Tag: MUDA Site Allotment Scam

  • ಮುಡಾ ಹಗರಣ; ಸಿಎಂ ಪರವಾಗಿ ಸಂಪುಟ ನಿರ್ಣಯ

    ಮುಡಾ ಹಗರಣ; ಸಿಎಂ ಪರವಾಗಿ ಸಂಪುಟ ನಿರ್ಣಯ

    ಬೆಂಗಳೂರು: ಮುಡಾ ಹಗರಣ (MUDA) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಪರವಾಗಿ ಸಂಪುಟ (Cabinet) ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

    ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೋಟಿಸ್ ನೀಡಿದ್ದರು. ಆದರೆ ರಾಜ್ಯಪಾಲರ ನೋಟಿಸ್ ವಿರುದ್ಧ ಸುದೀರ್ಘ ನಿರ್ಣಯ ಮಾಡಿ ಕ್ಯಾಬಿನೆಟ್ ಒಪ್ಪಿಗೆ ಕೊಟ್ಟಿದೆ. ಇದನ್ನೂ ಓದಿ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ರೆ ಮುಂದೇನು?

    ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಸಲಾಯಿತು. ಮೂಡ ದಾಖಲೆಗಳನ್ನು ಸಚಿವ ಸಂಪುಟ ಸಭೆಗೆ ತರಿಸಿಕೊಳ್ಳಲಾಗಿತ್ತು. ಯಾರಿಗೆ ಸೈಟುಗಳ ಹಂಚಿಕೆಯಾಗಿದೆ ಎಂಬ ಸಂಪೂರ್ಣ ವಿವರ ತರಿಸಿಕೊಂಡು ಚರ್ಚಿಸಲಾಯಿತು.

    ಕ್ಯಾಬಿನೆಟ್‌ನಲ್ಲಿ, ರಾಜ್ಯಪಾಲರು ನೋಟಿಸ್‌ನಲ್ಲಿ ಎತ್ತಿರುವ ಪ್ರಶ್ನೆಗಳನ್ನು ವಿರೋಧಿಸಿ ಸುದೀರ್ಘ ನಿರ್ಣಯ ತೆಗೆದುಕೊಳ್ಳಲಾಯಿತು. ಸಾಮಾಜಿಕ ಕಾರ್ಯಕರ್ತರ ಟಿ.ಜೆ.ಅಬ್ರಹಾಂ ಎತ್ತಿರುವ ಆರೋಪಗಳಿಗೂ ದಾಖಲೆ ಸಮೇತ ಉತ್ತರ ಕೊಟ್ಟು ನಿರ್ಣಯಿಸಲಾಯಿತು. ಇದನ್ನೂ ಓದಿ: ಬಿಡಿಎ ಬಡಾವಣೆ ಮಾಡಲು ಜಮೀನು ಕೊಟ್ಟವರ ಕುಂದುಕೊರತೆ ನಿವಾರಿಸಿ – ಡಿಕೆಶಿಗೆ ಸುರೇಶ್‌ ಕುಮಾರ್‌ ಪತ್ರ

    ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ನಿರ್ಣಯ ಪಾಸ್ ಮಾಡಲಾಯಿತು. ರಾಜ್ಯಪಾಲರು ನೀಡಿರುವ ನೋಟಿಸ್ ಸರಿಯಿಲ್ಲ. ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯಬೇಕು. ಟಿ.ಜೆ.ಅಬ್ರಹಾಂ ಮಾಡಿರುವ ಎಲ್ಲ ದೂರುಗಳಿಗೂ ದಾಖಲೆಗಳ ಸಮೇತ ಉತ್ತರ ಕೊಡಲು ಸಂಪುಟ ತೀರ್ಮಾನಿಸಿದೆ.

    ರಾಜ್ಯಪಾಲರ ನೋಟಿಸ್‌ಗೆ ಸಂಪುಟ ಸಭೆ ತೀವ್ರ ಅಸಮಾಧಾನ ಹೊರಹಾಕಿದೆ. ನೋಟಿಸ್‌ನಲ್ಲಿ ಬಳಸಿದ ಪದ ಮತ್ತು ಒಕ್ಕಣಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ. ರಾಜ್ಯಪಾಲರ ಸ್ಥಾನ ರಾಜಕೀಯ ದುರುಪಯೋಗದ ಹಾದಿಯಲ್ಲಿರುವ ಬಗ್ಗೆ ಅನುಮಾನ ಮೂಡಿದೆ. ಪದ ಮತ್ತು ಒಕ್ಕಣಿಕೆ ಸಹಿತ ನೋಟಿಸ್ ವಾಪಸ್ ಪಡೆಯಬೇಕು. ಇಲ್ಲವೇ ಕಾನೂನು ಹೋರಾಟ ನಡೆಸಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ.

