Tag: MUDA Scam

  • ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

    ಮುಡಾ ಹಗರಣ ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

    ಮೈಸೂರು: ಮುಡಾ ಹಗರಣ (MUDA Scam) ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ (K.V.Rajendra) ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ.

    ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ (Mysuru DC) ಲಕ್ಷ್ಮಿಕಾಂತ ರೆಡ್ಡಿ ಅವರನ್ನು ನಿಯೋಜಿಸಲಾಗಿದೆ. ರೆಡ್ಡಿ ಅವರು ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಈಗ ಮೈಸೂರು ಡಿಸಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಬೆಳಕಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ವರ್ಗಾವಣೆಯಾಗಿರುವುದು ಚರ್ಚೆ ಹುಟ್ಟುಹಾಕಿದೆ. ರಾಜೇಂದ್ರ ಅವರು 2022ರ ಅ.27 ರಂದು ಡಿಸಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಎರಡು ವರ್ಷಕ್ಕೂ ಮುನ್ನವೇ ಅವರನ್ನು ವರ್ಗಾವಣೆ ಮಾಡಲಾಗಿದೆ.

    ಮುಡಾಕ್ಕೆ ಅಧ್ಯಕ್ಷರನ್ನು ನೇಮಿಸುವವರೆಗೂ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ನಿವೇಶನ ಹಂಚಿಕೆ ವಿವಾದ- ಮುಡಾ ಆಯುಕ್ತರಿಗೆ 15 ಪತ್ರ ಬರೆದಿದ್ದ ಮೈಸೂರು ಡಿಸಿ

  • MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    ಮೈಸೂರು: ಭೈರತಿ ಸುರೇಶ್ (Byrathi Suresh) ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ (Real Estate Agent) ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌ ವಿಶ್ವನಾಥ್‌ (MLC H Vishwanth) ಗಂಭೀರ ಆರೋಪ ಮಾಡಿದ್ದಾರೆ.

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಗರಣಕ್ಕೆ (MUDA Site Allotment Scam) ಸಂಬಂಧಿಸಿದಂತೆ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಲಿಕಾಪ್ಟರ್‌ನಲ್ಲಿ ಬಂದು ಪೊಲೀಸ್ ಭದ್ರತೆಯಲ್ಲಿ ಸಭೆ ಮಾಡಿ ಹೋಗ್ತಾನೆ. ಸಭೆಯ ಬಳಿಕ ಅದು ಕ್ಯಾನ್ಸಲ್‌ ಮಾಡಿದ್ದೀನಿ. ಅದು ಮಾಡಿದ್ದೀನಿ, ಇದು ಮಾಡಿದ್ದೀನಿ ಎಂದು ಹೇಳ್ತಾನೆ. ಒಂದಕ್ಕಾದ್ರೂ ಆದೇಶ ಬಂದಿದ್ಯಾ? ಬರಿ ಬೊಗಳೆ ಬಿಡ್ತಾನೆ ಎಂದು ಏಕವಚನದಲ್ಲೇ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ವಿರುದ್ಧ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

    ಹೇ ನೀನು ಯಾವನಲೇ? ನೀನು ದಡ್ಡನೋ ಬುದ್ದಿವಂತನಾ? ನಾನು ಏಳು ಸೈಟ್ ಕೇಳಿದ್ದೇನೆ ಅಂತೀಯಲ್ಲ. ಇವ್ನುಯಾವನ್ರೀ  ಭೈರತಿ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಹೆಚ್‌ಡಿಕೆ

    ನಾನು ಪ್ರಾಮಾಣಿಕ ಅಂತಾ ವಿಧಾನಸೌಧದ ಒಳಗೆ ಹೇಳಿದ್ದಿನಿ. ಚೇಂಜ್ ಆಫ್ ಲ್ಯಾಂಡ್‌ಗೆ ಐದು ಲಕ್ಷ ಫಿಕ್ಸ್ ಮಾಡಿದ್ದಾನೆ ಈ ಭೈರತಿ ಸುರೇಶ್ ಎಂದು ಕಿಡಿಕಾರಿದರು.

     

    ಹೆಚ್‌ ವಿಶ್ವನಾಥ್‌ ಮೈಸೂರಿನ ಪ್ರಜೆಯಾಗಿದ್ದಾರೆ ಜೊತೆ ಪರಿಷತ್‌ ಸದಸ್ಯರೂ ಆಗಿದ್ದಾರೆ. ಹೀಗಾಗಿ ಅವರು ಮುಡಾದಲ್ಲಿ ಸದಸ್ಯರಾಗಿದ್ದಾರೆ. ಈ ಮುಡಾದ ಸದಸ್ಯರೇ ಸಿಎಂ ಸಿದ್ದರಾಮಯ್ಯ (CM Siddaramaiah) ಮತ್ತು ಸಚಿವ ಭೈರತಿ ವಿರುದ್ಧ ಆರೋಪ ಮಾಡಿರುವುದು ಸಂಚಲನ ಮೂಡಿಸಿದೆ.

  • ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಹೆಚ್‌ಡಿಕೆ

    ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಹೆಚ್‌ಡಿಕೆ

    – ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮನ
    – ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ?

