Tag: Mukhtar Abbas Naqvi

  • ಮೋದಿ ಸಂಪುಟ ಸ್ಥಾನಕ್ಕೆ ಮುಖ್ತಾರ್‌ ಅಬ್ಬಾಸ್‌ ರಾಜೀನಾಮೆ

    ಮೋದಿ ಸಂಪುಟ ಸ್ಥಾನಕ್ಕೆ ಮುಖ್ತಾರ್‌ ಅಬ್ಬಾಸ್‌ ರಾಜೀನಾಮೆ

    ನವದೆಹಲಿ: ರಾಜ್ಯಸಭೆ ಅವಧಿ ಅಂತ್ಯದ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್‌ ಅಬ್ಬಾಸ್‌ ನಖ್ವಿ ರಾಜೀನಾಮೆ ನೀಡಿದ್ದಾರೆ.

    ಇತ್ತೀಚೆಗಷ್ಟೆ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಮುಖ್ತಾರ್‌ ಅಬ್ಬಾಸ್‌ ಸ್ಪರ್ಧಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಸಭೆ ಅವಧಿ ಗುರುವಾರ ಅಂತ್ಯಗೊಳ್ಳಲಿದೆ. ಮೋದಿ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಖ್ವಿಗೆ ಕೇಂದ್ರ ಸರ್ಕಾರ ರಾಜ್ಯಪಾಲ ಹುದ್ದೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

    ಈಗಾಗಲೇ ಇಬ್ಬರು ಸಚಿವರ ರಾಜ್ಯಸಭೆ ಅವಧಿ ಅಂತ್ಯಗೊಂಡಿದೆ. ಈ ಹಿನ್ನೆಲೆಯಲ್ಲಿ ಮೋದಿ ನೇತೃತ್ವದ ಸಂಪುಟ ಸ್ಥಾನಕ್ಕೆ ಇಬ್ಬರು ಕ್ಯಾಬಿನೆಟ್‌ ಸಚಿವರು ನಾಳೆಯೊಳಗೆ ರಾಜೀನಾಮೆ ಸಲ್ಲಿಸಬೇಕಾಗುತ್ತದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಸಚಿವ ಆರ್‌ಸಿಪಿ ಸಿಂಗ್ ಅವರ ರಾಜ್ಯಸಭೆಯ ಅವಧಿ ಗುರುವಾರ ಕೊನೆಗೊಳ್ಳಲಿದೆ. ಇದನ್ನೂ ಓದಿ: ನಿಯಮ ಮೀರಿ ಚಾಮರಾಜಪೇಟೆ ಬಂದ್ ಮಾಡಿದ್ರೆ ಕಠಿಣ ಕ್ರಮ: ಪೊಲೀಸರ ಎಚ್ಚರಿಕೆ

    ಇತ್ತೀಚೆಗೆ ಉತ್ತರ ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ಹಲವಾರು ಬಿಜೆಪಿ ನಾಯಕರು ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಆದರೆ ಪಕ್ಷವು ನಖ್ವಿಗೆ ರಾಜ್ಯಸಭಾ ಟಿಕೆಟ್ ನೀಡಲಿಲ್ಲ. ಇದನ್ನೂ ಓದಿ: ನಿದ್ದೆಯಿಂದ ಎಬ್ಬಿಸಿದಕ್ಕೆ ಪೊಲೀಸರನ್ನ ಅಸಭ್ಯವಾಗಿ ನಿಂದಿಸಿದ ವ್ಯಕ್ತಿಗೆ 1.7 ವರ್ಷ ಜೈಲು ಶಿಕ್ಷೆ

    Live Tv
    [brid partner=56869869 player=32851 video=960834 autoplay=true]

  • ದೇಶದಲ್ಲಿ ಹಿಜಬ್‌ಗೆ ಯಾವುದೇ ನಿಷೇಧವಿಲ್ಲ: ಕೇಂದ್ರ ಸಚಿವ ಮುಖ್ತರ್‌ ಅಬ್ಬಾಸ್‌

    ದೇಶದಲ್ಲಿ ಹಿಜಬ್‌ಗೆ ಯಾವುದೇ ನಿಷೇಧವಿಲ್ಲ: ಕೇಂದ್ರ ಸಚಿವ ಮುಖ್ತರ್‌ ಅಬ್ಬಾಸ್‌

    ನವದೆಹಲಿ: ಜನರು ಏನು ತಿನ್ನಬೇಕು, ತಿನ್ನಬಾರದು ಎಂದು ಹೇಳುವುದು ಸರ್ಕಾರದ ಕೆಲಸವಲ್ಲ. ದೇಶದಲ್ಲಿ ಪ್ರತಿಯೊಬ್ಬ ಪ್ರಜೆಗೂ ತಮ್ಮ ಇಷ್ಟದ ಆಹಾರ ಸೇವಿಸುವ ಸ್ವಾತಂತ್ರ್ಯವಿದೆ ಎಂದು ಕೇಂದ್ರ ಸಚಿವ ಮುಖ್ತರ್‌ ಅಬ್ಬಾಸ್‌ ನಖ್ವಿ ಅಭಿಪ್ರಾಯಪಟ್ಟಿದ್ದಾರೆ.

    ವಿವಿಧೆಡೆ ನಡೆಯುತ್ತಿರುವ ಧಾರ್ಮಿಕ ಗಲಭೆಗಳ ಕುರಿತು ಮಾತನಾಡಿದ ಅವರು, ಭಾರತೀಯರಿಗೆ ತಮ್ಮ ನಂಬಿಕೆಯನ್ನು ಆಚರಿಸಲು ಸ್ವಾತಂತ್ರ್ಯವಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಸಮುದಾಯಗಳ ನಡುವೆ ಅಸಹಿಷ್ಣುತೆ ಬೆಳೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹನುಮಾನ್ ಮೆರವಣಿಗೆಗೆ ಪುಷ್ಪವೃಷ್ಟಿ ಸುರಿಸಿದ ಮುಸ್ಲಿಮರು

    HIJAB

    ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಗುಂಪುಗಳು, ಭಾರತದ ಅಂತರ್ಗತ ಸಂಸ್ಕೃತಿ ಮತ್ತು ಬದ್ಧತೆಯನ್ನು ದೂಷಿಸಲು ಪ್ರಯತ್ನಿಸುತ್ತವೆ ಎಂದು ಹೇಳಿದ್ದಾರೆ.

    ಹಿಜಬ್‌ ಕುರಿತು ಮಾತನಾಡಿದ ಅವರು, ಭಾರತದಲ್ಲಿ ಹಿಜಬ್‌ಗೆ ಯಾವುದೇ ನಿಷೇಧವಿಲ್ಲ. ಮಾರುಕಟ್ಟೆ ಮತ್ತು ಇತರೆ ಸ್ಥಳಗಳಲ್ಲಿ ಹಿಜಬ್‌ ಧರಿಸಬಹುದಾಗಿದೆ. ಆದರೆ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳು ವಸ್ತ್ರಸಂಹಿತೆ ಹಾಗೂ ಶಿಸ್ತನ್ನು ರೂಢಿಸಿವೆ. ಅದನ್ನು ನಾವು ಪಾಲಿಸಲೇಬೇಕಾಗುತ್ತದೆ. ನಿಮಗೆ ಇದು ಇಷ್ಟವಿಲ್ಲದಿದ್ದರೆ, ಬೇರೆ ಶಿಕ್ಷಣ ಸಂಸ್ಥೆಯನ್ನು ಆಯ್ಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಬೆಂಬಲದೊಂದಿಗೆ ಹೊಸ ಹಿಂದೂ ಓವೈಸಿ ಉದಯ : ರಾಜ್ ಠಾಕ್ರೆ ವಿರುದ್ಧ ಸಂಜಯ್ ರಾವತ್ ವಾಗ್ದಾಳಿ

    NARENDRA MODI

    ಹನುಮ ಜಯಂತಿ ನಿಮಿತ್ತ ಶನಿವಾರ ನವದೆಹಲಿಯಲ್ಲಿ ಹಿಂದೂ ಧಾರ್ಮಿಕ ಮೆರವಣಿಗೆ ವೇಳೆ ಧಾರ್ಮಿಕ ಘರ್ಷಣೆಗಳು ನಡೆದಿದ್ದು, ಆರು ಪೊಲೀಸರು ಸೇರಿದಂತೆ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರ ಬಲಪಂಥೀಯ ಸರ್ಕಾರದ ಭಾಗವಾಗಿರುವ ಮುಖ್ತರ್‌ ಅಬ್ಬಾಸ್‌ ನಖ್ವಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾಗಿದ್ದಾರೆ. ಇತ್ತೀಚೆಗೆ ದೇಶದ ವಿವಿಧೆಡೆ ನಡೆಯುತ್ತಿರುವ ಕೋಮುಗಲಭೆ, ಹಿಂಸಾಚಾರ ಕುರಿತು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಬುಲ್ಡೋಜರ್ ಬಾಬಾ ರಾಜ್ಯವನ್ನು ತಪ್ಪು ದಾರಿಯಲ್ಲಿ ನಡೆಸುತ್ತಿದ್ದಾರೆ: ಅಖಿಲೇಶ್ ಯಾದವ್

  • ಭಾರತದಲ್ಲಿ 2022ರ ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ: ಕೇಂದ್ರ ಸಚಿವ ನಖ್ವಿ

    ಭಾರತದಲ್ಲಿ 2022ರ ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ: ಕೇಂದ್ರ ಸಚಿವ ನಖ್ವಿ

    ಮುಂಬೈ: ಭಾರತದಲ್ಲಿ 2022 ಹಜ್‌ ಪ್ರಕ್ರಿಯೆ ಶೇ.100 ಡಿಜಿಟಲ್‌ ಆಗಿರುತ್ತದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

    ಮುಂಬೈನ ಹಜ್ ಹೌಸ್‌ನಲ್ಲಿ ಆನ್‌ಲೈನ್ ಬುಕಿಂಗ್ ಸೌಲಭ್ಯವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಡೋನೇಷ್ಯಾ ನಂತರ ಭಾರತ ಎರಡನೇ ಅತಿದೊಡ್ಡ ಸಂಖ್ಯೆಯಲ್ಲಿ ಹಜ್ ಯಾತ್ರಿಕರನ್ನು ಕಳುಹಿಸುತ್ತದೆ ಎಂದು ಹೇಳಿದರು.

    2020 ರಲ್ಲಿ ಮತ್ತು ಈ ವರ್ಷ ಕೋವಿಡ್ -19 ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದಾಗಿ ಹಜ್ ನಡೆಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

    700 ಕ್ಕೂ ಹೆಚ್ಚು ಮಹಿಳೆಯರು ‘ಮೆಹ್ರಾಮ್’ (ಪುರುಷ ಒಡನಾಡಿ) ಇಲ್ಲದೆ ಹಜ್ 2021 ಗೆ ಅರ್ಜಿ ಸಲ್ಲಿಸಿದ್ದಾರೆ. ಅದೇ ವರ್ಗದ ಅಡಿಯಲ್ಲಿ 2,100 ಕ್ಕೂ ಹೆಚ್ಚು ಮಹಿಳೆಯರು ಹಜ್ 2020 ಗೆ ಅರ್ಜಿ ಸಲ್ಲಿಸಿದ್ದಾರೆ. ಅವರು ಯಾತ್ರೆ ಮಾಡಲು ಬಯಸಿದರೆ ಅವರ ಅರ್ಜಿಗಳು 2022 ಹಜ್‌ಗೆ ಅರ್ಹವಾಗಿರುತ್ತವೆ ಎಂದು ನಖ್ವಿ ವಿವರ ನೀಡಿದರು.

    ಇತರ ಮಹಿಳೆಯರು ಕೂಡ ‘ಮೆಹ್ರಾಮ್’ ವರ್ಗವಿಲ್ಲದೆ ಹಜ್ 2022 ಗೆ ಅರ್ಜಿ ಸಲ್ಲಿಸಬಹುದು. ಈ ವರ್ಗದ ಎಲ್ಲ ಮಹಿಳೆಯರಿಗೆ ಲಾಟರಿ ಪದ್ಧತಿಯಿಂದ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದರು.

    ಅಕ್ಟೋಬರ್ 21 ರಂದು ನವದೆಹಲಿಯಲ್ಲಿ ನಡೆಯಲಿರುವ ಮುಂಬರುವ ಹಜ್ ಪರಿಶೀಲನಾ ಸಭೆಯಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಸಮಾಲೋಚನೆಯ ನಂತರ ಹಜ್ 2022 ಅನ್ನು ಘೋಷಿಸಲಾಗುತ್ತದೆ. ಇದನ್ನೂ ಓದಿ: ಮೋದಿಗೆ ಸಿಕ್ಕ ಗಿಫ್ಟ್‌ಗಳಿಗೆ ಭರ್ಜರಿ ಬೆಲೆ- ಚೋಪ್ರಾ ಜಾವೆಲಿನ್‍ಗೆ 1.50 ಕೋಟಿ 

    ಹಜ್ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತ ವ್ಯವಹಾರಗಳು, ವಿದೇಶಾಂಗ ವ್ಯವಹಾರಗಳು, ಆರೋಗ್ಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು, ಸೌದಿ ಅರೇಬಿಯಾದ ಭಾರತದ ರಾಯಭಾರಿ, ಜೆಡ್ಡಾದಲ್ಲಿನ ಭಾರತದ ಕಾನ್ಸುಲ್ ಜನರಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

  • ಸೋಂಕು ಹರಡುವ ಭೀತಿ – ಹಜ್ ಯಾತ್ರೆ ರದ್ದುಗೊಳಿಸಿದ ಭಾರತ

    ಸೋಂಕು ಹರಡುವ ಭೀತಿ – ಹಜ್ ಯಾತ್ರೆ ರದ್ದುಗೊಳಿಸಿದ ಭಾರತ

    ನವದೆಹಲಿ: ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಈ ಬಾರಿ ಭಾರತದಿಂದ ಹಜ್ ಯಾತ್ರೆ ರದ್ದು ಮಾಡಲಾಗಿದೆ ಎಂದು ಕೇಂದ್ರ ಅಲ್ಪ ಸಂಖ್ಯಾತರ ಕಲ್ಯಾಣ ಖಾತೆ ಸಚಿವ ಮುಕ್ತಾರ್ ಅಬ್ಬಾಸ್ ನಕ್ವಿ ಹೇಳಿದ್ದಾರೆ.

    ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಬಾರಿ ಹಜ್ ಯಾತ್ರೆಗೆ ಭಾರತದಿಂದ ಯಾರ್ಥಾತ್ರಿಗಳನ್ನು ಕಳುಹಿಸದಂತೆ ಸೌದಿ ಅರೇಬಿಯಾದ ಸಚಿವ ಡಾ. ಮೊಹಮ್ಮದ್ ಸಲೇಹ್ ಬಿನ್ ತಾಹೆರ್ ಬೆಂಟನ್ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಯಾತ್ರೆ ರದ್ದುಗೊಳಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಸೋಮವಾರ ದೂರವಾಣಿ ಕರೆ ಮಾಡಿದ್ದ ಡಾ. ಮೊಹಮ್ಮದ್ ಸಲೇಹ್ ಬಿನ್ ತಾಹೆರ್ ಬೆಂಟನ್, ಹಜ್ ಯಾತ್ರೆಗೆ ಅವಕಾಶ ನೀಡಿದರೆ ಸೋಂಕು ಹೆಚ್ಚಾಗಬಹುದು. ಇದರಿಂದ ಎರಡು ದೇಶಗಳಿಗೆ ಅಪಾಯ ಎದುರಾಗಬಹುದು ಹೀಗಾಗಿ ಈ ಬಾರಿ ಭಾರತದಿಂದ ಯಾತ್ರೆಗೆ ಯಾತ್ರಿಗಳನ್ನು ಕಳುಹಿಸದಂತೆ ಮನವಿ ಮಾಡಿದ್ದಾರೆ ಎಂದು ಸಚಿವ ನಕ್ವಿ ತಿಳಿಸಿದರು.

    ಭಾರತದಲ್ಲಿ ಈವರೆಗೂ 2.13 ಲಕ್ಷ ಅರ್ಜಿಗಳು ಹಜ್ ಯಾತ್ರೆಗೆ ಸ್ವೀಕೃತಗೊಂಡಿದೆ. ಯಾತ್ರೆ ರದ್ದಾದ ಕಾರಣ ಅವರ ಹಣವನ್ನು ದಂಡ ಶುಲ್ಕವಿಲ್ಲದೇ ಮರುಪಾವತಿಸುವ ಪ್ರಕ್ರಿಯೆ ನಡೆದಿದೆ ಎಂದರು. ಈ ವರ್ಷ 2,300ಕ್ಕೂ ಹೆಚ್ಚು ಮಹಿಳೆಯರು ಮೆಹ್ರಾಮ್ ಇಲ್ಲದೆ ಹಜ್ ಮಾಡಲು ಅರ್ಜಿ ಸಲ್ಲಿಸಿದ್ದಾರೆ. ಈ ಮಹಿಳೆಯರಿಗೆ ಹಜ್ 2020ಗೆ ಅರ್ಜಿ ಸಲ್ಲಿಸಿದ ಆಧಾರದ ಮೇಲೆ ಹಜ್ 2021ಗೆ ಹೋಗಲು ಅವಕಾಶವಿರುತ್ತದೆ. ಅಲ್ಲದೆ ಹೊಸ ಅರ್ಜಿ ಸಲ್ಲಿಸುವ ಮಹಿಳೆಯರಿಗೂ ಮುಂದಿನ ವರ್ಷ ಹಜ್‍ಗೆ ಹೋಗಲು ಅವಕಾಶವಿರುತ್ತದೆ ಎಂದು ಸ್ಪಷ್ಟನೆ ನೀಡಿದರು.

    2019ರಲ್ಲಿ ಒಟ್ಟು 2ಲಕ್ಷ ಭಾರತೀಯ ಮುಸ್ಲಿಮರು ಹಜ್ ಮಾಡಿದ್ದಾರೆ. ಈ ಯಾತ್ರಾರ್ಥಿಗಳಲ್ಲಿ 50 ಪ್ರತಿಶತ ಮಹಿಳೆಯರು ಸೇರಿದ್ದಾರೆ. 2018ರಲ್ಲಿ ಮೆಹ್ರಾಮ್ (ಪುರುಷ ಒಡನಾಡಿ) ಇಲ್ಲದೆ ಮುಸ್ಲಿಂ ಮಹಿಳೆಯರು ಹಜ್ ಮಾಡಬಹುದು ಎಂದು ಸರ್ಕಾರ ಖಚಿತಪಡಿಸಿದ ನಂತರ ಒಟ್ಟು 3,040 ಮಹಿಳೆಯರು ಹಜ್ ಯಾತ್ರೆ ಮಾಡಿದ್ದಾರೆ.