Tag: MUDA Scam

  • MUDA Scam – 10 ದಿನ ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ರಿಲೀಫ್‌

    MUDA Scam – 10 ದಿನ ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ರಿಲೀಫ್‌

    ಧಾರವಾಡ: ಮುಡಾ ಅಕ್ರಮಕ್ಕೆ (MUDA Scam) ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ (Parvathi) ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಅವರಿಗೆ ಧಾರವಾಡ ಹೈಕೋರ್ಟ್‌ (Dharwad High Court) ತಾತ್ಕಾಲಿಕ ರಿಲೀಫ್‌ ನೀಡಿದೆ.

    ಇಂದು ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್‌ ನ್ಯಾ. ನಾಗಪ್ರಸನ್ನ ಅವರು 10 ದಿನಗಳ ಕಾಲ ಸಿಎಂ ಪತ್ನಿ ಮತ್ತು ಬೈರತಿ ಸುರೇಶ್‌ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಆದೇಶ ಪ್ರಕಟಿಸಿದರು.

    ಫೆಬ್ರವರಿ 20ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದ್ದು ಅಲ್ಲಿಯವರೆಗೆ ಇಬ್ಬರಿಗೂ ಮಧ್ಯಂತರ ರಕ್ಷಣೆ ಮುಂದುವರಿಯಲಿದೆ.

    ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ್‌ಗೆ ಹೈಕೋರ್ಟ್ ಮಧ್ಯಂತರ ರಕ್ಷಣೆ ಮುಂದುವರಿದಿದೆ.. ಇಬ್ಬರಿಗೂ ಜಾರಿಯಾಗಿದ್ದ ಸಮನ್ಸ್ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಪೀಠ, ಫೆಬ್ರವರಿ 10ಕ್ಕೆ ವಿಚಾರಣೆ ಮುಂದೂಡಿದೆ.

    ಮೊದಲು ಸಚಿವ ಬೈರತಿ ಸುರೇಶ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಬೈರತಿ ಸುರೇಶ್ 2023ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದರೆ ಇಡಿ ಪ್ರಶ್ನಾವಳಿಯಲ್ಲಿ ಅಪ್ಪ, ತಾತ, ಮಕ್ಕಳು, ಮೊಮ್ಮಕ್ಕಳ ಮಾಹಿತಿ ಎಲ್ಲಾ ನೀಡಿ ಎಂದು ಸಮನ್ಸ್ ಮಾಡಿದೆ. ಎಲ್ಲರ ಮಾಹಿತಿಯನ್ನು ಬ್ಯಾಂಕ್ ಡಿಟೈಲ್ಸ್ ಕೊಡಬೇಕೆಂದು ಇಡಿ ಕೇಳುತ್ತಿದೆ. ಸುರೇಶ್ ಗೂ ಈ ಪ್ರಕರಣ ಯಾವುದೇ ಸಂಬಂಧ ಇಲ್ಲ. ಪ್ರಕರಣದಲ್ಲಿ ಅವರು ಆರೋಪಿಯೂ ಅಲ್ಲ, ಆದರೂ ಕೂಡ ಇಡಿ ಸಮನ್ಸ್ ನೀಡಿದೆ.. ಹೀಗಾಗಿ ಕೋರ್ಟ್ ಗೆ ಬಂದಿದ್ದೇವೆ ಎಂದು ವಾದ ಮಂಡಿಸಿದರು.

    ಇತ್ತ ಸಿಎಂ ಪತ್ನಿ ಪಾರ್ವತಿ ಪರ ವಾದ ಮಂಡಿಸಿದ ಸಂದೇಶ್ ಚೌಟ, ಪ್ರಕರಣದಲ್ಲಿ ಸೈಟ್‌ಗಳನ್ನು ವಾಪಸ್ ಮಾಡಲಾಗಿದೆ. ಅಕ್ರಮ ಹಣ ವಗಾರ್ವಣೆ ಪ್ರಶ್ನೆಯೇ ಬರುವುದಿಲ್ಲ. ಅಕ್ರಮ ಹಣದ ಗಳಿಕೆಯಿದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಆದರೆ ನಟೇಶ್ ಪ್ರಕರಣದಲ್ಲಿ ಇಡಿಯ ದಾಳಿ ಮತ್ತು ಸೀಜ್ ರದ್ದುಪಡಿಸಿದೆ. ಇಡಿ ಕಾನೂನು ಉಲ್ಲಂಘಿಸಿದೆ ಎಂದು ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದೆ ಎಂದು ವಾದ ಮಂಡಿಸಿದರು.

    ಇಡಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಿದ ಕೋರ್ಟ್ ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿತು.

