Tag: MUDA Scam

  • ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಪೊಲಿಟಿಕಲ್ ಸೇಫ್ – ಆದ್ರೆ ಮುಂದೇನು?

    ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಪೊಲಿಟಿಕಲ್ ಸೇಫ್ – ಆದ್ರೆ ಮುಂದೇನು?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸದ್ಯಕ್ಕೆ ರಾಜಕೀಯವಾಗಿ ಸೇಫ್. ಆದ್ರೆ ಮುಂದೆನು? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಸದ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ (Congress High Command) ಸಿಎಂ ಸಿದ್ದರಾಮಯ್ಯ ಪರ ನಿಂತಿರುವ ಬಗ್ಗೆ ಹಲವು ರಾಜಕೀಯ ಲೆಕ್ಕಚಾರಗಳು ಇವೆ ಎನ್ನಲಾಗಿದೆ.

    ಕುರುಬ, ಹಿಂದುಳಿದ ಮತ ಬ್ಯಾಂಕ್ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ (Congress) ಕಡೇ ತನಕ ಸಿದ್ದರಾಮಯ್ಯ ಪರ ನಿಲ್ಲಲು ಸಂದೇಶ ರವಾನಿಸಿದೆ. ಕೋರ್ಟ್ ಮುಂದೆ ಕಾನೂನು ಹೋರಾಟ ಕ್ಲಿಯರ್ ಆದ ಬಳಿಕವೇ ಬೇರೆ ತೀರ್ಮಾನ ಮಾಡೋಣ ಎಂಬುದು ಎಐಸಿಸಿ ನಾಯಕರ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂಬುದು ಮೂಲಗಳ ಮಾಹಿತಿ. ಇದನ್ನೂ ಓದಿ: TB Dam | ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ – ತಾಂತ್ರಿಕ ತಂಡಕ್ಕೆ 2 ಲಕ್ಷ ಬಹುಮಾನ

    ರಾಜಕೀಯ ಹೋರಾಟದಲ್ಲಿ ಹಿಂದೆ ಸರಿಯಬಾರದು, ಸಿದ್ದರಾಮಯ್ಯ ಕೈ ಬಿಡಬಾರದು, ಹಿಂದುಳಿದ ವರ್ಗದ ನಾಯಕ, ಭವಿಷ್ಯದ ದೃಷ್ಟಿಯಿಂದ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕಡೇ ಹಂತದ ತನಕ ಕಾನೂನು ಹೋರಾಟ ನಡೆಯಲಿ… ಅಲ್ಲಿ ತನಕ ಸಿದ್ದರಾಮಯ್ಯ ಜೊತೆ ಇರಲೇಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಸಂದೇಶ ರವಾನಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಪಾಕ್‌, ಬಾಂಗ್ಲಾ, ಅಫ್ಘಾನಿಸ್ತಾನದ 188 ಹಿಂದೂ ನಿರಾಶ್ರಿತರಿಗೆ ಪೌರತ್ವ ಪ್ರಮಾಣಪತ್ರ ನೀಡಿದ ಅಮಿತ್‌ ಶಾ

    ರಾಜಕೀಯ ಕಾರಣಗಳಿಗಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ಕೊಟ್ಟಿರುವುದು ಸ್ಪಷ್ಟ. ಪಕ್ಷ, ಸರ್ಕಾರ ಎರಡನ್ನೂ ಇಕ್ಕಟಿಗೆ ಸಿಲುಕಿಸುವ ವಿರೋಧಿಗಳ ಯತ್ನಕ್ಕೆ ಜಯ ಸಿಗಬಾರದೆಂಬ ತಂತ್ರಗಾರಿಕೆ ಕಾಂಗ್ರೆಸ್ ಹೈಕಮಾಂಡ್‌ನದ್ದು. ಹಾಗಾಗಿ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್. ರಾಜಕೀಯ ಬಲ ಕೊಟ್ಟಿರುವ ಹೈಕಮಾಂಡ್, ಮುಂದೆಯೂ ಹೀಗೆ ಇರುತ್ತಾ? ಎಂಬುದನ್ನ ಕಾದುನೋಡಬೇಕಿದೆ.  ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ & ಹತ್ಯೆ ಕೇಸ್‌; ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ 

  • ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್

    ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಅನುಮತಿ; ಸರ್ಕಾರ ಸ್ವಲ್ಪಮಟ್ಟಿಗೆ ಶೇಕ್ ಆಗಿರೋದು ನಿಜ – ಪರಮೇಶ್ವರ್

    ಬೆಂಗಳೂರು: ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಆದರೆ ಇದನ್ನು ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G.Parameshwar) ತಿಳಿಸಿದ್ದಾರೆ.

    ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ – ಸಿದ್ದರಾಮಯ್ಯ ಎದುರಿಸಲಿರೋ ಸಂಕಷ್ಟಗಳೇನು?

    ಸರ್ಕಾರ ಸ್ವಲ್ಪ ಮಟ್ಟಿಗೆ ಶೇಕ್ ಆಗಿರೋದು ಹೌದು, ಇಲ್ಲ ಅಂತ ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ. ಆದರೆ ಇದನ್ನೆಲ್ಲ ನಾವು ಸರಿಪಡಿಸಿಕೊಂಡು ಆಡಳಿತ ಮುಂದುವರಿಸುತ್ತೇವೆ. ಸಂಪುಟ ಸಭೆಯಲ್ಲೂ ನಾವ್ಯಾರೂ ಬಿಜೆಪಿ (BJP) ಹುನ್ನಾರಕ್ಕೆ ಬಲಿಯಾಗೋದು ಬೇಡ, ಕಾನೂನು ಸಮರ ಮುಂದುವರಿಸಿಕೊಂಡು ಆಡಳಿತ ನಡೆಸುವ ತಿರ್ಮಾನ ಮಾಡಿದ್ದೇವೆ. ಆದರೆ ಬಿಜೆಪಿ ಹೇಗಾದರೂ ಮಾಡಿ ಈ ಸರ್ಕಾರ ಬೀಳಿಸುವ ಸ್ಕೀಂ ಹಾಕಿಕೊಂಡಿದೆ. ಸಿದ್ದರಾಮಯ್ಯ ಮೂಲಕ ಸರ್ಕಾರ ಅಸ್ಥಿರಗೊಳಿಸುವ ಉದ್ದೇಶವನ್ನು ಹೊಂದಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ನನ್ನ ವಿರುದ್ಧದ ಕೇಸ್ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಡ: ಕುಮಾರಸ್ವಾಮಿ

    ಕಾನೂನು ಸಮರಕ್ಕೆ ಅಭಿಷೇಕ್ ಮನುಸಿಂಘ್ವಿ ಹಾಗೂ ಕಪಿಲ್ ಸಿಬಲ್:
    ರಾಜ್ಯಪಾಲರ ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟಕ್ಕಿಳಿದಿದ್ದಾರೆ. ನಾಳೆ (ಆ.19) ಹೈಕೋರ್ಟ್‌ನಲ್ಲಿ ಪ್ರಾಸಿಕ್ಯೂಷನ್ ವಿರುದ್ಧ ದಾವೆ ಹೂಡಲಾಗುತ್ತಿದೆ. ಸಿಎಂ ಪರ ಕಾನೂನು ಹೋರಾಟಕ್ಕೆ ದೆಹಲಿಯಿಂದ ಹಿರಿಯ ವಕೀಲರೂ, ಕಾಂಗ್ರೆಸ್ ನಾಯಕರೂ ಆದ ಅಭಿಷೇಕ್ ಮುನು ಸಿಂಘ್ವಿ ಹಾಗೂ ಕಪಿಲ್‌ ಸಿಬಲ್ ರಾಜ್ಯಕ್ಕೆ ಬರ್ತಿದ್ದಾರೆ. ಈ ಸಂಬಂಧ ಮಾಹಿತಿ ಕೊಟ್ಟ ಗೃಹ ಸಚಿವ ಡಾ.ಜಿ ಪರಮೇಶ್ವರ್, ಕಾನೂನು ಹೋರಾಟಕ್ಕೆ ಅಭಿಷೇಕ್ ಮನು ಸಿಂಘ್ವಿ, ಕಪಿಲ್ ಸಿಬಲ್ ನಾಳೆ ಬರ್ತಾರೆ. ಅವರು ನಮ್ಮ ಪಕ್ಷದ ಹಿರಿಯರು, ಕಾನೂನು ಹೋರಾಟಗಾರರು. ಇನ್ನೂ ಅವಶ್ಯಕತೆ ಬಿದ್ರೆ, ಸೀನಿಯರ್ ಕೌನ್ಸಿಲ್‌ರನ್ನೂ ಕರೆತರ್ತೀವಿ. ಅವರ ಮೂಲಕ ವಾದ ಮಾಡಿಸುತ್ತೇವೆ ಅಂದ್ರು.

    ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು:
    ಇನ್ನು ಕಾಂಗ್ರೆಸ್ ಪ್ರತಿಭಟನೆ ಬಗ್ಗೆ ಮಾತಾಡಿ, ನಾವು ಕಾನೂನು ಹೋರಾಟ ಹಾಗೂ ರಾಜಕೀಯ ಹೋರಾಟ ಮಾಡಲು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬಿಜೆಪಿಯವರೂ ಹೋರಾಟ ಮಾಡಲಿ, ಅದು ಅವರ ಹಕ್ಕು ಹಾಗೆಯೇ ನಾವೂ ಹೋರಾಟ ಮಾಡ್ತೀವಿ, ಇದು ನಮ್ಮ ಹಕ್ಕು. ಜಿಲ್ಲೆ, ತಾಲ್ಲೂಕುಗಳಲ್ಲಿ ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಇಳಿಯುವ ಅನಿವಾರ್ಯತೆ ಬಂದಿದೆ. ಅವರಿಗೆ ರಾಜಕೀಯ ಉತ್ತರ ಕೊಡಲು ರಾಜಕೀಯ ಹೋರಾಟವೇ ಮಾಡಬೇಕು. ನಾಳೆ (ಆ.19) ರಾಜ್ಯಾದ್ಯಂತ ಪಕ್ಷದಿಂದ ಶಾಂತಿಯುತ ಪ್ರತಿಭಟನೆಗೆ ಅಧ್ಯಕ್ಷರು ಕರೆ ಕೊಟ್ಟಿದ್ದಾರೆ.

    ಹೆಚ್ಡಿಕೆ/ಜೊಲ್ಲೆ/ನಿರಾಣಿ/ರೆಡ್ಡಿ ಪ್ರಕರಣಗಳಲ್ಲಿ ಕಾನೂನು ಕ್ರಮ:
    ರಾಜ್ಯಪಾಲರ ತೀರ್ಮಾನವೂ ರಾಜಕೀಯದ್ದು, ಸಚಿವ ಸಂಪುಟ ತೀರ್ಮಾನವನ್ನೇ ಅವರು ತಿರಸ್ಕರಿಸಿದ್ದಾರೆ. ಉದ್ದೇಶಪೂರ್ವಕವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಹೆಚ್‌ಡಿಕೆ, ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ಬಾಕಿ ಉಳಿಸಿಕೊಂಡಿರೋದು ಕಾಂಗ್ರೆಸ್‌ಗೆ ಕೆರಳಿಸಿದೆ. ಇದೀಗ ಈ ನಾಲ್ವರ ವಿರುದ್ಧವೂ ಲೋಕಾಯುಕ್ತದಲ್ಲಿ ಕಾನೂನು ಪ್ರಕ್ರಿಯೆ ಚುರುಕುಗೊಳಿಸುವ ಸುಳಿವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೊಟ್ಟಿದ್ದಾರೆ.

    ಮುರುಗೇಶ್ ನಿರಾಣಿ, ಜೊಲ್ಲೆ, ರೆಡ್ಡಿ, ಹೆಚ್ಡಿಕೆ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಡದ ಬಗ್ಗೆ ನಾವು ಇಲ್ಲಿಯವರೆಗೆ ತಲೆಕೆಡಿಸಿಕೊಂಡಿರಲಿಲ್ಲ. ನಾವು ದ್ವೇಷದ ರಾಜಕಾರಣ ಮಾಡೋದು ಬೇಡ ಅಂತ ಸುಮ್ಮನಿದ್ದೆವು. ಈಗ ನಾವು ಕಾನೂನು ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನು ಮಾಡ್ತೇವೆ. ರಾಜ್ಯಪಾಲರು ಈ ನಾಲ್ವರಿಗೆ ಒಂದು ನ್ಯಾಯ ಸಿದ್ದರಾಮಯ್ಯನವರಿಗೆ ಒಂದು ನ್ಯಾಯ ಕೊಡೋ ಮೂಲಕ ಪಕ್ಷಪಾತ ಮಾಡಿದ್ದಾರೆ. ಕಾನೂನು‌ ಅವಕಾಶ ಬಳಸಿಕೊಂಡು ಮುಂದುವರೆಯುತ್ತೇವೆ ಅಂದ್ರು.

    ಇನ್ನು, ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ತಡೆಯಾಜ್ಞೆ ತೆರವು ಮಾಡುವ ವಿಚಾರ ಬಗ್ಗೆ ಮಾತಾಡಿದ ಪರಮೇಶ್ವರ್, ಕೋರ್ಟ್ ಒಂದು ದಿನಾಂಕ ಕೊಟ್ಟಿದೆ. ಆ ದಿನಾಂಕದಂದು ನಮ್ಮ ಎಜಿ ಹಾಗೂ ಹಿರಿಯ ವಕೀಲರು ಕೋರ್ಟ್ ಗೆ ಹೋಗ್ತಾರೆ. ಬಿಎಸ್ವೈ ವಿರುದ್ಧ ಇರುವ ತಡೆಯಾಜ್ಞೆ ತೆರವು ಮಾಡಿಸುವ ಪ್ರಯತ್ನ ಮಾಡ್ತಾರೆ ಅಂದ್ರು‌.

    ಇದನ್ನೂ ಓದಿ: ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎ.ಮಂಜು

    ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆಯ ಸೆಕ್ಷನ್ 17ಎ ಅಡಿ ಸಿಎಂಗೆ ಯಾರು, ಸಚಿವರಿಗೆ ಯಾರು ಅನುಮತಿ ಕೇಳಬೇಕು ಅಂತಾ ಕೇಂದ್ರದ ಮಾರ್ಗಸೂಚಿ ಇದೆ. ಸಿಎಂಗೆ ಡಿಜಿಪಿ ತನಿಖೆಗೆ ಅನುಮತಿ ಕೇಳಬೇಕು. ಇನ್ನೊಂದು ಕಡೆ ದಾಖಲೆ ಇಲ್ಲದೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಹಲವು ತೀರ್ಪುಗಳನ್ನು ಪ್ರಸ್ತಾಪ ಮಾಡಿ ರಾಜ್ಯಪಾಲರಿಗೆ ಸ್ಪಷ್ಟೀಕರಣ ಕಳಿಸಿದ್ದೇವೆ. ರಾಜ್ಯಪಾಲರು ಇದ್ಯಾವುದನ್ನೂ ಗಣನೆಗೆ ತೆಗೆದುಕೊಂಡಿಲ್ಲ. ಆಡೋ ಮಕ್ಕಳಿಗೂ ಗೊತ್ತಾಗಿದೆ, ರಾಜ್ಯಪಾಲರು ಉದ್ದೇಶ ಪೂರ್ವಕವಾಗಿ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ಅಸಾಂವಿಧಾನಿಕ ವಿಚಾರ. ನಾವು ಪ್ರಾಸಿಕ್ಯೂಷನ್ ವಿರುದ್ಧ ಕಾನೂನು ಹೋರಾಟ ಮಾಡ್ತೇವೆ. ಆದರೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜೀನಾಮೆ ಕೊಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಡೀ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಮುಡಾ ತನಿಖೆಗೆ ನ್ಯಾಯಾಲಯ ಯಾರಿಗೆ ರೆಫರ್ ಮಾಡುತ್ತೋ ಗೊತ್ತಿಲ್ಲ. ಈ ಸಂದರ್ಭದಲ್ಲಿ ಅವರಿಗೆ ಇರುವ ಆಯ್ಕೆ ಲೋಕಾಯುಕ್ತ ಮಾತ್ರ. ಲೋಕಾಯುಕ್ತದಲ್ಲೇ ಅರ್ಜಿದಾರರು ದೂರು ಕೊಟ್ಟಿರೋದ್ರಿಂದ ತನಿಖೆಯನ್ನೂ ಲೋಕಾಯುಕ್ತಕ್ಕೇ ಕೊಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

  • ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎ.ಮಂಜು

    ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಎ.ಮಂಜು

    ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಶಾಸಕ, ಮಾಜಿ ಸಚಿವ ಎ.ಮಂಜು (A Manju) ಆಗ್ರಹಿಸಿದ್ದಾರೆ.

