Tag: MUDA Scam

  • ಮಾಜಿ ಆಯುಕ್ತ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂದು ಸಾಬೀತು; ಈಗಲಾದ್ರೂ ಸಿಎಂ ರಾಜೀನಾಮೆ ಕೊಡಲಿ: ಎನ್.ರವಿಕುಮಾರ್

    ಮಾಜಿ ಆಯುಕ್ತ ಅಮಾನತಿನಿಂದ ಮುಡಾ ನಿರ್ಣಯ ತಪ್ಪೆಂದು ಸಾಬೀತು; ಈಗಲಾದ್ರೂ ಸಿಎಂ ರಾಜೀನಾಮೆ ಕೊಡಲಿ: ಎನ್.ರವಿಕುಮಾರ್

    ಬೆಂಗಳೂರು: ಅಕ್ರಮವಾಗಿ ಸಿಕ್ಕಿದ ಮೈಸೂರು (Mysuru) ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಬೇಕು ಹಾಗೂ ಅಕ್ರಮದ ಆ ತಪ್ಪಿಗೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ (N Ravikumar) ಆಗ್ರಹಿಸಿದರು.

    ಮಲ್ಲೇಶ್ವರದ ಬಿಜೆಪಿ (BJP)  ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಕಾನೂನು, ನಿಯಮ, ನಿರ್ದೇಶನಗಳಿಗೆ ಅವರು ವಿರುದ್ಧವಾಗಿ ವರ್ತಿಸಿದ್ದರು ಎಂಬ ಕಾರಣಕ್ಕೆ ಮುಡಾದ ಹಿಂದಿನ ಅಧಿಕಾರಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಿದ್ದಾರೆ. ಈ ಮೂಲಕ ಮುಡಾದ ನಿರ್ಣಯಗಳು, ನಿರ್ದೇಶನಗಳು, ನಿರ್ಧಾರಗಳು ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದೀರಿ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್

    ಮುಖ್ಯಮಂತ್ರಿಗಳಿಗೆ ಸಮಾನಾಂತರ ಬಡಾವಣೆಯಲ್ಲಿ ಸೈಟ್ ಸಿಕ್ಕಿದ್ದಲ್ಲ. ಬಹಳ ದೊಡ್ಡ ಮಟ್ಟದಲ್ಲಿ ಬೆಲೆಬಾಳುವ ನಿವೇಶನಗಳಿರುವ ಬಡಾವಣೆ ಅದಾಗಿದೆ. ಚದರಡಿಗೆ 1 ಸಾವಿರ ರೂ. ಸಿಗುವ ಜಾಗ ಬಿಟ್ಟು 10 ಸಾವಿರದಿಂದ 12 ಸಾವಿರ ರೂ.ಗೆ ಚದರಡಿ ಇರುವಂಥ ಪ್ರದೇಶದಲ್ಲಿ ಸೈಟ್ ಪಡೆದುದು ಅಕ್ರಮ ಎಂದು ತಿಳಿಸಿದರು. ದಿನೇಶ್ ಕುಮಾರ್ (GT Dinesh Kumar) ಅಮಾನತು ತಮಗೆ ಗೊತ್ತಿಲ್ಲ ಎಂದು ಸಿಎಂ ಹೇಳುತ್ತಿದ್ದಾರೆ. ಮೈಸೂರು ಮುಡಾದ ಅಕ್ರಮ ಸಂಬಂಧದಲ್ಲೇ ಅಧಿಕಾರಿ ಅಮಾನತಾಗಿದ್ದಾರೆ. ನಿಮ್ಮ ಜಾಣ ಉತ್ತರವು ಕರ್ನಾಟಕದ (Karnataka) ಜನರನ್ನು ದಿಗ್ಭ್ರಾಂತರನ್ನಾಗಿ ಮಾಡಿದೆ ಎಂದು ಹೇಳಿದರು.

    ದಿನೇಶ್ ಕುಮಾರ್ ಅಮಾನತು ತಮಗೆ ಗೊತ್ತಿಲ್ಲ ಎಂಬ ಉತ್ತರವು ಕರ್ನಾಟಕದ ಜನರನ್ನು ದಿಗ್ಭ್ರಾಂತರನ್ನಾಗಿ ಮತ್ತು ಮೂಢರನ್ನಾಗಿ ಮಾಡುವಂಥದ್ದು. ನಿವೇಶನ ಅಭಿವೃದ್ಧಿ ವೇಳೆ 15%ರಷ್ಟು ಉದ್ಯಾನ ಸಂಬಂಧಿಸಿದ ಜಮೀನು, 10%ರಷ್ಟು ನಾಗರಿಕ ಸೌಲಭ್ಯಕ್ಕೆ ಜಾಗ ಕೊಟ್ಟಿಲ್ಲ ಎಂಬುದು ಅಮಾನತಿಗೆ ಒಂದು ಕಾರಣ. 2009ರಿಂದ ಜಾರಿಗೊಂಡ 50-50 ಅನುಪಾತದ ನಿಯಮಗಳು ಅನ್ವಯವಾಗುವುದಿಲ್ಲವಾದ್ದರಿಂದ ಪ್ರಾಧಿಕಾರದಿಂದ ಬದಲಿ ನಿವೇಶನ ಮಂಜೂರಾತಿಗೆ ಶೇ. 50-50 ಅನುಪಾತದಂತೆ ಕೈಗೊಂಡಿರುವ ಯಾವುದೇ ಕ್ರಮವೂ ಕಾನೂನು ಬಾಹಿರವಾಗಿರುತ್ತದೆ ಎಂದು ಇನ್ನೊಂದು ಪ್ರಮುಖ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ನಾವೂ ಇದೇ ಪ್ರಶ್ನೆಯನ್ನು ಎತ್ತಿದ್ದೆವು ಎಂದು ವಿವರಿಸಿದರು. ಇದನ್ನೂ ಓದಿ: ಚೆನ್ನೈ ಕಾರ್ಪೊರೇಷನ್ ಸಭೆಯಲ್ಲಿ ಡಿಕೆ ಶಿವಕುಮಾರ್ ಭಾಗಿ

    2009ರ ಮೇಲ್ಪಟ್ಟು ಇದು ಜಾರಿಯಾಗುತ್ತದೆ. 2015ಕ್ಕೆ ಇದನ್ನು ಜಾರಿ ಮಾಡಿದ್ದರು. ಮುಡಾದಲ್ಲಿ ಈ ಸಂಬಂಧ ಸಭೆ ನಡೆದಿತ್ತು. ಆ ಜನರಲ್ ಬಾಡಿ ಮೀಟಿಂಗ್‌ನಲ್ಲಿ ರಾಮದಾಸ್, ಜಿ.ಟಿ.ದೇವೇಗೌಡ, ಮರಿತಿಬ್ಬೇಗೌಡ ಮೊದಲಾದವರು ಭಾಗವಹಿಸಿದ್ದರು. ಅದರೊಳಗೆ ಇಬ್ಬರನ್ನು ಬಿಟ್ಟು ಎಲ್ಲರೂ ಅದನ್ನು (ಶೇ.50-50 ಅನುಪಾತ) ವಿರೋಧಿಸಿದ್ದರು. ಆದರೆ, ಅಲ್ಲಿನ ಚರ‍್ಮನ್ ರಾಜೀವ್, ಕಮಿಷನರ್ ನಟೇಶ್ ಹೊರತುಪಡಿಸಿ ಎಲ್ಲರೂ ವಿರೋಧಿಸಿದ್ದು, ಕಾನೂನೇ ಆಗಿರಲಿಲ್ಲ. ಆದರೆ, ನಿಯಮ ಆಗಿದೆ ಎಂದು ನಕಲಿ ನಿರ್ಣಯ ಮಾಡಿ ಅದರ ಪ್ರಕಾರ 14 ಸೈಟ್‌ಗಳನ್ನು ಇವರಿಗೆ ಕೊಟ್ಟಿದ್ದರು ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಇಂದು ಬ್ರುನೈಗೆ ಪ್ರಧಾನಿ ಮೋದಿ ಭೇಟಿ – 7 ಸಾವಿರ ಕಾರುಗಳ ಒಡೆಯ ಬ್ರುನೈ ಸುಲ್ತಾನನಿಂದ ಸ್ವಾಗತ

    ಶೇ.50-50 ಅನುಪಾತವೇ ಅನುಷ್ಠಾನಕ್ಕೆ ಬಂದಿರಲಿಲ್ಲ. ಆಗಿದೆ ಎಂದು ಸಿದ್ದರಾಮಯ್ಯನವರು (CM Siddaramaiah) ಹೇಳುತ್ತಿದ್ದರು. ಶೇ.50-50 ಅನುಪಾತವೇ ಜಾರಿಯಲ್ಲಿಲ್ಲ ಎಂದ ಮೇಲೆ ಸಿದ್ದರಾಮಯ್ಯನವರು 14 ಸೈಟ್‌ಗಳನ್ನು ಏನು ಮಾಡುತ್ತಾರೆ? ಅನಧಿಕೃತವಾಗಿ, ಕಾನೂನುಬಾಹಿರವಾಗಿ ಪಡೆದ 14 ಸೈಟ್‌ಗಳನ್ನು ವಾಪಸ್ ಕೊಡುತ್ತಾರಾ ಎಂದು ಕೇಳಿದರು. ಇದನ್ನೂ ಓದಿ: ದರ್ಶನ್‌ ತಪ್ಪು ಮಾಡಿದ್ದಕ್ಕೆ ಜೈಲಿಗೆ ಹೋಗಿದ್ದಾರೆ: ಜಮೀರ್‌

    ಇದೊಂದು ಬಹುದೊಡ್ಡ ಹಗರಣ. ರಾಜ್ಯ ಸರ್ಕಾರದ ಕೈಕೆಳಗೆ ಇರುವ ಸಂಸ್ಥೆ ಬಿಟ್ಟು ಬೇರೆ ಸಂಸ್ಥೆಗೆ ತನಿಖೆಗೆ ಕೊಡಬೇಕೆಂಬ ಆಗ್ರಹ ತಮ್ಮದು ಎಂದು ಪ್ರಶ್ನೆಗೆ ಉತ್ತರಿಸಿದರು. ಇದನ್ನೂ ಓದಿ: ಬಳ್ಳಾರಿ ಜೈಲಲ್ಲಿ ಟಿವಿಗಾಗಿ ದರ್ಶನ್ ಮೊರೆ

    ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ಮಾತನಾಡಿ, ಅಕ್ರಮದ ವಿರುದ್ಧ ಬಿಜೆಪಿ ಸತತ ಹೋರಾಟ ಮಾಡಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕ ಮಾಡಿದ ತಾಂತ್ರಿಕ ಪರಿಣಿತರ ಸಮಿತಿ ವರದಿಯನ್ನು 2003ರಲ್ಲೇ ಕೊಡಲಾಗಿತ್ತು. ಅಲ್ಲಿಂದ ಇಲ್ಲಿವರೆಗೆ ಅದನ್ನು ಧೂಳು ಹಿಡಿಸಿ ಇಟ್ಟುಕೊಂಡು ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬ ರೀತಿಯಲ್ಲಿ ಈಗ ಒಬ್ಬ ಆಯುಕ್ತರನ್ನು ಅಮಾನತು ಮಾಡಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ | ಸೊಳ್ಳೆ ಉತ್ಪತ್ತಿಯಾದ್ರೆ ಬೀಳುತ್ತೆ ದಂಡ – ಮನೆ, ಹೋಟೆಲ್ ಮಾಲೀಕರಿಗೆ ಎಷ್ಟು?

    ಸಿದ್ದರಾಮಯ್ಯನವರ 14 ನಿವೇಶನಗಳೂ ಶೇ. 50-50 ಅನುಪಾತದಡಿ ಸಿಕ್ಕಿದ್ದು ತಾನೇ? ಆ ಆಯುಕ್ತರನ್ನು ಯಾಕೆ ಅಮಾನತು ಮಾಡಿಲ್ಲ? ಸಿದ್ದರಾಮಯ್ಯನವರ ಕುಟುಂಬಕ್ಕೆ ನಿವೇಶನ ಕೊಟ್ಟಿದ್ದಕ್ಕೆ ಇದು ಬಳುವಳಿ ಎಂದು ಆಕ್ಷೇಪಿಸಿದರು. ಅದಕ್ಕಾಗಿಯೇ ಅವರನ್ನು ಶಿಕ್ಷೆಯಿಂದ ಹೊರಗೆ ಇಟ್ಟಿದ್ದಾರೆ ಎಂದು ದೂರಿದರು.

    ಮುಖ್ಯಮಂತ್ರಿಗಳು ಇನ್ನೂ ಯಾಕೆ ನ್ಯಾಯಾಲಯದ ತೀರ್ಪನ್ನು ಕಾಯುತ್ತಿದ್ದಾರೆ? ನಿಮಗೇನಾದರೂ ಆತ್ಮಗೌರವ ಇದ್ದರೆ, ಕಾನೂನು, ನಿಯಮದ ಕುರಿತು ಗೌರವ ಇದ್ದಲ್ಲಿ, ಸಂವಿಧಾನದ ಕುರಿತು ಗೌರವ ಇರುವುದಾದರೆ, ಮುಖ್ಯಮಂತ್ರಿಗಳ ಸ್ಥಾನದ ಘನತೆ ಕಾಪಾಡುವುದಾದರೆ ಈ ಕೂಡಲೇ ರಾಜೀನಾಮೆ ಕೊಡಬೇಕು. ಅದಕ್ಕಿಂತ ಮೊದಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರನ್ನು ವಜಾ ಮಾಡಿ ಎಂದು ರವಿಕುಮಾರ್ ಒತ್ತಾಯಿಸಿದರು. ಇದನ್ನೂ ಓದಿ: ಧನ್ನೆಗಾಂವ್ ಜಲಾಶಯದಿಂದ 1,300 ಕ್ಯುಸೆಕ್ ನೀರು ಬಿಡುಗಡೆ – ಮಾಂಜ್ರಾ ನದಿಪಾತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣ

  • ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ

    ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ

    ಮೈಸೂರು: ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು ಎಂದು ಅಧಿಕೃತವಾಗಿ ಸರ್ಕಾರ ಒಪ್ಪಿಕೊಂಡಿದೆ. ಈ ಒಂದು ಆದೇಶ ಸಿಎಂಗೆ ಮುಳ್ಳಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ.

    2001 ರಲ್ಲೇ ದೇವನೂರು ಬಡಾವಣೆ ನಿರ್ಮಾಣವಾಗಿದೆ ಎಂದು ಖುದ್ದು ಸಿಎಂ ಪತ್ನಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ. ಇದೀಗ ಆ ಸೈಟ್ ಕೊಟ್ಟಿರುವುದು ನಿಯಮ ಬಾಹಿರ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯಿಂದ ಆದೇಶ ಬಂದಿದೆ. ಇದನ್ನೂ ಓದಿ: ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶವೇ ಸರ್ಕಾರಕ್ಕೆ ಸುಸೈಡ್ ನೋಟ್: ಶಾಸಕ ಶ್ರೀವತ್ಸ

    ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ‌ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅಮಾನತು ಆದೇಶದಲ್ಲೇ ರಾಜ್ಯ ಸರ್ಕಾರ ಹಲವು ಸತ್ಯ ಬಿಚ್ಚಿಟ್ಟಿದೆ. ಸರ್ಕಾರದ ಅಮಾನತು ಆದೇಶದ ಅಂಶಗಳೇ ಸಿಎಂಗೆ ಮುಳ್ಳಾಗಿದೆ.

    50:50 ಅನುಪಾತ 2009 ರಲ್ಲಿ ಜಾರಿಗೆ ಬಂದಿದೆ. 2009 ಕ್ಕಿಂತ ಹಿಂದಿನ ಹಳೆ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲ. ಆದರೆ ಪ್ರಾಧಿಕಾರ 2009 ಹಿಂದಿನ ಬಡಾವಣೆಗಳ ಬದಲಿ ನಿವೇಶನಗಳಿಗಾಗಿ ಮಂಜೂರಾತಿಗಾಗಿ 50:50 ಅನುಪಾತ ಕೈಗೊಂಡಿರುವುದು ಕಾನೂನು ಬಾಹಿರ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

    ಸಿಎಂ ಪತ್ನಿಯ ಸಹೋದರನ ಜಾಗವನ್ನು ಮೂಡಾ (MUDA Scam) ವಶಪಡಿಸಿಕೊಂಡಿರೋದು 2001 ರಲ್ಲಿ. ಅಲ್ಲಿಗೆ 50:50 ಅನುಪಾತ ಇದಕ್ಕೆ ಅನ್ವಯ ಆಗಲ್ಲ. ಇದೀಗಾ ಸರ್ಕಾರಿ ಆದೇಶವೇ ಸಿಎಂಗೆ ಮುಳ್ಳಾಗುವ ಸಾಧ್ಯತೆಯಿದೆ.

  • Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

    Breaking: ಮುಡಾ ಹಗರಣದ ಮೊದಲ ವಿಕೆಟ್ ಪತನ – ಹಿಂದಿನ ಆಯುಕ್ತ ದಿನೇಶ್ ಕುಮಾರ್ ಸಸ್ಪೆಂಡ್‌!

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಪ್ರಕರಣದಲ್ಲಿ (MUDA Scam Case) ಮೊದಲ ವಿಕೆಟ್‌ ಪತನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್‌ ಅವರನ್ನು ಸಮಾನತುಗೊಳಿಸಿ ಸರ್ಕಾರ (Government Of Karnataka )ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

    ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: MUDA Scam | ಸಿಎಂ ಸಿದ್ದರಾಮಯ್ಯಗೆ ಮಧ್ಯಂತರ ರಿಲೀಫ್ –‌ ಸೆ.9ಕ್ಕೆ ಮತ್ತೆ ವಿಚಾರಣೆ ಮುಂದೂಡಿಕೆ!

    ಸರ್ಕಾರದ ಆದೇಶದಲ್ಲಿ ಏನಿದೆ?
    KUDA ಕಾಯ್ದೆ ಕಲಂ 13 (1) ರಲ್ಲಿ ಪ್ರಾಧಿಕಾರದ ಆಯುಕ್ತರು, ಮುಖ್ಯ ಕಾರ್ಯನಿರ್ವಹಣಾ ಮತ್ತು ಆಡಳಿತಾಧಿಕಾರಿಯಾಗಿದ್ದು ಸಭೆಗೆ ಮಂಡಿಸಲಾದ ಬಹುತೇಕ ವಿಷಯಗಳಲ್ಲಿ ಸ್ಪಷ್ಟ ಅಭಿಪ್ರಾಯವನ್ನು ಟಿಪ್ಪಣಿಯಲ್ಲಿ ದಾಖಲಿಸಿ ಮಂಡಿಸದೇ ಇರುವುದು ಮತ್ತು ಸರ್ಕಾರದಿಂದ ನೀಡಲಾದ ನಿರ್ದೇಶನಗಳ ಪಾಲನೆಯಾಗುತ್ತಿಲ್ಲದಿರುವುದನ್ನು ಗಮನಿಸಲಾಗಿದೆ. ಇದನ್ನೂ ಓದಿ: ಟಿಕೆಟ್ ಸಿಗಲಿ, ಸಿಗದೇ ಇರಲಿ ಪಕ್ಷದ ಜೊತೆ ಇರ್ತೇನೆ, ಜೆಡಿಎಸ್‌ಗೆ ಟಿಕೆಟ್ ಕೊಟ್ರೂ ಕೆಲಸ ಮಾಡ್ತೇನೆ: ಸಿಪಿವೈ

    ಸರ್ಕಾರವು ನೀಡುವ ಯಾವುದೇ ನಿರ್ದೇಶನಗಳನ್ನು ಪಾಲಿಸುವುದು KUDA ಕಾಯ್ದೆ ಕಲಂ 65ರನ್ವಯ ಪ್ರಾಧಿಕಾರದ ಜವಾಬ್ದಾರಿ. ಆದ್ರೆ ನಿಯಮಗಳಿಗೆ ಮತ್ತು ಸರ್ಕಾರದ ನಿರ್ದೇಶನಗಳಿಗೆ ವ್ಯತಿರಿಕ್ತವಾಗಿ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸುತ್ತಿರುವುದು ಮತ್ತು ಅದರಂತೆ ಕ್ರಮವಹಿಸುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: Shivamogga | ಪ್ರೀತಿಸಲು ಹುಡುಗಿ ಸಿಗಲಿಲ್ಲ ಅಂತ ತುಂಗಾ ನದಿಗೆ ಹಾರಿ ಯುವಕ ಆತ್ಮಹತ್ಯೆ!

    ಅಲ್ಲದೇ ದಿನೇಶ್‌ ಕುಮಾರ್‌ ಅವರ ವಿರುದ್ಧ ಇನ್ನೂ ಅನೇಕ ಆರೋಪಗಳಿಂದ ಕರ್ತವ್ಯ ಲೋಪ ಎಸಗಿರುವುದು ಸಕ್ಷಮ ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಇದನ್ನೂ ಓದಿ: ಬೇಬಿ ಬಂಪ್ ಫೋಟೋ ಶೂಟ್‌ಗೆ ದೀಪಿಕಾ-ರಣವೀರ್‌ ಪೋಸ್‌; ಬಾಲಿವುಡ್‌ನ ಕ್ಯೂಟ್‌ ಕಪಲ್‌ ಫುಲ್‌ ಶೈನ್‌

    ಸದರಿ ಅವರು ಅಧಿಕಾರದಲ್ಲಿ ಮುಂದುವರಿದಲ್ಲಿ, ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತುಗೊಳಿಸಲು ತೀರ್ಮಾನಿಸಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಲಾಗಿದೆ.

  • ಸಿಎಂ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

    ಸಿಎಂ ಬಳಿಕ ಹಲವು ಕೈ ನಾಯಕರಿಗೆ ಪ್ರಾಸಿಕ್ಯೂಷನ್‌ ಭೀತಿ

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಬಳಿಕ ಇದೀಗ ಕಾಂಗ್ರೆಸ್ ನಾಯಕರಿಗೆ (Congress Leaders) ಪ್ರಾಸಿಕ್ಯೂಷನ್ ಭೀತಿ ಎದುರಾಗಿದೆ. ಸಿಎಂ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಈಗಾಗಲೇ ಸಚಿವ ಕೆಐಎಡಿಬಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ್ (MB Patil) ಹಾಗೂ ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧದ ದೂರು ರಾಜ್ಯಪಾಲರ ಮುಂದಿದೆ. ಡಿಸಿಎಂ ಡಿಕೆಶಿ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

    ನನ್ನ ವಿರುದ್ಧವೂ ಪ್ರಾಸಿಕ್ಯೂಷನ್ ಅನುಮತಿ ಕೇಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನನ್ನ ವಿರುದ್ಧವೂ ಏನೇನೋ ಸಿದ್ದತೆ ನಡೆಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಕೇರಳ ರಾಜಕಾರಣದಲ್ಲೂ ಕಾಸ್ಟಿಂಗ್ ಕೌಚ್ ಕೋಲಾಹಲ; ಪಕ್ಷದ ನಾಯಕರಿಂದ ಕಿರುಕುಳ – ಕಾಂಗ್ರೆಸ್ ನಾಯಕಿ ರೋಸ್‌ಬೆಲ್ ಬಾಂಬ್‌

     

    ಈ ಹಿಂದೆ ನಡೆದ ವಿಚಾರಣೆ ಸಂದರ್ಭದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳು ತಮ್ಮ ಬಳಿ ಬಾಕಿ ಇಲ್ಲ ಎಂದು ರಾಜಭವನ ಅಧಿಕೃತ ದಾಖಲೆಯನ್ನು ನ್ಯಾಯಾಲಯಕ್ಕೆ ನೀಡಿತ್ತು.

    ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಪೀಠಕ್ಕೆ ಟಿ.ಜೆ.ಅಬ್ರಾಹಂ ಪರ ವಕೀಲ ರಂಗನಾಥ್ ರೆಡ್ಡಿ ಈ ದಾಖಲೆ ಸಲ್ಲಿಸಿದ್ದರು. ಈ ವೇಳೆ ನ್ಯಾ.ನಾಗಪ್ರಸನ್ನ ಅವರು ನಿಮಗೆ ಈ ವಿಷಯ ಹೇಗೆ ಗೊತ್ತು ಎಂದು ಪ್ರಶ್ನಿಸಿದ್ದರು. ಇದಕ್ಕೆ ರಂಗನಾಥ್ ರೆಡ್ಡಿ, ಆರ್‌ಟಿಐ ಮೂಲಕ ಮಾಹಿತಿ ಪಡೆಯಲಾಗಿದೆ. ರಾಜಭವನ ಕಚೇರಿ ನೀಡಿರುವ ಉತ್ತರದಲ್ಲಿ ಯಾವುದೇ ಅರ್ಜಿ ಬಾಕಿ ಇಲ್ಲ ಎಂದು ತಿಳಿಸಲಾಗಿದೆ ಎಂದು ಉತ್ತರಿಸಿದ್ದರು.

     

  • ಸಿಎಂ ಯಾವತ್ತಿಗೂ ಟಗರೇ, ಭಯ ಬೀಳೋ ಪ್ರಶ್ನೆನೇ ಬರಲ್ಲ: ಜಮೀರ್

    ಸಿಎಂ ಯಾವತ್ತಿಗೂ ಟಗರೇ, ಭಯ ಬೀಳೋ ಪ್ರಶ್ನೆನೇ ಬರಲ್ಲ: ಜಮೀರ್

    ಹುಬ್ಬಳ್ಳಿ: ಸಿಎಂ ಟಗರು. ಟಗರು ಯಾವತ್ತಿಗೂ ಟಗರೇ. ಭಯ ಬೀಳೋ ಪ್ರಶ್ನೆನೇ ಬರಲ್ಲ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಲಿ ಇದ್ದಂತೆ. ಸಿದ್ದರಾಮಯ್ಯ ಜೊತೆ ಹೈಕಮಾಂಡ್, ಶಾಸಕರು, ರಾಜ್ಯದ ಜನ ಇದ್ದಾರೆ. ಸಿದ್ದರಾಮಯ್ಯ ಬಂದು ನಿಂತರೆ ಸಾಕು, ಸಾವಿರಾರು ಜನ ಬಂದು ಕೂರುತ್ತಾರೆ. ಬಿಜೆಪಿ ಅವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ದರ್ಶನ್ ವಿಚಾರದಲ್ಲಿ ನಾನು ಯಾವುದೇ ಪ್ರಭಾವ ಬೀರಿಲ್ಲ: ಜಮೀರ್

    ಕಾಂಗ್ರೆಸ್ ಮುಡಾ ಚಲೋ ಮಾಡಲಿ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರ ಬಗ್ಗೆ ಜುಲೈನಲ್ಲಿ ಖಾಸಗಿ ವ್ಯಕ್ತಿ ದೂರು ನೀಡುತ್ತಾರೆ. ಅದೇ ದಿನ ಪ್ರಾಸಿಕ್ಯೂಷನ್‌ಗೆ ಕೊಡುತ್ತಾರೆ. ಅದಕ್ಕಿಂತ ಮುಂಚೆ 8 ತಿಂಗಳ ಹಿಂದೆಯೇ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಕೇಳುತ್ತಾರೆ, ಆದ್ರೆ ಕೊಡಲ್ಲ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ, ಜನಾರ್ದನ ರೆಡ್ಡಿಗೆ ಕೊಟ್ಟಿಲ್ಲ. ಇದು ಯಾವ ನ್ಯಾಯ ಸರ್ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಗೌರಿ ಹಬ್ಬದಂದು ಮುಖ್ಯಮಂತ್ರಿಗಳಿಂದ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ – ಡಿಕೆಶಿ

    ಶನಿವಾರ ವಕೀಲರು ವಾದ ಮಾಡೋದನ್ನು ನೋಡಿದೆ. ಅದರಲ್ಲಿ ಸಿದ್ದರಾಮಯ್ಯನವರದು ಬೇನಾಮಿ ಆಸ್ತಿ ಅನ್ನೋ ಥರ ಮಾತನಾಡುತ್ತಾರೆ. ಲಿಂಗ ಅವರು 1930ರಲ್ಲಿ ಹರಾಜಲ್ಲಿ ಸೈಟ್ ತೆಗೆದುಕೊಂಡಿದ್ದರು. ಅವಾಗ ಸಿದ್ದರಾಮಯ್ಯ ಹುಟ್ಟೇ ಇರಲಿಲ್ಲ. ಮಲ್ಲಿಕಾರ್ಜುನ ಅವರ ಅಕ್ಕನಿಗೆ ಸೈಟ್ ಗಿಫ್ಟ್ ಕೊಡುತ್ತಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ ಸೈಟ್ ಕೊಟ್ಟಿದ್ದು. 125 ಸೈಟ್‌ನಲ್ಲಿ 14 ಸೈಟ್ ಇವರಿಗೆ ಕೊಡುತ್ತಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನಿದೆ? ಮುಡಾ ಹಗರಣ ಮುಖ್ಯಮಂತ್ರಿಗಳಿಗೆ ಯಾಕೆ ಮುಳ್ಳಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಂಡಿಗೋ ವಿಮಾನದ ವಾಶ್‍ರೂಮ್‍ನಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ – ತುರ್ತು ಭೂಸ್ಪರ್ಶ

    ಬಿಜೆಪಿಗೆ ಹಿಂದುಳಿದ ನಾಯಕನನ್ನು ಸಹಿಸೋಕೆ ಆಗುತ್ತಿಲ್ಲ. ದೇವರಾಜ ಅರಸು ನಂತರ ಹಿಂದುಳಿದವರು ಯಾರೂ ಮುಖ್ಯಮಂತ್ರಿ ಆಗಿಲ್ಲ. ಇವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಇವರ ಜನಪ್ರಿಯತೆ ಬಿಜೆಪಿ ಅವರಿಗೆ ಸಹಿಸೋಕೆ ಆಗುತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಟ್ಟರೆ ಕಾಂಗ್ರೆಸ್ ತೆಗಿಬಹುದು ಅಂದುಕೊಂಡಿದ್ದಾರೆ. ಬಿಜೆಪಿ ಅವರಿಗೆ ಹೊಟ್ಟೆಕಿಚ್ಚು ಇದೆ. ಬೇರೆ ಅವರು ದುಡ್ಡು ಖರ್ಚು ಮಾಡಿ ಜನರನ್ನು ಕರಿಸಬೇಕು. ಆದರೆ ಸಿದ್ದರಾಮಯ್ಯ ಬಂದು ನಿಂತರೆ ಸಾವಿರಾರು ಜನ ಬರುತ್ತಾರೆ. ನಮ್ಮ ನಾಯಕ ಸಿದ್ದರಾಮಯ್ಯ ಅವರು ಎಂದರು. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆ ದೇಗುಲದಲ್ಲಿ ಜೂ.ಎನ್‌ಟಿಆರ್

    ದಾಖಲೆ ಬಿಡುಗಡೆ ಮಾಡಿದ್ದೇ ಕಾಂಗ್ರೆಸ್‌ನವರು ಎಂಬ ವಿಚಾರದ ಕುರಿತು ಮಾತನಾಡಿ, ಮುಡಾ ಹಗರಣದಲ್ಲಿ ಏನಿಲ್ಲ ಅಂದಕೂಡಲೇ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಏನು ನಡೆಯುತ್ತಿದೆ ಎಂದು ಬಿಜೆಪಿ ಅವರಿಗೆ ಗೊತ್ತಾಗಿದೆ. ಏನು ಸಿಗಲ್ಲ ಅಂತ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

  • ಬೆಂಗಳೂರಿಗರೇ ಗಮನಿಸಿ – ಇಂದು ನಗರದಲ್ಲಿ ಟ್ರಾಫಿಕ್‌ ಸಮಸ್ಯೆಯಾಗುವ ಸಾಧ್ಯತೆ

    ಬೆಂಗಳೂರಿಗರೇ ಗಮನಿಸಿ – ಇಂದು ನಗರದಲ್ಲಿ ಟ್ರಾಫಿಕ್‌ ಸಮಸ್ಯೆಯಾಗುವ ಸಾಧ್ಯತೆ

    ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಖಂಡಿಸಿ 180ಕ್ಕೂ ಹೆಚ್ಚು ಶೋಷಿತ ಸಮುದಾಯಗಳನ್ನ ಒಳಗೊಂಡ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಇಂದು ರಾಜಭವನ ಚಲೋ (Raj Bhavan Chalo) ಮೂಲಕ ಪ್ರತಿಭಟನೆಗೆ (Protest) ಮುಂದಾಗಿವೆ.

    ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದು ಬೆಂಗಳೂರಿಗರಿಗೆ ಪ್ರತಿಭಟನೆ ಬಿಸಿ ತಟ್ಟಲಿದೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಕಾಲ್ನಡಿಗೆ ಮೂಲಕ ಫ್ರೀಡಂ ಪಾರ್ಕ್‌ಗೆ (Freedom Park) ಪ್ರತಿಭಟನಕಾರರ ಜಾಥಾ ಬರಲಿದ್ದು, ಸುತ್ತಮುತ್ತ ಟ್ರಾಫಿಕ್ ಜಾಮ್ (Traffic Jam) ಆಗಲಿದೆ.

    ಮೆಜೆಸ್ಟಿಕ್ ಸುತ್ತಮುತ್ತ, ಗಾಂಧಿ ನಗರ ರಸ್ತೆ, ಶೇಷಾದ್ರಿ ರಸ್ತೆ, ಕೆ ಆರ್ ಸರ್ಕಲ್, ವಿಧಾನಸೌಧ, ಸುತ್ತಮುತ್ತ ಭಾರೀ ವಾಹನ ದಟ್ಟನೆಯಾಗುವ ಸಾಧ್ಯತೆಯಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೂರಾರು ವಾಹನಗಳಲ್ಲಿ ಪ್ರತಿಭಟಕಾರರು ಬರುತ್ತಿರುವ ಹಿನ್ನೆಲೆ ಪ್ರಮುಖವಾಗಿ ಮೈಸೂರು ರಸ್ತೆ, ತುಮಕೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ಈ ಮಾರ್ಗದ ಮೂಲಕ ಸಂಪರ್ಕ ಒದಗಿಸುವ ನಗರದ ಒಳಭಾಗದ ರಸ್ತೆಗಳಲ್ಲಿ ಟ್ರಾಫಿಕ್ ಬಿಸಿ ತಟ್ಟಲಿದೆ. ಇದನ್ನೂ ಓದಿ: ವೇಶ್ಯ ಗೃಹಕ್ಕೆ ಹೋಗಿದ್ದ, ಗರ್ಲ್‌ಫ್ರೆಂಡ್‌ಗೆ ಬೆತ್ತಲೆ ಫೋಟೋ ಕಳಿಸುವಂತೆ ಕೇಳಿದ್ದ – ರೇಪ್‌ ಆರೋಪಿಯ ಕರಾಳ ಮುಖ ಬಯಲು

    ಬೇರೆ ಜಿಲ್ಲೆಗಳಿಂದ ನೂರಾರು ಬಸ್ಸುಗಳಲ್ಲಿ ಪ್ರತಿಭಟನಕಾರರು ಬರುತ್ತಿದ್ದು ಈ ಎಲ್ಲಾ ಬಸ್ಸುಗಳನ್ನು ನಿಲ್ಲಿಸಲು ಅರಮನೆ ಮೈದಾನದಲ್ಲಿ  ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಟ್ರಾಫಿಕ್ ನಿಯಂತ್ರಣ ಸಂಬಂಧ ಸದ್ಯ ಪೊಲೀಸರು ಫ್ರೀಡಂ ಪಾರ್ಕ್ ರಸ್ತೆಯಿಂದ ಖೋಡೆ ಸರ್ಕಲ್ ಬಳಸುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಕೆಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಮೇಲೆ ಮತ್ತೆ ರಷ್ಯಾ ವಾರ್‌ – 100 ಕ್ಷಿಪಣಿ, 100 ಅಟ್ಯಾಕಿಂಗ್‌ ಡ್ರೋನ್‌ಗಳಿಂದ ದಾಳಿ

    ಎಲ್ಲೆಲ್ಲಿ ತಟ್ಟಲಿದೆ ಟ್ರಾಫಿಕ್ ಬಿಸಿ?
    ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ರಸ್ತೆ, ಗೂಡ್‌ಶೆಡ್ ರೋಡ್, ಓಕಳಿಪುರಂ ರಸ್ತೆ, ಮೈಸೂರು ರಸ್ತೆ, ಶೇಷಾದ್ರಿ ರಸ್ತೆ, ಮೌರ್ಯ ಸರ್ಕಲ್, ಚಾಲುಕ್ಯ ಸರ್ಕಲ್, ಸಿಐಡಿ ರಸ್ತೆ, ಕೆ.ಆರ್ ಸರ್ಕಲ್, ಕಾರ್ಪೊರೇಷನ್ ಸರ್ಕಲ್, ವಿಧಾನಸೌಧ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್, ಏರ್‌ಪೋರ್ಟ್ ರೋಡ್, ತುಮಕೂರು ರಸ್ತೆ.

     

  • ಟಾರ್ಚ್ ಹಾಕಿ ತಡಕಾಡೋದು ಸಿಎಂಗೆ ಶೋಭೆಯಲ್ಲ – ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡ್ತಿದ್ದೀರಿ: ಹೆಚ್‌ಡಿಕೆ ಎಚ್ಚರಿಕೆ

    ಟಾರ್ಚ್ ಹಾಕಿ ತಡಕಾಡೋದು ಸಿಎಂಗೆ ಶೋಭೆಯಲ್ಲ – ಶಿಶುಪಾಲನಂತೆ ತಪ್ಪಿನ ಮೇಲೆ ತಪ್ಪು ಮಾಡ್ತಿದ್ದೀರಿ: ಹೆಚ್‌ಡಿಕೆ ಎಚ್ಚರಿಕೆ

    ಬೆಂಗಳೂರು: ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ (CM Siddaramaiah )ಶೋಭೆಯಲ್ಲ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (H.D KumAraswamy) ಲೇವಡಿ ಮಾಡಿದ್ದಾರೆ.

    ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ವೈಟ್ನರ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದಕ್ಕೆ ಟಾಂಗ್‌ ಕೊಟ್ಟಿದ್ದಾರೆ. ಟ್ವೀಟ್‌ನಲ್ಲಿ ಸಿಎಂ ವಿರುದ್ದ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ನೀವು ತೋರಿಸುತ್ತಿರುವುದ ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: MUDA Scam | ವೈಟ್ನರ್‌ ಹಿಂದಿರುವ ಅಕ್ಷರಗಳೇನು? – ವೀಡಿಯೋ ಸಮೇತ ಸಾಕ್ಷಿ ನೀಡಿದ ಸಿದ್ದರಾಮಯ್ಯ

    ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ? ಅಥವಾ ಇನ್ನಾರಾದರೂ ಇದ್ದಾರಾ? ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ ಹೇಗೆ? ಎಂದು ಕುಟುಕಿದ್ದಾರೆ.

    ಸಿದ್ದರಾಮಯ್ಯನವರೇ ಶಿಶುಪಾಲನ ಹಾಗೆ ನೀವು ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ. ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಎಚ್ಚರಿಸಿದ್ದಾರೆ.

    ವೈಟ್ನರ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದರು. ವೈಟ್ನರ್ ಹಾಕಿರುವ ಸಾಲಿಗೆ ಲೈಟ್ ಬಿಟ್ಟು ವಿಡಿಯೋ ಮಾಡಲಾಗಿದ್ದು, ಅದರಲ್ಲಿನ ಸಾಲುಗಳು ಏನಿತ್ತು ಎಂಬುದನ್ನ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದರು. ಇದನ್ನೂ ಓದಿ: ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್

  • MUDA Scam | ವೈಟ್ನರ್‌ ಹಿಂದಿರುವ ಅಕ್ಷರಗಳೇನು? – ವೀಡಿಯೋ ಸಮೇತ ಸಾಕ್ಷಿ ನೀಡಿದ ಸಿದ್ದರಾಮಯ್ಯ

    MUDA Scam | ವೈಟ್ನರ್‌ ಹಿಂದಿರುವ ಅಕ್ಷರಗಳೇನು? – ವೀಡಿಯೋ ಸಮೇತ ಸಾಕ್ಷಿ ನೀಡಿದ ಸಿದ್ದರಾಮಯ್ಯ

    – ಬಿಜೆಪಿ–ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರಿಂದು ಜನರೆದುರು ಬೆತ್ತಲಾಗಿದ್ದಾರೆ: ಸಿಎಂ

    ಬೆಂಗಳೂರು: ವೈಟ್ನರ್ (Whitener) ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಮೇತ ಸ್ಪಷ್ಟೀಕರಣ ನೀಡಿದ್ದಾರೆ. ವೈಟ್ನರ್ ಹಾಕಿರುವ ಸಾಲಿಗೆ ಲೈಟ್ ಬಿಟ್ಟು ವಿಡಿಯೋ ಮಾಡಲಾಗಿದ್ದು, ಅದರಲ್ಲಿನ ಸಾಲುಗಳು ಏನಿತ್ತು ಎಂಬುದನ್ನ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದು ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ (Siddaramaiah) ಟಕ್ಕರ್ ಕೊಟ್ಟಿದ್ದಾರೆ.

    ಮುಡಾ ದಾಖಲಾತಿಯಲ್ಲಿ ವೈಟ್ನರ್‌ ಹಚ್ಚಿ ಅಕ್ರಮ ಮರೆ ಮಾಚಿದ್ದಾರೆ ಎಂಬ ಬಿಜೆಪಿ-ಜೆಡಿಎಸ್‌ ನಾಯಕರ (BJP-JDS Leader) ಆರೋಪಗಳಿಗೆ ಸಿಎಂ ವೀಡಿಯೋ ಸಮೇತ ಸಾಕ್ಷಿ ನೀಡಿದ್ದಾರೆ. 33 ಸೆಕೆಂಡುಗಳ ವೀಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಇದಕ್ಕೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಇದನ್ನೂ ಓದಿ: ಹಣ ನೀಡಲು ಮುಂದೆ ಬಂದ ಬಿಜೆಪಿ ನಾಯಕರು ಯಾರೆಂದು ತಿಳಿಸಿ; ಇಲ್ಲವಾದ್ರೆ ಇದು ಹಿಟ್&ರನ್ ಆಗುತ್ತೆ: ಆರ್.ಅಶೋಕ್

    ಸಿಎಂ ಎಕ್ಸ್‌ ಖಾತೆಯಲ್ಲಿ ಏನಿದೆ?
    ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ. ಇದನ್ನೂ ಓದಿ: Jammu Kashmir Election | ಘೋಷಿಸಿದ ಪಟ್ಟಿ ಹಿಂಪಡೆದು ಕೊನೆಗೂ 15 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ

    ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ.

    ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ. ಇದನ್ನೂ ಓದಿ: ಗೃಹ ಸಚಿವರೇ ನಿಮ್ಮದು ಯಾವ ನ್ಯಾಯ? ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಏಕೆ?- ಸಾರ್ವಜನಿಕರಿಂದ ತರಾಟೆ

    ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಃಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ – ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಅಂತ ಬರೆದುಕೊಂಡಿದ್ದಾರೆ.

  • MUDA Scam | ರಾಜ್ಯಪಾಲರ ನಡೆಗೆ ಖಂಡನೆ – ಸಿದ್ದರಾಮಯ್ಯ ಬೆನ್ನಿಗೆ ನಿಂತ ಮಠಾಧೀಶರು

    MUDA Scam | ರಾಜ್ಯಪಾಲರ ನಡೆಗೆ ಖಂಡನೆ – ಸಿದ್ದರಾಮಯ್ಯ ಬೆನ್ನಿಗೆ ನಿಂತ ಮಠಾಧೀಶರು

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಹಲವು ಸಂಘಟನೆಗಳು, ಕಾಂಗ್ರೆಸ್‌ ಶಾಸಕರು, ಸಚಿವರು ಬೆಂಬಲ ನೀಡಿದ್ದಾರೆ. ಈ ನಡುವೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಸಹ ಸಿಎಂ ಬೆನ್ನಿಗೆ ನಿಂತಿದೆ.

    ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟದ ಸ್ವಾಮೀಜಿಗಳು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದ್ದಾರೆ.

    ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ 10 ಸ್ವಾಮೀಜಿಗಳನ್ನೊಳಗೊಂಡ ನಿಯೋಗ ಸಿದ್ದರಾಮಯ್ಯ ಅವರಿಗೆ ಆತ್ಮಸ್ಥೈರ್ಯ ತುಂಬಿತು. ಇದೇ ವೇಳೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಕ್ರಮವನ್ನು ಒಕ್ಕೂಟ ಖಂಡಿಸಿತು.

    ಸಿಎಂಗೆ ಯಾರೆಲ್ಲಾ ಬೆಂಬಲ್ಲ?
    * ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು, ಕನಕ ಪೀಠ ಕಾಗಿನೆಲೆ.
    * ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು, ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ.
    * ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು, ಭೋವಿ ಗುರುಪೀಠ ಚಿತ್ರದುರ್ಗ.
    * ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು, ಮಾದರ ಚನ್ನಯ ಗುರುಪೀಠ ಚಿತ್ರದುರ್ಗ.
    * ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು, ಭಗಿರಥ ಪೀಠ ಮಧುರೆ.
    * ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು, ಕನಕ ಗುರುಪೀಠ ಹೊಸದುರ್ಗ.
    * ಶ್ರೀ ರೇಣುಕಾನಂದ ಸ್ವಾಮಿಗಳು, ನಾರಾಯಣ ಗುರುಪೀಠ ಶಿವಮೊಗ್ಗ.
    * ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು, ಮಡಿವಾಳ ಗುರುಪೀಠ ಚಿತ್ರದುರ್ಗ.
    * ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ.
    * ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು, ಸರೂರು ವಿಜಯನಗರ.
    ಈ ಎಲ್ಲಾ ಪೂಜ್ಯರು ನಿಯೋಗದ ಪರವಾಗಿ ಉಪಸ್ಥಿತರಿದ್ದು, ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿ, ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿಗಳ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

    ರಾಜ ಭವನ ಚಲೋ ಕುರಿತು ಪೂರ್ವಭಾವಿ ಸಭೆ:
    ಅಲ್ಲದೇ ಮೈಸೂರಿನಲ್ಲೂ ಸಹ ಭಾನುವಾರ ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ಇದೇ ಆಗಸ್ಟ್‌ 27ರಂದು ರಾಜ ಭವನ ಚಲೋ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದೆ. ಕರ್ನಾಟಕ ‌ಶೋಷಿತ ಸಮುದಾಯಗಳ ಮಾಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ ಇದೇ ಆಗಸ್ಟ್‌ 27ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಫ್ರೀಡಂ ಪಾರ್ಕ್‌ನಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಕನಕ ಭವನದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಲಾಗಿದೆ.

  • `ಕೈʼ ನಾಯಕರು ಕುಮಾರಣ್ಣನನ್ನ ಹೇಗೆ ಕಟ್ಟಿ ಹಾಕ್ಬೇಕು ಅಂತ ದೆಹಲಿಯಲ್ಲಿ ಚರ್ಚಿಸಿದ್ದಾರೆ: ನಿಖಿಲ್‌ ಕಿಡಿ

    `ಕೈʼ ನಾಯಕರು ಕುಮಾರಣ್ಣನನ್ನ ಹೇಗೆ ಕಟ್ಟಿ ಹಾಕ್ಬೇಕು ಅಂತ ದೆಹಲಿಯಲ್ಲಿ ಚರ್ಚಿಸಿದ್ದಾರೆ: ನಿಖಿಲ್‌ ಕಿಡಿ

    – ಜೆಡಿಎಸ್ ಪಕ್ಷದಿಂದ ಜಿಪಂ, ತಾಪಂ ಚುನಾವಣೆಗೆ ಸಿದ್ಧತೆ ಕುರಿತು ಸಭೆ
    – ಚನ್ನಪಟ್ಟಣ ಜೆಡಿಎಸ್‌ನ ಭದ್ರಕೋಟೆ ಎಂದ ನಿಖಿಲ್‌

    ಬೆಂಗಳೂರು: ಜಿಪಂ, ತಾಪಂ ಚುನಾವಣೆ ಸಿದ್ಧತೆ ಕುರಿತು ಬೆಂಗಳೂರಿನ ಜೆಪಿ ಭವನದಲ್ಲಿಂದು ಜೆಡಿಎಸ್ ಪಕ್ಷದಿಂದ (JDS Party) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ನೂರಾರು ಜೆಡಿಎಸ್‌ ಮುಖಂಡರು (JDS Leader) ಪಾಲ್ಗೊಂಡು ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚಿಸಿದರು.

    ಸಭೆಯ ಬಳಿಕ ಮಾಧ್ಯಮಗಳ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಮ್ಮ ನಾಯಕರಾದ ಕುಮಾರಸ್ವಾಮಿ ಸಮ್ಮುಖದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಸಂದರ್ಭ ಮೊದಲ ಸಭೆ ಮುಗಿದಿದೆ. ಸಂಘಟನೆ ಇನ್ನು ಚುರುಕು ಆಗಬೇಕು. ಹಲವಾರು ಜಿಲ್ಲೆ, ತಾಲ್ಲೂಕುಗಳಲ್ಲಿ ಪ್ರವಾಸ ಮಾಡಬೇಕು. ಅದರ ಬಗ್ಗೆ ಈಗಾಗಲೇ ಚರ್ಚೆ ಆಗಿದೆ. ಜಿಲ್ಲಾವಾರು, ತಾಲ್ಲೂಕುವಾರು ಉಸ್ತುವಾರಿಗಳ ನೇಮಕ ಮಾಡಬೇಕಿದೆ ಹಾಗಾಗಿ ಈ ಸಭೆ ಕರೆದಿದ್ದೇವೆ ಎಂದರು. ಇದನ್ನೂ ಓದಿ: ಮಾಜಿ ಸಚಿವ ಎನ್ ಮಹೇಶ್ ಮನೆಯಲ್ಲಿ ಕಳ್ಳತನ – 50 ಸಾವಿರ ಹಣ ದೋಚಿದ ಕಳ್ಳರು

    ಶೀಘ್ರದಲ್ಲೇ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ:
    ಚನ್ನಪಟ್ಟಣ ಉಪಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ (HD Kumaraswamy) ಅವರ ಸ್ವಕ್ಷೇತ್ರ ಕಳೆದ 2 ಬಾರಿ ಜನ ಆಶೀರ್ವಾದ ಮಾಡಿ ಗೆಲ್ಲಿಸಿದ್ದಾರೆ. ಹಾಗಾಗಿ ಪಕ್ಷದ ಧ್ವನಿಯಾಗಿ ಪಕ್ಷ ಕಾರ್ಯಕರ್ತನಾಗಿ ಕೆಲಸ ಮಾಡುವುದು ನನ್ನ ಜವಾಬ್ದಾರಿ. ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆ (Channapatna By Election 2024) ಶೀಘ್ರದಲ್ಲೇ ಘೋಷಣೆ ಆಗಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ನಾಯಕರು, ಮುಖಂಡರಿಗೆ ಜವಾಬ್ದಾರಿ ಕೊಟ್ಟು ಕೆಲಸ ಮಾಡಬೇಕು. ಕಾರ್ಯಕರ್ತರ ಬಯಕೆ ಆ ನಿಟ್ಟಿನಲ್ಲಿ ಕೆಲಸ ಮಾಡ್ತಾ ಇದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅಂತಿಮವಾಗಿ ದೆಹಲಿಯ ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡ್ತಾರೆ. ಈಗಾಗಲೇ ವರದಿ ಸಹ ಹೈಕಮಾಂಡ್ ಕೈಸೇರಿದೆ. ಕೆಲವೇ ದಿನಗಳಲ್ಲಿ ಎನ್‌ಡಿಎ ಅಭ್ಯರ್ಥಿ ಘೋಷಣೆ ಮಾಡ್ತಾರೆ ಎಂದು ವಿವರಿಸಿದರು.

    ಚನ್ನಪಟ್ಟಣ ಕಾಂಗ್ರೆಸ್‌ ಭದ್ರಕೋಟೆ:
    ಇನ್ನೂ ಜೆಡಿಎಸ್, ಬಿಜೆಪಿಗೆ ಸ್ಥಾನ ಬಿಟ್ಟು ಕೊಡುತ್ತಾ? ಅನ್ನೋ ಪ್ರಶ್ನೆಗೆ ಉತ್ತರಿಸಿದ ನಿಖಿಲ್‌, ಇಲ್ಲಿ ಪ್ರಶ್ನೆ ಯಾವುದೇ ತೀರ್ಮಾನ, ಚರ್ಚೆ ಬೀದಿಯಲ್ಲಿ ಮಾಡೋದು ಸೂಕ್ತ ಅಲ್ಲ. ಏನೇ ಇದ್ದರೂ ಅಧಿಕೃತ ತೀರ್ಮಾನ ಆಗಬೇಕು. ಅಂತಿಮವಾಗಿ ಎನ್‌ಡಿಎ ಅಭ್ಯರ್ಥಿ ಗೆಲ್ಲಬೇಕು. ದೆಹಲಿ ನಾಯಕರು, ನಮ್ಮ ನಾಯಕರು ತೀರ್ಮಾನ ಮಾಡ್ತಾರೆ ಎಂದು ತಿಳಿಸಿದರು. ಟಿಕೆಟ್ ಗೊಂದಲ ಕಾಂಗ್ರೆಸ್‌ಗೆ ಲಾಭ ಆಗುವ ವಿಚಾರ ಕುರಿತು ಮಾತನಾಡಿ, ಚನ್ನಪಟ್ಟಣ ತಾಲ್ಲೂಕು ಜೆಡಿಎಸ್ ಪಕ್ಷದ ಭದ್ರಕೋಟೆ, ವರದೇಗೌಡರಂತ ಸಾಮಾನ್ಯ ವ್ಯಕ್ತಿಗೆ ಬೆಂಬಲ ನೀಡಿದ್ದಾರೆ. ಜೆಡಿಎಸ್‌ನ 60 ಸಾವಿರ ಮತಗಳಿವೆ. ಕಾಂಗ್ರೆಸ್‌ಗೆ ಚನ್ನಪಟ್ಟಣದಲ್ಲಿ ನೆಲೆ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಸ್ವಲ್ಪ ಮತಗಳು ಬಂದಿರಬಹುದು. ನಾವು ಡೇಟಾ ಇತಿಹಾಸ ನೋಡಿದಾಗ ತಿಳಿಯುತ್ತೆ. ಸಿ.ಪಿ ಯೋಗಿಶ್ವರ್ ಅವರು ಸಹ ವೈಯಕ್ತಿಕ ವರ್ಚಸ್ಸು ಇಟ್ಟುಕೊಂಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತಮಿಳಿನ ಖ್ಯಾತ ನಿರ್ದೇಶಕ ಪವಿತ್ರನ್ ಸಾರಥ್ಯದಲ್ಲಿ ಮೂಡಿಬಂದ ‘ಕರ್ಕಿ’: ಜೆಪಿ ನಾಯಕ

    2018ರಲ್ಲಿ ಕುಮಾರಣ್ಣನನ್ನ ಸಿಎಂ ಮಾಡ್ದಾಗ ಏನ್‌ ಮಾಡ್ತಿದ್ರು?
    ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತಕ್ಕೆ ಪತ್ರ ಬರೆದಿರುವ ಬಗ್ಗೆ ಮಾತನಾಡಿದ ನಿಖಿಲ್, ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಅವರ ನಾಯಕತ್ವದ ಶಕ್ತಿ ಹೆಚ್ಚಾಗಿದೆ. ಹಳೇ ಮೈಸೂರು ಪ್ರಾಂತ್ಯ ಅಲ್ಲದೇ, ಉತ್ತರ ಕರ್ನಾಟಕದಲ್ಲೂ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ನಿನ್ನೆ-ಮೊನ್ನೆ ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ರು. ಅಲ್ಲಿ ಮುಖ್ಯವಾದ ಚರ್ಚೆ ಕುಮಾರಸ್ವಾಮಿ ಅವರನ್ನ ಯಾವ ರೀತಿ ಕಟ್ಟಿ ಹಾಕಬೇಕು ಅಂತ ಚರ್ಚೆ ಆಗಿದೆ. ಗಣಿಗಾರಿಕೆ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ನಾನು ಕಾಂಗ್ರೆಸ್ ನಾಯಕರಿಗೆ ಒಂದು ಪ್ರಶ್ನೆ ಕೇಳ್ತೀನಿ.. 2018 ರಲ್ಲಿ ಕುಮಾರಸ್ವಾಮಿ ಅವರನ್ನ ಸಿಎಂ ಮಾಡೋಕೆ ಬಂದ್ರು. ಆಗ ಇವರಿಗೆ ಮಾಹಿತಿ ಇರಲಿಲ್ವ? ಈಗ ಯಾಕೆ ಇದನ್ನ ಪ್ರಶ್ನೆ ಮಾಡ್ತಾ ಇದ್ದಾರೆ? ಗೌರ್ನರ್ ವಿರುದ್ಧ ಪ್ರತಿಟನೆ ಮಾಡಿದ್ರು, ಮುಡಾ ವಿಚಾರ ದೇಶಾದ್ಯಂತ ಚರ್ಚೆ ಆಗ್ತಾ ಇದೆ. ಮುಡಾದು ಪ್ರತಿದಿನ ಒಂದಲ್ಲ ಒಂದು ದಾಖಲೆ ಹೊರಗಡೆ ಬರ್ತಾನೆ ಇದೆ ಎಂದು ಕೈ ನಾಯಕರಿಗೆ ತಿಳಿದರು.

    ಕುಮಾರಸ್ವಾಮಿ ಗಣಿಗಾರಿಕೆಗೆ ಸಹಿ ಹಾಕಿಲ್ಲ. ಇವರ‍್ಯಾರು ಸಹ ಕುಮಾರಸ್ವಾಮಿ ಅವರನ್ನ ಕೇಂದ್ರ ಸಚಿವ ಸ್ಥಾನದಿಂದ ಇಳಿಸೋಕೆ ಆಗಲ್ಲ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಜನರನ್ನ ದಿಕ್ಕು ತಪ್ಪಿಸುವ ಕೆಲಸ ಅಷ್ಟೇ. ಮುಡಾ ಹಗರಣ ಮುಚ್ಚಿಹಾಕಲು ಪ್ಲಾನ್‌ ಅಷ್ಟೇ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಸರ್ಕಾರ ಕೆಡವಲು ಶಾಸಕರಿಗೆ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