Tag: mudhola

  • ಕಾರಲ್ಲಿ ಕುಳಿತಿದ್ದಾಗಲೇ RSS ಮುಖಂಡ ಹೃದಯಾಘಾತದಿಂದ ಸಾವು

    ಕಾರಲ್ಲಿ ಕುಳಿತಿದ್ದಾಗಲೇ RSS ಮುಖಂಡ ಹೃದಯಾಘಾತದಿಂದ ಸಾವು

    ಬಾಗಲಕೋಟೆ: ಕಾರಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ (Heart Attack) ಜಿಲ್ಲಾ ಆರ್‌ಎಸ್‌ಎಸ್ ಮುಖಂಡರೋರ್ವರು (RSS Leader) ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ಲೋಕಾಪುರ ಪಟ್ಟಣದಲ್ಲಿ ನಡೆದಿದೆ.

    ಸಿದ್ದು ಚಿಕ್ಕದಾನಿ (೪೫) ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿ. ಮೃತ ಆರ್‌ಎಸ್‌ಎಸ್ ಮುಖಂಡ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ನಗರದ ನಿವಾಸಿಯಾಗಿದ್ದು, ನಿನ್ನೆ ರಾತ್ರಿ ಕಾರಿಗೆ ಡೀಸೆಲ್ ಹಾಕಿಸಿಕೊಂಡು, ಬಂಕ್‌ನಿಂದ ಹೊರಡಲು ಕಾರು ಸ್ಟಾರ್ಟ್ ಮಾಡಿದ್ದರು. ಸ್ಟಾರ್ಟ್ ಆದ ಕಾರು ಸ್ವಲ್ಪ ಮುಂದೆ ಹೋಗಿ ಪೆಟ್ರೋಲ್ ಬಂಕ್ ಆವರಣದಲ್ಲೇ ನಿಂತಿದೆ.

    ಇಡೀ ರಾತ್ರಿ ಪೆಟ್ರೋಲ್ ಬಂಕ್ ಆವರಣದಲ್ಲೇ ಕಾರು ಇದ್ದಿದ್ದನ್ನು ಗಮನಿಸಿದ ಬಂಕ್ ಸಿಬ್ಬಂದಿ ಕಾರಿನ ಬಳಿ ಬಂದು, ಬಾಗಿಲು ತೆರೆದು ಪರಿಶೀಲಿಸಿದ್ದಾರೆ. ಈ ವೇಳೆ ಸಿದ್ದು ಚಿಕ್ಕದಾನಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಹಾರಾಣಿ ಕಾಲೇಜು ಆವರಣದಲ್ಲಿ ಅಪಘಾತ – ವಿದ್ಯಾರ್ಥಿಗಳಿಗೆ ಪ್ರೊಫೆಸರ್ ಕಾರು ಡಿಕ್ಕಿ

    ಸ್ಥಳಕ್ಕೆ ಆಗಮಿಸಿದ ಮುಧೋಳ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ನಟ ನಾಗಭೂಷಣ್ ಕಾರು ಅಪಘಾತ: ಪೊಲೀಸರ ಕೈ ಸೇರಿದ ಮತ್ತೊಂದು ವರದಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗನ ಚಿತ್ರಕ್ಕೆ ‘ಮುಧೋಳ’ ಎಂದು ಟೈಟಲ್ ಇಟ್ಟ ರವಿಚಂದ್ರನ್