    ಮೈಸೂರು: ಸಿಎಂ (Chief Minister) ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ (MUDA Site Allotment Scam) ಬಯಲಾಗಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumarswamy)) ಸ್ಫೋಟಕ ಆರೋಪ ಮಾಡಿದ್ದಾರೆ.

    ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ (Mysuru) ಆಗಮಿಸಿದ ಕುಮಾರಸ್ವಾಮಿ ಇಂದು ಚಾಮುಂಡಿ ಬೆಟ್ಟಕ್ಕೆ (Chamundi Betta) ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

    ಈ ವೇಳೆ ಮಾಧ್ಯಮಗಳ ಜೊತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಸೈಟ್‌ ಹಗರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯಿತು ಎಂದು ಹೇಳಿದರು.

    ಬಿಜೆಪಿಯವರು ಅಕ್ರಮದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಹೊರಗಡೆ ಬರಲು ಕಾಂಗ್ರೆಸ್‌ನವರೇ ಒಳಗಡೆ ಕುಮ್ಮಕ್ಕು ನೀಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿಗೆ 14 ಸೈಟ್‌ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

     

    ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಈಗ ಶಾಸಕರಾಗಿದ್ದಾರೆ. ಅವರು ಸಿಎಂ ಪರ ಸುದೀರ್ಘವಾಗಿ ಮಾತನಾಡಿ 62 ಕೋಟಿ ರೂ. ಪರಿಹಾರ ನೀಡಬೇಕು ಎಂದಿದ್ದಾರೆ. ಹಲವು ಕಡೆ ಅಭಿವೃದ್ಧಿ ಹೆಸರಿನಲ್ಲಿ ಭೂ ಸ್ವಾಧೀನವಾಗಿದ್ದರೂ ಆ ರೈತರು ಇನ್ನೂ ಕೂಡ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ಅವರ ಜಾಗಕ್ಕೆ ದರ ನಿಗದಿ ಮಾಡುವಾಗ ಹೀಗೆ ಮಾಡುತ್ತೀರಾ? ರೈತರನ್ನ ಬೀದಿಗೆ ನಿಲ್ಲಿಸಿದ್ದೀರಿ ಇದು ಸರಿಯೇ? ನಿಮ್ಮ ಪತ್ನಿಯ ಹಣ ಕೇಳುತ್ತಿದ್ದೀರಲ್ಲ. ಆ ದೇವರು ಮೆಚ್ಚುತ್ತಾನಾ ಎಂದು ಪ್ರಶ್ನಿಸಿದರು.

  • ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಪಾತ್ರ ಇದೆಯಾ? – ಸಚಿವ ಬೈರತಿ ಸುರೇಶ್ ಹೇಳಿದ್ದೇನು?

    ಮುಡಾ ಹಗರಣದಲ್ಲಿ ಸಿಎಂ ಪುತ್ರ ಯತೀಂದ್ರ ಪಾತ್ರ ಇದೆಯಾ? – ಸಚಿವ ಬೈರತಿ ಸುರೇಶ್ ಹೇಳಿದ್ದೇನು?

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) (MUDA) ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಮುಡಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ’ ಎಂಬ ಮಾಜಿ ಸಚಿವ ಹೆಚ್. ವಿಶ್ವನಾಥ್ (H Vishwanath) ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಯತೀಂದ್ರ ಅವರ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ (Yathindra Siddaramaiah) ಈಗ ಎಂಎಲ್‌ಸಿ ಆಗಿದ್ದಾರೆ. ಈ ಹಿಂದೆ ಶಾಸಕರಾಗಿದ್ದರು ಇದಕ್ಕೂ ಅವರಿಗೂ ಸಂಬಂಧವಿಲ್ಲ. ಹೆಚ್. ವಿಶ್ವನಾಥ್ ಅವರು ನಮಗಿಂತ ಹಿರಿಯರು. ಯತೀಂದ್ರ ಬಗ್ಗೆ ಹೇಳೋದಕ್ಕೆ ಏನು ಸಾಕ್ಷಿಯಿದೆ? ಅವರ ಹೇಳಿಕೆಯನ್ನ ಆ ದೇವರೇ ಮೆಚ್ಚಬೇಕು. ವಿಶ್ವನಾಥ್ ಅವರ ಬಳಿ ಸಾಕ್ಷಿ ಇದ್ದರೆ ತಂದು ಕೊಡಲಿ ಎಂದು ಸವಾಲು ಹಾಕಿದ್ದಾರೆ.

    ಇನ್ನೂ ಮುಡಾ ದಾಖಲಾತಿಗಳನ್ನ ಪೆನ್‌ಡ್ರೈವ್‌ನಲ್ಲಿ ಹಾಕಿ ಕೊಡುವಂತೆ ಕೇಳಿದ್ದ ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಪೆನ್‌ಡ್ರೈವ್‌ ಸಂಸ್ಕೃತಿ ಇಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ, ವಿಶ್ವನಾಥ್ ಈಗ ಮಾತನಾಡುತ್ತಿದ್ದಾರೆ. ನನ್ನ ಬಳಿ ಸೈಟ್ ಕೊಡಿಸುವಂತೆ ವಿಶ್ವನಾಥ್ ಬಂದಿದ್ದರು. ಅದನ್ನ ನೆನಪು ಮಾಡಿಕೊಳ್ಳಲಿ. ಸುಮ್ಮನೆ ಆರೋಪಗಳನ್ನ ಮಾಡುವುದನ್ನ ನಿಲ್ಲಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಅಂದ್ರೆ ಪೂರ್ಣ ಹಿಂದೂ ಸಮಾಜ ಅಲ್ಲ, ಹಿಂದೂ ಅಂತ ಕರೆಸಿಕೊಳ್ಳೋರು ಹಿಂಸೆ, ದ್ವೇಷ ಹರಡುತ್ತಿದ್ದಾರೆ: ರಾಗಾ ವಾಗ್ದಾಳಿ

    ಬಿಜೆಪಿ ಸರ್ಕಾರ ಅವಧಿಯ ಆದೇಶ ರದ್ದು:
    ಮುಡಾ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. 7 ತಿಂಗಳ ಹಿಂದೆ ನಾನೇ ಆದೇಶ ಮಾಡಿದ್ದೇನೆ. ತುಂಡು ಭೂಮಿ ಹಂಚಿಕೆ ಮಾಡದಂತೆ ಆದೇಶ ಮಾಡಿದ್ದೇನೆ. ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಆದೇಶಗಳನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್‌ ತಲೆದಂಡ!

  • ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್‌ ತಲೆದಂಡ!

    ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್‌ ತಲೆದಂಡ!

    – ಐಎಎಸ್ ಅಧಿಕಾರಿಗಳ ಹೆಗಲಿಗೆ ತನಿಖೆ ಹೊಣೆ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) (MUDA) 50:50 ಸೈಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್ ಅವರ ತಲೆದಂಡವಾಗಿದೆ.

    ಮುಡಾದಲ್ಲಿ ಹಗರಣ ನಡೆದಿದೆ ಎಂಬ ಬಿಜೆಪಿ ನಾಯಕರ ಆರೋಪ ಕೇಳಿಬಂದ ಬೆನ್ನಲ್ಲೇ ಸೋಮವಾರ ಸಚಿವ ಬೈರತಿ ಸುರೇಶ್ (Byrathi Suresh) ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಬಿಗಿ ಪೊಲೀಸ್‌ ಭದ್ರತೆಯಲ್ಲಿ ಸಭೆ ನಡೆಸಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಆಯುಕ್ತರ (MUDA Commissioner) ವರ್ಗಾವಣೆಗೊಳಿಸಿ ಮೌಖಿಕ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಮುಡಾ ಆಯುಕ್ತ, ಕಾರ್ಯದರ್ಶಿ, ಎಇಇ ಕೂಡ ವರ್ಗಾವಣೆಣೆ ಮಾಡಲಾಗಿದೆ. ಇದು ಕ್ರಮ ಅಲ್ಲ, ನಿಷ್ಪಕ್ಷಪಾತ ತನಿಖೆ ಹಿನ್ನೆಲೆ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    50:50 ನಿವೇಶನ ಹಂಚಿಕೆ ಸಂಬಂಧ ತನಿಖೆ ನಡೆಸಲು ಇಬ್ಬರು ಐಎಎಸ್‌ ಅಧಿಕಾರಿಗಳು (IAS Officer) ಹಾಗೂ ನಾಲ್ಕು ಹೆಚ್ಚುವರಿ ಸಿಬ್ಬಂದಿಯನ್ನ ನೇಮಿಸಲಾಗಿದೆ. ಐಎಎಸ್ ಅಧಿಕಾರಿ ವೆಂಕಟಾಚಲಪತಿ, ಕವಳಗಿ ಅವರನ್ನು ತನಿಖೆಗೆ ನೇಮಿಸಲಾಗಿದ್ದು, 4 ವಾರಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ. ಜೊತೆಗೆ ಮುಂದಿನ 1 ತಿಂಗಳು ಯಾವುದೇ ಸೈಟು ಹಂಚಿಕೆ ಮಾಡದಂತೆ, ಮುಡಾದಲ್ಲಿ ಸಭೆ ನಡೆಸದಂತೆ ಆದೇಶಿಸಿದ್ದಾರೆ. ಜೊತೆಗೆ ಈ ಹಿಂದೆ ಹಂಚಿಕೆಯಾಗಿರುವ ಎಲ್ಲಾ ಸೈಟುಗಳನ್ನು ಕೂಡ ತಡೆಹಿಡಿಯಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

    ಬಿಜೆಪಿ ಸರ್ಕಾರ ಅವಧಿಯ ಆದೇಶ ರದ್ದು:
    ಮುಡಾ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. 7 ತಿಂಗಳ ಹಿಂದೆ ನಾನೇ ಆದೇಶ ಮಾಡಿದ್ದೇನೆ. ತುಂಡು ಭೂಮಿ ಹಂಚಿಕೆ ಮಾಡದಂತೆ ಆದೇಶ ಮಾಡಿದ್ದೇನೆ. ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಆದೇಶಗಳನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.