    ಈ ಬಗ್ಗೆ ಜೆಪಿ ಭವನದಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ.ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ರಾಜೀನಾಮೆ ಕೊಡಬೇಕು ಅಂತ ಕಾನೂನಿನಲ್ಲಿ ಇಲ್ಲ. ಆದರೆ ನೈತಿಕತೆ ಅಂತ ಇದೆ. ಲಾಯರ್ ಆಗಿದ್ದವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು. ರಾಜೀನಾಮೆ ಕೊಟ್ಟು ತನಿಖೆ ನಡೆದರೆ ಕ್ಲಿಯರ್ ಆಗಿರುತ್ತದೆ ಅಂತ ವಿಪಕ್ಷಗಳಾದ ನಾವು ರಾಜೀನಾಮೆ ಕೇಳುತ್ತಿದ್ದೇವೆ. ಅವರು ಕೊಡಲ್ಲ ಅಂದರೆ ಕಾನೂನು ಇದೆ. ಅದರ ಪ್ರಕಾರವೇ ಕ್ರಮ ಆಗುತ್ತದೆ ಎಂದರು. ಇದನ್ನೂ ಓದಿ: ನನ್ನ ವಿರುದ್ಧದ ಕೇಸ್ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಡ: ಕುಮಾರಸ್ವಾಮಿ

    ಕುಮಾರಸ್ವಾಮಿ (HD Kumaraswamy) ಕೇಸ್‌ಗೆ ರಾಜ್ಯಪಾಲರು ಅನುಮತಿ ಕೊಡಲಿಲ್ಲ ಎನ್ನುತ್ತಾರೆ. ಅವರು ಅಧಿಕಾರದಲ್ಲಿ ಇದ್ದಾಗ ನೋಡಿಕೊಳ್ಳಬೇಕಿತ್ತು. ನನಗೆ ಇರುವ ಮಾಹಿತಿ ಪ್ರಕಾರ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇ ಇದೆ. ಅದಕ್ಕೆ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ ಎನಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು

    ಸಿಎಂ ಅವರು ಮುಡಾದಲ್ಲಿ (MUDA Scam) 14 ಸೈಟ್ ಪಡೆದಿರೋದು ನಿಜ ಎಂದು ಸಾಬೀತು ಆಗಿದೆ. ಬದಲಾವಣೆ ಸೈಟ್ ಪಡೆದುಕೊಂಡಿದ್ದಾರೆ. 62 ಕೋಟಿ ರೂ. ಅಂತಾನೂ ಹೇಳಿದ್ದಾರೆ. ಸಿಎಂ ಅವರೇ ಒಪ್ಪಿಕೊಂಡ ಮೇಲೆ ಬೇರೆ ಯಾಕೆ ಮಾತನಾಡಬೇಕು. ಕುಮಾರಸ್ವಾಮಿ ಕೇಂದ್ರದ ಜೊತೆ ಸೇರಿ ಸರ್ಕಾರ ಅಸ್ಥಿರ ಮಾಡುತ್ತಿದ್ದಾರೆ ಎಂಬುದು ಅವರ ಭ್ರಮೆ. ಸರ್ಕಾರ ಅಸ್ಥಿರ ಮಾಡುವ ಅವಶ್ಯಕತೆ ನಮಗೆ ಇಲ್ಲ. ಅವರಿಗೆ 135 ಶಾಸಕರನ್ನು ಜನ ಕೊಟ್ಟಿದ್ದಾರೆ. ಅವರು ಅಧಿಕಾರ ಮಾಡಲಿ ಎಂದು ಜನ ಗೆಲ್ಲಿಸಿದ್ದಾರೆ. ಹೀಗೆ ಹಗರಣ ಮಾಡಿ ಅಂತ ಅಧಿಕಾರ ಕೊಟ್ಟಿಲ್ಲ. ಹಗರಣ ಮಾಡಿ ಅಂತ ಬಿಜೆಪಿ, ಕುಮಾರಸ್ವಾಮಿ ಹೇಳಿದ್ರಾ? ಸಿದ್ದರಾಮಯ್ಯ ಹಠ ಹಿಡಿಯಬಾರದು. ತನಿಖೆ ಎದುರಿಸಬೇಕು. ನಿರ್ದೋಷಿ ಅಂತ ಆದ ಮೇಲೆ ಮತ್ತೆ ಸಿಎಂ ಆಗಲಿ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಸಿಎಂ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಇವರು ತನಿಖೆಗೆ ಅವಕಾಶ ಮಾಡಿಕೊಡಲಿ. ಸಿದ್ದರಾಮಯ್ಯ ನಾನು ಲಾಯರ್ ಅಂತಾರೆ. ಲಾಯರ್ ಆಗಿರುವುದರಿಂದ ನೈತಿಕತೆಯಿಂದ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ನೀವು ತನಿಖೆಗೆ ಸಹಕಾರ ನೀಡಿದರೆ ದೇಶದಲ್ಲಿ ಒಳ್ಳೆಯ ರಾಜಕಾರಣಿ ಆಗುತ್ತೀರಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಯಾವ ಸರ್ಕಾರ ಇತ್ತು? ಅವಾಗ ಇವರು ಏನು ಮಾತನಾಡಿದರು? 14 ಸೈಟ್ ಪಡೆದಿರೋದು ಚೆಕ್ ರೀತಿ ಅಲ್ಲವಾ? ಅವರ ಹೆಂಡತಿ ಹೆಸರಿಗೆ ಸೈಟ್ ಬಂದಿದೆ ಅಂದರೆ ಅದು ಚೆಕ್ ರೀತಿನೇ ಅಲ್ವಾ? 62 ಕೋಟಿ ರೂ. ಕೊಡಿ ಅಂತ ಅವರೇ ಕೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು? ಸಿಎಂ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಂಡೆ ಅನ್ನೋದೇ ಡೇಂಜರ್ – ಸಿದ್ದರಾಮಯ್ಯ ಸ್ಥಿತಿಗೆ ಪರೋಕ್ಷವಾಗಿ ಡಿಕೆಶಿ ಕಾರಣ ಎಂದ ಹೆಚ್‍ಡಿಕೆ

  • ನನ್ನ ವಿರುದ್ಧದ ಕೇಸ್ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಡ: ಕುಮಾರಸ್ವಾಮಿ

    ನನ್ನ ವಿರುದ್ಧದ ಕೇಸ್ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ಬೇಡ: ಕುಮಾರಸ್ವಾಮಿ

    ಬೆಂಗಳೂರು: ನನ್ನ ವಿರುದ್ಧ ಇರುವ ಆರೋಪಕ್ಕೆ ರಾಜ್ಯಪಾಲರ ಪ್ರಾಸಿಕ್ಯೂಷನ್ (Prosecution) ಅನುಮತಿಯೇ ಬೇಡ. ನನ್ನನ್ನು ಹೆದರಿಸಲು ಪ್ರಾಸಿಕ್ಯೂಷನ್ ಅನುಮತಿ ಕೊಡಿ ಎಂದು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ ಎಂದು ಸಿಎಂ (Siddaramaiah) ಮತ್ತು ಮಂತ್ರಿಗಳ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

    ಕುಮಾರಸ್ವಾಮಿ ವಿರುದ್ಧದ ಕೇಸ್‌ಗೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿಲ್ಲ ಎಂಬ ಸಿಎಂ, ಮಂತ್ರಿಗಳ ಹೇಳಿಕೆಗೆ ಬೆಂಗಳೂರಿನಲ್ಲಿ ಹೆಚ್‌ಡಿಕೆ ಪ್ರತಿಕ್ರಿಯಿಸಿದರು. 150 ಕೋಟಿ ಜಂತಕಲ್ ಮೈನಿಂಗ್ ಕೇಸ್ ಈಗಾಗಲೇ ಹೈಕೋರ್ಟ್‌ನಲ್ಲಿ ವಜಾ ಆಗಿದೆ. ಸಾಯಿ ವೆಂಕಟೇಶ್ವರ ಕೇಸ್ ತನಿಖೆ ಮಾಡಿ ಎಂದು ಹೇಳಿದ್ದಾರೆ. ಅಬ್ರಹಾಂ ಅವರು 2011ರಲ್ಲಿ ನನ್ನ ಮೇಲೆ, ಎಸ್‌ಎಂ ಕೃಷ್ಣ ಮತ್ತು ಧರ್ಮಸಿಂಗ್ ಮೇಲೆ ಸುಪ್ರೀಂ ಕೋರ್ಟ್‌ಗೆ ದೂರು ಕೊಟ್ಟರು. ಎಸ್‌ಎಂ ಕೃಷ್ಣ ಕೇಸ್‌ಗೆ ಸ್ಟೇ ತಂದರು. ಧರ್ಮ ಸಿಂಗ್ ಈಗ ಇಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ನನ್ನ ವಿರುದ್ಧ ಎಸ್‌ಐಟಿಗೆ ತನಿಖೆ ಮಾಡಿ ಅಂತ ಆದೇಶ ಮಾಡಿದ್ದರು. ಎಸ್‌ಐಟಿ ತಂಡ 3 ತಿಂಗಳಲ್ಲಿ ತನಿಖಾ ವರದಿ ಸಲ್ಲಿಸಿ ಅಂತ 2017ರಲ್ಲಿ ಸುಪ್ರೀಂ ಕೋರ್ಟ್ (Supreme Court) ಆದೇಶ ಮಾಡಿತ್ತು. ಈಗ 2024. ಸುಪ್ರೀಂ ಕೋರ್ಟ್ ಮುಂದೆ ನೀವು ಹೋಗಬೇಡಿ ಅಂತ ನಿಮ್ಮನ್ನು ಹಿಡಿದುಕೊಂಡಿರೋರು ಯಾರು? ಸುಪ್ರೀಂ ಕೋರ್ಟ್ ಮುಂದೆ ಹೋಗಿ. ಇದಕ್ಕೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿ ಎಂದು ರಾಜ್ಯಪಾಲರ ಮುಂದೆ ಡ್ರಾಮಾ ಮಾಡೋದು ಯಾಕೆ? ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬೈಕ್‌ನಲ್ಲಿ ಹೋಗುತ್ತಿದ್ದಾಗ ಹೃದಯಾಘಾತ – ಬೆಳಗಾವಿಯಲ್ಲಿ ಯೋಧ ಸಾವು

    ನನ್ನ ಮೇಲೆ 24 ಗಂಟೆಯಲ್ಲಿ ಕ್ರಮ ಆಗಿದೆ ಎಂದು ಡ್ರಾಮಾ ಮಾಡುತ್ತಿದ್ದಾರೆ. ನೀವು ಪ್ರಾಮಾಣಿಕವಾಗಿ ಇದ್ದರೆ ನೀವು ತಪ್ಪು ಮಾಡಿಲ್ಲ ಅಂದರೆ ರಾಜ್ಯಪಾಲರ ವಿರುದ್ಧ ಯಾಕೆ ಪ್ರತಿಭಟನೆ ಮಾಡಿಸುತ್ತಿದ್ದೀರಿ? ದೇಶದಲ್ಲಿ ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿಸುತ್ತಿರೋದು ಇದೇ ಮೊದಲು. ರಾಜ್ಯಪಾಲರ ಫೋಟೋಗೆ ಕಪ್ಪು ಮಸಿ ಬಳಿದು, ಬೆಂಕಿ ಹಚ್ಚಿ ಸಚಿವರೆಲ್ಲ ಸೋಮವಾರ ಪ್ರತಿಭಟನೆ ಮಾಡಬೇಕು ಎಂದು ಮಾತನಾಡುತ್ತಿದ್ದೀರಿ. ಏನು ಸಾಧನೆ ಮಾಡಿದ್ದೀರಾ ಎಂದು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡುತ್ತೀರಿ ಎಂದು ಸಿಎಂ ವಿರುದ್ಧ ಕೆಂಡಕಾರಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಕುಮಾರಸ್ವಾಮಿ ಮೇಲೆ ಏನೇ ಆರೋಪ ಇದ್ದರೂ ನೀವೇ ಆಕ್ಷನ್ ತೆಗೆದುಕೊಳ್ಳಿ. ಈಗ ಗಂಗೇನಹಳ್ಳಿ ಹಿಡಿದುಕೊಂಡು ಏನಾದರೂ ಮಾಡಿ ಎನ್ನುತ್ತಿದ್ದಾರೆ. ಅದಕ್ಕೂ ನನಗೂ ಸಂಬಂಧವೇ ಇಲ್ಲ. ಏನು ಮಾಡ್ತೀರಾ. ಧೈರ್ಯವಾಗಿ ಇದ್ದೀನಿ. ಕೇಂದ್ರ ಸರ್ಕಾರವನ್ನು ಯಾಕೆ ದೂರುತ್ತೀರಾ? ನೀವು ಸರಿ ಇದ್ದರೆ ಕೇಂದ್ರವನ್ನು ಯಾಕೆ ದೂರುತ್ತೀರಾ. ಸ್ಟಾಲಿನ್ ಮೇಲೆ ಯಾಕೆ ನಡೆಯುತ್ತಿಲ್ಲ. ತೆಲಂಗಾಣ ಮೇಲೆ ಯಾಕೆ ನಡೆಯುತ್ತಿಲ್ಲ. ಇಲ್ಲಿ ಯಾಕೆ ಪ್ರಾರಂಭ ಆಯಿತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

  • ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ: ಸುರೇಶ್ ಬಾಬು

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ನಿರ್ದೋಷಿಯಾಗಿ ಮತ್ತೆ ಸಿಎಂ ಆಗಲಿ ಎಂದು ಜೆಡಿಎಸ್ (JDS) ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು (Suresh Babu) ಒತ್ತಾಯಿಸಿದ್ದಾರೆ.

    ಈ ಕುರಿತು ಜೆಪಿ ಭವನದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಮುಡಾ, ವಾಲ್ಮೀಕಿ ಹಗರಣದ ವಿರುದ್ಧ ನಾವು ಸದನದಲ್ಲಿ ಹೋರಾಟ ಮಾಡಿದ್ದೆವು. ಪಾದಯಾತ್ರೆ ಮಾಡಿದ್ದೆವು. ಈಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರು ಕಾನೂನು ತಜ್ಞರ ಜೊತೆ ಚರ್ಚೆ ಮಾಡಿಯೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುತ್ತಾರೆ. ಏಕಾಏಕಿ ಯಾರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಕಾಂಗ್ರೆಸ್‌ನವರು ಬಿಂಬಿಸೋದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಯುಎಸ್ ಕಾರು ಅಪಘಾತ; ಭಾರತೀಯ ಮೂಲದ ಒಂದೇ ಕುಟುಂಬದ ಮೂವರು ಸಾವು

    ಸಿಎಂ ಅವರು ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ ಎನ್ನುತ್ತಾರೆ. ಸಿಎಂ ಅವರದ್ದು ತಪ್ಪಿಲ್ಲ ಅಂದರೆ ಮುಡಾ ಹಗರಣದ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸಿದ್ದರೆ ಇಂತಹ ಆತಂಕ ಬರುತ್ತಿರಲಿಲ್ಲ. ಯಾವಾಗ ಸದನದಿಂದ ನೀವು ಓಡಿ ಹೋದ್ರೋ ಆವಾಗ ಅನುಮಾನ ಸೃಷ್ಟಿ ಆಯಿತು. ಹೀಗಾಗಿ ಇಂತಹ ಸನ್ನಿವೇಶ ಎದುರಿಸಬೇಕಾಗಿದೆ. ಇದರಲ್ಲಿ ನಿಮ್ಮ ತಪ್ಪು ಇಲ್ಲ ಅಂದರೆ ಇರೋ ವಿಷಯ ರಾಜ್ಯದ ಜನರ ಮುಂದೆ ಇಡಿ. ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡೋ ವಿಚಾರದಲ್ಲಿ ಯಾವುದೇ ಹುರುಳಿಲ್ಲ ಎಂದು ತಜ್ಞರ ಜೊತೆ ರಾಜ್ಯಪಾಲರು ಚರ್ಚೆ ಮಾಡಿದ್ದಾರೆ. ಅಂದಿನ ರಾಜ್ಯಪಾಲರು ತೀರ್ಮಾನ ಮಾಡಿದ್ದಾರೆ. ಮುಡಾ ಕೇಸ್‌ನಲ್ಲಿ ಸಾಕಷ್ಟು ಅನುಮಾನದ ವಿಷಯಗಳು ಇವೆ. ಮುಡಾ ಕೇಸ್ ಹಲವು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಡಿದ್ದಾರೆ ಎಂದರು. ಇದನ್ನೂ ಓದಿ: ಬಂಡೆ ಅನ್ನೋದೇ ಡೇಂಜರ್ – ಸಿದ್ದರಾಮಯ್ಯ ಸ್ಥಿತಿಗೆ ಪರೋಕ್ಷವಾಗಿ ಡಿಕೆಶಿ ಕಾರಣ ಎಂದ ಹೆಚ್‍ಡಿಕೆ

    ಟೆಲಿಫೋನ್ ಹಗರಣ ಬಂದಾಗ ರಾಮಕೃಷ್ಣ ಹೆಗಡೆ ಅವರು ರಾಜೀನಾಮೆ ಕೊಟ್ಟಿದ್ದರು. ಸಿದ್ದರಾಮಯ್ಯ ಕುಟುಂಬದ ಹಗರಣ ಆಗಿರುವುದರಿಂದ ಸಿಎಂ ಅವರು ರಾಮಕೃಷ್ಣ ಹೆಗಡೆ ತರಹ ರಾಜೀನಾಮೆ ನೀಡಬೇಕು. ರಾಜೀನಾಮೆ ಕೊಟ್ಟು ಸಿಎಂ ತನಿಖೆ ಎದುರಿಸಿದರೆ ಅವರಿಗೆ ಗೌರವ ಇರುತ್ತದೆ ಎಂದು ಆಗ್ರಹಿಸಿದರು. ಇದನ್ನೂ ಓದಿ:  ಕುಡಿದ ಮತ್ತಿನಲ್ಲಿದ್ದ ರೋಗಿಯಿಂದ ಮಹಿಳಾ ವೈದ್ಯೆ ಮೇಲೆ ಹಲ್ಲೆ

    ಕುಮಾರಸ್ವಾಮಿ, ಬಿಜೆಪಿ ಅವರು ಯಾಕೆ ಸರ್ಕಾರ ಅಸ್ಥಿರ ಮಾಡೋಕೆ ಹೋಗುತ್ತಾರೆ? ನೀವು ತಪ್ಪು ಮಾಡಿ ಸಿಕ್ಕಿ ಹಾಕಿಕೊಂಡರೆ ತಾನೇ ಬೇರೆ ಅವರು ಚಾಟಿ ಬೀಸೋ ಕೆಲಸ ಮಾಡೋದು. ಸರ್ಕಾರ ಮಾಡೋರು ಯಾವುದೇ ಹಗರಣದಲ್ಲಿ ಸಿಗದಂತೆ ಅಧಿಕಾರ ಮಾಡಬೇಕು. ವಾಲ್ಮೀಕಿ ಹಗರಣ ಎಲ್ಲರು ನೋಡಿದ್ದಾರೆ. ಮುಡಾ ಹಗರಣ ಆಗಿದೆ. ಇದನ್ನು ನೋಡಿಕೊಂಡು ಸುಮ್ಮನೆ ಇರೋಕೆ ವಿಪಕ್ಷಗಳು ಇದ್ದಾವಾ? ಎಂದು ಹರಿಹಾಯ್ದರು. ಇದನ್ನೂ ಓದಿ:  ಬೆಂಗಳೂರಲ್ಲಿ ಯುವತಿ ಮೇಲೆ ಅತ್ಯಾಚಾರ?

    ಸೋಮವಾರ ಕಾಂಗ್ರೆಸ್ ಅವರು ಪ್ರತಿಭಟನೆ ಮಾಡಲಿ. ಅವರು ಪ್ರತಿಭಟನೆ ಮಾಡಿ ಸಮರ್ಥನೆ ಮಾಡಿಕೊಳ್ಳೋಕೆ ಹೊರಟಿದ್ದಾರೆ. ಪ್ರತಿಭಟನೆ ಮಾಡೋದು ಬಿಟ್ಟು ಸಿಎಂ ಅವರು ಪಾರದರ್ಶಕವಾಗಿ ಇದ್ದಾರೆ. ತನಿಖೆ ಎದುರಿಸಿ ನಿಮ್ಮ ಬಳಿ ಇರೋ ಎಲ್ಲಾ ದಾಖಲಾತಿಗಳನ್ನ ಹೊರಗೆ ಕೊಟ್ಟು ಆರೋಪದಿಂದ ಹೊರಗೆ ಬನ್ನಿ. ಕಾನೂನು ಹೋರಾಟ ಮಾಡಿ ಅದರಲ್ಲಿ ಯಶಸ್ವಿಯಾಗಿ ಹೊರಗೆ ಬನ್ನಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಿಎಂ ಅಧಿಕೃತ ಎಕ್ಸ್ ಖಾತೆಯಲ್ಲಿ ಮೋದಿ ನಿಂದನೆ ಆರೋಪ – ಸರ್ಕಾರದ ವಿರುದ್ಧ ಸಿ.ಟಿ ರವಿ ಕಿಡಿ

  • MUDA Scam| ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿಗೆ `ಸುಪ್ರೀಂ ತೀರ್ಪು’ ಆಧಾರ – ರಾಜ್ಯಪಾಲರ ಆದೇಶದಲ್ಲಿ ಏನಿದೆ?

    MUDA Scam| ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿಗೆ `ಸುಪ್ರೀಂ ತೀರ್ಪು’ ಆಧಾರ – ರಾಜ್ಯಪಾಲರ ಆದೇಶದಲ್ಲಿ ಏನಿದೆ?

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (CM Siddaramaiah) ರಾಜಕೀಯ ಜೀವನ ಅತೀಕಷ್ಟದ ದಿನಗಳು ಎದುರಾಗಿವೆ. ಬಹುಶಃ ಇಂತಹ ಸನ್ನಿವೇಶವನ್ನು ಸಿಎಂ ನಿರೀಕ್ಷೆ ಮಾಡಿರಲಿಲ್ಲ. ಮುಡಾ ಹಗರಣ (MUDA Scam) ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅನುಮತಿ ನೀಡಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

    ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೋರಿ ಟಿಜೆ ಅಬ್ರಾಹಂ, ಸ್ನೇಹಮಯಿ ಕೃಷ್ಣ ಪ್ರದೀಪ್ ಕುಮಾರ್, ದಾಖಲಿಸಿದ್ದ ಅರ್ಜಿಗಳ ಪರಿಶೀಲನೆ ನಡೆಸಿದ ರಾಜ್ಯಪಾಲರು ಆರು ಪುಟಗಳ ಆದೇಶ ಹೊರಡಿಸಿದ್ದಾರೆ. ರಾಜ್ಯಪಾಲರ ಆದೇಶ ಪ್ರತಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೈ ಸೇರಿದೆ.

