Tag: MUDA Scam

  • ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ: ಸದನದಲ್ಲಿ ಮುಡಾ, ವಾಲ್ಮೀಕಿ ಹಗರಣ ಅಸ್ತ್ರ ಪ್ರಯೋಗಕ್ಕೆ ಸಜ್ಜು!

    ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ: ಸದನದಲ್ಲಿ ಮುಡಾ, ವಾಲ್ಮೀಕಿ ಹಗರಣ ಅಸ್ತ್ರ ಪ್ರಯೋಗಕ್ಕೆ ಸಜ್ಜು!

    – ಮುಖ್ಯಮಂತ್ರಿಯಿಂದಲೇ ಕಾನೂನು ಬಾಹಿರ ಚಟುವಟಿಕೆ ಆಗಿದೆ ಎಂದ ಹೆಚ್‌ಡಿಕೆ
    – ಕಾಂಗ್ರೆಸ್ ಭ್ರಷ್ಟಾಚಾರ ಬಟಾಬಯಲು ಮಾಡುತ್ತೇವೆಂದ ಅಶೋಕ್

    ಬೆಂಗಳೂರು: ಇದೇ ಜು.15 ರಿಂದ ವಿಧಾನ ಮಂಡಲ ಅಧಿವೇಶನ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಸಲಾಯಿತು.

    ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ, ಮಾಜಿ ಡಿಸಿಎಂ ಡಾ.ಅಶ್ವಥ್ ನಾರಾಯಣ, ಸುರೇಶ್ ಬಾಬು, ಶಾರದಾ ಪೂರ್ಯಾ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಕೆ.ಎಸ್ ನವೀನ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಜಂಟಿ ಹೋರಾಟದ ಬಗ್ಗೆ ಹಾಗೂ ಹೋರಾಟಕ್ಕೆ ಸಿದ್ದಪಡಿಸಬೇಕಾದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಯಿತು.

    ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್.ಅಶೋಕ್, ಅಧಿವೇಶನದಲ್ಲಿ ಮೊದಲ ಬಾರಿಗೆ ಎನ್‌ಡಿಎ ಆಗಿ ಜಂಟಿಯಾಗಿ ಸರ್ಕಾರದ ವಿರುದ್ಧ ಬಿಸಿ ಮುಟ್ಟುವ ಕೆಲಸ ಮಾಡಬೇಕಿದೆ. ಎಲ್ಲಾ ವಿಚಾರಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಶಕ್ತಿ ಸಿಕ್ಕಿದೆ. ಮುಡಾ ಹಗರಣದಲ್ಲಿ ಸಿಎಂ ಭಾಗಿಯಾಗಿರುವುದರಿಂದ ಇದು ದೇಶದ ವಿಚಾರವಾಗಿದೆ. ಸಿಎಂ 10 ವರ್ಷ ನಾನು ಜಮೀನೇ ನೋಡಿಲ್ಲ ಅನ್ನೋದು ಸಂಶಯಾಸ್ಪದವಾಗಿದೆ. ಕಾಂಗ್ರೆಸ್ ಭ್ರಷ್ಟಾಚಾರ ಬಟಾಬಯಲು ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

    ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿ, ಮುಖ್ಯಮಂತ್ರಿಯಿಂದಲೇ ಕಾನೂನು ಬಾಹಿರ ಚಟುವಟಿಕೆ ಆಗಿದೆ. 62 ಕೋಟಿ ರೂ. ಪರಿಹಾರ ಯಾವ ಆಧಾರದಲ್ಲಿ ಕೇಳಿದರು? ಎಷ್ಟು ಜನ ಭೂಮಿ ಕಳೆದುಕೊಂಡವರಿಗೆ ಇವರ ಸರ್ಕಾರದಲ್ಲಿ ಪರಿಹಾರ ಕೊಟ್ಟಿದ್ದಾರೆ? ಅರ್ಕಾವತಿ ರೀಡೂ ಮಾಡಿದ ಆಧಾರದಲ್ಲಿ 62 ಕೋಟಿ ರೂ. ಕೇಳಿರಬೇಕು ಅಂತಾ ನನ್ನ ಭಾವನೆ. ಇತರ ಎಲ್ಲಾ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಲು ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

    ಸರ್ಕಾರದ ನಡವಳಿಕೆ ಬಗ್ಗೆ ಸದನದಲ್ಲಿ ಚರ್ಚೆ ಮಾಡಲು ತೀರ್ಮಾನಿಸಿದ್ದೇವೆ. ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಕುಸಿತ ಅಂತಾ ಅರ್ಥಿಕ ತಜ್ಞ ರಾಯರೆಡ್ಡಿ ಹೇಳಿದ್ದಾರೆ. ಅಶೋಕ್ ನೇತೃತ್ವದಲ್ಲಿ ನಮ್ಮ ಎಲ್ಲಾ ಶಾಸಕರು ಚರ್ಚೆ ಮಾಡಿದ್ದೇವೆ. ಎರಡೂ ಸದನದಲ್ಲಿ ಪರಿಣಾಮಕಾರಿಯಾಗಿ ಹೋರಾಟ ಮಾಡುತ್ತೇವೆ ಎಂದು ಗುಡುಗಿದ್ದಾರೆ.

  • ಸಿದ್ದರಾಮಯ್ಯ ಒಬ್ಬ ಭಯಂಕರ ಸರ್ವಾಧಿಕಾರಿ, ಭ್ರಷ್ಟಾಚಾರಿ -‌ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್‍ಗೆ ಸಾಧ್ಯವೇ?: ಜೋಶಿ

    ಸಿದ್ದರಾಮಯ್ಯ ಒಬ್ಬ ಭಯಂಕರ ಸರ್ವಾಧಿಕಾರಿ, ಭ್ರಷ್ಟಾಚಾರಿ -‌ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್‍ಗೆ ಸಾಧ್ಯವೇ?: ಜೋಶಿ

    ಬೆಂಗಳೂರು: ಮೈಸೂರು ‘ಮುಡಾ’ ಹಗರಣವನ್ನು (MUDA Scam) ಖಂಡಿಸಿ ಪ್ರತಿಭಟಿಸುವ ಹಕ್ಕೂ ನಮಗಿಲ್ಲವೇ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಅವರು ಪ್ರಶ್ನಿಸಿದರು.

    ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕಿಂದು ಭೇಟಿ ನೀಡಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. 1975ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನಿ ಇಂದಿರಾ ಗಾಂಧಿ ಸರ್ವಾಧಿಕಾರಿಯಾಗಿದ್ದರು. ಇದೀಗ 2024-25ರಲ್ಲಿ ಸಿದ್ದರಾಮಯ್ಯ (Siddaramaiah) ಒಬ್ಬ ಭಯಂಕರವಾದ ಸರ್ವಾಧಿಕಾರಿ, ಅಹಂಕಾರಿ ಮತ್ತು ಭ್ರಷ್ಟನಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್‍ಗೆ ಏನಾದರೂ ಕಮಾಂಡ್ ಇದ್ದರೆ ಸಿದ್ದರಾಮಯ್ಯರನ್ನು ತಕ್ಷಣ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.

    ಮುಡಾ ಹಗರಣದಲ್ಲಿ ಸಿದ್ದರಾಮಯ್ಯರ ನೇರ ತನಿಖೆ ಆಗಬೇಕಿದೆ. ಅವರ ಪಾಲ್ಗೊಳ್ಳುವಿಕೆ ಇಲ್ಲದೇ ಇಂಥ ದೊಡ್ಡ ಭ್ರಷ್ಟಾಚಾರ ಆಗಲು ಸಾಧ್ಯವಿಲ್ಲ ಎಂದು ನುಡಿದ ಅವರು, ಮೈಸೂರು (Mysuru) ಅವರ ತವರೂರು. ಈ ಹಗರಣಕ್ಕೆ ಅವರೇ ನೇರ ಹೊಣೆ ಎಂದು ತಿಳಿಸಿದರು. ಅವರಿಗೆ ಗೊತ್ತಿದ್ದೇ ಭ್ರಷ್ಟಾಚಾರಗಳು ನಡೆಯುತ್ತಿವೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಸದ ಡಾ.ಮಂಜುನಾಥ್ ವಿರೋಧ – ಸಿಎಂಗೆ ಪತ್ರ

    ವಾಲ್ಮೀಕಿ ಹಗರಣದ ಕುರಿತು ಮಾತನಾಡಿದ ಅವರು, ಒಂದೆಡೆ ಇಡಿ, ಸಿಬಿಐ ಮಾಜಿ ಸಚಿವರ ತನಿಖೆ ಮಾಡಲು ಮುಂದಾದಾಗ ನಿಗಮದ ಅಧ್ಯಕ್ಷರು ಎಸ್‍ಐಟಿ ಮುಂದೆ ಶರಣಾಗಿದ್ದಾರೆ. ಸಿದ್ದರಾಮಯ್ಯನವರು ಒಬ್ಬ ಹಣಕಾಸಿನ ಸಚಿವರಾಗಿದ್ದು, ಆರೋಪಿಗಳನ್ನು ಅವರು ಅತ್ಯಂತ ಸಮರ್ಪಕವಾಗಿ ರಕ್ಷಿಸುತ್ತಿದ್ದಾರೆ. ವ್ಯವಸ್ಥಿತವಾಗಿ ಅವರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

    ಮುಡಾದಲ್ಲಿ 50-50 ಅನುಪಾತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಿವೇಶನ ಮಂಜೂರು ಮಾಡಿದ್ದಾರೆ. ಕೆಸರೇ ಬಡಾವಣೆಯಲ್ಲಿ ನಿವೇಶನ ಇದ್ದರೂ ಅತ್ಯಂತ ಪ್ರತಿಷ್ಠಿತ ಬಡಾವಣೆ ವಿಜಯನಗರದಲ್ಲಿ ನಿವೇಶನ ಕೊಡಲಾಗಿದೆ. 2023ರ ಚುನಾವಣಾ ಅಫಿಡವಿಟ್‍ನಲ್ಲಿ ಕಡಿಮೆ ಮೊತ್ತ ಘೋಷಿಸಿದ್ದ (8 ಕೋಟಿ) ಸಿದ್ದರಾಮಯ್ಯನವರು ಇವತ್ತು 62 ಕೋಟಿ ರೂ. ಎಂದು ಹೇಳುತ್ತಾರೆ. ಮುಂಬೈ ಸೇರಿ ದೇಶದ ಯಾವುದೇ ಮೂಲೆಯಲ್ಲೇ ಆದರೂ 2023ರಲ್ಲಿ 8 ಕೋಟಿ ಇದ್ದ ನಿವೇಶನಗಳ ಮೌಲ್ಯ ಈಗ 62 ಕೋಟಿ ರೂ. ಆಗಲು ಸಾಧ್ಯವೇ ಎಂದು ಮುಖ್ಯಮಂತ್ರಿಗಳು ಹೇಳಬೇಕೆಂದು ಪ್ರಲ್ಹಾದ್ ಜೋಶಿ ಅವರು ಸವಾಲೆಸೆದರು.

    ಬಡ ಎಸ್‍ಟಿ ಜನಾಂಗದ ಅಭಿವೃದ್ಧಿ – ಉದ್ಧಾರಕ್ಕೆ ಇದ್ದ ವಾಲ್ಮೀಕಿ ನಿಗಮದ ದುಡ್ಡನ್ನು ಇವರು ದುರುಪಯೋಗ ಮಾಡಿದ್ದಾರೆ. 187 ಕೋಟಿ ರೂಪಾಯಿಯಲ್ಲಿ ಐಶಾರಾಮಿ ಕಾರು ಖರೀದಿ ಸೇರಿದಂತೆ ಇತರ ಉದ್ದೇಶಕ್ಕೆ ಬಳಸಿದ್ದಾರೆ. ಇದರ ವಿರುದ್ಧ ಪ್ರತಿಭಟಿಸುತ್ತಿದ್ದ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು, ಬಿಜೆಪಿ ಶಾಸಕರು ಮತ್ತು ಅನೇಕ ಕಾರ್ಯಕರ್ತರನ್ನು ಬೆಂಗಳೂರು, ಶ್ರೀರಂಗಪಟ್ಟಣ, ರಾಮನಗರ, ಮೈಸೂರಿನಲ್ಲಿ ಬಂಧಿಸಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ಈ ಸರ್ಕಾರ ಅಧಿಕಾರಕ್ಕೆ ಬಂದ ಒಂದೆರಡು ತಿಂಗಳ ಆಡಳಿತ ಅವಧಿಯಲ್ಲೇ ಭ್ರಷ್ಟಾಚಾರ ಶುರುವಾಗಿದೆ. ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯುವುದನ್ನು ಅವರ ಪಕ್ಷದ ಶಾಸಕ, ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಅವರು ಒಪ್ಪಿಕೊಂಡಿದ್ದಾರೆ. ಅದರ ಬಗ್ಗೆ ಕ್ರಮ ಇಲ್ಲ. ಸಂವಿಧಾನದ ಪ್ರತಿಯನ್ನು ಹಿಡಿದು ಮಾತನಾಡುವ ರಾಹುಲ್ ಗಾಂಧಿಯವರು ಈ ಹಗರಣಗಳ ಕುರಿತು ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆಡಳಿತವು ಭ್ರಷ್ಟಾಚಾರ, ಹಗರಣಗಳನ್ನು ಮಾಡಿದೆ. ಇದರ ವಿರುದ್ಧ ನಮಗೆ ರಾಜ್ಯದಲ್ಲಿ ಪ್ರತಿಭಟಿಸುವ ಹಕ್ಕೂ ಇಲ್ಲವೇ? ಎಂದು ಪ್ರಶ್ನಿಸಿದರು.

    \

    ಹೋರಾಟ ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ:
    ಸಿದ್ದರಾಮಯ್ಯನವರಿಗೆ ನಾಚಿಕೆ, ಮಾನ ಮರ್ಯಾದೆ ಇದೆಯೇ? 2023ರಲ್ಲಿ ಅವರೇ 8 ಕೋಟಿ ರೂ. ಎಂದು ಘೋಷಿಸಿ ಈಗ 62 ಕೋಟಿ ಕೇಳುತ್ತಿದ್ದಾರಲ್ಲವೇ? ಎಂದು ಪ್ರಹ್ಲಾದ್‌ ಜೋಶಿ ಅವರು ಪ್ರಶ್ನೆ ಮುಂದಿಟ್ಟರು. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರ ನೇತೃತ್ವದಲ್ಲಿ ಈ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುವವರೆಗೆ ಬಿಜೆಪಿ ವಿಶ್ರಮಿಸುವುದಿಲ್ಲ ಎಂದು ಪ್ರಕಟಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು

    1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರ ಸಂಬಂಧ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ಸಿಗರು ಕ್ಷಮೆ ಕೇಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಬಂಧನ, ಹೆದರಿಸುವ ಮತ್ತು ಬೆದರಿಸುವ ಕಾರ್ಯಕ್ಕೆ ಬಿಜೆಪಿ ಬಗ್ಗುವುದಿಲ್ಲ ಎಂದು ಅವರು ಹೇಳಿದರು. ರಾಜಕೀಯವಾಗಿ ಮಾತ್ರವಲ್ಲದೆ, ಅಗತ್ಯವಿದ್ದರೆ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಅವರು ತಿಳಿಸಿದರು.

  • ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಕೆಶಿ ಸ್ಪಷ್ಟನೆ

    ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಕೆಶಿ ಸ್ಪಷ್ಟನೆ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್‌ನಿಂದ (Congress) ಹೊಂದಾಣಿಕೆ ರಾಜಕಾರಣ ನಡೆದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಈ ಕುರಿತು ಮಾತನಾಡಿದ ಅವರು, ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ. ಎಲ್ಲವೂ ಸುಳ್ಳು. ರಾಜ್ಯದಲ್ಲಿ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ ಎಂದರು. ಇದನ್ನೂ ಓದಿ: ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿದೆ ಎನ್ನುವ ಕೆಲವು ನಾಯಕರ ಆರೋಪದ ಬಗ್ಗೆ ಮಾತನಾಡಿದ ಅವರು, ಚುನಾವಣೆ ಹೊತ್ತಿನಲ್ಲಿ ತಳಮಟ್ಟದ ಪರಿಸ್ಥಿತಿಯನ್ನು ಸರಿಯಾಗಿ ಅರಿಯಲು ಆಗಲಿಲ್ಲ. ಎಲ್ಲಾ ಕಾರ್ಯಕರ್ತರು ಒಟ್ಟಾಗಿ ದುಡಿದಿದ್ದಾರೆ. ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ. ಮುಂದಕ್ಕೆ ಇವರುಗಳು ಪಕ್ಷಕ್ಕೆ ದೊಡ್ಡ ಆಸ್ತಿಯಾಗಲಿದ್ದಾರೆ, ಬೆಳೆಯುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಬಹುಕೋಟಿ ಹಗರಣ ಕೇಸ್ – ಮಾಜಿ ಸಚಿವ ನಾಗೇಂದ್ರ ಬಂಧನ!

