆ ಕಾಯ್ದೆ (PC Act) ಸೆಕ್ಷನ್ 17 ಎ, 19 ರ ಅಡಿ ಪ್ರಾಸಿಕ್ಯೂಷನ್‌ಗೆ ದೂರುದಾರರು ಅನುಮತಿ ಕೇಳಿದ್ದರು. ಪಿಸಿ ಕಾಯ್ದೆಯ 19 ಅಡಿ ಕೇಳಿದ್ದ ಮನವಿಯನ್ನು ರಾಜ್ಯಪಾಲರೇ ತಿರಸ್ಕರಿಸಿದ್ದರು. ಈಗ ಕೋರ್ಟ್‌ ಬಿಎನ್‌ಎಸ್‌ ಸೆಕ್ಷನ್‌ 218ರ ಅಡಿ ನೀಡಿರುವ ಅನುಮತಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಈಗ ಪಿಸಿ ಕಾಯ್ದೆಯ ಸೆಕ್ಷನ್‌ 17 ಎ ಮಾತ್ರ ಸೀಮಿತಗೊಳಿಸಿ ಆದೇಶ ಪ್ರಕಟಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

    ಪಿಸಿ ಕಾಯ್ದೆಯ ಸೆಕ್ಷನ್‌ 17 ಎ ಅಡಿ ಸೀಮಿತಗೊಳಿಸಿ ಆದೇಶ ಪ್ರಕಟಿಸಿದ್ದರಿಂದ ತನಿಖೆ ಮಾತ್ರ ಅನುಮತಿ ಸಿಕ್ಕಿದೆ. ಇದು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಅಲ್ಲ. ಇದರ ಮೇಲೆ ಯಾವ ರೀತಿ ಹೋರಾಟ ನಡೆಸಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

    ಹೈಕೋರ್ಟ್ ಆದೇಶ ತೃಪ್ತಿ ಎಂಬ ಪ್ರಶ್ನೆಗೆ ಉತ್ತರಿಸಿ, ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ನನ್ನ ಪ್ರಕಾರ ನಾನು ತಪ್ಪು ಮಾಡಿಲ್ಲ. 17 ಎ ಅಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಬಿ ಎನ್.ಎಸ್.ಎಸ್ ಕಾಯ್ದೆಯಡಿ 218 ಆದೇಶ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

    ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ಕೊಡಲು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರನ್ನು ನಾವು ಎದುರಿಸುತ್ತೇವೆ. ರಾಜಿನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು. ರಾಜಿನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜಿನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜಿನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

    ನ್ಯಾಯಾಲಯದ ತೀರ್ಪನ್ನು ನಾನು ಪೂರ್ತಿ ಓದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಿರುವುದನ್ನು ಮಾತ್ರ ಓದಿದ್ದೇನೆ ಎಂದರು. ಓದಿದ ನಂತರ ಪುನಃ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

     

    ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.

    ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ,ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಮಾಡುತ್ತಿದ್ದಾರೆ ಎಂದರು.

    ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ,ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದರು.

  • ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ತನಿಖೆ ಪಕ್ಷಾಪಾತವಾಗಿ ನಡೆಯಲು ಸಾಧ್ಯವಿಲ್ಲ: ಶೋಭಾ ಕರಂದ್ಲಾಜೆ

    ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ತನಿಖೆ ಪಕ್ಷಾಪಾತವಾಗಿ ನಡೆಯಲು ಸಾಧ್ಯವಿಲ್ಲ: ಶೋಭಾ ಕರಂದ್ಲಾಜೆ

    ನವದೆಹಲಿ: ಹೈಕೋರ್ಟ್ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದೆ. ಹೀಗಿರುವಾಗ ಅವರು ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹೇಳಿದ್ದಾರೆ.

    ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಯಾಗಲಿ, ಆದರೆ ಅವರು ರಾಜೀನಾಮೆ ನೀಡಲಿ. ಇಲ್ಲದಿದ್ದರೆ ಅವರು ಲೋಕಾಯುಕ್ತದ ಮೇಲೆ ಒತ್ತಡ ಹಾಕಲಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಮುಡಾ ಹಗರಣದಲ್ಲಿ (MUDA scam) ಸಿದ್ದರಾಮಯ್ಯ ಅವರು ಅಪಾರಾಧಿ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಯಾವ ಪ್ರಕರಣವನ್ನು ಪ್ರಾಸಿಕ್ಯೂಷನ್ ಮಾಡಬೇಕು ಎಂದಿದ್ದರೋ, ಅದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ ಎಂದಿದ್ದಾರೆ.

