Tag: mukesh ambani

  • 2026 ರ ಮೊದಲ ಆರು ತಿಂಗಳಲ್ಲಿ ಜಿಯೋ ಐಪಿಒ ಬಿಡುಗಡೆ: ಮುಕೇಶ್ ಅಂಬಾನಿ

    2026 ರ ಮೊದಲ ಆರು ತಿಂಗಳಲ್ಲಿ ಜಿಯೋ ಐಪಿಒ ಬಿಡುಗಡೆ: ಮುಕೇಶ್ ಅಂಬಾನಿ

    – ಜಿಯೋ ಐಪಿಒ; ಇದು ಹೂಡಿಕೆದಾರರಿಗೆ ದೊಡ್ಡ ಅವಕಾಶ
    – ರಿಲಯನ್ಸ್ ಜಿಯೋ ಗ್ರಾಹಕರ ಸಂಖ್ಯೆ ತಲುಪಿದೆ 50 ಕೋಟಿ
    – ಜಿಯೋ ಟ್ರೂ 5ಜಿ ಬಳಕೆದಾರರ ಸಂಖ್ಯೆ 22 ಕೋಟಿ

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಷೇರುದಾರರ ಕಾಯುವಿಕೆ ಅಂತೂ ಕೊನೆಗೊಳ್ಳಲಿದೆ. ಜಿಯೋದ ಐಪಿಒ ಮುಂದಿನ ವರ್ಷದ ಮೊದಲಾರ್ಧದಲ್ಲಿ, ಅಂದರೆ 2026ನೇ ಇಸವಿಯಲ್ಲಿ ಬಿಡುಗಡೆಯಾಗಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 48ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಶುಕ್ರವಾರದಂದು ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ಹಂಚಿಕೊಂಡರು.

    ಜಿಯೋ (Reliance Jio) ತನ್ನ ಐಪಿಒಗೆ (IPO) ಅರ್ಜಿ ಸಲ್ಲಿಸುವುದಕ್ಕೆ ತಯಾರಿ ನಡೆಸುತ್ತಿದೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ. 2026ನೇ ಇಸವಿಯ ಮೊದಲಾರ್ಧದ ವೇಳೆಗೆ ಜಿಯೋವನ್ನು ಷೇರು ಮಾರುಕಟ್ಟೆಯಲ್ಲಿ ಲಿಸ್ಟಿಂಗ್ ಮಾಡುವುದು ನಮ್ಮ ಗುರಿಯಾಗಿದೆ. ಜಿಯೋ ನಮ್ಮ ಜಾಗತಿಕ ಸಹವರ್ತಿಗಳಂತೆಯೇ ಅದೇ ಮೌಲ್ಯವನ್ನು ಸೃಷ್ಟಿಸುತ್ತದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಇದು ಎಲ್ಲ ಹೂಡಿಕೆದಾರರಿಗೆ ಬಹಳ ಆಕರ್ಷಕ ಅವಕಾಶವಾಗಲಿದೆ ಎಂದು ನಾನು ನಂಬುತ್ತೇನೆ ಎಂದು ಮುಕೇಶ್ ಅಂಬಾನಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕರ್ನಾಟಕದ ಹಳ್ಳಿಹಳ್ಳಿಗಳಲ್ಲೂ ಜಿಯೋ – ಗಾಜನೂರು, ಪೆದ್ದನಪಾಳ್ಯ, ಹುಗ್ಯಂನಂಥ ಗ್ರಾಮಗಳಲ್ಲೂ ಟವರ್‌

    ರಿಲಯನ್ಸ್ ಜಿಯೋ ಇಂದು ಮತ್ತೊಂದು ಮೈಲುಗಲ್ಲು ಸಾಧಿಸಿದ್ದು, ಕಂಪನಿಯ ಗ್ರಾಹಕರ ಸಂಖ್ಯೆ 50 ಕೋಟಿಯನ್ನು ದಾಟಿದೆ. ಷೇರುದಾರರು ಮತ್ತು ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸುತ್ತಾ, ಮುಕೇಶ್ ಅಂಬಾನಿ ಜಿಯೋವನ್ನು ಜೀವನ ಬದಲಾಯಿಸುವಂಥದ್ದು ಎಂದು ಕರೆದರು. ಜಿಯೋದ ಸಾಧನೆಗಳನ್ನು ಪಟ್ಟಿ ಮಾಡುತ್ತಾ, ಧ್ವನಿ ಕರೆಗಳನ್ನು (ವಾಯ್ಸ್ ಕಾಲ್) ಉಚಿತಗೊಳಿಸುವುದು, ಡಿಜಿಟಲ್ ಪಾವತಿಯ ವಿಧಾನಗಳನ್ನು ಬದಲಾಯಿಸುವುದು, ಆಧಾರ್, ಯುಪಿಐ, ಜನ್ ಧನ್‌ನಂತಹ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಗೆ ಜೀವ ತುಂಬುವುದು ಮತ್ತು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್ಅಪ್ ಪರಿಸರ ವ್ಯವಸ್ಥೆಯ (ಎಕೋಸಿಸ್ಟಮ್) ಬೆನ್ನೆಲುಬಾಗಿ ಕಾರ್ಯನಿರ್ವಹಿಸುವುದು ಹೀಗೆ ಜಿಯೋ ಕೆಲವು ಊಹಿಸಲು ಸಹ ಆಗದ ಕಾರ್ಯಗಳನ್ನು ಮಾಡಿದೆ ಎಂದು ಅವರು ಹೇಳಿದರು.

    ದೇಶದಲ್ಲಿ 5ಜಿ ವೇಗವಾಗಿ ಕಾರ್ಯಾಚರಣೆಯನ್ನು ಆರಂಭಿಸಿದ ನಂತರ, ಜಿಯೋದ 5ಜಿ ಗ್ರಾಹಕರ ಸಂಖ್ಯೆಯೂ ವೇಗವಾಗಿ ಹೆಚ್ಚಾಗಿದೆ ಎಂದು ರಿಲಯನ್ಸ್ ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಹೇಳಿದರು. 22 ಕೋಟಿಗೂ ಹೆಚ್ಚು ಬಳಕೆದಾರರು ಜಿಯೋ ಟ್ರೂ 5ಜಿ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿದ್ದಾರೆ. ಜಿಯೋ ಶೀಘ್ರದಲ್ಲೇ ಅಂತರರಾಷ್ಟ್ರೀಯ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ಇದನ್ನೂ ಓದಿ: ಮಸ್ಕ್‌ನ ಸ್ಟಾರ್‌ಲಿಂಕ್‌ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸಿ: ಕೇಂದ್ರಕ್ಕೆ ಜಿಯೋ ಪತ್ರ

    ಜಿಯೋ ಟ್ರೂ 5ಜಿ ಡಿಜಿಟಲ್ ಸಂಪರ್ಕದ ವೇಗ, ವಿಶ್ವಾಸಾರ್ಹತೆ ಮತ್ತು ಸಂಪರ್ಕ ವ್ಯಾಪ್ತಿಯನ್ನು ಮರು ವ್ಯಾಖ್ಯಾನಿಸಿದೆ. ಜಿಯೋ ನನ್ನ ಜೀವನವನ್ನು ಬದಲಾಯಿಸಿದೆ ಅಥವಾ ನನಗೆ ಜಿಯೋ ಇಷ್ಟ ಎಂದು ಜನರು ಹೇಳುವುದನ್ನು ನಾನು ಕೇಳಿದ್ದೇನೆ. ಆದರೆ, ನನ್ನ ಹೃದಯದಿಂದ ಹೇಳುತ್ತೇನೆ. ವಾಸ್ತವವಾಗಿ, ಪ್ರತಿ ಭಾರತೀಯ ಜಿಯೋವನ್ನು ತಮ್ಮ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವ ಮೂಲಕ ಇದನ್ನು ರೂಪಿಸಿದ್ದಾರೆ ಎಂದು ಹೇಳಿದರು.

  • ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಹೊರಗುಳಿದ ಮುಕೇಶ್ ಅಂಬಾನಿ

    ವಿಶ್ವದ ಟಾಪ್-10 ಶ್ರೀಮಂತರ ಪಟ್ಟಿಯಿಂದ ಹೊರಗುಳಿದ ಮುಕೇಶ್ ಅಂಬಾನಿ

    ನವದೆಹಲಿ: ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಭಾರತದ ಪ್ರಮುಖ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಟಾಪ್-10 ಸ್ಥಾನದಿಂದ ಹೊರಗುಳಿದಿದ್ದಾರೆ. ಹುರುನ್ ಗ್ಲೋಬಲ್ ರಿಚ್ ಲಿಸ್ಟ್ 2025ರ ಪ್ರಕಾರ ಅಂಬಾನಿ ಅವರು ಈ ವರ್ಷ 11ನೇ ಸ್ಥಾನಕ್ಕೆ ತಲುಪಿದ್ದಾರೆ.

    ಮುಕೇಶ್ ಅಂಬಾನಿ ಅವರ ಸಂಪತ್ತಿನ ಮೌಲ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಸ್ವಲ್ಪ ಕಡಿಮೆಯಾಗಿದೆ. ಆದಾಗ್ಯೂ, ಅವರ ಒಟ್ಟಾರೆ ಸಂಪತ್ತು ಇನ್ನೂ ಅಪಾರವಾಗಿದ್ದು, ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ತಮ್ಮ ಪ್ರಾಬಲ್ಯ ಕಾಯ್ದುಕೊಂಡಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್‌ನ ವ್ಯಾಪಾರ ಕಾರ್ಯತಂತ್ರಗಳು, ತೈಲ ಮತ್ತು ರಾಸಾಯನಿಕ ಉದ್ಯಮದ ಜೊತೆಗೆ ಟೆಲಿಕಾಂ (ರಿಲಯನ್ಸ್ ಜಿಯೋ) ಮತ್ತು ರಿಟೇಲ್ ಕ್ಷೇತ್ರದಲ್ಲಿ ಮಾಡಿದ ಗಣನೀಯ ಹೂಡಿಕೆಗಳು ಅವರ ಸಂಪತ್ತಿನ ಮೇಲೆ ಪ್ರಭಾವ ಬೀರಿವೆ.

    ಈ ವರ್ಷದ ಹುರುನ್ ಗ್ಲೋಬಲ್ ರಿಚ್ ಲಿಸ್ಟ್‌ನಲ್ಲಿ ಅಮೆರಿಕ ಮತ್ತು ಚೀನಾದ ಉದ್ಯಮಿಗಳು ಟಾಪ್-10 ಸ್ಥಾನಗಳಲ್ಲಿ ಪ್ರಾಬಲ್ಯ ಮೆರೆದಿದ್ದಾರೆ. ಎಲಾನ್ ಮಸ್ಕ್ (ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಮುಖ್ಯಸ್ಥ), ಜೆಫ್ ಬೆಜೋಸ್ (ಅಮೆಜಾನ್ ಸಂಸ್ಥಾಪಕ), ಮತ್ತು ಮಾರ್ಕ್ ಝುಕರ್‌ಬರ್ಗ್ (ಮೆಟಾ ಸಿಇಒ) ರಂತಹ ದಿಗ್ಗಜರು ಮೊದಲ ಕೆಲವು ಸ್ಥಾನಗಳನ್ನು ಆಕ್ರಮಿಸಿದ್ದಾರೆ.

    ತಂತ್ರಜ್ಞಾನ ಕ್ಷೇತ್ರದಲ್ಲಿ ಈ ಉದ್ಯಮಿಗಳ ಸಂಪತ್ತು ಗಗನಕ್ಕೇರಿರುವುದು ಈ ಪಟ್ಟಿಯಲ್ಲಿ ಅವರ ಪ್ರಾಬಲ್ಯಕ್ಕೆ ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ, ಚೀನಾದ ಕೆಲವು ಉದ್ಯಮಿಗಳು ತಮ್ಮ ತಂತ್ರಜ್ಞಾನ ಮತ್ತು ಉತ್ಪಾದನಾ ಕಂಪನಿಗಳ ಮೂಲಕ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿದ್ದಾರೆ. ಮುಕೇಶ್ ಅಂಬಾನಿ ಟಾಪ್-10 ರಿಂದ ಹೊರಗುಳಿದರೂ, ಏಷ್ಯಾದ ಶ್ರೀಮಂತರ ಪಟ್ಟಿಯಲ್ಲಿ ಅವರು ಉನ್ನತ ಸ್ಥಾನವನ್ನು ಉಳಿಸಿಕೊಂಡಿದ್ದಾರೆ.

  • ಜಾಮ್‌ನಗರದಲ್ಲಿ ವಿಶ್ವದ ಅತಿದೊಡ್ಡ AI ಡೇಟಾ ಕೇಂದ್ರ ಸ್ಥಾಪನೆ: ಮುಕೇಶ್‌ ಅಂಬಾನಿ ಪ್ಲ್ಯಾನ್

    ಜಾಮ್‌ನಗರದಲ್ಲಿ ವಿಶ್ವದ ಅತಿದೊಡ್ಡ AI ಡೇಟಾ ಕೇಂದ್ರ ಸ್ಥಾಪನೆ: ಮುಕೇಶ್‌ ಅಂಬಾನಿ ಪ್ಲ್ಯಾನ್

    ಗಾಂಧೀನಗರ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ (Mukesh Ambani), ಗುಜರಾತ್‌ನ ಜಾಮ್‌ನಗರದಲ್ಲಿ ವಿಶ್ವದ ಅತಿದೊಡ್ಡ ಡೇಟಾ ಸೆಂಟರ್ ಅನ್ನು ನಿರ್ಮಿಸಲು ಸಜ್ಜಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ.

    ಈ ಮಹತ್ವಾಕಾಂಕ್ಷೆಯ ಯೋಜನೆಯು ಭಾರತದ ವೇಗವಾಗಿ ಬೆಳೆಯುತ್ತಿರುವ ಕೃತಕ ಬುದ್ಧಿಮತ್ತೆ (AI) ಸಾಮರ್ಥ್ಯಗಳಿಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ. ಇದನ್ನೂ ಓದಿ: ಗಣರಾಜ್ಯೋತ್ಸವ 2025 – ಈ ಬಾರಿಯ ವಿಶೇಷತೆಗಳೇನು?

    ದೇಶದ ಡಿಜಿಟಲ್ ಮೂಲಸೌಕರ್ಯ ಸುಧಾರಿಸುವಲ್ಲಿ ಈ ಡೇಟಾ ಸೆಂಟರ್‌ ಪ್ರಮುಖ ಪಾತ್ರ ವಹಿಸುತ್ತದೆ. ಜಾಗತಿಕ AI ವಲಯದಲ್ಲಿ ಭಾರತವು ಹೆಚ್ಚು ಸ್ಪರ್ಧಾತ್ಮಕವಾಗಲು ಸಹಾಯ ಮಾಡುತ್ತದೆ.

    ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್, ಪ್ರಮುಖ AI ತಂತ್ರಜ್ಞಾನ ಡೆವಲಪರ್ NVIDIAನಿಂದ ವಿಶ್ವದ ಮುಂದುವರಿದ ಸೆಮಿಕಂಡಕ್ಟರ್‌ಗಳನ್ನು ಖರೀದಿಸುವ ಮೂಲಕ AI ತಂತ್ರಜ್ಞಾನಗಳಲ್ಲಿ ಕಾರ್ಯತಂತ್ರದ ಹೂಡಿಕೆ ಮಾಡುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ರೈಲ್ವೇ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ಹಣ ಇಲ್ಲದಿದ್ರೂ ಟಿಕೆಟ್‌ ಬುಕ್‌ ಮಾಡಬಹುದು!

    2024 ರ ಅಕ್ಟೋಬರ್‌ ವೇಳೆ, NVIDIA AI ಶೃಂಗಸಭೆಯ ಸಂದರ್ಭದಲ್ಲಿ ಭಾರತದಲ್ಲಿ AI ಮೂಲಸೌಕರ್ಯವನ್ನು ಸ್ಥಾಪಿಸಲು ರಿಲಯನ್ಸ್ ಮತ್ತು NVIDIA ಪಾಲುದಾರಿಕೆ ಹೊಂದಿವೆ ಎಂದು ಘೋಷಿಸಲಾಗಿತ್ತು.

  • ಮಸ್ಕ್‌ನ ಸ್ಟಾರ್‌ಲಿಂಕ್‌ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸಿ: ಕೇಂದ್ರಕ್ಕೆ ಜಿಯೋ ಪತ್ರ

    ಮಸ್ಕ್‌ನ ಸ್ಟಾರ್‌ಲಿಂಕ್‌ಗೆ ಅನುಮತಿ ನೀಡುವ ಮುನ್ನ ನಿರ್ಧಾರ ಪರಿಶೀಲಿಸಿ: ಕೇಂದ್ರಕ್ಕೆ ಜಿಯೋ ಪತ್ರ

    ನವದೆಹಲಿ: ವಿಶ್ವದ ನಂಬರ್‌ ಒನ್‌ ಶ್ರೀಮಂತ ಎಲಾನ್‌ ಮಸ್ಕ್‌ (Elon Musk) ಒಡೆತನದ ಸ್ಟಾರ್‌ಲಿಂಕ್‌ಗೆ (Starlink) ಅನುಮತಿ ನೀಡುವ ಮುನ್ನ ಸಂಭಾವ್ಯ ವ್ಯಾಪ್ತಿಯನ್ನು ಪರಿಶೀಲಿಸುವಂತೆ ಮುಕೇಶ್‌ ಅಂಬಾನಿ (Mukesh Ambani) ಒಡೆತನದ ರಿಲಯನ್ಸ್‌ ಜಿಯೋ (Reliance Jio) ಸರ್ಕಾರವನ್ನು ಕೇಳಿಕೊಂಡಿದೆ.

    ಸ್ಟಾರ್‌ಲಿಂಕ್‌ಗೆ ಅನುಮತಿ ನೀಡಿದರೆ ದೇಶೀಯ ಕಂಪನಿಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇರುವ ಕಾರಣ ನಿರ್ಧಾರವನ್ನು ಪರಿಶೀಲಿಸುವಂತೆ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರಕ್ಕೆ (TRAI) ಜಿಯೋ ಪತ್ರ ಬರೆದಿದೆ.

    ಮಸ್ಕ್‌ ಉಪಗ್ರಹ ಆಧಾರಿತ ಇಂಟರ್‌ನೆಟ್‌ ಕಂಪನಿ ಸ್ಟಾರ್‌ಲಿಂಕ್‌ ಸ್ಥಾಪಿಸಿದ್ದು ಈ ಕಂಪನಿ ಭಾರತದಲ್ಲಿ ಸೇವೆ ನೀಡಲು ಕೇಂದ್ರ ಸರ್ಕಾರವನ್ನು ಕೇಳಿದೆ. ಹಿಂದೆ ಕೇಂದ್ರ ಸರ್ಕಾರ ಸ್ಟಾರ್‌ಲಿಂಕ್‌ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ. ಆದರೆ ಈಗ ಅನುಮತಿ ನೀಡಲು ಮುಂದಾಗಿದೆ. ಈ ಹಿಂದೆ ಪ್ರತಿಕ್ರಿಯಿ ನೀಡಿದ್ದ ಕೇಂದ್ರ ಸಂವಹನ ಮತ್ತು ಅಭಿವೃದ್ಧಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ (Jyotiraditya Scindia), ಸ್ಟಾರ್‌ಲಿಂಕ್ ಸರ್ಕಾರದ ಎಲ್ಲಾ ಷರತ್ತುಗಳನ್ನು ಅನುಸರಿಸಿದರೆ ನಾವು ಪರವಾನಗಿ ನೀಡುತ್ತೇವೆ ಎಂದು ಹೇಳಿದ್ದರು.

     

    ಬಿಕ್ಕಟ್ಟು ಸೃಷ್ಟಿಯಾಗಿದ್ದು ಯಾಕೆ?
    ವಿಶ್ವದಲ್ಲಿ ಉಪಗ್ರಹ ಆಧಾರಿತ ಸಂಪನ್ಮೂಲಗಳನ್ನು ಇಂಟರ್‌ನ್ಯಾಷನಲ್‌ ಟೆಲಿಕಾಂ ಯೂನಿಯನ್‌(ITU) ನೋಡಿಕೊಳ್ಳುತ್ತದೆ. ಭಾರತದಲ್ಲಿ ಉಪಗ್ರಹಗಳ (Satellite) ಬಳಕೆ ಮತ್ತು ಬಳಕೆದಾರರ ಲಿಂಕ್‌ಗಳನ್ನು ಸ್ಪೆಕ್ಟ್ರಂ ಹರಾಜು ಮೂಲಕವೇ ಹಂಚಿಕೆ ಮಾಡುತ್ತಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಜಿಯೋ ಹರಾಜು ಪ್ರಕ್ರಿಯೆ ಮೂಲಕವೇ ಪರವಾನಗಿ ಹಂಚಿಕೆಗೆ ಪಟ್ಟು ಹಿಡಿದಿರುವುದರಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ.

    2ಜಿ ಹಗರಣ ಆರೋಪಗಳು ಕೇಳಿ ಬಂದ ನಂತ ಭಾರತದಲ್ಲಿ 2010ರ ನಂತರ ದೂರಸಂಪರ್ಕ ಕ್ಷೇತ್ರದಲ್ಲಿನ ಸೇವಾ ಅನುಮತಿಯನ್ನು ಹರಾಜು ಪ್ರಕ್ರಿಯೆ ಮೂಲಕವೇ ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಹಂಚಿಕೆ ಮಾಡುತ್ತಿದೆ. ಜಿಯೋ ಈಗ ಹರಾಜು ಮೂಲಕವೇ ಹಂಚಿಕೆ ಹಂಚಿಕೆ ಮಾಡಬೇಕೆಂದು ಬೇಡಿಕೆ ಇರಿಸಿದ್ದರಿಂದ ಈ ಬಿಕ್ಕಟ್ಟು ಸೃಷ್ಟಿಯಾಗಿದೆ. ಇದನ್ನೂ ಓದಿ: ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾಗೆ 7,100 ಕೋಟಿ ದಂಡ ವಿಧಿಸಿದ ಯುರೋಪ್‌

    ಜಿಯೋದ ಆತಂಕ ಏನು?
    ಈಗಾಗಲೇ ಜಿಯೋ ಸ್ಪೆಕ್ಟ್ರಂ ಖರೀದಿಗಾಗಿ ಭಾರೀ ಪ್ರಮಾಣದ ಬಂಡವಾಳವನ್ನು ಹೂಡಿದೆ. ಒಂದು ವೇಳೆ ಸ್ಯಾಟ್‌ಲೈಟ್‌ ಆಧಾರಿತ ಕಂಪನಿಗಳು ಭಾರತವನ್ನು ಪ್ರವೇಶಿಸಿದರೆ ದೇಶೀಯ ಟೆಲಿಕಾಂ ಕಂಪನಿಗಳಿಗೆ ಸಮಸ್ಯೆಯಾಗಬಹುದು ಎಂಬ ಆತಂಕವನ್ನು ಜಿಯೋ ಹೊರ ಹಾಕಿದೆ.

    ಮಸ್ಕ್‌ ವಾದ ಏನು?
    ವಿಶ್ವದಲ್ಲಿ ಸರ್ಕಾರಗಳು ಆಡಳಿತಾತ್ಮಕ ಹಂಚಿಕೆಯ ಮೂಲಕ ಸರ್ಕಾರ ಉಪಗ್ರಹ ಆಧಾರಿತ ಇಂಟರ್‌ನೆಟ್‌ಗೆ ಸೇವೆಗೆ ಅನುಮತಿ ನೀಡುತ್ತದೆ. ಆದರೆ ಭಾರತದಲ್ಲಿ ಹರಾಜು ಮೂಲಕ ಹಂಚಿಕೆ ಮಾಡುವುದು ಸರಿಯಲ್ಲ.  ಹರಾಜು ಪ್ರಕ್ರಿಗೆ ಗೆದ್ದು ಇಂಟರ್‌ನೆಟ್‌ ಸೇವೆ ನೀಡಿದರೆ ಬೆಲೆ ಬಹಳ ದುಬಾರಿಯಾಗುತ್ತದೆ. ಕಡಿಮೆ ಬೆಲೆಗೆ ದೂರದ ಪ್ರದೇಶಗಳಿಗೆ ಗುಣಮಟ್ಟದ ಇಂಟರ್‌ನೆಟ್‌ ಸೇವೆ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

    ಮತ್ತೆ ದರ ಸಮರ ಆಗುತ್ತಾ?
    ಒಂದು ವೇಳೆ ಸ್ಟಾರ್‌ಲಿಂಕ್‌ ಸೇರಿದಂತೆ ಬೇರೆ ಉಪಗ್ರಹ ಆಧಾರಿತ ಕಂಪನಿಗಳಿಗೆ ಭಾರತದಲ್ಲಿ ಅನುಮತಿ ನೀಡಿದರೆ ಮತ್ತೊಮ್ಮೆ ಡೇಟಾ ಸಮರ ಆರಂಭವಾಗುವ ಸಾಧ್ಯತೆಯಿದೆ. ಮಸ್ಕ್‌ ಒಡೆತನದ ಸ್ಟಾರ್‌ಲಿಂಕ್‌ ಜನರನ್ನು ಸೆಳೆಯಲು ಒಂದೊಂದು ದೇಶದಲ್ಲಿ ಒಂದೊಂದು ಡೇಟಾ ಪ್ಲ್ಯಾನ್‌ ರಿಲೀಸ್‌ ಮಾಡಿದೆ. ಅಮೆರಿಕದಲ್ಲಿ ಪ್ರತಿ ತಿಂಗಳಿಗೆ 120 ಡಾಲರ್‌ (ಅಂದಾಜು 10,000 ರೂ) ವಿಧಿಸಿದ್ದರೆ ಕೀನ್ಯಾದಲ್ಲಿ ಪ್ರತಿ ತಿಂಗಳಿಗೆ 10 ಡಾಲರ್‌ (ಅಂದಾಜು 844 ರೂ.) ದರವನ್ನು ವಿಧಿಸಿದೆ. ಸ್ಟಾರ್‌ಲಿಂಕ್‌ ಒಟ್ಟು 6,400 ಉಪಗ್ರಹವನ್ನು ಹಾರಿಸಿದ್ದು ವಿಶ್ವದಲ್ಲಿ 40 ಲಕ್ಷ ಗ್ರಾಹಕರಿದ್ದಾರೆ.

     

  • ದೀಪಾವಳಿ ಕೊಡುಗೆ – 699 ರೂ.ಗೆ ಸಿಗಲಿದೆ ಜಿಯೋಭಾರತ್‌ 4ಜಿ ಫೋನ್

    ದೀಪಾವಳಿ ಕೊಡುಗೆ – 699 ರೂ.ಗೆ ಸಿಗಲಿದೆ ಜಿಯೋಭಾರತ್‌ 4ಜಿ ಫೋನ್

    ನವದೆಹಲಿ: ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ (Mukesh Ambani ) ಅವರ ಕಂಪನಿ ರಿಲಯನ್ಸ್ ಜಿಯೋ (Reliance Jio) ಈ ದೀಪಾವಳಿಗೆ (Deepavali) ಜಿಯೋ ಭಾರತ್ 4ಜಿ ಫೋನ್‌ಗಳ ಬೆಲೆಯನ್ನು 30% ರಷ್ಟು ಕಡಿತಗೊಳಿಸಿದೆ. ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ 999 ರೂ. ಜಿಯೋಭಾರತ್ ಮೊಬೈಲ್ ಫೋನ್ ಈಗ 699ರ ವಿಶೇಷ ಬೆಲೆಗೆ ಲಭ್ಯವಿದೆ.

    ಜಿಯೋಭಾರತ್ ಫೋನ್ (Jio Bharat Phone) ಅನ್ನು 123 ರೂ.ಗೆ ರೀಚಾರ್ಜ್ ಮಾಡಬಹುದು. ಈ ಮಾಸಿಕ ಟ್ಯಾರಿಫ್ ಯೋಜನೆಯಲ್ಲಿ ಅನಿಯಮಿತ ಉಚಿತ ಧ್ವನಿ ಕರೆಗಳು, 14 ಜಿಬಿ ಡೇಟಾ ಸಹ ಒಳಗೊಂಡಿದೆ. ಇದನ್ನೂ ಓದಿ: Nvidia ದಲ್ಲಿ ವಿದ್ಯೆ ಇದೆ, ಇದರರ್ಥ ಭಾರತದಲ್ಲಿ ಜ್ಞಾನ: ಅಂಬಾನಿಯ ಮಾತಿಗೆ ಜೆನ್ಸನ್‌ ಹುವಾಂಗ್‌ ಚಪ್ಪಾಳೆ

    ಜಿಯೋದ ಮಾಸಿಕ 123 ರೂ. ರೀಚಾರ್ಜ್ ಯೋಜನೆ ಇತರ ಆಪರೇಟರ್‌ಗಳಿಗಿಂತ 40 ಪ್ರತಿಶತ ಅಗ್ಗವಾಗಿದೆ. ಏಕೆಂದರೆ ಇತರ ನೆಟ್‌ವರ್ಕ್‌ಗಳ ಫೀಚರ್ ಫೋನ್‌ಗಳ ಮಾಸಿಕ ರೀಚಾರ್ಜ್ ಕನಿಷ್ಠ ಬೆಲೆ 199 ರೂ. ಇದೆ. ಇದು ಜಿಯೋಗಿಂತ 76 ರೂಪಾಯಿ ಹೆಚ್ಚು ದುಬಾರಿಯಾಗಿದೆ.

    ಇದರಿಂದಾಗಿ ಜಿಯೋ ಗ್ರಾಹಕರಿಗೆ ಪ್ರತಿ ರೀಚಾರ್ಜ್ ನಲ್ಲಿ ತಿಂಗಳಿಗೆ 76 ರೂ. ಉಳಿಯಲಿದೆ. ತಿಂಗಳಿಗೆ 76 ರಂತೆ 9 ತಿಂಗಳಿಗೆ ಉಳಿತಾಯ ಆಗುವ ಮೊತ್ತವು ಫೋನ್ ಬೆಲೆಗೆ ಸಮನಾಗಲಿದೆ.

    2ಜಿ ಯಿಂದ 4ಜಿ ಗೆ ಅಪ್‌ಗ್ರೇಡ್ ಆಗುವ ಸುವರ್ಣ ಅವಕಾಶವನ್ನು ಜಿಯೋ ನೀಡುತ್ತಿದೆ. 455 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು, ಚಲನಚಿತ್ರ ಪ್ರೀಮಿಯರ್‌ಗಳು ಮತ್ತು ಹೊಸ ಚಲನಚಿತ್ರಗಳು, ವೀಡಿಯೊ ಶೋಗಳು, ಲೈವ್ ಸ್ಪೋರ್ಟ್ಸ್ ಕಾರ್ಯಕ್ರಮಗಳು, ಜಿಯೋ ಸಿನೆಮಾ ಮುಖ್ಯಾಂಶಗಳು, ಡಿಜಿಟಲ್ ಪಾವತಿಗಳು, ಕ್ಯೂಆರ್ ಕೋಡ್ ಸ್ಕ್ಯಾ‌ನ್‌ಗಳು ಜಿಯೋಭಾರತ್ 4 ಜಿ ಫೋನ್‌ನಲ್ಲಿ ಲಭ್ಯವಿದೆ.

    ಜಿಯೋಪೇ ಮತ್ತು ಜಿಯೋಚಾಟ್ ನಂತಹ ಪ್ರಿಲೋಡೆಡ್ ಅಪ್ಲಿಕೇಶನ್ ಗಳು ಸಹ ಈ ಫೋನ್‌ನಲ್ಲಿ ಲಭ್ಯವಿರುತ್ತವೆ. ಹತ್ತಿರದ ಅಂಗಡಿಗಳ ಹೊರತಾಗಿ, ಫೋನ್ ಅನ್ನು ಜಿಯೋಮಾರ್ಟ್ ಅಥವಾ ಅಮೆಜಾನ್‌ನಿಂದ ಫೋನ್‌ ಖರೀದಿಸಬಹುದು.

     

  • Nvidia ದಲ್ಲಿ ವಿದ್ಯೆ ಇದೆ, ಇದರರ್ಥ ಭಾರತದಲ್ಲಿ ಜ್ಞಾನ: ಅಂಬಾನಿಯ ಮಾತಿಗೆ ಜೆನ್ಸನ್‌ ಹುವಾಂಗ್‌ ಚಪ್ಪಾಳೆ

    Nvidia ದಲ್ಲಿ ವಿದ್ಯೆ ಇದೆ, ಇದರರ್ಥ ಭಾರತದಲ್ಲಿ ಜ್ಞಾನ: ಅಂಬಾನಿಯ ಮಾತಿಗೆ ಜೆನ್ಸನ್‌ ಹುವಾಂಗ್‌ ಚಪ್ಪಾಳೆ

    ಮುಂಬೈ: ನನ್ನ ಪ್ರಕಾರ NVIDIA ಅಂದರೆ ವಿದ್ಯೆ. ಇದರರ್ಥ ಭಾರತದಲ್ಲಿ ಜ್ಞಾನ ಎಂದು ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಹೇಳಿದ್ದಾರೆ.

    NVIDIA AI ಸಮ್ಮೇಳನದಲ್ಲಿ ಮುಕೇಶ್‌ ಅಂಬಾನಿ ಮತ್ತು ಎನ್ವಿಡಿಯಾ ಸಿಇಒ ಜೆನ್ಸನ್‌ ಹುವಾಂಗ್‌(Jensen Huang) ಅವರು ಪರಸ್ಪರ ಸಂವಾದ ನಡೆಸಿದರು. ಈ ವೇಳೆ ಅಂಬಾನಿ ಎನ್‌ವಿಡಿಯಾ ಪದದ ಅರ್ಥವನ್ನು ವಿವರಿಸಿದರು.

    ʼಎನ್ವಿಡಿಯಾʼ ಹಿಂದಿಯಲ್ಲಿರುವ ʼವಿದ್ಯಾʼ ಪದವನ್ನು ಪ್ರತಿಧ್ವನಿಸುತ್ತದೆ. ವಿದ್ಯೆ ಅಂದರೆ ʼಜ್ಞಾನʼ ಎಂದರ್ಥ. ಹಿಂದೂ ಧರ್ಮದಲ್ಲಿ ಸರಸ್ವತಿಯನ್ನು ಜ್ಞಾನದ ದೇವತೆಯಾಗಿ ಕಾಣುತ್ತೇವೆ. ಸರಸ್ವತಿಗೆ ನಿಮ್ಮನ್ನು ನೀವು ಅರ್ಪಿಸಿದಾಗ ಸಂಪತ್ತು, ಸಮೃದ್ಧಿ ಬರುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಸಂಪತ್ತಿನ ದೇವತೆ ಲಕ್ಷ್ಮಿ. ಎನ್‌ವಿಡಿಯಾ ಈಗ ವಿಶ್ವದಲ್ಲಿ ಜ್ಞಾನದ ಕ್ರಾಂತಿ ಮಾಡುತ್ತಿದೆ ಎಂದು ಬಣ್ಣಿಸಿದರು. ಇದನ್ನೂ ಓದಿ: ಭಾರತ ಎಲ್ಲರಿಗಿಂತ ಮೊದಲು 6G ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಿದೆ: ಪಿಯೂಷ್ ಗೋಯಲ್

    ಅಂಬಾನಿ ಮಾತಿಗೆ ಜೆನ್ಸನ್‌ ಹುವಾಂಗ್‌ ಮೆಚ್ಚುಗೆ ವ್ಯಕ್ತಪಡಿಸಿ, ಆರಂಭದಲ್ಲಿ ನಾನು ಕಂಪನಿಗೆ NVIDIA ಎಂದು ಹೆಸರನ್ನು ಇರಿಸಿದಾಗ ಬಹಳಷ್ಟು ಟೀಕೆಗಳನ್ನು ಎದುರಿಸಿದ್ದೆ. ಏನಿದು ಕೆಟ್ಟ ಹೆಸರು ಎಂದಿದ್ದರು. ಕೊನೆಗೂ 32 ವರ್ಷದ ನಂತರ ನನ್ನ ಕಂಪನಿಗೆ ನಾನು ಸರಿಯಾದ ಹೆಸರನ್ನು ಇರಿಸಿದ್ದೇನೆ ಎನ್ನುವುದು ಗೊತ್ತಾಯಿತು  ಎಂದು ಬಣ್ಣಿಸಿ ಚಪ್ಪಾಳೆ ತಟ್ಟಿದರು.

    ಭಾರತದಲ್ಲಿ ಕೃತಕ ಬುದ್ಧಿಮತ್ತೆ (AI) ಮೂಲಸೌಕರ್ಯವನ್ನು (AI infrastructure) ನಿರ್ಮಿಸಲು ರಿಲಯನ್ಸ್‌ ಜೊತೆ ಎನ್‌ವಿಡಿಯಾ ಪಾಲುದಾರಿಕೆಯನ್ನು ಘೋಷಿಸಿದೆ.

    ಭಾರತವು ತನ್ನದೇ ಆದ AI ಅನ್ನು ತಯಾರಿಸಬೇಕು ಎಂಬುದು ಸಂಪೂರ್ಣ ಅರ್ಥಪೂರ್ಣವಾಗಿದೆ. ಬುದ್ಧಿವಂತಿಕೆಯನ್ನು ಆಮದು ಮಾಡಿಕೊಳ್ಳಲು ನೀವು ಡೇಟಾವನ್ನು ರಫ್ತು ಮಾಡಬಾರದು. ಭಾರತವು ಬ್ರೆಡ್ ಆಮದು ಮಾಡಿಕೊಳ್ಳಲು ಹಿಟ್ಟು ರಫ್ತು ಮಾಡಬಾರದು ಜೆನ್ಸನ್ ಹುವಾಂಗ್ ಅಭಿಪ್ರಾಯ ವ್ಯಕ್ತಪಡಿಸಿದರು.

     

  • ದೀಪಿಕಾ – ರಣ್‌ವೀರ್‌ ಸಿಂಗ್ ಮಗಳ ನೋಡಲು ಬಂದ ಮುಕೇಶ್ ಅಂಬಾನಿ

    ದೀಪಿಕಾ – ರಣ್‌ವೀರ್‌ ಸಿಂಗ್ ಮಗಳ ನೋಡಲು ಬಂದ ಮುಕೇಶ್ ಅಂಬಾನಿ

    ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಸೆ.8ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಪೋಷಕರಾಗಿರುವ ಸಂಭ್ರಮದಲ್ಲಿರುವ ದೀಪಿಕಾ ಮತ್ತು ರಣ್‌ವೀರ್ (Ranveer Singh) ನೋಡಲು ಉದ್ಯಮಿ ಮುಕೇಶ್ ಅಂಬಾನಿ ಎಚ್.ಎನ್ ರಿಲಯನ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಪೋಷಕರಾಗಿರುವ ದೀಪಿಕಾ ದಂಪತಿಗೆ ಶುಭಕೋರಲು ಮುಖೇಶ್ ಭೇಟಿ ನೀಡಿದ್ದರು. ದೀಪಿಕಾ ಮತ್ತು ಮಗುವಿನ ಕುಶಲೋಪರಿ ವಿಚಾರಿಸಿದ್ದಾರೆ. ಉದ್ಯಮಿ ಮುಕೇಶ್ (Mukesh Ambani) ಆಸ್ಪತ್ರೆಯ ಆಗಮಿಸಿದ್ದ ವೇಳೆ, ಹೆಚ್ಚಿನ ಭದ್ರತೆ ಕೂಡ ನೀಡಲಾಗಿತ್ತು. ಇದನ್ನೂ ಓದಿ:ಸಲ್ಮಾನ್, ರಶ್ಮಿಕಾ ನಟನೆಯ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ಕಾಜಲ್ ಅಗರ್ವಾಲ್

    ಇನ್ನೂ ಮನೆಗೆ ಮುದ್ದಾದ ಹೆಣ್ಣು ಮಗುವಿನ ಆಗಮನವಾಗಿರೋದು ಸಹಜವಾಗಿ ಕುಟುಂಬಕ್ಕೆ ಖುಷಿಕೊಟ್ಟಿದೆ. ಈ ಜೋಡಿಗೆ ಬಾಲಿವುಡ್ ಸ್ಟಾರ್ ನಟ, ನಟಿಯರು ಶುಭಕೋರಿದ್ದಾರೆ. ಮಗುವಿನ ಮುಖ ಅದ್ಯಾವಾಗ ರಿವೀಲ್ ಮಾಡ್ತಾರೆ ಎಂದು ಫ್ಯಾನ್ಸ್ ಎದುರು ನೋಡ್ತಿದ್ದಾರೆ.

    ಹಲವು ವರ್ಷಗಳ ಡೇಟಿಂಗ್ ನಂತರ ನವೆಂಬರ್ 2018ರಲ್ಲಿ ದೀಪಿಕಾ ಮತ್ತು ರಣ್‌ವೀರ್ ಸಿಂಗ್ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

  • ಅಂಬಾನಿ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಸ್ಟಾರ್ಸ್

    ಅಂಬಾನಿ ಮನೆಯ ಗಣೇಶ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ಸ್ಟಾರ್ಸ್

    ದ್ಯಮಿ ಮುಖೇಶ್ ಅಂಬಾನಿ (Mukesh Ambani) ಮನೆಯಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಅಂಬಾನಿ ಕುಟುಂಬದ ಹಬ್ಬದಲ್ಲಿ ಬಾಲಿವುಡ್ (Bollywood) ನಟ, ನಟಿಯರು ಭಾಗಿಯಾಗಿ ಗಣಪನ ಆಶೀರ್ವಾದ ಪಡೆದಿದ್ದಾರೆ. ಪಾಲ್ಗೊಂಡಿರುವ ಸೆಲೆಬ್ರಿಟಿಗಳ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

     

    View this post on Instagram

     

    A post shared by Viral Bhayani (@viralbhayani)

    ಹಬ್ಬದಲ್ಲಿ ಸಲ್ಮಾನ್ ಖಾನ್ (Salman Khan) ಭಾಗಿಯಾಗಿ ಗಣೇಶನ ಆಶೀರ್ವಾದ ಪಡೆದಿದ್ದಾರೆ. ಸೌತ್‌ ಬ್ಯೂಟಿ ಪೂಜಾ ಹೆಗ್ಡೆ (Pooja Hegde) ತಮ್ಮ ಕುಟುಂಬದ ಜೊತೆ ಆಗಮಿಸಿ ಗಣಪನ ದರ್ಶನ ಪಡೆದಿದ್ದಾರೆ.

    ಆಯುಷ್ಮಾನ್ ದಂಪತಿ ಕೂಡ ಅಂಬಾನಿ ಮನೆಯ ಹಬ್ಬದಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ. ಬಳಿಕ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಇದನ್ನೂ ಓದಿ:ಹೆರಿಗೆ ಆಸ್ಪತ್ರೆಗೆ ಅಡ್ಮಿಟ್ ಆದ ದೀಪಿಕಾ ಪಡುಕೋಣೆ

    ಪತಿ ಜೊತೆ ಮಾಧುರಿ ದೀಕ್ಷೀತ್ ಭೇಟಿ ಕೊಟ್ಟಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಶಿಲ್ಪಾ ಶೆಟ್ಟಿ, ಕಾಜಲ್ ಅಗರ್‌ವಾರ್, ನಟಿ ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ (Shraddha Kapoor), ಕಿಯಾರಾ ಅಡ್ವಾಣಿ ದಂಪತಿ ಸೇರಿದಂತೆ ಅನೇಕರು ಭಾಗಿಯಾಗಿ ಗಣಪನ ದರ್ಶನ ಪಡೆದಿದ್ದಾರೆ.

    ಇತ್ತ ಮಗ ಅನಂತ್ ಮತ್ತು ಸೊಸೆ ರಾಧಿಕಾ ಜೊತೆ ನೀತಾ ಅಂಬಾನಿ ಕೂಡ ಕ್ಯಾಮೆರಾಗೆ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಹಬ್ಬದ ಝಲಕ್‌ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗುತ್ತಿದೆ.

  • ಗ್ರಾಹಕರಿಗೆ ಉಚಿತವಾಗಿ 100 ಜಿಬಿ ಕ್ಲೌಡ್ ಸಂಗ್ರಹ ನೀಡಲಿದೆ ರಿಲಯನ್ಸ್ ಜಿಯೋ

    ಗ್ರಾಹಕರಿಗೆ ಉಚಿತವಾಗಿ 100 ಜಿಬಿ ಕ್ಲೌಡ್ ಸಂಗ್ರಹ ನೀಡಲಿದೆ ರಿಲಯನ್ಸ್ ಜಿಯೋ

    ಮುಂಬೈ: ರಿಲಯನ್ಸ್ ಜಿಯೋ (Reliance Jio) ತನ್ನ ಗ್ರಾಹಕರಿಗೆ ಬಂಪರ್ ಆಫರ್ ತಂದಿದೆ. ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತದೆ. ಫೋಟೋಗಳು, ವೀಡಿಯೋಗಳು ಅಥವಾ ಡಾಕ್ಯುಮೆಂಟ್‌ಗಳನ್ನು ಸಂಗ್ರಹಿಸಬಹುದು.

    ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Reliance AGM 2024) ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ. ಕೆಲವು ಜಿಬಿಯಷ್ಟು ಸಂಗ್ರಹವನ್ನು ಉಚಿತವಾಗಿ ನೀಡಿದ ನಂತರ ಗೂಗಲ್ ಮತ್ತು ಇತರ ಕಂಪನಿಗಳು ಕ್ಲೌಡ್ ಸಂಗ್ರಹಣೆಗೆ ಶುಲ್ಕ ವಿಧಿಸುತ್ತವೆ. ಇದನ್ನೂ ಓದಿ: Telegram Ban | ಭಾರತದಲ್ಲಿ ಬ್ಯಾನ್ ಆಗುತ್ತಾ ಟೆಲಿಗ್ರಾಂ ಆ್ಯಪ್?

    ಅಲ್ಲದೆ, ಜಿಯೋ ಬ್ರೈನ್ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು ಇದನ್ನು ‘ಎಐ ಎವೆರಿವೇರ್ ಫಾರ್ ಎವರಿಒನ್’ ಎಂಬ ಥೀಮ್ ಮೇಲೆ ಪ್ರಾರಂಭಿಸುತ್ತದೆ.

    ಜಿಯೋ ಸಂಪೂರ್ಣ ಎಐ ಅನ್ನು ಒಳಗೊಂಡ ಪರಿಕರಗಳು ಮತ್ತು ಪ್ಲಾಟ್‌ಫಾರ್ಮ್‌ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ಇದನ್ನು ‘ಜಿಯೋ ಬ್ರೈನ್’ ಎಂದು ಕರೆಯಲಾಗುತ್ತದೆ. ‘ರಿಲಯನ್ಸ್‌ ಜಿಯೋ ಬ್ರೈನ್ ಅನ್ನು ಗಟ್ಟಿಗೊಳಿಸುವ ಮೂಲಕ ನಾವು ಶಕ್ತಿಯುತ ಎಐ ಸೇವೆಗಳ ಪ್ಲಾಟ್‌ಫಾರ್ಮ್ ರೂಪಿಸುತ್ತೇವೆ ಎಂಬುದಾಗಿ ನಾನು ಭಾವಿಸುತ್ತೇನೆ’ ಎಂದು ಅಂಬಾನಿ ಹೇಳಿದರು. ನಾವು ಜಾಮ್‌ನಗರದಲ್ಲಿ ಗಿಗಾವ್ಯಾಟ್-ಪ್ರಮಾಣದ ಎಐ- ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಿದ್ದೇವೆ. ಇದು ಸಂಪೂರ್ಣವಾಗಿ ರಿಲಯನ್ಸ್‌ನ ಹಸಿರು ಶಕ್ತಿಯಿಂದ ಚಾಲಿತವಾಗುತ್ತದೆ. ಭಾರತದಲ್ಲಿಯೇ ವಿಶ್ವದ ಅತ್ಯಂತ ಕೈಗೆಟುಕುವ ಎಐ ಇಂಟರ್ ಫೇಸಿಂಗ್ ಸೃಷ್ಟಿಸುವುದು ನಮ್ಮ ಗುರಿಯಾಗಿದೆ. ‘ಇದು ಭಾರತದಲ್ಲಿ ಎಐ ಅಪ್ಲಿಕೇಷನ್‌ಗಳನ್ನು ಹೆಚ್ಚು ಕೈಗೆಟುಕುವಂತೆ ಮತ್ತು ಎಲ್ಲರಿಗೂ ಸಂಪರ್ಕ ಸಿಗುವಂತೆ ಮಾಡುತ್ತದೆ’ ಎಂದರು.

    ಜಿಯೋ ಅಧ್ಯಕ್ಷ ಆಕಾಶ್ ಅಂಬಾನಿ ಹಲವಾರು ಹೊಸ ಎಐ ಸೇವೆಗಳನ್ನು ಘೋಷಿಸಿದ್ದಾರೆ. ಇದು ಜಿಯೋ ಟಿವಿಒಎಸ್ (Jio TVOS), ಹಲೋಜಿಯೋ (HelloJio), ಜಿಯೋ ಐಒಟಿ ಸಲ್ಯೂಷನ್ (Jio Home IoT), ಜಿಯೋ ಹೋಮ್ (JioHome) ಅಪ್ಲಿಕೇಷನ್ ಮತ್ತು ಜಿಯೋ ಫೋನ್ ಕಾಲ್ ಎಐ (Jio Phonecall AI) ಅನ್ನು ಒಳಗೊಂಡಿದೆ. ಇದನ್ನೂ ಓದಿ: ಕೀಬೋರ್ಡ್‌ನಲ್ಲಿ ಡಾಲರ್ ಬದಲು ರುಪಿ ಚಿಹ್ನೆ ಯಾಕಿಲ್ಲ – ಓಲಾ ಸಿಇಒ ಪ್ರಶ್ನೆ

  • ಶ್ರೀಮಂತರ ಪಟ್ಟಿ: ಅಂಬಾನಿ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ಗೌತಮ್ ಅದಾನಿ

    ಶ್ರೀಮಂತರ ಪಟ್ಟಿ: ಅಂಬಾನಿ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದ ಗೌತಮ್ ಅದಾನಿ

    ನವದೆಹಲಿ: ಹುರನ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ (Gautam Adani), ಮುಕೇಶ್ ಅಂಬಾನಿ (Mukesh Ambani) ಯವರನ್ನು ಹಿಂದಿಕ್ಕುವ ಮೂಲಕ ಅಗ್ರ ಸ್ಥಾನಕ್ಕೇರಿದ್ದಾರೆ.

    11.2 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಗೌತಮ್ ಅದಾನಿ ಹಾಗೂ ಹುರುನ್ ಇಂಡಿಯಾ 2024 ಶ್ರೀಮಂತರ ಪಟ್ಟಿಯಲ್ಲಿ (Hurun India Rich List 2024) ಮುಕೇಶ್ ಅಂಬಾನಿಯವರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

    ಈ ವರ್ಷದ ಜು.31 ರವರೆಗಿನ ಉದ್ಯಮಿಗಳ ಸಂಪತ್ತಿನ ಲೆಕ್ಕಾಚಾರವನ್ನು ಆಧರಿಸಿ 10.14 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಮುಕೇಶ್ ಅಂಬಾನಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಇದನ್ನೂ ಓದಿ: ಲವ್ ಈಸ್ ಲೈಫ್: ಭರತ್ ಕುಮಾರ್ ನಟನೆಯ ಚಿತ್ರಕ್ಕೆ ಮುಹೂರ್ತ

    ದೇಶವು ಏಷ್ಯಾದ ಸಂಪತ್ತನ್ನು ಸೃಷ್ಟಿಸುವ ಒಂದು ಎಂಜಿನ್ ಆಗಿ ಹೊರಹೊಮ್ಮುತ್ತಿದೆ. ಜೊತೆಗೆ ಚೀನಾ ಶೇ.25 ರಷ್ಟು ಕುಸಿತ ಕಂಡಾಗಲೂ ಭಾರತ ಶೇ.29 ರಷ್ಟು ಏರಿಕೆಯನ್ನು ಕಂಡಿದೆ ಎಂದು ಹುರುನ್ ಸಂಸ್ಥಾಪಕ ಹಾಗೂ ಮುಖ್ಯ ಸಂಶೋಧಕ ಅನಸ್ ರೆಹಮಾನ್  (Anas Rahman) ತಿಳಿಸಿದ್ದಾರೆ.

    ಅದಾನಿ ಮತ್ತು ಅಂಬಾನಿ ನಂತರ ಮೂರನೇ ಸ್ಥಾನದಲ್ಲಿ 3.14 ಲಕ್ಷ ಕೋಟಿ ರೂ. ಸಂಪತ್ತನ್ನು ಹೊಂದಿರುವ ಹೆಚ್‌ಸಿಎಲ್ ಟೆಕ್ನಾಲಾಜಿಸ್‌ನ ಶಿವ ನಡಾರ್ ಹಾಗೂ ಅವರ ಕುಟುಂಬ ಪಡೆದುಕೊಂಡಿದೆ. ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿ ಕ್ರಮವಾಗಿ 2.89 ಲಕ್ಷ ಕೋಟಿ ರೂ. ಸಂಪತ್ತು ಹೊಂದಿರುವ ಸೈರಸ್ ಎಸ್ ಪೂನಾವಾಲಾ ಹಾಗೂ ಅವರ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (Serum Institute Of India) ಕುಟುಂಬ ಮತ್ತು 2.49 ಲಕ್ಷ ಕೋಟಿ ರೂ. ಸಂಪತ್ತು ಹೊಂದಿರುವ ಸನ್ ಫಾರ್ಮಾಸ್ಯುಟಿಕಲ್ ಇಂಡಸ್ಟ್ರೀಸ್‌ನ ದಿಲೀಪ್ ಶಾಂಘ್ವಿ ಪಡೆದುಕೊಂಡಿದ್ದಾರೆ.ಇದನ್ನೂ ಓದಿ: ವಿತ್ತೀಯ ಹಂಚಿಕೆ ವಿಷಯಗಳಲ್ಲಿ 16ನೇ ಹಣಕಾಸು ಆಯೋಗಕ್ಕೆ ಪ್ರಮುಖ ಶಿಫಾರಸು ಮಾಡಿದ ರಾಜ್ಯ ಸರ್ಕಾರ

    ದೇಶಾದ್ಯಂತ ಬಿಲಿಯನೇರ್ (ನೂರು ಕೋಟಿ) ಸಂಖ್ಯೆ ಹೆಚ್ಚಾಗಿದ್ದು, 334ಕ್ಕೆ ತಲುಪಿ ದಾಖಲೆ ನಿರ್ಮಿಸಿದೆ ಎಂದು ವರದಿಯೊಂದು ತಿಳಿಸಿದೆ. ಜೊತೆಗೆ ಕಳೆದ ವರ್ಷ ಭಾರತವು ಪ್ರತಿ ಐದು ದಿನಗಳಿಗೆ ಒಬ್ಬ ಬಿಲಿಯನೇರ್‌ನ್ನು ಉತ್ಪಾದಿಸುವ ಮೂಲಕ 259 ಬಿಲಿಯನೇರ್‌ಗಳನ್ನು ಹೊಂದಿತ್ತು ಎಂದು ತಿಳಿಸಿದೆ. 7 ವರ್ಷ ಹಿಂದಿನ ಬೆಳವಣಿಗೆಯನ್ನು ತುಲನೆ ಮಾಡಿದಾಗ ಹುರುನ್ ಇಂಡಿಯಾ ಶ್ರೀಮಂತರ ಪಟ್ಟಿಯು ಶೇ.1520ರಷ್ಟು ಗಣನೀಯವಾಗಿ ವಿಸ್ತರಿಸಿದೆ. 1500 ವ್ಯಕ್ತಿಗಳು 1 ಸಾವಿರ ಕೋಟಿ ರೂ.ಗಿಂತಲೂ ಹೆಚ್ಚಿನ ಸಂಪತ್ತಿನ ಮೌಲ್ಯ ಹೊಂದಿದ್ದಾರೆ ಎಂದು ವರದಿಯೊಂದು ತಿಳಿದು ಬಂದಿದೆ.