Tag: MUDA Scam

  • ಸಿದ್ದರಾಮಯ್ಯಗೆ ಅಭದ್ರತೆ ಕಾಡ್ತಿರೋದ್ರೀಂದ ವಿಪಕ್ಷ ನಾಯಕರ ಮೇಲೆ ಕೇಸ್ ದಾಖಲು – ವಿಜಯೇಂದ್ರ ಕಿಡಿ

    ಸಿದ್ದರಾಮಯ್ಯಗೆ ಅಭದ್ರತೆ ಕಾಡ್ತಿರೋದ್ರೀಂದ ವಿಪಕ್ಷ ನಾಯಕರ ಮೇಲೆ ಕೇಸ್ ದಾಖಲು – ವಿಜಯೇಂದ್ರ ಕಿಡಿ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ (Siddaramaiah) ಅಭದ್ರತೆ ಕಾಡ್ತಿದೆ. ಹೀಗಾಗಿ ವಿಪಕ್ಷಗಳ ನಾಯಕರ ಮೇಲೆ FIR ದಾಖಲು ಮಾಡಿ ಟಾರ್ಗೆಟ್ ಮಾಡ್ತಿದ್ದಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬಿಜೆಪಿ‌ ನಾಯಕರ ಮೇಲೆ FIR ದಾಖಲು ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯಗೆ ಅಭದ್ರತೆ ಕಾಡ್ತಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿ ಬರ್ತಿವೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ‌ ಸರ್ಕಾರ ವಿಫಲವಾಗಿದೆ. ಅಭಿವೃದ್ಧಿ ಕೆಲಸ ಆಗ್ತಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ: ರಾಜ್ಯ ಸರ್ಕಾರಕ್ಕೆ ಜೋಶಿ ಆಗ್ರಹ

    ಹೊಸ ಕೇಸ್‌ಗಳನ್ನ ವಿಪಕ್ಷಗಳ (Opposition Party) ಮೇಲೆ ಹಾಕ್ತಿದ್ದಾರೆ. ರಾಜ್ಯದ ಜನರಿಗೆ ಗೊತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಕೇಸ್‌, ಮುಡಾ ಹಗರಣದಲ್ಲಿ ಸಿಎಂ ಫಿಕ್ಸ್‌ ಆಗಿದ್ದಾರೆ ಅಂತ. ರಾಜ್ಯದಲ್ಲಿ ಕೋಮುಗಲಭೆಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ. ಇದೇ ಸಮಯದಲ್ಲಿ ವಿಪಕ್ಷಗಳ ನಾಯಕರನ್ನ ಈ ಸರ್ಕಾರ ಟಾರ್ಗೆಟ್ ಮಾಡ್ತಿದೆ ಅಂತ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ್ರು; ಒಡಿಶಾ ಠಾಣೆಯಲ್ಲಿ ಅನುಭವಿಸಿದ ಯಾತನೆಯ ಕತೆ ಹೇಳಿದ ಸೇನಾಧಿಕಾರಿಯ ಭಾವಿ ಪತ್ನಿ

  • ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ, ಏಕೆ ರಾಜೀನಾಮೆ ಕೊಡ್ಬೇಕು? – ಹೆಚ್‌ಡಿಕೆ ಗರಂ

    ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ, ಏಕೆ ರಾಜೀನಾಮೆ ಕೊಡ್ಬೇಕು? – ಹೆಚ್‌ಡಿಕೆ ಗರಂ

    -ಯಾವನೋ ಬರೆದುಕೊಟ್ಟಿದ್ದನ್ನ ತುತ್ತೂರಿ ಊದಿದ್ದಾರೆ ಎಂದ ಕೇಂದ್ರ ಸಚಿವ

    ಮಂಡ್ಯ: ತನಿಖೆ ಮಾಡಲಿ ಮುಡಾ ಹಗರಣಕ್ಕೂ (MUDA Scam) ನನಗೂ ಸಂಬಂಧವೇ ಇಲ್ಲ. ನಾನು ಯಾಕೆ ರಾಜೀನಾಮೆ (Resignation) ಕೊಡಬೇಕು ಎಂದು ಕಾಂಗ್ರೆಸ್ (Congress) ನಾಯಕರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumarswamy) ಕಿಡಿಕಾರಿದ್ದಾರೆ.ಇದನ್ನೂ ಓದಿ: ಹಾಲಿವುಡ್‌ನತ್ತ ರಕ್ಕಮ್ಮ- ಆ್ಯಕ್ಷನ್ ಅವತಾರ ತಾಳಿದ ಜಾಕ್ವೆಲಿನ್

    ಜಿಲ್ಲೆಯ ಉರಮಾರಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಅವರು, ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಸಚಿವರು ರಾಜೀನಾಮೆಗೆ ಒತ್ತಾಯ ಮಾಡುತ್ತಿದ್ದಾರೆ. ನನಗೂ ಮುಡಾ ಹಗರಣಕ್ಕೂ ಏನು ಸಂಬಂಧ? ಕನ್ನಡ ಓದೋಕೊ ಬರುತ್ತೋ, ಇಂಗ್ಲಿಷ್ ಓದೋಕೊ ಬರುತ್ತೋ ಕೇಳಿ. ಮೊದಲು ಆ ಪೇಪರ್‌ನಲ್ಲಿ ಏನಿದೆ ಎಂದು ಸರಿಯಾಗಿ ಕುಳಿತು ನೋಡಲು ಹೇಳಿ ಎಂದರು.

    ಆ ಪೇಪರ್‌ನಲ್ಲಿ ಏನಿದೆ? ಅವರೇನೂ ಹುಚ್ಚರಾ ರಾಜೀನಾಮೆ ಕೇಳವುದಕ್ಕೆ. ಅವರು ಕೇಳಿದರೂ ಅಂತಾ ನಾನು ರಾಜೀನಾಮೆ ಕೊಡಬೇಕು? ಯಾಕೆ ರಾಜೀನಾಮೆ ಕೊಡಬೇಕು? ಏನು ತಪ್ಪು ಮಾಡಿದ್ದೇನೆ? ದಾಖಲೆಗಳನ್ನು ಅವರು ಸರಿಯಾಗಿ ನೋಡಿದ್ದರಾ? ಯಾವನೋ ಬರೆದುಕೊಟ್ಟಿದ್ದಾನೆ ಅದನ್ನು ಬಂದು ತುತ್ತೂರಿ ಊದಿದ್ದಾರೆ. ತನಿಖೆ ಮಾಡಲಿ ಮುಡಾ ಹಗರಣಕ್ಕೂ ನನಗೂ ಸಂಬಂಧವೇ ಇಲ್ಲ. 2015ರಿಂದ ಬಿಟ್ಟುಕೊಂಡು ಇದ್ದಾರೆ. ನಾಲ್ಕು ವರ್ಷ ಏನು ಮಾಡುತ್ತಿದ್ದರು? ಅದರಲ್ಲಿ ನನ್ನ ಪಾತ್ರ ಏನಿದೆ ಹೇಳಲಿ. ಉತ್ತರ ಕೊಡುವ ವಿಚಾರವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಚಲಿಸುತ್ತಿದ್ದಾಗಲೇ BMTC ಬಸ್‌ ಚಾಲಕನಿಗೆ ಹೃದಯಾಘಾತ – ಟ್ರಾಫಿಕ್ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್‌!

  • ಮುಡಾ ಹಣ ವರುಣ ಕ್ಷೇತ್ರಕ್ಕೆ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

    ಮುಡಾ ಹಣ ವರುಣ ಕ್ಷೇತ್ರಕ್ಕೆ – ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು

    ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ (MUDA Scam) ಸಂಕಷ್ಟ ನಿಲ್ಲುವಂತೆ ಕಾಣ್ತಿಲ್ಲ. ಮುಡಾ ಹಣವನ್ನು ವರುಣ ಕ್ಷೇತ್ರದ (Varuna Constituency) ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪ ಕೇಳಿ ಬಂದಿದೆ.

    ಸಿಎಂ ಮೌಖಿಕ ಆದೇಶದ ಮೇರೆಗೆ ಕಾನೂನು ಮೀರಿ ಮುಡಾ ಹಣವನ್ನು ವರುಣ ಕ್ಷೇತ್ರದ ಹಳ್ಳಿಗಳ ಅಭಿವೃದ್ಧಿಗೆ ಬಳಸಲಾಗಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಮೈಸೂರು ಮೂಲದ ಪಿ.ಎಸ್. ನಟರಾಜು ದೂರುಕೊಟ್ಟಿದ್ದಾರೆ.  ಇದನ್ನೂ ಓದಿ: ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಬಳಕೆ – ಜಗನ್ ಅವಧಿಯಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆ!

    ಪ್ರಾಧಿಕಾರದ ಸಭೆಯ ಕಡತದಲ್ಲೇ ಈ ವಿಚಾರ ಉಲ್ಲೇಖವಾಗಿದೆ. ಆರ್ಥಿಕವಾಗಿ ನಷ್ಟದಲ್ಲಿದ್ದರೂ ಮುಡಾದ 450 ಕೋಟಿ ರೂ. ಮೊತ್ತದ ಕಾಮಗಾರಿ ಕೈಗೊಂಡು ಅಧಿಕಾರ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಗೆ ಸೂಚಿಸಬೇಕೆಂದು ಎಂದು ನಟರಾಜ್ ಕೋರಿದ್ದಾರೆ.

    ದೂರಿನ ಹಿನ್ನೆಲೆಯಲ್ಲಿ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಶೀಘ್ರ ವರದಿ ಸಲ್ಲಿಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಸೆ.5ರಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

  • ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ: ಹೆಚ್‌ಡಿಕೆ ಬಾಂಬ್‌

    ದಲಿತ ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗದಲ್ಲಿ ಸಿದ್ದರಾಮಯ್ಯ ಮನೆ: ಹೆಚ್‌ಡಿಕೆ ಬಾಂಬ್‌

    ಬೆಂಗಳೂರು: ಮುಡಾ ಸೈಟ್ ಹಗರಣದ (MUDA Scam) ಸುದ್ದಿ ಜೋರಾಗುತ್ತಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ಮೇಲೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.

    ಮೈಸೂರಿನಲ್ಲಿ ದಲಿತ (Dalit) ವಿಕಲಚೇತನ ವ್ಯಕ್ತಿಗೆ ಹಂಚಿಕೆಯಾದ ಜಾಗವನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಅ ಜಾಗದಲ್ಲಿ ಡಿಸಿಎಂ ಆಗಿದ್ದಾಗ ಮನೆ ಕಟ್ಟಿದ್ದಾರೆ ಅಂತ ಸಿದ್ದರಾಮಯ್ಯ ಮೇಲೆ ನೇರ ಆರೋಪ ಮಾಡಿದ್ದಾರೆ.

    ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುಡಾದಲ್ಲಿ 15 ಸೈಟ್ ಅಕ್ರಮವಾಗಿ ಪಡೆದ ಪ್ರಕರಣ ಒಂದು ಕಡೆಯಾದರೆ ಇದು ಇನ್ನೊಂದು ಅಕ್ರಮ. ಸಿದ್ದರಾಮಯ್ಯ ಡಿಸಿಎಂ ಆಗಿ ಮೈಸೂರಿನಲ್ಲಿ ಮನೆ ಕಟ್ಟಿದ್ದರು. ಯಾರ ಜಾಗದಲ್ಲಿ ಸಿದ್ದರಾಮಯ್ಯ ಅವರೇ ಮನೆ ಕಟ್ಟಿದ್ದೀರಿ? ಬೇಕಾ ದಾಖಲೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜೀವನವು ಖಟಾ-ಖಟ್ ಅಲ್ಲ, ಕಠಿಣ ಪರಿಶ್ರಮ ಬೇಕು: ರಾಹುಲ್‌ಗೆ ಜೈಶಂಕರ್‌ ಟಾಂಗ್‌

    ದಲಿತನಿಗೆ ಹಂಚಿಕೆಯಾದ ಮುಡಾ ಸೈಟ್‌ನಲ್ಲಿ ಅಕ್ರಮವಾಗಿ ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮುಡಾ ಕೇಸ್‌ ಮಾತ್ರ ಅಲ್ಲ. ಮೈಸೂರಿನಲ್ಲಿ ಸೀರಿಸ್ ಆಫ್ ಅಕ್ರಮ ಕೇಸ್  ‌ಸಿದ್ದರಾಮಯ್ಯರದ್ದು ಇದೆ ಅಂತ ಆರೋಪ ಮಾಡಿದರು.

    ಮುಡಾಗೆ 24 ಸಾವಿರ ರೂ. ಪಾವತಿಸಿ ದಲಿತ ವಿಕಲಚೇತನ ಮುಡಾದಿಂದ ಜಾಗ ಪಡೆದಿದ್ದರು. ಅ ಜಾಗವನ್ನು ಸಾಕಮ್ಮ ಹೆಸರಿ‌ನಲ್ಲಿ ಸುಳ್ಳು ದಾಖಲೆ ಸೃಷ್ಟಿ ಮಾಡಿದ್ದರು. ಜಾಗವನ್ನು ಸಾಕಮ್ಮನಿಂದ ತೆಗೆದುಕೊಂಡು ಸಿದ್ದರಾಮಯ್ಯ ಮನೆ ಕಟ್ಟಿದ್ದಾರೆ. ಮನೆ ಕಟ್ಟಿದ ಬಳಿಕ ಆತ ಬಂದು ನೋಡಿದರೆ ಯಾರೋ ಮನೆ ಕಟ್ಟಿದ್ದಾರೆ ಎನ್ನುವುದು ಗೊತ್ತಾಗುತ್ತದೆ. ಜನ ಇದನ್ನು ಮರೆತಿರಬಹುದು. ಅದರೆ ಕುಮಾರಸ್ವಾಮಿ ಬಳಿ ಈಗಲೂ ದಾಖಲೆಗಳು ‌ಇದೆ ಎಂದರು. ಇದನ್ನೂ ಓದಿ: ಹೊಟ್ಟೆ ತುಂಬ ಊಟ ಕೊಡಿ ಪ್ಲೀಸ್ – ಅರೆಹೊಟ್ಟೆಯಲ್ಲಿ ವಸತಿ ಶಾಲಾ ವಿದ್ಯಾರ್ಥಿನಿಯರ ಪರದಾಟ

    ನನ್ನದು‌ ತೆರೆದ ಪುಸ್ತಕ ಅಂತಾರೆ ಸಿದ್ದರಾಮಯ್ಯ. ದಲಿತನ‌ ಜಾಗದಲ್ಲಿ ಕಟ್ಟಿದ್ದ ಮನೆ ಯಾರಿಗೆ ಸೇಲ್ ಮಾಡಿದ್ದೀರಿ? ಈಗ ಈ ಮನೆ ಯಾರ ಕೈಯಲ್ಲಿ ಇದೆ? ಸುಮ್ಮನೆ ಹೆಸರಿಗೆ ಮಾತ್ರ ಸಿದ್ದರಾಮಯ್ಯ ಮಾರಾಟ ಮಾಡಿದ್ದೇನೆ ಎಂದು ತೋರಿಸಿದ್ದಾರೆ. ಆ ದಾಖಲಾತಿ ತೆಗೆದರೆ ಸಿದ್ದರಾಮಯ್ಯ ವಿರುದ್ದ ದೊಡ್ಡ ರಾಮಾಯಣ ಶುರುವಾಗುತ್ತದೆ ಅಂತ ಸಿಎಂ ವಿರುದ್ದ ವಾಗ್ದಾಳಿ ನಡೆಸಿದರು.

    ಸಿದ್ದರಾಮಯ್ಯ ಅವರಿಗೆ ದಲಿತನ ಜಾಗದಲ್ಲಿ ಮನೆ ಕಟ್ಟಿರೋ ಬಗ್ಗೆ ಮಾತಾಡೋಕೆ ಹೇಳಿ. ದಲಿತನ ಜಾಗ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿರೋ ಬಗ್ಗೆ ಸಿಎಂ ಅವರಿಗೆ ಹೇಳೋಕೆ‌ ಹೇಳಿ ಮಾಧ್ಯಮಗಳಿಗೆ ಸೂಚಿಸಿದರು.

     

  • MUDA Scam |ಸಿಎಂ ಪತ್ನಿ ಕೇಳಿದ್ದು 13 ಸೈಟ್ – ಪ್ರಾಧಿಕಾರ ಕೊಟ್ಟಿದ್ದು 14 ಸೈಟ್!

    MUDA Scam |ಸಿಎಂ ಪತ್ನಿ ಕೇಳಿದ್ದು 13 ಸೈಟ್ – ಪ್ರಾಧಿಕಾರ ಕೊಟ್ಟಿದ್ದು 14 ಸೈಟ್!

    ಮೈಸೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಕುಟುಂಬಕ್ಕೆ ಸಂಬಂಧಿಸಿದ ಮುಡಾ ಹಗರಣ (MUDA Scam) ಆರೋಪ ವಿಚಾರಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಿಎಂ ಪತ್ನಿ ಪಾರ್ವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕೇಳಿದ್ದು 13 ಸೈಟ್. ಆದರೆ ಪ್ರಾಧಿಕಾರ ಅವರಿಗೆ ಖಾತೆ ಮಾಡಿಕೊಟ್ಟಿದ್ದು 14 ಸೈಟ್‌ಗೆ ಎಂಬ ಅಂಶ ಈಗ ಬಯಲಾಗಿದೆ. ಇದನ್ನೂ ಓದಿ: Manipur | ರಾಕೆಟ್‌ ದಾಳಿ ಬೆನ್ನಲ್ಲೇ ಮಷೀನ್ ಗನ್‌ ಬಳಕೆಗೆ ಮುಂದಾದ ಪೊಲೀಸರು – ಕಾಂಗ್ರೆಸ್‌ ವಿರೋಧ

    ಸಿಎಂ ಪತ್ನಿ ಪಾರ್ವತಿ ಹೆಸರಲ್ಲಿ 13 ಸೈಟ್ ಖಾತೆಗಾಗಿ ಅರ್ಜಿ ಹಾಕಲಾಗಿತ್ತು. ಜನವರಿ 13, 2022 ರಂದು ಕ್ರಯಪತ್ರವನ್ನು ನೋಂದಣಿ ಮಾಡಲಾಗಿದೆ. ದನ್ನು ಖಾತೆ ಮಾಡಿಕೊಡಿ ಎಂದು ಪಾರ್ವತಿ ಅವರ ಹೆಸರಿನಲ್ಲಿ ಸಿಎಂ ಖಾಸಗಿ ಆಪ್ತ ಸಹಾಯಕ ಎಸ್.ಜಿ ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಅರ್ಜಿ ಹಾಕಿದ್ದಾರೆ. ಇದನ್ನೂ ಓದಿ: ನಾಗಮಂಗಲದ ಕೃತ್ಯದ ಹಿಂದೆ ಕಾಂಗ್ರೆಸ್, ಪೊಲೀಸರ ಲೋಪ ಮುಚ್ಚಿ ಹಾಕಲು ಸಿಕ್ಕ ಸಿಕ್ಕವರು ಅರೆಸ್ಟ್: ಹೆಚ್‌ಡಿಕೆ

    ವಿಜಯನಗರ 3 ನೇ ಹಂತ ಸಿ,ಡಿ,ಇ & ಜಿ ಬ್ಲಾಕ್ ನಲ್ಲಿ ನಿ.ಸಂ. 25, 331,332,213, 214, 215, 05 ಮತ್ತು ವಿಜಯನಗರ 4 ನೇ ಹಂತ 2 ನೇ ಫೇಸ್ ನಿ. ಸಂಖ್ಯೆ 5108, 5085, 11189, 10855, 12065, ಮತ್ತು 12068 ಸಂಖ್ಯೆಯ ನಿವೇಶನ ಖಾತೆಗಾಗಿ ಜನವರಿ 14, 2022 ರಂದು ಅರ್ಜಿ ಹಾಕಿದ ವಿಚಾರ ಮಾಹಿತಿ ಹಕ್ಕು ಕಾಯ್ದೆಯ ಅಡಿ ಬಹಿರಂಗವಾಗಿದೆ.

     

  • MUDA Case: ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಅನಿರ್ಧಿಷ್ಟಾವಧಿ ವರೆಗೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

    MUDA Case: ಸಿಎಂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್‌ – ಅನಿರ್ಧಿಷ್ಟಾವಧಿ ವರೆಗೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

    ಬೆಂಗಳೂರು: ಮುಡಾ ಹಗರಣ (MUDA Scam) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಮತ್ತೆ ರಿಲೀಫ್‌ ಸಿಕ್ಕಿದೆ. ಅನಿರ್ಧಿಷ್ಟಾವಧಿ ವರೆಗೆ ತೀರ್ಪು ಕಾಯ್ದಿರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

    ಇಂದು ನಡೆದ ವಿಚಾರಣೆಯಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ತೀರ್ಪು ಕಾಯ್ದಿರಿಸಿ ಆದೇಶಿಸಿದ್ದಾರೆ. ಮುಂದಿನ ತೀರ್ಪು ಬರುವವರೆಗೂ ಮಧ್ಯಂತರ ಆದೇಶ ಮುಂದುವರಿಯಲಿದೆ. ಇದನ್ನೂ ಓದಿ: ಮೀಸಲಾತಿ ರದ್ದು ಹೇಳಿಕೆ ವಿವಾದ – ರಾಹುಲ್ ಗಾಂಧಿ ಪರ ನಿಂತ ಸಿಎಂ

    ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ಗುರುವಾರ ಹೈಕೋರ್ಟ್‌ನಲ್ಲಿ ನಡೆಯಿತು.

  • ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್

    ಮುಡಾ ಕೇಸ್ ವಿಚಾರಣೆ – ಇಡೀ ದಿನ ಸಿಎಂ ಕಾರ್ಯಕ್ರಮ ರಿಸರ್ವ್

    ಬೆಂಗಳೂರು: ಕೋರ್ಟ್ ನಲ್ಲಿ ಇಂದು ಮುಡಾ (MUDA Scam) ಭ್ರಷ್ಟಾಚಾರ ಕೇಸ್ ವಿಚಾರಣೆ ಹಿನ್ನೆಲೆ ಇಡೀ ದಿನ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಎಲ್ಲಾ ಕಾರ್ಯಕ್ರಮಗಳನ್ನು ಕಾಯ್ದಿರಿಸಲಾಗಿದೆ.

    ವಕೀಲರ ಜೊತೆ ಚರ್ಚೆ ಮತ್ತು ಕೋರ್ಟ್ ಕಲಾಪ ಹಿನ್ನೆಲೆಯಲ್ಲಿ ಸಿಎಂ ಯಾವುದೇ ಕಾರ್ಯಕ್ರಮಗಳನ್ನು ನಿಗದಿ ಮಾಡಿಕೊಳ್ಳಲಿಲ್ಲ. ಇದನ್ನೂ ಓದಿ: Parliament Attack| ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದು ಫೇಮಸ್‌ ಆಗಬೇಕೆಂದುಕೊಂಡಿದ್ದ ಆರೋಪಿಗಳು

    ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ. ಇದನ್ನೂ ಓದಿ: ಕೃಷಿಗೆ ಡಿಜಿಟಲ್ ಸ್ಪರ್ಶ; ಆಧಾರ್‌ನಂತೆ ರೈತರ ಜಮೀನಿಗೆ ಐಡಿ, ಡಿಜಿಟಲ್ ಮೂಲಕ ಬೆಳೆ ಸಮೀಕ್ಷೆ

  • MUDA Scam | ಹೈಕೋರ್ಟ್‌ ತೀರ್ಪಿನ ಬಳಿಕ ರಾಜ್ಯದಲ್ಲಿ ಅಸಲಿ ಗೇಮ್‌ ಶುರು?

    MUDA Scam | ಹೈಕೋರ್ಟ್‌ ತೀರ್ಪಿನ ಬಳಿಕ ರಾಜ್ಯದಲ್ಲಿ ಅಸಲಿ ಗೇಮ್‌ ಶುರು?

    ಬೆಂಗಳೂರು: ಮುಡಾ ಸೈಟ್ ಹಗರಣದ (MUDA Scam) ವಿಚಾರಣೆ ಬಹುತೇಕ ಮುಕ್ತಾಯದ ಹಂತ ತಲುಪಿದೆ. ಸೆ.12ಕ್ಕೆ ವಿಚಾರಣೆ ನಡೆದ ಬಳಿಕ ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ. ಹೈಕೋರ್ಟ್‌ (High Court) ತೀರ್ಪಿನ ನಂತರ ರಾಜ್ಯ ರಾಜಕೀಯದಲ್ಲಿ ಅಸಲಿ ಗೇಮ್‌ ಶುರುವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಲಿದೆ. ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಲಿದ್ದಾರೆ. ಇದಲ್ಲದೇ ಸೆ. 12ರಂದು ಕೂಡ ವಾದ ಸರಣಿ ಮುಂದುವರೆಯಲಿದೆ. ಅಂದು ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್ ಆದೇಶ ನೀಡುವ ಸಾಧ್ಯತೆ ಕಡಿಮೆ ಇದೆ.  ಇದನ್ನೂ ಓದಿ: ಅಕ್ಕಿ ಕೊಡ್ತೀವಿ ಅಂದ್ರೂ ರಾಜ್ಯ ಸರ್ಕಾರ ತಗೋತಿಲ್ಲ – ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ

    ತೀರ್ಪಿನತ್ತ ಚಿತ್ತ:
    ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಗಾಳಿ ಬೀಸ್ತಿದೆಯಾ? ಮುಡಾ ಕೇಸಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸ್ತಿರುವ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸನ್ನಿವೇಶ ಉದ್ಭವವಾಗುತ್ತಾ? ಗೊತ್ತಿಲ್ಲ. ಆದ್ರೆ ಒಂದು ಅವಕಾಶ ಸಿಕ್ಕಿದರೆ ಸಿಎಂ ಆಗಿಯೇ ಬಿಡೋಣ ಎಂದು ಕಾಂಗ್ರೆಸ್‌ನ ಕೆಲವರು ಪ್ರಯತ್ನ ಶುರು ಮಾಡಿದಂತೆ ಕಾಣುತ್ತಿದೆ.

    ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ. ಅವರು ರಾಜೀನಾಮೆ ನೀಡುವ ಸ್ಥಿತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಅವರಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎನ್ನುತ್ತಲೇ ಸಿದ್ದರಾಮಯ್ಯ ಸುತ್ತಮುತ್ತ ಇರುವವರೇ ಗಾದಿ ಕನಸನ್ನು ಬಿಚ್ಚಿಡುತ್ತಿದ್ದಾರೆ.

     

    ಊಟ, ತಿಂಡಿ ನೆಪದಲ್ಲಿ ಪರಮೇಶ್ವರ್ (G. Parameshwara) ಪಕ್ಷದ ಪ್ರಮುಖರನ್ನು ಭೇಟಿ ಮಾಡುತ್ತಿದ್ದಾರೆ. ಇದರ ಮಧ್ಯೆ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ (Satish Jarkiholi) ಎಂಬ ಪೋಸ್ಟರ್‌ಗಳನ್ನು ಅವರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ ನಾವೆಲ್ಲೂ ಸಿಎಂ ಸ್ಥಾನ ಕ್ಲೇಮ್ ಮಾಡಿಲ್ಲ. ಈಗ ಸಿಎಂ ಕನಸನ್ನು ಕಂಡಿಲ್ಲ. ನನ್ನ ಟಾರ್ಗೆಟ್ ಏನಿದ್ರೂ 2028 ಅಂತಾ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕಂಡಕ್ಟರ್‌ಗಳಿಗೆ ಫಜೀತಿ ತಂದ ಶಕ್ತಿ ಯೋಜನೆ – ಮಹಿಳಾ ಪ್ರಯಾಣಿಕರಿಂದ ಕೆಲಸ ಕಳೆದುಕೊಳ್ಳೋ ಭೀತಿ

    ಈ ಮಧ್ಯೆ ಸಿಎಂ ಮಾಡುವಾಗ ಸೀನಿಯರ್, ಜ್ಯೂನಿಯರ್ ವಿಚಾರ ಚರ್ಚೆಗೆ ಬರುತ್ತದೆ. ಈಗ ಆ ಚರ್ಚೆ ಅಪ್ರಸ್ತುತ ಎಂದು ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ಎಂಬಿ ಪಾಟೀಲ್ ಇಂದು ದೆಹಲಿಗೆ ತೆರಳುತ್ತಿದ್ದು ಇದಕ್ಕೆ ಸಚಿವ ಶಿವಾನಂದ ಪಾಟೀಲ್ ವ್ಯಂಗ್ಯ ಮಾಡಿದ್ದಾರೆ. ಎಂಬಿ ಪಾಟೀಲ್ ಮಾತ್ರವಲ್ಲ ಯಾರು ಬೇಕಾದರೂ ಸಿಎಂ ಆಗಬಹುದು. ಖುದಾ ಮೆಹರ್ಬಾನ್, ಗಧಾ ಪೈಲ್ವಾನ್ ಎಂಬ ಡೈಲಾಗ್ ಹೊಡೆದಿದ್ದಾರೆ.

     

  • ದರ್ಶನ್‌, ಮುಡಾ ವಿಚಾರ ಬಿಡ್ರಪ್ಪ, ಮಹದಾಯಿ ವಿಚಾರ ಮಾತನಾಡಿ – ಡಿಕೆಶಿ

    ದರ್ಶನ್‌, ಮುಡಾ ವಿಚಾರ ಬಿಡ್ರಪ್ಪ, ಮಹದಾಯಿ ವಿಚಾರ ಮಾತನಾಡಿ – ಡಿಕೆಶಿ

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಪ್ರಕರಣ ಡೈವರ್ಟ್ ಮಾಡಲು ರೇಣುಕಾಸ್ವಾಮಿ ಹತ್ಯೆ ಫೋಟೋ ರಿಲೀಸ್ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ.

    ಬೆಂಗಳೂರಲ್ಲಿ (Bengaluru) ಮಾತನಾಡಿದ ಅವರು, ದರ್ಶನ್ (Darshan), ಮೂಡಾ ವಿಚಾರ ಬಿಡ್ರಪ್ಪ. ಮಹಾದಾಯಿ (Mahadayi Project) ವಿಚಾರದಲ್ಲಿ ಏನಾಗಿದೆ ಮಾತನಾಡಿ, ಮೊದಲು ಭದ್ರಾ ಮೇಲ್ದಂಡೆ ದುಡ್ಡು ಕೊಡಿಸ್ರಪ್ಪ. 5,300 ಕೋಟಿ ಬರಬೇಕಾದುದ್ದನ್ನ ಕೊಡಿಸಿ. ಪ್ರಹ್ಲಾದ್ ಜೋಶಿಯವರಿಂದ ಕೊಡಿಸಿ. ಆಮೇಲೆ ಅವರ ಮಾತಿನ ಬಗ್ಗೆ ಉತ್ತರ ಕೊಡೋಣ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಕೊಟ್ಟಿಲ್ಲ. ಕೇಂದ್ರದಿಂದ 5,300 ಕೋಟಿ ಹಣ ಬಂದಿಲ್ಲ. ಕೇಂದ್ರಕ್ಕೆ ಹೋಗುವ ಬಗ್ಗೆ ಚರ್ಚೆ ಮಾಡ್ತೇವೆ. ಸಿಎಂ ಜೊತೆ ಮೊದಲು ಚರ್ಚೆ ಮಾಡ್ತೇವೆ. ನಂತರ ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಹೇಳ್ತೇವೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಭೀಕರ ರಸ್ತೆ ಅಪಘಾತ; ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ!

    ಇದೇ ವೇಳೆ ಎತ್ತಿನಹೊಳೆ ನೀರು ಕೊಟ್ಟರೆ ಡಿಕೆಶಿಗೆ ಭಗೀರಥ ಎನ್ನುತ್ತೇವೆ ಎಂಬ ಡಾ.ಕೆ.ಸುಧಾಕರ್ ಸವಾಲನ್ನ ಸ್ವೀಕರಿಸುತ್ತೇನೆ ಅಂತ ಡಿಸಿಎಂ ಡಿಕೆಶಿ ಹೇಳಿದ್ದಾರೆ. ಸುಧಾಕರ್ ಸವಾಲನ್ನ ಸ್ವೀಕರಿಸುತ್ತೇನೆ. ನಿನ್ನೆ ಎತ್ತಿನಹೊಳೆ ಯೋಜನೆಗೆ ಚಾಲನೆ ಕೊಟ್ಟಿದ್ದೇವೆ. ಎಲ್ಲರೂ ನಮಗೆ ಸಹಕಾರ ಕೊಟ್ಟಿದ್ದಾರೆ. ರಾಜಕೀಯವಾಗಿ ಟೀಕೆ ಮಾಡಬಹುದು. ಆದರೆ ನಾವು ನಮ್ಮ ಕೆಲಸ ಮಾಡಿದ್ದೇವೆ. ರಾಜ್ಯದಲ್ಲಿ ಒಳ್ಳೆಯ ಮಳೆ ಬಿದ್ದಿದೆ ಬೆಳೆ ಆಗ್ತಿದೆ. ಎಲ್ಲಾ ವಿಘ್ನಗಳು ನಿವಾರಣೆಯಾಗಿದೆ ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಹಬ್ಬ

    ಇನ್ನೂ ಬಯಲು ಸೀಮೆಯಲ್ಲಿ ಕೆರೆಗಳು ತುಂಬಿಲ್ಲ. ಎತ್ತಿನಹೊಳೆ ಯೋಜನೆ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಚಿಕ್ಕಬಳ್ಳಾಪುರ ಸಂಸದರು ಸವಾಲ್ ಹಾಕಿದ್ದಾರೆ. ಅವರ ಸವಾಲ್ ಅನ್ನು ನಾನು ಸ್ವೀಕರಿಸುತ್ತೇನೆ. ಹಿಂದೆ ಶರಾವತಿ ಸುಟ್ಟುಹೋಗಿತ್ತು. ಅದನ್ನ ನಾವು ಸರಿಮಾಡಿದ್ದೇವೆ. ತುಂಗಭದ್ರಾ ಗೇಟ್ ಕೊಚ್ಚಿ ಹೋಗಿತ್ತು. ಅದನ್ನ ಸರಿಪಡಿಸಿದ್ದೆವು, ಈಗ ನೀರು ತುಂಬಿದೆ. ಎಲ್ಲವೂ ಸರಿಯೋಗ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಆಶಿಸಿದ್ದಾರೆ. ಇದನ್ನೂ ಓದಿ: ‘ಹನುಮಾನ್’ ನಿರ್ದೇಶಕನ ಹೊಸ ಸಿನಿಮಾ: ಚಿತ್ರರಂಗಕ್ಕೆ ಬಾಲಯ್ಯ ಪುತ್ರನ ಗ್ರ್ಯಾಂಡ್ ಎಂಟ್ರಿ

    ಚಿಕ್ಕಬಳ್ಳಾಪುರ, ಕೋಲಾರ ಭಾಗದಲ್ಲಿ 2,000 ಅಡಿಗೆ ನೀರು ಹೋಗಿದೆ. ಎತ್ತಿನಹೊಳೆಗಾಗಿ ಎಲ್ಲರೂ ಹೋರಾಟ ಮಾಡಿದ್ದರು. ಸುಧಾಕರ್ ಸೇರಿ ಎಲ್ಲರೂ ಹೋರಾಟ ಮಾಡಿದ್ದರು. ಮೊಯ್ಲಿ, ಮುನಿಯಪ್ಪನವರು ಫೈಟ್ ಮಾಡಿದ್ದರು. ತುಮಕೂರು, ದೊಡ್ಡಬಳ್ಳಾಪುರಗಳಲ್ಲೂ ಪ್ರಾಬ್ಲಂ ಇದೆ. ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮಸ್ಯೆ ಇದೆ. ನಾನು ವಾಪಸ್ ಬಂದ ನಂತರ ಅದನ್ನ ಬಗೆಹರಿಸುತ್ತೇನೆ ಮಾಡ್ತೇನೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಗಣೇಶೋತ್ಸವದ ದಿನ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆ ಮೂಂದೂಡಿಕೆ!

  • ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ

    ನ್ಯಾಯಾಲಯದ ತೀರ್ಪು ಬರುವ ಮೊದಲು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಎಸ್‌ವೈ

    ಶಿವಮೊಗ್ಗ: ಮುಡಾ ಹಗರಣ (MUDA Scam) ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವ ಬಗ್ಗೆ ನ್ಯಾಯಾಲಯದ ತೀರ್ಪು ಬರುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಸಲಹೆ ನೀಡಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತದೆ. ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಯಾಕೆಂದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ ಎಂದರು. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ

    ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ಕೊಡೋದು ಒಳ್ಳೆಯದು. ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ. ಮುಡಾ ಹಗರಣ ಜಗಜ್ಜಾಹೀರು ಆಗಿರುವ ಸಂಗತಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ವರದಿ ವಿಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವತಂತ್ರ ಇದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರು ಇದನ್ನೂ ಓದಿ: ರಾಜಸ್ಥಾನ ಪೊಲೀಸ್‌ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ

    ನಾವು ಯಾವುದೇ ಹೋರಾಟ ಮಾಡಲ್ಲ. ರಾಜ್ಯಪಾಲರು ಇನ್ನುಳಿದ ನಾಲ್ವರು ಸಚಿವರಿಗೆ ನೋಟಿಸ್ ಕೊಟ್ಟಿರುವ ವಿಚಾರದ ಬಗ್ಗೆ ಅವರು ಸರ್ವ ಸ್ವತಂತ್ರ ಇದ್ದಾರೆ. ಎಲ್ಲರಿಗೂ ನೋಟಿಸ್ ಕೊಟ್ಟಿದ್ದಾರೆ. ಏನು ಬೇಕಾದರೂ ತೀರ್ಮಾನ ತೆಗೆದುಕೊಳ್ಳಲಿ. ರಾಜ್ಯಪಾಲರು ನೋಟಿಸ್ ಕೊಟ್ಟಿದ್ದಾರೆ. ಏನು ಮಾಡುತ್ತಾರೋ ನೋಡೋಣ. ಸಿದ್ದರಾಮಯ್ಯ ಅವರ ತನಿಖೆ ಬಹುತೇಕ ಮುಗಿಯುವ ಹಂತ ತಲುಪಿದೆ. ಅವರು ರಾಜೀನಾಮೆ ಕೊಡಬೇಕಾಗುತ್ತದೆ ಎಂದರು. ಇದನ್ನೂ ಓದಿ: ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