Tag: mukhyamantri chandru

  • ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

    ಒಳಮೀಸಲಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು ಸ್ವಾಗತಾರ್ಹ: ಮುಖ್ಯಮಂತ್ರಿ ಚಂದ್ರು

    ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಒಳಗೆ ಒಳಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಸಮುದಾಯದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು, ಮಂತ್ರಿಮಂಡಲ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು (Mukhyamantri Chandru) ಹೇಳಿದರು.

    ಈ ಮೂಲಕ ಎಲ್ಲಾ ಹೋರಾಟಗಾರರಿಗೂ ಪಕ್ಷದ ವತಿಯಿಂದ ಅಭಿನಂದನೆ. ನ್ಯಾ. ಸದಾಶಿವ ವರದಿ ಆಯೋಗವನ್ನು ಯಥಾವತ್ತಾಗಿ ಅಳವಡಿಸದ ಕಾರಣದಿಂದ ಅಲೆಮಾರಿ ಹಾಗೂ ಇನ್ನಿತರ ಧ್ವನಿ ಇಲ್ಲದ ಸಣ್ಣ ಸಣ್ಣ ಜಾತಿಗಳಿಗೆ ಒಳಮೀಸಲಾತಿಯ ಲಾಭ ದಕ್ಕುವುದಿಲ್ಲವೆಂಬ ಭಾವನೆಯೂ ಸಹ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ದಲಿತ ಸಮುದಾಯ 3 ಗುಂಪಾಗಿ ವರ್ಗೀಕರಿಸಿ ಮೀಸಲಾತಿ ಹಂಚಿಕೆ ಜಾರಿಗೆ ಸಂಪುಟ ನಿರ್ಧಾರ

    ಮುಂಬರುವ ದಿನಗಳಲ್ಲಿ ಬಾಕಿ ಇರುವ ಎಲ್ಲ ನೇಮಕಾತಿಗಳು, ಮುಂಬಡ್ತಿಗಳು ವೇಗದಲ್ಲಿ ಆಗಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸಬಲೀಕರಣಗೊಳ್ಳಲು ಸರ್ಕಾರವು ಪರಿಶಿಷ್ಟರಿಗೆ ಮೀಸಲಿಟ್ಟಿರುವ ಹಣವನ್ನು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆಗಳನ್ನು ತರಲು ಬಳಸಬೇಕಿದೆ ಎಂದು ಒತ್ತಾಯಿಸಿದರು.

    ಈ ಸಮಾಜದ ಮಕ್ಕಳಿಗೆ ವಿಶ್ವ ಗುಣಮಟ್ಟದ ಆಧುನಿಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವಂತಹ ಯೋಜನೆಗಳು ಜಾರಿಯಾಗಬೇಕಿದೆ ಎಂದು ಮುಖ್ಯಮಂತ್ರಿ ಚಂದ್ರು ತಿಳಿಸಿದರು. ಇದನ್ನೂ ಓದಿ: ಪುನರ್ವಸತಿ ಕಾರ್ಯಕರ್ತರ ಗೌರವಧನ 1,000 ರೂ. ಹೆಚ್ಚಳ – ಲಕ್ಷ್ಮಿ ಹೆಬ್ಬಾಳ್ಕರ್‌

  • ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು

    ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು

    – ನನಗೆ ಅರ್ಥವೇ ಆಗಲಿಲ್ಲ ಅನ್ನೋದು ಬೇಜವಾಬ್ದಾರಿ ತನ ಅಂತ ಗರಂ

    ಬೆಂಗಳೂರು: ಶಿವಣ್ಣನ (Shivarajkumar) ರೀತಿಯಲ್ಲಿ ಇನ್ಯಾರು ಕಮಲ್‌ ಹಾಸನ್‌ ಪರವಾಗಿದ್ದರೋ ಅವರೆಲ್ಲ ನಾಡದ್ರೋಹಿಗಳು ಅಂತ ಮುಖ್ಯಮಂತ್ರಿ ಚಂದ್ರು (Mukhyamantri Chandru) ಕೆಂಡಕಾರಿದ್ದಾರೆ.

    ಕಮಲ್‌ ಹಾಸನ್‌ (Kamal Haasan) ಕನ್ನಡ ಹೇಳಿಕೆ ಕುರಿತು ಬೆಂಗಳೂರಿನ (Bengaluru) ತಮ್ಮ ನಿವಾಸದಲ್ಲಿ ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಅವರು, ತಮಿಳು ನಟನನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರಲ್ಲದೇ ನಟ ಶಿವರಾಜ್‌ ಕುಮಾರ್‌ ವಿರುದ್ಧವೂ ಗರಂ ಆದರು. ಇದನ್ನೂ ಓದಿ: ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ

    ಈ ಘಟನೆ ನಡೀಬಾರದಿತ್ತು, ಈ ಹೇಳಿಕೆ ಕೊಟ್ಟ ಅವ್ನು ದುರಹಂಕಾರಿ, ಅಯೋಗ್ಯ. ಅವ್ನು ಹೇಳಿದ ಹೇಳಿಕೆ ನಮ್ಮ ನಾಡಿಗೆ ಅವಮಾನ ಆಗಿದೆ. ಆ ಘಟನೆಗೆ ಸಾಕ್ಷಿಯಾಗಿದ್ದ ಶಿವರಾಜ್ ಕುಮಾರ್ ಪಲಾಯನವಾದ ಮಾಡಿ ಬಿಟ್ಟರು. ಕಮಲ್ ಹಾಸನ್ ಅವ್ರ ಹೇಳಿಕೆಯನ್ನ ಖಂಡಿಸಬೇಕಿತ್ತು. ನಾನು, ನನ್ನ ಕುಟುಂಬ ನಿಮಗೆ ಧನ್ಯವಾದ ಹೇಳ್ತೀವಿ ಆದ್ರೆ ನಾಡು, ನುಡಿ ವಿಚಾರದಲ್ಲಿ ಹೋರಾಟದ ಪರವಾಗಿ ಇರ್ತೀನಿ ಅಂತ ಹೇಳಬೇಕಿತ್ತು. ಬೆಂಗಳೂರಿಗೆ ಬಂದಾಗ ಕೇಳಬಹುದಿತ್ತಲ್ಲ ಅಂತ ಹೇಳ್ತಾರೆ… ಹಾಗಿದ್ರೆ ಕನ್ನಡ ವಿಚಾರಕ್ಕೆ ಬಂದಾಗ ನೀವೇನು ಮಾಡ್ತಿದ್ರಿ? ನನಗೆ ಅರ್ಥವೇ ಆಗಲಿಲ್ಲ ಅನ್ನೋದು ಬೇಜವಾಬ್ದಾರಿ ತನ ಎಂದರಲ್ಲದೇ ಶಿವಣ್ಣ ರೀತಿಯಲ್ಲಿ ಇನ್ನೂ ಯಾರು ಅವರ (ಕಮಲ್‌ ಹಾಸನ್) ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು ಅಂತ ಮಾರ್ಮಿಕವಾಗಿ ನುಡಿದರು.

    ನಾಡು ನುಡಿಗೆ ಧಕ್ಕೆ ಬಂದಾಗ ರಾಜ್‌ ಕುಟುಂಬ ಒಂದೇ ಕನ್ನಡ ನಾಡಲ್ಲ, ಶಿವಣ್ಣ ಒಬ್ಬರೇ ಕನ್ನಡ ನಾಡಲ್ಲ. ಕನ್ನಡ ನಾಡಿನಿಂದ ಅವರೆಲ್ಲ ಬಂದಿದ್ದಾರೆ. ಆದ್ರೆ ಅವರ ಪ್ರತಿಕ್ರಿಯೆ ನೋಡಿದಾಗ ಅರಿವಿನ ಕೊರತೆಯಿಂದ ಫಲಾಯನವಾದ ಮಾಡಿದ್ರು ಅನ್ನಿಸುತ್ತೆ ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ

    ಕಮಲ್‌ ಹಾಸನ್‌ ಅಯೋಗ್ಯ:
    ಇನ್ನೂ ಕಮಲ್‌ ಹಾಸನ್‌ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಅವನೊಬ್ಬ ಅಯೋಗ್ಯ. ಅವ್ನ ಸಿನಿಮಾ ರಿಲೀಸ್ ಮಾಡದೇ ಇದ್ರೆ ನಮ್ಮ ವಿತರಕರಿಗೆ ಲಾಸ್ ಆಗುತ್ತೆ. ನಮ್ಮ ರಾಜ್ಯಕ್ಕೆ ಬರದಂತೆ ಅವ್ನಿಗೆ ಬಹಿಷ್ಕಾರ ಹಾಕ್ಬೇಕು ಅಂತಾ ಒತ್ತಾಯ ಮಾಡಿದರು. ಇದನ್ನೂ ಓದಿ: ‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್

    ಈ ವಿಚಾರದಲ್ಲಿ ಸರ್ಕಾರಕ್ಕೆ ಧನ್ಯವಾದ ಹೇಳ್ತೀನಿ.. ಮಂತ್ರಿ ಈ ವಿಚಾರದಲ್ಲಿ ಖಡಕ್ ಆಗಿ ಹೇಳಿದ್ದಾರೆ. ತಮಾಷೆಗೆ ಹೇಳಿದ್ದು ಅಂತ ಹೇಳ್ತಾನೆ ಕಮಲ್ ಹಾಸನ್ ವಿವೇಕ ರಹಿತವ್ಯಕ್ತಿ. ಕಮಲ್ ಹಾಸನ್ ಮಾಡಿದ್ದು ತಪ್ಪು ಅಂತಾ ಹೇಳದೇ ಇದ್ರೆ, ರಾಜಕೀಯ ಗಿಮಿಕ್ಕು, ಚಿತ್ರ ಚೆನ್ನಾಗಿ ಓಡಲಿ ಅಂತ ಕೂಡ ಮಾಡಿರಬಹುದು. ಕಮಲ್‌ ಹಾಸನ್‌ ಮಾಡಿದ್ದು ತಪ್ಪು ಅಂತ ಹೇಳದಿದ್ರೆ, ಶಿವಣ್ಣ ಕೂಡ ತಪ್ಪಿತಸ್ಥರಾಗ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

  • ಜನರ ತೀರ್ಪು ಸ್ವಾಗತಿಸುತ್ತೇವೆ.. ಸೋಲನ್ನ ಹೀನಾಯ ಸೋಲು ಎಂದು ಹೇಳಲ್ಲ: ಮುಖ್ಯಮಂತ್ರಿ ಚಂದ್ರು

    ಜನರ ತೀರ್ಪು ಸ್ವಾಗತಿಸುತ್ತೇವೆ.. ಸೋಲನ್ನ ಹೀನಾಯ ಸೋಲು ಎಂದು ಹೇಳಲ್ಲ: ಮುಖ್ಯಮಂತ್ರಿ ಚಂದ್ರು

    ಬೆಂಗಳೂರು: ರಾಷ್ಟ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಆಡಳಿತಾರೂಢ ಎಎಪಿ ಸೋಲಿನ ಬಗ್ಗೆ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರತಿಕ್ರಿಯೆ ನೀಡಿದ್ದಾರೆ.

    ಕಳೆದ ಎರಡು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿದ್ದ ಆಮ್‌ ಆದ್ಮಿ ಪಾರ್ಟಿ ಈ ಸಲ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.‌ ಈ ಬಗ್ಗೆ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡಿ, ಈ ಸೋಲನ್ನ ಹೀನಾಯ ಸೋಲು ಅಂತ ಹೇಳುವುದಿಲ್ಲ ಎಂದಿದ್ದಾರೆ.

    ಗೆದ್ದಿರೋರಿಗೆ ಮೊದಲು ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಪಕ್ಷ ಸೋತಿರೋದು ನಿಜ. ಅದರೆ, ಇದು ಸಂಪೂರ್ಣವಾದ ಸೋಲಲ್ಲ. ನಮ್ಮ ಪಕ್ಷದವರನ್ನೂ ಜನ ಗೆಲ್ಲಿಸಿದ್ದಾರೆ. ಜನರಲ್ಲಿ ನಮ್ಮ ಪಕ್ಷದ ಮೇಲೆ‌ ನಂಬಿಕೆ ಇದೆ ಎಂದಿದ್ದಾರೆ.

    ಬಿಜೆಪಿ ಇಡೀ ಸರ್ಕಾರವೇ ದೆಹಲಿಯ ಚುನಾವಣೆಯಲ್ಲಿ ನಿಂತಿತ್ತು. ಜೊತೆಗೆ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರೋ ಸಂಸ್ಥೆಗಳನ್ನ ಬಳಸಿಕೊಂಡು ನಮ್ಮ ಪಕ್ಷವನ್ನ ಹೇಗಾದ್ರು ಮಾಡಿ ನಿರ್ನಾಮ ಮಾಡಬೇಕು ಅಂತ ಪಣ ತೊಟ್ಟಿದ್ದರು. ಐಟಿ, ಇಡಿ, ಚುನಾವಣಾ ಆಯೋಗವನ್ನ ಬಳಿಸಿಕೊಂಡರು ಎಂದು ಆರೋಪಿಸಿದ್ದಾರೆ.

    ಹಣ ಬಲ, ತೋಳ್ಬಲದಿಂದ ಬಿಜೆಪಿ ಗೆದ್ದಿದೆ. ಗೆದ್ದ ಪಕ್ಷ ಜನರಿಗೆ ನೀಡಿರುವ ಭರವಸೆಯನ್ನ ಈಡೇರಿಸಬೇಕು. ಅಭಿವೃದ್ಧಿ ಕಾರ್ಯಗಳನ್ನ ಮಾಡಬೇಕು. ಸೋಲನ್ನು ನಾವು ಸ್ವೀಕಾರ ಮಾಡುತ್ತೇವೆ ಎಂದು ಎಂದು ತಿಳಿಸಿದ್ದಾರೆ.

  • ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

    ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

    ಚಿತ್ರದುರ್ಗ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಇವನು ಯೋಗ್ಯ ಅಂದ್ರೆ ಜನರು ಗ್ಯಾರಂಟಿ ವೋಟ್ ಹಾಕುತ್ತಾರೆ ಅಂತ ಹೇಳ್ತಾರೆ. ಹಾಗಾಗಿ ಸ್ವಾಮೀಜಿಗಳು ಅಯೋಗ್ಯರ ಪರ ಪ್ರಚಾರ ಮಾಡಬೇಡಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು (Mukhyamantri Chandru) ಮನವಿ ಮಾಡಿದರು.

    ಚಿತ್ರದುರ್ಗದ (Chitradurga) ಭರಮಸಾಗರದಲ್ಲಿ ನಡೆದ ತರಳಬಾಳು ಹುಣ್ಣಿಮೆ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ವಾಮೀಜಿಗಳೇ ನೀವು ಅಯೋಗ್ಯರ ಪರ ನೀವು ಯಾಕೆ ಪ್ರಚಾರ ಮಾಡುತ್ತೀರಾ? ಇನ್ಮೇಲೆ ಇಂತಹ ಕೆಲಸ ಮಾಡಬೇಡಿ. ಈಗಿರುವ ಪಕ್ಷಗಳು ಯೋಗ್ಯವಲ್ಲ ಅಂತ ಬಹಿರಂಗವಾಗಿ ಆಗದಿದ್ರೆ ಗುಟ್ಟಾಗಿಯಾದರು ನೀವು ಹೇಳಬೇಕು ಎಂದರು. ಇದನ್ನೂ ಓದಿ: ಸಿಎಂ ನೈತಿಕತೆ ಕಳೆದುಕೊಂಡಿದ್ದಾರೆ, ಮುಡಾ ಕೇಸ್‌ ಸಿಬಿಐಗೆ ಹೋಗೋದು ನಿಶ್ಚಿತ: ಸ್ನೇಹಮಹಿ ಕೃಷ್ಣ

    ಕಾಂಗ್ರೆಸ್‌ನಲ್ಲಿ ಸಿಎಂ ಯಾರಾಗಬೇಕು, ಯಾರನ್ನು ಕಿತ್ತುಹಾಕಬೇಕೆಂಬ ಹೋರಾಟ ನಡೆಯುತ್ತಿದೆ. ವಿಪಕ್ಷದಲ್ಲಿ ಪಾರ್ಟಿ ಅಧ್ಯಕ್ಷ ಯಾರಾಗಬೇಕು, ಆಗದೇ ಇರೋರು ಯಾರಾಗಬೇಕು ಅಂತಿದ್ರೆ, ಇನ್ನೊಬ್ರು ಹೇಳ್ತಾರೆ ಯಾರು ಹೇಗಾದರೂ ಹಾಳಾಗಲಿ ನಾನು, ನನ್ನ ಮಗ, ಮೊಮ್ಮಗ ಏನು ಬೇಕಾದರು ಆಗಲು ಅನುಕೂಲ ಮಾಡಿಕೊಡಿ ಅಂತ ಹೇಳುತ್ತಾರೆ ಎಂದು ಮೂರು ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು ಪತ್ನಿಯಿಂದಲೇ 5 ಲಕ್ಷಕ್ಕೆ ಸುಪಾರಿ

    ಇನ್ನು ಕೆಲವರು ನಾನು, ನನ್ನ ಮಗ, ತಮ್ಮ, ಮೊಮ್ಮಗ, ಅಕ್ಕ, ಅಮ್ಮನ್ನೇ ಎಂಎಲ್‌ಎ ಮಾಡೋಣ ಅಂತಾರೆ. ಇದಕ್ಕೆ ನಾವು ನೀವು ಸಾಯಬೇಕೇನ್ರಿ ಎಂದು ಪ್ರಶ್ನಿಸಿದರಲ್ಲದೇ ಸ್ವಾಮೀಜಿಗಳು ಇಂತಹವರನ್ನು ಗೆಲ್ಲಿಸಬೇಡಿ. ಬೇರೆಯವರನ್ನು ಗೆಲ್ಲಿಸಿ ಎನ್ನಬೇಕೆಂದು ಮನವಿ ಮಾಡಿದರು. ಈ ವೇಳೆ ಸಿರಿಗೆರೆ ತರಳಬಾಳು ಗುರುಪೀಠದ ಪೀಠಾಧಿಪತಿ ಶಿವಮೂರ್ತಿ ಶಿವಾಚಾರ್ಯ ಶ್ರೀ ಮೌನಕ್ಕೆ ಜಾರಿದರು. ಇದನ್ನೂ ಓದಿ: ಟೋಲ್ ತಪ್ಪಿಸುತ್ತಿದ್ದ ವಾಹನ ಸವಾರರಿಗೆ ಹೆದ್ದಾರಿ ಪ್ರಾಧಿಕಾರ ಶಾಕ್; ಬಿಡದಿ ಬಳಿಯ ಎಕ್ಸಿಟ್ ರೋಡ್ ಬಂದ್

     

  • ಸಾಹಿತ್ಯ ಉತ್ಸವ ವೈಭವೀಕರಣದಿಂದ ಏನೂ ಫಲವಿಲ್ಲ: ಮುಖ್ಯಮಂತ್ರಿ ಚಂದ್ರು

    ಸಾಹಿತ್ಯ ಉತ್ಸವ ವೈಭವೀಕರಣದಿಂದ ಏನೂ ಫಲವಿಲ್ಲ: ಮುಖ್ಯಮಂತ್ರಿ ಚಂದ್ರು

    ಮಡಿಕೇರಿ: ಇತ್ತೀಚಿನ ವರ್ಷಗಳಲ್ಲಿ ಸಾಹಿತ್ಯ ಉತ್ಸವ ಆಡಂಬರದಿಂದ ವೈಭವೀಕರಣವಾಗುತ್ತಿದೆ, ಅದರಿಂದ ಏನೂ ಫಲವಿಲ್ಲ ಎಂದು ಮುಖ್ಯಮಂತ್ರಿ ಚಂದ್ರು (Mukhyamantri Chandru) ಬೇಸರ ವ್ಯಕ್ತಪಡಿಸಿದ್ದಾರೆ.

    ಮಡಿಕೇರಿಯಲ್ಲಿ ʻಪಬ್ಲಿಕ್ ಟಿವಿʼಯೊಂದಿಗೆ ಮಾತಾನಾಡಿದ ಅವರು, ಸಾಹಿತ್ಯ ಸಮ್ಮೇಳನಕ್ಕೆ (Sahitya Sammelana) ಸಾಹಿತ್ಯ ವರ್ಚಸ್ಸು ಇರುವ ವ್ಯಕ್ತಿಗಳನ್ನೇ ಅಯ್ಕೆ ಮಾಡಿಕೊಳ್ಳುವ ಅಗತ್ಯ ಇದೆ. ಚುನಾವಣಾ ರೀತಿಯ ತೆಗೆದುಕೊಂಡು ಬಂದು ಯಾರು ಬೇಕಾದರೂ ಆಗಬಹುದು ಅನ್ನೋ ರೀತಿಯಲ್ಲಿ ಅಗಬರದು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಆಂಗ್ಲ ಮಾಧ್ಯಮ ಶಾಲೆಗಳು ತೆರೆಯುವುದನ್ನು ಸರ್ಕಾರ ಕೂಡಲೇ ನಿಲ್ಲಿಸಬೇಕು: ಗೊ.ರು.ಚನ್ನಬಸಪ್ಪ ಹಕ್ಕೊತ್ತಾಯ

    ಸಾಹಿತ್ಯ ಸಮ್ಮೇಳನ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿದೆ, ಇನ್ಮುಂದೆ ಇದು ಆಗಬಾರದು. ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ ನಿರ್ಣಯ ಮುಂದಿನ ಸಮ್ಮೇಳನದೊಳಗೆ ಪಾಲನೆ ಆಗದಿದ್ದರೆ, ಅದನ್ನು ಖಂಡಿಸುವಂತಾಗಬೇಕು. ಸರ್ಕಾರಕ್ಕೆ ಎಚ್ಚರಿಕೆ ಕೊಡುವ ರೀತಿಯಲ್ಲಿ ಇಂತಹ ನಿರ್ಧಾರ ಕೈಗೊಳ್ಳಬೇಕು. ಆದರೀಗ ಸರ್ಕಾರದ ಹಣದಲ್ಲಿ ಕಾರ್ಯಕ್ರಮ ಆಗುತ್ತಿರುವುದರಿಂದ ಅವರೂ ಸರ್ಕಾರ ಟೀಕೆ ಮಾಡೋದಕ್ಕೆ ಆಗದ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದೀಪ ಬೆಳಗುವ ಮೂಲಕ ಅಕ್ಷರ ಜಾತ್ರೆಗೆ ಸಿಎಂ ಚಾಲನೆ

    ಇನ್ನೂ ಕನ್ನಡ ಶಾಲೆ ಉಳಿವಿಗಾಗಿ ಸಮ್ಮೇಳನಾಧ್ಯಕ್ಷರು ಸರ್ಕಾರಕ್ಕೆ ಮನವಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಉತ್ತಮ ಸೌಲಭ್ಯ ಇರುವಂತಹ ಶಾಲೆಗಳನ್ನು ಮಾಡಿದ್ರೆ ಕನ್ನಡ ಶಾಲೆಗಳು ಉಳಿಯುತ್ತವೆ, ಕನ್ನಡವೂ ಉಳಿಯುತ್ತದೆ‌. ಇಲ್ಲಿ ಆಂಗ್ಲ ಭಾಷೆಯನ್ನೂ ಕಲಿಸಬಹುದು. ಆದ್ರೆ ರಾಜ್ಯದ 56 ಶಾಲೆಗಳಿಗೆ ಶಿಕ್ಷಕರೇ ಇಲ್ಲ ಹುಡುಗರು ಪಾಸ್ ಆಗಬೇಕು ಅಂದ್ರೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದಾರೆ.

    ಅಲ್ಲದೇ ಆಂಗ್ಲ ಭಾಷೆಯಲ್ಲಿ ಇಂದು ವಿದ್ಯಾರ್ಥಿಗಳು ಪೋಷಕರಿಂದಾಗಲಿ ಅಥವಾ ಕನ್ನಡ ಶಾಲೆಗಳಿಂದಾಗಲಿ ಫೇಲಾಗುತ್ತಿಲ್ಲ. ಸರ್ಕಾರದ ವ್ಯವಸ್ಥೆಯಿಂದ ಫೇಲಾಗುತ್ತಿದ್ದಾರೆ ಎಂದರಲ್ಲದೇ ನಾವೆಲ್ಲ ಓದಿದ್ದು ಕನ್ನಡ ಶಾಲೆಯಲ್ಲೇ, ಸಿದ್ದರಾಮಯ್ಯ ಓದಿರುವುದು ಸಹ ಕನ್ನಡ ಶಾಲೆಯಲ್ಲೇ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಗತ್ತಿನ ಯಾರೇ ಬಂದರೂ ಅವರಿಗೆ ಕನ್ನಡ ಕಲಿಸುತ್ತೇವೆ ಎಂಬ ದಿಟ್ಟತನ ಮಂಡ್ಯ ಜನರದ್ದು – ಸಿಎಂ

  • ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

    ಮೆಟ್ರೋ ರೈಲು ಪ್ರಯಾಣ ದರ ಹೆಚ್ಚಿಸಬೇಡಿ: ಸಿಎಂಗೆ ಪತ್ರ ಬರೆದ ಮುಖ್ಯಮಂತ್ರಿ ಚಂದ್ರು

    ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲು ಪ್ರಯಾಣ ದರವನ್ನು ಶೇ. 15ರಿಂದ 25ರಷ್ಟು ಏರಿಕೆ ಮಾಡಲು ಬಿಎಂಆರ್‌ಸಿಎಲ್ ಮುಂದಾಗಿರುವ ಕ್ರಮವನ್ನು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು (Mukhyamantri Chandru) ವಿರೋಧಿಸಿದ್ದಾರೆ.

    ಮೆಟ್ರೋ ಪ್ರಯಾಣ ದರ ಪ್ರಸ್ತಾಪವನ್ನು ಕೈಬಿಡಬೇಕು ಎಂದು ಸಿಎಂ (CM Siddaramaiah) ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚಂದ್ರು, ಈಗಾಗಲೇ ಮೆಟ್ರೋ ಪ್ರಯಾಣ ದರ ದುಬಾರಿಯಾಗಿದ್ದು, ಈಗ ಮತ್ತೆ ಪ್ರಯಾಣ ದರ ಏರಿಕೆ ಮಾಡುವುದರಿಂದ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

    ಬಿಎಂಆರ್‌ಸಿಎಲ್ ಈಗಾಗಲೇ ಆರ್ಥಿಕ ಸಂಪನ್ಮೂಲ ವೃದ್ಧಿ ಹಾಗೂ ಲಾಭ ಗಳಿಕೆಯಲ್ಲಿ ಮುಂದಿದೆ. ಈ ಸಂದರ್ಭದಲ್ಲಿ ಪ್ರಯಾಣಿಕರ ಬಗ್ಗೆ ಕಾಳಜಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮರೆತಿರುವುದು ದುರದೃಷ್ಟಕರ. 2023-2024ರ ಆರ್ಥಿಕ ವರ್ಷದಲ್ಲಿ ಬಿಎಂಆರ್‌ಸಿಎಲ್ 129.3 ಕೋಟಿ ರೂ. ಲಾಭ ಗಳಿಸಿದೆ ಎಂದು ಮೆಟ್ರೋ ಮೂಲಗಳು ತಿಳಿಸಿವೆ. ಲಾಭದಾಯಕ ಹಾದಿಗೆ ಬಂದಿದ್ದರೂ ಪ್ರಯಾಣ ದರ ಹೆಚ್ಚಳಕ್ಕೆ ದರ ನಿಗದಿ ಮಾಡಲು ಸಮಿತಿ ರಚಿಸಿರುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಸಿದ್ದು ನಂತರ ರಾಜ್ಯದಲ್ಲಿ ಅಂತಹ ನಾಯಕನಿದ್ರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಹೆಚ್.ಡಿ.ತಮ್ಮಯ್ಯ

    ಬಿಎಂಆರ್‌ಸಿಎಲ್ ಕೂಡಲೇ ದರ ಏರಿಕೆ ಪ್ರಸ್ತಾಪವನ್ನು ಕೈಬಿಡಬೇಕು. ಸಿಎಂ ಕೂಡಲೇ ಈ ವಿಚಾರವನ್ನು ಗಮನಿಸಿ ದರ ಏರಿಕೆಗೆ ಕಡಿವಾಣ ಹಾಕಬೇಕು. ಬಿಎಂಆರ್‌ಸಿಎಲ್‌ನ ಈ ಜನ ವಿರೋಧಿ ನಡೆಯನ್ನು ಆಮ್ ಆದ್ಮಿ ಪಾರ್ಟಿ ಬಲವಾಗಿ ಖಂಡಿಸುತ್ತದೆ ಎಂದರು. ಇದನ್ನೂ ಓದಿ: ಮೋದಿ ಬದಲಾವಣೆಗೆ ಆರ್‌ಎಸ್‌ಎಸ್‌ ಸಭೆ: ಸಂತೋಷ್ ಲಾಡ್

    ಬೋಗಿ ಸಂಖ್ಯೆ ಹೆಚ್ಚಳ ಮಾಡಿ:
    ಈಗ ಇರುವ ಆರು ಬೋಗಿಗಳ ಮೆಟ್ರೋದಲ್ಲಿ ಒಮ್ಮೆ 1,626 ಪ್ರಯಾಣಿಕರು ಪ್ರಯಾಣಿಸಬಹುದು. ಆದರೆ ದಟ್ಟಣೆ ಸಮಯದಲ್ಲಿ ಒಮ್ಮೆಲೆ 2,500ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದಾರೆ. ಮಿತಿ ಮೀರಿದ ದಟ್ಟಣೆಯಿದ್ದರೂ, ಬೋಗಿ ಸಂಖ್ಯೆಯನ್ನು ಹೆಚ್ಚಿಸುವುದನ್ನು ಬಿಟ್ಟು, ಪ್ರಯಾಣದರ ಏರಿಕೆ ಬಗ್ಗೆ ಬಿಎಂಆರ್‌ಸಿಎಲ್ ಚಿಂತಿಸುತ್ತಿದೆ. ಇವರಿಗೆ ಪ್ರಯಾಣಿಕರ ಅನುಕೂಲಕ್ಕಿಂತ ಲಾಭ ಮಾಡಿಕೊಳ್ಳುವುದೇ ಮುಖ್ಯವಾಗಿದೆ ಎಂದರು. ಇದನ್ನೂ ಓದಿ: ದಸರಾ ವಿಶೇಷ| ಅರಸೀಕೆರೆ-ಮೈಸೂರು ನಡುವೆ ಮೂರು ದಿನ ಸಂಚರಿಸಲಿದೆ ಡೆಮು ರೈಲು

    ಪ್ರಯಾಣಿಕರಿಗೆ ಸುಖಕರ ಪ್ರಯಾಣ ಕೊಡುವಲ್ಲಿ ಬಿಎಂಆರ್‌ಸಿಎಲ್ ವಿಫಲವಾಗಿದೆ. ಮೂಲಸೌಕರ್ಯ, ಪ್ರಯಾಣಿಕ ಸ್ನೇಹಿ ವಾತಾವರಣದಲ್ಲಿ ಬೆಂಗಳೂರು ಮೆಟ್ರೋಗೆ ಹೋಲಿಸಿದರೆ ದಿಲ್ಲಿ ಹಾಗೂ ಮುಂಬೈನ ಮೆಟ್ರೋ ರೈಲು ಸೇವೆ ಮಾದರಿಯಾಗಿದೆ. ಈಗ ಪ್ರಯಾಣದರ ಹೆಚ್ಚಳ ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಮೊದಲು ಮೂಲಸೌಕರ್ಯಗಳನ್ನು ಒದಗಿಸುವತ್ತ ಗಮನ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ಲೀಡರ್, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ: ಡಿಕೆಶಿ

    ಬಿಎಂಟಿಸಿ ಬಳಿಕ ಅತಿ ಹೆಚ್ಚು ಜನ ಮೆಟ್ರೋ ಸಾರಿಗೆಯನ್ನು ಅವಲಂಬಿಸಿದ್ದಾರೆ. ಕೋವಿಡ್ ಬಳಿಕ ಮೆಟ್ರೋ ಲಾಭದ ಹಳಿಗೆ ಮರಳಿದೆ. ಈಗ ಪ್ರಯಾಣ ದರ ಹೆಚ್ಚಳ ಮಾಡುವ ಅಗತ್ಯವೇನಿದೆ ಎಂದ ಅವರು, ಬೆಲೆ ಏರಿಕೆ ಮಾಡುವ ಯೋಜನೆ ಕೈಬಿಟ್ಟು ಮೆಟ್ರೋ ರೈಲುಗಳ ಟ್ರಿಪ್ ಸಂಖ್ಯೆ ಹೆಚ್ಚಳ, ಸಮರ್ಪಕ ಪಾರ್ಕಿಂಗ್, ಮೂಲಸೌಕರ್ಯ ಒದಗಿಸಲು ಮೊದಲು ಆದ್ಯತೆ ಕೊಡಲಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ನಮ್ಮ ಲೀಡರ್, ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ: ಡಿಕೆಶಿ

  • ಮುಖ್ಯಮಂತ್ರಿ ಚಂದ್ರು AAP ಸೇರ್ಪಡೆಗೆ ಮುಹೂರ್ತ ಫಿಕ್ಸ್

    ಮುಖ್ಯಮಂತ್ರಿ ಚಂದ್ರು AAP ಸೇರ್ಪಡೆಗೆ ಮುಹೂರ್ತ ಫಿಕ್ಸ್

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

    ಆಮ್ ಆದ್ಮಿ ಪಾರ್ಟಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದ್ದು ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿದ್ದಾರೆ.

    ನಾಡಿನ ಸಜ್ಜನ ಗಣ್ಯರ ಆಮ್ ಆದ್ಮಿ ಪಾರ್ಟಿ ಸೇರ್ಪಡೆ ಪರ್ವ ಮುಂದುವರಿದಿದೆ. ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಎಎಪಿ ಸೇರ್ಪಡೆಯಾಗುತ್ತಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

    ಕಾಂಗ್ರೆಸ್ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಒಂದು ವಾರದ ಹಿಂದೆಯಷ್ಟೇ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್

    ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷವಾಗಿ ಅಸಮಾಧಾನ ತೋರಿದ್ದರು. ಅಷ್ಟೇ ಅಲ್ಲದೆ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದರು.

  • ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

    ಕಾಂಗ್ರೆಸ್‍ಗೆ ಮುಖ್ಯಮಂತ್ರಿ ಚಂದ್ರು ಗುಡ್ ಬೈ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಇಂದು ರಾಜೀನಾಮೆ ನೀಡಿದ್ದಾರೆ.

    ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲೂ ಪುರಾತನ ದೇವಾಲಯ ಒಡೆದು ಮಸೀದಿ ನಿರ್ಮಾಣ: ಅಭಯ್ ಪಾಟೀಲ್

    ಈ ಬಗ್ಗೆ ಮಾತನಾಡಿ, ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ತೋರಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರ ವಿರುದ್ಧ ಮುಖ್ಯಮಂತ್ರಿ ಚಂದ್ರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡು ವರ್ಷಗಳ ನಂತರ ಭಾರತ- ಬಾಂಗ್ಲಾ ರೈಲು ಸಂಚಾರ ಪುನಾರಂಭ

  • ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

    ಬಲಿಷ್ಠ ಸಮುದಾಯವನ್ನು ಪ್ರವರ್ಗ 2ಎ ಗೆ ಸೇರಿಸದಂತೆ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

    – ಶೈಕ್ಷಣಿಕ ಸಾಮಾಜಿಕ ಸಮಿಕ್ಷೆ ವರದಿಯನ್ನು ಜಾರಿಗೆ ತನ್ನಿ
    – ಸಿಎಂ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವರಿಗೆ ಮನವಿ

    ಬೆಂಗಳೂರು: ಕಾಂತರಾಜ್ ವರದಿಯನ್ನು ಜಾರಿಗೆ ತನ್ನಿ ಹಾಗೂ ಬಲಿಷ್ಠ ಸಮುದಾಯಗಳನ್ನು ಪ್ರವರ್ಗ 2 ಎ ಗೆ ಸೇರಿಸಬಾರದಂತೆ ಆಗ್ರಹಿಸಿ ಇಂದು ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.

    ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ರಾಜ್ಯದಲ್ಲಿ ಈಗಾಗಲೇ ನಡೆಸಿರುವ ಕಾಂತರಾಜ್ ವರದಿಯನ್ನು ಜಾರಿಗೊಳಿಸಬೇಕು. ಆ ಮೂಲಕ ಜಾತಿಗೆ ಅನುಗುಣವಾಗಿ ಸರ್ಕಾರದಲ್ಲಿ ಅನುಕೂಲವಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಅಲ್ಲದೆ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬಾರದು. ಹಾಗೆಯೇ, ಅತಿ ಹಿಂದುಳಿದ ವರ್ಗಗಳ ಮಠ ಮಾನ್ಯಗಳಿಗೆ ಸಂಘ ಸಂಸ್ಥೆಗಳೀಗೆ ಪ್ರಬಲ ಜಾತಿಗಳಿಗೆ ಕೊಟ್ಟಂತೆಯೇ ಅನುದಾನ ಕೋಡಬೇಕು. ಸಮುದಾಯ ಭವನ ವಿದ್ಯಾರ್ಥಿ ಭವನ ಸ್ಥಾಪನೆಗೆ ಅನುಕೂಲ ಮಾಡಿಕೊಡಬೇಕು ಎನ್ನುವ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಗಳ ಮುಂದೆ ಪ್ರಸ್ತಾಪಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ವೈದ್ಯಕೀಯ ಸೀಟ್‍ನಲ್ಲಿ OBC ಶೇ.27, EWSಗೆ ಶೇ.10 ಮೀಸಲಾತಿ

    ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಗೌರವಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಈ ನಾಡಿನಲ್ಲಿ ಆತಿ ಸಣ್ಣ ಹಾಗೂ ಅತಿ ಸೂಕ್ಷ್ಮ ಸಮುದಾಯಗಳಿವೆ, ಧ್ವನಿಯೇ ಇಲ್ಲದ ಈ ಅಸಂಘಟಿತ ಸಮುದಾಯಗಳು ತಮಗೆ ಆಸ್ಮಿತೆಯೇ ಇಲ್ಲದೆ ಸರ್ಕಾರದ ಯಾವುದೇ ನೆರವು, ಸಹಕಾರ, ಅನುದಾನ, ಮೀಸಲಾತಿಗಳನ್ನು ಪಡೆಯುವುದರಲ್ಲಿ ವಿಫಲವಾಗಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡವನ್ನು ಹೊರತುಪಡಿಸಿ, ಧಾರ್ಮಿಕ ಅಲ್ಪ ಸಂಖ್ಯಾತರನ್ನು ಒಳಗೊಂಡಂತೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಐದು ಪ್ರವರ್ಗಗಳಿವೆ. ಈ ಐದೂ ಪ್ರವರ್ಗಗಳಿಗೆ ಶೇಕಡಾ 32 ಮೀಸಲಾತಿ ಇದೆ. ಪ್ರವರ್ಗ ಒಂದರಲ್ಲಿ 95 ಜಾತಿಗಳಿದ್ದು 4% ಮೀಸಲಾತಿ ಇದೆ. ಅಂತೆಯೇ ಪ್ರವರ್ಗ 2(ಎ) ನಲ್ಲಿ 102 ಜಾತಿಗಳಿದ್ದು, 15% ಮೀಸಲಾತಿ ಇದೆ. ಪ್ರವರ್ಗ 2(ಬಿ) ನಲ್ಲಿ ಮುಸ್ಲಿಂ ಸಮುದಾಯವಿದ್ದು ಶೇಕಡಾ 4% ಮೀಸಲಾತಿ ಇದೆ. ಪ್ರವರ್ಗ 3(ಎ) ನಲ್ಲಿ ಒಕ್ಕಲಿಗರು ಮತ್ತಿತರಿದ್ದು ಶೇಕಡಾ 4% ಮತ್ತು ಪ್ರವರ್ಗ 3(ಬಿ) ನಲ್ಲಿ ವೀರಶೈವ ಲಿಂಗಾಯಿತ ಮತ್ತಿತರ ಜಾತಿಗಳಿದ್ದು ಶೇಕಡಾ 5% ಮೀಸಲಾತಿ ಇದೆ. ದುರಂತವೆಂದರೆ ಈ ಪಟ್ಟಿಯಲ್ಲಿರುವ ಬಲಿಷ್ಟ ಮತ್ತು ಸಂಘಟಿತ ಜಾತಿಗಳು ಸಹಜವಾಗಿಯೇ ಪ್ರಾತಿನಿದ್ಯದ ಫಲಗಳನ್ನು ಕಾಣುತ್ತಿದ್ದು, ಪ್ರವರ್ಗ ಒಂದು ಮತ್ತು 2(ಬಿ) ನಲ್ಲಿರುವ ಅತಿ ಹಿಂದುಳಿದ ಜಾತಿಗಳು ಅವಕಾಶ ವಂಚಿತವಾಗಿವೆ. ಇದನ್ನೂ ಓದಿ: ಅಕ್ಟೋಬರ್ 1ರೊಳಗೆ ಮೀಸಲಾತಿ ಪ್ರಕಟಿಸಿ- ಸರ್ಕಾರಕ್ಕೆ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸಂದೇಶ

    ಈ ಹಿನ್ನೆಲೆಯಲ್ಲಿ ಈ ಎಲ್ಲಾ ಪ್ರವರ್ಗಗಳನ್ನು ಪುನರ್ ವರ್ಗೀಕರಣ ಮಾಡುವ ಅವಶ್ಯಕತೆ ಇದೆ. ಇದರೊಂದಿಗೆ ಸದರಿ ಪ್ರವರ್ಗಗಳು ಹಿಂದುಳಿದ ವರ್ಗಗಳ ಯಾವುದೇ ಆಯೋಗದ ಶಿಫಾರಸಿನ ಮೇಲೆ ಆದವುಗಳಲ್ಲ. ಈ ಕಾರಣಕ್ಕೆ ಇಲ್ಲಿನ ವರ್ಗೀಕರಣ ಅತ್ಯಂತ ಅವೈಜ್ಞಾನಿಕವಾದುದು ಮತ್ತು ಕುಲಶಾಸ್ತ್ರೀಯ ಅಧ್ಯಯನದ ದೃಷ್ಟಿಯಿಂದಲೂ ಅಸಮರ್ಪಕವಾದ್ದು ಎಂದು ಹೇಳಿದರು. ಇದನ್ನೂ ಓದಿ: ಪಂಚಮಸಾಲಿ 2ಎ ಮೀಸಲಾತಿ- ದುಂಡು ಮೇಜಿನ ಸಭೆಯಲ್ಲಿ ಪಂಚ ನಿರ್ಣಯ ಪಾಸ್

    ವೇದಿಕೆಯ ಗೌರವ ಸಲಹೆಗಾರರಾದ ಡಾ.ಸಿ.ಎಸ್ ದ್ವಾರಕಾನಾಥ್ ಮಾತನಾಡಿ, ರಾಜ್ಯದಲ್ಲಿ ಅತಿ ಹಿಂದುಳಿದ ಜಾತಿಗಳಿಗೆ ಸಮರ್ಪಕವಾದಂತಹ ಧ್ವನಿ ಎತ್ತುವಂತಹ ಜನರಿಲ್ಲ. ಈ ವರ್ಗಗಳಿಗೆ ದೊರಕಬೇಕಾದಂತಹ ಮೀಸಲಾತಿಯನ್ನು ಕಿತ್ತುಕೊಂಡು ಪ್ರಬಲ ಜಾತಿಗಳಿಗೆ ಅವಕಾಶ ಮಾಡಿಕೊಡುವುದು ಸರಿಯಲ್ಲ ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಸಚಿವರ ಗಮನಕ್ಕೆ ತಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಎಲ್ಲಾ ಬೇಡಿಕೆಯನ್ನು ಸಾವಧಾನವಾಗಿ ಕೇಳಿಸಿಕೊಂಡಿದ್ದು ಭರವಸೆ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಎಸ್.ಟಿ. ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ಮನವಿ

    ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್.ದ್ವಾರಕಾನಾಥ್, ಗೌರವ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ.ವೇಣುಗೋಪಾಲ್, ಎಂಎಲ್‍ಸಿ ಪಿ ಆರ್ ರಮೇಶ್, ಮಾಜಿ ಶಾಸಕರಾದ ನೆ.ಲ.ನರೇಂದ್ರ ಬಾಬು, ಸೇರಿದಂತೆ ಇತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 2ಎ ಮೀಸಲಾತಿ ಹೋರಾಟ ಮುಂದುವರಿಯುತ್ತದೆ: ಯತ್ನಾಳ್

  • ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

    ಮುಖ್ಯಮಂತ್ರಿ ಚಂದ್ರು ಆಸ್ಪತ್ರೆಗೆ ದಾಖಲು

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಮುಖ್ಯಮಂತ್ರಿ ಚಂದ್ರು ಅವರಿಗೆ ಆಂಜಿಯೋಗ್ರಾಂ ನಡೆಯಲಿದೆ. ಈ ಹಿಂದೆಯೂ ಚಂದ್ರು ಅವರು ಒಂದು ಬಾರಿ ಆಂಜಿಯೋಗ್ರಾಂ ಮಾಡಿಸಿಕೊಂಡಿದ್ದರು.

    ಇನ್ನೆರಡು ದಿನಗಳ ಬಳಿಕ ಚಂದ್ರು ಅವರನ್ನು ಡಿಸಾರ್ಚ್ ಮಾಡಲಾಗುತ್ತದೆ ಎಂದು ಜಯದೇವ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಬಂದಿದೆ.