Tag: mukyamantri chandru

  • ಸಿಎಂ ಮೀಸಲಾತಿ ಗಿಮಿಕ್ ಕೋರ್ಟ್‍ನಲ್ಲಿ ನಿಲ್ಲುವುದಿಲ್ಲ: ಮುಖ್ಯಮಂತ್ರಿ ಚಂದ್ರು

    ಸಿಎಂ ಮೀಸಲಾತಿ ಗಿಮಿಕ್ ಕೋರ್ಟ್‍ನಲ್ಲಿ ನಿಲ್ಲುವುದಿಲ್ಲ: ಮುಖ್ಯಮಂತ್ರಿ ಚಂದ್ರು

    ರಾಯಚೂರು: ಮೀಸಲಾತಿ ವಿಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚುನಾವಣೆಗೆ ಕಣ್ಣೊರೆಸುವ ತಂತ್ರ ಮಾಡಿದ್ದಾರೆ. ಇದು ನ್ಯಾಯಾಲಯದಲ್ಲಿ ನಿಲ್ಲುವುದಿಲ್ಲ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ರೀತಿ ಮಾಡಿದ್ದಾರೆ ಅಂತ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು (Mukhyamantri Chandru) ಆರೋಪಿಸಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಮೈನಾರಿಟಿಯವರ ಶೇ.4 ಮೀಸಲಾತಿಯನ್ನ ತೆಗೆದಿದ್ದಾರೆ, ಅದೆಲ್ಲಿ ಅವರಿಗೆ ಕೊಟ್ಟಿದ್ದಾರೆ ನನಗೆ ಗೊತ್ತಿಲ್ಲ. 2 ಡಿ, 2 ಸಿ ಅಂತ ಮಾಡಿದ್ದಾರೆ. ಇವೆಲ್ಲಾ ಕೇವಲ ಚುನಾವಣಾ ಗಿಮಿಕ್ಸ್. ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲಾ ಬರೀ ಸುಳ್ಳು, ಭರವಸೆಗಳನ್ನು ನೀಡುತ್ತಲೇ ಬಂದಿದೆ. ಈ ಸರ್ಕಾರ ಬರೀ ಜಾಹಿರಾತಿಗೆ ಹಣ ಖರ್ಚು ಮಾಡುತ್ತಿದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಶೋಕ್ ಖೇಣಿಗೆ ಟಿಕೆಟ್ ಮಾರಿಕೊಂಡಿದೆ – ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಚಂದ್ರಾಸಿಂಗ್ ಕಿಡಿ

    ಸಿಎಂ ಬೊಮ್ಮಾಯಿ ಬುದ್ಧಿವಂತರಿದ್ದಾರೆ. ಆದರೆ ಅವರಿಗೆ ಶಕ್ತಿಯಿಲ್ಲ. ಸಿಎಂ ರಿಮೋಟ್ ಕಂಟ್ರೋಲ್ ನಿಂದ ಕೆಲಸ ಮಾಡುತ್ತಿದ್ದಾರೆ. ನಾಲ್ಕು ಭಾಗದಿಂದ ಸಿಎಂಗೆ ಒತ್ತಡ ತರುತ್ತಿದ್ದಾರೆ. ಯಡಿಯೂರಪ್ಪ ಅವರ ಕುಟುಂಬದವರು, ಆರ್ ಎಸ್‍ಎಸ್ (RSS), ಮೋದಿ (Modi) ಮತ್ತು ಅಮಿತ್ ಶಾ (AmitShah) ರಿಂದ ಒತ್ತಡವಿದೆ. ಅವರುಗಳ ಒತ್ತಾಯದ ಮೇರೆಗೆ ಸಿಎಂ ಮಾತನಾಡಬೇಕಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ನಿಮ್ಮ ಬುದ್ಧಿಯನ್ನ ನೀವು ಉಪಯೋಗಿಸಲು ಆಗುತ್ತಿಲ್ಲ ಎಂದು ಹೇಳಿದರು.

    ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹೀನಾಯ ಸ್ಥಿತಿ ಬಂದಿದೆ. ಇನ್ನೂ ಕಾಂಗ್ರೆಸ್‍ (Congress) ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆಮ್ ಆದ್ಮಿ ಕೊಟ್ಟ ಯೋಜನೆಗಳನ್ನು ನಂದು ಅಂತ ಹೇಳಿದರೆ ಗೆಲ್ಲಿಸಬೇಕು ಭ್ರಷ್ಟರಿಗೆ ಟಿಕೆಟ್ ಕೊಟ್ಟಿದ್ದಿರಿ, ಭ್ರಷ್ಟಾಚಾರದ ಪರವಾಗಿರುವಾಗ ನಿಮ್ಮನ್ನ ಜನ ಯಾಕೆ ಗೆಲ್ಲಿಸಬೇಕು ಅಂತ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದರು.

  • ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಬೊಮ್ಮಾಯಿಗೆ ನಿರ್ಧಾರ ತೆಗೆದುಕೊಳ್ಳೋ ಧೈರ್ಯವಿಲ್ಲ: ಮುಖ್ಯಮಂತ್ರಿ ಚಂದ್ರು

    ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಬೊಮ್ಮಾಯಿಗೆ ನಿರ್ಧಾರ ತೆಗೆದುಕೊಳ್ಳೋ ಧೈರ್ಯವಿಲ್ಲ: ಮುಖ್ಯಮಂತ್ರಿ ಚಂದ್ರು

    ನವದೆಹಲಿ: ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಇಲ್ಲ ಎಂದು ಎಎಪಿ ಮುಖಂಡ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.

    ಇಂದು ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವಜನಾಂಗದ ತೋಟ ಅಂತಾ ಬರೆದ ಕವಿಗೆ ಅವಮಾನ ಆಗಿದೆ. ಬಸವರಾಜ ಬೊಮ್ಮಾಯಿಗೆ ನಿರ್ಧಾರ ತೆಗೆದುಕೊಳ್ಳುವ ಧೈರ್ಯ ಇಲ್ಲ. ಕೇಸರಿಕರಣ ಮಾಡುವ ಪ್ರಯತ್ನ ನಡೆಯುತ್ತಿದೆ. ಎಲ್ಲರೂ ಒಂದೇ ಸಮುದಾಯದವರು ಸೇರಿ ಪರಿಷ್ಕರಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    TEXTBOOK

    ಬಸವಣ್ಣ ಮತ್ತು ಅಂಬೇಡ್ಕರ್ ಗೆ ಅವಮಾನ ಮಾಡಿದ್ದಾರೆ. ಬಸವಣ್ಣ ಜಾತಿ ವ್ಯವಸ್ಥೆ ವಿರುದ್ಧ ಬಂಡಾಯ ಎದ್ದಿದ್ದರು. ಆದರೆ ಅವರು ಉಪನಯನ ಮಾಡಿಕೊಂಡರು ಅಂತಾರೆ ಬರೆಯಲಾಗಿದೆ. ಈ ಸಮಿತಿಯ ಪರಿಷ್ಕರಣೆ ರದ್ದು ಮಾಡಬೇಕು. ಹಳೆ ಪಠ್ಯಪುಸ್ತಕ ಜಾರಿ ಮಾಡಬೇಕು. ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದಿನ ವರ್ಷ ಎಲ್ಲ ವರ್ಗದವರಿಗೂ ಸಮಾನತೆ ನೀಡುವ ನಿಟ್ಟಿನಲ್ಲಿ ಪರಿಷ್ಕರಣೆ ನಡೆಯಲಿ ಎಂದು ಅವರು ಆಗ್ರಹಿಸಿದರು. ಇದನ್ನೂ ಓದಿ: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ: ಉದ್ಧವ್‌ ಠಾಕ್ರೆ