    ಮಗನ ಚಿತ್ರಕ್ಕೆ ‘ಮುಧೋಳ’ ಎಂದು ಟೈಟಲ್ ಇಟ್ಟ ರವಿಚಂದ್ರನ್

    ಕ್ರೇಜಿಸ್ಟಾರ್ ರವಿಚಂದ್ರನ್ (Ravichandran) ಪುತ್ರ ವಿಕ್ರಮ್ (Vikram) ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಮುಧೋಳ (Mudhola) ಎಂದು ಹೆಸರಿಟ್ಟಿದ್ದು, ಈ ಟೈಟಲ್ (Title) ಆಯ್ಕೆ ಮಾಡಿದ್ದು ಸ್ವತಃ ರವಿಚಂದ್ರನ್ ಎಂದು ಚಿತ್ರತಂಡ ಹೇಳಿಕೊಂಡಿದೆ. ಮುಧೋಳ ಎನ್ನುವುದು ಉತ್ತರ ಕರ್ನಾಟಕದ ಊರು. ಈ ಊರು ಮುಧೋಳ ನಾಯಿಗೆ ಫೇಮಸ್. ಅಲ್ಲದೇ, ಹೀರೋ ಹೆಸರು ಕೂಡ ಮುಧೋಳ ಎಂದೇ ಇದೆಯಂತೆ. ಈ ಎಲ್ಲ ಕಾರಣಕ್ಕಾಗಿ ಈ ಟೈಟಲ್ ಆಯ್ಕೆಯಾಗಿದೆ.

    ಮುಧೋಳ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ವಿಕ್ರಮ್ ರವಿಚಂದ್ರನ್, ತ್ರಿವಿಕ್ರಮ ರಿಲೀಸ್ ಆಗಿದ್ದು ಜೂನ್ 24, ಅದು ಆದ್ಮೇಲೆ ಏಪ್ರಿಲ್ 26 ಅಂದ್ರೆ ಇವತ್ತು ನನ್ನ ಎರಡನೇ ಸಿನಿಮಾದ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ತುಂಬಾ ಜನ ವಿಕೆಆರ್ ಅಂದ್ರೇನು ಅಂತಾ ಕೇಳುತ್ತಿದ್ರು. ವಿಕೆಆರ್ ವಿಕ್ರಮ್ ರವಿಚಂದ್ರನ್ ಅನ್ನೋದು ತುಂಬಾ ಜನಕ್ಕೆ ಗೊತ್ತಿದೆ. ವಿಕೆಆರ್ ಕೆ ಬ್ರ್ಯಾಂಡ್ ಶುರು ಮಾಡೋಣಾ ಅಂತಾ. ವಿಕೆಆರ್ ವಿಕ್ರಮ್ ರವಿಚಂದ್ರನ್ ಬರುತ್ತದೆ. ವೀರಸ್ವಾಮಿ ರವಿಚಂದ್ರನ್ ಬರುತ್ತೇ. ನೆಕ್ಸ್ಟ್ ನಿಮ್ಮ ಫೇವರೇಟ್ ಡಾ. ವಿ ರವಿಚಂದ್ರನ್ ಹೆಸರು ಬರುತ್ತದೆ. ಇದರ ಮಧ್ಯೆ ಕನ್ನಡ ಬರುತ್ತದೆ. ಪ್ರಯತ್ನ ಅನ್ನೋದು ನಿರಂತರ. ಪ್ರಯತ್ನ ಮಾಡಿ ಜೀವನದಲ್ಲಿ ಗೆಲುವುದು ಮುಖ್ಯವಲ್ಲ. ಜೀವನವನ್ನೇ ಗೆಲ್ಲಬಹುದು. ಆ ರೀತಿ ಒಂದು ತಂಡ ನಿಮ್ಮ ಮುಂದೆ. ನನ್ನ ಎರಡನೇ ಹೆಜ್ಜೆ..ನಿಮ್ಮ ಪ್ರೀತಿ ಹಾರೈಕೆ ಹೀಗೆ ಇರಲಿ ಎಂದರು.

    ನಿರ್ದೇಶಕ ಕಾರ್ತಿಕ್ ರಾಜನ್ (Karthik Rajan) ಮಾತನಾಡಿ, ಮುಧೋಳಗಾಗಿ ತುಂಬಾ ಕಡೆ ಹುಡುಕಾಡಿದೆವು. ನಮ್ಮ ಮ್ಯಾನೇಜರ್ ಹತ್ತಿರ ಹೇಳಿದೆ. ತ್ಯಾಗರಾಜ್ ಎಂಬುವವರು ಆ ಶ್ವಾನ ಟ್ರೈನ್ ಮಾಡಿದ್ದಾರೆ. ಟೈಟಲ್ ಟೀಸರ್ ನಲ್ಲಿ ಶ್ವಾನ ಚಾಕು ಕಚ್ಚಿಕೊಂಡು ಬರುವ ದೃಶ್ಯಕ್ಕಾಗಿ 23 ಟೇಕ್ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:ಪತಿ ಜೊತೆ ವಿದೇಶಕ್ಕೆ ಹಾರಿದ ‘ಬಿಗ್ ಬಾಸ್’ ಬೆಡಗಿ ಅಕ್ಷತಾ ಕುಕಿ

