Tag: Mudnakudu Chinnaswamy

  • ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು (Kendra Sahitya Akademi) ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು (Award) ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ (Mudnakudu Chinnaswamy) ಅವರ ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ (Padmaraj Dandavati) ಅವರು ಅನುವಾದಿಸಿದ ಸೀತಾ: ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ.

    ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂ. ಹಾಗೂ ಸನ್ಮಾನ ಒಳಗೊಂಡಿದ್ದರೆ, ಅನುವಾದ ಪ್ರಶಸ್ತಿ 50 ಸಾವಿರ ರೂ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.

    ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದ್ದು ಇದನ್ನು ಗದಗದ ಲಡಾಯಿ ಪ್ರಕಾಶನವು ಪ್ರಕಟಿಸಿದೆ. ಪದ್ಮರಾಜ ದಂಡಾವತಿ ಅವರು ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ಅನುವಾದಿಸಿದ್ದು ಧಾರವಾಡದ ಮನೋಹರ ಗ್ರಂಥಮಾಲೆಯು ಈ ಕೃತಿಯನ್ನು ಪ್ರಕಟಿಸಿದೆ. ಇದನ್ನೂ ಓದಿ: ‘ಉಸಿರೇ ಉಸಿರೇ’ ಸಿನಿಮಾದಲ್ಲಿ ನಟಿಸಲಿದ್ದಾರೆ ಕಿಚ್ಚ ಸುದೀಪ್

    ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ವಿಭಾಗದ ಸಂಚಾಲಕರಾಗಿರುವ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಈ ಪ್ರಶಸ್ತಿ ಆಯ್ಕೆಯು ನಡೆಯಿತು. ಅನುವಾದ ಆಯ್ಕೆ ಸಮಿತಿಯ ಜ್ಯೂರಿಗಳಾಗಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ಕೆಲಸ ನಿರ್ವಹಿಸಿದ್ದರೆ ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಗೆ ಡಾ.ಸಿ ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ಜ್ಯೂರಿಗಳಾಗಿದ್ದರು.

    ಪ್ರಶಸ್ತಿಗಳನ್ನು 2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ವಿಜೇತರರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ – ಇನ್ನೂ ಸ್ಪಷ್ಟ ನಿಲುವು ಪ್ರಕಟಿಸದ ಕಾಂಗ್ರೆಸ್

    Live Tv
    [brid partner=56869869 player=32851 video=960834 autoplay=true]

  • ಪಠ್ಯ ಪುಸ್ತಕದ ಪರಿಷ್ಕರಣೆ- ಅನುಮತಿ ಹಿಂತೆಗೆದುಕೊಂಡ ಮತ್ತಿಬ್ಬರು ಸಾಹಿತಿಗಳು

    ಪಠ್ಯ ಪುಸ್ತಕದ ಪರಿಷ್ಕರಣೆ- ಅನುಮತಿ ಹಿಂತೆಗೆದುಕೊಂಡ ಮತ್ತಿಬ್ಬರು ಸಾಹಿತಿಗಳು

    ಬೆಂಗಳೂರು: ಇತ್ತೀಚೆಗೆ ಪಠ್ಯ ಪುಸ್ತಕದ ಪರಿಷ್ಕರಣೆಗೆ ಸಂಬಂಧಿಸಿ ಉಂಟಾಗುತ್ತಿರುವ ವಿವಾದದವನ್ನು ವಿರೋಧಿಸಿ ಇದೀಗ ಸಾಹಿತಿ ಮೂಡ್ನಕೂಡು ಚಿನ್ನಸ್ವಾಮಿ ಹಾಗೂ ಈರಪ್ಪ ಎಂ ಕಂಬಳಿ ಅವರು ಬರೆದಿರುವ ಪ್ರಬಂಧ ಹಾಗೂ ಕವಿತೆಯನ್ನು ಪ್ರಕಟಿಸಲು ಅನುಮತಿಯನ್ನು ವಾಪಸ್ ಪಡೆದುಕೊಂಡಿದ್ದಾರೆ.

    ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕದ ಪರಿಷ್ಕರಣೆಯನ್ನು ಅನೇಕ ಲೇಖಕರು ಸಾಹಿತಿಗಳು ಸೇರಿದಂತೆ ಗಣ್ಯರು ವಿರೋಧಿಸಿದ್ದರು. ಅಷ್ಟೇ ಅಲ್ಲದೇ ಕುವೆಂಪು ಹಾಗೂ ಬಸವಣ್ಣನರ ತತ್ವಕ್ಕೆ ಅಪಚಾರವಾಗುವಂಥ ಕೆಲಸ ನಡೆಯುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ತಮ್ಮ ಪ್ರಬಂಧ ಹಾಗೂ ಕವಿತೆಯನ್ನು ಅನೇಕರು ಹಿಂಪಡೆದಿದ್ದಾರೆ. ಇದೀಗ ಆ ಸಾಲಿಗೆ ಮತ್ತಿಬ್ಬರು ಸಾಹಿತಿಗಳು ಸೇರಿಕೊಂಡಿದ್ದಾರೆ.

    ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಈರಪ್ಪ ಎಂ ಕಂಬಳಿ ಅವರು, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕಳೆದ ಸಾಲಿನಲ್ಲಿ ಹತ್ತನೆ ತರಗತಿಯ ನುಡಿ- ಕನ್ನಡ ತೃತೀಯ ಭಾಷಾ ಕನ್ನಡ ಪಠ್ಯಪುಸ್ತಕದಲ್ಲಿರುವ ಪ್ರಬಂಧವನ್ನು ಮುಂದುವರಿಸಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾಫಿನಾಡಲ್ಲಿ ಬುರ್ಖಾ ಧರಿಸಿ 8 ಲೀಟರ್ ಹಾಲು ಕಳ್ಳತನ

    ಅದೇ ರೀತಿ ಮೂಡ್ನಕೂಡು ಚಿನ್ನಸ್ವಾಮಿ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಐದನೇ ತರಗತಿಗೆ ಪಠ್ಯವಾಗಿರುವ ನನ್ನ ಕವಿತೆಯನ್ನು ಪ್ರಕಟಿಸಲು ಅನುಮತಿ ನೀಡಿದ್ದನ್ನು ಹಿಂತೆಗೆದುಕೊಂಡಿದ್ದಾರೆ.

    ಇತ್ತೀಚೆಗಷ್ಟೇ ರೋಹಿತ್‌ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಜಿ.ರಾಮಕೃಷ್ಣ ಹಾಗೂ ದೇವನೂರ ಮಹದೇವ, ಎಸ್‌ಜಿ ಸಿದ್ದರಾಮಯ್ಯ ಅವರು ತಾವು ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದರು. ಇದನ್ನೂ ಓದಿ: ಕರ್ನಾಟಕ ಅತಿ ದೊಡ್ಡ ಕೂಗು ಮಾರಿ ಅಂದ್ರೆ ಅದು ಸಿದ್ದರಾಮಯ್ಯ: ಪ್ರತಾಪ್ ಸಿಂಹ