    ನಾನು ಇವತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಭೇಟಿಯಾಗಿದ್ದೆ. ಭ್ರಷ್ಟಾಚಾರ ರಹಿತ ವ್ಯಕ್ತಿಗಳನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳಲು ಹೇಳಿದ್ದಾರೆ. ನಾನು ಚುನಾವಣೆಗೆ ನಿಲ್ಲಲ್ಲ, ಪಕ್ಷ ಕಟ್ಟುತ್ತೇನೆ. ನಾನು ಮೂರು ಪಕ್ಷಗಳನ್ನು ನೋಡಿ ಬಂದಿದ್ದೇನೆ. ಬಿಜೆಪಿಯಲ್ಲಿ ಕೇಸರಿಕರಣ, ಕಾಂಗ್ರೆಸ್ ನಲ್ಲಿ ಆತಂತರಿಕ ಕಿತ್ತಾಟ ಇದೆ ಎಂದರು. ಇದನ್ನೂ ಓದಿ: ಕಾಲಿವುಡ್ ಹಿರಿಯ ನಟ ವಿಜಯ್ ಕಾಂತ್ ಅವರ ಮೂರು ಬೆರಳು ಕತ್ತರಿಸಿದ ವೈದ್ಯರು

    ರಾಜ್ಯದ ಅಭಿವೃದ್ಧಿ ಬಗ್ಗೆ ಯಾರಿಗೂ ಚಿಂತನೆ ಇಲ್ಲ. ಹೀಗಾಗಿ ಆಪ್ ಪರ್ಯಾಯ ಪಕ್ಷವಾಗಿದೆ. ಆಮ್ ಅದ್ಮಿ ಬಗ್ಗೆ ಜನಾಭಿಪ್ರಾಯ ಇದೆ, ಅದು ಹೊರಗೆ ಕಾಣುತ್ತಿಲ್ಲ. ಮತದಾರರು ಹೊಸಬರನ್ನು ಹುಡುಕುತ್ತಿದ್ದಾರೆ. ಕೆಲವು ದೇಶಗಳಲ್ಲಿ ಸರ್ಕಾರಿ ಶಾಲೆಗಳಿಗೆ ಬೇಡಿಕೆ ಹೆಚ್ಚಿದೆ. ನಮ್ಮ ದೇಶದಲ್ಲಿ ಸರ್ಕಾರಿ ಶಾಲೆಗೆ ಬೇಡಿಕೆ ಇರುವುದು ನೋಡಿರಲಿಲ್ಲ. ಆದರೆ ಇದನ್ನು ದೆಹಲಿಯಲ್ಲಿ ಕಣ್ಣಾರೆ ಕಂಡೆ ಎಂದು ತಿಳಿಸಿದರು.

    ಶಾಲೆಯಲ್ಲಿ ಸ್ವಿಮಿಂಗ್ ಪೂಲ್, ಸಿಸಿಟಿವಿ ಎಲ್ಲವೂ ಇದೆ. ಶಾಲೆ ಒಂದು ಕುಟುಂಬದ ರೀತಿಯಲ್ಲಿ ಇತ್ತು. ನಾಯಕನಿಗೆ ಇಚ್ಛಾಶಕ್ತಿ ಇದ್ರೆ ಇದೆಲ್ಲವು ಸಾಧ್ಯ. ಕರ್ನಾಟಕದಲ್ಲೂ ಇದೇ ಮಾದರಿ ಬೇಕು. ರಾಜ್ಯದ ಮೂರು ಪಕ್ಷದಿಂದ ಇದು ಸಾಧ್ಯವಿಲ್ಲ. ಹೀಗಾಗಿ ಆಮ್ ಅದ್ಮಿ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

    Live Tv

  • ಆಮ್ ಆದ್ಮಿ ಪಾರ್ಟಿ ಸೇರಿಕೊಂಡ ‘ಮುಖ್ಯಮಂತ್ರಿ’