    ದೂರುದಾರರು ರಾಜಭವನಕ್ಕೆ ತೆರಳಿ ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ಪತ್ರವನ್ನು ತೆಗೆದುಕೊಂಡು ಹೋಗಿದ್ದಾರೆ. ಇದರಿಂದ ಸಿಎಂಗೆ ಈಗ ಸಂಕಷ್ಟ ಎದುರಾಗಿದೆ. ಸಿಎಂ ರಾಜೀನಾಮೆ ನೀಡಬೇಕಾದ ಸನ್ನಿವೇಶ ಸೃಷ್ಟಿಯಾಗುತ್ತಾ ಎಂಬ ಪ್ರಶ್ನೆ ಎದುರಾಗಿದೆ. ಇದನ್ನೂ ಓದಿ: ಉದಯ್‌ಪುರದಲ್ಲಿ ಸಹಪಾಠಿಗೆ ಚಾಕು ಇರಿತ – ಅಕ್ರಮವಾಗಿ ನಿರ್ಮಿಸಿದ್ದ ಆರೋಪಿ ಮನೆ ಧ್ವಂಸ

    ರಾಜ್ಯಪಾಲರ ಆದೇಶ ಪತ್ರದಲ್ಲಿ ಏನಿದೆ?
    ಸಿಎಂ ವಿರುದ್ಧದ ದೂರು, ಕಾನೂನು ಅಭಿಪ್ರಾಯ, ಸಂಪುಟ ನಿರ್ಣಯ ಪರಿಶೀಲಿಸಲಾಗಿದ್ದು ಮುಖ್ಯಮಂತ್ರಿಗಳ ವಿರುದ್ಧದ ಆರೋಪದ ವಿಚಾರವಾಗಿ 2 ಬಗೆಯ ಅಭಿಪ್ರಾಯಗಳಿವೆ. ದೂರಿನಲ್ಲಿರುವ ಆರೋಪಗಳನ್ನು ಮೇಲ್ನೋಟಕ್ಕೆ ಪುಷ್ಟೀಕರಿಸುವ ದಾಖಲೆಗಳೂ ಇವೆ. ತನಿಖೆ ಹೇಗಿರಬೇಕು ಎಂಬುದನ್ನು ಆರೋಪಿತ ವ್ಯಕ್ತಿ ನಿರ್ಧರಿಸುವುದು ಕಾನೂನು ಒಪ್ಪಿತವಲ್ಲ. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ವಿಪಕ್ಷಗಳ ಆರೋಪ ಏನು? ಬೆಳಕಿಗೆ ಬಂದಿದ್ದು ಹೇಗೆ?

    ಮುಡಾ ಅಕ್ರಮಗಳಲ್ಲಿ ಸಿಎಂ ಪಾತ್ರದ ಬಗ್ಗೆ ತಟಸ್ಥ, ವಸ್ತುನಿಷ್ಠ, ನಿಷ್ಪಕ್ಷಪಾತ ತನಿಖೆ ಅಗತ್ಯವಿದೆ. ಪಿಸಿಎ ಸೆಕ್ಷನ್ 17-ಎ, ಬಿಎನ್‌ಎಸ್ ಸೆಕ್ಷನ್ 218ರ ಅಡಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ಸಿಎಂ ವಿರುದ್ಧದ ದೂರುಗಳನ್ನು ತಿರಸ್ಕರಿಸುವಂತೆ ಸಂಪುಟ ತೆಗೆದುಕೊಂಡ ನಿರ್ಣಯ ಕಾನೂನುಬಾಹಿರ ಮತ್ತು ರಾಜ್ಯ ಸಚಿವ ಸಂಪುಟ ತೆಗೆದುಕೊಂಡ ನಿರ್ಣಯ ವಿಶ್ವಾಸಾರ್ಹವಲ್ಲ. ಇದನ್ನೂ ಓದಿ: ಇದು ದೊಡ್ಡ ಷಡ್ಯಂತ್ರ.. ಕಾನೂನಿನಡಿ ಹೋರಾಟ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ

     

    ಅನುಮತಿಗೆ `ಸುಪ್ರೀಂ ತೀರ್ಪು’ ಆಧಾರ
    2004ರ ಮಧ್ಯಪ್ರದೇಶ ಸರ್ಕಾರ ವರ್ಸಸ್ ವಿಶೇಷ ಪೊಲೀಸ್ ಘಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ದಾಖಲೆ ಲಭ್ಯವಿದ್ದಾಗಲೂ ರಾಜ್ಯಪಾಲರು ವಿವೇಚನಾ ಅಧಿಕಾರ ಬಳಸದಿದ್ದರೆ ಸರಿ ಆಗುವುದಿಲ್ಲ. ಅಧಿಕಾರದಲ್ಲಿರುವ ಪ್ರಭಾವಿ ವ್ಯಕ್ತಿಗಳ ವಿರುದ್ಧ ಮೇಲ್ನೋಟಕ್ಕೆ ಸಾಕ್ಷ್ಯ ಲಭ್ಯ ಇದ್ದಾಗಲೂ ತನಿಖೆಗೆ ಅನುಮತಿ ನಿರಾಕರಿಸಿದರ ಅದರಿಂದ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆ. ತಮ್ಮ ವಿರುದ್ಧ ತನಿಖೆ ನಡೆಸಲು ಅವಕಾಶವೇ ಇಲ್ಲ ಎಂಬ ಭಾವನೆಯಿಂದ ಆಳುವ ಮಂದಿಗೆ ಕಾನೂನು ಉಲ್ಲಂಘಿಸಲು ಪ್ರೇರಣೆ ದೊರೆಯುತ್ತದೆ ಎಂಬ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪನ್ನು ಉಲ್ಲೇಖಿಸಿದ್ದಾರೆ.

     

  • ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ನಿಖಿಲ್ ಆಗ್ರಹ

    ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ನಿಖಿಲ್ ಆಗ್ರಹ

    ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಮೈತ್ರಿಪಕ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ಶುದ್ಧಹಸ್ತ ಎಂದು ಪದೇಪದೆ ಹೇಳುವ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿಲಿ ಎಂದರು. ಇದನ್ನೂ ಓದಿ: TB Dam | ಮೂರನೇ ಸ್ಟಾಪ್‌ ಗೇಟ್‌ ಅಳವಡಿಕೆ ಯಶಸ್ವಿ – ಎಲ್ಲಾ ಗೇಟ್‌ ಬಂದ್‌

    ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್-ಬಿಜೆಪಿ ಜಂಟಿಯಾಗಿ ಆ.3ರಂದು ಬೆಂಗಳೂರಿನ ಕೆಂಗೇರಿಯಿಂದ ಮೈಸೂರು ನಗರಕ್ಕೆ ಪಾದಯಾತ್ರೆ ನಡೆಸಿದನ್ನು ಸ್ಮರಿಸಬಹುದು. ನಮ್ಮ ಹೋರಾಟ ಸತ್ಯದ ಪರ ಎಂಬುದನ್ನು ರಾಜ್ಯಪಾಲರು ಕೈಗೊಂಡಿರುವ ಈ ಕ್ರಮ ಸಾಬೀತುಪಡಿಸಿದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂಬ ಗಾದೆ ಮಾತು ಈಗ ಅಕ್ಷರಶಃ ಸತ್ಯವಾಗಿದೆ. ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಕುಟುಂಬ ಅಕ್ರಮ ಎಸಗಿದೆ ಎಂಬುದು ಅಷ್ಟೇ ಸತ್ಯ ಎಂದಿದ್ದಾರೆ. ಇದನ್ನೂ ಓದಿ: ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ

    ಸದ್ಯ ಸಂಕಷ್ಟದಲ್ಲಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಬೇರೆ ಆಯ್ಕೆಯೇ ಇಲ್ಲ. ಅವರು ಸತ್ಯ ಒಪ್ಪಬೇಕು, ಅಕ್ರಮ ಅಂಗೀಕರಿಸಬೇಕು. ಕೂಡಲೇ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ನಾನು ಶುದ್ಧ ಎಂದು ಪದೇ ಪದೆ ಹೇಳುವ ಸಿದ್ದರಾಮಯ್ಯನವರು ಗೌರವಯುತವಾಗಿ ನಿರ್ಗಮಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸ್ವಲ್ಪವಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ಕೊಡಿ: ಸಿಎಂಗೆ ಡಾ.ಅಶ್ವತ್ಥ್ ನಾರಾಯಣ್ ಸವಾಲ್

  • ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ

    ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ ಮಾತನಾಡೋ ಸಿಎಂ ರಾಜೀನಾಮೆ ನೀಡಲಿ: ಜನಾರ್ದನ ರೆಡ್ಡಿ

    ಬೆಂಗಳೂರು: ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ಕೊಡಿ. ತನಿಖೆ ಎದುರಿಸಿ, ನ್ಯಾಯಯುತವಾಗಿ ಹೊರಗೆ ಬನ್ನಿ. ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದಾರೆ.

    ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ವಿಚಾರವಾಗಿ ಬಿಜೆಪಿ (BJP) ಕಚೇರಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ಸಿಎಂ ಮೇಲೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆ. ಯಾವುದೇ ಕಿಂಚಿತ್ತು ನೈತಿಕತೆ ಇದ್ದರೆ, ರಾಜೀನಾಮೆ ಕೊಡಲಿ ಎಂದರು. ಇದನ್ನೂ ಓದಿ: ಪ್ರಜಾಪ್ರಭುತ್ವ ಚುನಾಯಿತ ಸರ್ಕಾರವನ್ನ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    ಬೆಳಗ್ಗೆ ಎದ್ದರೆ ನೈತಿಕತೆ ಬಗ್ಗೆ, ಕಾನೂನಿನ ಬಗ್ಗೆ ಮಾತಾಡೋ ಸಿದ್ದರಾಮಯ್ಯ ಈ ಕ್ಷಣಕ್ಕೆ ರಾಜೀನಾಮೆ ಕೊಡಬೇಕಿತ್ತು. ಅವರು ಮಾಡಿರುವ ತಪ್ಪುಗಳನ್ನು ಮರೆಮಾಚಿದ್ದಾರೆ. ನಾನು ತಪ್ಪೇ ಮಾಡಿಲ್ಲ ಅನ್ನುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು. ಇದನ್ನೂ ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದಲೇ ರೇಪ್ – ಆಸ್ಪತ್ರೆಗೆ ದಾಖಲಾದ 20 ದಿನಗಳ ಬಳಿಕ ಸಾವು

    ಯಡಿಯೂರಪ್ಪ, ನನ್ನ ಮೇಲೆ ಪ್ರಾಸಿಕ್ಯೂಷನ್ ಬಿಡಿ. ಲೋಕಾಯುಕ್ತದಲ್ಲಿ ನಮ್ಮ ಹೆಸರನ್ನ ದಾಖಲಿಸಿದ ಕೂಡಲೇ, ಯಡಿಯೂರಪ್ಪ ಅವರು ನಮ್ಮನ್ನು ಕರೆದಿದ್ದರು. ನಾವು ಮುಂದುವರೆಯೋದು ಸರಿಯಲ್ಲ ಎಂದು ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಿದ್ದೆವು. ಅದೆಲ್ಲಾ ಇತಿಹಾಸ ಎಂದರು. ಇದನ್ನೂ ಓದಿ: ಇದು ದೊಡ್ಡ ಷಡ್ಯಂತ್ರ.. ಕಾನೂನಿನಡಿ ಹೋರಾಟ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ

    ಅಹಿಂದ ಅಂತ ಹೇಳೋ ವ್ಯಕ್ತಿ. ಅಧಿಕಾರದ ಆಸೆಗೆ ಮುಂದುವರೆದಿದ್ದಾರೆ. ಬಳ್ಳಾರಿ ಪಾದಯಾತ್ರೆಗೆ ಬಂದ ಈ ಮಹಾನುಭಾವ ಪಾದಯಾತ್ರೆಗೆ ಬಿಡುತಿಲ್ಲ ಎಂದು ಆರೋಪ ಮಾಡಿದ್ದರು. ರಿಪಬ್ಲಿಕನ್ ಆಫ್ ಬಳ್ಳಾರಿ ಅಂದರು. ಜನಾರ್ದನ ರೆಡ್ಡಿ (Janardhan Reddy)  ಗೋಡೆ ಕಾಂಪೌಂಡ್ ಬಗ್ಗೆ ಮಾತಾಡಿದರು. ಕೇವಲ ಪಾದಯಾತ್ರೆಗೆ ಬಂದು ನಮ್ಮಮೇಲೆ ಆರೋಪ ಮಾಡಿದ್ದರು. ನಮ್ಮನ್ನು ಜೈಲಿಗೆ ಹಾಕಬೇಕು ಎಂದು ಹೇಳಿದ್ದರು. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ವಿಪಕ್ಷಗಳ ಆರೋಪ ಏನು? ಬೆಳಕಿಗೆ ಬಂದಿದ್ದು ಹೇಗೆ?

    ನ್ಯಾಯಯುತವಾಗಿ ಹಣ ದುಡಿದಿದ್ದು ಜನಾರ್ದನ ರೆಡ್ಡಿ. ನಿಮ್ಮಹಾಗೆ ಅಕ್ರಮವಾಗಿ ಹಣ ದುಡಿದಿಲ್ಲ. ಸಭೆಯಲ್ಲಿ ಆಸೆ ಆಕಾಂಕ್ಷೆ ಇಲ್ಲ. ಎರಡು ಮನೆ ಮಾರಿದ್ದೀನಿ, ಒಂದು ಮನೆ ಕಟ್ಟಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದೀರಿ. 14 ಸೈಟು ಪಡೆದಿದ್ದೀರಿ. 34 ಕೋಟಿ ರೂ. ಹಣ ಕೊಟ್ಟರೆ ಬಿಟ್ಟು ಬಿಡುತ್ತೇನೆ ಅಂದ್ರಿ. ಬಿಜೆಪಿಯವರು ಇಲ್ಲ ಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಹೇಳುತ್ತೀರಿ. ಇನ್ನೊಂದು ಕಡೆ 64 ಕೋಟಿ ರೂ. ಹಣ ಕೇಳುತ್ತೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಿಎಂ ತವರಲ್ಲಿ ಕಟ್ಟೆಯೊಡೆದ ಆಕ್ರೋಶ – ರಾಜ್ಯಪಾಲರ ಪೋಸ್ಟರ್‌ಗೆ ಬೆಂಕಿ

    ನಿಮಗೆ ಈಗಾಗಲೇ ವಯಸ್ಸಾಗಿದೆ. ಈ ಇಳಿವಯಸ್ಸಿನಲ್ಲಿ ಈ ರೀತಿ ಮಾಡೋದು ಸರಿಯಲ್ಲ. ಹಿಂದೆ ನಮಗೆ ತನಿಕೆ ಮಾಡೋಕೆ ಆಗಲ್ಲ, ರಾಜೀನಾಮೆ ಕೊಡಿ ಅಂತ ಹೇಳಿದ್ದೀರಿ. ಈಗ ಯಾವ ಮುಖ ಹೊತ್ತು ಮಾತಾಡುತ್ತಿದ್ದೀರಿ? ಡಿಕೆಶಿ ಅವರು ಇವತ್ತು ಮಾತನಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಮೋದಿ ಸರ್ಕಾರದಿಂದ ರಾಜಕೀಯ, ವೈಯಕ್ತಿಕ ಸೇಡು: ಸುರ್ಜೇವಾಲ

    ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ (DK Shivakumar), ಎಐಸಿಸಿ ಅಧ್ಯಕ್ಷ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi), ರಾಹುಲ್ ಗಾಂಧಿ (Rahul Gandhi), ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬೇಕು. ನೈತಿಕತೆ ಇದ್ದರೆ ರಾಜ್ಯದ ಸಿಎಂ ಆಗಿ ಮುಂದುವರೆಯಲು ಸಾಧ್ಯವಿಲ್ಲ. ಕೂಡಲೇ ರಾಜೀನಾಮೆ ಕೊಟ್ಟು ಹೊರಗೆ ಬನ್ನಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಸಿದ್ದರಾಮಯ್ಯರ ಒಂದು ಕೂದಲು ಅಲುಗಾಡಿಸಲು ಸಾಧ್ಯವಿಲ್ಲ: ಹೆಚ್‌ಸಿ ಬಾಲಕೃಷ್ಣ

  • ಸ್ವಲ್ಪವಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ಕೊಡಿ: ಸಿಎಂಗೆ ಡಾ.ಅಶ್ವತ್ಥ್ ನಾರಾಯಣ್ ಸವಾಲ್

    ಸ್ವಲ್ಪವಾದರೂ ಆತ್ಮಸಾಕ್ಷಿ ಇದ್ದರೆ ರಾಜೀನಾಮೆ ಕೊಡಿ: ಸಿಎಂಗೆ ಡಾ.ಅಶ್ವತ್ಥ್ ನಾರಾಯಣ್ ಸವಾಲ್

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ (Siddaramaiah) ಸ್ವಲ್ಪವಾದರೂ ಆತ್ಮಸಾಕ್ಷಿ, ನೈತಿಕತೆ, ಮೌಲ್ಯ, ಸಂವಿಧಾನಕ್ಕೆ ನಿಷ್ಠೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ (C.N. Ashwath Naraya) ಅವರು ಆಗ್ರಹಿದ್ದಾರೆ.

    ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ವಾಲ್ಮೀಕಿ ನಿಗಮ, ಮುಡಾ ಹಗರಣ (MUDA Scam) ಸೇರಿ ಎರಡು ಹಗರಣಗಳಲ್ಲಿ ಅಧಿಕಾರ ದುರ್ಬಳಕೆ ಆಗಿರುವುದು ಸ್ಪಷ್ಟವಾಗಿ ಗೋಚರಿಸಿದೆ. ನಾಡಿನ ಕೊನೆಯ ಮನುಷ್ಯರೂ ನಿಮ್ಮ ಕಡೆ ಬೆರಳು ತೋರಿಸುವಂತಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

    ಮುಖ್ಯಮಂತ್ರಿಗಳು ತಪ್ಪು ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಭ್ರಷ್ಟ ಮುಖ್ಯಮಂತ್ರಿಯಾಗಿ ನೀವು ನಾಡಿನ ಜನತೆಗೆ ನ್ಯಾಯ ಕೊಡಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಇದರಲ್ಲಿ ವೈಯಕ್ತಿಕ ದ್ವೇಷ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ನಾಡಿನ ಹಿತ, ಜನರ ಹಿತಕ್ಕಾಗಿ ಜನಪರ, ಭ್ರಷ್ಟಾಚಾರ ರಹಿತ ಆಡಳಿತ ಕೊಡಬೇಕಿತ್ತು. ಆದ್ದರಿಂದ ಭ್ರಷ್ಟ ಮುಖ್ಯಮಂತ್ರಿ ಯಾವುದೇ ಕಾರಣಕ್ಕೂ ಅಧಿಕಾರದಲ್ಲಿ ಮುಂದುವರಿಯಬಾರದು. ಮೇಲ್ನೋಟಕ್ಕೇ ಆರೋಪ ಇರುವ ಕಾರಣ, ತಜ್ಞರ ಸಲಹೆ ಪಡೆದು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಆದರೂ, ಅಧಿಕಾರದಲ್ಲಿ ಮುಂದುವರೆಯಲು ಏನು ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.

  • ಪ್ರಜಾಪ್ರಭುತ್ವ ಚುನಾಯಿತ ಸರ್ಕಾರ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    ಪ್ರಜಾಪ್ರಭುತ್ವ ಚುನಾಯಿತ ಸರ್ಕಾರ ಉರುಳಿಸಲು ಯತ್ನ: ರಮೇಶ್ ಬಂಡಿಸಿದ್ದೇಗೌಡ

    – ಸೋಮವಾರದಿಂದ ಪ್ರತಿದಿನ ರಾಜ್ಯಪಾಲರ ವಿರುದ್ಧ ಕಪ್ಪು ದಿನ ಆಚರಣೆ

    ಮಂಡ್ಯ: ಪ್ರಜಾಪ್ರಭುತ್ವ ಚುನಾಯಿತ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿದ್ದಾರೆ. ಏನು ಕಳ್ಳತನ ಮಾಡಿದ್ದಾರೆ ಎಂದು ಪ್ರಾಸಿಕ್ಯೂಷನ್ (Prosecution)  ಕೊಟ್ಟಿದ್ದಾರೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesha Bandisiddegowda) ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

    ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ವಿಚಾರವನ್ನು ವಿರೋಧಿಸಿ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾನು ಒಬ್ಬ ಮುಡಾ ಸದಸ್ಯನಾಗಿದ್ದೇನೆ. ಯಾರ ಕಾಲದಲ್ಲಿ 50:50 ಅಡಿ ಸೈಟ್ ಕೊಟ್ಟಿರೋದು? ಸಿದ್ದರಾಮಯ್ಯ ಮೇಲೆ ಪ್ರಾಸಿಕ್ಯೂಷನ್ ಕೊಡಬಾರದಿತ್ತು. ಹಾಗಿದ್ರೆ ಮೊದಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ಬಾಮಿ ಮೇಲೆ ಪ್ರಾಷಿಕ್ಯೂಷನ್ ಕೊಡಬೇಕು. ಬಿಜೆಪಿಯವರು ಸ್ವತಂತ್ರ ಹರಣ ಮಾಡುವ ಕೆಲಸ ಮಾಡುತ್ತಿದ್ದಾರೆ. ಹೆಚ್‌ಡಿಕೆ, ನಿರಾಣಿ ಮೇಲೆ ಪ್ರಾಸಿಕ್ಯೂಷನ್ ಕೇಳಿದ್ದಾರೆ. ಅವರ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಶಿಕ್ಷಕನಿಂದಲೇ ರೇಪ್ – ಆಸ್ಪತ್ರೆಗೆ ದಾಖಲಾದ 20 ದಿನಗಳ ಬಳಿಕ ಸಾವು

    ಇಂದು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ. ಸಿದ್ದರಾಮಯ್ಯರ ಪರ 135 ಶಾಸಕರಿದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಸ್ಥಾನದಿಂದ ಕೆಳಗಿಳಿಯಲು ಬಿಡಲ್ಲ. ಕಳಂಕರಹಿತ ಸಿಎಂ ಮೇಲೆ ಆಪಾದನೆ ಮಾಡುತ್ತಿರೋದು ಸರಿಯಲ್ಲ. ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಸೋಮವಾರದಿಂದ ಪ್ರತಿದಿನ ರಾಜ್ಯಪಾಲರ ವಿರುದ್ಧ ಕಪ್ಪು ದಿನ ಆಚರಣೆ ಮಾಡುತ್ತೇವೆ ಎಂದು ಹರಿಹಾಯ್ದರು. ಇದನ್ನೂ ಓದಿ: ಇದು ದೊಡ್ಡ ಷಡ್ಯಂತ್ರ.. ಕಾನೂನಿನಡಿ ಹೋರಾಟ ಮಾಡ್ತೀನಿ: ಸಿಎಂ ಸಿದ್ದರಾಮಯ್ಯ