    ಸಂಭಾಷಣೆಗಾರ ಮಾಸ್ತಿ ಮಾತನಾಡಿ, ಈಶ್ವರಿ ಕಂಬೈನ್ಸ್ ಅನ್ನೋದು ಲೆಗೆಸಿ. ಹೀರೋಯಿನ್ಸ್ ಗಳು ರವಿಚಂದ್ರನ್ ಸರ್ ಜೊತೆ ಕೆಲಸ ಮಾಡ್ಬೇಕು ಎಂದುಕೊಳ್ತಿದ್ರು. ಅದೇ ರೀತಿ ರೈಟರ್ಸ್ ಆ ಸಂಸ್ಥೆ ಜೊತೆ ಕೆಲಸ ಮಾಡಬೇಕು ಎಂದುಕೊಳ್ತಿದ್ರು. ಈಶ್ವರಿ ಕಂಬೈನ್ಸ್ ಅನ್ನೋದು ಪರಂಪರೆ. ಆ ಸಂಸ್ಥೆಯ ಜೊತೆ ವಿಕ್ರಮ್ ಸರ್ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಎಂದರು.

    ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಮುಧೋಳ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಹೆಜ್ಜೆ. ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಂದ್ರನ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ಟಗರು, ಸಲಗ ಸಿನಿಮಾ ಖ್ಯಾತಿ ಮಾಸ್ತಿ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ.ಕೆ.ರವಿವರ್ಮಾ ಆಕ್ಷನ್ ಚಿತ್ರಕ್ಕಿದೆ. ತಂಡವ್ ಸ್ಟುಡಿಯೋಸ್ ಬ್ಯಾನರ್ ನಡಿ ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ನಿರ್ಮಾಣ ಮಾಡ್ತಿರುವ ಮಧೋಳ್ ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿ ಅಭಿಲಾಶ್, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಈಗಾಗ್ಲೇ 30 ದಿನ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮತ್ತಷ್ಟು ಕಲಾವಿದರ ಬಗ್ಗೆ ಶೀರ್ಘದಲ್ಲಿಯೇ ಮಾಹಿತಿ ನೀಡಲಿದೆ.

  • ಗ್ಯಾಂಗ್ ಸ್ಟರ್ ಅವತಾರದಲ್ಲಿ ಕ್ರೇಜಿಸ್ಟಾರ್ ಪುತ್ರ ವಿಕ್ರಮ್

    ಗ್ಯಾಂಗ್ ಸ್ಟರ್ ಅವತಾರದಲ್ಲಿ ಕ್ರೇಜಿಸ್ಟಾರ್ ಪುತ್ರ ವಿಕ್ರಮ್

    ಸ್ಯಾಂಡಲ್ ವುಡ್ ಕನಸುಗಾರ ಡಾ.ವಿ ರವಿಚಂದ್ರನ್ ದ್ವಿತೀಯ ಪುತ್ರ ಮರಿ ರಣಧೀರ ವಿಕ್ರಮ್ ರವಿಚಂದ್ರನ್ (Vikram Ravichandran) ಎರಡನೇ ಕನಸಿಗೆ ಮಧೋಳ್ (Mudhola) ಎಂಬ ಕ್ಯಾಚಿ ಟೈಟಲ್ (Title) ಇಡಲಾಗಿದೆ. ಬೆಂಗಳೂರಿನ ನವರಂಗ್ ಚಿತ್ರಮಂದಿರದಲ್ಲಿ ಅಭಿಮಾನಿಗಳ ನಡುವೆ ವಿಕ್ಕಿ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಮಾಡಲಾಯಿತು. ಟೈಟಲ್ ಟೀಸರ್ ಮೂಲಕ ಎಂಟ್ರಿ ಕೊಟ್ಟ ವಿಕ್ರಮ್ ರವಿಚಂದ್ರನ್ ಕಂಪ್ಲೀಟ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅಷ್ಟಕ್ಕೂ ಕ್ರೇಜಿಸ್ಟಾರ್ ಪುತ್ರನ ಚಿತ್ರಕ್ಕೆ ಮುಧೋಳ್ ಎಂಬ ಟೈಟಲ್ ಕೊಟ್ಟಿದ್ದೇ ವಿ. ರವಿಚಂದ್ರನ್..ತ್ರಿವಿಕ್ರಮ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಅಡಿ ಇಟ್ಟಿದ ವಿಕ್ಕಿ ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಮೂಲಕ ಸಿನಿರಸಿಕರನ್ನು ರಂಜಿಸಲು ಬರ್ತಿದ್ದಾರೆ.