    ಆಮ್ ಆದ್ಮಿ ಪಾರ್ಟಿ ಸೇರಿಕೊಂಡ ‘ಮುಖ್ಯಮಂತ್ರಿ’

    ಟ, ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಅವರು ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಅಧಿಕೃತವಾಗಿ ಪಾರ್ಟಿಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಚಂದ್ರು ಕೂಡ ಈ ಕುರಿತು ಮಾತನಾಡಿದ್ದಾರೆ. ದನ್ನೂ ಓದಿ: ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ : ಬಾಕ್ಸ್ ಆಫೀಸ್ ಧೂಳಿಪಟ

    ಇಂದು ಬೆಂಗಳೂರಿನಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ವಕ್ತಾರ ಮತಾಯಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. ಚಂದ್ರು ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಕುರಿತು ಮಾತನಾಡಿದರು. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?

    ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆಗಿದ್ದರು. ಆದರೆ, ಆ ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಇತ್ತೀಚೆಗಷ್ಟೇ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳು ಇಷ್ಟವಾದ ಕಾರಣದಿಂದಾಗಿ ಈ ಪಕ್ಷವನ್ನು ಸೇರ್ಪಡೆಗೊಂಡಿರುವುದಾಗಿ ಅವರು ಹೇಳಿದ್ದಾರೆ.

  • ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

    ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನಿಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು.

    ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ. ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪ್ರೇಮಂ ಪೂಜ್ಯಂ ಬೆಡಗಿಗೆ ಈಗ ಜೂಲಿಯಟ್

    ಡಿ.ಕೆ. ಶಿವಕುಮಾರ್ ಸಂತಾಪ 
    ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ರಾಜೇಶ್ ಅವರು ಹಿರಿಯ ನಟರು, ಅತ್ಯುತ್ತಮ ಕಲಾವಿದರು. ನಾವು ಅವರ ಚಿತ್ರಗಳನ್ನು ನೋಡಿ ಬೆಳೆದವರು. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : ತೆಲುಗಿನ ಚೊಚ್ಚಲ ಚಿತ್ರದ ಮುಹೂರ್ತದಲ್ಲಿ ಕಾಣಲಿಲ್ಲ ದುನಿಯಾ ವಿಜಯ್

    ಗಿರಿಜಾ ಲೋಕೇಶ್ ಕಂಬನಿ 
    ರಾಜೇಶ್ ಅವರ ಜೊತೆ ನಾಟಕಗಳಲ್ಲಿ ಅಭಿನಯಿಸಿದ್ದೇನೆ ಕಲೆಯಲ್ಲಿ ತುಂಬಾ ಶ್ರದ್ದೆ ಅವರಿಗೆ ಹದಿನಾರನೇ ವಯಸ್ಸಿನಲ್ಲಿ ನಾನು ‌ಅವರೊಟ್ಟಿಗೆ ನಾಟಕದಲ್ಲಿ ಅಭಿನಯಿಸಿದ್ದೇನೆ. ಕಾಸ್ಟ್ಯೂಮ್, ಹೇರ್ ಸ್ಟೈಲ್, ಬಾಡಿ ಲಾಂಗ್ವೇಜ್ ಯಾವುದೇ ಇರಲಿ ಅಲ್ಲಿ ಶಿಸ್ತು ಬಯಸುತ್ತಿದ್ದರು. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು ಅವರಿಂದ ನೋಡಿ ತುಂಬಾ ಕಲಿತಿದ್ದೇವೆ. ಅವರು ಶಿಸ್ತುಬದ್ದ ಜೀವನ ನಡೆಸಿದ್ದರು. ಇದನ್ನು ಓದಿ : ಪಾರ್ವತಮ್ಮ ರಾಜ್ ಕುಮಾರ್ ಮತ್ತು ಬೆಳ್ಳಿ ಬಟ್ಟಲು ಸ್ಟೋರಿ ಹೇಳಿದ ರಂಗಾಯಣ ರಘು