    ಎಲ್ಲಾ ಕಾರ್ಯಕರ್ತರು, ಮುಖಂಡರು, ಗೆದ್ದವರು, ಸೋತವರು ಎಲ್ಲರು ಸೇರಿ ಎಐಸಿಸಿ ಸತ್ಯಶೋದನಾ ಸಮಿತಿಗೆ ಪರಿಸ್ಥಿತಿ ಅರಿಯಲು ಅಹವಾಲು ಸಲ್ಲಿಸಿದ್ದೆವು. ಅದರಂತೆ ಎಲ್ಲರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಮುಂದಕ್ಕೆ ಯಾವ ರೀತಿ ಕಾರ್ಯನಿರ್ವಹಿಸಬೇಕು ಎನ್ನುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ‘ಕೈ’ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ – ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ

    ಮುಡಾ ಹಗರಣದ ವಿರುದ್ಧ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭಾ ಕಲಾಪ ಬರುತ್ತಿರುವ ಕಾರಣ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾಡಿರುವ ದರಿದ್ರವನ್ನು ಅವರೇ ಬಯಲು ಮಾಡುತ್ತಿದ್ದಾರೆ. ಇದಕ್ಕೆ ಸದನದಲ್ಲಿ ಏನು ಉತ್ತರ ಕೊಡಬೇಕೊ ಅದನ್ನು ಕೊಡುತ್ತೇವೆ ಎಂದರು. ಇದನ್ನೂ ಓದಿ: ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಸದ ಡಾ.ಮಂಜುನಾಥ್ ವಿರೋಧ – ಸಿಎಂಗೆ ಪತ್ರ

  • ಮುಡಾ ಅಕ್ರಮ: ಸಿಎಂ ರಾಜೀನಾಮೆ ಕೊಡುವವರೆಗೂ ಬಿಜೆಪಿಯಿಂದ ಹೋರಾಟ – ವಿಜಯೇಂದ್ರ

    ಮುಡಾ ಅಕ್ರಮ: ಸಿಎಂ ರಾಜೀನಾಮೆ ಕೊಡುವವರೆಗೂ ಬಿಜೆಪಿಯಿಂದ ಹೋರಾಟ – ವಿಜಯೇಂದ್ರ

    ಬೆಂಗಳೂರು: ಮೈಸೂರು ಮುಡಾ ಅಕ್ರಮದ (Muda Scam) ತನಿಖೆ ಸಿಬಿಐಗೆ ಕೊಡಬೇಕು. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah) ಕೂಡಲೇ ರಾಜೀನಾಮೆ ನೀಡಬೇಕು, ಅಲ್ಲಿಯವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B. Y. Vijayendra) ಎಚ್ಚರಿಕೆ ನೀಡಿದ್ದಾರೆ.

    ಮೈಸೂರು ಮುಡಾ ಹಗರಣ ಖಂಡಿಸಿ ಮೈಸೂರು ಚಲೋ ನಡೆಸಲು ಮುಂದಾದ ವೇಳೆ ಅವರು ಮಾತನಾಡಿದ್ದಾರೆ. ಈ ವೇಳೆ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಕಾವೇರಿ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಚರ್ಚೆ: ಡಿಕೆಶಿ

    ಸಾವಿರಾರು ಕೋಟಿಗೂ ಮೀರಿದ ಹಗರಣ:
    ಕಾಂಗ್ರೆಸ್ಸಿನ (Congress) ಪಾಪದ ಕೊಡ ತುಂಬಿದೆ. ದಲಿತರ ಹಣ ಲೂಟಿ ಮಾಡಿದ್ದೀರಿ ಅಲ್ಲದೇ ದಲಿತರು, ಬಡವರಿಗೆ ಮೀಸಲಿಟ್ಟ ನಿವೇಶನಗಳನ್ನು ಲಪಟಾಯಿಸಿದ್ದೀರಿ. ಇದನ್ನು ಸಿಬಿಐ ತನಿಖೆಗೆ ಕೊಡಬೇಕು. ಮುಡಾದಲ್ಲಿ ಸಾವಿರಾರು ಕೋಟಿಗೂ ಮೀರಿದ ದೊಡ್ಡ ಹಗರಣ ಬಯಲಾಗಿದೆ. ಇದರಿಂದ ಮುಖ್ಯಮಂತ್ರಿಗಳು ಆತಂಕಗೊಂಡಿದ್ದಾರೆ. ಮೈಸೂರಿನಲ್ಲಿ ಮುಡಾ ಎದುರು ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೆವು. ಆದರೆ ಸಿಎಂ ಆದೇಶದ ಮೇರೆಗೆ ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ನಡೆಸುತ್ತಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

    ಭ್ರಷ್ಟಾಚಾರ ಆಗಿಲ್ಲದಿದ್ದರೆ ಸಿಬಿಐ ತನಿಖೆಗೆ ಕೊಡಿ:
    ಮುಖ್ಯಮಂತ್ರಿಗಳು ಪ್ರಾಮಾಣಿಕರಾಗಿದ್ದರೆ, ಮುಡಾದಲ್ಲಿ ಭ್ರಷ್ಟಾಚಾರ ಆಗಿಲ್ಲ ಎನ್ನುವುದಾದರೆ, ಜಿಲ್ಲಾಧಿಕಾರಿಗಳ ವರದಿಯ ಬಳಿಕವೂ ಭ್ರಷ್ಟಾಚಾರ ಆಗಿಲ್ಲ ಎಂದರೆ ನಿಷ್ಪಕ್ಷಪಾತ ತನಿಖೆ ನಡೆಸಿ ಇದನ್ನು ಸಿಬಿಐ ತನಿಖೆಗೆ ಕೊಡಲಿ. ಯಾವುದೇ ಕ್ಷಣದಲ್ಲೂ ಸರ್ಕಾರ ಬೀಳಬಹುದು. ಸಿದ್ದರಾಮಯ್ಯರ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ. ತುಘಲಕ್ ದರ್ಬಾರ್ ಮಾಡಲು ಮುಂದಾಗಿದೆ. ಬಿಜೆಪಿಯ ಕಾರ್ಯಕರ್ತರು ಇದೆಲ್ಲದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

    ಬಿಜೆಪಿ ಹೋರಾಟ ಹತ್ತಿಕ್ಕುವುದು ಅಕ್ಷಮ್ಯ ಅಪರಾಧ. ಬೆಳಗ್ಗೆ 7 ಗಂಟೆಗೆ ನಮ್ಮ ಮುಖಂಡರನ್ನು ಬಂಧಿಸಿದ್ದಾರೆ. ನೈಸ್ ರಸ್ತೆ ಬಳಿ ನಮ್ಮ ಬ್ಯಾನರ್, ಬಾವುಟಗಳನ್ನು ಕಿತ್ತು ಬಿಸಾಕಿ, ಕಾರ್ಯಕರ್ತರಿಗೆ ಕೊಡಲು ತಂದ ತಿಂಡಿಯನ್ನೂ ಒದ್ದು ಬಿಸಾಕಿದ್ದಾರೆ ಎಂದು ಅವರು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

    ದಲಿತರ ಹಣ ದೋಚಿದ್ದಾರೆ:
    ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ವಾಲ್ಮೀಕಿ ನಿಗಮದ ಹಣವನ್ನು ದೋಚಿ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಬಳಸಿದೆ. ರಾಜ್ಯವನ್ನು ಕಾಂಗ್ರೆಸ್ ಎಟಿಎಂ ಆಗಿ ಪರಿವರ್ತನೆ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿಯವರಿಗೆ ದುಡ್ಡನ್ನು ಕರ್ನಾಟಕದಿಂದ ಕಳುಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಮುಡಾ ಹಗರಣ ಮೂಲಕ ತಮ್ಮ ಕುಟುಂಬಕ್ಕೆ ನಿವೇಶನ ಹಂಚಿಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪುಡಾರಿಗಳಿಗೆ ನಿವೇಶನ ನೀಡಿದ 5 ಸಾವಿರ ಕೋಟಿ ರೂ. ಹಗರಣ ಇದಾಗಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ ಎಂದು ಅವರು ಹೇಳಿದ್ದಾರೆ.