     

    ಏನಿದು ಕೇಸ್?
    ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (BM Parvathi) ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಮಾಡಿದ್ದರು. ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ನಾನು ಓದಿರೋದು 10ನೇ ತರಗತಿ, ಮುಡಾ ಕೇಸ್‌ನಲ್ಲಿ ನಾನೇ ವಾದ ಮಾಡ್ತೀನಿ: ಸ್ನೇಹಮಹಿ ಕೃಷ್ಣ

    ನಾನು ಓದಿರೋದು 10ನೇ ತರಗತಿ, ಮುಡಾ ಕೇಸ್‌ನಲ್ಲಿ ನಾನೇ ವಾದ ಮಾಡ್ತೀನಿ: ಸ್ನೇಹಮಹಿ ಕೃಷ್ಣ

    ಮೈಸೂರು: ಮುಡಾ (MUDA Scam) ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ನಿರ್ಧಾರದಿಂದ ದೂರುದಾರ ಸ್ನೇಹಮಹಿ ಕೃಷ್ಣ (Snehamayi Krishna) ಹಿಂದೆ ಸರಿದಿದ್ದಾರೆ. ಜನ ಪ್ರತಿನಿಧಿ ನ್ಯಾಯಾಲಯದಲ್ಲಿ ತಾನೇ ಕೇಸ್ ವಾದಿಸಲು ಸ್ನೇಹಮಹಿ ಕೃಷ್ಣ ಮುಂದಾಗಿದ್ದಾರೆ.

    ಈ ಬಗ್ಗೆ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ಉಚ್ಚ ನ್ಯಾಯಾಲಯವು ನನ್ನ ಅರ್ಜಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ್ದೇನೆ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿದ್ದೇನೆ. ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಸದ್ಯ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲ್ಲ. ಲೋಕಾಯುಕ್ತ ಅಧಿಕಾರಿಗಳು ಏನೇ ವರದಿ ಸಲ್ಲಿಸಿದರೂ ಸರಿ. ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಆಧರಿಸಿ ಹೋರಾಡುತ್ತೇನೆ ಎಂದರು. ಇದನ್ನೂ ಓದಿ: Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

    ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆರೋಪಿತರಿಗೆ ಶಿಕ್ಷೆ ಕೊಡಿಸಬಹುದು ಎಂಬ ವಿಶ್ವಾಸ ಮೂಡಿದೆ. ಖುದ್ದಾಗಿ ನಾನೇ ಮಾನ್ಯ ನ್ಯಾಯಾಲಯಕ್ಕೆ ಸಾಕ್ಷಾಧಾರಗಳನ್ನು ಒದಗಿಸಿ, ವಾದ ಮಂಡನೆ ಮಾಡುವೆ. ನಾನು ಓದಿರುವುದು 10ನೇ ತರಗತಿ. ಜ್ಞಾನದ ಮುಂದೆ ಯಾವುದೂ ಇಲ್ಲ. ನಾನು ಪ್ರತಿನಿತ್ಯ ಪುಸ್ತಕಗಳನ್ನ ಓದಿ ಸಾಕಷ್ಟು ತಿಳಿದುಕೊಂಡಿದ್ದೇನೆ. ನಾನು ಮಾಡಿರುವ ಆರೋಪವನ್ನು ಸಾಬೀತು ಪಡಿಸಿ, ಆದಷ್ಟು ಬೇಗ ಆರೋಪಿಗಳಿಗೆ ಶಿಕ್ಷೆ ಕೊಡಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೇಶದ ವಿವಿಧ ನಗರಗಳ ಮೆಟ್ರೋ ದರಕ್ಕಿಂತಲೂ ಬೆಂಗಳೂರು ಮೆಟ್ರೋ ದರವೇ ದುಬಾರಿ!

  • ನೀವು ಪ್ರಶ್ನೆ ಕೇಳಿ, ನಾನು ಬಾಯಿಮುಚ್ಕೊಂಡು ಇರ್ತಿನಿ ಎಂದ ಮಧು ಬಂಗಾರಪ್ಪ!

    ನೀವು ಪ್ರಶ್ನೆ ಕೇಳಿ, ನಾನು ಬಾಯಿಮುಚ್ಕೊಂಡು ಇರ್ತಿನಿ ಎಂದ ಮಧು ಬಂಗಾರಪ್ಪ!

    ದಾವಣಗೆರೆ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಲಿ, ಆಪರೇಷನ್ ಹಸ್ತದ ವಿಚಾರವಾಗಲಿ ಯಾವ ಪ್ರತಿಕ್ರಿಯೆಯನ್ನು ಕೊಡುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳಲು ಹೇಳಿದ್ದಾರೆ. ಅದಕ್ಕೆ ನಾನು ಬಾಯಿ ಮುಚ್ಚಿಕೊಂಡು ಕುಳಿತುಕೊಳ್ಳುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.

