Tag: mudslide

  • ಗುಡ್ಡ ಕುಸಿತ: ಮಡಿಕೇರಿ-ಸೋಮವಾರಪೇಟೆ ನಡುವಿನ ರಾಜ್ಯ ಹೆದ್ದಾರಿ ಬಂದ್

    ಗುಡ್ಡ ಕುಸಿತ: ಮಡಿಕೇರಿ-ಸೋಮವಾರಪೇಟೆ ನಡುವಿನ ರಾಜ್ಯ ಹೆದ್ದಾರಿ ಬಂದ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಮಡಿಕೇರಿ ತಾಲೂಕಿನ ಹಾಲೇರಿ ಗ್ರಾಮದ ರಸ್ತೆ ಮೇಲೆಯೇ ಗುಡ್ಡ ಕುಸಿದು ಪರಿಣಾಮ ರಾಜ್ಯ ಹೆದ್ದಾರಿ ಬಂದ್ ಆಗಿದೆ.

    ಗುಡ್ಡದ ಮಣ್ಣು ಕುಸಿದ ಪರಿಣಾಮ ಮಡಿಕೇರಿ – ಸೋಮವಾರಪೇಟೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಕಳೆದ ವರ್ಷ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಕತ್ತಲಾಗಿರುವ ಹಿನ್ನೆಲೆಯಲ್ಲಿ ಹಾಗೂ ನಿರಂತರ ಮಳೆ ಆಗುತ್ತಿರುವುದರಿಂದ ತೆರವು ಕಾರ್ಯಾಚರಣೆ ನಡೆಸಲು ತೊಡಕಾಗಿದೆ. ನಾಳೆ ಮುಂಜಾನೆ ವೇಳೆಗೆ ರಸ್ತೆ ಮೇಲಿನ ಮಣ್ಣನ್ನು ತೆರವು ಮಾಡುವ ಸಾಧ್ಯತೆ ಇದೆ.

    ಇಂದು ಮುಂಜಾನೆಯಿಂದ ಬಿಡುವು ನೀಡಿದ್ದ ಮಳೆ ಸಂಜೆಯ ವೇಳೆಗೆ ಬಿಟ್ಟು ಬಿಡದೆ ಸುರಿದಿತ್ತು. ಮಳೆಯ ಪರಿಣಾಮ ಗುಡ್ಡ ಕುಸಿತ ಸಂಭವಿಸಿದ್ದು, ಈ ಮಾರ್ಗ ಬಂದ್ ಆಗಿರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗವನ್ನು ಬಳಕೆ ಮಾಡುತ್ತಿದ್ದಾರೆ. ಮಡಿಕೇರಿಯಿಂದ ಸಿಂಕೋನ ಮಾರ್ಗವಾಗಿ ಸೋಮವಾರಪೇಟೆ ತೆರಳಬಹುದಾಗಿದೆ.

  • ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ- ಸಾಲುಗಟ್ಟಿ ನಿಂತ ವಾಹನಗಳು

    ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ- ಸಾಲುಗಟ್ಟಿ ನಿಂತ ವಾಹನಗಳು

    ಉಡುಪಿ: ಜಿಲ್ಲೆಯ ಕುಂದಾಪುರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತವಾಗಿದೆ. ಬೈಂದೂರಿನ ಒತ್ತಿನೆಣೆ ಜೇಡಿ ಮಣ್ಣು ಗುಡ್ಡ ರಸ್ತೆ ಮೇಲೆ ಕುಸಿದಿದೆ.

    ರಾಷ್ಟ್ರೀಯ ಹೆದ್ದಾರಿ ಅಗಲ ಕಾಮಗಾರಿಗಾಗಿ ಗುಡ್ಡ ಕೊರೆಸಿದ್ದು, ಮಳೆಯಿಂದ ಮಣ್ಣು ಸಂಪೂರ್ಣ ತೇವಗೊಂಡು ರಸ್ತೆ ಮೇಲೆ ಕುಸಿದಿದೆ. ಮಣ್ಣು ಕುಸಿತದಿಂದಾಗಿ ಉಡುಪಿ- ಕಾರವಾರ- ಗೋವಾ ಸಂಪರ್ಕ ಮಾಡುವ ಈ ಹೆದ್ದಾರಿಯಲ್ಲಿ ನೂರಾರು ವಾಹನಗಳು ಸ್ಥಗಿತಗೊಂಡಿವೆ. ಸಾಲುಗಟ್ಟಿ ನಿಂತಿರುವ ನೂರಾರು ವಾಹನಗಳನ್ನು ಮುಂದೆ ಗುಡ್ಡದ ಕಡೆ ಬಾರದಂತೆ ಪೊಲೀಸರು ಸುರಕ್ಷತಾ ಕ್ರಮ ಕೈಗೊಂಡಿದ್ದಾರೆ. ಮಣ್ಣು ತೆಗೆಯುವ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿದೆ.

    ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಅನವಾಲ್ ಗ್ರಾಮದ ಕೊಳ್ಳದಲ್ಲಿ ಕಾರು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಪವಾಡ ಸದೃಶವೆಂಬಂತೆ ಯಂಡಿಗೇರಿಯ ಬಸಲಿಂಗಪ್ಪ ಶಿರಗುಂಪಿ ಎಂಬವರು ಕಾರಿನಿಂದ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ.