Tag: MUDA Scam

  • ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ

    ನಿಮ್ಮೊಂದಿಗೆ ನಾವಿದ್ದೇವೆ.. ಸಿಎಂಗೆ ಶಾಸಕರ ಬಲ; ರಾಷ್ಟ್ರಪತಿಗಳ ಮುಂದೆ 135 ಶಾಸಕರಿಂದ ಪೆರೇಡ್‌ಗೆ ಸಂಪುಟ ನಿರ್ಧಾರ

    ಬೆಂಗಳೂರು: ಮುಡಾ ಹಗರಣವೀಗ ಸರ್ಕಾರ (Karnataka Govt.) ವರ್ಸಸ್ ಗೌರ್ನರ್ ಎನ್ನುವಂತಾಗಿದೆ. ನಾವಾ ನೀವಾ.. ನೋಡೇ ಬಿಡೋಣ ಎನ್ನುತ್ತಾ ರಾಜ್ಯಪಾಲರು ಮತ್ತು ವಿಪಕ್ಷಗಳ ವಿರುದ್ಧ ರಾಜ್ಯ ಸರ್ಕಾರ ರಾಜಕಾರಣ ಶುರು ಮಾಡಿಕೊಂಡಂತೆ ಕಾಣುತ್ತಿದೆ. ಆರ್ಟಿಕಲ್ 163ರ ಅಡಿ ಮಂತ್ರಿ ಪರಿಷತ್‌ಗೆ ಇರುವ ಅಧಿಕಾರ ಬಳಸಿಕೊಂಡಿರುವ ಸಿದ್ದರಾಮಯ್ಯ (Siddaramaiah) ಸಂಪುಟ, ವಿಪಕ್ಷಗಳ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ, ಬಾಕಿ ಉಳಿದಿರುವ ಪ್ರಕರಣದ ವಿಚಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಮನವಿಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ.

    ಗುರುವಾರ ಸಿಎಂ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ (CLP Meeting) ಕಾಂಗ್ರೆಸ್ ಶಾಸಕರು, ಸಚಿವರು ಸಿಎಂಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ನೀವು ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ಕಾನೂನು ಹೋರಾಟ ನಡೆಸಿ ಅಂತ ಶಾಸಕರು ಸಲಹೆ ಕೊಟ್ಟಿದ್ದಾರೆ. ಅದಕ್ಕೆ ಸಿಎಂ ಸಹ ಧನ್ಯವಾದ ಹೇಳಿದರು. ನನ್ನ ಪರವಾಗಿ ಹೋರಾಡುತ್ತಿದ್ದೀರಿ, ನಿಮಗೆ ಧನ್ಯವಾದ ಅಂತ ಹೇಳಿದ್ದಾರೆ. ನಾಳೆ (ಆ.23) ಹೈಕಮಾಂಡ್ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದು, ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

    ಇವತ್ತು ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿ ಪೆಂಡಿಂಗ್ ಇರುವ ನಾಲ್ಕು ಪ್ರಕರಣಗಳ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಸಲಹೆ ರೂಪದ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ಭ್ರಷ್ಟಚಾರ ತಡೆ ಕಾಯ್ದೆ 1988ರ ಅಡಿ ಪ್ರಮುಖ 4 ಪ್ರಕರಣಗಳ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಬೇಕೆಂದು ನಿರ್ಣಯ ಕೈಗೊಳ್ಳಲಾಗಿದೆ. As soon as possible ಪ್ರಾಸಿಕ್ಯೂಷನ್ ನೀಡುವ ಬಗ್ಗೆ ಕ್ರಮ ತೆಗೆದುಕೊಳ್ಳಿ. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಪ್ರಕರಣ, ಜನಾರ್ದನ ರೆಡ್ಡಿ ಪ್ರಕರಣ, ಮುರುಗೇಶ್ ನಿರಾಣಿ ಪ್ರಕರಣ, ಶಶಿಕಲಾ ಜೊಲ್ಲೆ ಪ್ರಕರಣಗಳ ಪ್ರಾಸಿಕ್ಯೂಶನ್ ಅನುಮತಿ ಮನವಿ ಅರ್ಜಿಗಳನ್ನ ಇತ್ಯರ್ಥಗೊಳಿಸಬೇಕೆಂದು ಸಲಹೆ ನೀಡಿ ನಿರ್ಣಯ ಕೈಗೊಳ್ಳಲಾಗಿದೆ.

    ಈ ಮೂಲಕ ರಾಜ್ಯಪಾಲರಿಗೆ ತಿರುಗೇಟು ಕೊಡುವುದು ಒಂದು ಕಡೆಯಾದ್ರೆ, ಹೆಚ್‌ಡಿಕೆ ಹಾಗೂ ವಿಪಕ್ಷ ನಾಯಕರಿಗೆ ಬಿಸಿ ಮುಟ್ಟಿಸಲು ಸಿದ್ದರಾಮಯ್ಯ ಕ್ಯಾಬಿನೆಟ್ ಯತ್ನಿಸಿದಂತಿದೆ. ಆದ್ರೆ ಈ ಮೊದಲು ಆಗಸ್ಟ್ 1ರಂದು ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ತೆಗೆದುಕೊಂಡಿದ್ದ ನಿರ್ಣಯಕ್ಕೆ ಕ್ಯಾರೇ ಎನ್ನದ ರಾಜ್ಯಪಾಲರು, ಮಂತ್ರಿ ಪರಿಷತ್ ನಿರ್ಣಯ ವಿಶ್ವಾಸಾರ್ಹ ಅಲ್ಲ ಎಂದು ತಿರುಗೇಟು ನೀಡಿ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು. ‌ಹಾಗಾಗಿ ಇವತ್ತಿನ ನಿರ್ಣಯಕ್ಕೆ ರಾಜ್ಯಪಾಲರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬ ಕುತೂಹಲವಿದ್ದು, ರಾಜಭವನ ವರ್ಸಸ್ ಸರ್ಕಾರದ ಸಂಘರ್ಷ ಇನ್ನಷ್ಟು ತಾರಕಕ್ಕೇರುತ್ತಾ ಕಾದುನೋಡಬೇಕಿದೆ.

    ಪ್ರಮುಖ ನಿರ್ಣಯಗಳೇನು?
    ಅಲ್ಲದೇ ಸಿಎಂ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನೂ ಕೈಗೊಳ್ಳಲಾಯಿತು. ರಾಷ್ಟ್ರಪತಿಗಳ ಮುಂದೆ ಶಾಸಕರ ಪೆರೇಡ್‌ಗೆ ನಿರ್ಧರಿಸಲಾಯಿತು. ಆ.23ರಂದು ಹೈ ಕಮಾಂಡ್ ಬಳಿ ಈ ವಿಚಾರ ಮಾತನಾಡಲು ನಿರ್ಧಾರ ಕೈಗೊಳ್ಳಲಾಯಿತು. ಹೈಕಮಾಂಡ್ ಅನುಮತಿ ಕೊಟ್ಟರೇ, ಅಲ್ಲೇ ದಿನಾಂಕ ನಿಗದಿಪಡಿಸಲಿರುವ ಸಿಎಂ ಹಾಗೂ ಡಿಸಿಎಂ ಎಲ್ಲಾ 135 ಶಾಸಕರನ್ನ ದೆಹಲಿಗೆ ಕರೆದೊಯ್ದು, ರಾಷ್ಟ್ರಪತಿಗಳ ಮುಂದೆ ಪೆರೆಡ್ ಮಾಡಿಸಿ, ರಾಜ್ಯಪಾಲರ ವಿರುದ್ಧ ದೂರು ಕೊಡಲು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಯಿತು.

    ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರದೀಪ್ ಈಶ್ವರ್, ವಿನಯ್ ಕುಲಕರ್ಣಿ, ರಾಜು ಕಾಗೆ, ಮಂಜುನಾಥ್ ಭಂಡಾರಿ, ಸುಧಾಮ್ ದಾಸ್, ಹ್ಯಾರಿಸ್, ಬೋಸರಾಜು, ನಾರಾಯಣಸ್ವಾಮಿ, ಕೆ.ಜೆ ಜಾರ್ಜ್, ಶರಣು ಪ್ರಕಾಶ್ ಪಾಟೀಲ್, ನರೇಂದ್ರ ಸ್ವಾಮಿ, ಶ್ರೀನಿವಾಸ ಮಾನೆ, ಉಮಾಶ್ರೀ, ರಾಜೇಗೌಡ, ರಾಮೋಜಿಗೌಡ, ಜಮೀರ್ ಅಹಮದ್ ಪಾಲ್ಗೊಂಡಿದ್ದರು.

    ರಾಜ್ಯಪಾಲರ ಒಪ್ಪಿಗೆಗೆ ಕಾದಿರುವ ಪ್ರಕರಗಳು
    1 ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಲೈಸೆನ್ಸ್ ಪ್ರಕರಣ
    2. ಜನಾರ್ದನ ರೆಡ್ಡಿ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣ
    3. ಮುರುಗೇಶ ನಿರಾಣಿ ವಿರುದ್ಧ `ಇನ್ವೆಸ್ಟ್ ವೀಡಿಯೋ’ ಪ್ರಕರಣ
    4. ಮಾಜಿ ಮಂತ್ರಿ ಶಶಿಕಲಾ ಜಿಲ್ಲೆ ವಿರುದ್ಧ ಮೊಟ್ಟೆ ಪ್ರಕರಣ

  • ಸಿಎಂ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

    ಸಿಎಂ ರಾಜೀನಾಮೆ ಕೊಡುವವರೆಗೆ ನಾವು ವಿರಮಿಸಲ್ಲ – ಛಲವಾದಿ ನಾರಾಯಣಸ್ವಾಮಿ ಎಚ್ಚರಿಕೆ

    – ಸಿದ್ದರಾಮಯ್ಯ ಹುಲಿಯಾ ಅಲ್ಲ ಕರಿಯಾ ಎಂದ ಎಂಎಲ್‌ಸಿ

    ಬೆಂಗಳೂರು: ದಲಿತರ ವಿರುದ್ಧ ಕಾಂಗ್ರೆಸ್ (Congress) ಪಕ್ಷದ ಅನ್ಯಾಯವನ್ನು ಪ್ರತಿಭಟಿಸಿ ಕಾಂಗ್ರೆಸ್ಸಿನಲ್ಲಿರುವ ದಲಿತ ಮುಖಂಡರು, ಜನಪ್ರತಿನಿಧಿಗಳು ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್‌ನ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಅವರು ಒತ್ತಾಯಿಸಿದರು.

    ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನವನದಲ್ಲಿ ಇಂದು ನಡೆದ ಬಿಜೆಪಿಯ (BJP) ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲ ದಲಿತ ಮುಖಂಡರಿಗೂ ಧಿಕ್ಕಾರವಿರಲಿ. ದಲಿತರಿಗೆ ಅನ್ಯಾಯ ಮಾಡಿದ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಇದನ್ನೂ ಓದಿ :ಜನಹಿತಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಕೊಟ್ಟು ತೊಲಗಲಿ: ಅಶ್ವತ್ಥನಾರಾಯಣ್ 

    ನಾನು ಹಿಂದುಳಿದ ವರ್ಗದ ನಾಯಕ. ಆದ್ದರಿಂದಲೇ ನನಗೆ ಬಿಜೆಪಿಯವರು ತೊಂದರೆ ಕೊಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಿದ್ದರೆ ಈ ದೇಶದ ಪ್ರಧಾನಮಂತ್ರಿ ಯಾರು? ಅವರು ಕೂಡ ಹಿಂದುಳಿದವರು. ಅವರು ನಿಮ್ಮ ಥರ ಕರಿ ಕಾಗೆ ಅಲ್ಲ. ಸಿದ್ದರಾಮಯ್ಯ(CM Siddaramaiah) ರಾಜೀನಾಮೆ ಕೊಡುವವರೆಗೆ ನಾವು ವಿರಮಿಸುವುದಿಲ್ಲ ಎಂದು ಪ್ರಕಟಿಸಿದ ಅವರು, ಭ್ರಷ್ಟಾಚಾರದ ಕಪ್ಪನ್ನು ಅಳಿಸುವವರೆಗೆ, ನಿಮ್ಮನ್ನು ಮನೆಗೆ ಕಳಿಸುವವರೆಗೆ ನಾವು ವಿರಮಿಸುವುದಿಲ್ಲ. ನಾವು ಹೋರಾಟದಿಂದ ವಿರಮಿಸುವುದಿಲ್ಲ ಎಂದರು.  ಇದನ್ನೂ ಓದಿ : ಡಿ.ಕೆ ಶಿವಕುಮಾರ್‌ಗೆ ನಾಡಿನ ಜನ ಪಾಠ ಕಲಿಸೋ ದಿನ ದೂರವಿಲ್ಲ: ಜೆಡಿಎಸ್

    ನಿಮ್ಮ ಮಂಡೆಯಲ್ಲಿ ಬುದ್ಧಿ ಉಂಟಾ ಮಾರಾಯರೇ?
    ಸರ್ಕಾರಿ ಜಮೀನನ್ನು ನೀವು ಖರೀದಿಸಿದ್ದೀರಲ್ಲವೇ? ನಿಮ್ಮ ಮಂಡೆಯಲ್ಲಿ ಬುದ್ಧಿ ಉಂಟಾ ಮಾರಾಯರೇ? ಎಂದು ಛಲವಾದಿ ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಪ್ರಶ್ನೆ ಹಾಕಿದರು. ಇದನ್ನೂ ಓದಿ : ಸಿದ್ದರಾಮಯ್ಯ ಅಲ್ಲ, ಮೊದಲು ನನ್ನನ್ನ ಫೇಸ್ ಮಾಡಿ – ಹೆಚ್‌ಡಿಕೆಗೆ ಜಮೀರ್‌ ಸವಾಲ್

    ನಿಮ್ಮ ಮಂಡೆಯಲ್ಲಿ ಬುದ್ಧಿ ಇಲ್ಲ. ಹುಲಿಯಾ ಎಂದಾಗ ಖುಷಿ ಪಡುತ್ತಿದ್ದ ನೀವೀಗ ಕರಿಯಾ ಆಗಿ ಕೂತಿದ್ದೀರಲ್ಲಾ ಎಂದು ಕೇಳಿದರು. ಎಷ್ಟು ವೈಟ್ನರ್ ಹಾಕಿದ್ರೂ ಬಿಳಿ ಆಗೋದಿಲ್ಲ ಮಾರಾಯರೇ. ದಯವಿಟ್ಟು ರಾಜೀನಾಮೆ ಕೊಟ್ಟು ಹೋಗಿಬಿಡಿ ಎಂದರು. ಇದನ್ನೂ ಓದಿ : ದಲಿತರ ಬಗ್ಗೆ ಮಾತಾಡೋ ನೈತಿಕತೆ ಬಿಜೆಪಿಯವರಿಗೆ ಇಲ್ಲ – ಸಿದ್ದರಾಮಯ್ಯ

  • ದೇಸಾಯಿ ಆಯೋಗಕ್ಕೆ ಮುಡಾ ಪ್ರಕರಣ ಕುರಿತು ಮಾಹಿತಿ ನೀಡಲಿ: ಪರಮೇಶ್ವರ್

    ದೇಸಾಯಿ ಆಯೋಗಕ್ಕೆ ಮುಡಾ ಪ್ರಕರಣ ಕುರಿತು ಮಾಹಿತಿ ನೀಡಲಿ: ಪರಮೇಶ್ವರ್

    ಬೆಂಗಳೂರು: ಮುಡಾ (MUDA) ವಿಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುವ ಬದಲು ದೇಸಾಯಿ ಆಯೋಗಕ್ಕೆ ಮಾಹಿತಿ ನೀಡಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರು ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷದವರು ಪದೇ ಪದೇ ಅನೇಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಮುಡಾ ಬಗ್ಗೆ ದೇಸಾಯಿ ಆಯೋಗವು ತನಿಖೆ ಆರಂಭಿಸಿದೆ. ಮುಡಾ ಅಕ್ರಮದ ಬಗ್ಗೆ ಮಾಹಿತಿ ಇದ್ದರೆ ಆಯೋಗಕ್ಕೆ ನೀಡಲಿ. ಸಾರ್ವಜನಿಕವಾಗಿ ಗೊಂದಲ ಉಂಟು ಮಾಡುವ ಹೇಳಿಕೆ ನೀಡುವುದು ಬೇಡ ಎಂದರಲ್ಲದೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H D Kumarswamy)  ಅವರ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.ಇದನ್ನೂ ಓದಿ: ದಲಿತರ ಬಗ್ಗೆ ಮಾತಾಡೋ ನೈತಿಕತೆ ಬಿಜೆಪಿಯವರಿಗೆ ಇಲ್ಲ – ಸಿದ್ದರಾಮಯ್ಯ

    ಕೋವಿಡ್ ಸಂದರ್ಭದಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ಮೈಕಲ್ ಕುನ್ಹಾ (John Michael Cunha) ಅವರ ವರದಿ ಬರುವವರೆಗೂ ಏನನ್ನು ಮಾಡಲಾಗುವುದಿಲ್ಲ. ವರದಿಯಲ್ಲಿ ಏನು ಶಿಫಾರಸ್ಸು ಮಾಡುತ್ತಾರೆ ಎಂಬುದನ್ನು ಗಮನಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಪ್ರೊಸಿಡಿಂಗ್ಸ್ ಮಾಡಬೇಕು ಅಂತ ವರದಿಯಲ್ಲಿ ಬಂದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಸ್ಪಷ್ಟನೆ ನೀಡಿದ್ದಾರೆ

    ರಾಜ್ಯಾಪಾಲರು ರಕ್ಷಣೆ ಕೇಳಿದ ಹಿನ್ನೆಲೆಯಲ್ಲಿ ಭದ್ರತೆ ಒದಗಿಸಲಾಗಿದೆ. ಅವರಿಗೆ ಯಾವ ರೀತಿಯ ಬೆದರಿಕೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬ ಸನ್ನಿವೇಶವನ್ನು ಬೆಜಿಪಿಯವರು ಸೃಷ್ಟಿ ಮಾಡಿದ್ದಾರೆ. ಇದಕ್ಕೆಲ್ಲಾ ಬಿಜೆಪಿಯವರ (BJP) ಇತ್ತೀಚಿನ ಬೆಳವಣಿಗೆಗಳೇ ಕಾರಣ ಎಂದು ಆಕ್ಷೇಪ ವ್ಯಕ್ತಪಡಿಸಿದರು.ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ, ಮೊದಲು ನನ್ನನ್ನ ಫೇಸ್ ಮಾಡಿ – ಹೆಚ್‌ಡಿಕೆಗೆ ಜಮೀರ್‌ ಸವಾಲ್

  • ಐವನ್ ಒಬ್ಬ ಮೆಂಟಲ್ ಗಿರಾಕಿ, ಅವನ ಹುಡುಗರೇ ಕಲ್ಲು ತೂರಿರಬಹುದು: ಭರತ್ ಶೆಟ್ಟಿ ಆಕ್ರೋಶ

    ಐವನ್ ಒಬ್ಬ ಮೆಂಟಲ್ ಗಿರಾಕಿ, ಅವನ ಹುಡುಗರೇ ಕಲ್ಲು ತೂರಿರಬಹುದು: ಭರತ್ ಶೆಟ್ಟಿ ಆಕ್ರೋಶ

    ಮಂಗಳೂರು: ಐವನ್ ಡಿಸೋಜ (MLC Ivan D’Souza) ಒಬ್ಬ ಮೆಂಟಲ್ ಗಿರಾಕಿ. ಬಾಯಿಗೆ ಬಂದ ಹಾಗೆ ಮಾತನಾಡುತ್ತಾನೆ ಎಂದು ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ (Dr Y Bharath Shetty) ಆಕ್ರೋಶ ವ್ಯಕ್ತಪಡಿಸಿದರು.

    ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ (Congress) ನಾಯಕರು ಆಡಿದ ಕೆಟ್ಟ ಮಾತು ಮತ್ತು ಮುಡಾ(MUDA Scam) , ವಾಲ್ಮೀಖಿ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ನಡೆದ ಬಿಜೆಪಿ (BJP) ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಐವನ್ ನನ್ನನ್ನು ಏನು ಮಾಡುತ್ತಾನೋ ಗೊತ್ತಿಲ್ಲ. ಹೆಲ್ಮೆಟ್ ಹಾಕಿದ ಇಬ್ಬರು ಐವನ್ ಮನೆ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ. ಇದನ್ನೂ ಇವನ ಹುಡುಗರಿಂದಲೇ ಮಾಡಿಸಿರಬಹುದು. ಇದಕ್ಕೂ ಆ ಇಬ್ಬರು ನಾನು ಹಾಗೂ ವೇದವ್ಯಾಸ್ ಕಾಮತ್(D Vedavyas Kamath) ಎಂದು ಕೇಸ್ ಹಾಕುತ್ತಾರೋ ಗೊತ್ತಿಲ್ಲ. ನಮ್ಮ ಮೇಲೆ ಸಾಕಷ್ಟು ಕೇಸ್ ಹಾಕಿದ್ದಾರೆ. ಇನ್ನೂ ರೌಡಿ ಶೀಟರ್ ಆಗಬಹುದೇನೋ ಗೊತ್ತಿಲ್ಲ ಎಂದರು. ಇದನ್ನೂ ಓದಿ: Mangaluru| ಕೈ ನಾಯಕ ಐವನ್ ಡಿಸೋಜ ಮನೆ ಮೇಲೆ ಕಲ್ಲು ತೂರಾಟ