    ದಾವಣಗೆರೆಯ (Davanagere) ಹುಚ್ಚಂಗಿಪುರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ನೀವು ಪ್ರಶ್ನೆ ಕೇಳಬೇಡಿ ಬಾಯಿಮುಚ್ಚಿಕೊಂಡು ಕುಳಿತುಕೊಳ್ಳಿ ಎಂದು ನಾನು ಹೇಳುವುದಿಲ್ಲ. ನೀವು ಕೇಳಿ, ನಾನು ಮಾತ್ರ ಆ ಕುರಿತು ಪ್ರತಿಕ್ರಿಯೆ ನೀಡಲಾರೆ, ಬಾಯಿ ಮುಚ್ಚಿಕೊಂಡು ಇರುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಎ++ ಗ್ರೇಡ್ ನೀಡಲು ಲಂಚ ಆರೋಪ – ಬಂಧನ ಬೆನ್ನಲ್ಲೇ ದಾವಣಗೆರೆ ವಿವಿ ಪ್ರಾಧ್ಯಾಪಕಿ ಅಮಾನತು

    ಮುಡಾ ಪ್ರಕರಣ (Davanagere) ತನಿಖೆಯನ್ನು ಸಿಬಿಐಗೆ ನೀಡಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ವಿಚಾರವಾಗಿ, ಕೋರ್ಟ್ ತೀರ್ಪು ಕೊಟ್ಟ ಮೇಲೆ ಮುಗಿತಲ್ಲ. ಮತ್ತೆ ಇನ್ನೇನೂ ಬೇಕು? ಎಂದು ಮಾಧ್ಯಮದವರ ಪ್ರಶ್ನೆಗೆ ಮರು ಪ್ರಶ್ನೆ ಮಾಡಿದರು. ಹೈಕೋರ್ಟ್ ತೀರ್ಪು ಕೊಟ್ಟಿದೆ. ದೇಶದಲ್ಲಿ ಯಾವುದೇ ಕೋರ್ಟ್‍ಗೆ ಹೋಗಲು ಯಾರಿಗಾದರೂ ಅವಕಾಶ ಇದೆ ಎಂದು ಹೇಳಿದ್ದಾರೆ.

    ಸಿದ್ದರಾಮಯ್ಯನವರ ಮೇಲೆ ಅನಾವಶ್ಯಕವಾಗಿ ಪ್ರಕರಣ ದಾಖಲಾಗಿದೆ. ಯಾವುದೇ ಕಾರಣಕ್ಕೂ ಇದನ್ನು ಸಿಬಿಐಗೆ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: POCSO Case: ಬಂಧನ ಭೀತಿಯಿಂದ ಬಚಾವ್, ಬಿಎಸ್‌ವೈಗೆ ಜಾಮೀನು- ಕೋರ್ಟ್‌ ಹೇಳಿದ್ದೇನು?

  • ಮುಡಾ ಕೇಸ್‌ನಲ್ಲಿ ಹೈಕೋರ್ಟ್ ತೀರ್ಪುನ್ನು ನಾವು ಗೌರವಿಸುತ್ತೇವೆ: ಅಶೋಕ್

    ಮುಡಾ ಕೇಸ್‌ನಲ್ಲಿ ಹೈಕೋರ್ಟ್ ತೀರ್ಪುನ್ನು ನಾವು ಗೌರವಿಸುತ್ತೇವೆ: ಅಶೋಕ್

    ಬೆಂಗಳೂರು: ಮುಡಾ ಕೇಸ್ (MUDA Scam) ಸಿಬಿಐ(CBI) ತನಿಖೆಗೆ ಕೊಡಲು ಹೈಕೋರ್ಟ್ (High Court) ನಿರಾಕರಿಸಿದ ತೀರ್ಪನ್ನು ನಾವು ಸ್ವಾಗತ ಮಾಡುತ್ತೇವೆ. ಆದರೆ ಮುಡಾ ಅಕ್ರಮದ ವಿರುದ್ಧ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಹೇಳಿದ್ದಾರೆ.

    ಹೈಕೋರ್ಟ್ ತೀರ್ಪಿ‌ನ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು. ಈ ವೇಳೆ, ಮುಡಾ ಕೇಸ್ ತನಿಖೆ ಸಿಬಿಐಗೆ ಕೊಡಬೇಕು ಎಂಬ ಅರ್ಜಿಯನ್ನು ಹೈಕೋರ್ಟ್ ತಿರಸ್ಕಾರ ಮಾಡಿದೆ. ಈಗಾಗಲೇ ಲೋಕಾಯುಕ್ತ, ಇಡಿ ತನಿಖೆ ನಡೆಸುತ್ತಿದೆ. ಸದ್ಯ ಹೈಕೋರ್ಟ್ ಕೊಟ್ಟಿರೋ ತೀರ್ಪು ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಮುಡಾ ಹೆಸರಿನಲ್ಲಿ ಲೂಟಿ ಆಗಿರೋದು ರಾಜ್ಯದ ಖಾಜಾನೆಗೆ ಬರುತ್ತೆ ಎಂಬ ನಂಬಿಕೆ ಇದೆ. ಕಾನೂನಿನ ಮೇಲೆ ನಮಗೆ ಗೌರವ ಇದೆ. ಮುಡಾ ಪ್ರಕರಣವನ್ನ ಸಿಬಿಐಗೆ ಕೊಡಬೇಕು ಎಂದು ನಾವು ಹೋರಾಟ ಮಾಡಿದ್ವಿ. ಮತ್ತೆ ಕಾನೂನು ಪ್ರಕಾರ ಏನು ಹೋರಾಟ ಮಾಡಬೇಕೋ ಅದನ್ನ ಮುಂದುವರೆಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಇದೇ ವೇಳೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಬಗ್ಗೆ ಪ್ರತಿಕ್ರಿಯಿಸಿ, ಈ ಕೇಸ್‌ನಲ್ಲಿ ಯಡಿಯೂರಪ್ಪಗೆ ಕೋರ್ಟ್ ರಿಲೀಫ್ ಕೊಟ್ಟಿದೆ. ತೀರ್ಪು ಸಮಾಧಾನ ತಂದಿದೆ. ಮುಂದಿನ ತನಿಖೆ ಏನು ನಡೆಯಬೇಕೋ ಅದು ನಡೆಯುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು – ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ

  • MUDA Scam| ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್ – ಇಡಿಯಿಂದ 160 ಸೈಟ್‌ ಜಪ್ತಿ

    MUDA Scam| ಒಂದೇ ದಿನದಲ್ಲಿ ಒಬ್ಬನ ಹೆಸರಿಗೆ 31 ಸೈಟ್ ರಿಜಿಸ್ಟರ್ – ಇಡಿಯಿಂದ 160 ಸೈಟ್‌ ಜಪ್ತಿ

    – 50:50 ಸೈಟು ಪಡೆದ ಫಲಾನುಭವಿಗಳಿಗೆ ಬಿಗ್ ಶಾಕ್

    ಮೈಸೂರು: ಜಾರಿ ನಿರ್ದೇಶನಾಲಯ(ED) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ MUDA) 50:50 ಅನುಪಾದಲ್ಲಿ ಸೈಟು ಪಡೆದಿದ್ದ ಫಲಾನುಭವಿಗಳಿಗೆ‌ ಬಿಗ್‌ ಶಾಕ್‌ ಕೊಟ್ಟಿದೆ. ಬರೋಬ್ಬರಿ 160 ಸೈಟುಗಳ ಜಪ್ತಿ ಮಾಡಿ ಇಡಿ ಆದೇಶ ಪ್ರಕಟಿಸಿದೆ.

    ಅಕ್ರಮ ಹಣ ವರ್ಗಾವಣೆ ಕಾಯ್ದೆ (PMLA) ಅಡಿಯಲ್ಲಿ ಎಲ್ಲಾ ಸೈಟುಗಳ ಜಪ್ತಿಗೆ ಇಡಿ ಅಧಿಕೃತ ಆದೇಶ ಪ್ರಕಟಿಸಿದ್ದು, ಈ ಆದೇಶ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

    50:50 ಅನುಪಾತದಲ್ಲಿ ಹಂಚಿಕೆಯಾಗಿರುವ ಸೈಟುಗಳ ವಹಿವಾಟಿನಲ್ಲಿ ಬೇನಾಮಿ ಮತ್ತು ಅಕ್ರಮ ಹಣದ ವ್ಯವಹಾರ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿಯಲ್ಲಿ ಇಡಿ ಎಲ್ಲಾ ಸೈಟುಗಳ ಜಪ್ತಿಗೆ ಆದೇಶ ಹೊರಡಿಸಿದೆ. ಆದೇಶ ಪತ್ರವನ್ನು ಸಬ್ ರಿಜಿಸ್ಟ್ರಾರ್‌ಗೆ ಕಳುಹಿಸಿದೆ. ಇದನ್ನೂ ಓದಿ: MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

    ಸರ್ಕಾರದ ಮಾರ್ಗಸೂಚಿ ಪ್ರಕಾರ ಆ ಸೈಟುಗಳ ಮೌಲ್ಯ 81 ಕೋಟಿ ರೂ. ಆಗಿದೆ. ಆದರೆ ಮಾರುಕಟ್ಟೆ ಮೌಲ್ಯ 300 ಕೋಟಿ ರೂ.ಗಿಂತಲೂ ಅಧಿಕ ಇದೆ ಎನ್ನಲಾಗಿದೆ.

    ಯಾರ‍್ಯಾರ ಸೈಟುಗಳು ಜಪ್ತಿ?
    – ರವಿ ಅವರ 31 ಸೈಟ್, ಅಬ್ದುಲ್ ವಾಹಿದ್ ಹೆಸರಿನಲ್ಲಿದ್ದ 41 ಸೈಟ್, ಕ್ಯಾಥಡ್ರಾಲ್ ಸೊಸೈಟಿಯ 40 ಸೈಟ್, ಇತರರಿಗೆ ಸೇರಿದ 48 ಸೈಟ್ ಗಳನ್ನು ಜಪ್ತಿ ಮಾಡಿದೆ. ಇದನ್ನೂ ಓದಿ: MUDA ಅಕ್ರಮದಲ್ಲಿ ʼಕೋಕನಟ್‌ʼ ಡೀಲ್‌ – 50, 100 ಕೋಕನಟ್‌ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್‌

    ಒಂದೇ ದಿನದಲ್ಲಿ 31 ಸೈಟ್:
    ಮುಡಾ ಬ್ರಹ್ಮಾಂಡ್‌ ಭ್ರಷ್ಟಾಚಾರ ಕೇಸ್‌ ಬೆನ್ನು ಹತ್ತಿರುವ ಇಡಿ ಇಂಚಿಂಚೂ ಮಾಹಿತಿಯನ್ನು ಬಟಾಬಯಲು ಮಾಡುತ್ತಿದೆ. ಮುಡಾದಲ್ಲಿ ಒಂದೇ ದಿನದಲ್ಲಿ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 31 ಸೈಟು ರಿಜಿಸ್ಟರ್ ಮಾಡಿರುವುದು ಬೆಳಕಿಗೆ ಬಂದಿದೆ.

    2023ರ ಅಕ್ಟೋಬರ್‌ 11ರಂದು ರವಿ ಎಂಬುವವರ ಹೆಸರಿಗೆ 31 ಸೈಟುಗಳು ನೋಂದಣಿ ಆಗಿರುವುದು ಇಡಿ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿದೆ. ಮೈಸೂರು ನಗರದ ಹೃದಯ ಭಾಗ ಕುವೆಂಪುನಗರದಲ್ಲಿ 12 ಸೈಟ್, ದಟ್ಟಗಳ್ಳಿ ಮತ್ತು ವಿಜಯನಗರದಲ್ಲಿ 19 ಸೈಟುಗಳು ನೋಂದಣಿ ಆಗಿವೆ. ಇದಲ್ಲದೇ ಅಬ್ದುಲ್ ವಾಹಿದ್ ಹೆಸರಿನಲ್ಲಿ 2023ರ ಮಾರ್ಚ್‌ 8 ರಂದು 25 ಸೈಟ್‌ ನೋಂದಣಿಯಾಗಿದ್ದರೆ 2023ರ ಅ.1ರಂದು 3 ಸೈಟ್‌ ನೋಂದಣಿ ಆಗಿದೆ.

     

  • ಮುಡಾ 50:50 ಸೈಟು ಹಗರಣ – ಜೆಡಿಎಸ್‌ ಶಾಸಕ ಜಿಟಿಡಿ, ಪುತ್ರ ಹರೀಶ್‌ ಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮುಡಾ 50:50 ಸೈಟು ಹಗರಣ – ಜೆಡಿಎಸ್‌ ಶಾಸಕ ಜಿಟಿಡಿ, ಪುತ್ರ ಹರೀಶ್‌ ಗೌಡ ವಿರುದ್ಧ ಲೋಕಾಯುಕ್ತಕ್ಕೆ ದೂರು

    ಮೈಸೂರು: ಮುಡಾದ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಇಬ್ಬರು ಜೆಡಿಎಸ್‌ ಶಾಸಕರ ವಿರುದ್ಧ ದೂರು ನೀಡಿದ್ದಾರೆ.

    ಇಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ತೆರಳಿ ಜೆಡಿಎಸ್‌ ಶಾಸಕರಾದ ಜಿ.ಟಿ ದೇವೇಗೌಡ (GT Devegowda) ಹಾಗೂ ಪುತ್ರ ಜಿ.ಡಿ ಹರೀಶ್‌ ಗೌಡ (Harish Gowda) ವಿರುದ್ಧ ಲೋಕಾಯುಕ್ತಕ್ಕೆ (Lokayukta) ದೂರು ಸಲ್ಲಸಿದ್ದಾರೆ. ಇದನ್ನೂ ಓದಿ: MUDA Scam | ಜೆಡಿಎಸ್‌ ಶಾಸಕ ಜಿಟಿಡಿ ವಿರುದ್ಧವೂ ಲೋಕಾಯುಕ್ತಕ್ಕೆ ದೂರು – 2 ಸೈಟು ಕಿಕ್‌ಬ್ಯಾಕ್‌ ಆರೋಪ

    ಮುಡಾ ಸೈಟು ಹಂಚಿಕೆಯಲ್ಲಿ ಶಾಸಕ ಜಿ.ಟಿ ದೇವೇಗೌಡರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಸರ್ವೇ ನಂ.81/2ರಲ್ಲಿ 2.22 ಎಕರೆ ಜಮೀನಿಗೆ ಪರಿಹಾರ ನೀಡಿಲ್ಲವೆಂದು 19 ನಿವೇಶನವನ್ನು ಜಿಟಿಡಿ ಕುಟುಂಬ ಪಡೆದುಕೊಂಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಭೂ ಮಾಲೀಕನ ಮನೆಗೆ ತೆರಳಿ ಮಾತುಕತೆ ನಡೆಸಿರುವ ಫೋಟೋ ಸಹ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

    ದೇವನೂರು ಗ್ರಾಮದ ಶಂಕರಯ್ಯ ಕುಟುಂಬದ ಜೊತೆ ಶಾಸಕರಾದ ಜಿ.ಟಿ ದೇವೇಗೌಡ ಹಾಗೂ ಪುತ್ರ ಜಿ.ಡಿ ಹರೀಶ್‌ ಗೌಡ ವ್ಯವಹಾರ ನಡೆಸಿದ್ದಾರೆ ಹಾಗೂ ಕುಟುಂಬಸ್ಥರನ್ನು ಭೇಟಿಯಾಗಿ ಚೆಕ್‌ ನೀಡುತ್ತಿದ್ದಾರೆ ಎನ್ನಲಾದ ಫೋಟೋಗಳ ದಾಖಲೆಯೊಂದಿಗೆ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

    ಜಿ.ಟಿ ದೇವೇಗೌಡ ಅವರು ತಮ್ಮ ಸಹೋದರಿ ಮಗ ಮಹೇಂದ್ರ ಮೂಲಕ ಬೇನಾಮಿ ಆಸ್ತಿ ಖರೀದಿಸಿದ್ದಾರೆ. ಅಂದಿನ ತಹಸಿಲ್ದಾರ್ ರಕ್ಷಿತ್ ಅವರ ಮೇಲೆ ಪ್ರಭಾವ ಬೀರಿ ಮುಡಾ ಆಸ್ತಿಗೆ ಪರಿಹಾರ ಪಡೆದಿದ್ದಾರೆ. ದೇವನೂರು 2ನೇ ಹಂತದ ಸರ್ವೆ ನಂ. 81/2ರಲ್ಲಿ 20ಕ್ಕೂ ಹೆಚ್ಚು ಮನೆ ಇದ್ದರೂ ಪರಿಹಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಜಿಟಿಡಿ ಅವರ ಪ್ರಭಾವ, ಬೇನಾಮಿ ಆಸ್ತಿ ಹೊಂದಿರುವುದು ಹಾಗೂ ಅಧಿಕಾರಿಯ ತಪ್ಪು ಎದ್ದು ಕಾಣುತ್ತಿದೆ. ಇದರ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಎಂಬುದು ನನ್ನ ಮನವಿ ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವೊ ಮಾಡಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಶಾಸಕ ಜಿ.ಟಿ ದೇವೇಗೌಡ ಅವರ ವಿರುದ್ಧ ಸ್ನೇಹಮಯಿ ಕೃಷ್ಣ ಸೈಟು ಕಿಕ್‌ ಬ್ಯಾಕ್‌ ಪಡೆದಿರುವ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದನ್ನೂ ಓದಿ: MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

  • MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

    MUDA Scam| ನನ್ನ, ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

    ಬೆಂಗಳೂರು: ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಮುಖ್ಯಮಂತ್ರಿಗಳ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ (Byrathi Suresh) ಹೇಳಿದರು.

    ಜಾರಿ ನಿರ್ದೇಶನಾಲಯದ (ED) ನೋಟಿಸ್‌ಗೆ ಹೈಕೋರ್ಟ್‌ (High Court) ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ರೀತಿ ಪಾತ್ರ ಇಲ್ಲ ಎಂದು ಒಪ್ಪಿಕೊಂಡು ಕೋರ್ಟ್‌ ತಡೆ ನೀಡಿದೆ. ವಿಚಾರಣೆ ಈಗ ಮುಂದಕ್ಕೆ ಹೋಗಿದ್ದು ಫೆ.10 ರ ನಂತರ ನೋಡೋಣ ಎಂದರು.

     

    ನಾನು ಮತ್ತು ಕಾಂಗ್ರೆಸ್ ಪಕ್ಷ ನ್ಯಾಯಾಂಗ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡಿದ್ದೇವೆ. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ. ಯಾಕೆ ನೋಟಿಸ್ ನೀಡಿದ್ದಾರೆ ಎಂಬುದಕ್ಕೆ ಇಡಿ ಮತ್ತು ಸಿಬಿಐ ಅವರನ್ನೇ ಕೇಳಬೇಕು ಎಂದು ಹೇಳಿದರು. ಇದನ್ನೂ ಓದಿ: Kolar| ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಾಲನೆ – ವೀಡಿಯೋ ವೈರಲ್

    ನನಗೆ ನೋಟಿಸ್ ಬಂದಾಗ ಆಶ್ಚರ್ಯ ಆಯ್ತು. ಹಗರಣ ನಡೆದಾಗ ನಾನು ಮಂತ್ರಿ ಆಗಿರಲಿಲ್ಲ. ಸೈಟನ್ನು ಪಡೆದಿಲ್ಲ, ಕೊಟ್ಟಿಲ್ಲ. ಸೈಟ್ ಹಂಚಿಕೆ ಗೊಂದಲ ಆದ ಮೇಲೆ ಸೈಟ್ ವಾಪಸ್ ಕೂಡ ಕೊಟ್ಟಿದ್ದಾರೆ. ಇದೆಲ್ಲ ನ್ಯಾಯಮೂರ್ತಿಗಳಿಗೆ ಮನದಟ್ಟಾಗಿದೆ ಹಾಗಾಗಿ ಸ್ಟೇ ಕೊಟ್ಟಿದ್ದಾರೆ. ನನಗೆ ಕೊಟ್ಟಿರುವುದು ಒಂದೇ ನೋಟಿಸ್, ಸಿಎಂ ಪತ್ನಿಗೆ ಎರಡನೇ ನೋಟಿಸ್ ಕೊಟ್ಟಿದ್ದಾರಾ ಎಂದು ನನಗೆ ಗೊತ್ತಿಲ್ಲ ಎಂದರು.

