ಮೈಕ್ರೋ ಫೈನಾನ್ಸ್ (Micro Finance) ವ್ಯಾಪ್ತಿಯಲ್ಲಿ ಧರ್ಮಸ್ಥಳ ಸಂಘ ಬರಲ್ಲ. ಅವರು ಗ್ರಾಮೀಣ ಯೋಜನೆ ಅಂತ ಮಾಡಿಕೊಂಡಿದ್ದಾರೆ. ಸ್ವ-ಸಹಾಯ ಸಂಘ ಮಾಡಿ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ವ-ಸಹಾಯ ಸಂಘಗಳಿಗೆ ಅವರು ಸಾಲ ಕೊಡ್ತಾರೆ. ಧರ್ಮಸ್ಥಳದ ಹಣ ಅನ್ನುತ್ತಿದ್ದಂತೆ ಯಾರೂ ಸಹ ಉಳಿಸಿಕೊಳ್ಳಲ್ಲ. ಅವರು ಹೀಗೆ ಕಿರುಕುಳ ನೀಡಿದ್ದಾರೆ ಅಂತ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಹರಿಹರ ಶಾಸಕರಿಗೆ ತಲೆ ಕೆಟ್ಟಿರಬೇಕು – ಬಿ.ಪಿ ಹರೀಶ್ ವಿರುದ್ಧ ಎಸ್.ಎಸ್ ಮಲ್ಲಿಕಾರ್ಜುನ್ ಕಿಡಿ
ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಹೀಗೆ ಕಿರುಕುಳ ಕೊಡೋರಿಗೆ ಕಠಿಣ ಶಿಕ್ಷೆ ಆಗಬೇಕು. ಹಾಸನ ಜಿಲ್ಲೆಯಲ್ಲೂ ಈ ಸಮಸ್ಯೆ ಸಾಕಷ್ಟಿದೆ. ಕೆಲ ಸಂಸ್ಥೆಗಳು ಆರ್‌ಬಿಐ ಅನುಮತಿ ಪಡೆದು ಫೈನಾನ್ಸ್ ನಡೆಸುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ಕೊಟ್ಟಾಗ ನಾವು ಕ್ರಮ ಕೈಗೊಳ್ಳಬಹುದು. ಹಾಗಾಗಿ ಸಿಎಂ ಸಭೆ ಮಾಡಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂತಹ ಕಿರುಕುಳ ತಡೆಗೆ ಹೊಸ ಕಾಯ್ದೆ ತರುವ ಬಗ್ಗೆಯೂ ಚರ್ಚೆ ಆಗಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಕಾಯ್ದೆ ಮಂಡನೆ ಆಗಲಿದೆ. ನಿನ್ನೆ ಸಿಎಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಅದಕ್ಕಾಗಿ ನಿನ್ನೆ ರಜೆ ಇದ್ದರೂ ಸಿಎಂ ಅಧಿಕಾರಿಗಳು ಹಾಗೂ ಸಚಿವರೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಹಾಸನ: ಮುಡಾ ಪ್ರಕರಣ (MUDA Case) ಬಿಜೆಪಿಯ ಸೃಷ್ಟಿ ಅಷ್ಟೇ. ಸಿಎಂ ಆಗಿರೋರಿಗೆ ಮೂರ‍್ನಾಲ್ಕು ಸೈಟ್ ಯಾವ ಲೆಕ್ಕ ಹೇಳಿ ಅಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ (KN Rajanna) ಹೇಳಿದ್ದಾರೆ.
ಯಾರು ದೂರು ಕೊಟ್ಟು ಹೇಳಿಕೆ ಕೊಡ್ತಿದ್ದಾರೋ ಅವರದ್ದೇ ಪಾತ್ರ ಇದ್ದಂತಿದೆ. ಇನ್ನು ಸ್ವಲ್ಪದಿನ, ಎಲ್ಲವೂ ಆಚೆ ಬರುತ್ತದೆ. ಯಾರದ್ದು ಎಷ್ಟು ಸೈಟು ಇದೆ, ಎಲ್ಲವೂ ಆಚೆ ಬರುತ್ತೆ. ಮುಡಾ ಇರಲಿ, ಬಿಡಿಎ ಇರಲಿ, ಎಲ್ಲೇ ಕಾನೂನು ಬಾಹಿರ ಚಟುವಟಿಕೆ ಆಗಿದ್ದರೂ ಶಿಕ್ಷೆ ಆಗಬೇಕು. ಸಾರ್ವಜನಿಕ ಆಸ್ತಿಯನ್ನು ಯಾರೇ ಲಪಟಾಯಿಸಿದ್ರೂ ಅದು ಮೋಸದ ಕೆಲಸ. ಹಾಗೆ ಮಾಡಿದವರಿಗೆ ಶಿಕ್ಷೆಯಾಗಬೇಕು ಅನ್ನುವವನು ಅಂತ ಸಚಿವರು ಹೇಳಿದ್ದಾರೆ.
ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ ಮಾತನಾಡಿ, ಹೀಗೆ ಕಿರುಕುಳ ಕೊಡೋರಿಗೆ ಕಠಿಣ ಶಿಕ್ಷೆ ಆಗಬೇಕು. ಹಾಸನ ಜಿಲ್ಲೆಯಲ್ಲೂ ಈ ಸಮಸ್ಯೆ ಸಾಕಷ್ಟಿದೆ. ಕೆಲ ಸಂಸ್ಥೆಗಳು ಆರ್‌ಬಿಐ ಅನುಮತಿ ಪಡೆದು ಫೈನಾನ್ಸ್ ನಡೆಸುತ್ತಾರೆ. ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ಕೊಟ್ಟಾಗ ನಾವು ಕ್ರಮ ಕೈಗೊಳ್ಳಬಹುದು. ಹಾಗಾಗಿ ಸಿಎಂ ಸಭೆ ಮಾಡಿ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಇಂತಹ ಕಿರುಕುಳ ತಡೆಗೆ ಹೊಸ ಕಾಯ್ದೆ ತರುವ ಬಗ್ಗೆಯೂ ಚರ್ಚೆ ಆಗಿದೆ. ಈ ಬಗ್ಗೆ ಮುಂದಿನ ಅಧಿವೇಶನದಲ್ಲಿ ಕಾಯ್ದೆ ಮಂಡನೆ ಆಗಲಿದೆ. ನಿನ್ನೆ ಸಿಎಂ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಅದಕ್ಕಾಗಿ ನಿನ್ನೆ ರಜೆ ಇದ್ದರೂ ಸಿಎಂ ಅಧಿಕಾರಿಗಳು ಹಾಗೂ ಸಚಿವರೊಟ್ಟಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪತ್ನಿ ಅವರು ಮೂಡಾದಿಂದ (MUDA) ಪಡೆದಿದ್ದ 14 ಸೈಟ್‌ಗಳ ಬಗ್ಗೆ ಲೋಕಾಯುಕ್ತ ತನಿಖೆ ಅಂತಿಮ ಹಂತಕ್ಕೆ ಬಂದಿದೆ.
ಬುಧವಾರ (ಜ.22) ಇಡೀ ದಿನ ಮೂಡಾದಲ್ಲಿ ಇದ್ದ ಲೋಕಾಯುಕ್ತ ಟೀಂ, ಕೆಲ ಆಡಿಯೋ ಹಾಗೂ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಪ್ರಕರಣದ ವರದಿಯನ್ನು ನ್ಯಾಯಾಲಯಕ್ಕೆ ನೀಡಲು ಲೋಕಾಯುಕ್ತಕ್ಕೆ ಜನವರಿ 27 ಡೆಡ್‌ಲೈನ್ ಇದೆ. ಹೀಗಾಗಿ ಲೋಕಾಯುಕ್ತ ಪೊಲೀಸರು (Lokayukta Police) ಕೊನೆಯ ಹಂತದ ವಿಚಾರಣೆ ನಡೆಸುತ್ತಿದ್ದಾರೆ.
ಮುಡಾ ಕಚೇರಿಗೆ ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಭೇಟಿ ನೀಡಿ, 50:50 ಅನುಪಾತದ ಬಗ್ಗೆ ಚರ್ಚೆಯಾದ ಸಭೆಯ ಬಗ್ಗೆ ಮಾಹಿತಿ ಸಂಗ್ರಹಿಸಿದೆ. 2020ರ ನ.11ರಂದು ನಡೆದ ಸಭೆ ನಡಾವಳಿ ಪರಿಶೀಲಿಸಿ ಅಂದಿನ ಸಭಾ ನಡವಳಿ ಧ್ವನಿ ಸುರಳಿ ಕೇಳಿಸಿಕೊಂಡು ಅದರ ಮಾಹಿತಿಯನ್ನೂ ದಾಖಲಿಸಿಕೊಂಡಿದೆ. ಇದನ್ನೂ ಓದಿ: Hyderabad | ಪತ್ನಿಯ ಹತ್ಯೆಗೈದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ
ಅಂದಿನ ಸಭೆಯಲ್ಲಿ ಮಾಜಿ ಆಯುಕ್ತ ನಟೇಶ್ ಹಾಗೂ ಮಾಜಿ ಅಧ್ಯಕ್ಷ ಹೆಚ್.ವಿ ರಾಜೀವ್ ಇದ್ದ ಅವಧಿಯ ಸಭೆ ಆಡಿಯೋ ಇದ್ದಾಗಿದ್ದು ಅಂದಿನ ಸಭೆಯಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ಎಸ್.ಎ ರಾಮ್‌ದಾಸ್, ಎಲ್. ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು. ಸಭೆಯಲ್ಲಿ 50-50 ಅನುಪಾತ ಚರ್ಚೆ ನಡೆದಿತ್ತು. ಇದರ ಮಾಹಿತಿಯನ್ನು ಲೋಕಾಯುಕ್ತ ಟೀಂ ಸಂಗ್ರಹಿಸಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಮೈಸೂರು: ಈಗಾಗಲೇ 300 ಕೋಟಿ ರೂ. ಮೌಲ್ಯದ 143 ಸೈಟ್‌ಗಳನ್ನು ಜಪ್ತಿ ಮಾಡಿರೋ ಇಡಿ, ಸದ್ಯದಲ್ಲೇ ಮುಡಾ ಸ್ಥಿರಾಸ್ತಿ (Immovable Properties) ಜಪ್ತಿಯ ಭಾಗ-2 ಕಾರ್ಯಾಚರಣೆ ಶುರು ಮಾಡುವ ಸಾಧ್ಯತೆ ಇದೆ. 631 ಮುಡಾ ನಿವೇಶನಗಳ ಬಗ್ಗೆ ಮಾಹಿತಿ ನೀಡುವಂತೆ ಇಡಿ (ED) ಕೇಳಿದೆ.
ಕಳೆದ ಡಿಸೆಂಬರ್ 16ರಂದೇ ಮುಡಾಗೆ ಇಡಿ ಅಧಿಕಾರಿಗಳು ಬರೆದಿರುವ ಪತ್ರ ʻಪಬ್ಲಿಕ್ ಟಿವಿʼಗೆ (PUBLiC TV) ಲಭ್ಯವಾಗಿದೆ. ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ನಿವೇಶನಗಳ ವಿವರ ಕೇಳಿದ್ದು, ಮುಡಾ ಅಧಿಕಾರಿಗಳನ್ನ ಸಂಪರ್ಕ ಮಾಡಿ ಮತ್ತೊಂದು ಲಿಸ್ಟ್ ಕಳುಹಿಸುವಂತೆ ಸೂಚನೆ ನೀಡಿದ್ದಾರೆ. ಅಕ್ರಮ ಹಣ ವ್ಯವಹಾರ ಸಂಬಂಧ ಸಿಕ್ಕ ದಾಖಲೆಗಳ ಆಧಾರದಲ್ಲಿ ಲಿಸ್ಟ್ ಕೇಳಿದ್ದು, ಜಾರಿ ನಿರ್ದೇಶನಾಲಯ ಮುಡಾ ಕಚೇರಿಯಲ್ಲಿ ಭ್ರಷ್ಟರ ಬೇಟೆ ಮುಂದುವರಿಸಿದೆ. ಇದನ್ನೂ ಓದಿ: ಭಂಡತನ ಬಿಟ್ಟು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ – ವಿಜಯೇಂದ್ರ ಆಗ್ರಹ
ಎಂಎಲ್‌ಸಿ ಹೆಸ್ರಲ್ಲಿ 128 ಸೈಟು:
ಮುಡಾ ಸೈಟು ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಕಪ್ಪು ಹಣದ ವಹಿವಾಟು ಹೆಚ್ಚಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. 631 ಸೈಟುಗಳ ಖರೀದಿಯಲ್ಲಿ ದೊಡ್ಡಮಟ್ಟದಲ್ಲಿ ಕಪ್ಪು ಹಣದ ವಹಿವಾಟು ನಡೆದಿದೆ ಎಂದು ಇಡಿ ಮೂಲಗಳು ತಿಳಿಸಿವೆ. ಅಲ್ಲದೇ ಮುಡಾ ಮಾಜಿ ಆಯುಕ್ತನ ಹೆಸರಲ್ಲಿ 198, ಮೈಸೂರಿನ ಎಂಎಲ್‌ಸಿ ಒಬ್ಬರಿಗೆ ಸೇರಿದೆ ಎನ್ನಲಾದ 128 ಸೈಟುಗಳ ದಾಖಲೆಗಳು ಪತ್ತೆಯಾಗಿವೆ. ಮೂಡಾ ನಗರ ಯೋಜನೆ ಅಧಿಕಾರಿ ಒಬ್ಬರಿಗೆ ಸೇರಿದ 92 ಬೇನಾಮಿ ಸೈಟಿನ ದಾಖಲೆಗಳೂ ಪತ್ತೆಯಾಗಿವೆ. ಮುಡಾದಲ್ಲಿ ಬೇನಾಮಿ ಆಸ್ತಿ ವಹಿವಾಟು ಕಂಡು ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಇದನ್ನೂ ಓದಿ: ಸಿದ್ರಾಮಣ್ಣ ಏನೇನು ಬೆಲೆ ಜಾಸ್ತಿ ಮಾಡ್ತಿರೋ ಒಟ್ಟಿಗೆ ಮಾಡಿ ಬಿಡಿ – ಅಶೋಕ್
ಮಾಜಿ ಆಯುಕ್ತರ ಕುಟುಂಬಸ್ಥರ ಹೆಸರಲ್ಲಿ ಆಸ್ತಿಗಳು ಪತ್ತೆ:
ಮೈಸೂರಿನ ರಿಯಲ್ ಎಸ್ಟೇಟ್ ಏಜೆಂಟ್ ಹೆಬ್ಬೆಟ್ ಜಯರಾಮ್ ರಾಜಕಾರಣಿಗಳು ಮತ್ತು ಅಧಿಕಾರಿಗಳಿಗೆ ಬೇನಾಮಿ ಆಗಿದ್ದಾರಾ ಎಂಬ ಅನುಮಾನ ದಟ್ಟವಾಗಿದೆ. ಜಯರಾಮ್ ಮನೆ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ನಿರಂತರ 70 ಗಂಟೆ ರೇಡ್ ಮಾಡಿದ್ದರು. ಆಗ ಜಯರಾಮ್ ಮನೆಯಲ್ಲಿ ಬಹುತೇಕ ಬೇನಾಮಿ ದಾಖಲೆಗಳು ಸಿಕ್ಕಿವೆ. ವಕ್ರತುಂಡ ಗೃಹ ನಿರ್ಮಾಣ ಸಹಕಾರ ಸಂಘದ ಹೆಸರಿಲ್ಲಿ ಬೇನಾಮಿ ನಡೆದಿದೆ ಎನ್ನಲಾಗುತ್ತಿದ್ದು, ಮುಡಾ ಮಾಜಿ ಆಯುಕ್ತ ದಿನೇಶ್ ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿಗಳು ಇವೆ ಎನ್ನಲಾಗಿದೆ.
ರಿಯಲ್ ಎಸ್ಟೇಟ್ ಏಜೆಂಟ್ ಹೆಬ್ಬೆಟ್ ಜಯರಾಮ್ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದ್ದು, ಪ್ರಾಥಮಿಕ ವಿಚಾರಣೆಯಲ್ಲಿ ಹಲವರ ಹೆಸರು ಬಾಯಿಬಿಟ್ಟಿದ್ದಾನೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಸಂಬಂಧಿ ತೇಜಸ್ ಗೌಡ ಹೆಸರನ್ನು ಜಯರಾಮ್ ತಿಳಿಸಿದ್ದಾನೆ. ಹೀಗಾಗಿಯೆ ಹೆಬ್ಬೆಟ್ ಜಯರಾಮ್ ಮನೆ ಕಚೇರಿ ಮೇಲೆ ರೇಡ್ ಆಗುತ್ತಿದ್ದಂತೆ ಮುಡಾ ಮಾಜಿ ಆಯುಕ್ತ ದಿನೇಶ್ ಎಸ್ಕೇಪ್ ಆಗಿದ್ದರು. ಹೆಬ್ಬೆಟ್ ಜಯರಾಮ್ ನಡೆಸುತ್ತಿದ್ದ ವಕ್ರತುಂಡ ಗೃಹನಿರ್ಮಾಣ ಸಹಕಾರ ಸಂಘದಲ್ಲಿ ದಿನೇಶ್ ಕುಟುಂಬಸ್ಥರೆ ನಿರ್ದೇಶಕರಾಗಿದ್ದಾರೆ ಎನ್ನಲಾಗಿದೆ.
ಮುಡಾ ಅಕ್ರಮಕ್ಕೆ `ಕೋಕನಟ್’ ಕೋಡ್‌ವರ್ಡ್:
ಬೇನಾಮಿ ಡೀಲ್ ವಹಿವಾಟಿಗೆ ಹೆಬ್ಬೆಟ್ ಜಯರಾಮ್ ಇಟ್ಟಿದ್ದ ಹೆಸರು ಕೋಕನಟ್. ಅಧಿಕಾರಿಗಳಿಗೆ ರಾಜಕಾರಣಿಗಳಿಗೆ ಕೋಕನಟ್ ಹೆಸರಿನಲ್ಲೆ ಜಯರಾಮ್ ದುಡ್ಡು ಕಳುಹಿಸುತ್ತಿದ್ದನಂತೆ. ಜಯರಾಮ್ ವಾಟ್ಸಪ್ ಚಾಟ್‌ನಲ್ಲಿ ಮಹತ್ತರ ವಿಚಾರ ಇಡಿಗೆ ಸಿಕ್ಕಿದೆ. ಒಂದು ಕೋಕನಟ್ ಎಂದರೆ ಒಂದು ಲಕ್ಷ. 50 ಕೋಕನಟ್ ಎಂದರೆ 50 ಲಕ್ಷ. 100 ಕೋಕನಟ್ ಎಂದರೆ 1 ಕೋಟಿ. ಹೀಗೆ ಹಲವು ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ ಕೋಕನಟ್ ಹೆಸರಿನಲ್ಲಿ ಹೆಬ್ಬೆಟ್ ಜಯರಾಮ್ ಹಣ ಕಳುಹಿಸಿದ್ದ ಎನ್ನಲಾಗುತ್ತಿದ್ದು, ಎಲ್ಲಾ ದಾಖಲೆಗಳನ್ನು ಇಡಿ ಸೀಜ್ ಮಾಡಿದೆ.
ಸಿಎಂ ರಾಜೀನಾಮೆಗೆ ಬಿಗಿಪಟ್ಟು ಹಿಡಿದ ಬಿಜೆಪಿ
ಜಾರಿ ನಿರ್ದೇಶನಾಲಯ 143 ಮುಡಾ ಬೇನಾಮಿ ಸೈಟ್‌ಗಳು ಸೀಜ್ ಮಾಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು ಹಿಡಿದಿದೆ. ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಅಂತ ಆಗ್ರಹಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರದಿಂದ ಸಮ್ಮತಿ
ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.. ಆದ್ರೆ, ಇದು ಸಿಎಂ ಮೇಲೆ ರಾಜಕೀಯವಾಗಿ ನಡೆದ ಪಿತೂರಿ ಅಂತ ಆರೋಪಿಸಿರೋ ಡಿಸಿಎಂ ಡಿಕೆ ಶಿವಕುಮಾರ್, ಇನ್ವೆಸ್ಟಿಗೇಷನ್ ಲಾಂಗ್ ಪ್ರೊಸೆಸ್ ಆಗಿದೆ.. ಅದು ಕೋರ್ಟ್ ಟ್ರಯಲ್ ಮಾಡೋದು.. ಅದನ್ನ ನಾನು ನೀವು ಟ್ರಯಲ್ ಮಾಡೋದಲ್ಲ.. ಸಿಎಂ ಪತ್ನಿ ಆಗಲಿ.. ಸಿಎಂ ಆಗಲಿ ಯಾವುದೇ ತಪ್ಪು ಮಾಡಿಲ್ಲ ಅಂತ ಹೇಳಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ..
ಒಟ್ನಲ್ಲಿ ಮುಡಾ ಹಗರಣ ವಿಚಾರದಲ್ಲಿ ಒಂದು ಹಂತದ ವಿಚಾರಣೆ ಮುಗಿದಿದ್ದು, ಬೇನಾಮಿ ಆಸ್ತಿ ಮಾಡಿದವರಿಗೆ ಮಾರಿ ಹಬ್ಬ ಶುರುವಾಗಿದೆ. ಮತ್ತೊಂದೆಡೆ ರಾಜಕೀಯ ವಾಕ್ಸಮರವೂ ಜೋರಾಗಿದ್ದು, ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ.. ಆದ್ರೆ, ಪವರ್ ಫೈಟ್ ನಡುವೆಯೂ ಸಿಎಂ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ಬ್ಯಾಟ್ ಬೀಸಿದ್ದು, ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಆಟೋ ಕ್ಷೇತ್ರಕ್ಕೆ ಹಸಿರು ಬಲ – ಕೇಂದ್ರದ ಒತ್ತಾಸೆಯಿಂದ ಇವಿ ವಾಹನ ಮಾರಾಟ ಹೆಚ್ಚಳ: ಹೆಚ್‌ಡಿಕೆ
ಮುಡಾ ಮುಟ್ಟುಗೋಲು ಸೈಟ್ ಲಿಸ್ಟ್:
* ಅಬ್ದುಲ್ ವಾಜಿದ್- 42 ಸೈಟ್
* ಮಂಜುನಾಥ್- 33 ಸೈಟ್
* ರವಿಕುಮಾರ್- 35 ಸೈಟ್
* ಚಾಮುಂಡೇಶ್ವರಿ ಲೇಔಟ್- 21 ಸೈಟ್
* ಜಯರಾಮ್- 9 ಸೈಟ್
ಸೈಟ್ ಮುಟ್ಟುಗೋಲು ಹಾಕಿರುವ ಬಗ್ಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಹಿ ಕೃಷ್ಣ, ಮೂಡಾ ಹಗರಣದಲ್ಲಿ ಇಡಿ ಜಪ್ತಿ ಮಾಡಿರುವ ಇವರೆಗಿನ ಆಸ್ತಿ ಕೇವಲ ಸ್ಯಾಂಪಲ್ ಅಷ್ಟೆ. ಮುಂದಿನ ದಿನಗಳಲ್ಲಿ 50:50 ಅನುಪಾತದಲ್ಲಿ ಪಡೆದ ಎಲ್ಲಾ ಸೈಟ್ ಗಳನ್ನು ಇಡಿ ಜಪ್ತಿ ಮಾಡುತ್ತದೆ ಅಂತ ತಿಳಿಸಿದ್ದಾರೆ. ಅಲ್ಲದೇ ಇಡಿ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬ ಪಡೆದ 14 ಸೈಟ್ ಅಕ್ರಮ ಅನ್ನೋದು ಸ್ಪಷ್ಟವಾಗಿದೆ. ಲೋಕಾಯುಕ್ತ ತನಿಖೆಯಲ್ಲೂ ಸಿಎಂ ಕುಟುಂಬ ಪಡೆದ 14 ಸೈಟ್ ಅಕ್ರಮ ಎಂದೇ ವರದಿ ಬರಬೇಕು. ಲೋಕಾಯುಕ್ತ ತನಿಖೆ ಇದಕ್ಕೆ ವ್ಯತಿರಿಕ್ತವಾದರೆ ನ್ಯಾಯಾಲಯ ಅದನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ಮೈಸೂರು ಮುಡಾ ಹಗರಣ (MUDA Scam) ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.
ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸ್ನೇಹಮಯಿ ಕೃಷ್ಣ (Snehamayi Krishna) ಅವರು ಬಯಲಿಗೆಳೆದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಇದರ ವಿರುದ್ಧ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಾ ಬಂದಿದ್ದೇವೆ. ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದ್ದೇವೆ ಎಂದು ವಿವರಿಸಿದರು.ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 20 ವರ್ಷ ಜೈಲು
ಮುಡಾ ಹಗರಣವು ನಿನ್ನೆ ಮಹತ್ವದ ತಿರುವು ಪಡೆದುಕೊಂಡಿದೆ. ಜಾರಿ ನಿರ್ದೇಶನಾಲಯವು (ಇಡಿ) 300 ಕೋಟಿ ರೂ.ಗೂ ಬೆಲೆಬಾಳುವ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳು ತಮ್ಮ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಹಗರಣದಿಂದ ಮುಡಾಕ್ಕೆ ಕೋಟಿಗಟ್ಟಲೆ ನಷ್ಟವಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಬಡವರಿಗೆ ಮಂಜೂರಾಗಬೇಕಿದ್ದ ನಿವೇಶನಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು, ದಲ್ಲಾಳಿಗಳಿಗೆ ನೀಡಿದ್ದು ಸ್ಪಷ್ಟವಾಗಿದೆ. ಇದರಿಂದ ಸರ್ಕಾರ ಮತ್ತು ಮುಡಾಕ್ಕೆ ಸಾವಿರಾರು ಕೋಟಿ ನಷ್ಟವಾದುದು ಮತ್ತೊಮ್ಮೆ ಋಜುವಾತಾಗಿದೆ ಎಂದು ವಿಶ್ಲೇಷಿಸಿದರು.