    ಐವನ್ ರಾಜ್ಯಪಾಲರ ಮನೆಗೆ ನುಗ್ಗಿ ಹೊಡೆಯುತ್ತೇವೆ, ಓಡಿಸುತ್ತೇವೆ ಎಂದು ಹೇಳಿದರು. ಅವರ ಮೇಲೆ ಕೇಸ್ ಹಾಕಲು ಪೊಲೀಸರು ಹಿಂದೆ ಮುಂದೆ ನೋಡುತ್ತಾರೆ. ಸರ್ಕಾರ ಇದೆ ಎಂಬ ಕಾರಣಕ್ಕೆ ಪೋಲೀಸರು ನಿಮ್ಮ ಆತ್ಮ ಸಾಕ್ಷಿಯಾಗಿ ಸರಿಯಾಗಿ ಕೆಲಸ ಮಾಡಿ. ಐವನ್ ಸ್ವಲ್ಪ ಮೆಂಟಲ್ ಆಗಿ ಬಾಯಿ ಬಂದಾಗೆ ಒದರುತ್ತಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮುಡಾ ಕೇಸ್‌ ಚುರುಕು ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಹೈಕೋರ್ಟ್‌ಗೆ ಸಿಐಡಿ ಅರ್ಜಿ

    ನಮಗೆ ಕಲ್ಲು ಹೊಡೆಯೋದಕ್ಕೆ ಟಯರ್ ಹಚ್ಚೋದಕ್ಕೆ 5 ನಿಮಿಷ ಸಾಕು. ನಮ್ಮ ಯುವ ಮೋರ್ಚಾ ಕಾರ್ಯಕರ್ತರು ತಯಾರಿದ್ದಾರೆ. ನಮಗೂ 10 ಟಯರ್‌ಗಳನ್ನು ಇಲ್ಲಿ ಸುಡಲು ಬರುತ್ತದೆ. ಆ ರೀತಿಯ ಅರಾಜಾಕತೆಯ ಪರಿಸ್ಥಿತಿ ತರುವ ಅವಶ್ಯಕತೆ ನಮಗಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: 10 ರೂ. ಆಸೆ ತೋರಿಸಿ 10ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

    ಪ್ರತಿಭಟನಾ ಸಭೆಯಲ್ಲಿ ಪೊಲೀಸರ ಕುರಿತು ಮಾತನಾಡಿ, ಈಗ ಕಾಂಗ್ರೆಸ್ ಸರ್ಕಾರವಿದೆ ಎಂಬ ಕಾರಣಕ್ಕೆ ಕೇಸ್ ಹಾಕುತ್ತಿದ್ದೀರಿ. ನಾಳೆ ನಮ್ಮ ಸರಕಾರ ಬಂದಾಗ ನಿಮಗೆ ಏನು ಮಾಡಬೇಕು ಎಂದು ನಮಗೆ ಗೊತ್ತಿದೆ. ನೆನಪಿರಲಿ ಸರಕಾರ ಬದಲಾಗುತ್ತೆ. ಅಧಿಕಾರಿಗಳು ನೀವೇ ಇರುತ್ತೀರಿ. ನೀವು ಯಾರು ಅನ್ಯಾಯ ಮಾಡಬೇಡಿ. ಸಿಎಎ ಗಲಾಟೆಯಾದಾಗ ನಿಮ್ಮ ಪರ ನಿಂತಿದ್ದು ಬಿಜೆಪಿ ಹಾಗೂ ಸಂಘಟನೆಯ ಕಾರ್ಯಕರ್ತರು ಎಂದು ಎಚ್ಚರಿಸಿದರು.

  • MUDA Scam| ಪತ್ನಿ ಪತ್ರ ಬರೆದಿದ್ರೂ ಬರೆದಿಲ್ಲ ಎಂದು ಸಿಎಂ ಸುಳ್ಳು ಹೇಳಿದ್ರಾ?

    MUDA Scam| ಪತ್ನಿ ಪತ್ರ ಬರೆದಿದ್ರೂ ಬರೆದಿಲ್ಲ ಎಂದು ಸಿಎಂ ಸುಳ್ಳು ಹೇಳಿದ್ರಾ?

    ಮೈಸೂರು: ಸಿಎಂ ಸಿದ್ದರಾಮಯ್ಯನವರು (CM Siddaramaiah) ಮುಡಾ ಹಗರಣಕ್ಕೆ(MUDA Scam) ಸಂಬಂಧಿಸಿದಂತೆ ಸುಳ್ಳು ಹೇಳಿದ್ರಾ ಎಂಬ ಗಂಭೀರವಾದ ಪ್ರಶ್ನೆ ಎದ್ದಿದೆ.

    ಬುಧವಾರ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ (Parvathy) ಅವರು ಮುಡಾಕ್ಕೆ ಬರೆದ ಪತ್ರಗಳು ಮಾಧ್ಯಮಗಳಿಗೆ ಲಭ್ಯವಾಗಿದ್ದವು. ಈ ಪತ್ರ ಬೆಳಕಿಗೆ ಬಂದ ಬೆನ್ನಲ್ಲೇ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಸಿದ್ದರಾಮಯ್ಯ, ನನ್ನ ಪತ್ನಿ ಯಾವುದೇ ಪತ್ರ ಬರೆದಿಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಆದರೆ ಪಾರ್ವತಿ ಅವರು ಪತ್ರ ಬರೆದ ಬಗ್ಗೆ ಸಿಎಂ ಸಿದ್ದರಾಮಯ್ಯನವರೇ ಉಲ್ಲೇಖ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಇದನ್ನೂ ಓದಿ: MUDA Scam | ಹೊಸ ಟ್ವಿಸ್ಟ್‌ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ವೈಟ್​ನರ್ ಬಳಸಿ ತಿರುಚಿದ್ದಾರಾ?