     

  • ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

    ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

    ಬೆಂಗಳೂರು: ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದರು.ಇದನ್ನೂ ಓದಿ: ಬೆಂಗ್ಳೂರಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಶೋರೂಂ – 70 ಬೈಕ್‌ಗಳು ಭಸ್ಮ

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ನೋಟಿಸ್ ವಿಚಾರವಾಗಿ ಇದೆಲ್ಲಾ ರಾಜಕೀಯ ಪ್ರೇರಿತ. ನನ್ನ ಕೇಸ್‌ನಲ್ಲಿಯೂ ಇದೇ ರೀತಿ ಆಗಿತ್ತು. ಎರಡು ಘಟನೆಗಳು ಒಂದೇ ಸಲ ನಡೆಯಲ್ಲ. ಈಗಾಗಲೇ ಲೋಕಾಯುಕ್ತದಲ್ಲಿ ತನಿಖೆ ನಡೀತಿದೆ. ಈ ವೇಳೆ ಬೇರೆ ಸಂಸ್ಥೆಯವರು ತನಿಖೆ ಮಾಡೋದಕ್ಕೆ ಆಗಲ್ಲ ಎಂದು ಅನೇಕ ತೀರ್ಪಿನಲ್ಲಿದೆ. ಅದೇನು ಎಂದು ಮಾಹಿತಿ ತಿಳಿದುಕೊಂಡು ಮಾತನಾಡುತ್ತೇನೆ. ನನ್ನ ಕೇಸ್‌ನಲ್ಲಿ ಸಿಬಿಐ ಮತ್ತು ಇಡಿಯವರು ತನಿಖೆ ಮಾಡುತ್ತಿದ್ದರು. ಈ ರೀತಿ ಮಾಡೋದಕ್ಕೆ ಬರಲ್ಲ ಎಂದು ಕೆಲವು ಜಡ್ಜ್ಮೆಂಟ್ ಇದೆ. ನಮ್ಮ ಸ್ಟ್ಯಾಂಡ್ ಕ್ಲಿಯರ್ ಇದೆ. ಇದೆಲ್ಲ ರಾಜಕೀಯ ಪ್ರೇರಿತ ಎಂದರು.

    ಐದು ವರ್ಷ ಸಿದ್ದರಾಮಯ್ಯ ಸಿಎಂ ಎಂಬ ಬಗ್ಗೆ ನಾಯಕರ ಹೇಳಿಕೆ ವಿಚಾರವಾಗಿ, ಅವರು ಯಾರು ಏನೂ ಮಾತಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲಾ ಸಿಎಂ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಯಾವ ಐದು ವರ್ಷವೂ ಇಲ್ಲ ಎಂದಿದ್ದಾರೆ.ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

     

  • MUDA Scam| ಸಿಎಂಗೆ ಸಂಕಷ್ಟ – ವಿಚಾರಣೆಗೆ ಹಾಜರಾಗುವಂತೆ ಪತ್ನಿಗೆ ಇಡಿ ಸಮನ್ಸ್‌

    MUDA Scam| ಸಿಎಂಗೆ ಸಂಕಷ್ಟ – ವಿಚಾರಣೆಗೆ ಹಾಜರಾಗುವಂತೆ ಪತ್ನಿಗೆ ಇಡಿ ಸಮನ್ಸ್‌

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್‌ ಹಗರಣ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಈಗ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.

    ಜ. 23 ರಂದು ಇಡಿ ನೋಟಿಸ್‌ ಜಾರಿ ಮಾಡಿದ್ದ ಇಡಿ ಜ.27 ರಂದು (ಇಂದು) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇಂದು ಬೆಳಗ್ಗೆ ಹೈಕೋರ್ಟ್‌ನಲ್ಲಿ ಪಾರ್ವತಿ (Parvathi) ಮತ್ತು ಬೈರತಿ ಸುರೇಶ್‌ (Byrathi Suresh) ಅವರು ಇಡಿ ನೋಟಿಸ್‌ ನೀಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆಗೆ ಬರಲಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಬಾಮೈದನಿಗೆ ಇಡಿ ವಿಚಾರಣೆ – ಸತತ 4 ಗಂಟೆ ಡ್ರಿಲ್

    ಗುರುವಾರ (ಜ.23) ಬೆಳಗ್ಗೆ ಸಿಎಂ ಕುಟುಂಬಕ್ಕೆ ಲೋಕಾಯುಕ್ತದಿಂದ ಕ್ಲೀನ್ ಚಿಟ್ ಎಂದು ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಕೇಳಿದ ಪ್ರಶ್ನೆಗೆ ನನಗೇನೂ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ಗುರುವಾರ ಸಂಜೆಯೇ ಸಿಎಂ ಪತ್ನಿ ಪಾರ್ವತಿ ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇದನ್ನೂ ಓದಿ: MUDA ಅಕ್ರಮದಲ್ಲಿ ʼಕೋಕನಟ್‌ʼ ಡೀಲ್‌ – 50, 100 ಕೋಕನಟ್‌ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್‌

    ಈಗಾಗಲೇ ಸಿಎಂ ಪತ್ನಿ ಅವರು ತನಗೆ ನೀಡಿದ 14 ಸೈಟ್‌ಗಳು ಮುಡಾಗೆ ಮರಳಿಸಿದ್ದಾರೆ. ಲೋಕಾಯುಕ್ತ, ಇಡಿಯಲ್ಲಿ ಎಫ್‌ಐಆರ್‌ ಬೆನ್ನಲ್ಲೇ ಕಳೆದ ಸೆ.30 ರಂದು 14 ನಿವೇಶನ ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಪಾರ್ವತಿ ಅವರು ಪತ್ರ ಬರೆದಿದ್ದರು.

  • ಐದು ವರ್ಷವೂ ಸಿದ್ದರಾಮಯ್ಯ ಸಿಎಂ: ಜಮೀರ್

    ಐದು ವರ್ಷವೂ ಸಿದ್ದರಾಮಯ್ಯ ಸಿಎಂ: ಜಮೀರ್

    ಕೊಪ್ಪಳ: ಐದು ವರ್ಷವೂ ಸಿದ್ದರಾಮಯ್ಯ (Siddaramaiah) ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

    ಕೊಪ್ಪಳದಲ್ಲಿ (Koppal) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಸಿಎಂ ಖುರ್ಚಿ ಖಾಲಿ ಇಲ್ಲ. ಈ ಬಗ್ಗೆ ಚರ್ಚೆಯೂ ಅಗತ್ಯ ಇಲ್ಲ. ಅದರಂತೆ ಕೆಪಿಸಿಸಿ ಅಧ್ಯಕ್ಷರ ಖುರ್ಚಿಯೂ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷ ಹುದ್ದೆ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿರಬಹುದು. ಅದು ಅವರ ವೈಯಕ್ತಿಕ ಅಭಿಪ್ರಾಯ. ಆದರೆ ಕೆಪಿಸಿಸಿ ಅಧ್ಯಕ್ಷರ ಹುದ್ದೆಯೂ ಖಾಲಿ ಇಲ್ಲ ಎಂದರು. ಇದನ್ನೂ ಓದಿ: ಕಳೆದ 1 ತಿಂಗಳಿಂದ ಸಿಕ್ತಿಲ್ಲ ಹೊಸ ಡಿಎಲ್‌, ಆರ್‌ಸಿ‌ ಸ್ಮಾರ್ಟ್ ಕಾರ್ಡ್; 15 ದಿನದಲ್ಲಿ ಸಮಸ್ಯೆ ಬಗೆಹರಿಯುತ್ತೆ: ರಾಮಲಿಂಗಾರೆಡ್ಡಿ

    ಮುಡಾ ಹಗರಣದಲ್ಲಿ (MUDA Scam) ಸಿದ್ದರಾಮಯ್ಯ ಪಾತ್ರ ಸ್ವಲ್ಪವೂ ಇಲ್ಲ. ಸಿದ್ದರಾಮಯ್ಯ ಅವರನ್ನು ಅಲುಗಾಡಿಸಿದರೆ ಕಾಂಗ್ರೆಸ್‌ಗೆ ತೊಂದರೆ ಆಗುತ್ತದೆ ಎಂದು ಬಿಜೆಪಿಗರು ಕಿರಿಕಿರಿ ಮಾಡುತ್ತಿದ್ದಾರೆ. ಇದೆಲ್ಲ ನಡೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: Kolar| ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ

    ಶಾಸಕ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಶ್ರೀರಾಮುಲು ನಡುವಿನ ಜಗಳ ಬಿಜೆಪಿ ಆಂತರಿಕ ವಿಚಾರ. ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಯಾರೂ ಆಹ್ವಾನಿಸಿಲ್ಲ. ಅಷ್ಟಕ್ಕೂ ಅವರು ಬರುವುದೂ ಇಲ್ಲ. ಇದೆಲ್ಲ ಅವರಿಬ್ಬರ ನಾಟಕ. ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳಲು, ಕಾಂಗ್ರೆಸ್‌ನಿಂದ ಆಹ್ವಾನ ಇದೆ ಎಂದು ಶ್ರೀರಾಮುಲು ಹೇಳಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಇನ್‌ಸ್ಟಾಗ್ರಾಂ ಪ್ರೇಯಸಿ ಆತ್ಮಹತ್ಯೆ ಕೇಸ್ – ಪ್ರಿಯಕರ ಅರೆಸ್ಟ್