    ಆರೋಗ್ಯದ ಬಗ್ಗೆ ತುಂಬಾ ಕಾಳಜಿ ವಹಿಸಿದ್ದರು. ಕಲಾವಿದರು ಅಡ್ಡದಿಡ್ಡಿ ದೇಹ ಬೆಳೆಸಬಾರದು, ನೀಟಾಗಿರಬೇಕು. ಫಿಟ್ ಅಂಡ್ ಫೈನ್ ಆಗಿರಬೇಕು ಎನ್ನುತ್ತಿದ್ದರು. ಬೆಳುವಲದ‌ ಮಡಿಲಲ್ಲಿ ಚಿತ್ರದಲ್ಲಿ ರಾಜೇಶ್ ಅವರ ಮಗಳಾಗಿ ಅಭಿನಯಿಸಿದ್ದೇನೆ ಅವರು ಸಂತೃಪ್ತ ಜೀವನ ನಡೆಸಿ ಹೋಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಕಂಬನಿ ಮಿಡಿದಿದ್ದಾರೆ ಹಿರಿಯ ನಟಿ ಗಿರಿಜಾ ಲೋಕೇಶ್. ಇದನ್ನೂ ಓದಿ : ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

    ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಚಂದ್ರು 
    ರಾಜೇಶ್ ಅಂತಿಮ ದರ್ಶನ ಪಡೆದ ಮಾತನಾಡಿದ ಚಂದ್ರು, “ರಾಜೇಶ್ ಆತ್ಮೀಯರು ಹಾಗೂ ನನ್ನ ಮಾರ್ಗದರ್ಶಕರು. ರಾಜ್ ಕುಮಾರ್ , ಉದಯ್ ಕುಮಾರ್, ಕಲ್ಯಾಣ್ ಕುಮಾರ್ ಸಾಲಿನವರು ಅಭಿನಯಕ್ಕೆ ನವರಸಗಳನ್ನು ತುಂಬಿದವರು. ರಂಗಭೂಮಿಯಲ್ಲಿ ಪಳಗಿದವರು, ಅದ್ಬುತ ಅಭಿನಯ ಮಾಡುತ್ತಿದ್ದರು. ಅವರ ಜೊತೆಗೆ ಬೇರೆಯವರು ಅದ್ಬುತವಾಗಿ ನಟಿಸಬೇಕು‌ ಎನ್ನುತ್ತಿದ್ದರು. ಇಂಗ್ಲಿಷ್ ಪಾಂಡಿತ್ಯವೂ ಇತ್ತು. ಕನ್ನಡ ಪಾಂಡಿತ್ಯವೂ ಇತ್ತುಅವರೊಟ್ಟಿಗೆ ಅಭಿನಯಿಸಿದ್ದೇನೆ. ತುಂಬು ಜೀವನ ಮಾಡಿ‌ ಹೋಗಿದ್ದಾರೆ. ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ರಾಜೇಶ್ ಸೇರಿದಂತೆ ದಿಗ್ವಿಜರ ಪರಂಪರೆಯವರ ಜೊತೆ ಸಿನಿಮಾ ಮಾಡುವ ಭಾಗ್ಯ ನನ್ನದು” ಎಂದು ಚಂದ್ರು. ಇದನ್ನೂ ಓದಿ : ಹಿರಿಯ ನಟ ರಾಜೇಶ್ ಅವರ ಅಪರೂಪದ ಫೋಟೋಗಳು

    ತಾರಾ ಅನುರಾಧ ಸಂತಾಪ 
    ನಮ್ಮ ಚಿತ್ರರಂಗದ ಹಿರಿಯರನ್ನ ಕಳೆದುಕೊಂಡಿದ್ದೇವೆ. ಅವರ ಕೆಲಸ, ಸಿನಿಮಾಗಳು ನಮಗೆ ಅವರ ನೆನಪು ಉಳಿಯುವಂತೆ ಮಾಡುತ್ತವೆ ಎಂದಿದ್ದಾರೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ತಾರಾ ಅನುರಾಧ.