    ದಲಿತರ ಜಮೀನನ್ನು ಖರೀದಿ ಮಾಡಿದ್ದು ಸಿದ್ದರಾಮಯ್ಯ ಅವರು ಮಾಡಿದ ಮೊದಲ ತಪ್ಪು. 1991ರ ನಂತರ ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆಯಲ್ಲಿದ್ದರು. ಈ ಅವಧಿಯಲ್ಲಿ ಹಳ್ಳಿಯಲ್ಲಿ ಜಮೀನು ಕೊಟ್ಟು, ಮೈಸೂರಿನ ಪ್ರತಿಷ್ಠಿತ ಏರಿಯಾದಲ್ಲಿ ಸೈಟ್ ಪಡೆದಿದ್ದಾರೆ. ಈಗ ಹೈಕೋರ್ಟ್ ಕೂಡಾ ತನಿಖೆ ಆಗಬೇಕು ಎಂದಿದೆ. ಈ ಹಿಂದೆ ರಾಜ್ಯಪಾಲರ ವಿರುದ್ಧ ಹೇಗೆಲ್ಲ ಮಾತನಾಡಿದ್ದರು. ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಬಂದ ಗತಿ ರಾಜ್ಯಪಾಲರಿಗೆ ಬರುತ್ತೆ ಎಂದಿದ್ದರು. ಆದರೂ ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಕಿಡಿಕಾರಿದ್ದಾರೆ.

    ಈ ಹಿಂದೆ ಭ್ರಷ್ಟಾಚಾರದ ಪಿತಾಮಹ ಸಿದ್ದರಾಮಯ್ಯ ಲೋಕಾಯುಕ್ತವನ್ನು ಮುಚ್ಚಿದ್ದರು. ಈಗ ಅದರಿಂದಲೇ ರಕ್ಷಣೆ ಪಡೆಯುತ್ತಾರೆ. ತಮ್ಮ ಮೇಲಿನ ಕೇಸ್ ಮುಚ್ಚಲು ಲೋಕಾಯುಕ್ತವನ್ನೇ ಮುಚ್ಚಿದ್ದರು ಎಂದು ಅವರು ಆರೊಪಿಸಿದ್ದಾರೆ.

  • ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

    ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

    ಬೆಂಗಳೂರು: ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದ (MUDA Case) ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್‌ (High Court) ನ್ಯಾ. ನಾಗಪ್ರಸನ್ನ ಅವರು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

    ಆದೇಶದಲ್ಲಿ ಏನಿದೆ?
    ರಾಜ್ಯಪಾಲರ ಆದೇಶ ವಿವೇಚನಾ ಶೂನ್ಯವಾಗಿಲ್ಲ. ಎಲ್ಲವೂ ಕಾನೂನಿನ ಅನ್ವಯವಾಗಿದ್ದು ತನಿಖಾಧಿಕಾರಿಯಿಂದ ಮುಂಚಿತವಾಗಿ ತನಿಖೆ ನಡೆಸಿ ವರದಿ ಪಡೆಯೋ ಅಗತ್ಯವಿಲ್ಲ.

    ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಖಾಸಗಿ ವ್ಯಕ್ತಿಯೂ ಸಹ ಪ್ರಾಸಿಕ್ಯೂಷನ್ ಮಂಜೂರಾತಿಗೆ ಅನುಮತಿ ಪಡೆಯಬಹುದು.

    ಸಂಪುಟದ ಸಲಹೆಯನ್ನೂ ರಾಜ್ಯಪಾಲರು ತಿರಸ್ಕರಿಸಬಹುದು. ಖಾಸಗಿ ದೂರುದಾರರು ರಾಜ್ಯಪಾಲರಿಂದ ಅನುಮತಿ ಪಡೆಯಬಹುದು. ಪೊಲೀಸ್ ಅಧಿಕಾರಿಯೇ ಅನುಮತಿ ಕೋರಬೇಕೆಂಬ ಅಗತ್ಯತೆ ಇಲ್ಲ. ಇದನ್ನೂ ಓದಿ: ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್.ಅಶೋಕ್

    ರಾಜ್ಯಪಾಲರ ಆದೇಶದಲ್ಲಿ ಯಾವುದೇ ಲೋಪ ಕಾಣುತ್ತಿಲ್ಲ. ಕಡತಗಳಲ್ಲಿ ನಿರ್ಧಾರದ ಹಿಂದಿನ ಕಾರಣ ದಾಖಲಿಸಿದ್ರೆ ಸಾಕು. ರಾಜ್ಯಪಾಲರು ಈ ಪ್ರಕರಣದಲ್ಲಿ ಅಗಾಧವಾದ ವಿವೇಚನೆಯನ್ನು ಬಳಸಿದ್ದಾರೆ.

    ತನಿಖೆಗೆ ಅನುಮತಿ ನೀಡುವ ಮುನ್ನ ವಿಚಾರಣೆ ಆಲಿಸಬೇಕು ಎಂಬುದು ಕಡ್ಡಾಯವಲ್ಲ. ಫಲಾನುಭವಿಗಳು ಅರ್ಜಿದಾರರ ಕುಟುಂಬದವರೇ ಆಗಿದ್ದಾರೆ. ಸಿಎಂ ಕುಟುಂಬದವರೇ ಫಲಾನುಭವಿ (ಪತ್ನಿ) ಆಗಿರುವುದರಿಂದ ತನಿಖೆ ಅಗತ್ಯವಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

    ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಾಗಿದ್ದು ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ವಜಾಗೊಳಿಸಿದೆ.

    ಮುಡಾದಲ್ಲಿ ಪ್ರಭಾವ ಬಳಸಿ ಭಾರೀ ಹಗರಣ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಹಾಂ ಹಾಗೂ ಪ್ರದೀಪ್‌ ಅವರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಆಗಸ್ಟ್‌ 17 ರಂದು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನೂ ಓದಿ: MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

    ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿ ಖಾಸಗಿ ದೂರುದಾರರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಬಹುದು. ರಾಜ್ಯಪಾಲರು ದೂರಿನ ಎಲ್ಲಾ ಅಂಶಗಳನ್ನು ಪರಿಶೀಲಿಸಿ ದಾಖಲೆಗಳನ್ನು ಅಧ್ಯಯನ ಮಾಡಿಯೇ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಸಮರ್ಪಕವಾಗಿದೆ ಎಂದು ಗೆಹ್ಲೋಟ್‌  ನಿರ್ಧಾರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿಚಾರಣೆ ವೇಳೆ ಸಮರ್ಥಿಸಿಕೊಂಡಿದ್ದರು.

     

  • ಸಿದ್ದರಾಮಯ್ಯನವರು ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಲಿ, ರಾಜೀನಾಮೆ ಕೊಡುವುದೊಂದೇ ದಾರಿ: ಸಿ.ಟಿ.ರವಿ

    ಸಿದ್ದರಾಮಯ್ಯನವರು ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಲಿ, ರಾಜೀನಾಮೆ ಕೊಡುವುದೊಂದೇ ದಾರಿ: ಸಿ.ಟಿ.ರವಿ

    ಬೆಂಗಳೂರು: ಹೈಕೋರ್ಟ್ (High Court) ತೀರ್ಪಿನ ಹಿನ್ನೆಲೆ ಮುಖ್ಯಮಂತ್ರಿಯವರಿಗೆ (Siddaramaiah) ರಾಜೀನಾಮೆ ಕೊಡುವುದೊಂದೇ ದಾರಿ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (CT Ravi) ಹೇಳಿದ್ದಾರೆ.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ (BJP) ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ. ‘ಸತ್ಯಮೇವ ಜಯತೇ’ ಎಂದು ನುಡಿದರು. ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಟ್ಟಿದ್ದೇ ಸಂವಿಧಾನಬಾಹಿರ, ಅಪರಾಧ ಎಂದು ಆರೋಪಿಸಿದ ಕಾಂಗ್ರೆಸ್ಸಿಗರು, ಸಾರ್ವಜನಿಕವಾಗಿ ಕ್ಷಮೆ ಯಾಚನೆ ಮಾಡಬೇಕು. ಒಂದು ಸಾಂವಿಧಾನಿಕ ಹುದ್ದೆಯನ್ನು ಅಗೌರವಿಸಿದ ಕಾರಣಕ್ಕೋಸ್ಕರ ಸಾರ್ವಜನಿಕ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಿಜೆಪಿ ಸರ್ಕಾರಗಳನ್ನೇ ಸಂಪೂರ್ಣ ವಿಸರ್ಜನೆ ಮಾಡಬೇಕು – ಈಶ್ವರ್ ಖಂಡ್ರೆ ಕಿಡಿ

    ಮುಖ್ಯಮಂತ್ರಿಗಳಿಗೆ ಬೇರೆ ದಾರಿ ಉಳಿದಿಲ್ಲ. ಅವರು ಕಾನೂನು ಪಂಡಿತರು. ಸಿಂಪಲ್ ಚೀಫ್ ಮಿನಿಸ್ಟರ್, ಕಾಸ್ಟ್ಲಿ ಲಾಯರನ್ನು ಕರೆಸಿ ವಾದ ಮಂಡಿಸಿದ್ದರು. ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್‌ಗಳೆಲ್ಲರೂ ಕಾಸ್ಟ್ಲಿ. ಅವರೆಲ್ಲರೂ ವಾದ ಮಾಡಿದ್ದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಾಗಿಲ್ಲ. ಇನ್ನೆಲ್ಲಿಗೆ ಹೋದರೂ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಗೆಲ್ಲುವುದಿಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆಪಾಟಲಿಗೆ ಈಡಾಗುತ್ತೀರಿ ಎಂದು ಎಚ್ಚರಿಸಿದರು. ಇದನ್ನೂ ಓದಿ: ಆಪ್ತರ ಮಾತು ಕೇಳಿ ಸಿಎಂ ಕೆಟ್ಟರು, ಸತ್ಯಕ್ಕೆ ಜಯ ಸಿಕ್ಕಿದೆ : ಶಾಸಕ ಶ್ರೀವತ್ಸ

    ನೀವೂ ಸತ್ಯಕ್ಕೆ ಜೈ ಎನ್ನಿ. ರಾಜೀನಾಮೆ ಕೊಡುವುದೊಂದೇ ನಿಮಗಿರುವ ದಾರಿ. ಸಿದ್ದರಾಮಯ್ಯನವರೇ ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಿ. ಈಗ ಮಾಡಿದ್ದೇ ಜಾಸ್ತಿ ಭಂಡತನ. ಇನ್ನೂ ಭಂಡತನ. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಿರಿ ಎಂದು ತಿಳಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್.ಅಶೋಕ್

    ನೀವು ಎಸಿಬಿ ಮೂಲಕ ಸಾಕಷ್ಟು ಕೇಸುಗಳನ್ನು ಮುಚ್ಚಿ ಹಾಕಿದ್ದೀರಿ. ಭ್ರಷ್ಟಾಚಾರ ಪ್ರಕರಣ ಬಂದ ಕಾರಣ ಲೋಕಾಯುಕ್ತವನ್ನೂ ದುರ್ಬಲಗೊಳಿಸಿದ್ದೀರಿ. ಬಳಿಕ ಎಸಿಬಿ ಮೂಲಕ ಕ್ಲೀನ್‌ಚಿಟ್ ಕೊಡುವ ಕೆಲಸ ಮಾಡಿದ್ದೀರಿ. ಎಲ್ಲಾ ಕಾಲದಲ್ಲೂ ಇದು ನಡೆಯದೆಂಬ ಸತ್ಯ ನಿಮಗೆ ಅರಿವಾಗಿದೆ. ಸಿದ್ದರಾಮಯ್ಯನವರೇ ನೀವು ನ್ಯಾಯಾಲಯದ ತೀರ್ಪನ್ನು ಗೌರವಿಸಿ. ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

  • MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

    MUDA Scam| ರಾಜಭವನದ ದುರ್ಬಳಕೆಯಾಗಿದೆ, ನಾನು ಯಾವುದೇ ತನಿಖೆಗೆ ಹಿಂಜರಿಯಲ್ಲ – ಸಿಎಂ ಮೊದಲ ಪ್ರತಿಕ್ರಿಯೆ

    – ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದೆ
    – ನನ್ನ ವಿರುದ್ಧ ರಾಜಕೀಯ ಸಂಚು

    ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ ಎಂದು ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

    ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದ ಬೆನ್ನಲ್ಲೇ ಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

    ಸಿಎಂ ಹೇಳಿದ್ದೇನು?
    ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ಇದನ್ನೂ ಓದಿ: ಸಿಎಂ ಸಲ್ಲಿಸಿದ್ದ ರಿಟ್‌ ಅರ್ಜಿ ವಜಾ – ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌

    ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

    ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ.

    ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ. ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ. ಬಿಜೆಪಿ, ಜೆಡಿಎಸ್ (BJP, JDS) ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ.

    ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?

    ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

    ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ.

    ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ.

    ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ.

    ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು.

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ 136 ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.

    ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ.

  • MUDA Case| ಮಂಗಳವಾರ ಸಿಎಂಗೆ ಬಿಗ್‌ ಡೇ – ತೀರ್ಪು ಬೆನ್ನಲ್ಲೇ ನಡೆಯಲಿದೆ CLP ಸಭೆ

    MUDA Case| ಮಂಗಳವಾರ ಸಿಎಂಗೆ ಬಿಗ್‌ ಡೇ – ತೀರ್ಪು ಬೆನ್ನಲ್ಲೇ ನಡೆಯಲಿದೆ CLP ಸಭೆ

    ಬೆಂಗಳೂರು: ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಡಿ ಡೇ. ಕಾರಣ ಮುಡಾ ಪ್ರಕರಣದಲ್ಲಿ (MUDA Case) ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಕ್ರಮ ಪ್ರಶ್ನಿಸಿ ವಿಚಾರಣೆ ನಡೆಸಿದ್ದ ಹೈಕೋರ್ಟ್ (High Court) ಮಂಗಳವಾರ ತೀರ್ಪು ಪ್ರಕಟಿಸಲಿದೆ.

    ಈ ವಿಚಾರದಲ್ಲಿ ಕೋರ್ಟ್ ನೀಡುವ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದೆ. ಒಂದೊಮ್ಮೆ ತೀರ್ಪು ಸಿಎಂ ಸಿದ್ದರಾಮಯ್ಯ ಪರವಾಗಿ ಬಂದರೆ ಅವರ ಕುರ್ಚಿ ಸೇಫ್ ಆಗಲಿದೆ. ಇಲ್ಲದಿದ್ದರೆ ಸಿದ್ದರಾಮಯ್ಯ ರಾಜಕೀಯವಾಗಿ ಸಂಕಷ್ಟಕ್ಕೆ ಈಡಾಗಬಹುದು ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.

     

    ಯಾವುದಕ್ಕೂ ಇರಲಿ ಎಂದು ತೀರ್ಪು ಬಂದ ಕೂಡಲೇ ಕಾಂಗ್ರೆಸ್‌ ಶಾಸಕಾಂಗ ಸಭೆ ಕರೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ರಾಜ್ಯದ ಬೆಳವಣಿಗೆಗಳ ಮೇಲೆ ಎಐಸಿಸಿ (AICC) ತೀವ್ರ ನಿಗಾ ಇರಿಸಿದೆ. ಇದನ್ನೂ ಓದಿ: ಬಿಗ್‌ ಬಾಸ್‌ ಶೋಗೆ ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು?- ನಟ ಹೇಳೋದೇನು?

    ಹೈಕೋರ್ಟ್ ತೀರ್ಪು ಬಳಿಕ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ನಿರೀಕ್ಷೆಯಲ್ಲಿ ಬಿಜೆಪಿ ಜೆಡಿಎಸ್ ಪಕ್ಷಗಳಿವೆ. ಮುಂದಿನ ಲೆಕ್ಕಾಚಾರಗಳನ್ನು ಹಾಕಿಕೊಂಡೇ ದೋಸ್ತಿಗಳು ಮುಂದೇನು ಮಾಡಬೇಕೆಂದು ರಣತಂತ್ರ ರೂಪಿಸಿವೆ.

    ಕೋರ್ಟ್ ತೀರ್ಪು ಸಿದ್ದರಾಮಯ್ಯಗೆ ವ್ಯತಿರಿಕ್ತವಾಗಿ ಬಂದರೆ ಮತ್ತೊಂದು ಹಂತದ ಹೋರಾಟ ಪ್ಲಾನ್ ಮಾಡಿಕೊಂಡಿವೆ. ನಿರಂತರ ಹೋರಾಟ ಮೂಲಕ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಡ ಸೃಷ್ಟಿಸುವ ಗುರಿಯನ್ನು ಹೊಂದಿದೆ. ತೀರ್ಪಿನ ಸ್ವರೂಪ, ಗಂಭೀರತೆ ನೋಡಿಕೊಂಡು ಮುಂದುವರೆಯಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.