    ಮುಧೋಳ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ವಿಕ್ರಮ್ ರವಿಚಂದ್ರನ್, ತ್ರಿವಿಕ್ರಮ ರಿಲೀಸ್ ಆಗಿದ್ದು ಜೂನ್ 24, ಅದು ಆದ್ಮೇಲೆ ಏಪ್ರಿಲ್ 26 ಅಂದ್ರೆ ಇವತ್ತು ನನ್ನ ಎರಡನೇ ಸಿನಿಮಾದ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ತುಂಬಾ ಜನ ವಿಕೆಆರ್ ಅಂದ್ರೇನು ಅಂತಾ ಕೇಳುತ್ತಿದ್ರು. ವಿಕೆಆರ್ ವಿಕ್ರಮ್ ರವಿಚಂದ್ರನ್ ಅನ್ನೋದು ತುಂಬಾ ಜನಕ್ಕೆ ಗೊತ್ತಿದೆ. ವಿಕೆಆರ್ ಕೆ ಬ್ರ್ಯಾಂಡ್ ಶುರು ಮಾಡೋಣಾ ಅಂತಾ. ವಿಕೆಆರ್ ವಿಕ್ರಮ್ ರವಿಚಂದ್ರನ್ ಬರುತ್ತದೆ. ವೀರಸ್ವಾಮಿ ರವಿಚಂದ್ರನ್ ಬರುತ್ತೇ. ನೆಕ್ಸ್ಟ್ ನಿಮ್ಮ ಫೇವರೇಟ್ ಡಾ. ವಿ ರವಿಚಂದ್ರನ್ ಹೆಸರು ಬರುತ್ತದೆ. ಇದರ ಮಧ್ಯೆ ಕನ್ನಡ ಬರುತ್ತದೆ. ಪ್ರಯತ್ನ ಅನ್ನೋದು ನಿರಂತರ. ಪ್ರಯತ್ನ ಮಾಡಿ ಜೀವನದಲ್ಲಿ ಗೆಲುವುದು ಮುಖ್ಯವಲ್ಲ. ಜೀವನವನ್ನೇ ಗೆಲ್ಲಬಹುದು. ಆ ರೀತಿ ಒಂದು ತಂಡ ನಿಮ್ಮ ಮುಂದೆ. ನನ್ನ ಎರಡನೇ ಹೆಜ್ಜೆ..ನಿಮ್ಮ ಪ್ರೀತಿ ಹಾರೈಕೆ ಹೀಗೆ ಇರಲಿ ಎಂದರು.

    ನಿರ್ದೇಶಕ ಕಾರ್ತಿಕ್ ರಾಜನ್ (Karthik Rajan) ಮಾತನಾಡಿ, ಮುಧೋಳ್ ಗಾಗಿ ತುಂಬಾ ಕಡೆ ಹುಡುಗಾಡಿದೆವು. ನಮ್ಮ ಮ್ಯಾನೇಜರ್ ಹತ್ತಿರಹೇಳಿದೆ. ತ್ಯಾಗರಾಜ್ ಎಂಬುವವರು ಆ ಶ್ವಾನ ಟ್ರೈನ್ ಮಾಡಿದ್ದಾರೆ. ಟೈಟಲ್ ಟೀಸರ್ ನಲ್ಲಿ ಶ್ವಾನ ಚಾಕು ಕಚ್ಚಿಕೊಂಡು ಬರುವ ದೃಶ್ಯಕ್ಕಾಗಿ 23 ಟೇಕ್ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ:ಮತ್ತೆ ಕಿರುತೆರೆಯತ್ತ ದೀಪಿಕಾ ದಾಸ್

    ಸಂಭಾಷಣೆಗಾರ ಮಾಸ್ತಿ ಮಾತನಾಡಿ, ಈಶ್ವರಿ ಕಂಬೈನ್ಸ್ ಅನ್ನೋದು ಲೆಗೆಸಿ. ಹೀರೋಯಿನ್ಸ್ ಗಳು ರವಿಚಂದ್ರನ್ ಸರ್ ಜೊತೆ ಕೆಲಸ ಮಾಡ್ಬೇಕು ಎಂದುಕೊಳ್ತಿದ್ರು. ಅದೇ ರೀತಿ ರೈಟರ್ಸ್ ಆ ಸಂಸ್ಥೆ ಜೊತೆ ಕೆಲಸ ಮಾಡಬೇಕು ಎಂದುಕೊಳ್ತಿದ್ರು. ಈಶ್ವರಿ ಕಂಬೈನ್ಸ್ ಅನ್ನೋದು ಪರಂಪರೆ. ಆ ಸಂಸ್ಥೆಯ ಜೊತೆ ವಿಕ್ರಮ್ ಸರ್ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಎಂದರು.

    ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಮುಧೋಳ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಹೆಜ್ಜೆ. ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಂದ್ರನ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ಟಗರು, ಸಲಗ ಸಿನಿಮಾ ಖ್ಯಾತಿ ಮಾಸ್ತಿ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ.ಕೆ.ರವಿವರ್ಮಾ ಆಕ್ಷನ್ ಚಿತ್ರಕ್ಕಿದೆ. ತಂಡವ್ ಸ್ಟುಡಿಯೋಸ್ ಬ್ಯಾನರ್ ನಡಿ ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ನಿರ್ಮಾಣ ಮಾಡ್ತಿರುವ ಮಧೋಳ್ ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿ ಅಭಿಲಾಶ್, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಈಗಾಗ್ಲೇ 30 ದಿನ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಮತ್ತಷ್ಟು ಕಲಾವಿದರ ಬಗ್ಗೆ ಶೀರ್ಘದಲ್ಲಿಯೇ ಮಾಹಿತಿ ನೀಡಲಿದೆ.

  • ಕ್ವಾರಂಟೈನ್ ಕೇಂದ್ರದಲ್ಲೇ ಅರಳಿದ ವಿಘ್ನ ವಿನಾಶಕ

    ಕ್ವಾರಂಟೈನ್ ಕೇಂದ್ರದಲ್ಲೇ ಅರಳಿದ ವಿಘ್ನ ವಿನಾಶಕ

    ಬಾಗಲಕೋಟೆ: ಕೆಸರಿನಲ್ಲಿಯೇ ಕಮಲದ ಹೂ ಅರಳುವಂತೆ ಕ್ವಾರಂಟೈನ್ ಕೇಂದ್ರದಲ್ಲಿ ಇದ್ದರೂ ಜಿಲ್ಲೆಯ ಶಿಲ್ಪಕಲಾವಿದರೊಬ್ಬರು ತಮ್ಮ ಕೈ ಚಳಕದಿಂದ ಗಣೇಶನ ಮೂರ್ತಿ ಕೆತ್ತನೆ ಮಾಡಿ ಗಮನ ಸಳೆದಿದ್ದಾರೆ.

    ಮುಧೋಳ ತಾಲೂಕಿನ ಲೋಕಾಪುರದ ಮಲ್ಲಪ್ಪ ಬಡಿಗೇರ ಅವರ ಕುಟುಂಬಸ್ಥರು ಕೊರೊನಾ ಭೀತಿ ಹಿನ್ನೆಲೆ ಮಹಾರಾಷ್ಟ್ರದಿಂದ ಊರಿಗೆ ವಾಪಸ್ ಆಗಿದ್ದರು. ಆದರೆ ಅವರನ್ನು ಲೋಕಾಪುರದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಹೀಗಾಗಿ ಮಲ್ಲಪ್ಪ ಅವರು ಕೂಡ ಕುಟುಂಬಸ್ಥರೊಂದಿಗೆ ಕ್ವಾರಂಟೈನ್ ಕೇಂದ್ರದಲ್ಲಿ ಉಳಿದಿದ್ದರು.

    ಶಿಲ್ಪಕಲಾವಿದ ಮಲ್ಲಪ್ಪ ತಮ್ಮ ಆಸಕ್ತಿಯನ್ನು ಕ್ವಾರಂಟೈನ್ ಕೇಂದ್ರದ ಅಧಿಕಾರಿಗಳ ಮುಂದೆ ವ್ಯಕ್ತಪಡಿಸಿದ್ದರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಗಂಗೂಬಾಯಿ ಮಾನಕರ್ ಅವರು ಮೂರ್ತಿ ಕೆತ್ತನೆ ಕೆಲಸ ಕೊಟ್ಟು ಅಗತ್ಯ ಸಾಮಗ್ರಿಗಳನ್ನು ನೀಡಿದ್ದರು. ತಮಗೆ ದೊರೆತ ಕೆಲವೇ ಕೆಲವು ಸಾಮಗ್ರಿಗಳಿಂದ ಮಲ್ಲಪ್ಪ ಅವರು ವಿಘ್ನ ವಿನಾಶಕ ಗಣೇಶ್‍ನ ವಿಗ್ರಹವನ್ನ ಕೆತ್ತನೆ ಮಾಡಿ ಗಮನ ಸಳೆದಿದ್ದಾರೆ.

    ಲೋಕಾಪುರ ಪಂಚಾಯಿತಿ ಪಿಡಿಓ ಅವರು ಮಲ್ಲಪ್ಪ ಅವರಿಗೆ 10 ಸಾವಿರ ರೂ.ವನ್ನು ಪ್ರೋತ್ಸಾಹ ಧನವಾಗಿ ಕೊಟ್ಟು ಮೂರ್ತಿಯನ್ನು ಖರೀದಿಸಿ ಬೆಂಬಲಿಸಿದ್ದಾರೆ. ಮಲ್ಲಪ್ಪ ಅವರ ಕಾರ್ಯಕ್ಕೆ ಅಧಿಕಾರಿಗಳು ಹಾಗೂ ಕ್ವಾರಂಟೈನ್‍ನಲ್ಲಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಕಾರ್ ಪಲ್ಟಿ: ಮುಧೋಳ ಗವಿಮಠದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ ಲಿಂಗೈಕ್ಯ

    ಕಾರ್ ಪಲ್ಟಿ: ಮುಧೋಳ ಗವಿಮಠದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ ಲಿಂಗೈಕ್ಯ

    ಬಾಗಲಕೋಟೆ: ಕಾರ್ ಪಲ್ಟಿಯಾಗಿ ಮುಧೋಳ ಗವಿಮಠದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ(65) ಲಿಂಗೈಕ್ಯರಾದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

    ಸ್ವಾಮಿಜಿ ಹುಬ್ಬಳ್ಳಿಯಿಂದ ಗವಿಮಠಕ್ಕೆ ತೆರಳುವಾಗ ಮುಧೋಳ ಹಾಗೂ ಲೋಕಾಪುರ ಮಧ್ಯೆ ಚಾಲಕ ಅನ್ವೇಶ್ ನಿದ್ದೆಗೆ ಜಾರಿದ್ದ ಕಾರಣ ಕಾರು ಎರಡು ಬಾರಿ ಪಲ್ಟಿಯಾಗಿ ಬಿದ್ದು ಈ ಅವಘಡ ಸಂಭವಿಸಿದೆ.

    ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಪಘಾತದಲ್ಲಿ ಸ್ವಾಮೀಜಿ ಅವರಿಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ನಿಧನರಾಗಿದ್ದಾರೆ.

    ಚಾಲಕ ಅನ್ವೇಶ್ ಗೆ ಕೂಡ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ ಭಕ್ತರಿಗೆ ಸಾಂತ್ವಾನ ಹೇಳಿದ್ರು. ಸದ್ಯ ಸ್ವಾಮೀಜಿಯ ಪಾರ್ಥಿವ ಶರೀರವನ್ನ ಮುಧೋಳ ನಗರಕ್ಕೆ ರವಾನೆ ಮಾಡಲಾಗ್ತಿದೆ ಅಂತಾ ಭಕ್ತರಾದ ಬಸವರಾಜ್ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.