ಪ್ರಕರಣವನ್ನು ಬಯಲಿಗೆ ಎಳೆದ ಸ್ನೇಹಮಯಿ ಕೃಷ್ಣ ಅವರನ್ನು ಅಭಿನಂದಿಸಿ, ಸ್ನೇಹಮಯಿ ಕೃಷ್ಣ ಅವರ ಧ್ವನಿ ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತ್ತು. ಅವರ ಮೇಲೆ ಆರೋಪ ಹೊರಿಸಿ ಅವರನ್ನು ಬಂಧಿಸುವ ಹಂತಕ್ಕೂ ರಾಜ್ಯ ಸರ್ಕಾರ ಹೋಗಿತ್ತು. ಇ.ಡಿ ಕೈಗೊಂಡ ಕ್ರಮಗಳಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ ಎಂದರು.
ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮಾನ್ಯ ರಾಜ್ಯಪಾಲರ ಮೇಲೂ ಅಪವಾದ ಹೊರಿಸುವ ಕೆಲಸವನ್ನು ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಸಚಿವರು ಮಾಡಿದ್ದರು. ಘನತೆವೆತ್ತ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟದ್ದೇ ಅಪರಾಧ ಎಂಬಂತೆ ಬಿಂಬಿಸಲು ಯತ್ನಿಸಿದ್ದರು. ನಂತರ ರಾಜ್ಯ ಹೈಕೋರ್ಟ್, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟದ್ದು ಸರಿಯಾಗಿದೆ. ಮೇಲ್ನೋಟಕ್ಕೆ ಮುಡಾ ಹಗರಣದಲ್ಲಿ ತಪ್ಪು, ಅವ್ಯವಹಾರ ನಡೆದಿದೆ ಎಂದಿತ್ತು. ಅಲ್ಲದೆ, ಸಿಎಂ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶನ ಕೊಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೇ ಋಜುವಾತು ಆಗಿರುವುದನ್ನು ಹೈಕೋರ್ಟ್ ಮತ್ತೊಮ್ಮೆ ಹೇಳಿತ್ತು ಎಂದು ಹೇಳಿದರು.
ನಮಗೆ ಸಿದ್ದರಾಮಯ್ಯನವರ ಬಗ್ಗೆ ದ್ವೇಷ ಇಲ್ಲ. ಆದರೆ, ಅಪರಾಧ ಆದ ಸಂದರ್ಭದಲ್ಲಿ, ತಪ್ಪಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ರಾಜೀನಾಮೆ ಕೊಡಬೇಕಾಗಿತ್ತು. ಮುಖ್ಯಮಂತ್ರಿಗಳು ಸ್ವಯಂಪ್ರೇರಿತರಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಿತ್ತು. ಹಗರಣವನ್ನು ದೀರ್ಘ ಕಾಲ ಎಳೆದುಕೊಂಡು ಬಂದಿದ್ದಾರೆ. ಕ್ಷೇತ್ರಕ್ಕೆ 10 ಕೋಟಿ ರೂ. ಕೊಡುವ ಮೂಲಕ ಸಿಎಂ ಮತ್ತು ಪ್ರಿಯಾಂಕ್ ಖರ್ಗೆಯವರು ನಮಗೇನು ಉಪಕಾರ ಮಾಡುತ್ತಿದ್ದಾರಾ? ಅನೇಕ ಶಾಸಕರು ಅನುದಾನವಿಲ್ಲದೆ ಹತಾಶರಾಗಿದ್ದಾರೆ. ಸರ್ಕಾರ ಆಡಳಿತ ವಹಿಸಿಕೊಂಡು 2 ವರ್ಷವಾಗಿದೆ. ನಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿಗಾಗಿ ಹತ್ತಿಪ್ಪತ್ತು ಕೋಟಿ ರೂ. ಹಣ ಕೊಡಲಿಲ್ಲವೆಂದಾದರೆ, ಇವರ ಯೋಗ್ಯತೆಗೆ ಯಾವ ರೀತಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಬೆಂಗಳೂರು: ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 300 ಕೋಟಿ ಮೌಲ್ಯ ಆಸ್ತಿ ಜಪ್ತಿ ಮಾಡಿದೆ. ಕೂಡಲೇ ಈ ಪ್ರಕರಣವನ್ನ ಸಿಬಿಐಗೆ (CBI) ವಹಿಸಬೇಕು ಎಂದು ವಿಪಕ್ಷ ನಾಯಕ ಅಶೋಕ್ (Ashok) ಆಗ್ರಹಿಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು , ಮುಡಾ ಹಗರಣ ಬಗೆದಷ್ಟು ಹೊರಗೆ ಬರುತ್ತಿದೆ. ನಾನು ಅರ್ಜಿ ಹಾಕಿ ಎರಡು ತಿಂಗಳು ಆದರೂ 50:50 ಅಡಿ ಎಷ್ಟು ಸೈಟ್ ಕೊಟ್ಟಿದ್ದೀರಾ ಅಂತ ಮುಡಾ ಇನ್ನು ಮಾಹಿತಿ ಕೊಟ್ಟಿಲ್ಲ.ಇದೆಲ್ಲವನ್ನು ನೋಡಿದರೆ ಲೋಕಾಯುಕ್ತಗೆ ಈ ಕೇಸ್ ತನಿಖೆ ಮಾಡೋಕೆ ಆಸಕ್ತಿ ಇದ್ದಂತೆ ಕಾಣ್ತಿಲ್ಲ. ಲೋಕಾಯುಕ್ತದವರು ಮುಡಾ ಕೇಸ್ ನಲ್ಲಿ ಕ್ಲೀನ್ ಚಿಟ್ ಕೊಡೋ ಪ್ರಯತ್ನ ಮಾಡ್ತಿದ್ದಾರೆ ಅನ್ನಿಸುತ್ತೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: MUDA ಅಕ್ರಮದಲ್ಲಿ ʼಕೋಕನಟ್ʼ ಡೀಲ್ – 50, 100 ಕೋಕನಟ್ ಕಳುಹಿಸಿ ಸಿಕ್ಕಿಬಿದ್ದ ಬಿಲ್ಡರ್
ಇಡಿ ಲೋಕಾಯುಕ್ತಗೆ ದಾಖಲೆಗಳನ್ನು ಕೊಟ್ಟರೂ ಅದನ್ನ ಬಳಸಿಕೊಳ್ಳಲಿಲ್ಲ. ಲೋಕಾಯುಕ್ತ ಕೂಡಾ ಇಡಿ ರೀತಿ ಸೀಜ್ ಮಾಡಿಲ್ಲ ಯಾಕೆ? ಇದೆಲ್ಲವನ್ನೂ ನೋಡಿದರೆ ಲೋಕಾಯುಕ್ತ ಪೊಲೀಸರು ಪ್ರಮೋಷನ್ ಪಡೆಯೋಕೆ ಹೀಗೆಲ್ಲ ಮಾಡ್ತಿದ್ದಾರೆ ಅಂತ ಅನ್ನಿಸುತ್ತೆ. ಲೋಕಾಯುಕ್ತಗೆ ಯಾರ ಒತ್ತಡ ಇದೆ. ಯಾರ ಕೈವಾಡ ಇದೆ ಗೊತ್ತಿಲ್ಲ.ಮೊದಲ ದಿನದಿಂದಲೂ ನಾವು ಇದನ್ನೇ ಹೇಳ್ತಿದ್ದೇವೆ.ಹೀಗಾಗಿ ನಾವು ಮುಡಾ ಕೇಸ್ ಅನ್ನ ಸಿಬಿಐ ತನಿಖೆಗೆ ಕೊಡಿ ಅಂತ ಹೇಳ್ತಿದ್ದೇವೆ. ಈಗಲೂ ಮುಡಾ ಕೇಸ್ ಅನ್ನ ಸಿಬಿಐಗೆ ಕೊಡಬೇಕು ಅಂತ ಅಶೋಕ್ ಅಗ್ರಹ ಮಾಡಿದ್ರು. ಇದನ್ನೂ ಓದಿ: MUDA Scam | ಅಕ್ರಮವಾಗಿ ಮಾರಾಟ, ಸಹಕಾರಿ ಸಂಘ ಬಳಸಿ ದುರ್ಬಳಕೆ, 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?
ವಿಧಾನಸೌಧದಲ್ಲಿ ಯತ್ನಾಳ್ ಟೀಂ ಮತ್ತು ರೇಣುಕಾಚಾರ್ಯ ಟೀಂಗಳಿಂದ ಪದೇ ಪದೇ ಸಭೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯ ಆಂತರಿಕ ಕಿತ್ತಾಟ ಎಲ್ಲವನ್ನು ಪಾರ್ಟಿ ನೋಡಿಕೊಳ್ಳುತ್ತೆ.ನಾನು ಸಾಮಾನ್ಯರಲ್ಲಿ ಸಾಮಾನ್ಯ ಕಾರ್ಯಕರ್ತ. ಯಡಿಯೂರಪ್ಪ, ಅನಂತ್ ಕುಮಾರ್, ನಾವೆಲ್ಲ ಪಾರ್ಟಿ ಕಟ್ಟಿ ಬೆಳೆಸಿದ್ದೇವೆ. ಪಾರ್ಟಿಗೆ ಸಂಬಂಧಿಸಿದ ವಿಷಯ ಇದ್ದರೆ ನಾಲ್ಕು ಗೋಡೆ ಮಧ್ಯೆ ಮಾತಾಡ್ತೀವಿ. ನಮ್ಮದು ಕೇಡರ್ ಪಾರ್ಟ್. ಭಿನ್ನಮತದ ವಿಚಾರಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತೆ ಅಂತ ತಿಳಿಸಿದರು.
ಇನ್ನು ರಾಜ್ಯಾಧ್ಯಕ್ಷ ಸ್ಥಾನ ಚುನಾವಣೆಗೆ ಯತ್ನಾಳ್ ಟೀಂನಿಂದ ಸ್ಪರ್ಧೆ ಮಾಡೋ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಪ್ರತಿಕ್ರಿಯೆ ಇನ್ನು ಶುರುವಾಗಿಲ್ಲ. ಚುನಾವಣೆ ಘೋಷಣೆ ಆಗಿಲ್ಲ ಅಂದ ಮೇಲೆ ಏನು ಪ್ರತಿಕ್ರಿಯೆ ಕೊಡಲಿ. ಇನ್ನು ತಾಲೂಕು ಮಟ್ಟದಲ್ಲಿ ಚುನಾವಣೆ ಪ್ರಕ್ರಿಯೆಗಳು ನಡೆಯುತ್ತಿವೆ. ರಾಜ್ಯಾಧ್ಯಕ್ಷರ ಚುನಾವಣೆ ಪ್ರಕ್ರಿಯೆ ಬಂದಾಗ ಅದರ ಬಗ್ಗೆ ಮಾತಾಡ್ತೀನಿ ಅಂತ ಜಾರಿಕೊಂಡರು.
– ಬೇನಾಮಿ ವ್ಯಕ್ತಿಗಳಿಗೆ ಸೈಟ್ ಹಂಚಿಕೆ – ಡಿ.ಬಿ.ನಟೇಶ್‌ರಿಂದ ಭಾರೀ ಅಕ್ರಮ
ಬೆಂಗಳೂರು: 14 ಸೈಟ್ ಅಲ್ಲದೇ ಹಲವು ಸೈಟ್‌ಗಳನ್ನು ಅಕ್ರಮ ಮಾರಾಟ ಮಾಡಲಾಗಿದೆ. ಸಹಕಾರ ಸಂಘಗಳನ್ನು ಬಳಸಿ ದುರ್ಬಳಕೆ ಮಾಡಲಾಗಿದೆ. ಬೇನಾಮಿ ವ್ಯಕ್ತಿಗಳಿಗೆ ಹಂಚಿಕೆ ಮಾಡಿ ಕೋಟ್ಯಂತರ ರೂ. ಹಣವನ್ನು ವಂಚಿಸಲಾಗಿದೆ.
ಇದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ನಿವೇಶನ ಹಂಚಿಕೆ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ (ED) ನಡೆಸಿದ ತನಿಖೆಯಲ್ಲಿ ಕಂಡು ಬಂದ ಅಂಶಗಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 142 ಸೈಟ್ ಗಳು ಸೇರಿದಂತೆ 300 ಕೋಟಿ ರೂ. ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ತಿಳಿಸಿದೆ.
ಮೈಸೂರಿನ ಗಂಗರಾಜು ಹಾಗೂ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನ ಆಧಾರದ ಮೇಲೆ ಮೈಸೂರು ಮುಡಾ ಕಚೇರಿ ಸೇರಿ, ಅಧಿಕಾರಿಗಳ ಮೇಲೆ ಇಡಿ ದಾಳಿ ನಡೆಸಿತ್ತು.
ಇಡಿ ಹೇಳಿದ್ದೇನು?
ಕರ್ನಾಟಕದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಅಂದಾಜು 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಆಸ್ತಿಗಳನ್ನು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿತ್ತು.
ಮುಡಾ ಸ್ವಾಧೀನಪಡಿಸಿಕೊಂಡ 3 ಎಕರೆ 16 ಗುಂಟೆ ಭೂಮಿಗೆ ಬದಲಾಗಿ ತಮ್ಮ ಪತ್ನಿ ಬಿ.ಎಂ. ಪಾರ್ವತಿ ಅವರ ಹೆಸರಿನಲ್ಲಿರುವ 14 ನಿವೇಶನಗಳ ಪರಿಹಾರವನ್ನು ಪಡೆಯಲು ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಮೂಡಾ 3,24,700 ರೂ.ಗೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡರೆ ದುಬಾರಿ ಬೆಲೆ ಇರುವ ಜಾಗದಲ್ಲಿ ಅಂದಾಜು 60 ಕೋಟಿ ರೂ. 14 ನಿವೇಶನಗಳನ್ನು ಪರಿಹಾರವಾಗಿ ನೀಡಲಾಗಿದೆ. ಪಾರ್ವತಿ ಅವರಿಗೆ ಅಕ್ರಮ ಪರಿಹಾರ ನಿವೇಶನ ಹಂಚಿಕೆಯಲ್ಲಿ ಮಾಜಿ ಮುಡಾ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖ ಪಾತ್ರ ವಹಿಸಿದ್ದಾರೆ.
ತನಿಖೆಯ ವೇಳೆ ಪಾರ್ವತಿ ಅವರಿಗೆ ಹಂಚಿಕೆಯಾದ 14 ನಿವೇಶನಗಳನ್ನು ಹೊರತುಪಡಿಸಿ, ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಮುಡಾ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಪರಿಹಾರವಾಗಿ ಅಕ್ರಮವಾಗಿ ಹಂಚಿಕೆ ಮಾಡಿರುವುದು ದೃಢಪಟ್ಟಿದೆ. ಪಡೆದುಕೊಂಡ ನಿವೇಶನಗಳನ್ನು ಭಾರೀ ಲಾಭಕ್ಕೆ ಮಾರಾಟ ಮಾಡಲಾಗಿದೆ. ಹೀಗೆ ಅಕ್ರಮವಾಗಿ ಗಳಿಸಿದ ಲಾಭವನ್ನು ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಲಾಗಿದೆ.
ದಾಳಿಯ ವೇಳೆ ಪ್ರಭಾವಿ ವ್ಯಕ್ತಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳ ಬೇನಾಮಿಗಳು/ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಮಾಜಿ ಮುಡಾ ಅಧ್ಯಕ್ಷ ಹಾಗೂ ಮುಡಾ ಆಯುಕ್ತರಿಗೆ ಸೇರಿದ ಸ್ಥಿರಾ ಆಸ್ತಿ ,ಮುಡಾ ನಿವೇಶನಗಳು ,ನಗದು ಇತ್ಯಾದಿಗಳ ಬಗ್ಗೆ ದಾಖಲೆ ಲಭ್ಯವಾಗಿದೆ. ಹೀಗೆ ಪಡೆದ ಅಕ್ರಮ ಹಣವನ್ನು ಮತ್ತಷ್ಟು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ. ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದ್ದರೂ ಕಾನೂನುಬದ್ಧ ಮೂಲಗಳಿಂದ ಪಡೆಯಲಾಗಿದೆ ಎಂದು ತೋರಿಸಿದ್ದಾರೆ
ಮುಡಾದ ಮಾಜಿ ಆಯುಕ್ತರಾಗಿದ್ದ ಜಿ.ಟಿ. ದಿನೇಶ್ ಕುಮಾರ್ ಅವರ ಸಂಬಂಧಿಕರ ಹೆಸರಿನಲ್ಲಿ ಆಸ್ತಿ, ಐಷಾರಾಮಿ ವಾಹನಗಳು ಇತ್ಯಾದಿಗಳನ್ನು ಖರೀದಿಸಲು ಸಹಕಾರಿ ಸಂಘದ ಮೂಲಕ ಹಣವನ್ನು ವರ್ಗಾಯಿಸಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.
ED, Bangalore has provisionally attached 142 immovable properties having market value of Rs. 300 Crore (approx.) registered in the name of various individuals who are working as real-estate businessmen and agents under the provisions of the PMLA, 2002, in connection with the case…
ಮೈಸೂರಿನ ಸಾಮಾಜಿಕ ಕಾರ್ಯಕರ್ತರಾದ ಗಂಗರಾಜು, ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಕುರಿತು ತನಿಖೆ ನಡೆಸಿದ ಇಡಿ, ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರ ಹೆಸರಿನಲ್ಲಿದ್ದ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಇದನ್ನೂ ಓದಿ: 189 ಕ್ಷೇತ್ರಗಳ ಶಾಸಕರಿಗೆ ತಲಾ 10 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ
ಮೈಸೂರು: ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna), ಸಿಎಂ ಬಳಿಕ ಮತ್ತೊಬ್ಬ ರಾಜಕಾರಣಿ ವಿರುದ್ಧ ದೂರು ನೀಡಿದ್ದಾರೆ.
ಹೌದು. 50:50 ನಿವೇಶನ ಪಡೆಯುವಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ (GT Devegowda) ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ, ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದಾಖಲೆ ಸಮೇತ ದೂರು ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಕರಣಕ್ಕೆ ಸೇರಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮದ್ವೆಯಾಗುವಂತೆ ಒತ್ತಡ – ಲಿವ್ ಇನ್ ಗೆಳತಿ ಕೊಂದು ಶವವನ್ನ 8 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಸೈಕೋ
ಕೋರ್ಟ್‌ನಲ್ಲಿ ವ್ಯಾಜ್ಯ ಇದ್ದ ಭೂಮಿಗೆ ಅಕ್ರಮವಾಗಿ 50:50 ಪರಿಹಾರ ಕೊಡಿಸಲಾಗಿದೆ. ಜಿ.ಟಿ ದೇವೇಗೌಡರ ಪ್ರಭಾವ ಬಳಸಿ ಚೌಡಯ್ಯ ಎಂಬವರ ಹೆಸರಿಗೆ 44,736 ಚದರ ಅಡಿ ಜಾಗದ 6 ನಿವೇಶನ ಕೊಡಿಸಿದ್ದಾರೆ. ಅದರಲ್ಲಿ ಕಿಕ್‌ಬ್ಯಾಕ್ ರೂಪದಲ್ಲಿ 2 ನಿವೇಶನ ತಮ್ಮ ಕುಟುಂಬಕ್ಕೆ ಬರೆಸಿಕೊಂಡಿದ್ದಾರೆ. ವಿಜಯನಗರ ಬಡಾವಣೆ 4ನೇ ಹಂತದಲ್ಲಿ 2 ನಿವೇಶನ ಪಡೆದು ಅದನ್ನ ತಮ್ಮ ಮಗಳು ಅನ್ನಪೂರ್ಣ ಹಾಗೂ ಅಳಿಯ ವಿಶ್ವೇಶ್ವರಯ್ಯ ಹೆಸರಿಗೆ ಕ್ರಯ ಮಾಡಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್ ಹೂವು
ಇದರಲ್ಲಿ ಜಿ.ಟಿ ದೇವೇಗೌಡ ಅವರ ಪ್ರಭಾವ ಇರುವುದು ದಟ್ಟವಾಗಿದೆ. ಆರ್‌ಟಿಸಿಯಲ್ಲಿ ಸರ್ಕಾರಿ ಭೂಮಿ ಎಂದು ಇದೆ. ಈ ವ್ಯಾಜ್ಯ ಕೋರ್ಟ್‌ನಲ್ಲಿ ಬಾಕಿ ಇದೆ. ಆದಾಗ್ಯೂ ಜಿಟಿಡಿ ತಮ್ಮ ಕುಟುಂಬಕ್ಕೆ 50:50 ನಿವೇಶನ ಬರೆಸಿಕೊಂಡಿರುವ ಅನುಮಾನವಿದೆ. ಮುಡಾ ವ್ಯಾಪ್ತಿಗೆ ಭೂಮಿ ಬರದಿದ್ದರೂ, ದೇವನೂರು ಬಡಾವಣೆಗೆ ಪರಿಹಾರ ಕೊಟ್ಟಂತೆ ಮಾಡಲಾಗಿದೆ. ಇದೆಲ್ಲದರ ಬಗ್ಗೆ ಸಮಗ್ರವಾಗಿ ತನಿಖೆ ನಡೆಸುವಂತೆ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಇಂದಿನಿಂದ ಮೂರು ದಿನ ಹಲವು ಕಾರ್ಯಕ್ರಮ
ಮೈಸೂರು: ಮುಡಾ ಹಗರಣ (MUDA Scam) ಹೊರಗೆ ಬರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರ ಜೀವಕ್ಕೆ ಕಂಟಕ ಎದುರಾಗುತ್ತಾ ಎಂಬ ಅನುಮಾನ ಮೂಡಿದೆ.
ಮಾಜಿ ಮಂತ್ರಿ ತನ್ವೀರ್ ಸೇಠ್ ಆಪ್ತ ಬ್ಯಾಂಕ್ ಮಂಜು ಆಡಿರುವ ಮಾತು ಇಂತಹ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಮೈಸೂರಿನ ಬೆಲವತ್ತ ಬಳಿಯ ಜಮೀನು ವಿಚಾರದಲ್ಲಿ ಕುಟುಂಬವೊಂದಕ್ಕೆ ಡಿ.5ರಂದು ಬ್ಯಾಂಕ್ ಮಂಜು ಧಮ್ಕಿ ಹಾಕಿದ್ದ. ಈ ವೇಳೆ ಜಮೀನು ಮಾಲೀಕ, ಸ್ನೇಹಮಯಿ ಕೃಷ್ಣ ಅಂಥವ್ರೇ ಸಿಎಂ ವಿರುದ್ಧ ಹೋರಾಡುತ್ತಿದ್ದಾರೆ. ನಾನು ನಿಮ್ಮ ವಿರುದ್ದ ಹೋರಾಡ್ತಿನಿ ಎಂದಿದ್ದರು.
ಈ ಮಾತಿಗೆ ಟಕ್ಕರ್ ನೀಡುವ ಭರದಲ್ಲಿ ಬ್ಯಾಂಕ್ ಮಂಜು, ಸ್ನೇಹಮಯಿ ಕೃಷ್ಣರನ್ನು ಸಿಎಂ ಸುಮ್ನೆ ಬಿಡ್ತಾರೆ ಅಂದ್ಕೊಂಡಿದ್ದಿಯಾ. ಸಮಯಕ್ಕಾಗಿ ಕಾಯ್ತಿದ್ದಾರೆ ಎಂದು ಹೇಳಿದ್ದ. ಅಂದ ಹಾಗೇ, ಈ ಘಟನೆ ನಡೆದ 17 ದಿನಕ್ಕೆ ಅಂದರೆ ಡಿ.22ರಂದು ಜಮೀನು ಮಾಲೀಕ ಹನುಮಂತು ನಡು ರಸ್ತೆಯಲ್ಲಿ ಕೊಲೆಯಾಗಿದ್ದ. ಈ ಕೇಸಲ್ಲಿ ಬ್ಯಾಂಕ್ ಮಂಜು ನಾಲ್ಕನೇ ಆರೋಪಿ ಆಗಿದ್ದಾನೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ, ನನಗೆ, ನನ್ನ ಕುಟುಂಬಕ್ಕೆ ಏನಾದರೂ ತೊಂದರೆ ಆದ್ರೆ ಸಿಎಂ ಹೊಣೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನೂ ಪೊಲೀಸರಿಗೆ ಮನವಿ ಮಾಡಿದ್ರೂ ಭದ್ರತೆ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.
ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೊಲೆಯಾದ ಹನುಮಂತು ಪುತ್ರ, ಕೊಲೆಯಾಗುವ ಮುನ್ನ ನಡೆದ ಗಲಾಟೆಯಲ್ಲಿ ನಮ್ಮ ತಂದೆಗೆ ಬ್ಯಾಂಕ್ ಮಂಜು ಅವಾಜ್ ಹಾಕಿದ್ದ. ಕತ್ತು ಕೊಯ್ದು ಕೊಲೆ ಮಾಡುವ ಬೆದರಿಕೆ ಹಾಕಲಾಗಿತ್ತು. ಅದೇ ಮಾದರಿಯಲ್ಲಿ 18 ಭಾರಿ ಚುಚ್ಚಿ ನಮ್ಮ ತಂದೆಯನ್ನು ಕೊಲೆ ಮಾಡಿದ್ದಾರೆ. ಕಾನೂನಿನ ಮೂಲಕ ನಮಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.