    ಈ ಹಗರಣಗಳ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಉತ್ತರ ನೀಡಬೇಕು. ಅಲ್ಲದೇ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆ ವಿಚಾರ – ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ

  • ಕಾವೇರಿ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಚರ್ಚೆ: ಡಿಕೆಶಿ

    ಕಾವೇರಿ ವಿಚಾರವಾಗಿ ಕಾನೂನು ತಜ್ಞರೊಂದಿಗೆ ಚರ್ಚೆ: ಡಿಕೆಶಿ

    – ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ

    ಬೆಂಗಳೂರು: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ಜುಲೈ 31ರ ವರೆಗೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಡಿಕೆಶಿ ಉತ್ತರಿಸಿದರು. ಇದನ್ನೂ ಓದಿ: ಬರ ಪರಿಹಾರ ಬಿಡುಗಡೆ ವಿಚಾರ – ಅಫಿಡವಿಟ್ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಕಾಲಾವಕಾಶ

    ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕೆಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡದ ಜೊತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇವೆ ಎಂದರು. ಇದನ್ನೂ ಓದಿ: ಪಂಚಭೂತಗಳಲ್ಲಿ ಲೀನರಾದ ನಿರೂಪಕಿ ಅಪರ್ಣಾ

    ಮುಡಾ ವಿಚಾರದಲ್ಲಿ ಬಿಜೆಪಿ ರಾಜಕೀಯ:
    ಮುಡಾ (MUDA) ಹಗರಣದ ಬಗ್ಗೆ ಬಿಜೆಪಿ (BJP) ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು – ಆದರೂ ಇಲ್ಲ ಬಿಡುಗಡೆ ಭಾಗ್ಯ

    ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್‌ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ ವಿಚಾರಣೆ ಅವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ

  • ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ

    ಸಿದ್ದರಾಮಯ್ಯ ರಾಜೀನಾಮೆ ನೀಡಿ, ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಲಿ: ವಿಜಯೇಂದ್ರ ಒತ್ತಾಯ

    ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಬ್ಬ ಹಿಂದುಳಿದ ನಾಯಕನನ್ನು ಸಿಎಂ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಆಗ್ರಹಿಸಿದರು.

    ಮುಡಾ ಭ್ರಷ್ಟಾಚಾರ ಹಾಗೂ ವಾಲ್ಮೀಕಿ ನಿಗಮ ಹಗರಣ ಕುರಿತು ಮಾತನಾಡಿದ ಅವರು, ಮುಡಾದಲ್ಲಿ ದೊಡ್ಡ ಭ್ರಷ್ಟಾಚಾರವಾಗಿದೆ. 4-5 ಸಾವಿರ ಕೋಟಿಯ ದೊಡ್ಡ ಹಗರಣ ಬಯಲಾಗಿದೆ. ಸಿಎಂ ಆತಂಕಕ್ಕೆ ಒಳಗಾಗಿದ್ದಾರೆ. ಬಿಜೆಪಿ ಮೈಸೂರು ಚಲೋ ಮಾಡ್ತಿದೆ. ಪ್ರತಿಭಟನೆ ಹತ್ತಿಕ್ಕಲು ಸಿಎಂ ಪ್ರಯತ್ನ ಮಾಡ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ. ಮೂಡಾದಲ್ಲಿ ಅಕ್ರಮ ಆಗಿಲ್ಲ ಅಂದರೆ ಸಿಬಿಐ ತನಿಖೆಗೆ ಕೊಡಿ. ನೀವು ಪ್ರಾಮಾಣಿಕವಾಗಿ ಇದ್ದರೆ ಸಿಬಿಐ ತನಿಖೆಗೆ ಕೊಡಿ. ನಿಮ್ಮ ಸರ್ಕಾರದ ಪಾಪದ ಕೊಡ ತುಂಬಿದೆ. ಯಾವುದೇ ಕ್ಷಣದಲ್ಲಿ ಸರ್ಕಾರ ಬೀಳಬಹುದು ಎಂದು ಕಿಡಿಕಾರಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

    ಸಿದ್ದರಾಮಯ್ಯ ಅವರಿಗಿಂತ ಅನೇಕ ಹಿಂದುಳಿದ ನಾಯಕರಿದ್ದಾರೆ. ಬಿ.ಕೆ.ಹರಿಪ್ರಸಾದ್ ಕೂಡ ಅವರಿಗಿಂತ ಹಿಂದುಳಿದವರಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಅನೇಕರು ಟವೆಲ್ ಹಾಕಿದ್ದಾರೆ. ಹಾಗಾಗಿ ಅದು ಬಿಕೆ ಮಾತಾ ಅಥವಾ ಡಿಕೆ ಮಾತಾ ಗೊತ್ತಿಲ್ಲ ಎಂದು ಸಿಎಂ ಹೇಳಿಕೆಯನ್ನು ಲೇವಡಿ ಮಾಡಿದರು.

    ಈಗಾಗಲೇ ನಾಗೇಂದ್ರ ಬಂಧನ ಆಗಿದೆ. ರಾಜ್ಯವು ಕಾಂಗ್ರೆಸ್‌ಗೆ ಎಟಿಎಂ ಆಗಿದೆ. ರಾಹುಲ್ ಗಾಂಧಿಗೆ ದುಡ್ಡು ಕಳುಸೋ ಕೆಲಸ ಇವರು ಮಾಡ್ತಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ದೊಡ್ಡ ಹಗರಣ ಆಗಿದೆ. ಸಿಎಂ ಇದಕ್ಕೆ ಉತ್ತರ ಕೊಡಬೇಕು. ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಸಿಬಿಐ ತನಿಖೆಗೆ ಕೊಡಿ. ಮುಡಾ ಕ್ಲೀನ್ ಮಾಡ್ತೀನಿ ಅಂತಾ ಸಿಎಂ ಹೇಳ್ತಿದ್ದಾರೆ. ಈಗ ಅವರಿಗೆ ಜ್ಞಾನೋದಯವಾಗಿದೆ. ತಮ್ಮ ಬಣ್ಣ ಬಯಲಾದ ಹಿನ್ನೆಲೆ ಈಗ ಮಾತಾಡ್ತಿದ್ದಾರೆ. ಎಸ್‌ಐಟಿ ಬೇಕಾಗಿಲ್ಲ, ಸಿಬಿಐಗೆ ಕೊಡಬೇಕು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ಇನ್ನೊಬ್ಬ ಹಿಂದುಳಿದ ನಾಯಕನನ್ನ ಸಿಎಂ ಮಾಡಿ. ಸಿಎಂ ಸಿದ್ದರಾಮಯ್ಯ ಮುಂದುವರಿಯಲು ನೈತಿಕತೆ ಇಲ್ಲ. ನಾನು ಸಿಎಂ ಸ್ಥಾನದಲ್ಲಿ ಇರೋದು ಕೆಲವರಿಗೆ ಆಗ್ತಿಲ್ಲ ಅಂತಾ ಅವರ ಪಕ್ಷದವರಿಗೆ ಹೇಳ್ತಿದ್ದಾರೆ. ಸಿದ್ದರಾಮಯ್ಯ ಇವತ್ತು ಎಕ್ಸ್ಪೋಸ್ ಆಗಿದ್ದಾರೆ. ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ಭಾಗಿಯಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ನನಗೇನೂ ಗೊತ್ತಿಲ್ಲ: ಇ.ಡಿ ವಶಕ್ಕೆ ಪಡೆದಾಗ ಶಾಸಕ ನಾಗೇಂದ್ರ ಪ್ರತಿಕ್ರಿಯೆ

    ವಾಲ್ಮೀಕಿ ಹಗರಣದಲ್ಲಿ ಬೇರೆ ರಾಜ್ಯಕ್ಕೆ ಹಣ ಹೋಗಿದೆ. ಡೆಲ್ಲಿ ಕಾಂಗ್ರೆಸ್‌ಗೆ ಕರ್ನಾಟಕ ಎಟಿಎಂ ಆಗಿದೆ. ವಾಲ್ಮೀಕಿ ಹಗರಣ ದೊಡ್ಡದಾಗಿದೆ. ಮುಡಾ ಹಗರಣ ಯಾವುದೇ ತಡ ಮಾಡದೇ ಸಿಬಿಐಗೆ ವಹಿಸಬೇಕು. ಸಿದ್ದರಾಮಯ್ಯ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

    ಈ ದೇಶದಲ್ಲಿ ನನ್ನ ಕುಟುಂಬಕ್ಕೆ 62 ಕೋಟಿ ಅನ್ಯಾಯ ಆಗಿದೆ ಅಂತಾ ಜನರ ದುಡ್ಡು ಲೂಟಿ ಹೊಡೆಯುತ್ತಿರೋ ಏಕೈಕ ಸಿಎಂ ಸಿದ್ದರಾಮಯ್ಯ. ಡಿಸಿ ಅವರು ಸ್ಪಷ್ಟವಾಗಿ ಅಕ್ರಮ ಆಗಿರೋ ಬಗ್ಗೆ ವರದಿ ಕೊಟ್ಟಿದ್ದಾರೆ. ಒಂದು ಕ್ಷಣದಲ್ಲಿ ಸಿಎಂ ಆ ಸ್ಥಾನದಲ್ಲಿ ಕುಳಿತುಕೊಳ್ಳುವ ನೈತಿಕತೆ ಇಲ್ಲ. ಸಿಎಂ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡ್ತಿದ್ದೀರಾ? ನಮ್ಮ ಶಾಸಕರು, ಕಾರ್ಯಕರ್ತರನ್ನು ಅರೆಸ್ಟ್ ಮಾಡ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಇದ್ದ ತಿಂಡಿ ಬಿಸಾಕಿದ್ದಾರೆ. ಬಿಜೆಪಿ ಕೈ ಕಟ್ಟಿ ಕುಳಿತುಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.

  • ಇಡಿ, ಸಿಬಿಐ, ಚುನಾವಣಾ ಆಯೋಗವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ತಿದೆ: ಈಶ್ವರ್ ಖಂಡ್ರೆ

    ಇಡಿ, ಸಿಬಿಐ, ಚುನಾವಣಾ ಆಯೋಗವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ತಿದೆ: ಈಶ್ವರ್ ಖಂಡ್ರೆ

    ಬೀದರ್: ಇಡಿ, ಸಿಬಿಐ ಹಾಗೂ ಚುನಾವಣಾ ಆಯೋಗ ಸೇರಿದಂತೆ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ (BJP) ದುರುಪಯೋಗ ಮಾಡಿಕೊಳ್ಳತ್ತಿದೆ ಎಂದು ಇಡೀ ದೇಶವೇ ಮಾತಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ  (Eshwara Khandre) ಹೇಳಿದ್ದಾರೆ.

    ಬೀದರ್‌ನಲ್ಲಿ (Bidar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ (Valmiki corporation scam) ಸಂಬಂಧ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ಹೇಳುತ್ತಿದೆ. ನಮ್ಮ ಪೊಲೀಸರು ಸಮರ್ಥರಿಲ್ವಾ? ನಮ್ಮ ಪೊಲೀಸರು ಈ ಪ್ರಕರಣವನ್ನು ತನಿಖೆ ಮಾಡತ್ತಾರೆ. ನಮ್ಮ ಪೊಲೀಸರ ಬಗ್ಗೆ ನಮಗೆ ನಂಬಿಕೆ ಇದೆ. ಬಿಜೆಪಿ ಸರ್ಕಾರ ಇದ್ದಾಗ ನಾವು ಅನೇಕ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದಿದ್ದೆವು ಆಗ ಅವರು ಕೊಟ್ರಾ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗೆ ಪರಿಶಿಷ್ಟರ ಹಣ ಬಳಕೆ – ಮಧ್ಯಪ್ರವೇಶ ಮಾಡಿ ವರದಿ ಕೇಳಿದ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ

    ಪ್ರಕರಣದ ತನಿಖೆಯಲ್ಲಿ ಸರ್ಕಾರದ ಯಾವುದೇ ಒತ್ತಡ ಹಾಗೂ ಹಸ್ತಕ್ಷೇಪ ಮಾಡಿಲ್ಲ. ತನಿಖೆಯ ಬಳಿಕ ಸತ್ಯ ಹೊರಗೆ ಬರಲಿದೆ. ಪಾರದರ್ಶಕವಾಗಿ ತನಿಖೆಯಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮವಾಗಲಿದೆ. ಈ ಪ್ರಕರಣಕ್ಕೆ ರಾಜಕೀಯ ಲೇಪನ ಮಾಡುವುದು ಬೇಡ ಎಂದು ಅವರು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.

    ಮುಡಾ ಅಕ್ರಮ ಪ್ರಕರಣದಲ್ಲಿ (MUDA Scam) ಸಿಎಂ ವಿರುದ್ಧ ಎಫ್‍ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ, ಇದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಬಿಜೆಪಿ ರಾಜಕೀಯ ದುರುದ್ದೇಶದಿಂದ ಈ ರೀತಿ ಅಪಪ್ರಚಾರ ಮಾಡುತ್ತಿದೆ. ಇದನ್ನೂ ನಾವು ಸಹಿಸುವುದಿಲ್ಲ. ಸುಳ್ಳನ್ನು ನೂರು ಸರಿ ಹೇಳಿದರೂ ಅದು ಸತ್ಯವಾಗಲು ಸಾದ್ಯವಿಲ್ಲ. ಚುನಾವಣೆಯ ಸೋಲಿನಿಂದಾಗಿ ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

    ದೇವದುರ್ಗದಲ್ಲಿ ಜನ ಚಿರತೆಯನ್ನು ಹೊಡೆದು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನ ಆತಂಕದಿಂದ ಹೀಗೆ ಮಾಡಿದ್ದಾರೆ. ಜನರಿಗೆ ಜಾಗೃತಿ ಬೇಕು. ಈ ಪ್ರಕರಣದಲ್ಲಿ ಯಾವ ಅಧಿಕಾರಿಗಳಿಗೂ ನಾವು ಕ್ಲೀನ್ ಚಿಟ್ ಕೊಟ್ಟಿಲ್ಲ. ತನಿಖಾ ವರದಿ ಬಂದ ನಂತರ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: SSLC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ.31.02 ವಿದ್ಯಾರ್ಥಿಗಳು ಪಾಸ್‌

  • MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

    MUDA Scam | ಸರ್ಕಾರದ ವಿರುದ್ಧ ಸಮರ ಸಾರಿದ ವಿಜಯೇಂದ್ರ – ಶುಕ್ರವಾರ ಮೈಸೂರಲ್ಲಿ ಬೃಹತ್‌ ಪ್ರತಿಭಟನೆಗೆ ಕರೆ!

    – ಬಡ ಹೆಣ್ಮಕ್ಕಳಿಗೆ 2,000 ಕೊಟ್ಟು, ತಮ್ಮ ಪತ್ನಿಗೆ 2 ಕೋಟಿಗೂ ಅಧಿಕ ಮೌಲ್ಯದ ನಿವೇಶನ ಕೊಟ್ಟಿದ್ದಾರೆ
    – ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು – ವಿಜಯೇಂದ್ರ ಆಗ್ರಹ

    ಬೆಂಗಳೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಬೆಂಗಳೂರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮನಬಂದಂತೆ ನಿವೇಶನ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಈ ಹಗರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಜು.12ರಂದು ನಾನು, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ್, ಬಿಜೆಪಿ ಶಾಸಕರು, ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

    ಮುಖ್ಯಮಂತ್ರಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಬಡವರಿಗೆ ನಿವೇಶನ ಹಂಚಬೇಕು. ಈಗಾಗಲೇ ನಡೆದ ನಿವೇಶನ ಹಂಚಿಕೆಯನ್ನು ರದ್ದು ಮಾಡಬೇಕು. ಸಿಎಂ, ಅವರ ಪತ್ನಿ ಮೇಲೆ ಆರೋಪ ಇರುವ ಕಾರಣ ಮತ್ತೊಂದು ಎಸ್‍ಐಟಿ ಮಾಡಿ ತನಿಖೆ ನಡೆಸುವುದು ಸೂಕ್ತವಲ್ಲ. ಈ ಬಾರಿ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

    ಶಾಸಕರು, ಸಿಎಂ ಪರಮಾಪ್ತರು ಬುಧವಾರ ಪ್ರೆಸ್‌ಮೀಟ್‌ ಮಾಡಿದ್ದಾರೆ. 1992ರಲ್ಲಿ ಭೂ ವಶಕ್ಕೆ ಪಡೆಯುವ ಕೆಲಸ ಶುರುವಾಗಿದೆ. 2004ರಲ್ಲಿ ಪಾರ್ವತಮ್ಮ ಅವರ ಅಣ್ಣ ಜಮೀನು ಖರೀದಿ ಮಾಡಿದ್ದಾರೆ. ಮೂಡಾ ಸ್ವಾಧೀನದಲ್ಲಿದ್ದ ಜಾಗವನ್ನು ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿ ಮಾಡಿದ್ದು ಹೇಗೆ? 2009 – 10ರಲ್ಲಿ ಗಿಫ್ಟ್ ಡೀಡ್ ಆದಾಗಲೂ ಸಹ ಈ ಜಾಗವು ಮೂಡಾ ಆರ್‌ಟಿಸಿಯಲ್ಲಿ ನಮೂದಾಗಿತ್ತು. ಭೂಮಿ ಖರೀದಿ ಆಗಿ ಕನ್ವರ್ಷನ್ ಆಗಿತ್ತು. ಗಿಫ್ಟ್ ಡೀಡ್ ಎಂದು ಮಾಹಿತಿ ಕೊಡುವಾಗಲೂ ಅದು ಕೃಷಿ ಭೂಮಿ ಆಗಿರಲಿಲ್ಲ. ಇದು ಕೂಡ ತಪ್ಪು ಮಾಹಿತಿ ಎಂದು ವಿಜಯೇಂದ್ರ ಮಾಹಿತಿ ನೀಡಿದರು.

    2 ನಿವೇಶನಕ್ಕೆ ಅರ್ಹತೆ – 14 ನಿವೇಶನ ಹಂಚಿಕೆ:
    2022ರ ಜನವರಿ 12ರಂದು ಕ್ರಯಪತ್ರ ಆಗಿದ್ದು, ಇದರಲ್ಲಿ ಗಮನಿಸಬೇಕಾದ ಅಂಶ ಏನೆಂದರೆ ಮೂಡಾ ಪ್ರೋತ್ಸಾಹದಾಯಕ ಯೋಜನೆಯಡಿಯಲ್ಲಿ ನಿಯಮಗಳು 1991ರ ಮೇರೆಗೆ ಎಂದು ಉಲ್ಲೇಖಿಸಿ 14 ಸೈಟ್ ಕೊಟ್ಟಿದ್ದಾರೆ. ಇದು ಕ್ರಯಪತ್ರದಲ್ಲಿ ಉಲ್ಲೇಖವಾಗಿದೆ. ಆದರೆ, 1991ರ ಕಾನೂನು ಪ್ರಕಾರ ಅವರಿಗೆ 1 ಎಕರೆ ಮೀರಿದ ಜಮೀನಾದರೆ 40-60 ಒಂದೇ ನಿವೇಶನ ಕೊಡಬೇಕು. 3ರಿಂದ 4 ಎಕರೆ ಆಗಿದ್ದರೆ 4,800 ಅಡಿಯ ನಿವೇಶನ (40-60ರ 2 ನಿವೇಶನ) ಕೊಡಬೇಕಿತ್ತು. ಮುಖ್ಯಮಂತ್ರಿಯವರ ಧರ್ಮಪತ್ನಿ ಪಾರ್ವತಮ್ಮ ಅವರಿಗೆ 2 ನಿವೇಶನ ಮಾತ್ರ ಕೊಡಬೇಕಿತ್ತು. 2 ನಿವೇಶನದ ಬದಲು 14 ನಿವೇಶನ ಕೊಟ್ಟಿದ್ದು, ಇದು ಸಂಪೂರ್ಣ ಕಾನೂನುಬಾಹಿರ ಎಂದು ವಿಜಯೇಂದ್ರ ಅವರು ವಿಜಯೇಂದ್ರ ಆಕ್ಷೇಪಿಸಿದರು.

    ಮೈಸೂರಿನದ್ದು ಲ್ಯಾಂಡ್ ಸ್ಕ್ಯಾಮ್:
    ಮುಡಾ ಪ್ರಾಧಿಕಾರದ ಭೂಮಿ ಸಂಬಂಧ ದೊಡ್ಡ ಹಗರಣ ಅಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಅನೇಕ ತಪ್ಪು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿಗಳ ಮುಖವಾಡ ಕಳಚಿಬಿದ್ದಿದೆ. ಹೇಗಾದರೂ ಬೆಲೆಬಾಳುವ ನಿವೇಶನ ಕಬಳಿಸಬೇಕು ಎಂದುಕೊಂಡು ನಿಯಮ ಗಾಳಿಗೆ ತೂರಿ ಅಕ್ರಮ ನಡೆಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳು ಜನತೆಗೆ ಉತ್ತರಿಸಬೇಕು. ಈ ಹಗರಣಕ್ಕೆ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ಮಹದೇವಪ್ಪನವರೇ ನಿನ್ನ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದ ಸಿಎಂ, ಬಡ ಹೆಣ್ಮಕ್ಕಳಿಗೆ 2 ಸಾವಿರ ಕೊಟ್ಟರೆ, ತಮ್ಮ ಪತ್ನಿಗೆ 2 ಕೋಟಿಗೂ ಹೆಚ್ಚು ಮೌಲ್ಯದ 14 ನಿವೇಶನಗಳನ್ನು ಪಡೆದಿದ್ದಾರೆ. 63-64 ಕೋಟಿಗೂ ಹೆಚ್ಚು ಬೆಲೆಯ ನಿವೇಶನ ಪಡೆದುದನ್ನು ರಾಜ್ಯದ ಜನರೂ ಪ್ರಶ್ನೆ ಮಾಡುತ್ತಿದ್ದಾರೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಳೆಯಿಂದ ಜೀವಕಳೆ, ಕಬಿನಿ ಡ್ಯಾಂ ಭರ್ತಿಗೆ ಎರಡೇ ಅಡಿ ಬಾಕಿ – ಯಾವ್ಯಾವ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ?

    ಅವ್ಯವಹರಿಸಿ ಪರಿಹಾರ ಕೇಳಿದ ಮೊದಲ ಸಿಎಂ ಇವರೇ:
    ತಮ್ಮ ಅವಧಿಯಲ್ಲಿ ಅವ್ಯವಹಾರ ನಡೆಸಿ, ತಾವೇ ಪರಿಹಾರ ಕೇಳಿರುವ ಮೊದಲ ಮುಖ್ಯಮಂತ್ರಿ ಇವರು. ಮೈಸೂರಿನ ಕೆಸರೇ ಗ್ರಾಮದ 3.16 ಎಕರೆ ಜಮೀನಿಗೆ ಬದಲಾಗಿ ತಮ್ಮ ಪತ್ನಿಗೆ 14 ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ. ಅದರ ಬೆಲೆ 62 ಕೋಟಿ ರೂ. ಬರಬೇಕಿದ್ದು, 18 ಕೋಟಿಯ ನಿವೇಶನ ಪಡೆದುದ್ದಾಗಿ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿಗಳು 2013ರ ಚುನಾವಣಾ ಅಫಿಡವಿಟ್‍ನಲ್ಲಿ 3.16 ಎಕರೆ ಭೂಮಿಯನ್ನು ಉಲ್ಲೇಖಿಸಿಲ್ಲ. ಇದು ಚುನಾವಣೆ ನಿಯಮಗಳ ಉಲ್ಲಂಘನೆ. ಇದೆಲ್ಲವನ್ನೂ ಪರಿಶೀಲಿಸಿ ಚುನಾವಣಾ ಆಯೋಗಕ್ಕೆ ದೂರು ಕೊಡುವ ಕುರಿತು ನಿರ್ಧರಿಸುತ್ತೇವೆ ಎಂದು ಬಿ.ವೈ ವಿಜಯೇಂದ್ರ ಅವರು ತಿಳಿಸಿದರು.

    18 ಕೋಟಿ ರೂ. ನಿವೇಶನ ಲಭಿಸಿದೆ. ಆದರೆ, 62 ಕೋಟಿ ರೂ. ಮೌಲ್ಯದ ನಿವೇಶನಗಳು ಸಿಗಬೇಕಿತ್ತು ಎಂದು ತಪ್ಪು ಮಾಹಿತಿ ಕೊಟ್ಟಿದ್ದಾರೆ. ಮೂಡಾ ಹಗರಣದಲ್ಲಿ 2 ಪ್ರಕರಣಗಳಿವೆ. ಸಿಎಂ ಧರ್ಮಪತ್ನಿಗೆ ಕೊಟ್ಟ 14 ನಿವೇಶನಗಳದ್ದು ಒಂದು ಪ್ರಕರಣ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಓಡೋಡಿ ತರಾತುರಿಯಲ್ಲಿ ಮೈಸೂರಿಗೆ ಹೋಗಿ ಮುಡಾ ಅಧಿಕಾರಿಗಳ ಸಭೆ ನಡೆಸಿದ್ದರು. ಸಭೆಯಲ್ಲಿ ಮಾಹಿತಿ ಪಡೆದು ಎಲ್ಲ ಅಧಿಕಾರಿಗಳನ್ನೂ ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದರು.

    ಇದು ಅತಿದೊಡ್ಡ ಭ್ರಷ್ಟಾಚಾರ ಹಗರಣ:
    5 ಸಾವಿರ ಕೋಟಿ ರೂ.ಗಿಂತಲೂ ಹೆಚ್ಚು ಮೌಲ್ಯದ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ. ಹಗರಣದಲ್ಲಿ ಭಾಗಿಯಾದವರನ್ನು ಶಿಕ್ಷಿಸುವುದನ್ನು ತಪ್ಪಿಸಲು ಹಾಗೂ ರಕ್ಷಿಸಲು ಭೈರತಿ ಸುರೇಶ್ ಮುಂದಾಗಿದ್ದಾರೆ. ಮೂಡಾ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಿ ವರದಿ ಕೊಟ್ಟ ಜಿಲ್ಲಾಧಿಕಾರಿಯನ್ನೂ ತರಾತುರಿಯಲ್ಲಿ ವರ್ಗಾವಣೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಭೈರತಿ ಸುರೇಶ್ ಅವರು ಈ ಹಗರಣ ಮುಚ್ಚಿ ಹಾಕಲು ಎಲ್ಲ ಕಡತಗಳನ್ನು ಬೆಂಗಳೂರಿಗೆ ಒಯ್ದಿದ್ದಾರೆ. ಹಗರಣ ಮುಚ್ಚಿ ಹಾಕುವ ಕೆಲಸ ನಡೆಯುತ್ತಲೇ ಇದೆ. ಸಿಎಂ ಕೂಡ ಮೈಸೂರು ಜಿಲ್ಲೆಯವರು. ಅತಿ ದೊಡ್ಡ ಭ್ರಷ್ಟಾಚಾರ ಹಗರಣವಿದು. ಎಲ್ಲ ಕಡತ ಮುಚ್ಚಿಡಲು ಭೈರತಿ ಸುರೇಶ್ ಮುಂದಾಗಿದ್ದಾರೆ ಎಂದ ಅವರು, ದೇವನೂರು ಜಮೀನಿನ ಬೆಲೆ ಬಗ್ಗೆ ಸಿಎಂ ಮಾತನಾಡುತ್ತಾರೆ. ಗೈಡ್‍ಲೈನ್ ಮೌಲ್ಯ 1,300 ರೂ. ಇದ್ದರೆ 9 ಸಾವಿರ ಮಾರುಕಟ್ಟೆ ಮೌಲ್ಯ ಇದೆ. 2 ಸೈಟಿಗೆ ಮಾತ್ರ ಅವರು ಅರ್ಹರಾಗಿದ್ದರು ಎಂದು ಪುನರುಚ್ಚರಿಸಿದರು.

    ಮೂಡಾ ಅವ್ಯವಹಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗಳ ವರದಿಯ ಬಳಿಕವೂ 15-6-2024ರಲ್ಲಿ ಸುಮಾರು 42 ಸೈಟ್‍ಗಳನ್ನು ಒಬ್ಬರಿಗೆ ಬದಲಿಯಾಗಿ ಕೊಟ್ಟಿದ್ದಾರೆ. ಇಂಥ ಸಾವಿರಾರು ನಿವೇಶನಗಳನ್ನು ಈ ಸರ್ಕಾರ ಕಾನೂನುಬಾಹಿರವಾಗಿ ಕೊಟ್ಟಿದೆ. ಬಡವರು, ದಲಿತರು, ಪರಿಶಿಷ್ಟ ಸಮುದಾಯಕ್ಕೆ ಮೀಸಲಿಟ್ಟ ನಿವೇಶನಗಳನ್ನು ತಮಗೆ ಬೇಕಾದಂತೆ ಹಂಚಿದ್ದಾರೆ. ಸಿಬಿಐ ತನಿಖೆ ಮಾತ್ರವಲ್ಲದೇ ಮುಖ್ಯಮಂತ್ರಿಗಳು ತಮ್ಮ ಹುದ್ದೆಗೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರಲ್ಲದೇ ಸದನದಲ್ಲೂ ಈ ವಿಚಾರ ಕೈಗೆತ್ತಿಕೊಳ್ಳುತ್ತೇವೆ. ಸದನದ ಹೊರಗೆ ಕೂಡ ಈ ಸಂಬಂಧ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ತಿಳಿಸಿದರು.

    ವಾಲ್ಮೀಕಿ ನಿಗಮದ ಹಗರಣ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ದಲಿತರಿಗೆ ಮೀಸಲಿಟ್ಟ ಹಣವನ್ನು ಚುನಾವಣೆಗೆ ಬಳಸಿಕೊಂಡಿದ್ದಾರೆ. ದದ್ದಲ್, ನಾಗೇಂದ್ರರನ್ನು ಎಸ್‍ಐಟಿ ತನಿಖೆಗೆ ಕರೆಯಲು ಬಿಜೆಪಿ ಪ್ರತಿಭಟನೆಯೇ ಕಾರಣ. ಆದರೂ, ಇದು ತಿಪ್ಪೆ ಸಾರಿಸುವ ಕೆಲಸ. ಇಡಿ ಇವತ್ತು ದಾಳಿ ಮಾಡಿದ್ದನ್ನು ನಾವು ಸ್ವಾಗತಿಸುತ್ತೇವೆ. ಎಸ್‍ಐಟಿ ನಿಧಾನವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರವು ಸಚಿವರು, ಶಾಸಕರನ್ನು ರಕ್ಷಿಸಲು ಮುಂದಾಗಿತ್ತು ಎಂದು ದೂರಿದರು.

    ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪತ್ರದ ಬಳಿಕ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ. ಒಂದೆಡೆ ಎಸ್‍ಐಟಿ ತನಿಖೆ ನಡೆದರೆ, ಇಡಿ ದಾಳಿಯೂ ಆಗಿದೆ. ಇತಿಹಾಸದಲ್ಲಿ ಕಂಡು ಕೇಳರಿಯದ ಹಗರಣ ಇದಾಗಿದೆ. ದಲಿತರಿಗೆ ಮೀಸಲಿಟ್ಟ ಹಣವನ್ನು ದುರುಪಯೋಗ ಮಾಡಿ, ಹೊರರಾಜ್ಯಕ್ಕೆ ವರ್ಗಾವಣೆ ಮಾಡಿ, ಚುನಾವಣೆಗಳಿಗೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. ಇದನ್ನೂ ಓದಿ: ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊರ್ವಶಿ ರೌಟೇಲಾಗೆ ಏಟು- ಆಸ್ಪತ್ರೆಗೆ ದಾಖಲು 

  • ಕಾನೂನುಬದ್ಧವಾಗಿಯೇ ಮುಡಾ ಬದಲಿ ಸೈಟ್‌ ಪಡೆಯಲಾಗಿದೆ – ಹೈಕಮಾಂಡ್‌ಗೆ ಸಿಎಂ ವರದಿ!

    ಕಾನೂನುಬದ್ಧವಾಗಿಯೇ ಮುಡಾ ಬದಲಿ ಸೈಟ್‌ ಪಡೆಯಲಾಗಿದೆ – ಹೈಕಮಾಂಡ್‌ಗೆ ಸಿಎಂ ವರದಿ!

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಸೈಟು (MUDA Site) ಹಂಚಿಕೆ ಹಗರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ತಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಸಿಎಂ ಸಿದ್ದರಾಮಯ್ಯ (Siddaramaiah) ವರದಿ ನೀಡಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಮುಡಾ ಸೈಟು ಹಂಚಿಕೆಯಲ್ಲಿ ಅಕ್ರಮವಾಗಿಲ್ಲ. ಕಾನೂನುಬದ್ಧವಾಗಿ ಸೈಟು ಪಡೆಯಲಾಗಿದೆ ಎಂದು ಸಿದ್ದರಾಮಯ್ಯ ವರದಿ ನೀಡಿದ್ದಾರೆ. ಈ ಬೆನ್ನಲ್ಲೇ ಮೈಸೂರಲ್ಲಿ (Mysuru) ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಆಪ್ತ, ಮುಡಾ ಅಧ್ಯಕ್ಷ ಕೆ.ಮರೀಗೌಡ ಮತ್ತು ಕಾಂಗ್ರೆಸ್ ಶಾಸಕರು ಹಲವು ವಿಚಾರ ಬಯಲು ಮಾಡಿದ್ರು.

    ಸಿಎಂ ಪುತ್ರ ಯತೀಂದ್ರ ಬಗ್ಗೆ ಆರೋಪ ಮಾಡಿದ್ದ ಎಂಎಲ್‌ಸಿ ಹೆಚ್ ವಿಶ್ವನಾಥ್ ಕೂಡ ಪತ್ನಿ ಹೆಸರಲ್ಲಿ ಬದಲಿ ನಿವೇಶನ ಪಡೆದಿದ್ದಾರೆ ಎಂದು ಮುಡಾ ಅಧ್ಯಕ್ಷ ಮರೀಗೌಡ ಆರೋಪಿಸಿದರಲ್ಲದೇ ರಾಜಕೀಯವಾಗಿ ದಿವಾಳಿಯಾಗಿರುವ ಹೆಚ್‌. ವಿಶ್ವನಾಥ್ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: Karnataka Rain Alert: ಬೆಂಗ್ಳೂರಲ್ಲಿ ಬಿಟ್ಟೂಬಿಡದ ಮಳೆ – ಬೋಟ್‌ಗಳಲ್ಲಿ ಜನ, ಸಾಕುಪ್ರಾಣಿಗಳ ರಕ್ಷಣೆ; ಎಲ್ಲೆಲ್ಲಿ ಏನಾಯ್ತು?

    ಇದೇ ವೇಳೆ, ಸಿಎಂ ಆಪ್ತ ಪಾಪಣ್ಣಗೆ ಹಂಚಲಾಗಿದ್ದ ಬದಲಿ ನಿವೇಶನ ಹಂಚಿಕೆಗೆ ತಡೆ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮರೀಗೌಡ, ಹಂಚಿಕೆ ವೇಳೆ ತಪ್ಪಾಗಿದೆ. ಇದು ಗೊತ್ತಾದ ಕೂಡಲೇ ತಡೆ ಹಿಡಿದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಮುಡಾ ಹಗರಣ ಮುಚ್ಚಿ ಹಾಕಲು ಸರ್ಕಾರ ಯತ್ನಿಸ್ತಿಲ್ಲ, ಎಸ್‌ಐಟಿಗೆ ತನಿಖೆ ವಹಿಸುವ ಅಗತ್ಯವೇ ಇಲ್ಲ ಎಂದು ವಿಪಕ್ಷಗಳಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ – ನಾಲ್ವರು ಸೈನಿಕರು ಹುತಾತ್ಮ!

  • ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಫೋಟಕ ಮಾಹಿತಿ ಲಭ್ಯ!

    ಮುಡಾ ಹಗರಣ – ಸರ್ಕಾರಕ್ಕೆ 1,000 ಕೋಟಿಗೂ ಹೆಚ್ಚು ಆರ್ಥಿಕ ನಷ್ಟ; ಸ್ಫೋಟಕ ಮಾಹಿತಿ ಲಭ್ಯ!

    – ಹಗರಣ ಕುರಿತು ರಾಜ್ಯಪಾಲರು, ಹೈಕೋರ್ಟ್‌ ನ್ಯಾಯಾಧೀಶರಿಗೆ ಪತ್ರ: ಬಿಜೆಪಿ ಶಾಸಕ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಮಾಹಿತಿ ಲಭ್ಯವಾಗಿದೆ. 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಲಾಗಿದೆ. ಇದರಿಂದ ಮುಡಾಗೆ 1,000 ಕೋಟಿ ರೂ.ಗಿಂತಲೂ ಹೆಚ್ಚು ಆರ್ಥಿಕ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

    ಮೈಸೂರಿನ ನಿರ್ಗಮಿತ ಡಿಸಿ ಡಾ.ಕೆ.ವಿ.ರಾಜೇಂದ್ರ ಮುಡಾ ಹಗರಣದ ಬಗ್ಗೆ ಕಳೆದ ನವೆಂಬರ್‌ನಲ್ಲೇ ರಾಜ್ಯ ಸರ್ಕಾರಕ್ಕೆ ಬರೆದಿದ್ದ ಪತ್ರ ಈಗ ಬೆಳಕಿಗೆ ಬಂದಿದೆ. ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಿರುವುದರಿಂದ ಸರ್ಕಾರಕ್ಕೆ 1,000 ಕೋಟಿ ರೂ. ಗಿಂತಲೂ ಹೆಚ್ಚು ಆರ್ಥಿಕ ನಷ್ಟವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: T20 ಏಷ್ಯಾಕಪ್‌ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟ – ಕನ್ನಡತಿ ಶ್ರೇಯಾಂಕಾಗೆ ಸ್ಥಾನ!

    ಪತ್ರದಲ್ಲಿ ಏನಿದೆ?
    ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಬರೆದ ಸುಧೀರ್ಘ ಪತ್ರದಲ್ಲಿ `ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ಪ್ರಕರಣಗಳಲ್ಲಿ ಭೂ ಮಾಲೀಕರಿಗೆ ಪರಿಹಾರ ನೀಡಿಲ್ಲವೆಂದು, ಬದಲಿಯಾಗಿ ಅಭಿವೃದ್ಧಿ ಹೊಂದಿದ ಜಾಗದಲ್ಲಿ ಬೆಲೆಬಾಳುವ ಆಸ್ತಿಗಳನ್ನು ನೀಡಲಾಗಿದೆ. ನಿಯಮ ಬಾಹಿರವಾಗಿ 50:50 ಅನುಪಾತದಲ್ಲಿ ಕಾನೂನು ಬಾಹಿರವಾಗಿ ಸೈಟು ಹಂಚಿಕೆ ಮಾಡಲಾಗಿದೆ. ಇದರಿಂದ ಪ್ರಾಧಿಕಾರಕ್ಕೆ ಹಾಗೂ ಸರ್ಕಾರಕ್ಕೆ ಸುಮಾರು 1,000 ಕೋಟಿ ರೂ.ಗಿಂತಲೂ ಹೆಚ್ಚು ಆರ್ಥಿಕ ನಷ್ಟವುಂಟಾಗಿದೆ. ಪ್ರಾಧಿಕಾರದ ಹಿಂದಿನ ಅಧ್ಯಕ್ಷರಾದ ಹೆಚ್.ವಿ ರಾಜೀವ್, ಯಶಸ್ವಿನಿ ಸೋಮಶೇಖರ್, ಹಿಂದಿನ ಆಯುಕ್ತರಾದ ಡಿ.ಬಿ ನಟೇಶ್, ಹಾಲಿ ಆಯುಕ್ತರಾದ ಜಿ.ಟಿ ದಿನೇಶ್ ಕುಮಾರ್, ವಿಶೇಷ ಭೂಸ್ವಾಧೀನಾಧಿಕಾರಿಗಳಾದ ಹರ್ಷವರ್ಧನ್, ವಿಷ್ಣುವರ್ಧನ ರೆಡ್ಡಿ ಮತ್ತು ಸಂಭಂಧ ಪಟ್ಟ ವಿಶೇಷ ತಹಶೀಲ್ದಾರರು ಬೇನಾಮಿ ಆಸ್ತಿ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

    ರಾಜ್ಯಪಾಲರು, ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ:
    ಮುಡಾ ಹಗರಣದ ಕುರಿತು ಬಿಜೆಪಿ ಶಾಸಕ ಶ್ರೀವತ್ಸ ಅವರು ರಾಜ್ಯಪಾಲರಿಗೆ ಹಾಗೂ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಸಾವಿರಾರು ಕೋಟಿ ಹಗರಣ ನಡೆದಿದೆ. ಕೂಡಲೇ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ತನಿಖೆ ಮಾಡುವಂತೆ ಪತ್ರ ಬರೆದು ಒತ್ತಾಯಿಸುತ್ತೇನೆ. ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಆಗ್ರಹಿಸುತ್ತೇನೆ. ಪತ್ರದೊಂದಿಗೆ ಹಗರಣಕ್ಕೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನೂ ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಳಪೆ ಬ್ಯಾಟಿಂಗ್‌ಗೆ ಬೆಲೆತೆತ್ತ ʻಯಂಗ್‌ ಇಂಡಿಯಾʼ – ಜಿಂಬಾಬ್ವೆಗೆ 13 ರನ್‌ಗಳ ರೋಚಕ ಗೆಲುವು!

    ಪ್ರಹ್ಲಾದ್ ಜೋಶಿ ಆರೋಪ:
    ಮುಡಾ ನಿವೇಶನ ಹಗರಣ ರಾಜಕಿಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಬಿಜೆಪಿ ಹೈಕಮಾಂಡ್ ಕೂಡ ಅಖಾಡಕ್ಕಿಳಿದಿದೆ. ಬಿಜೆಪಿ ಅವಧಿಯಲ್ಲಿ ಏನೆಲ್ಲಾ ಆಗಿತ್ತು? ಎಷ್ಟು ನಿವೇಶನ ಹಂಚಲಾಗಿದೆ. ಮಾಹಿತಿ ಕೊಡಿ ಎಂದು ಕೇಳಿದೆ. ಇನ್ನು, ಸಿಎಂ ಮತ್ತು ಅವರ ಪುತ್ರನ ಅನುಮತಿ ಇಲ್ಲದೇ ಇದೆಲ್ಲಾ ನಡೆಯಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ಇದನ್ನೂ ಓದಿ: ಅಂದುಕೊಂಡಷ್ಟು ಮಳೆಯಾಗಿಲ್ಲ, ಕೃಷಿಗೆ ಸದ್ಯಕ್ಕೆ ನೀರು ಹರಿಸೋದಿಲ್ಲ: ಸಚಿವ ಚಲುವರಾಯಸ್ವಾಮಿ