  • ಮುಡಾ ಸೈಟ್ ಹಗರಣ ಕೇಸ್; ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ನೋಟಿಸ್

    ಮುಡಾ ಸೈಟ್ ಹಗರಣ ಕೇಸ್; ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರಿಂದ ನೋಟಿಸ್

    ಬೆಂಗಳೂರು: ಮುಡಾ ಅಕ್ರಮ ಸೈಟು (MUDA Site Allotment Scam) ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ (Siddaramaiah) ರಾಜ್ಯಪಾಲರು ನೋಟಿಸ್ ನೀಡಿದ್ದಾರೆ.

    ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಇದನ್ನೇ ಆಧರಿಸಿ ವಿವರಣೆ ಕೋರಿ ಇದೀಗ ರಾಜ್ಯಪಾಲರು ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಹೀಗಾಗಿಯೇ ರಾಜಭವನದ ಮೇಲೆ ಸಚಿವರು ಸಂಶಯ ವ್ಯಕ್ತಪಡಿಸಿದ್ದಾರೆ. ಇ.ಡಿ ಜೊತೆಗೆ ರಾಜಭವನದ ದುರುಪಯೋಗ ಆಗ್ತಿದೆ ಅಂತಾ ಆರೋಪಿಸಿ ಗರಂ ಆಗಿದ್ದಾರೆ. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ನಾಳೆ ಕ್ಯಾಬಿನೆಟ್‌ನಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ.

    ಕ್ಯಾಬಿನೆಟ್ ನಿರ್ಣಯದ ವೇಳೆ ಸಿಎಂ ಸಿದ್ದರಾಮಯ್ಯ ಸಭೆಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಇದೀಗ ಬಿಜೆಪಿಗರು ಪ್ರತಿ ದಾಳಿಗೆ ನಿಂತಿದ್ದಾರೆ. ಆದರೆ ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಇ.ಡಿ ಅನುಮತಿ ಕೇಳಿಲ್ಲ. ಇದನ್ನೂ ಓದಿ: ಆರಗ ಜ್ಞಾನೇಂದ್ರ, ತಂಡದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹ ಅಧ್ಯಯನ

    ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬAಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

  • ನನ್ನ ಹೆಸರಿಗೆ ಮಸಿ ಬಳಿಯಲು ವಿಪಕ್ಷಗಳಿಂದ ಪ್ರತಿಭಟನೆ: ಸಿದ್ದರಾಮಯ್ಯ

    ನನ್ನ ಹೆಸರಿಗೆ ಮಸಿ ಬಳಿಯಲು ವಿಪಕ್ಷಗಳಿಂದ ಪ್ರತಿಭಟನೆ: ಸಿದ್ದರಾಮಯ್ಯ

    ಬೆಂಗಳೂರು: ನನ್ನ ಹೆಸರಿಗೆ ಮಸಿ ಬಳಿಯಲು, ನನ್ನ ವಿರುದ್ದ ಹೊಟ್ಟೆ ಕಿಚ್ಚಿನಿಂದ ವಿಪಕ್ಷಗಳು ಮುಡಾ ಹಗರಣದಲ್ಲಿ (MUDA Scam) ರಾಜಕೀಯ ಮಾಡ್ತಿವೆ ಸಿಎಂ ಸಿದ್ದರಾಮಯ್ಯ (Karnataka CM Siddaramaiah) ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ ವಿರುದ್ದ ಕಿಡಿಕಾರಿದ್ದಾರೆ.
    ವಿಧಾನ ಪರಿಷತ್ ‌ಕಲಾಪ ಪ್ರಾರಂಭವಾದ ಕೂಡಲೇ ವಿಪಕ್ಷಗಳು ಸದನದ ಬಾವಿಗಿಳಿದು ಮೂಡಾ ಹಗರಣ ಬಗ್ಗೆ ಚರ್ಚೆಗೆ ಅವಕಾಶ ಕೇಳಿದ್ರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಅವರು ವಿಷಯವೇ ಇಲ್ಲದ್ದನ್ನ ವಿಷಯ ಮಾಡ್ತಿದ್ದಾರೆ. ಸುಮ್ಮನೆ ಮುಡಾ ವಿಷಯ ಇಟ್ಟುಕೊಂಡು ಪ್ರತಿಭಟನೆ ಮಾಡ್ತಿದ್ದಾರೆ. ನಿಯಮಾವಳಿ ಪ್ರಕಾರವೇ ಸೈಟ್ ಪಡೆಯಲಾಗಿದೆ. ಕಾನೂನು ಪ್ರಕಾರವೇ ಎಲ್ಲಾ ಆಗಿದೆ. ಮುಡಾ ಸೈಟ್ ಕೊಟ್ಟಾಗ ಬಿಜೆಪಿಯೇ ಅಧಿಕಾರದಲ್ಲಿ ಇತ್ತು. ಅದರೂ ಈಗ ಪ್ರತಿಭಟನೆ ಮಾಡಿಸ್ತಿದ್ದಾರೆ ಅಂತ ವಿಪಕ್ಷಗಳ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಪ್ರೇಯಸಿಯೊಂದಿಗೆ ಹೆಡ್ ಕಾನ್‌ಸ್ಟೇಬಲ್‌ ಸರಸ ಸಲ್ಲಾಪ; ರೆಡ್‌ಹ್ಯಾಂಡಾಗಿ ಹಿಡಿದ ಪತ್ನಿ
    ಅವರು ಕೊಟ್ರು, ನಾವು ತಗೊಂಡ್ವಿ!: ಮುಡಾ ಕೇಸ್  ತನಿಖೆಗೆ ನಿವೃತ್ತಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ತನಿಖೆ ಮಾಡೋವಾಗ ಚರ್ಚೆ ಮಾಡೋದು ಸರಿಯಲ್ಲ ಅಂತ ಸಭಾಪತಿ ರೂಲಿಂಗ್ ಅನ್ನ ಸಮರ್ಥನೆ ಮಾಡಿಕೊಂಡರು. ಸೈಟ್ ತೆಗೆದುಕೊಂಡಿರೋದ್ರಲ್ಲಿ ನನ್ನ ತಪ್ಪಿಲ್ಲ. 50:50 ನಿಯಮ ಮಾಡಿದ್ದು ಬಿಜೆಪಿ ಅವಧಿಯಲ್ಲಿ. ನಮ್ಮ ಜಮೀನಿಗೆ ಪರ್ಯಾಯವಾಗಿ ನಾವು ಸೈಟ್ ಕೇಳಿದಾಗ ಮೂಡಾ ಸೈಟ್  ಕೊಟ್ಟಿದೆ. ನಾವು ಇದೇ ಜಾಗ ಕೊಡಿ ಅಂತ ನಾವು ಕೇಳಿರಲಿಲ್ಲ. ಅವರು ‌ಕೊಟ್ಟರು, ನಾವು ತಗೊಂಡ್ವಿ ಅಂತ ತಿಳಿಸಿದರು. ಇದನ್ನೂ ಓದಿ: ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ
    ವಿಪಕ್ಷಗಳ ಪ್ರತಿಭಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ‌. ನನ್ನ ಹೆಸರಿಗೆ ಮಸಿ ಬಳಿಯಲು ಹೀಗೆ ಮಾಡ್ತಿದ್ದಾರೆ. 40 ವರ್ಷಗಳಿಂದ ನನ್ನ ಮೇಲೆ ಯಾವುದೇ ಕಪ್ಪು ಚುಕ್ಕಿ ಇಲ್ಲ. ಹೀಗಾಗಿ ವಿಪಕ್ಷಗಳಿಗೆ ಹೊಟ್ಟೆ ಕಿಚ್ಚು. ಹೊಟ್ಟೆ ಕಿಚ್ಚಿಗೆ ಹೀಗೆ ಮಾಡ್ತಿದ್ದಾರೆ. ಕಾನೂನು ರೀತಿ ಸೈಟ್ ಹಂಚಿಕೆ‌ ಆಗಿದೆ ಎಂದು ಮುಡಾ ಸೈಟ್ ಹಂಚಿಕೆಯನ್ನು ಸಮರ್ಥನೆ ಮಾಡಿಕೊಂಡರು.

  • ವಿಶ್ವನಾಥ್‌, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್‌ ಬಾಂಬ್‌!

    ವಿಶ್ವನಾಥ್‌, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್‌ ಬಾಂಬ್‌!

    – ವಿಶ್ವನಾಥ್‌ ರೋಲ್‌ಕಾಲ್‌ ಗಿರಾಕಿ – ಏಕವಚನದಲ್ಲೇ ಸಚಿವ ವಾಗ್ದಾಳಿ

    ಚಾಮರಾಜನಗರ:‌ ಯಾರ್ರಿ ಅವನು ವಿಶ್ವನಾಥ್‌ (H Vishwanath), ರಿಯಲ್‌ ಎಸ್ಟೇಟ್‌ ಒಂದು ಉದ್ಯಮ ಅಲ್ವಾ? ಅವ್ನು, ಅವನ ಮಗ ನನ್ನ ಮನೆಗೆ ಸೈಟು ಕೇಳಿಕೊಂಡು ಬಂದಿದ್ದ ಫೋಟೋ ಇದೆ. ಅವನು ಏಕವಚನ ಬಳಸಿದ್ರೆ, ನನಗೂ ಅದರಪ್ಪನಂಗೆ ಮಾತಾಡೋಕೆ ಬರುತ್ತೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh), ವಿಧಾನ ಪರಿಷತ್‌ ಸದಸ್ಯ ಹೆಚ್‌. ವಿಶ್ವನಾಥ್‌ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: MUDA Scam| ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ, ಬರೀ ಬೊಗಳೆ ಬಿಡ್ತಾನೆ: ಹೆಚ್‌ವಿಶ್ವನಾಥ್‌

    ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೈರತಿ ಸುರೇಶ್ ಒಬ್ಬ ರಿಯಲ್ ಎಸ್ಟೇಟ್ ಗಿರಾಕಿ (Real Estate Agent) ಎಂಬ ವಿಶ್ವನಾಥ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಯಾರ್ರಿ ಅವನು ವಿಶ್ವನಾಥ್, ರಿಯಲ್ ಎಸ್ಟೇಟ್ ಒಂದು ಉದ್ಯಮ ಅಲ್ವಾ? ಅವನು ಮತ್ತು ಅವನ ಮಗ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೊ ಇದೆ. ಅವನು ಏಕವಚನ ಬಳಸಿದ್ರೆ ನಾನೂ ಅದಕ್ಕಿಂತ ಹೆಚ್ಚಿಗೆ ಮಾತನಾಡೋಕೆ ಬರುತ್ತೆ. ನಾನು ಹಳ್ಳಿಯಲ್ಲೇ ಹುಟ್ಟಿ ಬೆಳೆದಿರೋದು, ಅದರಪ್ಪನಂಗೆ ಮಾತಾಡ್ತಾನಿ. ಮೊದಲು ಮರ್ಯಾದೆ ಕೊಟ್ಟು, ಮರ್ಯಾದೆ ತೆಗೆದುಕೊಳ್ಳಲಿ. ವಿಶ್ವನಾಥ್ ತರ ನಾನು ರೋಲ್ ಕಾಲ್ ಗಿರಾಕಿ ಅಲ್ಲ. ವಯಸ್ಸಾಗಿದೆ ಅಂತ ಅಷ್ಟೇ ಬೆಲೆ ಕೊಡ್ತೀವಿ ಅದನ್ನ ಉಳಿಸಿ ಕೊಳ್ಳಲಿ ಎಂದು ಎಚ್ಚರಿಕೆ ನೀಡಿದ್ದಾರೆ.

    ಮೈಸೂರು ಮುಡಾ ಹಗರಣ (MUDA Site Allotment Scam) ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಗರಣ ಇದ್ದರೆ ತಾನೇ ಆಚೆಗೆ ಬರೋದು. ಯಾವ ಹಗರಣವೂ ನಡೆದಿಲ್ಲ. ಇನ್ನೂ ಹಗರಣ ಅಂತ ಸಾಬೀತಾಗಿಲ್ಲ. ಸೈಟ್‌ಗಳನ್ನು ಏಜೆಂಟ್, ರೈತರು, ಮಧ್ಯವರ್ತಿಗಳಿಗೆ ಕೊಟ್ಟಿದ್ದಾರಾ ಅಂತ ಗೊತ್ತಾಗಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಸರ್ಕಾರಕ್ಕೆ ಸೈಟ್ ವಾಪಸ್ ಕೊಡದಿದ್ದರೆ‌ ಭ್ರಷ್ಟಾಚಾರ ಚಿರಸ್ಥಾಯಿಯಾಗಿ ಉಳಿಯುತ್ತೆ: ಹೆಚ್. ವಿಶ್ವನಾಥ್

    ಇನ್ನೂ ಮುಡಾ ಹಗರಣ ಸಿಬಿಐ ತನಿಖೆಗೆ ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ರಾಜ್ಯದಲ್ಲಿ ಪೊಲೀಸ್ ಇಲ್ವಾ? ನಮ್ಮಲ್ಲಿ ಅಧಿಕಾರಿಗಳಿಲ್ವಾ? ಹಗರಣ ನಡೆದಿದ್ರೆ ತಾನೇ ಸಿಬಿಐಗೆ ಕೊಡೋದು. ಬಿಜೆಪಿಯವರು ಏನ್ ಮಹಾ, ಎಷ್ಟು ತನಿಖೆಯನ್ನ ಸಿಬಿಐಗೆ ಕೊಟ್ಟಿದ್ದಾರೆ? ನಮ್ಮಲ್ಲೇ ಅಧಿಕಾರಿಗಳಿಲ್ವಾ? ಇಬ್ಬರು ಐಎಎಸ್ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ. ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ. ಬಿಜೆಪಿ, ಜೆಡಿಎಸ್ ನವರು ಹೇಳ್ತಾರೆ ಅಂತ ಎಲ್ಲವನ್ನೂ ಸಿಬಿಐ ತನಿಖೆಗೆ ಕೊಡೋಕಾಗುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಚುನಾವಣೆ – ತಯಾರಿ ಆರಂಭಿಸಿದ ಬಿಜೆಪಿ