    ರಾಜ್ಯಪಾಲರಿಗೆ ನೀಡಿದ ಶೋಕಾಸ್‌ ನೋಟಿಸಿಗೆ ಸಿಎಂ ನೀಡಿದ ಉತ್ತರದಲ್ಲಿ ಪತ್ನಿ ಪಾರ್ವತಿ ಪತ್ರ ಬರೆದ ಬಗ್ಗೆ ಉಲ್ಲೇಖ

    ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿದ್ದರಾಮಯ್ಯನವರಿಗೆ ಶೋಕಾಸ್‌ ನೋಟಿಸ್‌ ನೀಡಿದ್ದರು. ಈ ನೋಟಿಸ್‌ಗೆ ಸಿದ್ದರಾಮಯ್ಯನವರು ಉತ್ತರ ನೀಡಿದ್ದರು. ಈ ಉತ್ತರದಲ್ಲಿ ಪತ್ನಿ ಪಾರ್ವತಿ ಅವರು ಮುಡಾಗೆ ಬರೆದ ಪತ್ರದ ಬಗ್ಗೆ ಉಲ್ಲೇಖ ಮಾಡಿದ್ದಾರೆ. 30ನೇ ಖಂಡಿಕೆ 15ನೇ ಅನೆಕ್ಸರ್ ನಲ್ಲಿ ತಮ್ಮ ಪತ್ನಿ ಮುಡಾಗೆ ಪತ್ರ ಬರೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

     

  • MUDA Scam| ಇವತ್ತು ಸಿಎಂ ಬ್ಯಾಕ್ ಟು ಬ್ಯಾಕ್ ಸಭೆ – ಒಂದೇ ಉದ್ದೇಶ, ಒಂದೇ ಸಂದೇಶ

    MUDA Scam| ಇವತ್ತು ಸಿಎಂ ಬ್ಯಾಕ್ ಟು ಬ್ಯಾಕ್ ಸಭೆ – ಒಂದೇ ಉದ್ದೇಶ, ಒಂದೇ ಸಂದೇಶ

    ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥವರ್‌ ಚಂದ್‌ ಗೆಹ್ಲೋಟ್‌ ಅನುಮತಿ ನೀಡಿದ ಬೆನ್ನಲ್ಲೇ ಸಿದ್ದರಾಮ್ಯ (Siddaramaiah) ಇಂದು ಎರಡು ಮಹತ್ವದ ಸಭೆ ನಡೆಸಲಿದ್ದಾರೆ.

    ಹೌದು. ಇಂದು ಬೆಳಗ್ಗೆ 11ಗಂಟೆಗೆ ಸಚಿವ ಸಚಿವ ಸಂಪುಟ ಸಭೆ (Cabinet Meeting) ನಡೆಸಿದರೆ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷ ಸಭೆಯನ್ನು (CLP Meeting) ಕರೆದಿದ್ದಾರೆ. ಈಗಾಗಲೇ ಶಾಸಕರುಗಳಿಗೂ ಸಿಎಲ್‌ಪಿ ಕಾರ್ಯದರ್ಶಿ ಮಾಹಿತಿ ರವಾನಿಸಿದ್ದು ತಪ್ಪದೇ ಸಭೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಕೇಸ್ – ದರ್ಶನ್ A1 ಆರೋಪಿ? 

    ಈ ಸಭೆಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಗೆ ಕ್ಯಾಬಿನೆಟ್‌ನಲ್ಲಿ ಖಂಡನೆ ವ್ಯಕ್ತಪಡಿಸಿ ಪ್ರಕರಣದಲ್ಲಿ ಸಿಎಂ ಅವರನ್ನು ಬೆಂಬಲಿಸಲು ಶಾಸಕರಿಂದ ಒಕ್ಕೊರಲ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: ಅಗತ್ಯಬಿದ್ದರೇ ಮುಲಾಜಿಲ್ಲದೇ ಕುಮಾರಸ್ವಾಮಿ ಅರೆಸ್ಟ್‌ – ಸಿದ್ದರಾಮಯ್ಯ ವಾರ್ನಿಂಗ್‌

    ಕೆಂದ್ರದ ಅಣತಿಯಂತೆ ರಾಜ್ಯಪಾಲರು ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಮುಡಾ ಪ್ರಕರಣದಲ್ಲಿ ತನ್ನ ಪಾತ್ರ ಏನು ಇಲ್ಲ ಎಂದು ಸಿಎಂ ಅವರು ಶಾಸಕರಿಗೆ ಮನವರಿಕೆ ಮಾಡಲಿದ್ದಾರೆ.

    ಸಂದೇಶ ಯಾರಿಗೆ ?
    ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಬಳಿ ಹೈಕಮಾಂಡ್‌ (Congress High Command) ವರದಿ ಕೇಳಿದೆ. ಈ ಸಂಬಂಧ ಶುಕ್ರವಾರ ಸಿಎಂ ದೆಹಲಿಗೆ ತೆರಳಿ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆ, ಪಕ್ಷದೊಳಗಿನ ವಿದ್ಯಮಾನಗಳ ಬಗ್ಗೆ ವರದಿ ಸಲ್ಲಿಸಲಿದ್ದಾರೆ.

     

    ಈಗಾಗಲೇ ಕಾಂಗ್ರೆಸ್ ಹೈಕಮಾಂಡ್‌ಗೆ ಸಚಿವರು, ಆಪ್ತರು ತನ್ನ ಜೊತೆ ಇದ್ದಾರೆ ಎಂಬ ಸಂದೇಶ ರವಾನಿಸಿದ್ದಾರೆ. ಈಗ ಶಾಸಕರ ಜೊತೆ ಸಭೆ ನಡೆಸುವ ಮೂಲಕ ಸಿಎಂ ಬಲ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತಂತ್ರದ ಭಾಗವಾಗಿ ಒಳ-ಹೊರ ವಿರೋಧಿಗಳಿಗೆ ಸಿದ್ದರಾಮಯ್ಯ ಸಂದೇಶ ಕಳುಹಿಸಲೆಂದೇ ಈ ಸಭೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

     

  • ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ – ಹೆಚ್‌ಡಿಕೆ ಸವಾಲ್

    ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನ ಬಂಧಿಸಲು ಸಾಧ್ಯವಿಲ್ಲ – ಹೆಚ್‌ಡಿಕೆ ಸವಾಲ್

    ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು (Siddaramaiah) ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಅಂತ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಕುಮಾರಸ್ವಾಮಿ (HD Kumaraswamy) ಸವಾಲ್ ಹಾಕಿದರು.

    ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನ ಬಂಧನ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನನ್ನ ಸಹಿಯನ್ನೇ ತಿರುಚಲಾಗಿದೆ, 1 ದಿನವಾದ್ರೂ ಜೈಲಿಗೆ ಹಾಕಲು ಪ್ಲ್ಯಾನ್‌ ನಡೆಯುತ್ತಿದೆ: ಹೆಚ್‌ಡಿಕೆ ಕಿಡಿ

    ನನ್ನ ಬಂಧನ ಮಾಡೋಕೆ ನೂರು ಜನ ಸಿದ್ದರಾಮಯ್ಯ ಬಂದರೂ ಆಗೊಲ್ಲ. ನನಗೆ ಭಯ ಶುರುವಾಗಿದೆ ಅಂತ ಸಿಎಂ ಹೇಳ್ತಾರೆ. ನನಗೆ ಭಯ ಶುರುವಾಗಿದೆಯಾ? ನನ್ನನ್ನ ನೋಡಿದ್ರೆ ಹಾಗೆ ಅನ್ನಿಸುತ್ತಾ ಅಂತ ಪ್ರಶ್ನೆ ಮಾಡಿದ್ರು.

    ಸಿದ್ದರಾಮಯ್ಯ ಅವರು ಒಂದು ವಾದದಿಂದ ಹೇಗೆ ನಡೆದುಕೊಂಡಿದ್ದಾರೆ ಅಂತ ಜನ ನೋಡಿದ್ದಾರೆ. ಮೈಸೂರಿನ ದಾಖಲೆಗಳೇ ಇವೆಯಲ್ಲ. ಮುಡಾ ಆಸ್ತಿ (MUDA Property) ನನ್ನ ಆಸ್ತಿ ಅಂತ ಹೇಳ್ತಿದ್ದಾರೆ. ಇಂತಹ ಭಂಡತನ ಮುಖ್ಯಮಂತ್ರಿ ನಾನು ನೋಡಿಲ್ಲ ಅಂತ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಪತಿ-ಪತ್ನಿ ಸಾವು; ನೇಣು ಬಿಗಿದ ಸ್ಥಿತಿಯಲ್ಲಿ ಹೆಂಡತಿ ಶವ ಪತ್ತೆ – ಕೆರೆಗೆ ಹಾರಿ ಗಂಡ ಆತ್ಮಹತ್ಯೆ

  • ರಾಜ್ಯಪಾಲರಿಗೆ ಅವಮಾನ – ನಾಳೆ ಬೆಂಗಳೂರು ಸೇರಿ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ

    ರಾಜ್ಯಪಾಲರಿಗೆ ಅವಮಾನ – ನಾಳೆ ಬೆಂಗಳೂರು ಸೇರಿ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ

    ಬೆಂಗಳೂರು: ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಅವರಿಗೆ ಅವಮಾನ ಮಾಡಿದ ಕಾಂಗ್ರೆಸ್ (Congress) ಕ್ರಮವನ್ನು ಖಂಡಿಸಿ ಹಾಗೂ ಮುಡಾ, ವಾಲ್ಮೀಕಿ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜೀನಾಮೆಗೆ ಆಗ್ರಹಿಸಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ (BJP) ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ (Sunil Kumar) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: MUDA Scam | ಹೊಸ ಟ್ವಿಸ್ಟ್‌ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ತಿರುಚಿದ್ದಾರಾ?

     

    ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ಮಾನ್ಯ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೇ ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

     

  • MUDA Scam | ಹೊಸ ಟ್ವಿಸ್ಟ್‌ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ವೈಟ್​ನರ್ ಬಳಸಿ ತಿರುಚಿದ್ದಾರಾ?

    MUDA Scam | ಹೊಸ ಟ್ವಿಸ್ಟ್‌ – ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ವೈಟ್​ನರ್ ಬಳಸಿ ತಿರುಚಿದ್ದಾರಾ?

    ಮೈಸೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯ (Siddaramaiah) ಪತ್ನಿ ಪಾರ್ವತಿ ಬರೆದ ಪತ್ರವನ್ನು ಅಧಿಕಾರಿಗಳು ತಿರುಚಿದ್ದಾರಾ ಎಂಬ ಗಂಭೀರ ಪ್ರಶ್ನೆ ಈಗ ಎದ್ದಿದೆ.

    ಹೌದು. ಸಿಎಂ ಪತ್ನಿ ಬರೆದ ಬರೆದ ಪತ್ರ ಈಗ ಮಾಧ್ಯಮಗಳಿಗೆ ಲಭ್ಯವಾಗಿದೆ. ಈ ಪತ್ರದಿಂದಾಗಿ ತಮ್ಮ ಭೂಮಿಗೆ 50:50 ಅನುಪಾತದಲ್ಲಿ ಪರ್ಯಾಯ ನಿವೇಶನ ಕೊಡುವಂತೆ ಸಿಎಂ ಪತ್ನಿ ಬರೆದ ಪತ್ರವನ್ನೇ ಅಧಿಕಾರಿಗಳು ತಿರುಚಿದ್ದಾರಾ ಎಂಬ ಅನುಮಾನ ಎದ್ದಿದೆ.

    ಅನುಮಾನ ಯಾಕೆ?
    ನಾವು ವಿಜಯನಗರ ಬಡಾವಣೆಯಲ್ಲೇ ಸೈಟ್‌ ನೀಡಬೇಕೆಂದು ಕೇಳಿಲ್ಲ. ಮುಡಾದಿಂದಲೇ 14 ಸೈಟ್‌ ಹಂಚಿಕೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ ಪಾರ್ವತಿ ಬರೆದ ಪತ್ರದಲ್ಲಿ ವಿಜಯನಗರದ 2 ಮತ್ತು ಮೂರನೇ ಹಂತದಲ್ಲೇ ನಿವೇಶನ ಕೊಡುವಂತೆ ಕೇಳಿದ್ದಾರಾ ಎಂಬ ಅನುಮಾನ ಎದ್ದಿದೆ. ಲಭ್ಯವಾಗಿರುವ ಪತ್ರದಲ್ಲಿ ವೈಟ್​ನರ್ ಹಾಕಿ ಅಳಿಸಿದ್ದರಿಂದ ಈ ಪ್ರಶ್ನೆ ಮೂಡಿದೆ.

    ಕೆಸರೆ ಗ್ರಾಮದ ಜಮೀನನ್ನು ದೇವನೂರು ಮೂರನೇ ಹಂತದ ಬಡಾವಣೆ ನಿರ್ಮಾಣಕ್ಕಾಗಿ ಮುಡಾ ಸ್ವಾಧಿನ ಪಡಿಸಿಕೊಂಡಿತ್ತು. ಈ ಜಮೀನನ್ನು ಸಿಎಂ ಪತ್ನಿಯ ಸಹೋದರ 2004 ರಲ್ಲಿ ಖರೀದಿ ಮಾಡುತ್ತಾರೆ. ಮುಡಾ ಸ್ವಾಧೀನ ಪಡಿಸಿಕೊಂಡ ನಿವೇಶನ ಹಂಚಿದ ಜಾಗವನ್ನು ಸಿಎಂ ಸಹೋದರ ಖರೀದಿ ಮಾಡಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆ ಎದ್ದಿದೆ. ಸಿಎಂ ಪತ್ನಿ ಪ್ರಾಧಿಕಾರಕ್ಕೆ ಬರೆದ ಪತ್ರದಿಂದ ಈಗ ಈ ಎಲ್ಲಾ ಅನುಮಾನಗಳು ಎದ್ದಿದೆ ಮತ್ತು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

  • ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ

    ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ

    ಬೆಂಗಳೂರು: ಕುಮಾರಸ್ವಾಮಿ (HD Kumaraswamy) ವಿರುದ್ಧದ ಕೇಸ್ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡದೇ ನನ್ನ ವಿರುದ್ಧದ ಕೇಸ್‌ಗೆ ರಾಜ್ಯಪಾಲರು (Thawarchand Gehlot) ಆತುರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತೆ ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ.

    ಕೇಂದ್ರ ಸಚಿವ ಕುಮಾರಸ್ವಾಮಿ ಕೇಸ್‌ಗೆ ಜಾರ್ಜ್ ಶೀಟ್ ಸಲ್ಲಿಸಲು ರಾಜ್ಯಪಾಲರಿಗೆ ಅನುಮತಿ ನೀಡಲು ಎಸ್‌ಐಟಿ (SIT) ಇಂದ ಎರಡನೇ ಪತ್ರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಮೇಲೆ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕೇಸ್‌ನಲ್ಲಿ 2023ರ ನ.23ರಂದು ಲೋಕಾಯುಕ್ತದವರು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದ್ದಾರೆ. ಆದರೆ ಇವತ್ತಿನವರೆಗೂ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ. ಹೀಗಾಗಿ ಮತ್ತೆ ಅನುಮತಿ ಕೇಳಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಪಾಲರನ್ನು ನಮ್ಮ ನಾಯಕರು ನಿಂದನೆ ಮಾಡಿಲ್ಲ, ಇರೋದನ್ನೆ ಹೇಳಿದ್ದಾರೆ: ಸಿದ್ದರಾಮಯ್ಯ

    ಜು.26 2024ರಂದು 11 ಗಂಟೆಗೆ ಅಬ್ರಾಹಂ ನನ್ನ ಮೇಲೆ ದೂರು ಕೊಡುತ್ತಾರೆ. ಕೂಡಲೇ 10 ಗಂಟೆಗೆ ನನ್ನ ಮೇಲೆ ಶೋಕಾಸ್ ನೋಟಿಸ್ ರೆಡಿ ಮಾಡಿ ನನಗೆ ನೋಟಿಸ್ ಕೊಡುತ್ತಾರೆ. ಇದು ತಾರತಮ್ಯ ಅಲ್ಲವಾ? ಇದಕ್ಕೆ ರಾಜ್ಯಪಾಲರಿಗೆ ಪಿಕ್ ಅಂಡ್ ಚ್ಯೂಸ್ ಮಾಡಬೇಡಿ ಎಂದು ಹೇಳೋದು ಅಂತ ರಾಜ್ಯಪಾಲರ ನಡೆ ಟೀಕಿಸಿದರು. ಇದನ್ನೂ ಓದಿ: ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು- ಸಿದ್ದರಾಮಯ್ಯ